Tag: anti-cattle slaughter

  • ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಿರಲಿ: ಪ್ರಭು ಚವ್ಹಾಣ್

    ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಿರಲಿ: ಪ್ರಭು ಚವ್ಹಾಣ್

    ಬೀದರ್: ಜುಲೈ 21 ರಂದು ಆಚರಿಸುತ್ತಿರುವ ಬಕ್ರೀದ್ ಹಬ್ಬ ಹಾಗೂ ಮತ್ತಿತರೆ ಸಂದರ್ಭಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ.

    ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಗೋವನ್ನು ಮಾತೆ ಎಂದು ಕರೆಯಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವುದರಿಂದ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದನ, ಕರುಗಳು ಹಾಗೂ 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳನ್ನು ಅನಧಿಕೃತವಾಗಿ ವಧೆ ಮಾಡುವುದು ಹಾಗೂ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವಂತಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಕಾಯ್ದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಎಸಿಬಿ ದಾಳಿ – 15 ಲಕ್ಷ ನಗದು, 750 ಗ್ರಾಂ ಚಿನ್ನ, ಅಪಾರ ಆಸ್ತಿ ಪತ್ರ ಪತ್ತೆ

    ಜಾನುವಾರುಗಳ ಸಂರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ತಾಲೂಕುಗಳ ಸಹಾಯಕ ನಿರ್ದೇಶಕರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಜಿಲ್ಲೆಯಿಂದ ಯಾವೊಂದು ಗೋವು ಕಸಾಯಿಖಾನೆಗೆ ಹೋಗದಂತೆ  ಪೊಲೀಸ್  ಇಲಾಖೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

  • ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ಜಾರಿಗೆ ನಿರ್ಧಾರ

    ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ಜಾರಿಗೆ ನಿರ್ಧಾರ

    ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಿವಾದಾತ್ಮಕ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಬಿಎಸ್‍ವೈ ಸರ್ಕಾರ ನಿರ್ಧರಿಸಿದೆ.

    ಇಂದಿನ ಸಂಪುಟ ಸಭೆಯಲ್ಲಿ ವಿಧೇಯಕ ಸುಗ್ರಿವಾಜ್ಞೆ ಹೊರಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಾಳೆ ವಿಧೇಯಕದ ಅಂಕಿತಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಲಿದ್ದೇವೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ರಾಜ್ಯದಲ್ಲಿ ಜಾರಿಯಲ್ಲಿದ್ದು, ಇದಕ್ಕೆ ಇದೀಗ ಹೊಸ ರೂಪ ಕೊಡಲಾಗಿದೆ. ದಂಡ ಹೆಚ್ಚಳ ಸೇರಿದಂತೆ ಕೆಲಸ ಬದಲಾವಣೆ ಮಾಡಲಾಗಿದೆ. ಕೇವಲ ರಾಜಕಾರಣ ಮಾಡುವ ಸಲುವಾಗಿಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಇದಕ್ಕೆ ವಿರೋಧ ಮಾಡುತ್ತಿದ್ದಾರೆ ಎಂದರು.

    ಈ ಬೆನ್ನಲ್ಲೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ನಿರ್ಧಾರವನ್ನು ಖಂಡಿಸುವ ಜೊತೆಗೆ ತಮ್ಮದೆ ಪಕ್ಷದವರನ್ನು ತರಾಟೆಗೆ ತೆಗೆದುಕೊಂಡರು. ನಾನು ದನದ ಮಾಂಸ ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು, ಅದನ್ನ ಕೇಳೋಕೆ ನೀನ್ಯಾರು ಎಂದು ಸದನದಲ್ಲೇ ಕೇಳಿದ್ದೇನೆ. ನಮ್ಮವರು ಇದನ್ನ ಗಟ್ಟಿಯಾಗಿ ಹೇಳಲ್ಲ. ಕೆಲವು ವಿಚಾರಗಳ ಬಗ್ಗೆ ನಮಗೆ ಮೊದಲು ಸ್ಪಷ್ಟತೆ ಇರಬೇಕು ಎಂದು ಕ್ಲಾಸ್ ತೆಗೆದುಕೊಂಡರು.

    ಗೋ ಮಾತೆನಾ ನಾವು ಪೂಜಿಸುತ್ತೇವೆ ಸರಿ. ವಯಸ್ಸಾದ ಹಸು, ಗಂಡು ಕರು ಏನು ಮಾಡೋದು ಹೇಳಿ. ಬೇರೆಯವರು ಏನು ಅಂದ್ಕೋತಾರೆ ಅಂತಾ ನಮ್ಮವರು ಮೌನಕ್ಕೆ ಶರಣಾಗುತ್ತಾರೆ. ಇದನ್ನ ಮೊದಲು ನಾವು ಬಿಡಬೇಕು. ನಮ್ಮ ಕಾರ್ಯಕರ್ತರು ಇದರ ಬಗ್ಗೆ ಜೋರಾಗಿ ಮಾತನಾಡಬೇಕು. ಆಗ ಮಾತ್ರ ಬಿಜೆಪಿ ಸುಮ್ಮನಾಗುತ್ತೆ ಎಂದು ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.