Tag: Anna Bhagya scheme

  • ಕೈ ನೀಡಿದ್ದ ಗ್ಯಾರಂಟಿ ಅನ್ನಭಾಗ್ಯದ ಹಣ ಸರಿಯಾಗಿ ತಲುಪುತ್ತಿಲ್ಲ : ಕೋಲಾರದಲ್ಲಿ ಸಾರ್ವಜನಿಕರ ಆಕ್ರೋಶ

    ಕೈ ನೀಡಿದ್ದ ಗ್ಯಾರಂಟಿ ಅನ್ನಭಾಗ್ಯದ ಹಣ ಸರಿಯಾಗಿ ತಲುಪುತ್ತಿಲ್ಲ : ಕೋಲಾರದಲ್ಲಿ ಸಾರ್ವಜನಿಕರ ಆಕ್ರೋಶ

    ಕೋಲಾರ: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಜಾರಿಗೆ ತಂದಿದ್ದ 5 ಗ್ಯಾರಂಟಿಗಳ (Guarantee) ಫಲಾನುಭವಿಗಳಿಗೆ ಅದರ ಫಲ ಮೂರು ನಾಲ್ಕು ತಿಂಗಳಾದರೂ ತಲುಪದ್ದಕ್ಕೆ ಕೋಲಾರದಲ್ಲಿ (Kolar) ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಮೂಲಕ ಭರ್ಜರಿ ಬಹುಮತದ ಸರ್ಕಾರ ರಚನೆ ಮಾಡಿದೆ. ಆದರೆ ಅಧಿಕಾರಕ್ಕೆ ಬರಲು ಸಹಾಯ ಮಾಡಿದ ಗ್ಯಾರಂಟಿಗಳನ್ನು ಪೂರೈಸಲು ಸರ್ಕಾರ ಹರಸಾಹಸ ಪಡುವಂತಾಗಿದೆ. ಐದು ಗ್ಯಾರಂಟಿಗಳ ಪೈಕಿ ಬಹಳ ಮಹತ್ವದ ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಮೂರು ತಿಂಗಳಿಂದ ಕೋಲಾರದಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ಹಣ ತಲುಪಿಲ್ಲ. ಜೂನ್ ತಿಂಗಳಲ್ಲಿ ಬಂದ ಹಣ ಈವರೆಗೂ ಡಿಬಿಟಿ ಹಣ ಬಂದಿಲ್ಲ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಹರ್ಷಿಕಾ ಪೂಣಚ್ಚಗೆ ಹೆಣ್ಣು ಮಗು ಜನನ

    ಕೋಲಾರ ಜಿಲ್ಲೆಯಲ್ಲಿ ಕಳೆದ ವರ್ಷ ಭೀಕರ ಬರಗಾಲವಿತ್ತು, ದುರಾದೃಷ್ಟವಶಾತ್ ಈ ವರ್ಷವೂ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಮಳೆ ಬಂದು ಎರಡು ತಿಂಗಳೇ ಕಳೆದಿದೆ. ಸಾಲು ಸಾಲು ಹಬ್ಬಗಳು, ಹೀಗಿರುವಾಗ ಸಂಕಷ್ಟದಲ್ಲಿರುವ ಬಡವರಿಗೆ ಕೊನೆ ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕವಾದರೂ ನೆರವಿಗೆ ನಿಲ್ಲಬೇಕಿತ್ತು. ಆದರೆ ಸರ್ಕಾರ ಯೋಜನೆಗೆ ಹಣ ಹೊಂದಿಸಲಾಗದೆ ಪರದಾಡುತ್ತಿದೆ ಎಂದು ಜನ ಆರೋಪಿಸಿದ್ದಾರೆ.

    ಇನ್ನು ಕೋಲಾರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ 11,88,339 ಫಲಾನುಭವಿಗಳಿದ್ದಾರೆ. ಈ ಪೈಕಿ ಅಂತ್ಯೋದಯ ಕಾರ್ಡ್ಗಳು 29,845 ಜನರು ಹೊಂದಿದ್ದರೆ, ಬಿಪಿಎಲ್ ಕಾರ್ಡ್ಗಳ ಸಂಖ್ಯೆ 3,00,673 ಇವೆ. ಒಟ್ಟು 3,35,518 ಕಾರ್ಡ್ಗಳಿವೆ. ಇನ್ನು ಕಳೆದ ಜೂನ್‌ವರೆಗೆ ಫಲಾನುಭವಿಗಳಿಗೆ ಡಿಪಿಟಿ ಮೂಲಕ ಅನ್ನಭಾಗ್ಯ ಯೋಜನೆಯ ಐದು ಕೆಜಿ ಅಕ್ಕಿಯ ಹಣ ಸಂದಾಯವಾಗಿದೆ. ಆದರೆ ಜುಲೈ, ಆಗಸ್ಟ್, ಸೆಪ್ಟಂಬರ್ ಮೂರು ತಿಂಗಳ ಹಣ ಈವರೆಗೂ ಪಾವತಿಯಾಗಿಲ್ಲ. ಹಾಗಾಗಿ ಸರ್ಕಾರ ಆರಂಭದಲ್ಲಿ ಪ್ರತಿ ತಿಂಗಳು ಹಣ ಹಾಕುತ್ತಿತ್ತು. ಇದಾದ ನಂತರ ಸರ್ಕಾರ ತಮ್ಮ ಉಳಿವಿಗಾಗಿಯೇ ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸರಿಯಾಗಿ ಹಣ ಸಂದಾಯವಾಗುತ್ತಿಲ್ಲ.

