ನವದೆಹಲಿ: ಕೇಜ್ರಿವಾಲ್ (Arvind Kejriwal) ಮದ್ಯದ ಕಡೆ ಹೆಚ್ಚು ಗಮನಹರಿಸಿದ್ದರು. ಅಲ್ಲದೆ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (Anna Hazare) ಹೇಳಿದ್ದಾರೆ.
ಈ ವಿಚಾರವನ್ನು ಕೇಜ್ರಿವಾಲ್ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಕಡಿಮೆ ಮತಗಳನ್ನು ಪಡೆಯುತ್ತಿದ್ದಾರೆ ಎಂದು ದೂರಿದರು.
ನವದೆಹಲಿ: ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ (Arvind Kejriwal) ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷವು (AAP) ಮದ್ಯ ನೀತಿಯನ್ನು ಮಾಡಬಾರದಿತ್ತು. ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸಿದ್ದು ನನಗೆ ಬೇಸರ ತಂದಿದೆ. ಈಗ ಏನಾಗುತ್ತದೆಯೋ ಅದು ಕಾನೂನಿನ ಪ್ರಕಾರ ನಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಹೇಳಿದ್ದಾರೆ.
ಈ ಹಿಂದೆಯೂ ಅಣ್ಣಾ ಹಜಾರೆ, ಮದ್ಯ ನೀತಿಯ ವಿರುದ್ಧ ಮಾತನಾಡಿದ್ದರು. 2022 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ನೀತಿಯ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ಪತ್ರದಲ್ಲಿ ನೀವು ಮುಖ್ಯಮಂತ್ರಿಯಾದ ನಂತರ ನಾನು ಇದೇ ಮೊದಲ ಬಾರಿಗೆ ನಿಮಗೆ ಪತ್ರ ಬರೆಯುತ್ತಿದ್ದೇನೆ. ಏಕೆಂದರೆ ನಿಮ್ಮ ಸರ್ಕಾರದ ಮದ್ಯ ನೀತಿಯ ಇತ್ತೀಚಿನ ಸುದ್ದಿ ವರದಿಗಳಿಂದ ನನಗೆ ನೋವಾಗಿದೆ. ಮದ್ಯದಂತೆಯೇ ಅಧಿಕಾರವೂ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲು ಇದೆ ಎಂದು ತೋರುತ್ತದೆ ಎಂದು ಟೀಕಿಸಿದ್ದರು. ಇದನ್ನೂ ಓದಿ: ದೆಹಲಿ ಮದ್ಯ ಹಗರಣದಲ್ಲಿ ಕೇಜ್ರಿವಾಲ್ ಕಿಂಗ್‌ಪಿನ್: ಇಡಿ
ಬಂಧನದ ಹೊರತಾಗಿಯೂ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಎಎಪಿ ಹೇಳಿದೆ.
ನವದೆಹಲಿ: ಮದ್ಯದಂತೆಯೇ ಅಧಿಕಾರ ಕೂಡ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲೇರಿದ ಹಾಗೆ ತೋರುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕಿಡಿಕಾರಿದರು.
ಭ್ರಷ್ಟಾಚಾರ ಪ್ರಕರಣದ ನಂತರ ಸರ್ಕಾರ ಜಾರಿಗೆ ತಂದ ಸರ್ಕಾರಿ ಮದ್ಯದ ಪರವಾನಗಿ ನೀತಿಯ ಕುರಿತು ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?: ನೀವು ಮುಖ್ಯಮಂತ್ರಿಯಾದ ನಂತರ ನಾನು ನಿಮಗೆ ಮೊದಲ ಬಾರಿಗೆ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಸರ್ಕಾರದ ಮದ್ಯ ನೀತಿಯ ಬಗ್ಗೆ ಇತ್ತೀಚೆಗೆ ವರದಿಗಳಿಂದ ನೋವಾಗಿದೆ ಎಂದು ತಿಳಿಸಿದ್ದಾರೆ.
