Tag: anti-conversion law

  • ಬಡವರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ: ಸಿಟಿ ರವಿ ವಿರುದ್ಧ ಜಾರ್ಜ್ ವಾಗ್ದಾಳಿ

    ಬಡವರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ: ಸಿಟಿ ರವಿ ವಿರುದ್ಧ ಜಾರ್ಜ್ ವಾಗ್ದಾಳಿ

    ಚಿಕ್ಕಮಗಳೂರು: ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಜನ ಕೊಂಡುಕೊಳ್ಳುತ್ತಾರೆ. ನೀವು ಮೊದಲು ಅವರ ಖಾತೆಗೆ ಹಣ ಹಾಕಿ ಎಂದು ಹೇಳಿಕೆ ನೀಡಿದ್ದ ಶಾಸಕ ಸಿ.ಟಿ ರವಿಗೆ (C.T.Ravi) ಇಂಧನ ಸಚಿವ, ಚಿಕ್ಕಮಗಳೂರು (Chikkamagaluru) ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ (K.J.George) ತಿರುಗೇಟು ನೀಡಿದ್ದಾರೆ.

    ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಾವು ಅಕ್ಕಿಯನ್ನು ಉಚಿತವಾಗಿ ಕೇಳುತ್ತಿಲ್ಲ. ದುಡ್ಡು ಕೊಡುತ್ತೇವೆ ಕೊಡಿ ಎಂದು ಕೇಳಿದ್ದೇವೆ. ಜನರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ. ಭಾರತೀಯ ಆಹಾರ ನಿಗಮದವರೇ ಸ್ಟಾಕ್ ಇದೆ, ಕೊಡುತ್ತೇವೆ ಎಂದು ಲೆಟರ್ ಕೊಟ್ಟಿದ್ದಾರೆ. ಈಗ ಅಕ್ಕಿ ವಾಪಸ್ ಹೋಗಿದೆ. ಕೊಳೆಯಲು ಬಿಟ್ಟಿದ್ದೀರಾ ರವಿಯವರೇ ಎಂದು ಕಿಡಿಕಾರಿದರು. ಇದನ್ನೂ ಓದಿ: ತಾರಕಕ್ಕೇರಿದ ಅಕ್ಕಿ ರಾಜಕೀಯ, ಬಿಜೆಪಿ ನಾಯಕರಿಗೆ ಸಾಕ್ಷಿ ಸಮೇತ ಸಿದ್ದು ತಿರುಗೇಟು

    ಪಾಪ ಸಿ.ಟಿ ರವಿ ಒಬ್ಬ ಪಾರ್ಟಿ ಮ್ಯಾನ್. ಅವರು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅವರಿಗೆ ಇದೆಲ್ಲಾ ಹೇಗೆ ಗೊತ್ತಾಗುತ್ತದೆ. ಅಕ್ಕಿ ಇರುವುದೇ ಬಡವರಿಗೆ ಕೊಡುವುದಕ್ಕೆ. ದುಡ್ಡು ಕೊಡಿ ಎಂದರೆ ಹೇಗೆ? ಜನರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಿಯೋನಿಕ್ಸ್ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಪ್ರಿಯಾಂಕ್ ಖರ್ಗೆ ನಿರ್ದೇಶನ

    ಮತಾಂತರ ನಿಷೇಧ ಕಾಯ್ದೆ (Anti Conversion Law) ಹಿಂಪಡೆದ ಕಾರಣ ಬಿಜೆಪಿಯವರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಕೆಲಸವೇ ವಿರೋಧ ಮಾಡುವುದು. ಕಾಂಗ್ರೆಸ್‌ನ (Congress) ಅಭಿವೃದ್ಧಿ ಹೆಜ್ಜೆಗೆ ವಿರೋಧವೇ ಅವರ ಕೆಲಸ. ಅವರು ಪ್ರತಿಪಕ್ಷ ಅಲ್ಲ. ವಿರೋಧ ಪಕ್ಷ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ

    ಮತಾಂತರ ನಿಷೇಧ ಕಾಯ್ದೆ ಮೊದಲೇ ಇತ್ತು. ಬಲವಂತ ಹಾಗೂ ಆಶ್ವಾಸನೆ ಕೊಟ್ಟು ಮತಾಂತರ ಮಾಡುವುದು ತಪ್ಪು. ಅದು ಹಳೇಯ ಕಾಯ್ದೆ. ಅದನ್ನು ನಾವು ಒಪ್ಪುತ್ತೇವೆ. ಆದರೆ ಅವರು ಕೆಲವು ತಪ್ಪು ಮಾಡಿದ್ದಾರೆ. ಆರೋಪ ಮಾಡಿದವರು ಅದನ್ನು ಸಾಬೀತು ಮಾಡಬೇಕು. ಸಾಕ್ಷಿ ಕೊಟ್ಟು ಹೇಳಬೇಕು. ನನ್ನ ಮೇಲೆ ಆರೋಪ ಮಾಡಿದರೆ ನಾನೇ ಪ್ರೂವ್ ಮಾಡಬೇಕಾ? ಇದು ಯಾವ ಕಾನೂನಿನಲ್ಲಿ ಇದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಶಿವಕುಮಾರ್ ಅಣ್ಣ.. ಭರವಸೆ ಕೊಟ್ಟಿರೋದು ನೀವು, ಮೋದಿ ಅಲ್ಲ: ಅಶೋಕ್ ಕಿಡಿ

    ಬಿಜೆಪಿಯವರು ಈ ರೀತಿ ತುಂಬಾ ತಪ್ಪು ಮಾಡಿದ್ದಾರೆ. ಅದನ್ನು ನಾವು ಸರಿ ಮಾಡುತ್ತೇವೆ. ಇಷ್ಟು ದಿನ ಅವರ ಆಡಳಿತ ಇದ್ದಾಗ ಹೊಸದಾಗಿ ಏನು ಕಂಡುಹಿಡಿದಿದ್ದಾರೆ? ನಮಗೆ ಜವಾಬ್ದಾರಿ ಇದೆ. ಎಲ್ಲರಿಗೂ ಸರಿ ಆಗುವ ಕಾಯ್ದೆ ಜಾರಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಎಳಸು ಅಂದ್ರೆ ಬೇಸರವಿಲ್ಲ, ಚೈಲ್ಡ್ ಆಗಿಯೇ ಪ್ರಶ್ನೆ ಕೇಳ್ತೀನಿ – ಪ್ರತಾಪ್ ಸಿಂಹ

  • ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ (Congress) ಸರ್ಕಾರ ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ಎಂದು ಬಿಜೆಪಿ (BJP) ಶಾಸಕ ಸುನೀಲ್ ಕುಮಾರ್ (Sunil Kumar) ಪ್ರಶ್ನಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ

    ದೇಶಭಕ್ತ ಸ್ವಾತಂತ್ರ‍್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪಾರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ಎಂದು ಪ್ರಶ್ನಿಸಿ ಸಂಪುಟದಲ್ಲಿ ತೆಗೆದುಕೊಂಡ ಎರಡು ನಿರ್ಣಯದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ

    ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ (Bengaluru) ‘ಲೂಲು ಮಾಲ್’ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸ್ಸಿಗರು ಹೇಳಿಕೊಡಬಹುದು. ಮಂಗಳೂರು (Mangaluru) ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯ್ದೆ (Anti Conversion Law) ವಾಪಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡೀ ರಾಜ್ಯಕ್ಕೆ ಹಿಜಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

  • ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ

    ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ

    ಮಂಗಳೂರು: ಬಿಜೆಪಿ ಸರ್ಕಾರ (BJP Government) ದ ಅವಧಿಯಲ್ಲಿ ಜಾರಿಗೆ ಬಂದಿದ್ದ ಮತಾಂತರ ನಿಷೇಧ ಕಾಯಿದೆ (Anti-conversion Law) ಯನ್ನು ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರ (Central Government) ದ ನಿರ್ಧಾರವನ್ನು ಸ್ಪಷ್ಟವಾಗಿ ವಿರೋಧಿಸುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ (Vedavyas Kamath)ಹೇಳಿದ್ದಾರೆ.

    ಮತಾಂತರ ಎಂಬದು ಒಂದು ಸಾಮಾಜಿಕ ಪಿಡುಗು. ಇದು ಸಮಾಜದ ಅವನತಿಗೆ ಕಾರಣವಾಗಬಲ್ಲದು ಎನ್ನುವ ಸದುದ್ದೇಶದಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಬಲವಂತದ ಮತಾಂತರ ನಿಷೇಧಿಸುವ ಕಾಯಿದೆ ಜಾರಿಗೊಳಿಸಲಾಗಿತ್ತು. ಆದರೆ ಈಗ ಆಮಿಷಗಳನ್ನೊಡ್ಡಿ, ಬೆದರಿಸಿ ಮತಾಂತರ ಮಾಡುವವರಿಗೆ ಶಿಕ್ಷೆ ವಿಧಿಸುವ ಕಾನೂನನ್ನು ರದ್ದುಪಡಿಸುವ ನಿರ್ಧಾರ ಮೂಲಕ ಕಾಂಗ್ರೆಸ್ (Congress) ಸಮಾಜಕ್ಕೆ ಏನು ಸಂದೇಶ ನೀಡಲು ಹೊರಟಿದೆ?. ಮುಕ್ತವಾಗಿ ಮತಾಂತರಗೊಳಿಸಲು ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಆಹ್ವಾನ ನೀಡುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

