Tag: anoop revanna

  • ‘ಕಬ್ಜ’ ಸಿನಿಮಾದಲ್ಲಿದ್ದಾರೆ ಅನೂಪ್ ರೇವಣ್ಣ : ಉಪ್ಪಿಗೆ ಸಿಕ್ಕ ಬಲಗೈಭಂಟ

    ‘ಕಬ್ಜ’ ಸಿನಿಮಾದಲ್ಲಿದ್ದಾರೆ ಅನೂಪ್ ರೇವಣ್ಣ : ಉಪ್ಪಿಗೆ ಸಿಕ್ಕ ಬಲಗೈಭಂಟ

    ‘ಲಕ್ಷ್ಮಣ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಮಾಜಿ ಸಚಿವ ಹೆಚ್​.ಎಂ.ರೇವಣ್ಣ ಅವರ ಮಗ ಅನೂಪ್​ (Anoop Revanna), ಆ ನಂತರ 2017ರಲ್ಲಿ ಬಿಡುಗಡೆಯಾದ ‘ಪಂಟ’ ಚಿತ್ರದಲ್ಲೂ ನಾಯಕನಾಗಿ ನಟಿಸಿದ್ದರು. ಈಗ ಸುಮಾರು ಏಳು ವರ್ಷಗಳ ಗ್ಯಾಪ್​ನ ಬಳಿಕ ಪುನಃ ಆರ್​. ಚಂದ್ರು (R. Chandru) ನಿರ್ದೇಶನದ ‘ಕಬ್ಜ’ (Kabzaa) ಚಿತ್ರದ ಮೂಲಕ ಅನೂಪ್​ ರೀ ಎಂಟ್ರಿ ಕೊಡುತ್ತಿದ್ದಾರೆ. ‘ಕಬ್ಜ’ ಚಿತ್ರದಲ್ಲಿ ಅನೂಪ್​ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ಉಪೇಂದ್ರ ಅವರ ಸ್ನೇಹಿತನ ಪಾತ್ರದಲ್ಲಿ ಅನೂಪ್​ ನಟಿಸಿದ್ದು, ಇಡೀ ಚಿತ್ರದಲ್ಲಿ ಅವರ ಪಾತ್ರ ಸಾಗುತ್ತದಂತೆ.

    ‘ಕಬ್ಜ’ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತು ಚಿತ್ರದಲ್ಲಿ ನಟಿಸಿದ ಅನುಭವ ಕುರಿತು ಮಾತನಾಡುವ ಅವರು, ‘ಉಪ್ಪಿ ಸಾರ್​ ಬಲಗೈಭಂಟನಾಗಿ ನಟಿಸಿದ್ದೇನೆ. ಅವರ ಜತೆಗೆ ನಾನು ಸಹ ಭೂಗತಲೋಕದಲ್ಲಿ ಬೆಳೆಯುತ್ತೇನೆ. ಉಪ್ಪಿ ಸಾರ್‌ಗೆ​ ನಿರ್ದೇಶಕರಾಗಿ, ನಟರಾಗಿ ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಹೆಸರು. ಅವರ ಜೊತೆಗೆ ನಾಲ್ಕು ವರ್ಷ ಕಾಲ ಕಳೆಯುವ ಅವಕಾಶ ಸಿಕ್ಕಿತು. ಅವರಿಂದ ತುಂಬಾ ಕಲಿತಿದ್ದೇನೆ. ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದೇನೆ. ನಾಲ್ಕು ವರ್ಷ ಹೋಗಿದ್ದೇ ಗೊತ್ತಾಗಲಿಲ್ಲ. ಏಕೆಂದರೆ, ಚಿತ್ರದ ಕೆಲಸ ಅಷ್ಟಿತ್ತು. ಬರೀ ನಟನಾಗಿಯಷ್ಟೇ ಅಲ್ಲ, ಒಬ್ಬ ಸಿನಿಮಾ ವಿದ್ಯಾರ್ಥಿಯಾಗಿ ಈ ಚಿತ್ರದಿಂದ ತುಂಬಾ ಕಲಿತಿದ್ದೇನೆ. ಇಡೀ ತಂಡ ಬಹಳ ಕಷ್ಟಪಟ್ಟು ಕೆಲಸ ಮಾಡಿದೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಎಲ್ಲರ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ. ಇದನ್ನೂ ಓದಿ: ʻಒಲವ ಘಮವುʼ ಆಲ್ಬಂ ಸಾಂಗ್‌ಗೆ ಧ್ರುವ ಸರ್ಜಾ ಮೆಚ್ಚುಗೆ

