Tag: ankola

  • ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

    ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲದ (Ankola) ಶಿರೂರಿನಲ್ಲಿ (Shirur) ಇಂದು (ಸೋಮವಾರ) ಗಂಗಾವಳಿ ನದಿಯಲ್ಲಿ (Gangavali River) ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಎದೆ ಹಾಗೂ ಕೈ ಭಾಗದ ಮೂಳೆಗಳು ದೊರೆತಿವೆ.

    ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಆಲದ ಮರ ಸೇರಿದಂತೆ ಹಲವು ವಸ್ತುಗಳನ್ನು ಹೊರತೆಗೆಯಲಾಗಿತ್ತು. ಇಂದು ಶವದ ಪಳೆಯುಳಿಕೆಗಳು ದೊರೆತಿದ್ದು, ಡಿಎನ್‌ಎ ಪರೀಕ್ಷೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED

    ಮೂರನೇ ಹಂತದ ಶವ ಶೋಧದಲ್ಲಿ ಅರ್ಜುನ್ ಶವ ಹೊರ ತೆಗೆಯಲಾಗಿದೆ. ಶಿರೂರಿನ ಜಗನ್ನಾಥ್, ಲೋಕೇಶ್ ಅವರ ಶವ ಇನ್ನಷ್ಟೇ ಸಿಗಬೇಕಿದೆ. ಅಂಕೋಲ ಪೊಲೀಸರು ಸಿಕ್ಕ ಅಸ್ತಿಪಂಜರದ ಮೂಳೆಗಳನ್ನು ಡಿಎನ್‌ಎ ಪರೀಕ್ಷೆಗೆ ರವಾನೆ ಮಾಡಲಿದ್ದಾರೆ. ಸದ್ಯ ಈ ಮೂಳೆಗಳು ಯಾರದ್ದು ಎಂಬ ಬಗ್ಗೆ ಮಾಹಿತಿ ಡಿಎನ್‌ಎ ಪರೀಕ್ಷೆ ನಂತರ ತಿಳಿದು ಬರಲಿದೆ. ಇದನ್ನೂ ಓದಿ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

  • ಶಿರೂರು ಗುಡ್ಡ ಕುಸಿತ ದುರಂತ – ಎರಡನೇ ಹಂತದ ಶೋಧಕಾರ್ಯ, ಗಂಗಾವಳಿ ನದಿಯಲ್ಲಿ ಲಾರಿಯ ಅವಶೇಷ ಪತ್ತೆ

    ಶಿರೂರು ಗುಡ್ಡ ಕುಸಿತ ದುರಂತ – ಎರಡನೇ ಹಂತದ ಶೋಧಕಾರ್ಯ, ಗಂಗಾವಳಿ ನದಿಯಲ್ಲಿ ಲಾರಿಯ ಅವಶೇಷ ಪತ್ತೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola) ತಾಲೂಕಿನ ಶಿರೂರಿನಲ್ಲಿ ಭೂ ಕುಸಿತವಾಗಿ (Shirur Landslide) 29 ದಿನವಾಗಿದೆ. ಇದರ ಬೆನ್ನಲ್ಲೇ ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಆದರೆ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಸೂಚನೆಯಂತೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆಯವರು ಗಂಗಾವಳಿ ನದಿಯಲ್ಲಿ ಸಂಜೆ ವೇಳೆಯಲ್ಲಿ ಶೋಧಕಾರ್ಯಕ್ಕಿಳಿದಿದ್ದು, ಗ್ಯಾಸ್ ಟ್ಯಾಂಕರ್‌ನ ಚಿಕ್ಕ ಭಾಗವನ್ನು ಶೋಧ ನಡೆಸಿ ಹೊರತೆಗೆದಿದ್ದಾರೆ.

    ಕೇರಳದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ನಡೆಸಬೇಕಿದ್ದು, ಇದೀಗ ಗಂಗಾವಳಿ ನದಿಯಲ್ಲಿ ಜಿಲ್ಲಾಡಳಿತದ ತಡೆಯ ಮಧ್ಯೆಯೇ ಶೋಧ ಕಾರ್ಯ ಮುಂದುವರೆದಿದೆ. ಜಿಲ್ಲಾಡಳಿತದಿಂದ ಇದುವರೆಗೂ ಅಧಿಕೃತ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಈಶ್ವರ್ ಮಲ್ಪೆ ಗಂಗಾವಳಿ ನದಿಗೆ ಇಳಿದಿದ್ದಾರೆ. ಸೇನಾ ತಂಡ ಈ ಹಿಂದೆ ಗುರುತಿಸಿದ ಜಾಗದಲ್ಲಿ ಮತ್ತೊಮ್ಮೆ ಮುಳುಗಿ ಈಶ್ವರ ಮಲ್ಪೆ ಶೋಧ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ಸತೀಶ್ ಸೈಲ್ ಖುದ್ದು ಸ್ಥಳಕ್ಕೆ ಆಗಮಿಸಿದ್ದರು. ಇವರೊಂದಿಗೆ ಕೇರಳ ರಾಜ್ಯದ ಶಾಸಕ ಆಶ್ರಫ್ ಕೂಡ ಹಾಜರಿದ್ದರು. ಇದನ್ನೂ ಓದಿ: HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ

     

    ಇನ್ನು ಶೋಧ ಕಾರ್ಯಾಚರಣೆ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ. ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಪತ್ತೆ ಮಾಡಲಾಗಿದೆ. ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಜಾಕ್ ಪತ್ತೆಯಾಗಿದ್ದು, ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿಯದ್ದೇ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ. ಲಾರಿಯ ಎರಡು ಬಿಡಿ ಭಾಗಗಳು ಕೂಡ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಒಂದು ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ. ಬಾಗಿಲಿನ ಕೀಲು ತನ್ನ ವಾಹನದ್ದಲ್ಲ. ಆದರೆ ಜಾಕ್ ಮಾತ್ರ ತನ್ನ ವಾಹನದ್ದೇ ಎಂದು ನಾಪತ್ತೆಯಾದ ಬೆಂಜ್ ಲಾರಿಯ ಮಾಲಿಕ ಮುಫಿನ್ ಹೇಳಿದ್ದಾರೆ. ಇದನ್ನೂ ಓದಿ: Tungabhadra Dam| ಗೇಟ್‌ ಕೊಚ್ಚಿ ಹೋದ ಪ್ರಕರಣದ ತನಿಖೆಯಾಗಲಿ: ಹೆಚ್‌ಡಿಕೆ ಆಗ್ರಹ

    ಕಾರ್ಯಾಚರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರ್ ಮಲ್ಪೆ (Eshwar Malpe), ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಾಚರಣೆ ಆರಂಭ ಮಾಡಿದೆವು. ನಿರಂತರ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಲಾಯಿತು. ಕಾರ್ಯಾಚರಣೆ ವೇಳೆ ಬೆಂಜ್ ಲಾರಿಯ ಜಾಕ್ ಪತ್ತೆ ಆಗಿದೆ. ಜಾಕ್ ಪತ್ತೆ ಆಗಿದ್ದ ಬಳಿಯೇ ಕೆಳಗೆ ಲಾರಿ ಇರುವುದು ಖಚಿತವಾಗಿದೆ. ನಾಳೆ ಬೆಳಗ್ಗೆ 8:30ಕ್ಕೆ ಮತ್ತೆ ಕಾರ್ಯಾಚರಣೆ ಆರಂಭ ಮಾಡುತ್ತೇವೆ. ಲಾರಿ ಇಂತಹದ್ದೇ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಗಿದೆ. ಆದರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಿ – CWRC ಮುಂದೆ ಕರ್ನಾಟಕದ ಮನವಿ

  • ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ

    ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ

    – 8 ಕ್ಕೇರಿದ ಶವಗಳ ಸಂಖ್ಯೆ
    – 100 ಕ್ಕೂ ಹೆಚ್ಚು ಜನರಿಂದ ಮಣ್ಣು ತೆರವು ಕಾರ್ಯಾಚರಣೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ.

    ಒಂದೆಡೆ ಬಿಟ್ಟು ಬಿಡದ ಮಳೆ, ಮತ್ತೊಂದೆಡೆ ಪದೇ ಪದೇ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣು. ಇದರ ನಡುವೆ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡುತ್ತಿದೆ ರಕ್ಷಣಾ ತಂಡ. ಈಗ ಸಣ್ಣಿ ಹನುಮಂತ ಗೌಡ (67) ಮಹಿಳೆ ಶವ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನೂ ಮೂವರಿಗೆ ಶೋಧ ಕಾರ್ಯ ಮುಂದುವರಿದಿದೆ.

    ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.

    ಗುಡ್ಡದ ಮಣ್ಣು ತೆರವಿಗೆ ಅಬ್ಬರದ ಅಡ್ಡಿ ಉಂಟು ಮಾಡಿದರೆ, ಮಳೆಯಿಂದ ಗುಡ್ಡದ ಭಾಗದಿಂದ ಬರುತ್ತಿರುವ ನೀರು ದೊಡ್ಡ ಕಂದಕವನ್ನೇ ಸೃಷ್ಟಿ ಮಾಡಿದೆ. ಇದರ ಜೊತೆಗೆ ಈ ಭಾಗದ ಮಣ್ಣನ್ನು ಪರೀಕ್ಷೆ ಮಾಡಿದ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳ ತಂಡ ಮತ್ತೆ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ವರದಿ ನೀಡಿದೆ. ಹೀಗಾಗಿ ಕಾರ್ಯಾಚರಣೆ ಮಾಡುವುದು ಸಹ ದೊಡ್ಡ ತೊಡಕಾಗಿದ್ದು, ಸಾರ್ವಜನಿಕರಿಗೆ ಮಣ್ಣು ತೆರವಾದ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

    ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಯಿತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಅವರಲ್ಲಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

  • ಹೆಚ್‍ಡಿಕೆ ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ? – ಅಂಕೋಲಾ ಭೇಟಿಗೆ ಡಿಸಿಎಂ ವ್ಯಂಗ್ಯ

    ಹೆಚ್‍ಡಿಕೆ ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ? – ಅಂಕೋಲಾ ಭೇಟಿಗೆ ಡಿಸಿಎಂ ವ್ಯಂಗ್ಯ

    ಬೆಂಗಳೂರು: ಅಂಕೋಲಾಗೆ ಹೋಗಿರುವ ಹೆಚ್‍ಡಿಕೆ (H.D Kumaraswamy) ಮಳೆ ಹಾನಿ ಸರಿಪಡಿಸಲು ಎಲ್ಲಿ ಫೀಲ್ಡ್‌ಗೆ ಇಳಿದಿದ್ದಾರೆ? ಅವರೇನು ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಕೋಲಾದ ಶಿರೂರು ಗುಡ್ಡ ಕುಸಿದ (Landslide) ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ನಿಡಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಕುಮಾರಸ್ವಾಮಿ ಎಲ್ರೀ ಫೀಲ್ಡಿಗಿಳಿದಿದ್ದಾರೆ? ಸೈನಿಕರನ್ನು ಕರೆತಂದು ಫೀಲ್ಡಿಗೆ ಇಳಿಯಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸುಮ್ಮನೆ ಒಂದು ಭೇಟಿ ಮಾಡುವುದಲ್ಲ. ನಾವು ಒಂದೇ ಗಂಟೆಯಲ್ಲಿ ನಮ್ಮ ಸಚಿವರನ್ನ ಕ್ಯಾಬಿನೆಟ್‍ನಿಂದ ಅಲ್ಲಿಗೆ ಓಡಿಸಿದ್ದೇವೆ. ಕೃಷ್ಣಬೈರೆಗೌಡ, ಮಂಕಾಳ ವೈದ್ಯ ಏನು ಮಾಡಬೇಕೊ ಮಾಡ್ತಿದ್ದಾರೆ. ಹೆಚ್‍ಡಿಕೆ ಬರಲಿ, ಬೇಡ ಅಂದವರು ಯಾರು? ಈ ವಿಚಾರದಲ್ಲಿ ನಾನು ರಾಜಕೀಯ ಮಾಡಲ್ಲ. ಅವರು ಹೋಗುವುದಕ್ಕೆ ನಾವ್ಯಾಕೆ ಅಡ್ಡಿ ಮಾಡೋಣ ಎಂದಿದ್ದಾರೆ.

    ಶಿರೂರು ಗುಡ್ಡ ಕುಸಿದ ಪ್ರದೇಶಕ್ಕೆ ಮಾಧ್ಯಮಗಳು ತೆರಳದಂತೆ ಜಿಲ್ಲಾಡಳಿತ ತಡೆ ನೀಡಿದ್ದ ವಿಚಾರವಾಗಿ ಇಂದು (ಶನಿವಾರ) ಬೆಳಗ್ಗೆ ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಕುಮಾರಸ್ವಾಮಿ ಭೇಟಿ ಸುದ್ದಿಯಾಗದಂತೆ ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಜೆಡಿಎಸ್ ಆರೋಪಿಸಿತ್ತು.

  • ಶಿರೂರಿಗೆ ಹೆಚ್‍ಡಿಕೆ ಭೇಟಿ ವಿಚಾರ ಸುದ್ದಿಯಾಗದಂತೆ ಸರ್ಕಾರದಿಂದ ತಡೆ – ಜೆಡಿಎಸ್ ಆರೋಪ

    ಶಿರೂರಿಗೆ ಹೆಚ್‍ಡಿಕೆ ಭೇಟಿ ವಿಚಾರ ಸುದ್ದಿಯಾಗದಂತೆ ಸರ್ಕಾರದಿಂದ ತಡೆ – ಜೆಡಿಎಸ್ ಆರೋಪ

    ಬೆಂಗಳೂರು: ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು (H.D Kumaraswamy )ಭೇಟಿ ನೀಡುವುದು ಸುದ್ದಿಯಾಗದಂತೆ ತಡೆಯಲು ಯತ್ನಿಸಿರುವುದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅಂಜು ಬುರುಕುತನ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

