Tag: anna bhagya

  • ಅಧಿವೇಶನದಲ್ಲಿ ಸಿದ್ದರಾಮಯ್ಯ ಪರ ಜಿಟಿಡಿ ಬ್ಯಾಟಿಂಗ್ – ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಶಾಸಕ

    ಅಧಿವೇಶನದಲ್ಲಿ ಸಿದ್ದರಾಮಯ್ಯ ಪರ ಜಿಟಿಡಿ ಬ್ಯಾಟಿಂಗ್ – ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಶಾಸಕ

    – ಕೇಂದ್ರ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ

    ಬೆಂಗಳೂರು: ಕೆಲ ದಿನಗಳ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಪರಸ್ಪರ ವಾಗ್ಯುದ್ಧವನ್ನೇ ನಡೆಸಿದ್ದರು. ಆದರೆ ಜೆಡಿಎಸ್ (JDS) ಕೆಲ ನಾಯಕರು, ಕಾಂಗ್ರೆಸ್ (Congress) ಹಾಗೂ ಸಿದ್ದರಾಮಯ್ಯ ವಿಚಾರದಲ್ಲಿ ಸಾಫ್ಟ್‌ಕಾರ್ನರ್‌ ಹೊಂದಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ (G.T.Devegowda) ಅವರು ಸದನದಲ್ಲಿ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿಗಳ ಪರವಾಗಿ ಬ್ಯಾಟಿಂಗ್ ಮಾಡಿದರು.

    ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ಖಂಡನೀಯ. ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ, ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದಿದೆ. ತಿಂಗಳಿಗೆ ಒಂದೊಂದು ಮಾಡಲಿ. ಎಲ್ಲಾ ಕಾರ್ಯಕ್ರಮ ಜಾರಿಗೆ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ? – ಸದನದಲ್ಲಿ ಸ್ವಾರಸ್ಯಕರ ಚರ್ಚೆ

    ಸಿಎಂ ಸಿದ್ದರಾಮಯ್ಯ ಪರವಾಗಿಯೂ ಜಿ.ಟಿ.ದೇವೇಗೌಡರು ಮಾತನಾಡಿದ್ದಾರೆ. ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡುವಾಗ ಜಿಟಿಡಿ, ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ. ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೊಲ, ಗದ್ದೆ ನನಗೆ ಗೊತ್ತು. ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಹೇಳಿದರು.

    ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಕೊಡಲ್ಲ ಅನ್ನೋದು ಸರಿಯಲ್ಲ. ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ. ಹಾಗಾಗಿ ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯಕ್ಕೆ ಇಂದು ಚಾಲನೆ- ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು

    ಅನ್ನಭಾಗ್ಯಕ್ಕೆ ಇಂದು ಚಾಲನೆ- ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ (Anna Bhagya) ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ (BPL Card) ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಪ್ಲ್ಯಾನ್ ಅನ್ನು ಆಹಾರ ಇಲಾಖೆ ಮಾಡಿಕೊಂಡಿದೆ.

    ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ  5 ಕೆಜಿ ಅಕ್ಕಿಗೆ ಹಣ ಹಾಕಲು ಸರ್ಕಾರ ನಿರ್ಧಾರ ಮಾಡಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.  ಇದನ್ನೂ ಓದಿ: 2 ತಿಂಗಳು ನಾವು ಬಾರ್‌ಗೆ ಹೋಗದಿದ್ರೆ ಸರ್ಕಾರವೇ ಬಿದ್ದು ಹೋಗುತ್ತೆ – ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ

    ಸೋಮವಾರ ಕೋಲಾರ ಮತ್ತು ಮೈಸೂರು ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ಅಮೌಂಟ್ ಹಾಕಿ ಜಾರಿ ಮಾಡಲಿದ್ದಾರೆ. ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದೆ.

    ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‍ದಾರರಿದ್ದಾರೆ. 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಆಗಿದ್ದು ಬ್ಯಾಂಕ್ ಅಕೌಂಟ್ ಲಿಂಕ್ ಕೂಡ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‍ಗಳು ಆಧಾರ್ ಲಿಂಕ್ ಆಗಬೇಕಿದೆ. ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಅಕೌಂಟ್‍ಗೆ ಬೀಳಲಿದೆ.