    ಕೇವಲ ಅನ್ನಭಾಗ್ಯ ಯೋಜನೆಯ ಹಣವಷ್ಟೇ ಅಲ್ಲ. ಯಾವುದೇ ಯೋಜನೆಯ ಹಣವೂ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಹಾಗೂ ಜನರ ಮಾತಾಗಿದೆ. ಇನ್ನು ಆಹಾರ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರವಾಗಿ ಜೂನ್ ತಿಂಗಳಲ್ಲಿ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗಿದೆ. ಈಗ ಉಳಿದ ಮೂರು ತಿಂಗಳ ಹಣ ಪಾವತಿ ಮಾಡಬೇಕಿದೆ.ಇದನ್ನೂ ಓದಿ: ಆಹಾರ ಅರಸಿ ನಾಡಿಗೆ ಬರಲು ಯತ್ನಿಸಿದ್ದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

    ಒಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಒಂದಲ್ಲ ಒಂದು ಕಾರಣದಿಂದ ಸದ್ದು ಮಾಡುತ್ತಲೇ ಇದೆ. ಕೂಡಲೇ ಸರ್ಕಾರ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಿದ್ದರೆ, ಬಡವರಿಗೆ ಅದನ್ನೇ ನಂಬಿರುವವರಿಗೆ ಅನುಕೂಲವಾಗುತ್ತದೆ ಎನ್ನುವುದು ಜನರ ಮಾತಾಗಿದೆ.

  • ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಬೆಂಗಳೂರು: ಅನ್ನಭಾಗ್ಯ ಯೋಜನೆಯ (Anna Bhagya Scheme) ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಜಿ ಹಾಕದಿದ್ರೆ ವಿದ್ಯುತ್‌ ಉಚಿತ ಇಲ್ಲ – ಸಚಿವ ಕೆ.ಜೆ.ಜಾರ್ಜ್

    ಇನ್ನೂ ಗೃಹಜ್ಯೋತಿ (Gruhajyothi Scheme) ಯೋಜನೆಯ ಕುರಿತು ಮಾತಾಡಿದ ಸಿಎಂ, ಗೃಹಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಬಿಲ್‌ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದೆ, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಿಹಾದಿ ಮನಸ್ಥಿತಿಗಳು ನಮ್ಮ ಮನೆಗೆ ಬಂದ್ರೆ, ಕೋವಿ ಹೊರಬರುತ್ತೆ ಎಂದಿದ್ದ VHP ಮುಖಂಡನ ವಿರುದ್ಧ ಕೇಸ್

    ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ, ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದು ಕುಟುಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ರಮವಾಗಿ ಸಾಗಿಸ್ತಿದ್ದ 16,200 KG ಅಕ್ಕಿ ವಶಕ್ಕೆ

    ಅಕ್ರಮವಾಗಿ ಸಾಗಿಸ್ತಿದ್ದ 16,200 KG ಅಕ್ಕಿ ವಶಕ್ಕೆ

    ಕಲಬುರಗಿ: ಅನ್ನಭಾಗ್ಯ ಯೋಜನೆಯಡಿ (Anna Bhagya Scheme) 10 ಕೆಜಿ ಅಕ್ಕಿ ಉಚಿತ ನೀಡಲು ಸರ್ಕಾರ ಹೆಣಗಾಡುತ್ತಿದ್ದರೆ. ಪ್ರತಿ ಪಕ್ಷ ನಾಯಕರು ಕಾಂಗ್ರೆಸ್‌ ಗ್ಯಾರಂಟಿ (Congress Guarantee) ಘೋಷಣೆ ಮಾಡಿದಂತೆ ಅಕ್ಕಿ ಕೊಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಅಕ್ರಮವಾಗಿ ಸಾಗಿಸುತ್ತಿದ್ದ 16,200 ಕೆಜಿ ಪಡಿತರ ಅಕ್ಕಿಯನ್ನ ಜಿಲ್ಲೆಯ ಆಳಂದ ತಾಲೂಕಿನ ಪೊಲೀಸರು (Police) ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

    ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 16,200 ಕೆಜಿ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಆಳಂದ ಪಟ್ಟಣದಿಂದ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಹೋಗುತ್ತಿದ್ದ ಟಾಟಾ ಟರ್ಬೋ ವಾಹನದಲ್ಲಿ 12,460 ಕೆಜಿ ಹಾಗೂ ಆಳಂದ ಪಟ್ಟಣದ ವಿದ್ಯಾನಗರ ಗೋಡೌನ್‌ನಲ್ಲಿದ್ದ 3,740 ಕೆಜಿ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್‌ ಮಿಲ್‌ ಮಾಲೀಕರ ಎಚ್ಚರಿಕೆ

    ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನ ಚಾಲಕರನ್ನೂ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ದಂಧೆಯ ಹಿಂದೆ ಕಾಂಗ್ರೆಸ್‌ (Congress) ಹಾಗೂ ಬಿಜೆಪಿ ಕಾರ್ಯಕರ್ತರು (BJP Workers) ಇರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನದ ಹಿಂದೆ ಕಲಬುರಗಿಯಲ್ಲೂ 23 ಸಾವಿರ ಕೆಜಿ ಅಕ್ಕಿಯನ್ನ ಆಹಾರ ಇಲಾಖೆ ವಶಪಡಿಸಿಕೊಂಡಿತ್ತು. ಇದನ್ನೂ ಓದಿ:  ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ

    ಸಿಎಂ ಹೇಳಿರೋದೇನು?
    ಈಗಾಗಲೇ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಕ್ಕಿ ಹೊಂದಿಸಲು ಬೇರೆ ಬೇರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಯಾವ ರಾಜ್ಯಗಳಲ್ಲೂ ಬೇಡಿಕೆ ಇರುವಷ್ಟು ಸಾಮರ್ಥ್ಯದಲ್ಲಿ ಪೂರೈಕೆಯಾಗದ ಹಿನ್ನೆಲೆ ಯೋಜನೆ ಜಾರಿ ಮಾಡುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ

    ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ

    ನವದೆಹಲಿ: ಭಾರತೀಯ ಆಹಾರ ನಿಗಮ (FCI) ಕರ್ನಾಟಕಕ್ಕೆ ಮೊದಲು ಅಕ್ಕಿ ಕೊಡುವ ಭರವಸೆ ನೀಡಿತ್ತು, ಆದರೆ ಇದ್ದಕ್ಕಿದ್ದ ಹಾಗೇ ಅಕ್ಕಿ ನೀಡಲು ನಿರಾಕರಿಸಲಾಗುತ್ತಿದೆ.‌ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ ಅನಿಸುತ್ತೆ, ಈ ರೀತಿಯ ದ್ವೇಷದ ರಾಜಕೀಯ ಮಾಡೋದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ (Amit Shah) ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ದೆಹಲಿಯಲ್ಲಿ (NewDelhi) ಮಾತನಾಡಿದ ಅವರು, ನಿನ್ನೆ ರಾತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ, ಸೌಹಾರ್ದಯುತವಾಗಿ ಚರ್ಚೆ ಮಾಡಿದೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರವಾಗಿ ಚರ್ಚಿಸಿದ್ದೇನೆ. ರಾಜ್ಯದಲ್ಲಿ ಆಗಿರುವ ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

