Tag: Anu Prabhakar

  • ರಾಜ್ ಭಾರದ್ವಾಜ್ ಕನಸಿನ `ಹಗ್ಗ’ ಈ ವಾರ ತೆರೆಗೆ!

    ರಾಜ್ ಭಾರದ್ವಾಜ್ ಕನಸಿನ `ಹಗ್ಗ’ ಈ ವಾರ ತೆರೆಗೆ!

    ನ್ನಡ ಚಿತ್ರರಂಗದಲ್ಲೀಗ (Sandalwood) ಮತ್ತೊಂದು ಸುತ್ತಿನ ಹೊಸ ಗಾಳಿ ಬೀಸಲಾರಂಭಿಸಿದೆ. ಹೊಸ ಬಗೆಯ, ಭಿನ್ನ ಕಥನಗಳೆಲ್ಲ ದೃಶ್ಯರೂಪ ಪಡೆದುಕೊಳ್ಳುತ್ತಿವೆ. ಈ ಸಾಲಿಗೆ ಸೇರ್ಪಡೆಗೊಳ್ಳುವ ಲಕ್ಷಣಗಳನ್ನು ಹೊಂದಿರುವ ಚಿತ್ರ `ಹಗ್ಗ’ (Hagga Movie) . ಈಗಾಗಲೇ ಸಾಕಷ್ಟು ಕುತೂಹಲ ಹುಟ್ಟು ಹಾಕಿ, ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಇದೇ ಶುಕ್ರವಾರ ಸೆ.20ರಂದು ರಾಜ್ಯಾದ್ಯಂತ ತೆರೆಗಾಣಲಿದೆ.

    ಅಷ್ಟಕ್ಕೂ ಆರಂಭಿಕವಾಗಿ ಈ ಚಿತ್ರ ಸೆಳೆದಿದ್ದದ್ದು ಶೀರ್ಷಿಕೆಯ ಮೂಲಕ. ಆ ನಂತರದಲ್ಲಿ ಟೀಸರ್, ಟ್ರೈಲರ್ ಬಿಡುಗಡೆಗೊಂಡಾಗ ಪ್ರೇಕ್ಷಕರೆಲ್ಲ ತಾನೇ ತಾನಾಗಿ ಇದರತ್ತ ಆಕರ್ಷಿತರಾಗಿದ್ದರು. ಇದೀಗ ಹಗ್ಗದ ಸುತ್ತ ಗಾಢ ನಿರೀಕ್ಷೆ ಮೂಡಿಕೊಂಡಿದೆ. ಒಂದು ರಾತ್ರಿ ಮಗುಚಿಕೊಂಡೇಟಿಗೆ ಹಗ್ಗ ಪ್ರೇಕ್ಷಕರ ಮುಂದೆ ಪ್ರತ್ಯಕ್ಷವಾಗಲಿದೆ. ವಸಂತ ಸಿನಿ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ರಾಜ್ ಭಾರದ್ವಾಜ್ (Raj Bhardwaj) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅವಿನಾಶ್ (Avinash N) ನಿರ್ದೇಶನ ಹಗ್ಗ ಚಿತ್ರದಲ್ಲಿ ಅನು ಪ್ರಭಾಕರ್ (Anu Prabhakar) ವಿಭಿನ್ನ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರದ ಸುತ್ತ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಂಥಾದ್ದೊಂದು ವಿಶೇಷವಾದ ಲುಕ್ಕಿನ ಝಲಕ್ಕುಗಳು ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಇನ್ನುಳಿದಂತೆ ವೇಣು ಮತ್ತು ಹರ್ಷಿಕಾ ಪುಣಚ್ಚ ಕೂಡಾ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ ಪುತ್ರ

    ಹಗ್ಗ ಎಂಬುದು ನಿರ್ಮಾಪಕರಾದ ರಾಜ್ ಭಾರದ್ವಾಜ್ ಕನಸಿನ ಕೂಸು. ಅತೀವ ಸಿನಿಮಾ ವ್ಯಾಮೋಹಿಯಾದ ರಾಜ್ ಭಾರದ್ವಾಜ್ ಇಪ್ಪತ್ತು ವರ್ಷಗಳ ಹಿಂದೆಯೇ ಏನಾದರೊಂದು ಸಾಧಿಸಬೇಕೆಂಬ ಉತ್ಸಾಹದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಒಂದಷ್ಟು ಸಾಹಸಗಳ ಬಳಿಕವೂ ಅದೃಷ್ಟ ಕೈ ಹಿಡಿದಿರಲಿಲ್ಲ. ಎರಡ್ಮೂರು ವರ್ಷ ಪ್ರಯತ್ನಿಸಿ ಕಡೆಗೂ ರಾಜ್ ಬ್ಯುಸಿನೆಸ್‌ನತ್ತ ವಾಲಿಕೊಂಡಿದ್ದರು. ಇವತ್ತಿಗೆ ಇಡೀ ಕರ್ನಾಟಕದ ತುಂಬಾ ನೆಟ್ ವರ್ಕ್ ಹೊಂದಿರುವ ಜಿಮ್ ಸಲಕರಣೆ ಪೂರೈಸುವ ಉದ್ಯಮವನ್ನು ರಾಜ್ ಭಾರದ್ವಾಜ್ ನಡೆಸುತ್ತಿದ್ದಾರೆ. ಇದನ್ನೂ ಓದಿ: ‘ವೆಟ್ಟೈಯಾನ್‌’ಗೆ ಪೈಪೋಟಿ ಕೊಡಲ್ಲ- ‘ಕಂಗುವ’ ಪೋಸ್ಟ್‌ಪೋನ್..!