     

    ಹಣ ಭಾಗ್ಯ ಹೇಗೆ?
    ನೀವು ಬಿಪಿಎಲ್ ಪಡಿತರ ಕಾರ್ಡ್‍ದಾರರಾಗಿರಬೇಕು. ರೇಷನ್ ಕಾರ್ಡ್‍ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಆಗದೇ ಇದ್ದರೆ ದುಡ್ಡು ಬರುವುದಿಲ್ಲ. ಕಾರ್ಡ್‌ನಲ್ಲಿ ಯಜಮಾನರಾಗಿರುವವರ ಖಾತೆಗೆ ಡಿಬಿಟಿ ಮೂಲಕ ಹಣ. ಅನ್ನಭಾಗ್ಯದ ಯೋಜನೆಗೆ ಯಾವುದೇ ಅರ್ಜಿ ಸಲ್ಲಿಕೆ ಅಗತ್ಯವಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಕಿ ಬದಲು ಹಣ ಕೊಟ್ಟರೆ ಹೋರಾಟ ಮಾಡ್ತೀವಿ – ಸರ್ಕಾರಕ್ಕೆ ಪಡಿತರ ವಿತರಕರ ಸಂಘ ಎಚ್ಚರಿಕೆ

    ಅಕ್ಕಿ ಬದಲು ಹಣ ಕೊಟ್ಟರೆ ಹೋರಾಟ ಮಾಡ್ತೀವಿ – ಸರ್ಕಾರಕ್ಕೆ ಪಡಿತರ ವಿತರಕರ ಸಂಘ ಎಚ್ಚರಿಕೆ

    ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನ (Anna Bhagya Scheme) ಇಂದಿನಿಂದ ಜಾರಿಗೆ ತಂದಿದೆ. ‘ಕೈ’ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಗ್ಯಾರಂಟಿಯಲ್ಲಿ ಪ್ರಮುಖವಾಗಿದ್ದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿಕೊಂಡಿತ್ತು.

    ಕೇಂದ್ರ ಸರ್ಕಾರದಿಂದ ಬರುವ 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರ ಇನ್ನೂ 5 ಕೆಜಿ‌ ಅಕ್ಕಿ ನೀಡುತ್ತೇವೆ ಅಂತ ಹೇಳಿತ್ತು. ‌ಅನೇಕ ಕಾರಣಗಳಿಂದ‌ ಕೇಂದ್ರ ಸರ್ಕಾರಕ್ಕೆ‌ ರಾಜ್ಯ ಸರ್ಕಾರ ಅಕ್ಕಿಗೆ ಹಣ ನೀಡುತ್ತೇವೆ. ಅಕ್ಕಿ ನೀಡಿ ಅಂದ್ರೂ ಅಕ್ಕಿಯನ್ನ ನೀಡಲು ಮುಂದಾಗಿಲ್ಲ. ಇದನ್ನೂ ಓದಿ: ಈಗಿರುವ ಯಾರೂ ಬಿಜೆಪಿ ಕಟ್ಟಿಲ್ಲ: ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ ರೇಣುಕಾಚಾರ್ಯ

    ಬೇರೆ ರಾಜ್ಯಗಳಿಂದಲೂ ಅಕ್ಕಿ ಖರೀದಿಸಲು ಸರ್ಕಾರ ಕಸರತ್ತು ಮಾಡಿತ್ತು. ‌ಅಲ್ಲೂ ಅಕ್ಕಿ ಸಿಗದ ಕಾರಣರಿಂದ‌ ಪಡಿತರ ಚೀಟಿ ಹೊಂದಿದರವರಿಗೆ 5 ಕೆಜಿ ಅಕ್ಕಿಯ ಹಣ ನೀಡಲು ಮುಂದಾಗಿದೆ.