    ಮೊದಲು FCI ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು. ಆದರೆ ಕಡೆ ಕ್ಷಣದಲ್ಲಿ ನಿರ್ಧಾರ ಬದಲಿಸಿ ಈಗ ಅಕ್ಕಿ ನೀಡಲು ನಿರಾಕರಿಸುತ್ತಿದೆ. ಈ ರೀತಿ ಮಾಡುವುದು ಸರಿಯಲ್ಲ, ಇದು ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡಿದ ಹಾಗೇ ಆಗಲಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ನೀಡುವಂತೆ ಸೂಚಿಸಲು ನವಿ ಮಾಡಿದ್ದೇನೆ. ಅದಕ್ಕೆ ಅವರು ಪೂರಕವಾಗಿ ಸ್ಪಂಧಿಸಿದ್ದು, ಕೇಂದ್ರ ಆಹಾರ ಸಚಿವ ಪಿಯೂಷ್ ಗೊಯೇಲ್ ಜೊತೆಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

    ಈಗಾಗಲೇ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಕ್ಕಿ ಹೊಂದಿಸಲು ಬೇರೆ ಬೇರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಯಾವ ರಾಜ್ಯಗಳಲ್ಲೂ ಬೇಡಿಕೆ ಇರುವಷ್ಟು ಸಾಮರ್ಥ್ಯದಲ್ಲಿ ಪೂರೈಕೆಯಾಗದ ಹಿನ್ನೆಲೆ ಯೋಜನೆ ಜಾರಿ ಮಾಡುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರಧಾನಿ ಮೋದಿ ಕೊಲ್ಲುತ್ತೇನೆ ಎಂದು ಕರೆ ಮಾಡಿದ್ದ ವ್ಯಕ್ತಿ ಬಂಧನ

    ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಟ್ಟ ರಾಜಕೀಯ ಮಾಡುತ್ತಿದೆ. ಈಗಾಗಲೇ ತೆಲಂಗಾಣ, ಪಂಜಾಬ್ ಸೇರಿದಂತೆ ಎಲ್ಲಾ ಕಡೆ ಕೇಳಿದ್ದೇವೆ. ಆಂಧ್ರಪ್ರದೇಶದಿಂದ ಅಕ್ಕಿ ಆಮದು ಮಾಡಿಕೊಂಡರೆ ಪ್ರತಿ ಕೆಜಿಗೆ 42 ರೂ. ಆಗಲಿದೆ. 1 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ ಆದರೆ ಅದು ಕೇವಲ ಒಂದು ತಿಂಗಳು ನೀಡಲು ಸಾಧ್ಯ ಎಂದು ಛತ್ತೀಸ್‌ಗಢ ಸರ್ಕಾರ ಹೇಳಿದೆ. ತೆಲಂಗಾಣ ಕೇವಲ ಗೋಧಿ ಮಾತ್ರ ಕೊಡೋಕೆ ಸಾಧ್ಯ ಅಂತ ಹೇಳಿದೆ. ಕರ್ನಾಟಕದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲ. ಹೀಗಾಗಿ ಓಪನ್ ಮಾರ್ಕೆಟ್‌ಗೆ ಹೋಗಬೇಕು. ಇದಕ್ಕೆ ಟೆಂಡರ್ ಕರೆಯಬೇಕು ಈ ಎಲ್ಲ ಪ್ರಕ್ರಿಯೆಗೆ 2 ತಿಂಗಳು ಸಮಯ ತೆಗೆದುಕೊಳ್ಳಲಿದೆ. ಕೇಂದ್ರೀಯ ಭಂಡಾರ, ಎನ್‌ಸಿಸಿಎಫ್, ನಾಫೆಡ್‌ನಿಂದ ಅಕ್ಕಿ ಖರೀದಿಗೆ ಕೊಟೆಷನ್ ಕೇಳಿದೆ. ನಾಳೆ ಅವರು ದರಪಟ್ಟಿ ನೀಡಿದ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. ಇದರಿಂದಾಗಿ ಜುಲೈ 1 ರಿಂದ ಅಕ್ಕಿ ನೀಡುವುದು ಕಷ್ಟ ಆಗಬಹುದು ಎಂದು ಸಿಎಂ ಬುಧವಾರ ಹೇಳಿದ್ದರು.

  • ಕೇಂದ್ರ ಅಕ್ಕಿ ಯಾಕೆ ಕೊಡ್ಬೇಕು – ಅವ್ರನ್ನ ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ರಾ?: ಕುಮಾರಸ್ವಾಮಿ

    ಕೇಂದ್ರ ಅಕ್ಕಿ ಯಾಕೆ ಕೊಡ್ಬೇಕು – ಅವ್ರನ್ನ ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ರಾ?: ಕುಮಾರಸ್ವಾಮಿ

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದವರು ಕೊಟ್ಟ ಮಾತಿನಂತೆ ಅಕ್ಕಿ (Rice) ಕೊಡದೇ ನಾಟಕ ಆಡ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಅಕ್ಕಿ ಗ್ಯಾರಂಟಿ ವಿಳಂಬ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳ ನಾಟಕವನ್ನು ಜನರು ನೋಡಲೇಬೇಕು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಮತ ಕೊಟ್ಟಿದ್ದಾರೆ. ಇವರ ನಾಟಕ ನೋಡಲೇಬೇಕು. ಇದು ಈಗ ಅನಿವಾರ್ಯತೆ ಎಂದು ವ್ಯಂಗ್ಯವಾಡಿದರು.