    ಸಾಮಾನ್ಯವಾಗಿ ನಿರ್ಮಾಪಕರಾದವರಿಗೆ ಕ್ರಿಯೇಟಿವ್ ಸೆಕ್ಷನ್ನಿನ ಗಂಧ ಗಾಳಿ ಇರೋದಿಲ್ಲ ಎಂಬ ಮಾತಿದೆ. ಆದರೆ, ರಾಜ್ ಭಾರದ್ವಾಜ್ ಅದಕ್ಕೆ ಅಪವಾದದಂತಿದ್ದಾರೆ. ಈಗೊಂದಷ್ಟು ವರ್ಷಗಳ ಹಿಂದೆಯೇ ಹಗ್ಗದ ಒಂದೆಳೆ ಅವರೊಳಗೆ ಊಟೆಯೊಡೆಯಲಾರಂಭಿಸಿತ್ತು. ಅದನ್ನು ವರ್ಷಗಟ್ಟಲೆ ಚೆಂದಗೊಳಿಸಿ, ತಯಾರಿ ನಡೆಸಿದ್ದರ ಫಲವಾಗಿಯೇ ಹಗ್ಗ ದೃಶ್ಯ ರೂಪ ಧರಿಸಿದೆ. ಈ ಚಿತ್ರಕ್ಕೆ ಕಥೆ ಬರೆದಿರೋದಲ್ಲದೇ ಅವರೇ ಸ್ಕ್ರೀನ್ ಪ್ಲೇ ಮತ್ತು ಸಂಭಾಷಣೆಯಲ್ಲಿಯೂ ಭಾಗಿಯಾಗಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣ, ಮ್ಯಾಥ್ಯೂ ಮನು ಸಂಗೀತ ನಿರ್ದೇಶನ, ವಿಕ್ರಮ್ ಮೋರ್, ಡಿಫರೆಂಟ್ ಡ್ಯಾನಿ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ ಮತ್ತು ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಚ (Harshika Poonacha), ತಬಲಾ ನಾಣಿ (Tabla Nani), ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯಾ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಇದನ್ನೂ ಓದಿ: ಬಳೆ ಶಾಸ್ತ್ರ ಮಾಡಿಕೊಂಡ ಸೋನಲ್ ಮೊಂಥೆರೋ

  • ಹಾರರ್ ಸಿನಿಮಾದಲ್ಲಿ ‘ಹಗ್ಗ’ ಹಿಡಿದು ಸೂಪರ್‌ ಹೀರೋ ಆದ ಅನು ಪ್ರಭಾಕರ್

    ಹಾರರ್ ಸಿನಿಮಾದಲ್ಲಿ ‘ಹಗ್ಗ’ ಹಿಡಿದು ಸೂಪರ್‌ ಹೀರೋ ಆದ ಅನು ಪ್ರಭಾಕರ್

    ಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್ (Anu Prabhakar), ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ ‘ಹಗ್ಗ’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್.ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರಾದ ಕೆ.ಮಂಜು, ದಯಾಳ್ ಅವರು ಸೇರಿದಂತೆ ಅನೇಕ ಗಣ್ಯರು ‘ಹಗ್ಗ’ (Hagga) ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಅವಿನಾಶ್, ನಾನು ಮೂಲತಃ ಮ್ಯಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು ‘ಹಗ್ಗ’ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ ‘ಹಗ್ಗ’ನೇ ನಮ್ಮ ಚಿತ್ರದ ನಾಯಕ. ಹಾರರ್ ಜಾನರ್‌ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

    ಚಿತ್ರಕ್ಕೆ ನಾನೇ ಕಥೆ ಬರೆದು ನಿರ್ಮಾಣ ಮಾಡಿದ್ದೇನೆ. ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಬಂದಿರುವ ಎಲ್ಲಾ ಗಣ್ಯರಿಗೂ ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ ‘ಹಗ್ಗ’ ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ.

    ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು ಸೂಪರ್ ಹೀರೋ ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಆದರೆ ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್.

    ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಚ‌ (Harshika Poonachcha) ತಿಳಿಸಿದರು. ಇದು ನನ್ನ ಮೊದಲ ಚಿತ್ರ. ನಟನೆಗೆ ತಬಲನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ವೇಣು. ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

    ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ ‘ಹಗ್ಗ’ ಚಿತ್ರಕ್ಕೆ ಕಥೆ ಬರೆದಿದ್ದು,ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.