    ಆದರೇ ಪಡಿತರ ವಿತರಕರು ಇದನ್ನ ವಿರೋಧಿಸಿದ್ದಾರೆ. ಇದರಿಂದ ನಮ್ಮ ಕಮಿಷನ್‌ಗೆ ಬ್ರೇಕ್ ಬೀಳಲಿದೆ. ಸರ್ಕಾರ ಹಣವನ್ನ ನೀಡದೇ ಅದರ ಬದಲು ಇತರೆ ದಿನಸಿ ಪದಾರ್ಥಗಳನ್ನ ನೀಡಬೇಕು. ರಾಜ್ಯದಲ್ಲೇ ಬೆಳೆಯುವ ಬೆಳೆಕಾಳು, ಸಕ್ಕರೆ, ಉಪ್ಪು, ಬೆಲ್ಲ, ಹೀಗೆ ಬೇರೆ ಪದಾರ್ಥಗಳನ್ನ ಕೊಡಿ. ಹಣ ನೀಡುವುದರಿಂದ ಸರ್ಕಾರಕ್ಕೂ ಹೊರೆ ಆಗಲಿದೆ ಎಂಬ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡಲು ಪಡಿತರ ವಿತರಕರ ಸಂಘ ನಿರ್ಧರಿಸಿದೆ. ಇದನ್ನೂ ಓದಿ: ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಈ ಸಂಬಂಧ ಇದೇ ಜುಲೈ 4 ಸಭೆ ಮಾಡಲು ಪಡಿತರ ವಿತರಕರ ಸಂಘ ನಿರ್ಧಾರ ಮಾಡಿದೆ. ಸರ್ಕಾರ‌ ಹಣ ನೀಡಲು ಮುಂದಾದರೆ ನಾವೂ ಹೋರಾಟ ಮಾಡಬೇಕಾಗುತ್ತದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ಸಹ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ

    ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಅಂತೆಯೇ ಇಂದಿನಿಂದ (ಜು.1) ಅನ್ನಭಾಗ್ಯ (Anna Bhagya) ಮತ್ತು ಗೃಹಜ್ಯೋತಿ (Gruhajyothi) ಯೋಜನೆಗೆ ಚಾಲನೆ ದೊರೆಯಲಿದೆ.

    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ – ಟ್ವೀಟ್‌ನಲ್ಲೇ ಕಾಲೆಳೆದ ಕಾಂಗ್ರೆಸ್‌

    ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂಪಾಯಿ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಅಕೌಂಟ್‌ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

    ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಇಂದಿನಿಂದ ಈ ಯೋಜನೆಯೂ ಆರಂಭವಾಗಲಿದೆ. ಈ ಯೋಜನೆ ಸೌಲಭ್ಯಕ್ಕಾಗಿ ಇಲ್ಲಿವರೆಗೆ ಒಟ್ಟು 86 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ 1.15 ಕೋಟಿಗೂ ಅಧಿಕ ಜನರು ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಯಾಗಿಲ್ಲ. ಇದನ್ನೂ ಓದಿ: ತಡವಾಗಿ ಬಂದ ಬಸ್ ಅಡ್ಡಗಟ್ಟಿ ಡ್ರೈವರ್‌ಗೆ ಕ್ಲಾಸ್‌ ತೆಗೆದುಕೊಂಡ ಮಹಿಳೆಯರು

    ಜುಲೈ ತಿಂಗಳಲ್ಲಿ ಬಳಸಿದ ವಿದ್ಯುತ್ ಆಗಸ್ಟ್ 1 ರಿಂದ ನೀಡುವ ಬಿಲ್‌ಗೆ ಸೇರ್ಪಡೆಯಾಗುವ ರೀತಿಯಲ್ಲಿ ಯೋಜನೆ ಜಾರಿಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಂಕ್ ಖಾತೆ – ಆಧಾರ್ ಲಿಂಕ್ ಆಗದಿದ್ರೆ ಸಿಗಲ್ಲ ಕಾಸು

    ಬ್ಯಾಂಕ್ ಖಾತೆ – ಆಧಾರ್ ಲಿಂಕ್ ಆಗದಿದ್ರೆ ಸಿಗಲ್ಲ ಕಾಸು

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ಬೆಂಗಳೂರು: ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳುತ್ತಿಲ್ಲ. ಬೇರೆ ಆಪ್ಷನ್‌ ನೋಡ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು.

    ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಡಿಕೆಶಿ, ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ. ಫೆಡರಲ್ ಸ್ಟ್ರಕ್ಚರ್‌ನಲ್ಲಿ ಇದ್ದೇವೆ. ಆಪ್ಷನ್ ನೋಡ್ತಿದ್ದೇವೆ. ಅಕ್ಕಿಯನ್ನ ಬೇರೆ ರಾಜ್ಯದಿಂದ ತರುವ ಬಗ್ಗೆ ಮಾತುಕತೆ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!

    ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ. ನಾವು ಕೊಟ್ಟ ಮಾತು ಉಳಿಸಿಕೊಳ್ತೇವೆ. ಸಿಎಂ, ಸಚಿವರು ದೆಹಲಿಗೆ ಹೋಗಿ ಯಾರನ್ನ ಭೇಟಿರಾಗಿದ್ದಾರೆ, ಏನು ಮಾಡಿದ್ದಾರೆ ಗೊತ್ತಿಲ್ಲ. ನಾನು ದೆಹಲಿಗೆ ಹೋಗಿಲ್ಲ. ಹೋಗುವ ಟೈಮ್ ಬರುತ್ತೆ. ಆಗ ಹೋಗ್ತೇನೆ ಎಂದರು.

    ಶೋಭಾ ಕರಂದ್ಲಾಜೆ ಮೆದುಳು ಇರಲಿಲ್ವ ಎಂದು ಮಾತನಾಡಿದ್ದಾರೆ. ಅವರು ಉದ್ಯೋಗ ಸೃಷ್ಟಿ ಮಾಡ್ತೀನಿ, 15 ಲಕ್ಷ ಕೊಡ್ತೀನಿ, ಕಪ್ಪು ಹಣ ತರ್ತೀನಿ ಅಂತ ಏಕೆ ಮಾತಾಡಿದ್ರು? 5 ವರ್ಷದಲ್ಲಿ ಅವರ ಪ್ರಣಾಳಿಕೆ ಪೂರ್ಣ ಮಾಡಲಿಲ್ಲ. ನಾವು ಮಾಡ್ತಿದ್ದೇವೆ. ನಮಗೆ ಬಡವರ ಬಗ್ಗೆ ಕಾಳಜಿ ಇದೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಅಕ್ರಮವಾಗಿ ಸಾಗಿಸ್ತಿದ್ದ 16,200 KG ಅಕ್ಕಿ ವಶಕ್ಕೆ

    ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಗೆ ಜ್ಞಾನ ಇರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ನಮಗೆ ಖಂಡಿತ ಜ್ಞಾನ ಇರಲಿಲ್ಲ. ಕುಮಾರಣ್ಣಗೆ ಜ್ಞಾನ ಇದೆಯಲ್ಲಾ ಸಾಕು. ಪ್ರಧಾನಿ ತಮ್ಮ ಬಳಿ ಅಲ್ಲದಿದ್ರೂ, ವಿದೇಶಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ನೀವೂ ಖುಷಿ ಪಡಿ ಎಂದು ಲೇವಡಿ ಮಾಡಿದ್ದಾರೆ.

  • ವಿದ್ಯುತ್‌ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್‌ ಮಿಲ್‌ ಮಾಲೀಕರ ಎಚ್ಚರಿಕೆ

    ವಿದ್ಯುತ್‌ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್‌ ಮಿಲ್‌ ಮಾಲೀಕರ ಎಚ್ಚರಿಕೆ

    ಬೆಂಗಳೂರು: ಅನ್ನಭಾಗ್ಯ (Anna Bhagya) ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ (Free Ration) ನೀಡಲು ಸರ್ಕಾರ ಹೆಣಗಾಡುತ್ತಿದ್ದರೆ ಇನ್ನೊಂದು ಕಡೆ ಜನ ಸಮಾನ್ಯರಿಗೆ ಅಕ್ಕಿ ದರ ಏರಿಕೆಯ ಆತಂಕ ಶುರುವಾಗಿದೆ. ರಾಜ್ಯದ ರೈಸ್ ಮಿಲ್‍ಗಳಿಗೆ (Rice Mill) ವಿದ್ಯುತ್ ದರ ದುಪ್ಪಟ್ಟು ಬಂದಿದ್ದು, ಇಲ್ಲಿಂದ ರಪ್ತು ಆಗುವ ಅಕ್ಕಿಗೆ ಪ್ರತಿ ಕೆಜಿಗೆ 5-10 ರೂಪಾಯಿ ದರ ಏರಿಕೆ ಮಾಡುವ ಎಚ್ಚರಿಕೆಯನ್ನ ರೈಸ್ ಮಿಲ್ ಅಸೋಸಿಯೇಷನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