    ಬಲವಂತದಿಂದ ಮತಾಂತರ ಮಾಡುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆಗೊಳಪಡಿಸುವ ಕಾಯಿದೆಯನ್ನು ರದ್ದುಪಡಿಸುವ ಮೂಲಕ ರಾಜ್ಯದಲ್ಲಿ ಮತಾಂತರಿಗಳ ಅಟ್ಟಹಾಸಕ್ಕೆ ರತ್ನ ಕಂಬಳಿ ಹಾಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಿರಂತರವಾಗಿ ಹಿಂದೂ ಸಮಾಜವನ್ನು ಒಡೆಯುವ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಶಾಸಕ ಕಾಮತ್ ಆರೋಪಿಸಿದ್ದಾರೆ.

    ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ ಪಡೆಯುವ ತನ್ನ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಇಡೀ ಹಿಂದೂ ಸಮಾಜ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

  • ಪ್ರತಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ

    ಪ್ರತಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ

    ಬೆಳಗಾವಿ: ಪ್ರತಿಪಕ್ಷಗಳ ತೀವ್ರ ವಿರೋಧದ, ಗದ್ದಲದ ನಡುವೆಯೂ ಮಂಗಳವಾರ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಮಂಗಳವಾರ ಮಂಡಿಸಲಾಯಿತು. ಭೋಜನ ನಂತರ ಕಲಾಪದ ಬಳಿಕ ವಿಧೇಯಕವನ್ನು ದಿಢೀರ್ ವಿಧೇಯಕ ಮಂಡಿಸಲಾಗಿದೆ.

    ಕಾಂಗ್ರೆಸ್ ವಿರೋಧಿಸುತ್ತಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಸೂದೆ ಮಂಡಿಸಲು ಮುಂದಾದರು. ಈ ವೇಳೆ ಮಸೂದೆ ಮಂಡನೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ

    ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಹಕ್ಕು-2021 ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಹೆಚ್ಚುವರಿ ಕಾರ್ಯಸೂಚಿಯಲ್ಲಿ ಮಸೂದೆ ಮಂಡನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ಚರ್ಚೆ ಮಾಡಿ ಎಂದು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಚರ್ಚೆ ಮಾಡಿ ಮೊದಲು ಎಂದು ಮನವಿ ಮಾಡಿದರು. ಆಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕದ್ದು ಮುಚ್ಚಿ ಮಸೂದೆ ಯಾಕೆ ಮಾಡಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು. ಶಿವಕುಮಾರ್ ಮಾತು ವಾಪಸ್ ತೆಗೆದುಕೊಳ್ಳಬೇಕು. ಕದ್ದುಮುಚ್ಚಿ ಮಾಡಿಲ್ಲ, ಅಜೆಂಡಾದಲ್ಲಿ ತಂದೇ ಮಾಡಿರುವುದು ಎಂದ ಸ್ಪೀಕರ್ ಪ್ರತ್ಯುತ್ತರ ನೀಡಿದರು. ಆಗ ವಿಧಾನಸಭೆಯಲ್ಲಿ ಕಾಂಗ್ರೆಸ್ ಗದ್ದಲ ಎಬ್ಬಿಸಿತು. ಸರ್ಕಾರ ಕಳ್ಳತನದಿಂದ ಮಸೂದೆ ಮಂಡನೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು. ಶೇಮ್ ಶೇಮ್ ಎಂದು ಕಾಂಗ್ರೆಸ್ ಸದಸ್ಯರ ಗದ್ದಲ ಸೃಷ್ಟಿಸಿದರು.