    ಈ ವಿಚಾರವಾಗಿ ಎಕ್ಸ್‌ನಲ್ಲಿ ಜೆಡಿಎಸ್ ಅಭಿಪ್ರಾಯ ಹಂಚಿಕೊಂಡಿದೆ. ದುರಂತ ನಡೆದು ಇಷ್ಟು ದಿನಗಳಾದರೂ ಶಿರೂರಿಗೆ ನೀವಾಗಲಿ, ನಿಮ್ಮ ಸರ್ಕಾರದ ಯಾವುದೇ ಸಚಿವರಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಸಂತ್ರಸ್ತರ ಸಂಕಷ್ಟ ಆಲಿಸಿಲ್ಲ. ಆದರೆ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡುವ ವೇಳೆಯೂ ನಿಮ್ಮ ಸರ್ಕಾರ ಈ ಸೇಡಿನ ರಾಜಕೀಯ ಥರವೇ? ಇದು ಸಿದ್ದರಾಮಯ್ಯರ ಕೀಳುಮಟ್ಟದ ರಾಜಕೀಯ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

    ರಕ್ಷಣಾ ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಬ್ಯಾರಿಕೇಡ್ ಹಾಕಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ. ಇದು ಕೈ ಸರ್ಕಾರದ ಸಂವಿಧಾನ ವಿರೋಧಿ ನಡೆ. ಮಾಧ್ಯಮಗಳ ಸ್ವಾತಂತ್ರ್ಯ ಹತ್ತಿಕ್ಕುವ ನಿಮ್ಮ ಈ ನಡೆ ಸಂವಿಧಾನ ವಿರೋಧಿ ಅಲ್ಲವೇ ಎಂದು ಸಿಎಂಗೆ ಜೆಡಿಎಸ್ ಪ್ರಶ್ನಿಸಿದೆ.

    ಏನೇ ಇದ್ದರೂ ಹೆಚ್‍ಡಿಕೆ ಪ್ರಚಾರಕ್ಕೆ ಶಿರೂರಿಗೆ ಭೇಟಿ ನೀಡುತ್ತಿಲ್ಲ. ಜಿಲ್ಲಾಡಳಿತವನ್ನು ಬಳಸಿ ಮಾಧ್ಯಮದವರನ್ನು ತಡೆದ ಮಾತ್ರಕ್ಕೆ ಅವರ ಭೇಟಿ ನಿಲ್ಲಿಸಲು ಸಾಧ್ಯವೇ? ಸಂತ್ರಸ್ತರ ಕಷ್ಟ ಆಲಿಸುವುದನ್ನು ತಡೆಯಲು ಸಾಧ್ಯವೇ? ಎಂದು ಸಿಎಂ ವಿರುದ್ಧ ಜೆಡಿಎಸ್ ಕುಟುಕಿದೆ.

    ಏನಿದು ಪ್ರಕರಣ?
    ಉತ್ತರ ಕನ್ನಡದಲ್ಲಿ (Uttara Kannada) ಭಾರೀ ಮಳೆಯಿಂದ ಜು.16 ರಂದು ಅಂಕೋಲಾ (Ankola) ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಗುಡ್ಡ ಕುಸಿತವಾದ ಜಾಗದಲ್ಲಿ ಒಂದು ಚಹಾ ಅಂಗಡಿ ಇತ್ತು. ಇಲ್ಲಿ ಕೆಲವರು ಚಹಾ ಸೇವಿಸುತ್ತಿದ್ದರು. ಹೀಗಾಗಿ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ ನಡುವೆ ಕೇಂದ್ರ ಸಚಿವ ಹೆಚ್‍ಡಿಕೆ ಭೇಟಿ ನೀಡಿ ಪರಿಶೀಲಿಸಿ, ಸಂತ್ರಸ್ತರ ಕಷ್ಟ ಆಲಿಸಲು ಮುಂದಾಗಿದ್ದಾರೆ.

  • ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

    ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

    ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ.

    ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಇನ್ನು ಈ ಕುರಿತು ಅಂಕೋಲ ತಹಶೀಲ್ದಾರ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನ ಸಿಕ್ಕಿದ್ದಾರೆ. ಕ್ಯಾಂಟೀನ್ ಮಾಲೀಕನ ಮಗಳು ಆವಂತಿಕಾ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕಡೆ ರಸ್ತೆ ಮೇಲಿನ ಗುಡ್ಡ ತೆರವು ಕಾರ್ಯ ಸಹ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈಗಾಗಲೇ ಗುಡ್ಡ ಕುಸಿತ ಆಗಿರುವ ಬಗ್ಗೆ ಬಹಳಷ್ಟು ಚರ್ಚೆ ಆಗುತ್ತಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದ್ದರಿಂದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಭೂ ಕುಸಿತದ ಬಗ್ಗೆ ಅಧ್ಯಯನ ಮಾಡಲಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