    ಅನು ಪ್ರಭಾಕರ್ ಜೊತೆ ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

  • ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

    ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

    ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ (Darshan) ಕುರಿತು ಈಗಾಗಲೇ ಸ್ಯಾಂಡಲ್‌ವುಡ್‌ನ ಹಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆನ್ನಲ್ಲೇ, ಈ ಪ್ರಕರಣದ ಬಗ್ಗೆ ನಟಿ ಅನು ಪ್ರಭಾಕರ್ ನೀಡಿರುವ ಹೇಳಿಕೆ ಈಗ ಸದ್ದು ಮಾಡುತ್ತಿದೆ. ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ ಎಂದು ‘ಪಬ್ಲಿಕ್‌ ಟಿವಿ’ಗೆ ಅನು ಪ್ರಭಾಕರ್ (Anu Prabhakar) ಮಾತನಾಡಿದ್ದಾರೆ.

    ಕೊಲೆ ಕೇಸ್‌ನಲ್ಲಿ ನಟ ದರ್ಶನ್ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಕೇಸ್ ಕೋರ್ಟ್ನಲ್ಲಿದೆ. ತನಿಖೆ ನಡೆಯುತ್ತಿದೆ. ಅವರಿಗೆ ಈ ರೀತಿ ಪರಿಸ್ಥಿತಿ ಆಯ್ತು ಅಲ್ಲ ಅಂತ ಬೇಜಾರಿದೆ. ಈ ಪ್ರಕರಣದಿಂದ ಇಡೀ ಚಿತ್ರರಂಗ ಮಂಕಾಗಿದೆ. ಹಾಗೆಯೇ ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ ಎಂದು ಅನು ಪ್ರಭಾಕರ್ ಮಾತನಾಡಿದ್ದಾರೆ. ಇದನ್ನೂ ಓದಿ:2023ರ ಸೈಮಾ ನಾಮಿನೇಷನ್-ರೇಸ್‌ನಲ್ಲಿ ಕಾಟೇರ, ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ

    ನ್ಯಾಯಾಂಗ ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಯಾರಿಗೆ ಅನ್ಯಾಯ ಆಗಿದೆಯೋ ಅವರಿಗೆ ನ್ಯಾಯ ಸಿಗಲಿ ಎಂದು ನಟಿ ಹೇಳಿದ್ದಾರೆ. ಪಬ್ಲಿಕ್ ಫಿಗರ್ ಆಗಿದ್ದಾಗ ಸಾಮಾಜಿಕ ಜವಾಬ್ದಾರಿ ಮುಖ್ಯ, ಆ ಜವಾಬ್ದಾರಿಗೆ ಚ್ಯುತಿ ಬಂದರೆ ಯಾರಿಗೇ ಆಗಿದ್ರೂ ಶಿಕ್ಷೆ ಆಗುತ್ತದೆ. ಇದನ್ನು ಘನ ನ್ಯಾಯಾಲಯ ನೋಡಿಕೊಳ್ಳುತ್ತದೆ. ನಾವು ಮಾತನಾಡುವುದು ಸರಿ ಅಲ್ಲ ಎಂದಿದ್ದಾರೆ ಅನು ಪ್ರಭಾಕರ್.

  • ನಿಮ್ಮಿಂದ ಕಲಿತ ಜೀವನ ಪಾಠವನ್ನು ಎಂದೂ ಮರೆಯಲ್ಲ ಅಮ್ಮ- ಅನು ಪ್ರಭಾಕರ್ ಕಂಬನಿ

    ನಿಮ್ಮಿಂದ ಕಲಿತ ಜೀವನ ಪಾಠವನ್ನು ಎಂದೂ ಮರೆಯಲ್ಲ ಅಮ್ಮ- ಅನು ಪ್ರಭಾಕರ್ ಕಂಬನಿ

    ಬೆಂಗಳೂರು: ಹಿರಿಯ ನಟಿ ಜಯಂತಿ ಸಾವಿನಿಂದಾಗಿ ಸ್ಯಾಂಡಲ್‍ವುಡ್‍ನಲ್ಲಿ ನೀರವ ಮೌನ ಆವರಿಸಿದ್ದು, ಇದೀಗ ಅತ್ತೆ ಅಗಲಿಕೆಯ ಬಗ್ಗೆ ಅನು ಪ್ರಭಾಕರ್ ಭಾವನಾತ್ಮಕ ಸಾಲುಗಳನ್ನು ಬರೆದಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ನಿಮ್ಮ ಜೊತೆ ಕಳೆದ ಪ್ರತಿ ಕ್ಷಣ ಸದಾ ನನ್ನ ಮನಸು ಹಾಗೂ ಹೃದಯದಲ್ಲಿ ಇರುತ್ತದೆ ಅಮ್ಮ. ನಿಮ್ಮಿಂದ ಕಲಿತ ಜೀವನದ ಪಾಠಗಳನ್ನು ನಾನು ಎಂದೂ ಮರೆಯಲ್ಲ. ನಿಮ್ಮ ಆತ್ಮೀಯರನ್ನು ಕಳೆದುಕೊಂಡಾಗ ಈ ವಿಷಯದ ಬಗ್ಗೆ ಎಷ್ಟೋ ಸರಿ ನನ್ನ ಹತ್ತಿರ ಮಾತನಾಡಿದ್ದಿರಿ. ಅಮ್ಮಮ್ಮ ಜೊತೆ ನೆಮ್ಮದಿಯಿಂದ ಇರಿ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಗಲಿದ ಅನೇಕ ಹಿರಿಯ ಕಲಾವಿದರ ಸಾಲಿಗೆ ಜಯಮ್ಮ ಸೇರಿಬಿಟ್ಟರು: ಜಗ್ಗೇಶ್