    ರಾಜ್ಯದ ಜನ ಕೊಟ್ಟಿರೋ ತೀರ್ಮಾನದಿಂದ ನಾಡಿನ ಜನರಿಗೆ ಹೇಗೆ ಟೋಪಿ ಹಾಕ್ತಾರೆ ಅನ್ನೋದನ್ನು ಜನರು ನೋಡಲೇಬೇಕು. ಇದನ್ನು ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ನಿನ್ನೆ ಪ್ರತಿಭಟನೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರು, ಸಚಿವರು ಅಕ್ಕಿಗಾಗಿ ಪ್ರತಿಭಟನೆ ಮಾಡಿ ಕೇಂದ್ರದ ಮೇಲೆ ದೂಷಣೆ ಮಾಡಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಅಂತ ಜನರ ಮುಂದೆ ಮಾತು ಕೊಟ್ಟಾಗ ಈ ಸಮಸ್ಯೆ ಬಗ್ಗೆ ಅರಿವು ಇರಲಿಲ್ಲವಾ ಈ ಸರ್ಕಾರಕ್ಕೆ ಎಂದು ಕಿಡಿಕಾರಿದರು.

    ಎಫ್‌ಸಿಐಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಹೇಳ್ತಾರೆ. ರಾಜ್ಯದ ಸಿಎಂ ಹೀಗೆ ಉಡಾಫೆ ಮಾತಾಡೋದು ಎಷ್ಟು ಸರಿ? ಅಕ್ಕಿ ಬೇಕಿದ್ರೆ ಕೇಂದ್ರ ಸಚಿವರನ್ನು ಸಿಎಂ ಅಥವಾ ಸಚಿವರೋ ಭೇಟಿ ಆಗಬೇಕಿತ್ತು. ಯಾವನೋ ಎಫ್‌ಸಿಐ ಅಧಿಕಾರಿಗೆ ಪತ್ರ ಬರೆದು ಅಕ್ಕಿ ಕೊಡಿ ಅಂತ ಕೇಳಿದ್ರೆ ಅವನಿಗೇನು ಪವರ್ ಇದೆ? ಕೆಲವು ಗೈಡ್‌ಲೈನ್ಸ್ ಅವರು ಇಟ್ಟುಕೊಂಡಿದ್ದಾರೆ. ಈಗ ಕೇಂದ್ರ ಸರ್ಕಾರವೇ 5 ಕೆಜಿ ಅಕ್ಕಿ ಕೊಡ್ತಿದ್ದಾರೆ. ಇಲ್ಲಿ ಜನರಿಗೆ ಕೊಡ್ತಿರೋದೆ ಆ 5 ಕೆಜಿ. ಕಾಂಗ್ರೆಸ್ ನಾಯಕರು ಒಂದು ವಾರದಿಂದ ಪದೇ ಪದೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ. ರಾಜ್ಯವನ್ನು ದ್ವೇಷಿಸುತ್ತಿದ್ದಾರೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಕೇವಲ ಕೇಂದ್ರದ ಮೇಲೆ ದೂಷಣೆ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಯಾರು ಹೇಳ್ತಿಲ್ಲ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಕ್ರಮ ಮುಚ್ಚಲು ಕಾಂಗ್ರೆಸ್‌ನಿಂದಲೇ ಸ್ತ್ರೀ ಶಕ್ತಿ ಸಂಘಗಳ ಪ್ರತಿಭಟನೆ: ಹೆಚ್‌ಡಿಕೆ ಬಾಂಬ್

    ಕೇಂದ್ರ ಸರ್ಕಾರಕ್ಕೆ ಇಡೀ ದೇಶದಲ್ಲಿ ಅವರದ್ದೇ ಆದ ಕಮಿಟ್‌ಮೆಂಟ್ ಇರುತ್ತೆ. ಇವರಿಗೆ ಬೇಕಾದ ಹಾಗೆ ಅಕ್ಕಿ ಕೊಡಿ ಅಂದ್ರು ಅವ್ರು ಯಾಕೆ ಕೊಡ್ತಾರೆ? ನಾನು ಸಮ್ಮಿಶ್ರ ಸರ್ಕಾರದಲ್ಲಿ ರೈತರ ರಾಷ್ಟ್ರೀಯ ಬ್ಯಾಂಕ್‌ಗಳ ಸಾಲಮನ್ನಾ ಮಾಡಿದೆ. ಹಾಗಂತ ಪ್ರಧಾನಿ ಕೇಂದ್ರ ಸರ್ಕಾರ ಹಣ ಕೊಡಬೇಕು ಅಂತ ಕೇಳಿದ್ನಾ? ನಮ್ಮ ರಾಜ್ಯದ ಜನರ ತೆರಿಗೆ ಹಣದಿಂದ ನಾನು ಸಾಲಮನ್ನಾ ಮಾಡಿದೆ. ಇವತ್ತು ಅಕ್ಕಿ ಕೊಡೋದು ಕಾಂಗ್ರೆಸ್ ಪಕ್ಷಕ್ಕೆ ದರ್ದು ಇದೆ. ಕೇಂದ್ರಕ್ಕೆ ಯಾವ ದರ್ದು ಇದೆ ನೀವು ಕೇಳೊ ಅಕ್ಕಿ ಕೊಡೋಕೆ? ಜನತೆಗೆ ಮಾತು ಕೊಟ್ಟಿದ್ದು ನೀವು 10 ಕೆಜಿ ಕೊಡ್ತೀರಿ ಅಂತ. ಅದಕ್ಕೆ ಪರ್ಯಾಯ ವ್ಯವಸ್ಥೆ ಖರ್ಚು ನೀವು ರೆಡಿ ಮಾಡಿಕೊಳ್ಳಬೇಕು. ಈ ನಾಟಕ ಎಷ್ಟು ದಿವಸ ಆಡ್ತೀರಾ? ಅಂತ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಕನ್ನಡ ನಾಡಿನ ಜನತೆಗೆ ಹೇಳ್ತೀನಿ, ಜನ ತೀರ್ಮಾನ ತೆಗೆದುಕೊಳ್ಳುವಾಗ ನಿಮ್ಮ ಬದುಕು ಏನು ಅಂತ ನೋಡಿ ತೀರ್ಮಾನ ಮಾಡಿ. ನಿಮ್ಮ ಬದುಕು ಕಟ್ಟಿಕೊಳ್ಳಲು ಒಳ್ಳೆಯ ತೀರ್ಮಾನ ಮಾಡದೇ ಹೋದರೆ ಮುಂದೆ ಇನ್ನು ಕೆಟ್ಟ ದಿನಗಳನ್ನು ನೋಡಬೇಕಾಗುತ್ತದೆ. 5 ಕೆಜಿ ಆದ್ರೂ ಕೊಡಲಿ 10 ಕೆಜಿ ಆದ್ರೂ ಕೊಡಲಿ. ನಾನು ಬಿಜೆಪಿ ಅವರ ತರಹ 15 ಕೆಜಿ ಕೊಡಿ ಅಂತ ಡಿಮಾಂಡ್ ಮಾಡೊಲ್ಲ. 10 ಕೆಜಿನೇ ಕೊಡಿ. 5 ಕೆಜಿ ಅಕ್ಕಿ ಕೊಡೋ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಕೇಂದ್ರ ಸರ್ಕಾರದ್ದು ಅಲ್ಲ. ಕೇಂದ್ರ ಸರ್ಕಾರದ ಮೇಲೆ ಯಾಕೆ ಪ್ರತಿಭಟನೆ ಮಾಡ್ತೀರಾ? ಪ್ರತಿಭಟನೆ ಮಾಡಲು ನಿಮಗೆ ನೈತಿಕತೆ ಇದೆಯಾ? ಕೇಂದ್ರ ಸರ್ಕಾರ ಯಾಕೆ ಅಕ್ಕಿ ನಿಮಗೆ ಕೊಡಬೇಕು? ಎಂದು ಪ್ರಶ್ನೆ ಮಾಡಿದರು.