Anna Hazare writes to Delhi CM Kejriwal over New Liquor Policy
“Had expected a similar policy(like Maharashtra’s). But you didn’t do it.People seem to be trapped in a circle of money for power&power for money. It doesn’t suit a party that emerged from a major movement,”he writes pic.twitter.com/4yTvc0XI5K
ನೀವು ಬರೆದಿರುವ ಪುಸ್ತಕದಲ್ಲಿ ಪ್ರದೇಶದ ನಿವಾಸಿಗಳ ಅನುಮೋದನೆಯಿಲ್ಲದೇ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯಬಾರದು ಎಂದು ತಿಳಿಸಿದ್ದೀರಿ. ಆದರೆ ಇದೀಗ ನೀವು ಮುಖ್ಯಮಂತ್ರಿಯಾದ ನಂತರ ಈ ಎಲ್ಲಾ ಆದರ್ಶಗಳನ್ನು ಮರೆತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ:ಮೋದಿ, ಬಿಜೆಪಿಯವರು ಸೇರಿ ದೇಶವನ್ನ ಬರ್ಬಾದು ಮಾಡಿಬಿಟ್ರು – ಸಿದ್ದು ಗುದ್ದು
ನೀವು, ಮನೀಶ್ ಸಿಸೋಡಿಯಾ ಹಾಗೂ ಇತರರು ರಚಿಸಿದ ಆಮ್ ಆದ್ಮಿ ಪಕ್ಷವು ಈಗ ಯಾವುದೇ ಪಕ್ಷಕ್ಕಿಂತ ಭಿನ್ನವಾಗಿಲ್ಲ. ಸದೃಢವಾದ ಲೋಕಪಾಲ್ ಮತ್ತು ಭ್ರಷ್ಟಾಚಾರ-ವಿರೋಧಿ ಕಾನೂನುಗಳನ್ನು ತರುವ ಬದಲು, ನೀವು ಈ ಮದ್ಯದ ನೀತಿಯನ್ನು ತಂದಿದ್ದೀರಿ. ಅದು ಜನವಿರೋಧಿ, ವಿಶೇಷವಾಗಿ ಮಹಿಳಾ ವಿರೋಧಿಯಾಗಿದೆ ಎಂದು ತಿಳಿಸಿದರು.
ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮದ್ಯವನ್ನು ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್ ಗಳಲ್ಲಿ ಮಾರಾಟ ಮಾಡಬಹುದು ಎಂಬ ಸರ್ಕಾರದ ಆದೇಶವನ್ನು ವಿರೋಧಿಸಿ ಫೆ.14 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಘೋಷಿಸಿದ್ದಾರೆ.
ಜನವರಿ 27 ರಂದು, ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿನ ಸೂಪರ್ ಮಾರ್ಕೆಟ್‍ಗಳಲ್ಲಿ ಮತ್ತು ವಾಕ್-ಇನ್ ಅಂಗಡಿಗಳಲ್ಲಿ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆ ಶನಿವಾರ ಅಣ್ಣಾ ಹಜಾರೆ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಜ್ಞಾಪನೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಇತ್ತೀಚೆಗೆ ಮದ್ಯ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು: ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ
ಅಣ್ಣಾ ಹಜಾರೆ ಅವರ ಈ ಪತ್ರಕ್ಕೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಸರ್ಕಾರದ ಮದ್ಯದ ವಿಷಯದಲ್ಲಿ ಮಾಡಿರುವ ಫೋಷಣೆ ರಾಜ್ಯದ ಪಾಲಿಗೆ ದುರದೃಷ್ಟಕರ ಮತ್ತು ಇದು ಮುಂದಿನ ಪೀಳಿಗೆಗೆ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ಕಛೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, 1,000 ಚದರ ಅಡಿ ಅಥವಾ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣವನ್ನು