Tag: Anna University

  • ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

    ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

    – ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾದ ಕಾಳಜಿ ಯಾರಿಗೂ ಇಲ್ಲ ಕೋರ್ಟ್‌ ಕಳವಳ

    ಚೆನ್ನೈ: ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ (Anna University) ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್  (Madras High Court) ಅಸಮಾಧಾನ ವ್ಯಕ್ತಪಡಿಸಿದೆ.

    ಘಟನೆಯ ಕುರಿತು ಚೆನ್ನೈನಲ್ಲಿ (Chennai) ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾದ ಕಾಳಜಿ ಯಾರಿಗೂ ಇಲ್ಲ ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

    ಡಿ.23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ (NCW) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಸಂತ್ರಸ್ತೆ, ಆಕೆಯ ಕುಟುಂಬ, ಅಧಿಕಾರಿಗಳು ಮತ್ತು ಎನ್‌ಜಿಒಗಳನ್ನು ಭೇಟಿ ಮಾಡಿ ಮಾಹಿತಿ ಕಲೆಹಾಕಿದೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ NWS, ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಭದ್ರತೆಯನ್ನು ಮೌಲ್ಯಮಾಪನ ಮಾಡಲಾಗಿದೆ. ಅಲ್ಲದೇ ಶಿಫಾರಸುಗಳೊಂದಿಗೆ ವಿವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಬರೆದುಕೊಂಡಿದೆ.

    ಸಂತ್ರಸ್ತೆ ನೀಡಿದ್ದ ದೂರಿನಲ್ಲಿ, ದುಷ್ಕರ್ಮಿಯು ತನ್ನ ಮತ್ತು ಸ್ನೇಹಿತನ ಮೇಲೆ ದಾಳಿ ಮಾಡಿದ್ದಾನೆ. ಪೊದೆಗೆ ಎಳೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ಉಲ್ಲೇಖಿಸಿದ್ದಳು.

    ದೂರು ದಾಖಲಾದ ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ರಸ್ತೆ ಬದಿಯ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ ಎಂದು ಗುರುತಿಸಲಾಗಿತ್ತು. ಆರೋಪಿ ಕ್ರಿಮಿನಲ್ ಹಿನ್ನೆಲೆ ಹೋದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಪ್ರಕರಣದ ತನಿಖೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿದೆ.

  • ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ – ಚಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ

    ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ – ಚಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ

    ಚೆನ್ನೈ: ಅಣ್ಣಾ ವಿಶ್ವವಿದ್ಯಾನಿಲಯದ (Anna University) ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ತಮಿಳುನಾಡು (Tamilnadu) ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಚಾಟಿಯಲ್ಲಿ ಹೊಡೆದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

    ಇಂದು (ಡಿ.27) ಕೊಯಮತ್ತೂರಿನ (Coimbatore) ನಿವಾಸದ ಮುಂದೆ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಪೊಲೀಸರು ಮತ್ತು ರಾಜ್ಯ ಸರ್ಕಾರ ನಿರಾಸಕ್ತಿ ತೋರಿಸುತ್ತಿದೆ ಎಂದು ಪ್ರತಿಭಟನೆ ಮೂಲಕ ಖಂಡಿಸಿದ್ದಾರೆ.ಇದನ್ನೂ ಓದಿ: ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಅಬ್ದುಲ್ ರಹಮಾನ್ ಮಕ್ಕಿ ಸಾವು

    ಇದಕ್ಕೂ ಮುನ್ನ ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಜೊತೆಗೆ ಆರು ಬಾರಿ ಚಾಟಿ ಏಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದರು. ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಆರೋಪಿಸಿದ್ದರು.

    ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.ಇದನ್ನೂ ಓದಿ: ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