  • ಉತ್ತರ ಕನ್ನಡ ಜಿಲ್ಲೆಯ ಭೂಕುಸಿತ ದುರಂತ – ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ

    ಉತ್ತರ ಕನ್ನಡ ಜಿಲ್ಲೆಯ ಭೂಕುಸಿತ ದುರಂತ – ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ

    ನವದೆಹಲಿ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಬಲಿಯಾದವರಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕಂಬನಿ ಮಿಡಿದಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ ಭೂಕುಸಿತವಾಗುವ ಆತಂಕವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇದನ್ನೂ ಓದಿ: ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತಕ್ಕೆ 7 ಮಂದಿ ಬಲಿ – ನದಿಗೆ ಬಿತ್ತು ಟ್ಯಾಂಕರ್‌

    ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ (Shirur Landslide) ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.

    ಹೆದ್ದಾರಿ ಬದಿ ಸಣ್ಣಪುಟ್ಟ ಗೂಡಂಗಡಿ, ಹೋಟೆಲ್ ಇಟ್ಟುಕೊಂಡು ಬದುಕು ಕಟ್ಟಿಕೊಂಡಿರುವ ಜನತೆಯಲ್ಲಿ ಕಳಕಳಿಯ ಮನವಿ ಮಾಡಿರುವ ಸಚಿವ ಕುಮಾರಸ್ವಾಮಿ, ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶಿರೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ : ಕೃಷ್ಣಭೈರೇಗೌಡ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ : ಕೃಷ್ಣಭೈರೇಗೌಡ

    ಬೆಂಗಳೂರು: ಅಂಕೋಲಾದ ಶಿರೂರಿನ (Shiroor)ಗುಡ್ಡ ಕುಸಿತ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಬೇಜವಾಬ್ದಾರಿಯೇ ಕಾರಣ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಆರೋಪಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮತ್ತು ರಸ್ತೆ ಮಾಡಿದ್ದ ಕಂಪನಿ ಐಆರ್‌ಬಿ (IRB) ಕಂಪನಿ ಮೇಲೆ ಒತ್ತಡ ತಂದು 8-10 ಜೆಸಿಬಿ, ಇಟಾಚಿ ಬಳಸಿ ರಸ್ತೆ ಕ್ಲಿಯರ್ ಮಾಡೋ ಕೆಲಸ ಮಾಡಿದ್ದೇವೆ. ಬಹುತೇಕ ರಸ್ತೆ ಕ್ಲೀಯರ್‌  ಮಾಡುವ ಕೆಲಸ ಆಗಿದೆ. ರಸ್ತೆ  ಕ್ಲೀಯರ್‌ ಆದ ಮೇಲೆ ಸಂಚಾರಕ್ಕೆ ಬಿಡಬೇಕಾ ಅಂತ ಪೊಲೀಸ್ ಮತ್ತು ನ್ಯಾಷನಲ್ ಹೈವೇ ಅವರು ತೀರ್ಮಾನ ಮಾಡ್ತಾರೆ. ಗುಡ್ಡ ಇನ್ನು ತೇವಾಂಶ ಇರುವುದರಿಂದ ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಸೇಫ್ಟಿ ಎಂಜಿನಿಯರ್ ಗಳು ಪರಿಶೀಲನೆ ಮಾಡಿದ ಮೇಲೆ ತೀರ್ಮಾನ ಮಾಡ್ತೀವಿ. ಕುಸಿತ ಅಗಿರುವ ಜಾಗದಲ್ಲಿ ಕ್ಲೀಯರ್ ಮಾಡೋ ಕೆಲಸ ಆಗ್ತಿದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

    ನಿರಂತರವಾಗಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. ಇದರಿಂದ ಕೆಲಸಕ್ಕೆ ತೊಂದರೆ ಆಗುತ್ತಿದೆ. ವಾಹನಗಳ ಸಂಚಾರವನ್ನು ಈಗ ಬೇರೆ ಕಡೆ ಡೈವರ್ಟ್ ಮಾಡಲಾಗಿದೆ. ಒಂದು ಕುಟುಂಬದ 5 ಜನರು ಮಣ್ಣು ಕುಸಿತಕ್ಕೆ ಸಿಲುಕಿದ್ದಾರೆ ‌3 ಜನರ ಶವ ಸಿಕ್ಕಿದೆ‌. ಇದರಲ್ಲಿ ಒಬ್ಬರು ತಮಿಳುನಾಡಿನ ಮೂಲದ ಡ್ರೈವರ್ ದೇಹ ಸಿಕ್ಕಿದೆ.ಇಬ್ಬರ ಬಾಡಿ ಸಿಗಬೇಕಾಗಿದ್ದು ಶೋಧ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    ಇನ್ನೊಂದು ಟ್ಯಾಂಕರ್ ಸಿಕ್ಕಿ ಹಾಕಿಕೊಂಡಿದೆಯಾ ಅನ್ನೋ ಅನುಮಾನ ಇದೆ. ಆದರೆ BPCL ಮತ್ತು HPCL ಕಂಪನಿಯಾಗಲಿ ಯಾವುದೇ ಟ್ರಾನ್ಸ್ ಪೋರ್ಟ್ ಕಂಪನಿಗಳು ಟ್ಯಾಂಕರ್ ಮಿಸ್ ಆಗಿದೆ ಅಂತ ದೂರು ಕೊಟ್ಟಿಲ್ಲ. ನಮಗೆ ಖಚಿತ ಇರೋ ಮಾಹಿತಿ ಒಂದು ಟ್ಯಾಂಕರ್ ಮಾತ್ರ ನೀರಿನಲ್ಲಿ ಸಿಲುಕಿದೆ. ಅ ಟ್ಯಾಂಕರ್‌ನಲ್ಲೂ ಗ್ಯಾಸ್ ಇದೆ. ನಿನ್ನೆ ಗ್ಯಾಸ್ ಸ್ವಲ್ಪ ಲೀಕ್ ಆಗ್ತಿತ್ತು. HPCL, BPCL ನೇವಿ ಅವರ ಸಹಾಯದಿಂದ ಲೀಕೇಜ್ ತಡೆಯೋ‌ ಕೆಲಸ ಮಾಡಿದ್ದಾರೆ. HPCL ಮತ್ತು BPCL ಕಂಪನಿಗೆ ಜಿಲ್ಲಾಡಳಿತದ ಮೂಲಕ ನೊಟೀಸ್ ಜಾರಿ ಮಾಡಿದ್ದೇವೆ. ಸುರಕ್ಷಿತವಾಗಿ ನೀರಲ್ಲಿ ಇರೋ ಟ್ಯಾಂಕರ್ ಹೊರಗೆ ತೆಗೆಯಬೇಕು. ಗ್ಯಾಸ್‌ನಿಂದ ಯಾವುದೇ ಅನಾಹುತ ಅಗಬಾರದು. ದುರ್ಘಟನೆ ಆಗದೇ ಹಾಗೇ ಗ್ಯಾಸ್ ಟ್ಯಾಂಕ್ ನಿರ್ವಹಣೆ ಮಾಡಬೇಕು ಅಂತ ಹೇಳಿದ್ದೇವೆ ಅಂತ ಮಾಹಿತಿ ನೀಡಿದ್ರು.

     

    NDRF, SDRF, ನೇವಿ, ಪೊಲೀಸರು, ಅಗ್ನಿಶಾಮಕ ದಳ ಎಲ್ಲರು ಸ್ಥಳದಲ್ಲಿ ಕೆಲಸ ಮಾಡ್ತಿದ್ದಾರೆ. ಗುಡ್ಡ ಕುಸಿತ ಅಗುತ್ತೆ‌ ಅಂತ ಗೊತ್ತಿದ್ದರೂ ಕಳೆದ ವರ್ಷವೇ ನಾವು ಇದರ ಬಗ್ಗೆ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಲಿಲ್ಲ. ನಿನ್ನೆಯೂ ಅವರು ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿಯವರು ಸ್ಪಂದಿಸಲಿಲ್ಲ. ಸ್ಥಳೀಯ ಶಾಸಕರು ರಾಷ್ಟ್ರೀಯ ಹೆದ್ದಾರಿಯವರು ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ ಎಂದು ದೂರು ನೀಡಿದ್ದಾರೆ. ನಿನ್ನೆ ಸಂಜೆ IRB ಕಂಪನಿ ಮತ್ತು ನ್ಯಾಷನಲ್ ಹೈವೆ ಮೇಲೆ FIR ದಾಖಲು ಮಾಡಿದ್ದೇವೆ. ಈ ಪ್ರಕರಣಕ್ಕೆ ಅವರ ಬೇಜವಾಬ್ದಾರಿ, ಮೊಂಡುತನ ಕಾರಣ. ಕಳೆದ ವರ್ಷ ನಾನೇ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿ ಮೂಲಕ ವರ್ತಮಾನ ಕೊಟ್ಟಿದ್ದೆವು. ಆದರು ಯಾವುದೇ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