    ಸ್ಯಾಂಡಲ್‍ವುಡ್‍ನ ಹಿರಿಯ ನಟಿ ಜಯಂತಿ(76) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ ಆಗಿದ್ದರು. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಇದನ್ನೂ ಓದಿ: ಮೋಸವಾಗಿತ್ತು, ಹಸಿ ಹಸಿಯಾಗಿ ಬಲಿಯಾದರು: ಪತ್ರಕರ್ತ ಗಣಪತಿ

    ಬನಶಂಕರಿಯ ಸ್ವಗ್ರಹದಲ್ಲಿ ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಜಯಂತಿ ಅವರು, ಬೆಳಗ್ಗೆ ಎದ್ದೇಳಲೇ ಇಲ್ಲ, ರಾತ್ರಿ ಹೇಗೆ ಈ ಘಟನೆ ಸಂಭವಿಸಿತು ಗೊತ್ತಿಲ್ಲ. ಬೆಳಗ್ಗೆ ಎದ್ದೇಳಿಸೋಕೆ ನೋಡಿದೆವು ನಮಗೆ ಆಗಲೇ ತಿಳಿದಿದ್ದು, ಹೃದಯಾಘಾತವಾಗಿರಬಹುದೇನೋ ಗೊತ್ತಿಲ್ಲ. ಮುಂದಿನ ಕಾರ್ಯಗಳ ಬಗ್ಗೆ ಈಗೇನೂ ಗೊತ್ತಾಗ್ತಾ ಇಲ್ಲ ಎಂದು ಜಯಂತಿ ಪುತ್ರ ಕೃಷ್ಣ ಕುಮಾರ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸಿದ ಜಯಂತಿ ಅವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಛೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‍ನಲ್ಲಿ ಬೆಳೆದರು.

    ಜಯಂತಿಯ ತಾಯಿಯವರಿಗೆ ಇವರನ್ನು ಶಾಸ್ತ್ರೀಯ ನೃತ್ಯಗಾರ್ತಿಯನ್ನಾಗಿ ಮಾಡಬೇಕೆಂಬ ಬಯಕೆ ಇದ್ದುದ್ದರಿಂದ ಚಂದ್ರಕಲಾರವರ ನೃತ್ಯಶಾಲೆಗೆ ಸೇರಿಸಿದರು. ಇಲ್ಲಿ ಜಯಂತಿಯವರ ಸಹಪಾಠಿಯಾಗಿದ್ದ ಮನೋರಮಾರವರು ಮುಂದೆ ಪ್ರಖ್ಯಾತ ತಮಿಳು ನಟಿಯಾದರು. ಕನ್ನಡ ನಿರ್ದೇಶಕ ವೈ.ಆರ್.ಪುಟ್ಟಸ್ವಾಮಿಯವರು ಒಂದು ನೃತ್ಯಾಭ್ಯಾಸದಲ್ಲಿ ಜಯಂತಿಯವರನ್ನು ನೋಡಿ ತಮ್ಮ ‘ಜೇನು ಗೂಡು’ ಚಿತ್ರದಲ್ಲಿ ನಟಿಸುವ ಅವಕಾಶ ಕೊಟ್ಟರು. ಇಲ್ಲಿಂದ ಜಯಂತಿಯವರ ಅದೃಷ್ಟವೇ ಬದಲಾಯಿತು. ಕಮಲಾ ಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದ್ದು ಪುಟ್ಟಸ್ವಾಮಿಯವರೇ. ಕನ್ನಡದಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ ಇವರು ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ.

  • ತಮಗೆ ಪಾಸಿಟಿವ್ ಬಂದು, ಮನೆಯವರೆಲ್ಲರಿಗೂ ನೆಗೆಟಿವ್ ಬರಲು ಕಾರಣ ತಿಳಿಸಿದ ಅನು ಪ್ರಭಾಕರ್

    ತಮಗೆ ಪಾಸಿಟಿವ್ ಬಂದು, ಮನೆಯವರೆಲ್ಲರಿಗೂ ನೆಗೆಟಿವ್ ಬರಲು ಕಾರಣ ತಿಳಿಸಿದ ಅನು ಪ್ರಭಾಕರ್

    – ಕೊರೊನಾ ಬಂದಮೇಲೆ ಏನು ಮಾಡಬೇಕು?

    ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಸಹ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಕುರಿತು ನಟಿ ಅನು ಪ್ರಭಾಕರ್ ಮುಖರ್ಜಿ ಜಾಗೃತಿ ಮೂಡಿಸಿದ್ದು, ತಮಗೆ ಪಾಸಿಟಿವ್ ಬಂದರೂ ಮನೆಯವರಿಗೆ ಹೇಗೆ ನೆಗೆಟಿವ್ ಬಂತು, ಕೊರೊನಾ ಸೋಂಕು ತಗುಲಿದರೆ ಏನು ಮಾಡಬೇಕು ಎಂಬುದರ ಬಗ್ಗೆ ತಿಳಿಸಿದ್ದಾರೆ.

    ಫೇಸ್ಬುಕ್‍ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ನನಗೆ ಪಾಸಿಟಿವ್ ಬಂದು ಮನೆಯವರಿಗೆ ಎಲ್ಲರಿಗೂ ನೆಗೆಟಿವ್ ಬರಲು ಕಾರಣ ನನಗೆ ಯಾವುದೇ ರೀತಿಯ ಕೊರೊನಾ ಲಕ್ಷಣಗಳು ಇರಲಿಲ್ಲ. ಜ್ವರ, ನೆಗಡಿ, ಕೆಮ್ಮು ಏನೂ ಬಂದಿಲ್ಲ. ಆದರೆ ಕಳೆದ ವಾರ ನನಗೆ ಟೇಸ್ಟ್ ಹಾಗೂ ಸ್ಮೆಲ್ ಹೋಗಲು ಶುರುವಾಯಿತು ಎಂದು ತಿಳಿಸಿದ್ದಾರೆ.

    ಕೂಡಲೇ ವೈದ್ಯೆ ನನ್ನ ಅಕ್ಕ ಶೀಲಾ ಧೀಕ್ಷಿತ್‍ಗೆ ಕರೆ ಮಾಡಿ, ಈ ರೀತಿಯಾಗುತ್ತಿದೆ ಎಂದು ವಿವರಿಸಿದೆ. ಆಗ ಅವರು ತಕ್ಷಣವೇ ಟೆಸ್ಟ್ ಮಾಡಿಸಿಕೊ, ಐಸೋಲೇಟ್ ಆಗು, ರಿಸಲ್ಟ್ ಬರುವವರೆಗೆ ಕಾಯಬೇಡ, ಐಸೋಲೇಟ್ ಆಗಿ ಪ್ರತ್ಯೇಕವಾಗಿರು, ಯಾವುದೇ ಕಾರಣಕ್ಕೂ ಕುಟುಂಬದವರೊಂದಿಗೆ ಸೇರಬೇಡ ಎಂದು ಹೇಳಿದರು. ಹಾಗೇ ನಾನು ಸ್ಟ್ರಿಕ್ಟ್ ಆಗಿ ಫಾಲೋ ಮಾಡಿದೆ, ಹೀಗಾಗಿ ನನ್ನ ಕುಟುಂಬದವರಿಗೆ ಪಾಸಿಟಿವ್ ಬರದಿರಲು ಇದೂ ಒಂದು ಕಾರಣ ಇರಬಹುದು ಎಂದು ವಿವರಿಸಿದರು.

    ಸಣ್ಣ ಲಕ್ಷಣ ಕಾಣಿಸಿಕೊಂಡರೂ ತಕ್ಷಣವೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ, ಹಾಗೇ ಐಸೋಲೇಟ್ ಆಗಿ. ಐಸೋಲೇಟ್ ಆಗಲು ಮನೆಯಲ್ಲಿ ಅವಕಾಶ ಇಲ್ಲವಾದಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ತೆರಳಿ. ಟೆಸ್ಟ್ ರಿಸಲ್ಟ್ ಬಂದಮೇಲೆ ಚಿಕಿತ್ಸೆ ಪಡೆದರಾಯಿತು ಎಂದು ಯಾವುದೇ ಕಾರಣಕ್ಕೂ ಕಾಯಬೇಡಿ. ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ, ನಿಮಗೆ ಲಕ್ಷಣ ಏನಿದೆಯೋ ಅದಕ್ಕೆ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ.

    ಆರಂಭದ 4-5 ದಿನಗಳೇ ತುಂಬಾ ಮುಖ್ಯವಾಗುತ್ತದೆ. ಪಲ್ಸ್ ರೇಟ್, ಆಕ್ಸಿಜನ್ ಲೆವೆಲ್, ಬಿಪಿ ಚೆಕ್ ಮಾಡಲು ವೈದ್ಯರ ಅವಶ್ಯಕತೆ ಇರುತ್ತದೆ. ಹೀಗಾಗಿ ತಕ್ಷಣವೇ ನಿಮಗಿರುವ ಲಕ್ಷಣಗಳಿಗೆ ಚಿಕಿತ್ಸೆ ಪಡೆಯಲು ಆರಂಭಿಸಿ, ಟೆಸ್ಟ್ ರಿಸಲ್ಟ್‍ಗಾಗಿ ಕಾಯಬೇಡಿ. ಸರ್ಕಾರ ತನ್ನ ಮಿತಿ ಮೀರಿ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಿಮ್ಮ ಪರಿಸ್ಥಿತಿ ಗಂಭೀರವಾಗಿ ಆಕ್ಸಿಜನ್ ಬೇಕು, ಆಸ್ಪತ್ರೆ ಬೇಕು ಎಂದರೆ ತುಂಬಾ ಕಷ್ಟವಾಗುತ್ತದೆ ಎಂದು ತಿಳಿಸಿದರು.

  • ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್

    ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್

    ಬೆಂಗಳೂರು: ಚಂದನವನದ ನಟಿ ಅನು ಪ್ರಭಾಕರ್‍ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅನು ಪ್ರಭಾಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತುಂಬಾ ಸುರಕ್ಷಿತವಾಗಿ, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡರೂ ಕೊರೊನಾ ಸೋಂಕು ತಗುಲಿದೆ ಎಂದು ಅನು ಪ್ರಭಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

    ಎಷ್ಟೇ ಸುರಕ್ಷಿತವಾಗಿ, ಮುನ್ನೆಚ್ಚರಿಕೆಯಿಂದ ಇದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಕೊಳ್ಳಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

    ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ನನ್ನ ವರದಿ ಇನ್ನೂ ಕೋವಿಡ್ ವಾರ್ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಆಗಿಲ್ಲ. ಜೊತೆಗೆ ನನಗೆ ಬಿಯೂ ನಂಬರ್ ಕೂಡ ಬಂದಿಲ್ಲ. ಬಿಬಿಎಂಪಿ ಕಡೆಯಿಂದ ಯಾವುದೇ ಕರೆ ಬಂದಿಲ್ಲ. ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಆರೋಗ್ಯ ಸಚಿವರಾದ ಸುಧಾಕರ್ ಅವರಿಗೆ ತಿಳಿಸಿದ್ದಾರೆ. ಅನುಪ್ರಭಾಕರ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

  • ಭಾವನ ತೊಡೆ ಮೇಲೆ ಚಿರು, ಅಕ್ಕನ ತೊಡೆ ಮೇಲೆ ನಾನು- ಅಪರೂಪದ ಫೋಟೋ ಹಂಚಿಕೊಂಡ ಅನು ಪ್ರಭಾಕರ್

    ಭಾವನ ತೊಡೆ ಮೇಲೆ ಚಿರು, ಅಕ್ಕನ ತೊಡೆ ಮೇಲೆ ನಾನು- ಅಪರೂಪದ ಫೋಟೋ ಹಂಚಿಕೊಂಡ ಅನು ಪ್ರಭಾಕರ್

    ಬೆಂಗಳೂರು: ಚಿರಂಜೀವಿ ಸರ್ಜಾರ ಅಪರೂಪದ ಫೊಟೋ ಹಂಚಿಕೊಳ್ಳುವ ಮೂಲಕ ನಟಿ ಅನು ಪ್ರಭಾಕರ್ ಭಾವನಾತ್ಮಕ ಸಂದೇಶ ಬರೆದಿದ್ದಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆಯಲಾಗಿದ್ದು, ನನ್ನ ಅಕ್ಕ ನಿವೇದಿತಾ ಹಾಗೂ ಭಾವ ಅರ್ಜುನ್ ಸರ್ಜಾ ಅವರ ನಿಶ್ಚಿತಾರ್ಥದ ಫೋಟೋ. ಭಾವನ ತೊಡೆ ಮೇಲೆ ಚಿರು, ಅಕ್ಕನ ತೊಡೆ ಮೇಲೆ ನಾನು. ಇದೊಂದು ಬೆಲೆ ಕಟ್ಟಲಾಗದ ಫೋಟೋ, ಚಿರು ನೀನು ಸಂತೋಷವಾಗಿ, ಎಲ್ಲಿದ್ದರೂ ಶಾಂತವಾಗಿದ್ದೀಯ ಎಂಬ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

    ಅನು ಪ್ರಭಾಕರ್ ಅವರು ಅಪರೂಪದ ಫೋಟೋ ಹಂಚಿಕೊಳ್ಳುವ ಮೂಲಕ ಚುರಂಜೀವಿ ಸರ್ಜಾ ಅವರನ್ನು ನೆನೆದಿದ್ದಾರೆ. ಅಲ್ಲದೆ ಭಾವನಾತ್ಮಕ ಸಾಲುಗಳನ್ನು ಬರೆದಿದ್ದಾರೆ. ಇದಕ್ಕೆ ಐಶ್ವರ್ಯ ಅರ್ಜುನ್ ಹಾರ್ಟ್ ಎಮೋಜಿಯನ್ನು ಕಮೆಂಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಫೋಟೋಗೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಅವರ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿತ್ತು. ಇದೇ ಬೇಸರದಲ್ಲಿದ್ದ ಕುಟುಂಬಕ್ಕೆ ಇದೀಗ ಪುಟ್ಟ ಮಗುವಿನ ಆಗಮನದಿಂದ ಸಂತಸ ತಂದಿದೆ. ಮೇಘನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