ಹೊಂದಿರುವ ಮಹಾರಾಷ್ಟ್ರದ ಅಂಗಡಿಗಳು ಮತ್ತು ಸಂಸ್ಥೆಗಳ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿರುವ ಸೂಪರ್ ಮಾರ್ಕೆಟ್‍ಗಳು ಮತ್ತು ಮಳಿಗೆಗಳಲ್ಲಿ ‘ಶೆಲ್ಫ್-ಇನ್-ಶಾಪ್’ ವಿಧಾನವನ್ನು ಅಳವಡಿಸಿಕೊಳ್ಳಬಹುದು ಎಂದು ತಿಳಿಸಲಾಗಿತ್ತು. ಇದನ್ನೂ ಓದಿ: ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ
ಪೂಜಾ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಮೀಪವಿರುವ ಸೂಪರ್ ಮಾರ್ಕೆಟ್‍ಗಳಲ್ಲಿ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ. ಇದಲ್ಲದೆ, ನಿಷೇಧ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ವೈನ್ ಮಾರಾಟವನ್ನು ಅನುಮತಿಸಲಾಗುವುದಿಲ್ಲ. ಸೂಪರ್ ಮಾರ್ಕೆಟ್‍ಗಳು ವೈನ್ ಮಾರಾಟ ಮಾಡಲು ಪರವಾನಗಿಗಾಗಿ 5,000 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಈ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ಮುಂಬೈ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಸೂಪರ್ ಮಾರ್ಕೆಟ್ ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರವು ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರವಾಗಿದೆ. ಮಾದಕ ದ್ರವ್ಯ, ಮದ್ಯವ್ಯಸನದಿಂದ ಜನರನ್ನು ದೂರವಿಡುವುದು ಸರ್ಕಾರದ ಕರ್ತವ್ಯ. ಆದಾಯಕ್ಕಾಗಿ ಮದ್ಯಪಾನ ಮತ್ತು ವ್ಯಸನಕ್ಕೆ ಉತ್ತೇಜನ ನೀಡುವ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದರು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡಲು ಸಿದ್ದರಾಮಯ್ಯ ಬಿಡುತ್ತಾರೆಯೇ: ನಲಪಾಡ್‍ಗೆ ಬಿಜೆಪಿ ಗುದ್ದು
ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್ ಮಾರ್ಕೆಟ್ ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ರೈತರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಇಂತಹ ನಿರ್ಧಾರ ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತದೆ ಎಂಬುದು ನಿಜವಾದ ಪ್ರಶ್ನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರದಲ್ಲಿರುವವರು ಬೆಂಬಲಿಸುತ್ತಿದ್ದಾರೆ ಎಂದರು. ರೈತರ ಹಿತರಕ್ಷಣೆ ಕುರಿತು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗೆ ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು. ಆದರೆ, ವರ್ಷಕ್ಕೆ 1,000 ಕೋಟಿ ಲೀಟರ್ ವೈನ್ ಮಾರಾಟ ಮಾಡುವ ಗುರಿಯನ್ನು ನಿಗದಿಪಡಿಸುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಬಯಸುತ್ತಿದೆ? ಇದರರ್ಥ ಸರ್ಕಾರಕ್ಕೆ ರಾಜ್ಯದ ಜನರು ವ್ಯಸನಿಯಾಗಿದ್ದರೂ ಪರವಾಗಿಲ್ಲ, ಸರ್ಕಾರದ ಆದಾಯ ಹೆಚ್ಚಿಸಬೇಕು ಎಂದು ಕಿಡಿಕಾರಿದರು.