    ಈಗ ಮುಂಬೈನಿಂದ ಕಾರು ಕಂಪನಿಯೊಂದು ಫೋನ್ ಮಾಡಿ ಒಂದು ಜಿಪಿಎಸ್ ಗುಡ್ಡ ಕುಸಿತ ಜಾಗದಲ್ಲಿ ಸಿಕ್ಕಿ ಹಾಕಿಕೊಂಡಿದೆ ಅಂತ ಮಾಹಿತಿ ಕೊಟ್ಡಿದ್ದಾರೆ. ಒಂದು ಕಾರ್ ಕೂಡಾ ಸಿಕ್ಕಿ ಹಾಕಿಕೊಂಡಿರೋ ಸಾಧ್ಯತೆ ಇದೆ .ಅದರ ಪರಿಶೀಲನೆ ಆಗುತ್ತಿದೆ. ಕಾರು ಕಂಪನಿಗೆ ಮಾಲೀಕರು ಯಾರುಎನ್ನುವ ಮಾಹಿತಿ ಕೇಳಿದ್ದೇನೆ ಅಂತ ತಿಳಿಸಿದರು.

  • ಶಿರೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

    ಶಿರೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

    – ಗುಡ್ಡ ಕುಸಿದು 10 ಮಂದಿ ಬಲಿ
    – ಕಣ್ಮರೆಯಾದವರಿಗೆ ಶೋಧಕಾರ್ಯ

    ಕಾರವಾರ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಮರಣ ಮಳೆಯಾಗಿ ಬದಲಾಗಿದೆ. ಅದರಲ್ಲೂ ರಣಮಳೆ ಮತ್ತು ಭಾರೀ ಭೂಕುಸಿತಗಳಿಂದ ಉತ್ತರ ಕನ್ನಡ (Uttara Kannada) ಜಿಲ್ಲೆ ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು (Shirur) ಬಳಿ ಮಂಗಳೂರು ಗೋವಾಗೆ ಸಂರ್ಪಕ ಕಲ್ಪಿಸುವ ರಾಷ್ಟೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು ಕನಿಷ್ಠ 10 ಮಂದಿ ಬಲಿ ಆಗಿದ್ದಾರೆ.

    ಮೃತರಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಐವರಿದ್ದಾರೆ. ಇನ್ನೂ 20 ಮಂದಿ ಕಣ್ಮರೆಯಾಗಿರುವ ಶಂಕೆ ಇದ್ದು, ಭಾರೀ ಮಳೆ ನಡುವೆ ಎನ್‌ಡಿಆರ್‌ಎಫ್ ಶೋಧ ಕಾರ್ಯ ನಡೆಸಿದ್ದು, ಐವರ ಶವ ಹೊರತೆಗೆದಿದೆ.  ಮಂಗಳವಾರ ಇಡೀ ದಿನ ನಡೆದ ಎನ್‌ಡಿಆರ್‌ಎಫ್ (NDRF) ಕಾರ್ಯಚರಣೆ ರಾತ್ರಿ ವೇಳೆ ಸ್ಥಗಿತ ಮಾಡಲಾಗಿದ್ದು ಇಂದು ಮುಂದುವರಿಯಲಿದೆ.

    ಜೀವನ ನಿರ್ವಹಣೆಗಾಗಿ ದೂರದ ಕಾರವಾರದಿಂದ ಬಂದು ಗಂಗಾವಳಿ ನದಿ ಬಳಿಯ ಶಿರೂರಿನಲ್ಲಿ ಟೀ ಅಂಗಡಿ (Tea Shop) ವ್ಯಾಪಾರ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ್ ಇಡೀ ಕುಟುಂಬವೇ ಗುಡ್ಡ ಕುಸಿತಕ್ಕೆ ಬಲಿಯಾಗಿದೆ. ಇಡೀ ದಿನ ನಡೆದ ಕಾರ್ಯಚರಣೆಯಲ್ಲಿ 6 ಜನರ ಮೃತ ದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರ – ಉಕ್ಕಡಗಾತ್ರಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ

    ಮೃತರನ್ನು ಲಕ್ಷ್ಮಣ ನಾಯ್ಕ್, ಶಾಂತಿ ನಾಯ್ಕ್, ರೋಶನ್, ಅವಂತಿಕಾ, ಜಗನ್ನಾಥ ಎಂದು ಗುರುತಿಸಲಾಗಿದೆ. ಈ ನತದೃಷ್ಟ ಕುಟುಂಬದಲ್ಲಿ ಅಂತ್ಯಕ್ರಿಯೆ ಮಾಡಲೂ ಯಾರು ಉಳಿದಿಲ್ಲ. ಸಂಬಂಧಿ ಲಕ್ಷ್ಮಣ ನಾಯ್ಕ್ ಕುಟುಂಬ ಬಲಿಯಾಗಿದೆ ಎಂಬ ಸುದ್ದಿ ತಿಳಿದು ಸ್ಥಳಕ್ಕೆ ಓಡಿ ಬಂದ ಸಂಬಂಧಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮಣ ನಾಯ್ಕ್ ಕುಟುಂಬದ ಸದಸ್ಯರ ಸಾಮೂಹಿಕ ಅಂತ್ಯಕ್ರಿಯೆ ಮಾಡುವುದಾಗಿ ಹೇಳಿದರು.