    ಕೇಂದ್ರದ ಬಳಿ ನೀವು ಈ ತೀರ್ಮಾನ ಮಾಡಿದ ಅರ್ಜಿ ಹಾಕಿಕೊಂಡಿದ್ರಾ? ಈ ಘೋಷಣೆ ಮಾಡಿದಾಗ ಕೇಂದ್ರ ಸರ್ಕಾರದ ಪರ್ಮಿಷನ್ ತೆಗೆದುಕೊಂಡಿದ್ರಾ? ಯಾವನೋ ಒಬ್ಬ ಬಂದ ಎಲೆಕ್ಷನ್ ತಂತ್ರಗಾರಿಕೆ ಮಾಡೋನು. ಅವನು ಹೇಳಿದ್ದನ್ನೆಲ್ಲ ನನಗೂ ಫ್ರೀ, ನಿನಗೂ ಫ್ರೀ.. ಸಿಎಂ ನನ್ ಹೆಂಡ್ತಿಗೂ ಫ್ರಿ, ಸಚಿವರ ಹೆಂಡ್ತಿಗೂ ಫ್ರೀ ಅಂದ್ರಿ. ನಿಮ್ಮ ಡಿಸಿಎಂ ಏನ್ ಹೇಳ್ತಾರೆ? ಎಲ್ಲರಿಗೂ ಫ್ರೀ ಅಂದ್ರು. ಈಗ ಏನ್ ಆಗ್ತಿದೆ? ಇದೇನು ಹುಡುಗಾಟಿಕೆನಾ? ಈ ರಾಜ್ಯವನ್ನು ಈ ರೀತಿ ಮಾಡಿಕೊಂಡು ಹೊರಟಿರೋದು. ನೋಡೋಣ ಇವರು ಏನೇನು ಮಾಡ್ತಾರೆ ಅಂತ ಕಾಯೋಣ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದು ಸತ್ಯ, ಈಗ ಮಾತಾಡಿದರೆ ಬೆಂಕಿ ಹಚ್ಚಿದಂತೆ: ಸಿ.ಪಿ ಯೋಗೇಶ್ವರ್

  • ಇದೊಂದು ಸುಳ್ಳ, ಮಳ್ಳ ಸರ್ಕಾರ – ತಾಕತ್ತಿದ್ದರೆ ಅಕ್ಕಿ ಕೊಡಿ; ಬೊಮ್ಮಾಯಿ ಕಿಡಿ

    ಇದೊಂದು ಸುಳ್ಳ, ಮಳ್ಳ ಸರ್ಕಾರ – ತಾಕತ್ತಿದ್ದರೆ ಅಕ್ಕಿ ಕೊಡಿ; ಬೊಮ್ಮಾಯಿ ಕಿಡಿ

    ಬೆಂಗಳೂರು: ಕಾಂಗ್ರೆಸ್‌ನವರದ್ದು (Congress) ಸುಳ್ಳ, ಮಳ್ಳ ಸರ್ಕಾರ, ಸುಳ್ಳು ಹೇಳೋದು, ಮಳ್ಳನ ಹಾಗೆ ಮೋಸ ಮಾಡೋ ಸರ್ಕಾರ. ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಎಲ್ಲಿಂದಾದ್ರೂ ಖರೀದಿಸಿ ಅಕ್ಕಿ ಕೊಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಒತ್ತಾಯಿಸಿದ್ದಾರೆ.

    ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೊಂದು ಸುಳ್ಳ-ಮಳ್ಳ ಸರ್ಕಾರ. ಸುಳ್ಳು ಹೇಳೋದು, ಮಳ್ಳನ ಹಾಗೆ ಮೋಸ ಮಾಡೋ ಸರ್ಕಾರ. 10 ಕೆಜಿ ಅಕ್ಕಿ ಕೊಡ್ತೀವಿ ಅಂದ್ರು, ಈಗಾಗಲೇ ಕೇಂದ್ರ ಬಡವರಿಗೆ 5 ಕೆಜಿ ಅಕ್ಕಿ ಉಚಿತವಾಗಿ ಕೊಡ್ತಿದೆ. ಈಗ ಅಕ್ಕಿ ಬರ್ತಿದ್ರೆ ಅದು ಕೇಂದ್ರ ಸರ್ಕಾರ ಕೊಡುತ್ತಿರೋ ಅಕ್ಕಿ ಎಂದು ಹೇಳಿದ್ದಾರೆ.