    ರೈಸ್ ಮಿಲ್ ಮಾಲೀಕರ ಸಮಸ್ಯೆಗೆ ಅಲಿಸದೇ, ವಿದ್ಯುತ್ ಬಿಲ್ (Electricity Bill) ಕಡಿಮೆ ಮಾಡದೇ ಇದ್ದರೆ ಪ್ರತಿ ಕ್ವಿಂಟಾಲ್ ಅಕ್ಕಿ ಬೆಲೆಯನ್ನು 400-800 ರೂಪಾಯಿಗಳಷ್ಟು ಹೆಚ್ಚಿಸುವುದಾಗಿ ಎಚ್ಚರಿಸಿದ್ದಾರೆ.   ಇದನ್ನೂ ಓದಿ: 2 ಬಲ್ಬ್ ಇರುವ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ – ಕಂಗಲಾದ ವೃದ್ಧೆ

    ರಾಜ್ಯದಲ್ಲಿ ಸುಮಾರು 2 ಸಾವಿರ ರೈಸ್ ಮಿಲ್‍ಗಳಿದ್ದು, ವರ್ಷಕ್ಕೆ 30 ರಿಂದ 40 ಮೆಟ್ರಿಕ್ ಟನ್ ನಷ್ಟು ಅಕ್ಕಿಯನ್ನ ಉತ್ಪಾದನೆ ಮಾಡಲಾಗುತ್ತದೆ. ದುಬಾರಿ ವಿದ್ಯುತ್ ಬಿಲ್‍ನಿಂದ ರೈಸ್ ಮಿಲ್ ಮಾಲೀಕರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಮುಂದಿನ ವಾರದೊಳಗೆ 15 ರೂಪಾಯಿ ತನಕ ದರ ಏರಿಕೆಯಾಗುವ ಆತಂಕವೂ ಶುರುವಾಗಿದೆ. ಇದನ್ನೂ ಓದಿ: ಗೃಹಜ್ಯೋತಿ – ಅರ್ಜಿ ಸಲ್ಲಿಕೆಗೆ 5ನೇ ದಿನವೂ ಸರ್ವರ್‌ ಸಮಸ್ಯೆ

    ಕಳೆದ 15 ದಿನಗಳಿಂದ ಹೋಲ್ ಸೆಲ್ ಅಕ್ಕಿಯ ದರದಲ್ಲಿ ಏರಿಕೆ ಕಂಡಿದ್ದು, ಮುಂದಿನ ವಾರದೊಳಗೆ ಮತ್ತಷ್ಟು ದುಬಾರಿಯಾಗಲಿದೆ. ಸರ್ಕಾರ ಅನ್ನಭಾಗ್ಯ ಯೋಜನೆಗೆ ಸಾಕಷ್ಟು ಅಕ್ಕಿಯನ್ನು ಸಂಗ್ರಹಿಸಲು ಹೆಣಗಾಡುತ್ತಿರುವಾಗ, ಅಕ್ಕಿ ದರ ಏರಿಕೆ ಬಿಸಿಯನ್ನ ಗ್ರಾಹಕರು ಅನುಭವಿಸುವ ಆತಂಕದಲ್ಲಿದ್ದು ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಅನ್ನ ಭಾಗ್ಯ ಫೈಟ್‌ ದೆಹಲಿಗೆ ಶಿಫ್ಟ್‌

    ಅನ್ನ ಭಾಗ್ಯ ಫೈಟ್‌ ದೆಹಲಿಗೆ ಶಿಫ್ಟ್‌

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ಕಿ ಫೈಟ್ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗುವ ಸಾಧ್ಯತೆಗಳಿದೆ.

    ಅನ್ನಭಾಗ್ಯ (Anna Bhagya) ಯೋಜನೆಗೆ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ದೆಹಲಿ ಪ್ರವಾಸ (Delhi) ಹಮ್ಮಿಕೊಂಡಿದ್ದು, ತಮ್ಮ ಪ್ರವಾಸ ವೇಳೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ (Piyush Goyal) ಅವರನ್ನ ಭೇಟಿ ಮಾಡಿ ಅಕ್ಕಿ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ಮೋದಿ

     

    ಹಲವು ರಾಜ್ಯಗಳಲ್ಲಿ ಅಕ್ಕಿಗಾಗಿ ರಾಜ್ಯ ಸರ್ಕಾರ ಪ್ರಯತ್ನಿಸಿದರೂ ದುಬಾರಿ ಬೆಲೆ ತೆರಬೇಕಾದ ಅನಿವಾರ್ಯತೆ ಹಿನ್ನಲೆ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ  ಭೇಟಿಯಾಗುತ್ತಿದ್ದು ಸೌಹಾರ್ದಯುತ ಮಾತುಕತೆ ನಡೆಯಲಿದೆ ಎನ್ನಲಾಗಿದೆ.