    ‘ಕಬ್ಜ’ ಅಲ್ಲದೆ, ‘ಹೈಡ್​ ಅಂಡ್​ ಸೀಕ್​’ ಎಂಬ ಇನ್ನೊಂದು ಚಿತ್ರದಲ್ಲೂ ಅನೂಪ್​ ನಟಿಸಿದ್ದು, ಅದು ಸಹ ಏಪ್ರಿಲ್​ನಲ್ಲಿ ಬಿಡುಗಡೆಯಾಗಲಿದೆಯಂತೆ. ಇದೊಂದು ಸಸ್ಪೆನ್ಸ್​ ಥ್ರಿಲ್ಲರ್​ ಚಿತ್ರವಾಗಿದ್ದು, ನೆಗೆಟಿವ್​ ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ‘ಒಬ್ಬ ನಟನಾಗಿ ಎಲ್ಲ ರೀತಿಯ ಪಾತ್ರಗಳನ್ನು ಮಾಡುತ್ತಿರಬೇಕು. ಪ್ರಯೋಗಗಳನ್ನು ಮಾಡುತ್ತಿರಬೇಕು ಎಂದು ನಂಬಿದವನು ನಾನು. ಅದಕ್ಕೆ ಸರಿಯಾಗಿ ‘ಹೈಡ್​ ಅಂಡ್​ ಸೀಕ್​’ ಚಿತ್ರದಲ್ಲೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಇದರಲ್ಲಿ ಕಿಡ್ನಾಪರ್​ ಆಗಿ ಕಾಣಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಬೇರೆ ಬೇರೆ ತರಹದ ಪ್ರಯೋಗಗಳನ್ನು ಮಾಡುವ ಆಸೆ ಇದೆ’ ಎನ್ನುತ್ತಾರೆ.

    ಈ ಎರಡು ಚಿತ್ರಗಳಲ್ಲದೆ ಒಂದಿಷ್ಟು ಕಥೆಗಳನ್ನು ಕೇಳಿದ್ದಾರಂತೆ ಅನೂಪ್​. ಆದರೆ, ತಂದೆ ಹೆಚ್​.ಎಂ. ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಮತ್ತು ಅವರ ಪರ ಪ್ರಚಾರ ಮಾಡಬೇಕಿರುವುದರಿಂದ, ಈ ಎರಡೂ ಚಿತ್ರಗಳ ಬಿಡುಗಡೆಯ ನಂತರ ಒಂದು ಸಣ್ಣ ಗ್ಯಾಪ್​ ಪಡೆಯಲಿದ್ದಾರಂತೆ. ಆಮೇಲೆ ಪುನಃ ಇನ್ನಷ್ಟು ಚಿತ್ರಗಳಲ್ಲಿ ನಟಿಸುವ ಮೂಲಕ ಚಿತ್ರರಂಗದಲ್ಲಿ ಇನ್ನಷ್ಟು ಸಕ್ರಿಯವಾಗುವುದಾಗಿ ಹೇಳುತ್ತಾರೆ.

  • ಧನ್ಯಾ ರಾಮ್ ಕುಮಾರ್ ನಟನೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಧನ್ಯಾ ರಾಮ್ ಕುಮಾರ್ ನಟನೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಕ್ಷ್ಮಣ ಖ್ಯಾತಿಯ ನಟ ಅನೂಪ್ ರೇವಣ್ಣ (Anoop Revanna) ನಟಿಸಿರುವ ‘ಹೈಡ್ ಅಂಡ್ ಸೀಕ್’ (Hide and Seek) ಚಿತ್ರವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದೆ. ಪುನೀತ್ ನಾಗರಾಜು ಅವರ ನಿರ್ದೇಶನದ ಈ ಚಿತ್ರದಲ್ಲಿ ಅನೂಪ್ ರೇವಣ್ಣ ಒಬ್ಬ ಕಿಡ್ನಾಪರ್  ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ (First Look) ಪೋಸ್ಟರ್ ಹಾಗೂ ಮೇಕಿಂಗ್ ವೀಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು  ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರೆ, ಮಾಜಿಸಚಿವ ಹೆಚ್.ಎಂ.ರೇವಣ್ಣ ಅವರು  ಮೇಕಿಂಗ್ ವೀಡಿಯೋ ಲಾಂಚ್  ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಂ.ರೇವಣ್ಣ ಪುನೀತ್ ನನ್ನಬಳಿ ಬಂದು ಸಿನಿಮಾ ಮಾಡುತ್ತೇವೆ ಅಂದಾಗ ಸಂತೋಷವಾಯಿತು. ಚಿತ್ರದ ಸನ್ನಿವೇಶಗಳು ಕುತೂಹಲಕರವಾಗಿವೆ. ನಾಗರಾಜ್ ಅವರ ಪ್ರಯತ್ನ ಯಶಸ್ವಿಯಾಗಲಿ. ಇವತ್ತು ಕನ್ನಡ ಚಿತ್ರರಂಗ ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಪಡೆದಿದೆ. ಈ ಸಿನಿಮಾ ಕೂಡ ಅಂಥಾ ಚಿತ್ರಗಳ ಸಾಲಿಗೆ ಸೇರಲಿ ಎಂದು ಹಾರೈಸಿದರು,. ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

