Tag: Anti Corruption Bureau

  • ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ

    ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ

    ರಾಯ್ಪುರ್‌: ಮದ್ಯ ಹಗರಣದಲ್ಲಿ (Chhattisgarh Liquor Scam) ಜಾರಿ ನಿರ್ದೇಶನಾಲಯದಿಂದ (Enforcement Directorate) ಅರೆಸ್ಟ್‌ ಆಗಿ, ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಿಎಂ ಭೂಪೇಶ್ ಬಘೇಲ್ (Bhupesh Baghel) ಪುತ್ರ ಚೈತನ್ಯ ಬಘೇಲ್‌ರನ್ನು ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau) ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದೆ.

    ಜುಲೈ 18 ರಂದು ಜಾರಿ ನಿರ್ದೇಶನಾಲಯ ಬಂಧಿಸಿದಾಗಿನಿಂದ ಚೈತನ್ಯ ನ್ಯಾಯಾಂಗ ಬಂಧನದಲ್ಲಿದ್ದರು. ಚೈತನ್ಯ ಸೇರಿದಂತೆ ಮತ್ತೊಬ್ಬ ಆರೋಪಿಯನ್ನು ಎಸಿಬಿ ಬುಧವಾರ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಿ, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಅಕ್ಟೋಬರ್ 6 ರವರೆಗೆ ಎಸಿಬಿ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

    ಕಳೆದ ಜನವರಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಕೋನಗಳ ಕುರಿತು ಎಸಿಬಿ ತನಿಖೆ ನಡೆಸುತ್ತಿದೆ. ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 2019 ಮತ್ತು 2022 ರ ನಡುವೆ 2,500 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಮದ್ಯ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಸುಮಾರು 1,000 ಕೋಟಿ ರೂ.ಗಳನ್ನು ವೈಯಕ್ತಿಕವಾಗಿ ನಿರ್ವಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ.

    ಚೈತನ್ಯ ಅವರ ವಕೀಲ ಫೈಸಲ್ ರಿಜ್ವಿ, ಈ ಬಗ್ಗೆ ಪ್ರತಿಕ್ರಿಯಿಸಿ, ಯಾವುದೇ ಪುರಾವೆಗಳಿಲ್ಲದೆ ಅವರನ್ನು ಬಂಧಿಸಲಾಗಿದೆ. ಎಸಿಬಿ ಮಾಡಿರುವ ಆರೋಪಪಟ್ಟಿಯಲ್ಲಿ ಸುಮಾರು 45 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಅವರಲ್ಲಿ 29 ಜನರನ್ನು ಬಂಧಿಸಲಾಗಿಲ್ಲ. ಇಲ್ಲಿಯವರೆಗೆ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಚೈತನ್ಯ ಅವರ ಹೆಸರಿನ ಉಲ್ಲೇಖವಿಲ್ಲ. ರಾಜಕೀಯ ಒತ್ತಡದಿಂದ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

    ಇ.ಡಿ ಚೈತನ್ಯರನ್ನು ಬಂಧಿಸಿದಾಗ ರಾಜ್ಯದ ರಾಯ್‌ಗಢ ಜಿಲ್ಲೆಯ ತಮ್ನಾರ್ ತಹಸಿಲ್‌ನಲ್ಲಿ ಅದಾನಿ ಗ್ರೂಪ್‌ನಿಂದ ಕಲ್ಲಿದ್ದಲು ಗಣಿ ಯೋಜನೆಗಾಗಿ ಮರಗಳನ್ನು ಕಡಿಯುತ್ತಿರುವ ವಿಷಯವನ್ನು ಡೈವರ್ಟ್‌ ಮಾಡಲು ಹೀಗೆ ಮಾಡಲಾಗಿದೆ ಎಂದು ಭೂಪೇಶ್ ಬಘೇಲ್ ಟೀಕಿಸಿದ್ದರು. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಕೇಸ್‌ | `ಕೈʼ ನಾಯಕ ಭೂಪೇಶ್ ಬಘೇಲ್‌ ಮನೆ ಮೇಲೆ ಸಿಬಿಐ ದಾಳಿ

  • 84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

    84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

    ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ (Telangana) ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ (Anti-Corruption Bureau) ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬುಡಕಟ್ಟು ಕಲ್ಯಾಣ ಇಲಾಖೆಯ (Telangana’s Tribal Welfare Engineering department) ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಲಂಚ ಅಧಿಕಾರಿ ಕೇಳುತ್ತಿದ್ದಾರೆ ಎಂದು ಎಸಿಬಿಗೆ ದೂರು ನೀಡಿದ್ದರು. ಇದರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಬಂಧಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಆದೇಶದ ಮೇರೆಗೆ ವಯನಾಡು ವ್ಯಕ್ತಿಗೆ 15 ಲಕ್ಷ ಪರಿಹಾರ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಜಗಜ್ಯೋತಿ ಅವರನ್ನು ಫಿನಾಲ್ಫ್ಥಲೀನ್ ಪರೀಕ್ಷೆಗೆ ಎಸಿಬಿ ಅಧಿಕಾರಿಗಳು ಒಳಪಡಿಸಿದಾಗ ಅವರು ಲಂಚ ಪಡೆದಿರುವುದು ಸಾಬೀತಾಗಿದೆ. ಅವರು ಕರ್ತವ್ಯ ನಿರ್ವಹಣೆಯಲ್ಲಿ ಅನುಚಿತವಾಗಿ ಮತ್ತು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ.