    ನಿನ್ನೆ ಮಸೂದೆ ಮುದ್ರಣ ಆಗಿರಲಿಲ್ಲ, ಅದಕ್ಕೆ ನಿನ್ನೆ ಅಜೆಂಡಾದಲ್ಲಿ ಸೇರಿಸಿರಲಿಲ್ಲ. ಇವತ್ತು ಮುದ್ರಣ ಆಗಿ ತಂದರು. ಇವತ್ತೇ ಮಾಡಿ ಅಂತಾ ಸರ್ಕಾರ ಹೇಳಿದ ಮೇಲೆ ಹೆಚ್ಚುವರಿ ಅಜೆಂಡಾದಲ್ಲಿ ಸೇರಿಸಿದ್ದು. ಕದ್ದುಮುಚ್ಚಿ ಮಾಡಿಲ್ಲ, ಚರ್ಚೆ ಮಾಡಿ. ಕಾನೂನಿನ ಪ್ರಕಾರವೇ ಮಸೂದೆ ಮಂಡನೆಗೆ ಅವಕಾಶ ಕೊಡಲಾಗಿದೆ. ನಾಳೆ ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದು ಸ್ಪೀಕರ್ ತಿಳಿಸಿದರು. ಇದನ್ನು ಒಪ್ಪದ ಸಿದ್ದರಾಮಯ್ಯ, ಇದೊಂದು ಕೆಟ್ಟ ಸರ್ಕಾರ, ವಿಧಾನಸಭೆ ನಡೆಸೋದು ಹೀಗೆನಾ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಈ ವೇಳೆ ವಿಧಾನಸಭೆಯಲ್ಲಿ ಅತಿವೃಷ್ಟಿ ಹಾನಿ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಕೊಡಲು ಸ್ಪೀಕರ್ ಸೂಚನೆ ನೀಡಿದರು. ಉತ್ತರ ಕೊಡಲು ಕಂದಾನ ಸಚಿವ ಅಶೋಕ್ ಎದ್ದು ನಿಂತಾಗ, ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ, ಈ ಬಿಲ್ ಅಷ್ಟು ಅರ್ಜೆಂಟ್ ಇತ್ತಾ ಎಂದು ಪ್ರಶ್ನಿಸಿದರು. ಆಗ ಡಿ.ಕೆ.ಶಿವಕುಮಾರ್ ಮಸೂದೆ ಪ್ರತಿಯನ್ನು ಹರಿದು ಹಾಕಿದರು. ಡಿಕೆಶಿ ನೀವು ಹಿರಿಯ ಶಾಸಕರು, ಬಿಲ್ ಹರಿದು ಹಾಕಿದ್ದು ಸರಿಯಲ್ಲ. ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    ಮಸೂದೆಗೆ ಜೆಡಿಎಸ್ ನಿಂದಲೂ ವಿರೋಧ ವ್ಯಕ್ತವಾಯಿತು. ಮತಾಂತರ ನಿಷೇಧ ಮಸೂದೆ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು.

    ಮತಾಂತರ ನಿಷೇಧ ವಿಧೇಯಕದಲ್ಲಿ ಇರುವ ಪ್ರಮುಖ ಅಂಶಗಳೇನು?
    * ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.

    * ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ

    * ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.

    * ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ.

    * ಅಪ್ರಾಪ್ತರು, ಬುದ್ದಿಮಾಂದ್ಯ ವ್ಯಕ್ತಿಗಳು, ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.

    * ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.

    * ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.

    * ಮತಾಂತರದ ಉದ್ದೇಶದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.

    ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು!
    * ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ ಕನಿಷ್ಠ ಮೂವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.

    * ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.

    * ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ 30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

    * ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

    * ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.

    * ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

  • ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    ಬೆಂಗಳೂರು: ಮತಾಂತರ ನಿಷೇಧ ಮಸೂದೆ ಮಂಡನೆ ವಿಚಾರವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಜೊತೆಗೆ ರಾಜಕೀಯವಾಗಿ ಕೆಲ ವಿಷಯಗಳನ್ನು ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರು ಮಾಡಿದ ಸಂವಿಧಾನಕ್ಕೆ ಈ ತೀರ್ಮಾನ ಅನ್ವಯಿಸುವುದಿಲ್ಲ. ಅಂಬೇಡ್ಕರ್ ಅವರು ನಂತರದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು ಎಂದರು.