    ನುಡಿದಂತೆ ನಡೆದುಕೊಳ್ಳಿ:
    ಬಡವರಿಗೆ ಆಪತ್ತಿನಲ್ಲಿ ಮಿತ್ರನಾಗಿ ಬಂದವರು ಮೋದಿ (Narendra Modi). ಕಾಂಗ್ರೆಸ್‌ನವರು ಸುಳ್ಳುಕೋರರು, ಮೊದಲ ಸಂಪುಟ ಸಭೆಯಲ್ಲೇ ಅಕ್ಕಿ ಇಲ್ಲ ಅಂತಾ ಕಾಂಗ್ರೆಸ್‌ನವರಿಗೆ ಗೊತ್ತಿತ್ತು. ಅಕ್ಕಿ ಇಲ್ಲ ಅಂದ್ಮೇಲೆ ಮುಕ್ತ ಮಾರುಕಟ್ಟೆಯಿಂದ ಕೊಂಡುಕೊಳ್ಳಬೇಕಿತ್ತು. ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಅಕ್ಕಿ ಕೊಡಿ. ಎಲ್ಲಿಂದಾದ್ರೂ ಖರೀದಿಸಿ ತಂದುಕೊಡಿ, ನುಡಿದಂತೆ ನಡೆದುಕೊಳ್ಳಿ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದ ಪ್ರಗತಿ ಹಳ್ಳ ಹಿಡಿಸಿದ್ದಾರೆ:
    ಕಾಂಗ್ರೆಸ್‌ನವರು ಬಡವರಿಗೆ ಮೋಸ ಮಾಡ್ತಿದಾರೆ. ಕರೆಂಟ್ ಶಾಕ್ ಕೊಡ್ತಿದಾರೆ, ಶಾಲಾ ಮಕ್ಕಳಿಗೆ ಬಸ್‌ಗಳೇ ಸಿಗುತ್ತಿಲ್ಲ. ಕೈಗಾರಿಕೆಗಳು ಬಂದ್ ಆಗ್ತಿವೆ, ಕುಡಿಯುವ ನೀರಿಗೆ ಹಾಹಾಕಾರ ಶುರುವಾಗ್ತಿದೆ. ಕೇವಲ ಒಂದೂವರೆ ತಿಂಗಳಲ್ಲಿ ರಾಜ್ಯದ ಪ್ರಗತಿಯ ಹಾದಿಯನ್ನ ಹಳ್ಳ ಹಿಡಿಸಿದ್ದಾರೆ. ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿದ್ದಾರೆ. ಸಚಿವರು ಕಮೀಷನ್ ಫಿಕ್ಸ್ ಮಾಡ್ಕೊಳ್ತಿದ್ದಾರೆ. ವರ್ಗಾವಣೆ ದಂಧೆಯೂ ಶುರುವಾಗಿದೆ. ಇದೊಂದು ಜನವಿರೋಧಿ ಸರ್ಕಾರ ಎಂದು ಕಿಡಿ ಕಾರಿದ್ದಾರೆ.

    ಪೊಲೀಸ್ ರಾಜ್ಯಕ್ಕೆ ನಾವು ಹೆದರಲ್ಲ:
    ನಮ್ಮ ಪ್ರತಿಭಟನೆಗೆ ಅವಕಾಶ ಕೊಡಲಿಲ್ಲ. ಆಗಲೇ ಪೊಲೀಸ್ ರಾಜ್ಯ ಶುರುವಾಗಿದೆ. ಪ್ರಜಾಪ್ರಭುತ್ವ ವಿರೋಧಿ, ದಮನಕಾರಿ ನೀತಿ ಅನುಸರಿಸ್ತಿದ್ದಾರೆ. ನಾವು ನಿಮ್ಮ ಪೊಲೀಸ್ ರಾಜ್ಯಕ್ಕೆ ಹೆದರಲ್ಲ, ಎಷ್ಟು ದಿನ ಪೊಲೀಸ್ ರಾಜ್ಯ ನಡೆಸ್ತೀರಿ ಅಂತ ನೋಡ್ತೀವಿ.. ನಿಮ್ಮ ಲಾಟಿಯ ಶಕ್ತಿ ಹೆಚ್ಚೋ ನಮ್ಮ ರಟ್ಟೆಯ ಶಕ್ತಿ ಹೆಚ್ಚೋ ನೋಡೋಣ ಎಂದು ಸವಾಲ್ ಹಾಕಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೊಳಗಾದ ನಾಲ್ವರ ಕುಟುಂಬಕ್ಕೆ ಪರಿಹಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬಿಜೆಪಿ ಎಲ್ಲರಿಗೂ ಪರಿಹಾರ ಕೊಟ್ಟಿಲ್ಲವೆಂಬ ಸಿದ್ದರಾಮಯ್ಯ ಆರೋಪ ಸುಳ್ಳು. ಪರಿಹಾರ ಕೊಡುವಾಗ ಕಾನೂನು ಪ್ರಕಾರ ಕೊಡಬೇಕಾಗುತ್ತದೆ. ಎಲ್ಲೆಲ್ಲಿ ಕೋಮು ಗಲಭೆ ಆಗಿತ್ತೋ ಅಲ್ಲಿ ಕೊಟ್ಟಿದ್ದೇವೆ. ವೈಯಕ್ತಿಕ ಕಾರಣದಿಂದ ಹತ್ಯೆ ಆಗಿರುವುದಕ್ಕೆ ನಾವು ಪರಿಹಾರ ಕೊಟ್ಟಿಲ್ಲ. ತನಿಖೆಯ ಆಧಾರದ ಮೇಲೆ ಪರಿಹಾರ ನಿರ್ಧಾರ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

    ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

    ಬೆಂಗಳೂರು: ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್ (NCCF), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (NAFED) ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ (Rice) ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ (FCI) 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

    ವಾರ್ಷಿಕ 10,092 ಕೋಟಿ ರೂ.:
    ಅನ್ನಭಾಗ್ಯ (Anna Bhagya Scheme) ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ? ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

    ಪಂಜಾಬ್ ಸರ್ಕಾರದೊಂದಿಗೆ ಚರ್ಚೆ:
    ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ಧವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್‌ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ – ವಾರಕ್ಕೆ ಮುಂಚೆ ಬುಕ್ಕಿಂಗ್ ಕಡ್ಡಾಯ ಸಾಧ್ಯತೆ

    ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ:
    ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.