     

    ಶಿರೂರು ಬಳಿ ಕೇಂದ್ರ ಐಆರ್‌ಬಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದು ಇದೇ ಕಾಮಗಾರಿ ನಡೆಯುಗ ಸ್ಥಳದಲ್ಲೇ ಲಕ್ಷ್ಮಣ ನಾಯ್ಕ್ ಕುಟುಂಬ ಟೀ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಸತತ ಮಳೆಯಿಂದಾಗಿ ಗುಡ್ಡದಲ್ಲಿ ನೀರು ಹರಿದು ಗುಡ್ಡ ಕುಸಿತವಾಗಿದೆ. ಕುಸಿತ ಗುಡ್ಡ ರಸ್ತೆಯಲ್ಲಿ ನಿಂತ ಎಲ್‌ಪಿಜಿ ಟ್ಯಾಂಕರ್ ಮೇಲೆ ಬಿದ್ದಿದೆ. ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿದ್ದು, ನದಿಯಲ್ಲಿ ತೇಲುತ್ತಿದೆ. ಹೈವೇ ಪಕ್ಕ ಟ್ಯಾಂಕರ್ ನಿಲ್ಲಿಸಿದ್ದ ಚಾಲಕ ಮತ್ತು ಕ್ಲೀನರ್ ಟೀ ಕುಡಿಯುವಾಗ ಈ ದುರಂತ ಸಂಭವಿಸಿದೆ.

    ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಶೈಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವರ್ಷದಿಂದ ಕೇಂದ್ರ ಐಆರ್‌ಬಿ ಅಧಿಕಾರಿಗಳಿಗೆ ರಸ್ತೆ ತೆರವು ಮಾಡಿಕೊಡುವಂತೆ ಮಾಡಿದ್ರು ಗಮನ ಹರಿಸಲಿಲ್ಲ.  ಸತತ ಮಳೆ ಹಾಗೂ ಐಆರ್‌ಬಿ ಅಧಿಕಾರಿಗಳ ಕಾಮಗಾರಿಗಳಿಂದಲೇ ಈ ದುರಂತವಾಗಿದೆ ಎಂದು ಮಂಕಾಳು ವೈದ್ಯ ಅಸಮಧಾನ ವ್ಯಕ್ತಪಡಿಸಿದರು.

     

  • ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತಕ್ಕೆ 7 ಮಂದಿ ಬಲಿ – ನದಿಗೆ ಬಿತ್ತು ಟ್ಯಾಂಕರ್‌

    ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತಕ್ಕೆ 7 ಮಂದಿ ಬಲಿ – ನದಿಗೆ ಬಿತ್ತು ಟ್ಯಾಂಕರ್‌

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಭಾರಿ ಮಳೆ (Rain) ಸುರಿಯುತ್ತಿದ್ದು, ಅಂಕೋಲಾ (Ankola) ತಾಲೂಕಿನ ಶಿರೂರು (Shiruru) ಬಳಿ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.

    ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ 7 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಟ್ಯಾಂಕರ್‌ ಚಾಲಕ, ಕ್ಲೀನರ್‌ ಸೇರಿ 7 ಮಂದಿ ಮೃತಪಟ್ಟಿದ್ದಾರೆ.

    ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್‌ಡಿ​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಸಂಸದರು ತಿಳಿಸಿದರು.

    ಭಾರೀ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ರಕ್ಷಣಾ ತಂಡ ಶಾಂತಿ ನಾಯ್ಕ(37) ಎನ್ನುವವರ ಮೃತದೇಹವನ್ನು ಮಣ್ಣಿನಿಂದ ಹೊರಕ್ಕೆ ತೆಗೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

     

    ಗುಡ್ಡ ಕುಸಿತವಾದ ಜಾಗದಲ್ಲಿ ಒಂದು ಚಹಾ ಅಂಗಡಿ ಇತ್ತು. ಇಲ್ಲಿ ಕೆಲವರು ಚಹಾ ಸೇವಿಸುತ್ತಿದ್ದರು. ಹೀಗಾಗಿ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ. ಟ್ಯಾಂಕರ್ ಚಾಲಕ ಮತ್ತು ಕ್ಲೀನರ್‌ ಟ್ಯಾಂಕರ್‌ ನಿಲ್ಲಿಸಿ ಚಹಾ ಸೇವಿಸುತ್ತಿದ್ದಾಗ ದುರಂತ ಸಂಂಭವಿಸಿದೆ.