    ಬೇರೆ ಬೇರೆಯವರು ಬಂದು ಹರೇ ರಾಮ ಹರೇ ಕೃಷ್ಣಾ ಎಂದು ನಮ್ಮ ರಾಜ್ಯದಲ್ಲಿ ಭಜನೆ ಮಾಡುತ್ತಾರೆ. ಇದೊಂದು ಸೆಕ್ಯೂಲರ್ ರಾಜ್ಯವಾಗಿದೆ. ಶಾಂತಿಯ ನೆಲವೀಡಾದ ಕರ್ನಾಟಕದ ಬಗ್ಗೆ ಅಪಾರವಾದ ಪ್ರೀತಿ ಇದೆ. ಕರ್ನಾಟಕದಲ್ಲಿ ಶಾಂತಿ ಕೆಡೆಸಲು ಇದೊಂದು ಪ್ರಯತ್ನವಾಗಿದೆ ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

    ಇಂದು ಎಲ್ಲರಿಗೂ ಸೆಂಟ್ ಜೋಸೆಫ್, ಸೆಂಟ್ ಮಾರ್ಥಸ್‌ನಂತಹ ಕ್ರೈಸ್ತ ಶಾಲೆ ಬೇಕು. ನಾನು ನಮ್ಮ ಹಳ್ಳಿಯಲ್ಲಿ  ಕ್ರೈಸ್ತ್ ಸ್ಕೂಲ್ ನಲ್ಲಿ ಓದಿದೆ. ನನಗೆ ಅಲ್ಲಿ ಯಾವತ್ತೂ ಅವರ ಧರ್ಮದ ಬಗ್ಗೆ ಭೋದಿಸಿಲ್ಲ. ಎಲ್ಲಾದರೂ ಅವರು ಬಲವಂತ ಮಾಡಿರುವ ಉದಾಹರಣೆಯೂ ಇಲ್ಲ. ಸುಮ್ಮನೆ ಮಾನಸಿಕವಾಗಿ ಅವರಿಗೆ ಹಿಂಸೆ ಕೊಡುವ ಕೆಲಸ ಆಗುತ್ತಿದೆ. ಇದು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನಿಲ್ಲದ ಪುಂಡಾಟ – ಕನ್ನಡಿಗರ ಮೇಲೆ ಹಲ್ಲೆಗೈದು ನಿಂದಿಸಿದ ಶಿವಸೇನೆ ಕಾರ್ಯಕರ್ತರು!

    ಎಂಇಎಸ್ ಪುಂಡಾಟಿಕೆಯಲ್ಲಿ ಕಾಂಗ್ರೆಸ್ ಡಬಲ್ ಸ್ಟ್ಯಾಂಡ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಅವರ್ಯಾರೋ ತಲೆ ಕೆಟ್ಟೋಗಿರುವವರು ಮಾಡುತ್ತಾರೆ. ಯಾರೋ ನಾಲ್ಕೈದು ಜನ ಮಾಡಿದ ತಕ್ಷಣ ಬಿಜೆಪಿಯವರು ಮಾಡಿದವರು ಅಂತಾ ಹೇಳೋಕೆ ಆಗಲ್ಲ. ಕುಮಾರಸ್ವಾಮಿ ಅವರು ಬಹಳ ಬುದ್ಧಿವಂತರಿದ್ದಾರೆ ಹಾಗೆಯೇ ಬಹಳ ಶಕ್ತಿವಂತರು. ಹೀಗಾಗಿ ಅವರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

    ಸಿಟಿ ರವಿಗೂ ನನಗೂ ಸಂಬಂಧವಿಲ್ಲ. ಆದರೂ ನನ್ನ ಬಗ್ಗೆ ಮಾತನಾಡುತ್ತಾರೆ. ಸಿಟಿ ರವಿ ಅಲ್ಲ ಪಟಾಕಿ ರವಿ. ಪಟಾಕಿ ಹೊಡಿಯೋದಷ್ಟೇ ಅವರ ಕೆಲಸ ಎಂದರು.

  • ಮತಾಂತರ ಮಸೂದೆ: ದುಸ್ಸಾಹಸಕ್ಕೆ ಕೈ ಹಾಕಿ ಪಾಸ್ ಮಾಡಿದ್ರೆ 2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ – ಸಿದ್ದು

    ಮತಾಂತರ ಮಸೂದೆ: ದುಸ್ಸಾಹಸಕ್ಕೆ ಕೈ ಹಾಕಿ ಪಾಸ್ ಮಾಡಿದ್ರೆ 2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ – ಸಿದ್ದು

    ಬೆಳಗಾವಿ: ದುಸ್ಸಾಹಸಕ್ಕೆ ಕೈ ಹಾಕಿ ಮತಾಂತರ ನಿಷೇಧ ಮಸೂದೆಯನ್ನು ಪಾಸ್‌ ಮಾಡಿದರೆ 2023ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

    ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ಇಂದು ಸುವರ್ಣ ಗಾರ್ಡ್‌ನಲ್ಲಿ ಮತಾಂತರ ನಿಷೇಧ ಮಸೂದೆ ಜಾರಿ ಮಾಡದಂತೆ ಆಗ್ರಹಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿಯವರು ಮತಾಂತರ ನಿಷೇಧ ಮಸೂದೆ ಜಾರಿ ಮಾಡುತ್ತೇವೆ ಎಂದಿದ್ದಾರೆ. ನಮ್ಮ ಪಕ್ಷ ಈ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಇದು ಗಂಭೀರ ವಿಚಾರ, ದೇಶದಲ್ಲಿ ಕೋಮು ಸೌಹಾರ್ದ ಹಾಳು ಮಾಡಲು ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಮಸೂದೆ ಜಾರಿಗೊಳಿಸಲು ಸರ್ಕಾರ ಹೊರಟಿದೆ. ಇದರಲ್ಲಿ ರಾಜ್ಯದ ಹಿತವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ ವ್ಯಂಗ್ಯ

    ನಾವು ಯಾವಾಗಲೂ ನಿಮ್ಮ ಜೊತೆ ಇರುತ್ತೇವೆ. ಯಾವುದೇ ಧರ್ಮದ ಆಯ್ಕೆ ಒಪ್ಪಿ ಪೂಜೆ ಮಾಡುವ ಪ್ರಚಾರ ಮಾಡುವ ಹಕ್ಕು ಸಂವಿಧಾನ ಕೊಟ್ಟಿದೆ. ಯಾವುದೇ ಧರ್ಮದ ಆಧಾರದ ಮೇಲೆ ಸಂವಿಧಾನ ರಚನೆ ಆಗಿಲ್ಲ. ಎಲ್ಲ ಧರ್ಮದವರಿಗೂ ಸಮಾನವಾದ ಸ್ಥಾನ ಕೊಟ್ಟಿದೆ. ಕ್ರೈಸ್ತ ಧರ್ಮದ ಕೊಡುಗೆ ದೇಶಕ್ಕೆ ಅಪಾರವಿದೆ. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದೆ. ಹೀಗಿದ್ದಾಗ ಕಾಲೇಜು, ಆಸ್ಪತ್ರೆಗೆ ಹೋದವರು ಮತಾಂತರ ಆಗಬಹುದಾಗಿತ್ತಲ್ಲಾ ಎಂದು ಪ್ರಶ್ನಿಸಿದ್ದಾರೆ.

    ಬಲವಂತವಾಗಿ ಏನು ಮಾಡುವುದಕ್ಕೆ ಬರುವುದಿಲ್ಲ. ಸಾಮಾಜಿಕ ಅಸಮಾನತೆ ಆರ್ಥಿಕ ಅಸಮಾನತೆ ಸರಿಪಡಿಸಿಕೊಳ್ಳುವುದು ಸರ್ಕಾರದ ಕೆಲಸ. ನಿಮ್ಮನ್ನು ಗುರಿಯಾಗಿಟ್ಟುಕೊಂಡು ಮಸೂದೆ ಮಾಡುತ್ತಿದ್ದಾರೆ. ಮೋದಿ ಬಂದು ದೇಶ ಹಾಳು ಮಾಡಿ ಬಿಟ್ಟಿದ್ದಾರೆ. ಇದು ಆರ್‌ಎಸ್‌ಎಸ್‌ ಹುನ್ನಾರ, ಬಿಜೆಪಿ ಕುತಂತ್ರ ಗೊತ್ತಾಗಿದೆ. ನೀವೇನಾದರು ದುಸ್ಸಾಹಸಕ್ಕೆ ಕೈ ಹಾಕಿ ಮತಾಂತರ ನಿಷೇಧ ಮಸೂದೆ ಪಾಸ್ ಮಾಡಿದರೆ ನಾವು 2023ಕ್ಕೆ ಅಧಿಕಾರಕ್ಕೆ ಬಂದೇ ಬರ್ತೀವಿ. ಇಂತಹದ್ದೆಲ್ಲ ಮಾಡುವುದಕ್ಕೆ ಬಿಡಲ್ಲ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಬಲವಂತದ ಮತಾಂತರವಾಗಿಲ್ಲ ಎಂದು ವರದಿ ನೀಡಿದ್ದ ತಹಶೀಲ್ದಾರ್ ಎತ್ತಂಗಡಿ