    ಸಿದ್ದರಾಮಯ್ಯ ತಮ್ಮ ದೆಹಲಿ ಪ್ರವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರನ್ನು ಭೇಟಿಯಾಗುತ್ತಿದ್ದು ಸಿಎಂ ಆದ ಬಳಿಕ ಸೌಜನ್ಯಯುತ ಭೇಟಿ ಮಾಡುತ್ತಿದ್ದಾರೆ.

  • ತಾರಕಕ್ಕೇರಿದ ಅಕ್ಕಿ ರಾಜಕೀಯ, ಬಿಜೆಪಿ ನಾಯಕರಿಗೆ ಸಾಕ್ಷಿ ಸಮೇತ ಸಿದ್ದು ತಿರುಗೇಟು

    ತಾರಕಕ್ಕೇರಿದ ಅಕ್ಕಿ ರಾಜಕೀಯ, ಬಿಜೆಪಿ ನಾಯಕರಿಗೆ ಸಾಕ್ಷಿ ಸಮೇತ ಸಿದ್ದು ತಿರುಗೇಟು

    ಬೆಂಗಳೂರು: ರಾಜ್ಯದಲ್ಲಿ 1 ಅನ್ನಭಾಗ್ಯ ಯೋಜನೆಯ ಚರ್ಚೆ ತಾರಕಕ್ಕೇರಿದ್ದು, ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾಕ್ಷಿ ಸಮೇತ ತಿರುಗೇಟು ಕೊಟ್ಟಿದ್ದಾರೆ.

    ಎಫ್‍ಸಿಐ (FCI) ಪತ್ರ ಹಾಕಿ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ. ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಬಿಜೆಪಿಗರು ಆಗ್ರಹಿಸಬೇಕು. ಅದನ್ನು ಬಿಟ್ಟು ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿವಕುಮಾರ್ ಅಣ್ಣ.. ಭರವಸೆ ಕೊಟ್ಟಿರೋದು ನೀವು, ಮೋದಿ ಅಲ್ಲ: ಅಶೋಕ್ ಕಿಡಿ

    ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿದ್ದಾರೆ ಎಂದು ಟ್ವೀಟ್‍ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

    ಜುಲೈ ತಿಂಗಳಿಂದ ರಾಜ್ಯ ಸರ್ಕಾರ ಅನ್ನಭಾಗ್ಯ (Anna Bhagya) ಯೋಜನೆಯ ಅಕ್ಕಿಯನ್ನು ಕೊಡುಲು ನಿರ್ಧರಿಸಿತ್ತು. ಈ ಬಗ್ಗೆ ಎಫ್‍ಸಿಐನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಈಗ ಎಫ್‍ಸಿಐ ಅಕ್ಕಿಯನ್ನು ನೀಡಲು ನಿರಾಕರಿಸಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಭಾರತೀಯ ಆಹಾರ ನಿಗಮ (FCI) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕರಾರು ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು. ಇದನ್ನೂ ಓದಿ: ಬೃಹತ್‌ ಗಾತ್ರದ ಕಡಿದ ಮರ ತಬ್ಬಿಕೊಂಡು ಸೆಕ್ಸ್‌ – ವಿಕೃತ ಕಾಮಿ ಅರೆಸ್ಟ್‌

  • ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

    ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

    ಬೆಂಗಳೂರು: ಬಿಜೆಪಿಗೆ (BJP) ಕರ್ನಾಟಕದ ಜನರ ಮೇಲೆ ಕಾಳಜಿ ಇದ್ದರೆ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದನ್ನ ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸವಾಲು ಹಾಕಿದರು.