    ಮೇಘನಾ ಅವರು ಅಕ್ಟೋಬರ್ 22 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನೆ ಜನ್ಮ ನೀಡಿದ್ದಾರೆ. ಈಗಾಗಲೇ ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅಭಿಮಾನಿಗಳು ಚಿರುಗೆ ಗಂಡು ಮಗುವಾಗುತ್ತಿದ್ದಂತೆಯೇ ಸಂತಸ ಮುಗಿಲುಮುಟ್ಟಿತ್ತು. ಅಲ್ಲದೆ ಅದಾಗಲೇ ಜ್ಯೂನಿಯರ್ ಚಿರು ಅಂತಾನೇ ಹೆಸರಿಟ್ಟಿದ್ದಾರೆ. ಮಗುವಿನಲ್ಲೇ ಚಿರುನನ್ನು ಕಾಣುತ್ತಿದ್ದಾರೆ.

  • ಸುದೀಪ್ ಓರ್ವ ಅತ್ಯುತ್ತಮ ನಿರ್ದೇಶಕ: ಅನು ಪ್ರಭಾಕರ್

    ಸುದೀಪ್ ಓರ್ವ ಅತ್ಯುತ್ತಮ ನಿರ್ದೇಶಕ: ಅನು ಪ್ರಭಾಕರ್

    ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಓರ್ವ ಉತ್ತಮ ನಿರ್ದೇಶಕ ಎಂದು ನಟಿ ಅನು ಪ್ರಭಾಕರ್ ಮುಖರ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ನಟ ಸುದೀಪ್ ಅನೇಕ ವರ್ಷಗಳ ಹಿಂದೆ ‘ನಂ.73 ಶಾಂತಿ ನಿವಾಸ’ ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಕಂಡಿದ್ದರು. ಅಂದಿಗೆ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇತ್ತೀಚೆಗೆ ‘ನಂ.73 ಶಾಂತಿ ನಿವಾಸ’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಈ ಚಿತ್ರವನ್ನು ನೋಡಿದ ಅಭಿಮಾನಿಯೊಬ್ಬರು ಅನು ಪ್ರಭಾಕರ್‌ಗೆ ಟ್ವೀಟ್ ಮಾಡಿ, ನಿಮ್ಮ ಅಭಿನಯ ಅದ್ಭುತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಅಭಿಮಾನಿಯ ಟ್ವೀಟ್‍ಗೆ ಪ್ರತಿಕ್ರಿಯಿಸಿದ ನಟಿ ಅನು ಪ್ರಭಾಕರ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಂ.73 ಶಾಂತಿ ನಿವಾಸ’ ಸಿನಿಮಾವನ್ನು ತುಂಬಾ ಪ್ರೀತಿಸುತ್ತೇನೆ. ನನ್ನ ಸಿನಿಮಾ ವೃತ್ತಿ ಜೀವನದಲ್ಲಿ ನಾನು ಕೆಲಸ ಮಾಡಿದ ಅತ್ಯುತ್ತಮ ನಿರ್ದೇಶಕರಲ್ಲಿ ಕಿಚ್ಚ ಸುದೀಪ್ ಒಬ್ಬರು. ಈ ಬಗ್ಗೆ ನಾನು ಅನೇಕ ಬಾರಿ ಹೇಳಿದ್ದೇನೆ” ಎಂದು ಖುಷಿಯಿಂದ ಸುದೀಪ್ ನಿರ್ದೇಶನದ ಬಗ್ಗೆ  ಮಾತನಾಡಿದರು.

    ಅನು ಪ್ರಭಾಕರ್ ಟ್ವೀಟ್ ನೋಡಿದ ಸುದೀಪ್, “ನೀವು ಕೂಡ ತುಂಬಾ ಅತ್ಯುತ್ತಮ ನಟಿ ಅನು ಪ್ರಭಾಕರ್. ಹೀಗಾಗಿ ಶೀಫ್ರದಲ್ಲೇ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ಹೌದು. ’73 ಶಾಂತಿ ನಿವಾಸ’ ಸಿನಿಮಾ ನನಗೆ ಯಾವಾಗಲು ಉತ್ತಮ ಆಯ್ಕೆಯಾಗಿದೆ. ನೀವೆಲ್ಲರೂ ಅದ್ಭುತ ನಟರು, ನನಗೆ ಜೀವನ ಕೊಟ್ಟವರು” ಎಂದು ಧನ್ಯವಾದ ತಿಳಿಸಿದ್ದಾರೆ.

    ಅಲ್ಲದೇ ಸಿನಿಮಾದಲ್ಲಿ ಅಭಿನಯಿಸಿದ್ದ ಮಾಸ್ಟ್ ಹಿರಣ್ಯಯ್ಯ ಸರ್ ಮತ್ತು ವಿಶಾಲಿ ಮೇಡಮ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಪ್ರತಿಯೊಬ್ಬ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ ಎಂದು ಸಿನಿಮಾದ ಬಗ್ಗೆ ಸುದೀಪ್ ಮಾತನಾಡಿದ್ದಾರೆ.