    ಕೇಂದ್ರ ಸಹಕರಿಸಬೇಕು:
    ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಅವರು ಸಹಕರಿಸಬೇಕು ಎಂದು ಮನವಿ ಮಾಡಿದರು.

    ಕರ್ನಾಟಕಕ್ಕೆ ನೀರು ಬಿಡಬಾರದೆಂದು ಮಹಾರಾಷ್ಟ್ರದ ರೈತರು ಬ್ಯಾರೇಜ್ ಬಂದ್ ಮಾಡಿದ್ದು, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸುದ್ದಿಗಾರರು ಮುಖ್ಯಮಂತ್ರಿಗಳು ಗಮನಕ್ಕೆ ತಂದಾಗ, ಅಲ್ಲಿನ ರೈತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದರು.

    ನಮ್ಮಲ್ಲಿ ಗೊಂದಲವಿಲ್ಲ:
    ಸರ್ಕಾರ 5 ವರ್ಷಗಳ ಅವಧಿ ಮುಗಿಸುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳು ನಮ್ಮಲ್ಲಿಲ್ಲ ಎಂದು ಸ್ಪಷ್ಟ ಪಡಿಸಿದರು.

    ಜಿಎಸ್‌ಟಿ ಸಮಿತಿಗೆ ಅರ್ಹರು:
    ಜಿಎಸ್‌ಟಿ ಸಮಿತಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಬಹುದಿತ್ತು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಕೃಷ್ಣಬೈರೇಗೌಡರನ್ನು ಕಳಿಸಲು ಅವಕಾಶವಿದೆ. ಅದಕ್ಕೆ ಅವರು ಅರ್ಹರು ಕೂಡ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಕೈ ಜೋಡಿಸಲು ಹಿಂದೇಟು – ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿ ಅನುಮಾನ

  • ಮೋದಿ ಮುಂದೆ ಮಾತಾಡೋ ಧಮ್ ಇದ್ದಿದ್ದು ಬಿಎಸ್‌ವೈಗೆ ಮಾತ್ರ – ರಾಮಲಿಂಗಾ ರೆಡ್ಡಿ

    ಮೋದಿ ಮುಂದೆ ಮಾತಾಡೋ ಧಮ್ ಇದ್ದಿದ್ದು ಬಿಎಸ್‌ವೈಗೆ ಮಾತ್ರ – ರಾಮಲಿಂಗಾ ರೆಡ್ಡಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮುಂದೆ ನಿಂತು ಮಾತನಾಡುವ ಧಮ್, ತಾಕತ್ತು ಇದ್ದಿದ್ದು ಯಡಿಯೂರಪ್ಪ (BS Yediyurappa) ಅವರಿಗೆ ಮಾತ್ರ. ಉಳಿದವರೆಲ್ಲಾ ಶೂನ್ಯ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಕುಟುಕಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ (BJP Leaders) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಯಾರಾದ್ರೂ ಕರ್ನಾಟಕದ ಬಗ್ಗೆ ಮಾತಾಡ್ತಾರಾ? 25 ಜನ ಸಂಸದರಿಗೆ ಮೋದಿ ಎದುರಿಗೆ ನಿಂತು ಮಾತನಾಡುವ ಧೈರ್ಯವಿಲ್ಲ. ಆ ಧೈರ್ಯ ಯಡಿಯೂರಪ್ಪ ಅವರಿಗೆ ಮಾತ್ರ ಇತ್ತು. ಈಗ ದೆಹಲಿಗೆ ಹೋಗುವ ಎಂಪಿಗಳು ಸುಮ್ಮನೆ ಹೋಗ್ತಾರೆ. ತಿರುಪತಿಗೆ ಹೋಗಿ ವೆಂಕಟರಮಣಸ್ವಾಮಿಗೆ ನಮಸ್ಕಾರ ಹಾಕುವ ರೀತಿ, ದೆಹಲಿಗೆ ಹೋಗಿ ಮೋದಿಗೆ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ ಎಂದು ಕಿಡಿ ಕಾರಿದ್ದಾರೆ.

    ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಚಿವರು, ಕಾಂಗ್ರೆಸ್ ಬಹಳ ಸ್ಪಷ್ಟವಾಗಿ 10 ಕೆಜಿ ಕೊಡ್ತೀವಿ ಅಂತಾ ಹೇಳಿದೆ, ಏನೇ ಆದ್ರೂ ಕೊಟ್ಟೆ ಕೊಡ್ತೀವಿ. ಬಿಜೆಪಿ ಅಧಿಕಾರಕ್ಕೆ ಬಂದಾಗ 4 ಕೆ.ಜಿ ಇಳಿಸಿದ್ದರು, ಅವರಿಗೆ ಬಿಪಿಎಲ್ ಕಾರ್ಡ್ದಾರರ ಮೇಲೆ ಅನುಕಂಪ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಶೀಘ್ರದಲ್ಲೇ ಸರ್ಕಾರಿ ಉದ್ಯೋಗ

    ಕೇಂದ್ರ ಸರ್ಕಾರ ಕೇಳಿ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ರಾ ಎಂಬ ಬಿಜೆಪಿ ಹೇಳಿಕೆ ತಿರುಗೇಟು ನೀಡಿದ ಸಚಿವರು, ಕೇಂದ್ರ ಸರ್ಕಾರ ಯಾರದ್ದು ಬಿಜೆಪಿ ಅವರೇ? ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಆಡಳಿತ ಮಾಡ್ತಿದೆ. ಸಮಸ್ತ ಜನರ ಸರ್ಕಾರ ಅದು. ಅವರು ಕೊಡದಿದ್ರೆ ಮಾರುಕಟ್ಟೆಯಿಂದ ಅಕ್ಕಿ ತಂದು ಕೊಡ್ತೀವಿ. ಮಾತಿಗೆ ತಪ್ಪೋಕೆ ನಾವೇನು ಬಿಜೆಪಿಯವರಾ? ನಮ್ಮಲ್ಲಿ ಇರುವ ದೊಡ್ಡ-ದೊಡ್ಡ ನಾಯಕರು ಕೇಂದ್ರ ಸರ್ಕಾರಕ್ಕೆ ಹೇಳಬೇಕು. ಅಕ್ಕಿ ಕೊಡಲಿಲ್ಲ ಪ್ರತಿಭಟನೆ ಮಾಡ್ತೀವಿ ಅಂತಾರೆ, ನಾಚಿಕೆ ಆಗಬೇಕು ಬಿಜೆಪಿ ನಾಯಕರಿಗೆ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮತ್ತೆ ಬುಲ್ಡೋಜರ್ ಸದ್ದು – ರಾಜಕಾಲುವೆ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ

  • ಖಾಸಗಿಯಿಂದ ತಂದ್ರೆ ದುಬಾರಿ – ಅನ್ನಭಾಗ್ಯ ಅಕ್ಕಿ ಹೊಂದಿಸಲು ಸೀಕ್ರೆಟ್ ಪ್ಲ್ಯಾನ್ ಇದೆಯಾ..?