    ನಂತರ  ಮಾತನಾಡಿದ  ಪುನೀತ್ ನಾಗರಾಜು ಯುವತಿಯ ಅಪಹರಣದ ಸುತ್ತ ನಡೆಯುವ  ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಿಸಿದ್ದೇವೆ.  ಚಿತ್ರದಲ್ಲಿ ನಾಯಕನೇ  ಕಿಡ್ನಾಪರ್ ಆಗಿದ್ದು, ಧನ್ಯ ರಾಮ್‌ಕುಮಾರ್ ಒಬ್ಬ ಬ್ಯುಸಿನೆಸ್‌ಮ್ಯಾನ್ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಿವರ್ಸ್ ಸ್ಕ್ರೀನ್ ಪ್ಲೈ ಮೂಲಕ ಕಥೆ ಹೇಳಲು ಟ್ರೈ ಮಾಡಿದ್ದೇವೆ, ಫಸ್ಟ್ ಹಾಫ್ ಡೈರೆಕ್ಟರ್ ಪಾಯಿಂಟ್ ಆಫ್  ವ್ಯೂನಲ್ಲಿ ಚಿತ್ರ ಬಂದರೆ, ಸೆಕೆಂಡ್ ಹಾಫ್‌ನಲ್ಲಿ ಅದೇ ಸೀನ್ ಬೇರೆ ರೀತಿ ನಡೆಯುತ್ತೆ  ಎಂದು ಹೇಳಿದರು, ಸಹ ನಿರ್ಮಾಪಕ ವಸಂತರಾವ್ ಕುಲಕರ್ಣಿ ಮಾತನಾಡಿ ಪುನೀತ್ ಈ ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ನಾನು ಒಬ್ಬ ಕಲಾನಿರ್ದೇಶಕ. ಇಷ್ಟು ದಿನದ ಸಂಪಾದನೆಯನ್ನು ಈ ಚಿತ್ರಕ್ಕೆ ಹಾಕಿದ್ದೇನೆ ಎಂದು ಹೇಳಿದರು.

    ನಾಯಕ ಅನೂಪ್ ಮಾತನಾಡುತ್ತ ನಿರ್ದೇಶಕರು  ಒಳ್ಳೇ ಕಥೆ ಮಾಡಿಕೊಂಡಿದ್ದರು. ನನ್ನ ಹಿಂದಿನ ಚಿತ್ರದ  ಪಾತ್ರಕ್ಕೂ ಇದಕ್ಕೂ ವ್ಯತ್ಯಾಸವಿದೆ. ಜಾಸ್ತಿ ಮಾತಾಡದ, ಯಾವುದನ್ನೂ ಎಕ್ಸ್ ಪ್ರೆಷನ್ ಮಾಡದಂಥ ವ್ಯಕ್ತಿ. ನಾನಿಲ್ಲಿ ಹೀರೋ, ವಿಲನ್ ಎರಡೂ ಥರದ ಕ್ಯಾರೆಕ್ಟರ್ ಪ್ಲೇ ಮಾಡಿದ್ದೇನೆ  ಎಂದು ಹೇಳಿದರು.

    ನಂತರ ನಾಯಕಿ ಧನ್ಯಾ ರಾಮ್‌ಕುಮಾರ್ (Dhanya Ram Kumar) ಮಾತನಾಡುತ್ತ ಈ ಸ್ಕ್ರಿಪ್ಟ್ ಕೇಳಿದಾಗಲೇ ನನಗೆ ಇಷ್ಟವಾಯ್ತು, ಮಿಸ್ಟ್ರಿ ಥ್ರಿಲ್ಲರ್, ಅದಕ್ಕೇ  ನಾನು ನನ್ನ ಎರಡನೇ ಚಿತ್ರವಾಗಿ ಈ ಸಿನಿಮಾ ಸೆಲೆಕ್ಟ್ ಮಾಡಿಕೊಂಡೆ. ಚಿತ್ರದಲ್ಲಿ ನಾನು ಅಪ್ಪನ ಮುದ್ದಿನ ಮಗಳು,  ತುಂಬಾ ಟ್ವಿಸ್ಟ್ ಅಂಡ್ ಟರ್ನ್ ಇರುವ ಚಿತ್ರ. ಕೊನೇತನಕ ಏನಾಗುತ್ತೆ ಅಂತ ಗೊತ್ತಾಗಲ್ಲ ಎಂದು ಹೇಳಿದರು. ಉಳಿದಂತೆ ಮೈತ್ರಿ ಜಗ್ಗಿ, ರಕ್ಷಾ ಉಮೇಶ್ ತಮ್ಮ ಪಾತ್ರಗಳ   ಬಗ್ಗೆ ಹೇಳಿಕೊಂಡರು,  ಸುನೇರಿ ಆರ್ಟ್ ಕ್ರಿಯೇಶನ್ಸ್ ಮ‌ೂಲಕ ಪುನೀತ್ ನಾಗರಾಜು, ವಸಂತ್ ರಾವ್ ಎಂ. ಕುಲಕರ್ಣಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಜೋ ಪಿ.ಜಾನ್ ಅವರ ಛಾಯಾಗ್ರಾಹಣ, ಸ್ಯಾಂಡಿ ಅದಾನ್ಕಿ  ಅವರ ಸಂಗೀತ ನಿರ್ದೇಶನ, ಮಧು ತುಂಬಕೆರೆ  ಅವರ ಸಂಕಲನ ಚಿತ್ರಕ್ಕಿದೆ.