    ಈ ಕುರಿತಂತೆ ಬೆಂಗಳೂರಿನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗುಂಡೂರಾವ್, ಕೇಂದ್ರ ಸರ್ಕಾರದ ಆಹಾರ ನಿಗಮ ಅಕ್ಕಿ ಮಾರಾಟ ಸ್ಥಗಿತಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.‌ ಇದನ್ನೂ ಓದಿ: ಜು.1 ರಿಂದ 10 ಕೆಜಿ ಉಚಿತ ಅಕ್ಕಿ ಕೊಡದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಬೊಮ್ಮಾಯಿ ಗುಡುಗು

    ಸಿ.ಟಿ ರವಿಯವರು (C.T.Ravi) ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋದನ್ನ ಬಿಟ್ಟು ಅವರ ಕೇಂದ್ರ ನಾಯಕರ ಜೊತೆ ಮಾತಾಡುವ ಧೈರ್ಯ ತೋರಿಸಲಿ. 10 ಕೆಜಿ ಅಕ್ಕಿ ಬಡವರಿಗೆ ಕೊಡಲು ಕಾಂಗ್ರೆಸ್ ಬದ್ಧವಾಗಿದೆ. ಆದರೆ ನಮಗೆ ಅಕ್ಕಿ ಸಿಕ್ತಿಲ್ಲ ಅಂತ ಬಿಜೆಪಿ ನಾಯಕರು ಖುಷಿಯಾಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಪ್ರಶ್ನೆಯಲ್ಲ. ಬಡವರ ಹಸಿವನ್ನ ನೀಗಿಸುವ ಪ್ರಶ್ನೆ. ಬಿಜೆಪಿಗೆ ಮತ ಹಾಕಿದ 35% ರಷ್ಟು ಜನರಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೂ ನಾವು ಅಕ್ಕಿ ಕೊಡ್ತೇವೆ. ಇದನ್ನ ಅರಿತುಕೊಂಡು ಸಿ.ಟಿ ರವಿ ಮಾತಾಡಬೇಕು ಎಂದು ತಿರುಗೇಟು ನೀಡಿದರು.

    ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ ದೊರೆಯುತ್ತಿರುವುದು ಮೋದಿ ಅವರಿಂದಲ್ಲ. ಯುಪಿಎ – 2 ಸರ್ಕಾರವಿದ್ದಾಗ ಆಹಾರ ಭದ್ರತೆ ಬಿಲ್ ತಂದಿದ್ದರಿಂದ ಇಂದು ಬಡವರಿಗೆ ಅಕ್ಕಿ ದೊರೆಯುತ್ತಿದೆ. ಸಿ.ಟಿ ರವಿ ಅವರಿಗೆ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ ಕೇಂದ್ರ ನಾಯಕರ ಜೊತೆ ಮಾತಾಡಲಿ. ಕರ್ನಾಟಕದ 25 ಸಂಸದರು ಏನು ಮಾಡ್ತಿದ್ದಾರೆ. ಮೋದಿ ಅವರು ಒಪ್ಪುತ್ತಾರೋ ಇಲ್ವೋ. ಆದರೆ ರಾಜ್ಯದ ಪರ ಒಂದು ಪ್ರಯತ್ನವನ್ನಾದ್ರೂ ಬಿಜೆಪಿ ನಾಯಕರು ಮಾಡಬೇಕಲ್ವಾ ಎಂದು ಕುಟುಕಿದರು. ಇದನ್ನೂ ಓದಿ: ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

    ಅಗತ್ಯ ಪ್ರಮಾಣದ ಅಕ್ಕಿ ಖರೀದಿಗೆ ಕಾಂಗ್ರೆಸ್ ಸರ್ಕಾರ ತನ್ನ ಶಕ್ತ ಮೀರಿ ಪ್ರಯತ್ನಿಸಲಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸುವುದು ಅಷ್ಟು ಸುಲಭವಲ್ಲ. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ವಿಸ್ತೃವಾಗಿ ಚರ್ಚೆ ನಡೆದಿದೆ. ಬಡವರ ಪರವಾಗಿ ನ್ಯಾಯ ದೊರಕಿಸಲು ನಮ್ಮ ಪ್ರಯತ್ನ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಚರ್ಚೆ ನಡೆದಿದೆ. ಛತ್ತೀಸಗಢ, ತೆಲಂಗಾಣ, ಆಂಧ್ರಪ್ರದೇಶದ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.