ಕಳೆದ ವರ್ಷ ನವೆಂಬರ್‌ನಲ್ಲಿ ಮಹಾರಾಷ್ಟ್ರ ಸರ್ಕಾರವು ಆಮದು ಮಾಡಿಕೊಂಡ ಸ್ಕಾಚ್ ವಿಸ್ಕಿಯ ಮೇಲಿನ ಅಬಕಾರಿ ಸುಂಕವನ್ನು ಶೇ.50 ರಷ್ಟು ಕಡಿಮೆ ಮಾಡಿದೆ. ಈ ರೀತಿಯ ಮದ್ಯದ ಮಾರಾಟವನ್ನು ಹೆಚ್ಚಿಸಲು ಅದರ ಆದಾಯವನ್ನು 100 ಕೋಟಿಯಿಂದ 250 ಕೋಟಿಗೆ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ
ವೈನ್ ಮತ್ತು ಮದ್ಯಗೆ ಉಪಯೋಗಿಸುವ ಹಣ್ಣನ್ನು ಬೆಳೆಯುವ ರೈತರಿಗೆ ಹೆಚ್ಚು ಉತ್ತೇಜನ ಕೊಡುವ ಸಲುವಾಗಿ ರಾಜ್ಯ ಸರ್ಕಾರವು ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿದೆ ಎಂದು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಈ ಕುರಿತು ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ನವಾಬ್ ಮಲಿಕ್ ಕಳೆದ ಗುರುವಾರ ತಿಳಿಸಿದ್ದರು.
ಮುಂಬೈ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೌದು. ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯದ ಅಪಧಮನಿಯಲ್ಲಿನ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಸ್ಥಿರವಾಗಿದ್ದಾರೆ ಎಂದು ವೈದ್ಯ ಅವಧೂತ್ ಬೋದಮವಾಡ್ ಹೇಳಿದ್ದಾರೆ.
Anna Hazare was admitted to Ruby Hospital in Pune following chest pain. He has been kept under observation and stable: Dr Avdhut Bodamwad, Medical Superintendent, Ruby Hall Clinic
ಆಸ್ಪತ್ರೆಯ ಇಬ್ಬರು ವೈದ್ಯರಾದ ಪಿ ಕೆ ಗ್ರಾಂಟ್ ಮತ್ತು ಸಿಎನ್ ಅವರು ಅಣ್ಣಾ ಹಜಾರೆ ಅವರಿಗೆ ಇಸಿಜಿ(Electrocardiogram), ಆಂಜಿಯೋಗ್ರಫಿ, ಇಮೇಜಿಂಗ್ ಪರೀಕ್ಷೆಯನ್ನು ನಡೆಸಿದರು, ಇದು ರಕ್ತನಾಳಗಳನ್ನು ಪರೀಕ್ಷಿಸಲು ಎಕ್ಸ್-ರೇ ಕೂಡ ಮಾಡಿದ್ದಾರೆ.
ಮುಂಬೈ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯನ್ನ ಸಮರ್ಥಿಸಿಕೊಂಡಿದ್ದು ನನ್ನ ಜೀವನದಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರ ಎಂದು ಬಾಲಿವುಡ್ ನಿರ್ದೇಶಕ ಹನ್ಸಲ್ ಮೆಹ್ತಾ ಬೇಸರ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭಿಸೋದಾಗಿ ಹೇಳಿದ್ದರು. ಧರಣಿಗಾಗಿ ವೇದಿಕೆಯನ್ನ ಸಹ ಸಿದ್ಧಪಡಿಸಲಾಗಿತ್ತು. ಶುಕ್ರವಾರ ಸಂಜೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಖಾತೆ ಸಚಿವ ಕೈಲಾಸ್ ಚೌದರಿ ಭೇಟಿ ಬಳಿಕ ಅಣ್ಣಾ ಹಜಾರೆ ಧರಣಿಯಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು. ಇದೀಗ ಅಣ್ಣಾ ಹಜಾರೆ ನಡೆಗೆ ಟ್ವಿಟ್ಟರ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಒಳ್ಳೆಯ ಭಾವನೆ ಮತ್ತು ಸದುದ್ದೇಶದಿಂದ ಅಣ್ಣಾ ಹಜಾರೆ ಅವರನ್ನ ಸಮರ್ಥನೆ ಮಾಡಿಕೊಂಡಿದ್ದೆ. ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನ ಬೆಂಬಲಿಸಿದ್ದೇನೆ. ನನ್ನ ಸಮರ್ಥನೆಗೆ ವಿಷಾಧಿಸುತ್ತೇನೆ. ಜೀವನದಲ್ಲಿ ಎಲ್ಲರಿಂದಲೂ ತಪ್ಪುಗಳಾಗೋದು ಸಹಜ. ಸಿಮ್ರನ್ ಸಿನಿಮಾ ನನ್ನ ಹಿಂದಿನ ತಪ್ಪು ಎಂದು ಹನ್ಸಲ್ ಮೆಹ್ತಾ ಟ್ವೀಟ್ ಮಾಡಿದ್ದಾರೆ. 2017ರಲ್ಲಿ ಕಂಗನಾ ರಣಾವತ್ ಸಿಮ್ರನ್ ಸಿನಿಮಾದಲ್ಲಿ ನಟಿಸಿದ್ದರು. ಆದ್ರೆ ಸಿನಿಮಾ ಪ್ಲಾಪ್ ಆಗಿತ್ತು.
I supported him (Anna) in good faith. Like I later supported Arvind. I don't regret it. All of us make mistakes. I made Simran.
ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿದಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಡೆಯನ್ನ ಶಿವಸೇನೆ ಪ್ರಶ್ನೆ ಮಾಡಿದೆ. ಶಿವಸೇನೆ ಮುಖವಾಣಿಯ ಸಂಪಾದಕೀಯದಲ್ಲಿ ಅಣ್ಣಾ, ನೀವು ಯಾರ ಪರ? ಶೀರ್ಷಿಕೆಯಡಿಯಲ್ಲಿ ಲೇಖನ ಪ್ರಕಟಿಸಿತ್ತು.
ರೈತರ ಆಂದೋಲನ ಕೇವಲ ರಾಜ್ಯಗಳಿಗೆ ಸೀಮಿತವಾಗಿರದೇ ದೇಶದ ವಿಷಯವಾಗಿದೆ. ಲಕ್ಷ ಲಕ್ಷ ರೈತರು ಕಳೆದ 30 ದಿನಗಳಿಂದಲೂ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದ್ರೆ ಸರ್ಕಾರ ಈ ಶಾಂತಿಯುತ ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಧರಣಿ ಸ್ಥಳದ ವಿದ್ಯುತ್-ನೀರು ಕಡಿತಗೊಳಿಸಿ ಅಮಾನವೀಯತೆಯನ್ನ ಮರೆಯುತ್ತಿದೆ. ರೈತರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿ ಒತ್ತಡಕ್ಕೆ ಸಿಲುಕಿ ಪ್ರತಿಭಟನೆಯಿಂದ ಹಿಂದೆ ಸರಿಸುವ ಎಲ್ಲ ಪ್ರಯತ್ನಗಳನ್ನ ಕೇಂದ್ರ ಸರ್ಕಾರ ತೆರೆಮರೆಯಲ್ಲಿ ಮಾಡುತ್ತಿದೆ. ಈ ವಿಷಯದ ನಿಮ್ಮ ಅಭಿಪ್ರಯಾ ಏನು? ನಿಜವಾಗಲೂ ನೀವು ಯಾರ ಪರ ಅಣ್ಣಾ ಎಂದು ಶಿವಸೇನೆ ಪ್ರಶ್ನೆ ಮಾಡಿತ್ತು.
ಮುಂಬೈ: ಬಿಜೆಪಿ ನಾಯಕರ ಮಾತುಕತೆಯ ನಂತರ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿದಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಡೆಯನ್ನ ಶಿವಸೇನೆ ಪ್ರಶ್ನೆ ಮಾಡಿದೆ. ಶಿವಸೇನೆ ಮುಖವಾಣಿಯ ಸಂಪಾದಕೀಯದಲ್ಲಿ ಅಣ್ಣಾ, ನೀವು ಯಾರ ಪರ? ಶೀರ್ಷಿಕೆಯಡಿಯಲ್ಲಿ ಲೇಖನ ಪ್ರಕಟಿಸಿದೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಅಣ್ಣಾ ಹಜಾರೆ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸೋದಾಗಿ ಹೇಳಿದ್ದರು. ಧರಣಿಗಾಗಿ ವೇದಿಕೆಯನ್ನ ಸಹ ಸಿದ್ಧಪಡಿಸಲಾಗಿತ್ತು. ಶುಕ್ರವಾರ ಸಂಜೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಭೇಟಿ ಬಳಿಕ ಅಣ್ಣಾ ಹಜಾರೆ ಧರಣಿಯಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.
ಶಿವಸೇನೆ ಹೇಳಿದ್ದೇನು?: ಅಣ್ಣಾ ಹಜಾರೆ ಈ ಹಿಂದೆಯೂ ಹೋರಾಟದ ಅಸ್ತ್ರವನ್ನ ಹೊರಗೆ ತೆಗೆದು ನಂತರ ತೆರೆಗೆ ಸರೀಸಿದ್ದಾರೆ. ಹಾಗಾಗಿ ಅಣ್ಣಾ ಹಜಾರೆ ಅವರನ್ನ ಕಂಡವರಿಗೆ ಈ ನಿರ್ಧಾರ ಆಶ್ಚರ್ಯವನ್ನುಂಟು ಮಾಡಿರಲ್ಲ. ಬಿಜೆಪಿ ನಾಯಕರು ನೀಡಿರುವ ಆಶ್ವಾಸನೆಗಳು ಅಣ್ಣಾ ಹಜಾರೆ ಒಮ್ಮತಿಸಿದ್ರೆ ಅದು ಅವರ ಸಮಸ್ಯೆ. ರೈತವರ್ಗದ ನಾಶಕ್ಕೆ ನಾಂದಿಗೆ ಈ ಕೃಷಿ ಕಾನೂನುಗಳು ಕಾರಣವಾಗುತ್ತಿರೋದಕ್ಕೆ ಇಡೀ ದೇಶ ಆಕ್ರೋಶ ಹೊರ ಹಾಕುತ್ತಿದೆ. ಈ ಸಂದರ್ಭದಲ್ಲಿ ಅಣ್ಣಾ ಸಹ ರೈತರಿಗೆ ತಮ್ಮ ಪ್ರತಿಭಟನೆ ಮೂಲಕ ದೆಹಲಿ ಗಡಿಯಲ್ಲಿರುವ ಅನ್ನದಾತರಿಗೆ ಬೆಂಬಲ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದ್ರೆ ಅಣ್ಣಾ ಮಾತ್ರ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹಾಗಾಗಿ ನೂತನ ಕೃಷಿ ಕಾನೂನುಗಳ ಸಂಬಂಧ ಅಣ್ಣಾ ನಿಲುವು ಏನು ಎಂಬುವುದು ಅಸ್ಪಷ್ಟವಾಗಿಯೇ ಉಳಿದಿದೆ.
ಇದೇ ಸಂಪಾದಕೀಯದಲ್ಲಿ ರೈತರ ಆಂದೋಲನ ಕೇವಲ ರಾಜ್ಯಗಳಿಗೆ ಸೀಮಿತವಾಗಿರದೇ ದೇಶದ ವಿಷಯವಾಗಿದೆ. ಲಕ್ಷ ಲಕ್ಷ ರೈತರು ಕಳೆದ 30 ದಿನಗಳಿಂದಲೂ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದ್ರೆ ಸರ್ಕಾರ ಈ ಶಾಂತಿಯುತ ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಧರಣಿ ಸ್ಥಳದ ವಿದ್ಯುತ್-ನೀರು ಕಡಿತಗೊಳಿಸಿ ಅಮಾನವೀಯತೆಯನ್ನ ಮರೆಯುತ್ತಿದೆ. ರೈತರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿ ಒತ್ತಡಕ್ಕೆ ಸಿಲುಕಿ ಪ್ರತಿಭಟನೆಯಿಂದ ಹಿಂದೆ ಸರಿಸುವ ಎಲ್ಲ ಪ್ರಯತ್ನಗಳನ್ನ ಕೇಂದ್ರ ಸರ್ಕಾರ ತೆರೆಮರೆಯಲ್ಲಿ ಮಾಡುತ್ತಿದೆ. ಈ ವಿಷಯದ ನಿಮ್ಮ ಅಭಿಪ್ರಯಾ ಏನು? ನಿಜವಾಗಲೂ ನೀವು ಯಾರ ಪರ ಅಣ್ಣಾ ಎಂದು ಶಿವಸೇನೆ ಕೇಳಿದೆ.
ಕಳೆದ ನಾಲ್ಕು ವರ್ಷಗಳಿಂದ ರೈತರ ಪ್ರಮುಖ ಬೇಡಿಕೆಗಳಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಆದರೆ ಸರ್ಕಾರ ರೈತರ ಬಗ್ಗೆ ಪ್ರಾಮುಖ್ಯತೆ ನೀಡುತ್ತಿಲ್ಲ. ರೈತರ ಸಮಸ್ಯೆ ಕುರಿತಾಗಿ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿ ನಾಳೆಯಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದರು.
ಮಹಾರಾಷ್ಟ್ರದ ಅಹ್ಮದ್‍ನಗರ್ ನಲ್ಲಿ ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ಎಲ್ಲಾ ತಯಾರಿ ನಡೆಸಿದ್ದ ಅಣ್ಣಾ ಹಜಾರೆ ಅವರನ್ನು ಇಂದು ಕೇಂದ್ರ ರಾಜ್ಯ ಖಾತೆ ಸಚಿವ ಕೈಲಾಸ್ ಚೌದರಿ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿಯಾಗಿ ಉಪವಾಸ ಸತ್ಯಾಗ್ರಹ ಮಾಡದಂತೆ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಒಪ್ಪಿಗೆ ಸೂಚಿಸಿರುವ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯಲು ಒಪ್ಪಿದ್ದಾರೆ ಎಂದು ವರದಿಯಾಗಿದೆ.
ಮುಂಬೈ: ದೆಹಲಿಯ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಅಂದೋಲನ ದೇಶದ ಪ್ರತಿಭಾಗಕ್ಕೂ ವಿಸ್ತರಣೆ ಆಗಬೇಕು. ಹಾಗಾದ್ರೆ ಮಾತ್ರ ಸರ್ಕಾರದ ಮೇಲೆ ಒತ್ತಡ ಬೀಳುತ್ತೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲ ನೀಡಿರುವ ಅಣ್ಣಾ ಹಜಾರೆ ಒಂದು ದಿನದ ಉಪವಾಸ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಕಳೆದ 10 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಚಳಿಯನ್ನ ಲೆಕ್ಕಿಸದೇ ರೈತರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಆಂದೋಲನ ದೇಶವ್ಯಾಪಿ ವಿಸ್ತರಣೆ ಆಗಬೇಕು. ಸರ್ಕಾರದ ಒತ್ತಡ ಹೇರಲು ದೇಶದ ಎಲ್ಲ ರೈತರು ರಸ್ತೆಗಿಳಿದಾಗ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತೆ. ಹಾಗಾಗಿ ಈ ಆಂದೋಲನದಲ್ಲಿ ದೇಶದ ಜನತೆ ಭಾಗಿಯಾಗಬೇಕು ಎಂದು ಅಣ್ಣಾ ಹಜಾರೆ ಮನವಿ ಮಾಡಿಕೊಂಡಿದ್ದಾರೆ.
ಈ ಹೋರಾಟದಲ್ಲಿ ಯಾರು ಅಹಿಂಸ ಮಾರ್ಗದತ್ತ ಹೆಜ್ಜೆ ಹಾಕಬಾರದು ಎಂಬುವುದು ನನ್ನ ಮನವಿ. ಕೃಷಿ ವಲಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದುವೇ ಸೂಕ್ತ ಸಮಯ. ಈ ಮೊದಲು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು, ಮುಂದಿನ ದಿನಗಳಲ್ಲಿಯೂ ಅವರ ಜೊತೆಯಲ್ಲಿರುತ್ತೇನೆ. ಕೇಂದ್ರ ಸರ್ಕಾರ ರೈತರಿಗೆ ಆಶ್ವಾಸನೆ ನೀಡುವ ಬದಲು ಸಮಸ್ಯೆಗಳ ಪರಿಹರಿಸಲು ಮುಂದಾಗಬೇಕೆಂದು ಅಣ್ಣಾ ಹಜಾರೆ ಆಗ್ರಹಿಸಿದ್ದಾರೆ.
ಬೆಂಗಳೂರು: ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೋರ್ಟಿಗೆ ಹೇಳಿದ್ದಾರೆ.
ಒಸ್ಮಾನಾಬಾದ್ ಸಕ್ಕರೆ ಕೈಗಾರಿಕೆಯ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದಕ್ಕೆ ನನ್ನ ಕೊಲೆಗೆ ಸುಪಾರಿ ಕೊಡಲಾಗಿದೆ ಎಂದು ಮುಂಬೈ ಸಿಬಿಐ ಕೋರ್ಟ್‍ಗೆ ಹಜಾರೆ ಹೇಳಿದ್ದಾರೆ.
ಇಂದು ಅಣ್ಣಾ ಹಾಜರೆ ಅವರು ಮುಂಬೈನ ಸಿಬಿಐ ಕೋರ್ಟಿಗೆ ಹಾಜರಾಗಿದ್ದರು. 2006 ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಕಾಂಗ್ರೆಸ್ ನಾಯಕ ಪವನ್ ರಾಜೇ ನಿಂಬಾಳ್ಕರ್ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಆಗಮಿಸಿದ್ದರು. ನಿಂಬಾಳ್ಕರ್ ಹತ್ಯೆ ಪ್ರಕರಣದಲ್ಲಿ ಪದ್ಮ ಸಿನ್ಹಾ ಪಾಟೀಲ್ ಪ್ರಮುಖ ಆರೋಪಿಯಾಗಿದ್ದು, ಇವರು ಒಸ್ಮಾನಾಬಾದ್ ಸಕ್ಕರೆ ಕಾರ್ಖಾನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದರು. ಈ ಕಾರ್ಖಾನೆ ಮಹಾರಾಷ್ಟ್ರದ ಎನ್‍ಸಿಪಿ ನಾಯಕ ಒಸ್ಮಾನಾಬಾದ್‍ಗೆ ಸೇರಿತ್ತು.
ಅಂದಹಾಗೇ ಪ್ರಕರಣದಲ್ಲಿ ಮೃತ ನಿಂಬಾಳ್ಕರ್ ಅವರ ಪತ್ನಿ ಆನಂದಿದೇವಿ ಅವರು ಅಣ್ಣಾ ಹಜಾರೆ ಅವರ ಸಾಕ್ಷಿಯನ್ನು ಪರಿಗಣಿಸಲು ಮನವಿ ಮಾಡಿದ್ದರು. ಹಜಾರೆ ಅವರಿಗೆ ಕೊಲೆ ಬಗ್ಗೆ ಮಾಹಿತಿ ಇತ್ತು ಎಂದು ಹೇಳಿದ್ದಾರೆ. ಆದರೆ ಹೈ ಕೋರ್ಟ್ ಈ ಮನವಿಯನ್ನು ತಿರಸ್ಕರಿತ್ತು. ಸದ್ಯ ಸುಪ್ರೀಂ ಕೋರ್ಟ್ ನಿಂಬಾಳ್ಕರ್ ಪತ್ನಿರ ಮನವಿಯನ್ನು ಪರಿಗಣಿಸಿ ಸಿಬಿಐಗೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಸಿಬಿಐ ಮುಂದೇ ಹಾಜರಾಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದಕ್ಕೆ ತಮ್ಮ ಕೊಲೆ ಮಾಡಲು ಸುಪಾರಿ ನೀಡಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಪೊಲೀಸರಿಗೆ ದೂರು ನೀಡಿದ್ದಾಗಿ, ಮಹಾರಾಷ್ಟ್ರ ಸಿಎಂ, ಪ್ರಧಾನಿಗಳಿಗೂ ದೂರು ನೀಡಿದ್ದಾಗಿ ತಿಳಿಸಿದ್ದಾರೆ.