    ಅಧಿಕಾರಿಯ ಬಳಿ ಇದ್ದ 84,000 ರೂ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನು ಹೈದರಾಬಾದ್‍ನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಎಸಿಬಿ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಡ್ರೈವರ್‌ಲೆಸ್ ಮೆಟ್ರೋದ ಫಸ್ಟ್ ಫೋಟೋ ರಿವೀಲ್

  • ACB ರದ್ದು ತೀರ್ಪಿನ ಅನುಷ್ಠಾನ‌ ಮಾಡಿ ಸರ್ಕಾರದಿಂದ ಆದೇಶ

    ACB ರದ್ದು ತೀರ್ಪಿನ ಅನುಷ್ಠಾನ‌ ಮಾಡಿ ಸರ್ಕಾರದಿಂದ ಆದೇಶ

    ಬೆಂಗಳೂರು: ರಾಜ್ಯದಲ್ಲಿ ಎಸಿಬಿ (ACB) ರದ್ದು ಮಾಡಿ ತೀರ್ಪು ನೀಡಿದ್ದ ಹೈಕೋರ್ಟಿನ (High Court) ಆದೇಶದಂತೆ ಎಸಿಬಿ ರದ್ದನ್ನು ಅನುಷ್ಠಾನ ಮಾಡಿ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

    ಈ ಕುರಿತು ಇಂದು ಅನುಷ್ಠಾನ ಆದೇಶ ನೀಡಿದ ಸರ್ಕಾರ ಲೋಕಾಯುಕ್ತಕ್ಕೆ (Lokayukta) ಎಸಿಬಿಯ ಎಲ್ಲ ಪ್ರಕರಣಗಳೂ ವರ್ಗಾಯಿಸಿ ಆದೇಶ ಹೊರಡಿಸಿದ್ದು, ಎಸಿಬಿಗೆ ನೀಡಿದ್ದ ತನಿಖಾಧಿಕಾರವನ್ನು ಸರ್ಕಾರ ವಾಪಸ್ ಪಡೆದಿದೆ. ಆಗಸ್ಟ್ 11 ರಂದು ಎಸಿಬಿ ರದ್ದು ಮಾಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಇದೀಗ ಹೈಕೋರ್ಟಿನ ತೀರ್ಪನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಈ ಮೂಲಕ ಇದೀಗ ಎಸಿಬಿ ಇತಿಹಾಸ ಪುಟ ಸೇರಿದೆ. ರಾಜ್ಯದಲ್ಲಿ ಆರು ವರ್ಷಕ್ಕೂ ಹೆಚ್ಚು ಕಾಲದಿಂದ ಎಸಿಬಿ ಕಾರ್ಯಚರಣೆ ಮಾಡುತ್ತಿತ್ತು. 2016ರ ಮಾರ್ಚ್ 19 ರಂದು ಎಸಿಬಿಯನ್ನು ಸಿದ್ದರಾಮಯ್ಯ (Siddaramaiah)  ಸರ್ಕಾರ ರಚಿಸಿತ್ತು. ಇದನ್ನೂ ಓದಿ: ಮಹಿಳೆಯೊಬ್ಬರ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಯಿಂದ ಪ್ರತಿಭಟನೆ – ಆಸ್ಪತ್ರೆ ಸೀಲ್

    ಆದೇಶದಲ್ಲಿ ಏನಿದೆ?:
    ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಭ್ರಷ್ಟಾಚಾರ ನಿಗ್ರಹ ರದ್ದುಗೊಳಿಸಿರುವ ಆದೇಶವನ್ನು ಅನುಷ್ಕಾನಗೊಳಿಸಲಾಗುತ್ತಿದೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿ, ಮಾನ್ಯ ಉಚ್ಚ ನ್ಯಾಯಾಲಯದಿಂದ ಹೊರಡಿಸಲಾದ ಆದೇಶದಿಂದಾಗಿ ಹೊರಹೊಮ್ಮಿರುವ ತತ್ಪರಿಣಾಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದನ್ನೂ ಓದಿ: PSI ಅಕ್ರಮದಲ್ಲಿ ಸಚಿವರು, ಶಾಸಕರ ಕೈವಾಡ ಬಯಲಾಗಿರುವುದನ್ನು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ: ಕಾಂಗ್ರೆಸ್ ಪ್ರಶ್ನೆ

    ಉಚ್ಚ ನ್ಯಾಯಾಲಯದ ಆದೇಶದನ್ವಯ ಸರ್ಕಾರದ ಅಧಿಸೂಚನೆ ಪ್ರಕಾರ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪಬಂಧ 2(ಎಸ್)ರನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ, ಪೊಲೀಸ್ ಠಾಣಾಧಿಕಾರವನ್ನು ನೀಡಿ ಆದೇಶಿಸಿದ, ಸರ್ಕಾರದ ಅಧಿಸೂಚನೆಗಳನ್ನು ಪುನರುಜ್ಜೀವನಗೊಳಿಸಿ ಆದೇಶಿಸಿದೆ.

    ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವುದರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಲಾಗಿದ್ದ ತನಿಖಾಧಿಕಾರ, ಪೊಲೀಸ್ ಠಾಣೆಗಳೆಂದು ಘೋಷಿಸಿ ರಾಜ್ಯವ್ಯಾಪ್ತಿ ಅಧಿಕಾರ ನೀಡಿರುವ ಆದೇಶಗಳನ್ನು ಹಿಂಪಡೆದಿರುವುದರಿಂದ ಭಷ್ಟಾಚಾರ ನಿಗ್ರಹ ದಳದಲ್ಲಿ ಪ್ರಸ್ತುತ ಬಾಕಿಯಿರುವ ತನಿಖೆಗಳು, ವಿಚಾರಣೆಗಳು, ಇತರ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸುವುದು ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

    Live Tv
    [brid partner=56869869 player=32851 video=960834 autoplay=true]