  • ಅನೂಪ್ ರೇವಣ್ಣ ಜೊತೆ `ಹೈಡ್ & ಸೀಕ್’ ಆಡಲು ರೆಡಿಯಾದ ಧನ್ಯಾ ರಾಮ್‌ಕುಮಾರ್

    ಅನೂಪ್ ರೇವಣ್ಣ ಜೊತೆ `ಹೈಡ್ & ಸೀಕ್’ ಆಡಲು ರೆಡಿಯಾದ ಧನ್ಯಾ ರಾಮ್‌ಕುಮಾರ್

    `ನಿನ್ನ ಸನಿಹಕೆ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಟ್ಟ ನಟಿ ಧನ್ಯಾ ರಾಮ್‌ಕುಮಾರ್ (Dhanya Ramkumar) ಇದೀಗ ಅನೂಪ್ ರೇವಣ್ಣ (Anoop Revanna) ಜೊತೆ `ಹೈಡ್ ಆ್ಯಂಡ್ ಸೀಕ್’ (Hide & Seek) ಆಡಲು ರೆಡಿಯಾಗಿದ್ದಾರೆ. ಇದೀಗ ಹೈಡ್ & ಸೀಕ್ ಪೋಸ್ಟರ್ (Poster) ಲುಕ್ ರಿವೀಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ.

    ತಮ್ಮ ಮೊದಲ ಸಿನಿಮಾದಿಂದ ಭರವಸೆ ಮೂಡಿಸಿದ ನಟಿ ಧನ್ಯಾ ರಾಮ್‌ಕುಮಾರ್ ಲಕ್ಷö್ಮಣ ಖ್ಯಾತಿಯ ಅನೂಪ್ ರೇವಣ್ಣಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ `ಹೈಡ್ & ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ (Actor Anoop Revanna) ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ `ಹೈಡ್ & ಸೀಕ್’ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ.

    ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ಹೈಡ್ & ಸೀಕ್ ಚಿತ್ರದಲ್ಲಿ ಅನೂಪ್ ರೇವಣ್ಣ ಮತ್ತು ನಾಯಕಿ ಧನ್ಯಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟನ ಹುಟ್ಟುಹಬ್ಬದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ `ಕಬ್ಜ’ ಚಿತ್ರದಲ್ಲಿ ಸ್ಪೆಶಲ್ ರೋಲ್ ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸೀಕ್ರೆಟ್ ರಿವೀಲ್ ಮಾಡಿದ್ದಾರೆ ಅನೂಪ್ ರೇವಣ್ಣ. `ಕಬ್ಜ’ (Kabza)ಹಾಗೂ ‘ಹೈಡ್ ಅಂಡ್ ಸೀಕ್’ ಎರಡೂ ಚಿತ್ರಗಳು ಸ್ಪೆಶಲ್ ಸಿನಿಮಾಗಳಾಗುತ್ತವೆ ಎಂದು ನಟ ಅನೂಪ್ ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    `ಹೈಡ್ ಅಂಡ್ ಸೀಕ್’ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಪುನೀತ್ ನಾಗರಾಜು, ವಸಂತ್ ರಾವ್ ಎಂ.ಕುಲ್ಕರ್ಣಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರ್ತಿದ್ದು, ರಿಜೋ ಪಿ ಜಾನ್ ಛಾಯಾಗ್ರಾಹಣ, ಸ್ಯಾಂಡಿ ಅದ್ದಾನ್ಕಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ ‘ಹೈಡ್ ಅಂಡ್ ಸೀಕ್’ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k