    ಖಾಸಗಿಯಿಂದ ತಂದ್ರೆ ದುಬಾರಿ – ಅನ್ನಭಾಗ್ಯ ಅಕ್ಕಿ ಹೊಂದಿಸಲು ಸೀಕ್ರೆಟ್ ಪ್ಲ್ಯಾನ್ ಇದೆಯಾ..?

    ಬೆಂಗಳೂರು: ಸದ್ಯ ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಯೋಜನೆ (Anna Bhagya Scheme) ದುಬಾರಿಯಾಗಿದೆ. FCI ಅಕ್ಕಿ ಕೊಡಲು ಒಪ್ಪದ ಕಾರಣ ಅನ್ಯರಾಜ್ಯಗಳ ಮೊರೆ ಹೋಗಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಹೇಗಾದರೂ ಅಕ್ಕಿ ತರಿಸಿಕೊಳ್ಳುವ ಪ್ರಯತ್ನ ಮಾಡುತ್ತಲೇ ಇದೆ.

    ಪಕ್ಕದ ತೆಲಂಗಾಣದಿಂದಲೂ ರಾಜ್ಯದ ಅಕ್ಕಿ ಬೇಡಿಕೆಗೆ ಪೂರಕ ಸ್ಪಂದನೆ ಸಿಕ್ಕಿಲ್ಲ. ಛತ್ತಿಸ್‌ಗಢದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆಯಷ್ಟೆ ಸಿಕ್ಕಿದೆ. ಆದರೆ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಿದೆ. ಇತ್ತ, ಆಂಧ್ರಪ್ರದೇಶ ಅಕ್ಕಿ ನೀಡುವ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದೆ. ಅಕ್ಕಿ ಸಿಗುವ ಭರವಸೆ ನೀಡಿದ ರಾಜ್ಯಗಳಲ್ಲೇ ನಿಗದಿತ ಪ್ರಮಾಣದ ಅಕ್ಕಿ ಸಿಗುವುದು ಡೌಟ್ ಆಗಿದೆ.

    ಎಲ್ಲಾ ಗೊಂದಲಗಳ ನಡುವೆ ಸೋಮವಾರ ಅಕ್ಕಿ ಪಡೆಯಲು ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ. ಯಾವ ರಾಜ್ಯಗಳು ಕರ್ನಾಟಕದ ಅಕ್ಕಿ ಸಮಸ್ಯೆಗೆ ಸ್ಪಂದಿಸಬಹುದು..? ಎಂಬುದು ಸದ್ಯದ ಕುತೂಹಲವಾಗಿದೆ. ಇದನ್ನೂ ಓದಿ: ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ 2 ರಾಜ್ಯಗಳು – ಸರ್ಕಾರಕ್ಕೆ ಮತ್ತಷ್ಟು ತಲೆನೋವು

    ರಾಜ್ಯ ಸರ್ಕಾರ ಪ್ರತಿ ಕೆಜಿ ಅಕ್ಕಿಯನ್ನು 36.60 ರೂ.ಗೆ ಪಡೆದು ನಾಡಿನ ಜನರಿಗೆ ನೀಡಲು ಯೋಜನೆ ರೂಪಿಸಿತ್ತು. ಆದ್ರೆ ಕೇಂದ್ರ ಸರ್ಕಾರ ಅಕ್ಕಿ ವಿತರಣೆಗೆ ಬ್ರೇಕ್ ಹಾಕಿದ ನಂತರ ಸರ್ಕಾರಕ್ಕೆ ಈಗ ಖಾಸಗಿ ಮಾರ್ಗವೊಂದೇ ಹಾದಿ ಎಂಬಂತಾಗಿದೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸಲು ಸರ್ಕಾರಕ್ಕೆ ವಾರ್ಷಿಕ 10 ಸಾವಿರದ 92 ಕೋಟಿ ವೆಚ್ಚ ತಗುಲಲಿದೆ. ಖಾಸಗಿಯಾಗಿ ಕೊಳ್ಳುವುದಾದರೆ ಸರ್ಕಾರದ ಬೊಕ್ಕಸಕ್ಕೆ ಮತ್ತಷ್ಟು ಪೆಟ್ಟು ಬೀಳಲಿದೆ. ಖಾಸಗಿ ಅಕ್ಕಿ ಕೊಳ್ಳಬೇಕಾದರೆ 2 ರಿಂದ 3 ಸಾವಿರ ಕೋಟಿ ಹೆಚ್ಚುವರಿ ಬಾರ ವಾರ್ಷಿಕವಾಗಿ ಸರ್ಕಾರ ಮೇಲೆ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

    ಕರ್ನಾಟಕದಲ್ಲಿ ಸೋನಾ ಮಸೂರಿ ಅಕ್ಕಿ ಇದ್ದರೂ ಅದರ ವೆಚ್ಚ ಕೆಜಿಗೆ 55 ರೂ ಆಗಲಿದೆ. ಅದನ್ನ ಕೊಂಡು ಅನ್ನ ಭಾಗ್ಯದ ಸ್ಕೀಮ್ ನಲ್ಲಿ ಹಂಚುವುದು ಸರ್ಕಾರದ ಪಾಲಿಗೆ ದುಬಾರಿಯಾಗಲಿದೆ. ಒಟ್ಟಿನಲ್ಲಿ ಸರ್ಕಾರ ಈ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ:ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು