Tag: annabhagya

  • ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    – 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ವಿತರಿಸಲು ನಿರ್ಧಾರ

    ಬೆಂಗಳೂರು: ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.

    ʻಇಂದಿರಾ ಆಹಾರ ಕಿಟ್‌ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್‌ ನೀಡಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ

    ಅದರಂತೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ (INDIRA Food Kit) ನೀಡಲಾಗುತ್ತದೆ. ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ಅಕ್ಕದಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್‌ ಅನ್ನು ಒದಗಿಸಲು ಬಜೆಟ್‌ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

  • ಬಿಪಿಎಲ್‌ ಕಾರ್ಡ್‌ದಾರರಿಗೆ ದಸರಾ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌!

    ಬಿಪಿಎಲ್‌ ಕಾರ್ಡ್‌ದಾರರಿಗೆ ದಸರಾ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌!

    ಬೆಂಗಳೂರು: ಬಿಪಿಎಲ್‌ ಕಾರ್ಡ್‌ದಾರರಿಗೆ(BPL Card) ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ (Annabhagya) ಪಡಿತರ ಪಡಿತರ‌ ಕಾರ್ಡ್ ಪರಿಷ್ಕರಣೆ ಮಾಡಿದೆ.

    ನೆಲಮಂಗಲ (Nelamangala) ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಪಡಿತರ ಕಾರ್ಡ್ ಡಿಲೀಟ್‌ ಮಾಡಲು ಮುಂದಾಗಿದೆ. ಡಿಲೀಟ್‌ ಮಾಡಿದ್ದು ಮಾತ್ರವಲ್ಲದೇ ನ್ಯಾಯಬೆಲೆ ಅಂಗಡಿಯಲ್ಲಿ ಡಿಲೀಟ್‌ ಮಾಡಲಾದ ವ್ಯಕ್ತಿಗಳ ಹೆಸರಿನಲ್ಲಿರುವ ಕಾರ್ಡ್‌ ವಿವರಗಳನ್ನು ನೋಟಿಸ್‌ ಬೋರ್ಡ್‌ನಲ್ಲಿ ಅಂಟಿಸಲಾಗಿದೆ.

    ನೋಟಿಸ್‌ ಬೋರ್ಡ್‌ನಲ್ಲಿ ಕೃಷಿ ಇತ್ಯಾದಿ ಆದಾಯಗಳಿಂದಾಗಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದೆ. ಹೀಗಾಗಿ ನಿಮ್ಮ ಪಡಿತರವನ್ನು ರದ್ದುಗೊಳಿಸಲು ಮುಂದಾಗಿದ್ದೇವೆ. ಈ ಬಾರಿ ಕೊನೆಯ ಬಾರಿಗೆ ಪಡಿತರ ನೀಡಲಾಗುತ್ತದೆ. ಮುಂದಿನ ತಿಂಗಳಿನಿಂದ ಪಡಿತರ ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

    ಪರಿಷ್ಕರಣೆಗೆ ಮುಂದಾಗಿದ್ದು ಯಾಕೆ?
    ರಾಜ್ಯದಲ್ಲಿ ಬಡವರಿಗಿಂತಲೂ ಬಡತನ ರೇಖೆಗಿಂತ ಮೇಲಿದ್ದವರಿಗೆ ಹೆಚ್ಚಿನ ಪ್ರಮಾಣದ ಕಾರ್ಡ್‌ಗಳನ್ನು ವಿತರಿಸಲಾಗಿತ್ತು. ಅದರಲ್ಲೂ ಬಡತನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹಂಚಿಕೆ ಆಗಿತ್ತು. ಜಿಲ್ಲಾವಾರು ಬಡವರ ಸಂಖ್ಯೆಗಿಂತಲೂ ಹತ್ತಾರು ಪಟ್ಟು ಹೆಚ್ಚು ಕಾರ್ಡ್‌ಗಳ ಹಂಚಿಕೆ ಆಗಿದ್ದವು. ಹೀಗಾಗಿ ಗ್ಯಾರಂಟಿ ಜಾರಿ ಮಾಡಿ ಕಂಗೆಟ್ಟಿದ್ದ ಸರ್ಕಾರ ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆಗೆ ಮುಂದಾಗಿತ್ತು.

    – ಸಾಂದರ್ಭಿಕ ಚಿತ್ರ

    ಯಾವ ಜಿಲ್ಲೆಗಳಲ್ಲಿ ಬಡತನ ಪ್ರಮಾಣ ಶೇ.1 ರಿಂದ 5 ಇದೆಯೋ ಅಲ್ಲೇ 80% ಗಿಂತಲೂ ಅಧಿಕ ಬಿಪಿಎಲ್ ಕಾರ್ಡ್ ಹಂಚಿಕೆ ಆಗಿದ್ದವು. ಅನರ್ಹರ ಬಳಿ ಬಿಪಿಎಲ್ ಕಾರ್ಡ್‌ಗಳಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆರ್ಥಿಕ ಹೊಡೆತ ಬಿದ್ದಿತ್ತು. ಹೀಗಾಗಿ ಅನರ್ಹ ಬಿಪಿಎಲ್ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಅಭಿಯಾನಕ್ಕೆ ನಿರ್ಧಾರ ಕೈಗೊಂಡಿತ್ತು. ಗ್ಯಾರಂಟಿಗಳ ಪರಿಶೀಲನೆ ನೆಪದಲ್ಲಿ ಪಂಚಾಯಿತಿ ಮಟ್ಟದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಅಭಿಯಾನ ನಡೆಸಿತ್ತು.  ಇದನ್ನೂ ಓದಿ: ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ ರೈತರಿಗೆ ಸೇರಬೇಕಿದ್ದ 3.85 ಕೋಟಿ ಮೌಲ್ಯದ ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು!

    ಬಿಪಿಎಲ್‌ ಆಪರೇಷನ್‌:
    ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್‌ ಮಾಡಿಕೊಂಡಿದೆ. ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಸಿಎಂ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೇ ಇಲಾಖೆಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ ರೇಷನ್ ಕಾರ್ಡ್ ಪರಿಶೀಲನೆ ಕಾರ್ಯ ನಡೆದಿತ್ತು.

    ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲಿದೆ ಎಂದು ಹಿಂದೆ ಪಬ್ಲಿಕ್‌ ಟಿವಿ ವರದಿ ಮಾಡಿತ್ತು. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆಯ ನೆರವು ಪಡೆದು ಆಪರೇಷನ್‌ಗೆ ಮಾಡಲಿದೆ ಎಂದು ವರದಿಯಾಗಿತ್ತು.

    ಯಾರ ಕಾರ್ಡ್ ರದ್ದಾಗುತ್ತೆ?
    ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದಲ್ಲಿ, ಆದಾಯ ತೆರಿಗೆ ಪಾವತಿ ಮಾಡಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರಗಳಲ್ಲಿ 1000 ಚದರಡಿಯ ಪಕ್ಕಾ ಮನೆ ಇದ್ದಲ್ಲಿ, ವೈಟ್ ಬೋರ್ಡ್‌ 4 ಚಕ್ರದ ವಾಹನ ಇದ್ದು ಬಿಪಿಎಲ್‌ ಕಾರ್ಡ್‌ ಮಾಡಿಸಿದವರ ಕಾರ್ಡ್‌ ರದ್ದಾಗಲಿದೆ.

    ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್‌ ಮಾಡಿಕೊಂಡಿದೆ. ಕಳೆದ ಅಕ್ಟೋಬರ್‌ನಲ್ಲೇ ಸರ್ಕಾರ ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಚಾಲನೆ ನೀಡಿತ್ತು.

  • ಕಾಳಸಂತೆ ಸೇರುತ್ತಿದೆ ಅನ್ನಭಾಗ್ಯ ಅಕ್ಕಿ – ಪಾಲಿಶ್‌ ನೀಡಿ ಹೆಚ್ಚಿನ ಬೆಲೆಗೆ ಮಾರಾಟ?

    ಕಾಳಸಂತೆ ಸೇರುತ್ತಿದೆ ಅನ್ನಭಾಗ್ಯ ಅಕ್ಕಿ – ಪಾಲಿಶ್‌ ನೀಡಿ ಹೆಚ್ಚಿನ ಬೆಲೆಗೆ ಮಾರಾಟ?

    – ಕೊಡಗಿನಲ್ಲಿ 8 ಕ್ವಿಂಟಲ್ ರೇಷನ್ ಅಕ್ಕಿ ಜಪ್ತಿ

    ಮಡಿಕೇರಿ: ಅನ್ನಭಾಗ್ಯ ಯೋಜನೆ (Annabhagya Scheme) ಅಡಿಯಲ್ಲಿ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಕಾಳಸಂತೆಗೆ ಕೊಂಡೊಯುತ್ತಿದ್ದ ಕಿಡಿಗೇಡಿಗಳನ್ನ ಕೊಡಗು ಕಂದಾಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಪೋನ್ನಂಪೇಟೆ ತಾಲ್ಲೂಕಿನ ಗೋಣಿಕೋಪ್ಪ ಗ್ರಾಮದಲ್ಲಿ ಸುಮಾರು 8 ಕ್ವಿಂಟಲ್ ರೇಷನ್ ಅಕ್ಕಿಯನ್ನ (Rice) ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಹೌದು. ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿ ಕಾಳಸಂತೆಗೆ ಸೇರುತ್ತಿದೆ. ಬಡವರಿಗೆ ಹಣದ ಆಮಿಷವೊಡ್ಡಿ ಕಡಿಮೆ ಬೆಲೆಗೆ ಅನ್ನಭಾಗ್ಯ ಅಕ್ಕಿ ಖರೀದಿಸುತ್ತಿರುವ ಇಡಿಗೇಡಿಗಳು ಬಳಿಕ ಪಾಲಿಶ್‌ ಕೊಟ್ಟು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬರುತ್ತಿದೆ. ಅದರಂತೆ ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ.

    ಕಳೆದ 4-5 ದಿನಗಳ ಹಿಂದೆ ಕೊಡಗಿನ ಕುಶಾಲನಗರದಲ್ಲಿ ಕ್ವಿಟಲ್ ಗಂಟಲ್ಲೇ ಅಕ್ಕಿಯನ್ನ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು (Food Department Officers) ದಾಳಿ ನಡೆಸಿದ್ದರು. ಅಕ್ಕಿಯನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪ್ರಕರಣ ಕೂಡ ದಾಖಲಿಸಿದ್ರು. ಈ ಬೆನ್ನಲ್ಲೇ ಇಂದು ಪೋನ್ನಂಪೇಟೆ ತಾಲ್ಲೂಕಿನ ಗೋಣಿಕೋಪ್ಪ ಗ್ರಾಮದಲ್ಲಿ ಕಾಳಸಂತೆಗೆ ಕೊಂಡೊಯ್ಯುತ್ತಿದ್ದ ಸುಮಾರು 8 ಕ್ವಿಂಟಲ್ ರೇಷನ್ ಅಕ್ಕಿಯನ್ನ ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಗ್ರಾಮದ ವಿಠಲ ಎಂಬುವವರು ಗೋಣಿಕೋಪ್ಪದಿಂದ ಮೈಸೂರು ಕಡೆಗೆ ವಾಹನದಲ್ಲಿ ಸಾಗಟ ಮಾಡುವ ಸಂದರ್ಭದಲ್ಲಿ ರೆವಿನ್ಯೂ ಇಲಾಖೆಯ ಅಧಿಕಾರಿಗಳು ವಾಹನ ತಡೆದು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಸುಮಾರು 8 ಕ್ವಿಂಟಲ್ ಪಡಿತರ ಅಕ್ಕಿ ಇರುವುದು ಕಂಡು ಬಂದಿದೆ.

    ಈ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ಪೋನ್ನಂಪೇಟೆ ಪೊಲೀಸರಿಗೆ ದೂರು ನೀಡಿ ವಾಹನ ಹಾಗೂ ವಿಠಲ ಅವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

    ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

    ಬೆಂಗಳೂರು: ಟೋಕನ್ (Token) ಎಸೆದ ನ್ಯಾಯಬೆಲೆ ಅಂಗಡಿ (Ration Shop) ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ‘ಪಬ್ಲಿಕ್ ಟಿವಿ’ಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಮುನಿಯಪ್ಪ (KH Muniyappa) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ವೀಡಿಯೋ ನೋಡಿ ಪ್ರತಿಕ್ರಿಯಿಸಿದ ಅವರು, ನ್ಯಾಯಬೆಲೆ ಅಂಗಡಿ ಮಾಲೀಕನ ವಿರುದ್ಧ ಕ್ರಮದ ಭರವಸೆ ನೀಡಿದರು. ಇದನ್ನೂ ಓದಿ: ಒತ್ತುವರಿ ತೆರವು ವಿಚಾರ; ನಾವು ಕುಮಾರಸ್ವಾಮಿ ರಾಜೀನಾಮೆ ಕೇಳಲ್ಲ: ಚಲುವರಾಯಸ್ವಾಮಿ ಟಾಂಗ್

    ಇನ್ನು ಅಕ್ಕಿ 10 ಕೆಜಿ ಕೊಡಬೇಕಾದ ಕಾರಣ ಸಮಸ್ಯೆ ಆಗಿದೆ ನಿಜ. ಒಟ್ಟು 15 ಕೆಜಿ ಅಕ್ಕಿ ಈ ತಿಂಗಳು ಕೊಡಬೇಕು. ಎಲ್ಲಾ ನ್ಯಾಯಬೆಲೆ ಅಂಗಡಿಗಳು ಬೀಗ ಹಾಕಿಲ್ಲ, ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್, ಬೀಗ ಹಾಕಿವೆ. ಈ ತಿಂಗಳ ಅಂತ್ಯದ ತನಕವೂ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊರತೆ ಇಲ್ಲ, ಸರಬರಾಜು ವ್ಯತ್ಯಾಸ ಆಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಡ್ರಗ್ಸ್ ಸಾಗಾಟ ಕೇಸ್ – ದೆಹಲಿಯಲ್ಲಿ ತನಿಖೆ ಆರಂಭಿಸಿದ ಮಂಗಳೂರು ಪೊಲೀಸರು

  • ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್; ಸರಬರಾಜು ಸಮಸ್ಯೆ ಆಗಿದೆ, ಅಕ್ಕಿ ಕೊರತೆ ಇಲ್ಲ: ಮುನಿಯಪ್ಪ

    ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್; ಸರಬರಾಜು ಸಮಸ್ಯೆ ಆಗಿದೆ, ಅಕ್ಕಿ ಕೊರತೆ ಇಲ್ಲ: ಮುನಿಯಪ್ಪ

    ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ (Ration Shop) ಕೆಲ ಕಡೆಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಿರಬಹುದು. ಸರಬರಾಜು ಸಮಸ್ಯೆ ಆಗಿರಬಹುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಸ್ಪಷ್ಟಪಡಿಸಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಅಕ್ಕಿಯನ್ನು ಈ ತಿಂಗಳ ಅಂತ್ಯದ ತನಕವೂ ಕೊಡಬೇಕು. ಅಕ್ಕಿ ಇದೆ, ಯಾವುದೇ ಕೊರತೆ ಇಲ್ಲ. ಸಾಗಾಣಿಕೆಯಲ್ಲಿ ಸ್ವಲ್ಪ ವ್ಯತ್ಯಾಸ ಆಗಿದೆ. ಅಕ್ಕಿ ಖರೀದಿ ಮಾಡಿದ್ದೇವೆ, ದಾಸ್ತಾನಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರೋ ಬೋಧಕ ಹುದ್ದೆ ಹಂತ ಹಂತವಾಗಿ ಭರ್ತಿ: ಡಾ.ಸುಧಾಕರ್

    ಸಮಸ್ಯೆ ಆಗಿರುವ ಕಡೆ ಪರಿಹರಿಸುತ್ತೇವೆ. ಎರಡು ತಿಂಗಳ ಅಕ್ಕಿ ಒಂದೇ ತಿಂಗಳು ಕೊಡಬೇಕಾಗಿರುವುದರಿಂದ ಕೆಲವು ಕಡೆ ಸಮಸ್ಯೆ ಆಗಿರಬಹುದು. ಇನ್ನು ಅಕ್ಕಿ ತೆಗೆದುಕೊಂಡು ಮಾರಿದರೆ ಕಾರ್ಡ್ ರದ್ದು ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿಚಾರಣೆ ಮಾಡುತ್ತೇವೆ. ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ, ಮಾಹಿತಿ ತೆಗೆದುಕೊಂಡು ಮಾನಾಡುತ್ತೇನೆ ಎಂದರು. ಇದನ್ನೂ ಓದಿ: ವಿಜಯಪುರ| ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ಮೂವರು ಸಾವು

  • ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು

    ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು

    ಬೆಂಗಳೂರು: ಕಾಂಗ್ರೆಸ್‌ನ (Congress) ಮಹತ್ವದ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯಕ್ಕೆ (Annabhagya) ವಿಘ್ನ ಎದುರಾಗಿದೆ. ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ (BPL Card Holders) ಶಾಕ್ ನೀಡಿದೆ. ಜನರಿಗೆ ಕಳೆದ ಎರಡು ತಿಂಗಳ ಅಕ್ಕಿ ಹಣ ಸಿಕ್ಕಿಲ್ಲ. ಹೀಗಾಗಿ ಜನ ನ್ಯಾಯಬೆಲೆ ಅಂಗಡಿಯವರ ಜೊತೆ ಜಗಳ ಮಾಡುತ್ತಿದ್ದಾರೆ. ನಮಗೆ ದುಡ್ಡು ಕೊಡದಿದ್ರೂ ಪರವಾಗಿಲ್ಲ, ಆಹಾರ ಪದಾರ್ಥನಾದ್ರೂ ಕೊಡಿ ಎನ್ನುತ್ತಿದ್ದಾರೆ.

    ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡಾ ಒಂದು. ಬಿಪಿಎಲ್ ಕುಟುಂಬಗಳಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಅನ್ನಭಾಗ್ಯ ವಿಚಾರದಲ್ಲಿ ಕರ್ನಾಟಕದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡುವ ವಿಚಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿತ್ತು. ಸದ್ಯ ಸರ್ಕಾರ ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದೆ. ಪ್ರತಿ ಕೆಜಿ ಅಕ್ಕಿಗೆ ತಲಾ 34 ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170 ರೂ. ನೀಡಲಾಗುತ್ತಿತ್ತು. ಆದರೆ ಕಳೆದ ಎರಡು ತಿಂಗಳಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಯಾವುದೇ ಹಣ ಪಾವತಿ ಆಗಿಲ್ಲ. ಈ ಬಗ್ಗೆ ಜನರಿಂದ ಹಾಗೂ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

    ಕಳೆದ ಎರಡು ದಿನದ ಹಿಂದೆ ಅಗಸ್ಟ್ ತಿಂಗಳ ಡಿಬಿಟಿ ಅಥವಾ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ ಹಣ ಬಂದಿದೆ. ಆದರೆ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಎರಡು ತಿಂಗಳ ಹಣವನ್ನು ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆ ಕೊಟ್ಟಿಲ್ಲ. ಹೀಗಾಗಿ ಅಕ್ಕಿಯೂ ಇಲ್ಲದೇ ಹಣವೂ ಇಲ್ಲದೇ ಬಡವರ್ಗದ ಜನ ಪರದಾಡುತ್ತಿದ್ದಾರೆ. ಹೀಗಾಗಿ ಪಡಿತರ ವಿತರಕರ ಜೊತೆ ಪ್ರತಿನಿತ್ಯ ವಾಗ್ವಾದಕ್ಕೆ ಇಳಿಯುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿನ ಸರ್ಕಾರಿ ಶಾಲೆ ಜಾಗ ವಕ್ಫ್ ಆಸ್ತಿ – ಅಭಿನಂದನೆಗಳು ಸರ್ ಎಂದು ಸಿಎಂಗೆ ಪ್ರತಾಪ್ ಸಿಂಹ ಟಾಂಗ್

    ಈ ಬಗ್ಗೆ ಮಾತನಾಡಿದ ಕೃಷ್ಣಪ್ಪ, ಜನರ ಸಮೀಕ್ಷೆಯಂತೆ 95% ಜನ ಹಣದ ಬದಲಾಗಿ, ಆಹಾರ ಪದಾರ್ಥಗಳಾಗಿ ಸಕ್ಕರೆ, ಬೇಳೆ, ಅಡುಗೆ ಎಣ್ಣೆ, ಉಪ್ಪು ಕೊಡಿ ಎಂದಿದ್ದಾರೆ. ಕೇಂದ್ರದಿಂದ ಸರ್ಕಾರ ಅಕ್ಕಿ ಖರೀದಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರೇಯಸಿ ತಾಯಿಗಾಗಿ ಚೈನ್ ಕಳ್ಳತನ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

  • ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

    ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

    ಬೆಂಗಳೂರು: ಅನ್ನಭಾಗ್ಯ ಯೋಜನೆ (Annabhagya Scheme) ಅಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಅಂತ ಆಹಾರ ಸಚಿವ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. 5 ಕೆ.ಜಿ ಅಕ್ಕಿ ಮತ್ತು 5 ಕೆ.ಜಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂ. ನಂತೆ 170 ರೂ. ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಕೂಡಲೇ ಕರ್ನಾಟಕದಿಂದ ಕಾವೇರಿ ನೀರು ಬಿಡುವಂತೆ ನಿರ್ದೇಶಿಸಿ – ಮೋದಿಗೆ ಸ್ಟಾಲಿನ್‌ ಪತ್ರ

    ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ (Ration Card) ಕುಟುಂಬಗಳಲ್ಲಿ 4.42. ಕೋಟಿ ಫಲಾನುಭವಿಗಳು ಇದ್ದಾರೆ. ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಅಂತ ಮಾಹಿತಿ ನೀಡಿದರು.

    ಉಳಿದಂತೆ 28 ಲಕ್ಷ ಕುಟುಂಬಗಳಲ್ಲಿ ಕಳೆದ 3 ತಿಂಗಳಲ್ಲಿ ಒಂದೂ ತಿಂಗಳು ಪಡಿತರ ಪಡೆದಿಲ್ಲ. 5,32,349 ಫಲಾನುಭವಿಗಳಿ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರು ಇದ್ದಾರೆ. 3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ. 19,27,225 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ. ಇವರಿಗೆ ಹಣ ಖಾತೆಗೆ ಹಾಕಿಲ್ಲ ಅಂತ ಮಾಹಿತಿ ನೀಡಿದರು.

    ಆಂಧ್ರ (Andhrapradesh) ಮತ್ತು ತೆಲಂಗಾಣ (Telangana) ರಾಜ್ಯಗಳು ಅಕ್ಕಿ ಕೊಡೋಕೆ ಈಗ ಮುಂದೆ ಬಂದಿದೆ. 34 ರೂ. ಮೇಲೆ ಹೆಚ್ಚು ಹಣ ಕೊಡೊಲ್ಲ ಅಂತ ಹೇಳಿದ್ದೇವೆ. ಎರಡು ರಾಜ್ಯಗಳ ಜೊತೆ ಮಾತಾಡುತ್ತಿದ್ದೇವೆ. ಸೆಪ್ಟೆಂಬರ್ ನಲ್ಲಿ ಅಕ್ಕಿ ಕೊಡೋ ಚಿಂತನೆ ಮಾಡಿದ್ದೇವೆ. ಹೆಚ್ಚು ದಿನ ಹಣ ಕೊಡೊಲ್ಲ. ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಪಡೆಯೋ ಪ್ರಕ್ರಿಯೆ ನಡೆಸುತ್ತೇವೆ. ಆದಷ್ಟು ಬೇಗ ಅಕ್ಕಿ ಕೊಡ್ತೀವಿ ಎಂದರು.

    ಹೊಸ ಪಡಿತರ ಚೀಟಿಗೆ ಜುಲೈ ಅಂತ್ಯಕ್ಕೆ 2,95,986 ಅರ್ಜಿ ಬಂದಿವೆ. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾರ್ಡ್ ನೀಡುವ ಪ್ರಕ್ರಿಯೆ ನಿಂತಿತ್ತು. ಈಗ ಫಲಾನುಭವಿಗಳ ಮಾಹಿತಿಯನ್ನ ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆ ಅನುಮತಿ ಪಡೆದು ಕಾರ್ಡ್ ವಿವರಣೆ ಮಾಡ್ತೀವಿ ಅಂತ ತಿಳಿಸಿದರು. ಬ್ಯಾಂಕ್ ಅಕೌಂಟ್ ಇಲ್ಲದ 28 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆ ಮಾಡಿಸಿದ ಬಳಿಕವೇ ಹಣ ಹಾಕೋದಾಗಿ ಸಚಿವರು ತಿಳಿಸಿದರು.

    ಅಕ್ಕಿ ಜೊತೆ ರಾಗಿ ಮತ್ತು ಜೋಳ ಕೊಡಲು ಸರ್ಕಾರ ಚಿಂತನೆ ಮಾಡಿದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಂದ ರಾಗಿ, ಬಿಳಿ ಖರೀದಿಗೆ ಸರ್ಕಾರದ ನಿರ್ಧಾರ ಮಾಡಿದೆ. 8 ಲಕ್ಷ ಟನ್ ರಾಗಿ, 3 ಲಕ್ಷ ಜೋಳ ಖರೀದಿ ಮಾಡ್ತೀವಿ. ಅಕ್ಕಿ ಜೊತೆ ಜೋಳ,ರಾಗಿ ಕೂಡಾ ಪಡಿತರದಲ್ಲಿ ಕೊಡ್ತೀವಿ ಅಂತ ಸಚಿವರು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯದಿಂದ ಹೊರಗುಳಿಯುತ್ತಾರಾ 6 ಲಕ್ಷ ಜನ?

    ಅನ್ನಭಾಗ್ಯದಿಂದ ಹೊರಗುಳಿಯುತ್ತಾರಾ 6 ಲಕ್ಷ ಜನ?

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Guarantee) ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ಸದ್ಯ ಸದ್ದು ಮಾಡುತ್ತಿದೆ. ಇದೀಗ ಅನ್ನಭಾಗ್ಯದಿಂದ (Annabhagya Scheme)  6 ಲಕ್ಷ ಜನ ಹೊರಗುಳಿಯುತ್ತಾರಾ ಎಂಬ ಪ್ರಶ್ನೆಯೊಂದು ಎದ್ದಿದೆ.

    6 ಲಕ್ಷ ಜನರ ದಾಖಲೆ ಇಲ್ಲದಿರುವುದು ಆಹಾರ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಲಿಂಕ್ ಮಾಡದವರ ಖಾತೆಗಳಿಗೆ ಹಣ ಸಿಗುವುದಿಲ್ಲ. ಇದನ್ನೂ ಓದಿ: ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಯಾರಿಗೆಲ್ಲ ಸಿಗಲ್ಲ ದುಡ್ಡು..?: ರಾಜ್ಯದಲ್ಲಿ 6 ಲಕ್ಷ ಜನ ಬಿಪಿಎಲ್ ಕಾರ್ಡ್‍ದಾರರ (BPL Card) ಬ್ಯಾಂಕ್ ಖಾತೆ ಆಧಾರ್ ಗೆ ಲಿಂಕ್ (Aadhaar Card Link to Bank Account) ಆಗಿಲ್ಲ. ಇವರು ಲಿಂಕ್ ಮಾಡಿಸುವವರೆಗೆ ದುಡ್ಡು ಬರಲ್ಲ. ಈಗ ಲಿಂಕ್ ಮಾಡಿದ್ದರೆ ಜುಲೈ 2ನೇ ವಾರದಲ್ಲಿ ಹಣ ಬರುವ ಸಾಧ್ಯತೆಗಳಿವೆ.

    ಇಂದು ದುಡ್ಡು ಬರಲ್ಲ ಯಾಕೆ?: ಅಧಿಕಾರಿಗಳು ಪ್ರತಿ ಅಕೌಂಟ್‍ನ ಡೇಟಾ ಪರಿಶೀಲಿಸಬೇಕು. ಕುಟುಂಬದ ಸದಸ್ಯರು ಎಷ್ಟು ಜನ, ಎಷ್ಟು ದುಡ್ಡು ಕಳಿಸಬೇಕು ಅಂತಾ ಪರಿಶೀಲಿಸಬೇಕು. ಆಧಾರ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಪರಿಶೀಲಿಸಬೇಕು. ಖಾತೆ ನಿಷ್ಕ್ರಿಯವಾದರೆ ದುಡ್ಡು ಬೌನ್ಸ್ ಆಗಿ ವಾಪಸ್ ಬರುತ್ತೆ. ಹೀಗಾಗಿ ಕೆಲ ಸಮಯ ಬೇಕಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ (BPL Card) ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ.

    ಪ್ರತಿ ಕೆಜಿಗೆ 34 ರೂ. ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂ. ಸಿಗಲಿದೆ. ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 3 ತಿಂಗಳು ಅಕ್ಕಿ ಬದಲು ಹಣ ಕೊಡುತ್ತೇವೆ: ಜಿ ಪರಮೇಶ್ವರ್

    3 ತಿಂಗಳು ಅಕ್ಕಿ ಬದಲು ಹಣ ಕೊಡುತ್ತೇವೆ: ಜಿ ಪರಮೇಶ್ವರ್

    ತುಮಕೂರು: ಬಿಪಿಎಲ್ (BPL) ಕುಟುಂಬಗಳಿಗೆ 5 ಕೆಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G.Parameshwara) ಹೇಳಿಕೆ ನೀಡಿದ್ದಾರೆ.

    ಗುರುವಾರ ತುಮಕೂರಿನ ಕೊರಟಗೆರೆಯಲ್ಲಿ (Koratagere) ನಡೆದ ಬಕ್ರಿದ್ ಆಚರಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ಕೊಡದಿದ್ದರೆ ಹಣ ನೀಡಬೇಕು ಎಂದು ಬಿಜೆಪಿಯವರೇ (BJP) ಒತ್ತಾಯಿಸಿದ್ದರು. ಆದರೆ ಈಗ ಹಣ ಕೊಟ್ಟರೆ ಅದಕ್ಕೂ ವಿರೋಧ ಮಾಡುತ್ತಿದ್ದಾರೆ. ಏನು ಮಾಡಿದರೂ ವಿರೋಧವನ್ನೇ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ಅಕ್ಕಿ ಬದಲು ಹಣ ಕೊಡುವುದಕ್ಕೆ ಕೆಲವರು ಮಾತ್ರ ವಿರೋಧ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ದೇಶದ ಗೋದಾಮುಗಳಲ್ಲಿ ಅಕ್ಕಿ ಕೊಳೆಯುತ್ತಿದ್ದು, ಹಣ ಕೊಟ್ಟರೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯದಲ್ಲಿರುವ ಭಾರತ ಆಹಾರ ನಿಗಮದ ಗೋದಾಮುಗಳಲ್ಲಿ 7 ಲಕ್ಷ ಟನ್ ಅಕ್ಕಿ ಇದೆ. ಅದನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ನಮಗೆ ಕೊಡಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಶಕ್ತಿ ಪ್ರದರ್ಶನ – ಜುಲೈ 13, 14ಕ್ಕೆ ಸಭೆ

    ಅಕ್ಕಿ ನೀಡುವುದು ಪ್ರತಿಷ್ಠೆಯ ವಿಚಾರ ಆಗಬಾರದು. ಬಡವರ ಹಸಿವಿನ ಪ್ರಶ್ನೆಯಾಗಬೇಕು. ಪ್ರತಿಷ್ಠೆ ಮಾಡಿದರೆ ಬಡವರ ಹೊಟ್ಟೆ ತುಂಬುವುದಿಲ್ಲ. ಬಿಜೆಪಿಯವರು ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ (Politics) ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಅಕ್ಕಿಗೆ ಕಲ್ಲು ಹಾಕಿದ್ರಿ, ಈಗ ಹಣ ಕೊಡೋದ್ರಲ್ಲೂ ಜನ್ರ ಮನಸ್ಸು ಕೆಡಿಸ್ಬೇಡಿ: ಹೆಚ್‌ಕೆ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ

    ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ

    ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ (Annabhagya Scheme) 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೀಗ ಈ ಹಣಕ್ಕಾಗಿ ಅಧಾರ್ ಲಿಂಕ್ (Aadhaar Card Link) ಕಡ್ಡಾಯವಾಗಿರುತ್ತದೆ.

    ಹೌದು. ಅನ್ನಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಬೇಕಾದರೆ ಬ್ಯಾಂಕ್ ಖಾತೆ (Bank Account) ಜೊತೆ ಆಧಾರ್ ಲಿಂಕ್ ಕಡ್ಡಾಯವಾಗಿ ಆಗಿರಬೇಕು. ಬಿಪಿಎಲ್ (BPL Card) ಪಡಿತರ ಚೀಟಿಯನ್ನು ನೀವು ಹೊಂದಿರಬೇಕು. ಪಡಿತರ ಚೀಟಿಯಲ್ಲಿ (Ration Card) ಮನೆ ಮುಖ್ಯಸ್ಥರು ಯಾರು ಅನ್ನೋದು ಕಾರ್ಡ್ ನಲ್ಲಿ ನಮೂದಾಗಿರುತ್ತದೆ. ಮನೆಯ ಮುಖ್ಯಸ್ಥರು ಸಾಮಾನ್ಯವಾಗಿ ಮಹಿಳೆಯರೇ ಆಗಿರುತ್ತಾರೆ. ಮನೆ ಯಜಮಾನಿಯ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಖಾತೆ ಇರಬೇಕು. ಇದನ್ನೂ ಓದಿ: PAN-Aadhaar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ

    ಬ್ಯಾಂಕ್ ಖಾತೆ ಮಾತ್ರವಲ್ಲ, ಖಾತೆಗೆ ಆಧಾರ್ ನಂಬರ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು. ಒಂದು ವೇಳೆ ಮನೆಯ ಮುಖ್ಯಸ್ಥರದ್ದು ಇಲ್ಲದೇ ಹೋದಲ್ಲಿ, ಪಡಿತರ ಚೀಟಿಯಲ್ಲಿರುವ ಯಾವುದಾದ್ರೂ ಒಬ್ಬರ ಹೆಸರಿನಲ್ಲಿ ಖಾತೆ ಆಧಾರ್ ಲಿಂಕ್ ಆಗಿದ್ರೂ ಆಗುತ್ತೆ. ಧನಭಾಗ್ಯಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆದರೆ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆ ವಿವರ ಮಾತ್ರ ಕಡ್ಡಾಯವಾಗಿರುತ್ತದೆ. ಇದನ್ನೂ ಓದಿ: ಆಟೋದಲ್ಲಿ ಬಂದಿದ್ದಕ್ಕೆ ಬಿರಿಯಾನಿ ವಾಪಸ್ – ಬೆಂಜ್ ಕಾರ್‌ಗೆ ಶಿಫ್ಟ್ ಮಾಡಿ ಸಿಎಂ ನಿವಾಸಕ್ಕೆ ಕಳುಹಿಸಿದ ಜಮೀರ್

    ಆಹಾರ ಇಲಾಖೆ ಮಾಹಿತಿ ಪ್ರಕಾರ, ಸದ್ಯ 1.28 ಫಲಾನುಭವಿಗಳು ಇದ್ದು ಅದರಲ್ಲಿ 6 ಲಕ್ಷ ಖಾತೆದಾರರ ಆಕೌಂಟ್ ಸಮಸ್ಯೆ ಹಾಗೂ ಅಧಾರ್ ಲಿಂಕ್ ಆಗದೇ ಇರುವ ಸಮಸ್ಯೆ ಇದೆ. ಹೀಗಾಗಿ ಜುಲೈ 1 ನಲ್ಲಿ ಇವರಿಗೆ ದುಡ್ಡು ಕೊಡೋಕೆ ಸಮಸ್ಯೆಯಾಗಬಹುದು. ಅಕೌಂಟ್, ಆಧಾರ್ ಲಿಂಕ್ ಮಾಡಿಸಿದ ಬಳಿಕವಷ್ಟೇ ದುಡ್ಡು ನೇರವಾಗಿ ಡಿಬಿಟಿ ಮೂಲಕ ಜಮೆಯಾಗುತ್ತೆ ಅಂತಾ ಅಧಿಕಾರಿಗಳು ಹೇಳಿದ್ದಾರೆ.

    ಮನೆ ಯಜಮಾನಿ 92% ಮಹಿಳೆಯರೇ ಆಗಿರೋದ್ರಿಂದ ಗೃಹಲಕ್ಷ್ಮಿಗೂ (Gruhalakshmi) ಮುಂಚಿತ ಆಗಿ ಅನ್ನಭಾಗ್ಯದ ದುಡ್ಡು ಮಹಿಳೆಯರಿಗೆ ಜಾಕ್ ಫಾಟ್ ಹೊಡೆಯಲಿದೆ. ಮನೆಯ ಮುಖ್ಯಸ್ಥರ ಹೆಸರಿನಲ್ಲಿ ಖಾತೆಗಳು ಇಲ್ಲದೇ ಇದ್ದರೆ ಕುಟುಂಬದ ಬೇರೆ ಸದಸ್ಯರ ಖಾತೆಯ ವಿವರವನ್ನು ಕೊಡಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]