    ‘ನಂ.73 ಶಾಂತಿ ನಿವಾಸ’ ಸಿನಿಮಾ 2007ರಲ್ಲಿ ರಿಲೀಸ್ ಆಗಿದ್ದು, ಮನೆಮಂದಿಯೆಲ್ಲ ಕುಳಿತುಕೊಂಡು ನೋಡಬಹುದಾದ ಚಿತ್ರವಾಗಿದೆ. ಹೀಗಾಗಿ ಸಿನಿಮಾ ಪ್ರೇಕ್ಷಕರ ಮೆಚ್ಚಗೆಯನ್ನು ಗಳಿಸಿತ್ತು. ಅಹಂಕಾರದಿಂದ ಇದ್ದ ಒಂದು ಕುಟುಂಬವನ್ನು ಮನೆಗೆ ಬರುವ ಅಡಿಗೆಯವನೊಬ್ಬ ಸರಿಪಡಿಸುವ ಕಥೆಯೇ ‘ಶಾಂತಿ ನಿವಾಸ’ ಚಿತ್ರವಾಗಿದೆ. ಚಿತ್ರದಲ್ಲಿ ಸುದೀಪ್ ಅಡುಗೆ ಭಟ್ಟರಾಗಿ ಕಾಣಿಸಿಕೊಂಡಿದ್ದಾರೆ.

    ಚಿತ್ರದಲ್ಲಿ ಸುದೀಪ್, ಮಾಸ್ಟರ್ ಹಿರಣ್ಯಯ್ಯ, ಶ್ರೀನಿವಾಸ್ ಮೂರ್ತಿ, ರಮೇಶ್ ಭಟ್, ಅನು ಪ್ರಭಾಕರ್, ಕೋಮಲ್, ವೈಶಾಲಿ ಕಾಸರವಳ್ಳಿ, ಚಿತ್ರಾ ಶೆಣೈ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದರು.

  • ವರ್ಷದ ಬಳಿಕ ಅನು ಪ್ರಭಾಕರ್ ಕಮ್ ಬ್ಯಾಕ್

    ವರ್ಷದ ಬಳಿಕ ಅನು ಪ್ರಭಾಕರ್ ಕಮ್ ಬ್ಯಾಕ್

    ಬೆಂಗಳೂರು: ವರ್ಷದ ನಂತರ ನಟಿ ಅನು ಪ್ರಭಾಕರ್ ಮತ್ತೆ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿ ಕೊಟ್ಟಿದ್ದು, ಕಾದಂಬರಿ ಆಧರಿತ ಚಿತ್ರದ ಮೂಲಕ ಕಮ್ ಬ್ಯಾಕ್ ಆಗಿದ್ದಾರೆ. ಅನುಪ್ರಭಾಕರ್ ಅಭಿಮಾನಿಗಳಲ್ಲಿ ಇದು ಅತೀವ ಸಂತಸವನ್ನುಂಟುಮಾಡಿದ್ದು, ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲೆ ನೋಡುವ ಕಾತರದಿಂದ ಕಾಯುತ್ತಿದ್ದಾರೆ. ಅಷ್ಟೇ ವೇಗದಲ್ಲಿ ಸಿನಿಮಾ ಸಹ ಪೂರ್ಣಗೊಂಡಿದ್ದು, ಆಗಲೇ ಡಬ್ಬಿಂಗ್ ಹಂತದಲ್ಲಿದೆ.

    ಆರಂಭದಲ್ಲಿ ತಕ್ಕ ಪಾತ್ರಗಳು ಸಿಗಲಿಲ್ಲ ಎಂದು ಸಿನಿಮಾದಿಂದ ದೂರ ಉಳಿದರೆ, ನಂತರ ಸಂಸಾರ, ಮಕ್ಕಳ ಜವಾಬ್ದಾರಿಯ ಕಾರಣ ನಟನೆಗೆ ಕೆಲವು ವರ್ಷಗಳ ಬಿಡುವು ನೀಡಿದ್ದರು. ಇದೀಗ ಮತ್ತೆ ಪೂರ್ಣ ಪ್ರಮಾಣದಲ್ಲಿ ಅನುಪ್ರಭಾಕರ್ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

    ಲೇಖಕಿ ಸಾರಾ ಅಬೂಬಕರ್ ಅವರ ‘ವಜ್ರಗಳು’ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಸಿನಿಮಾಗೆ ‘ಸಾರಾವಜ್ರ’ ಎಂದು ಹೆಸರಿಡಲಾಗಿದೆ. ನಿರ್ದೇಶಕಿ ಆರ್ನಾ ಸಾಧ್ಯ (ಶ್ವೇತಾ ಶೆಟ್ಟಿ) ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾರಾವಜ್ರ ಮೂಲಕ ಅನುಪ್ರಭಾಕರ್ ನಟನೆಗೆ ಮರಳಿದ್ದಾರೆ. ಕಳೆದ ವರ್ಷ ‘ಅನುಕ್ತಾ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ ಅವರ ಕೊನೆಯ ಸಿನಿಮಾ. ಆದರೆ ವಜ್ರಗಳು ಕಾದಂಬರಿಯ ಜೀವಾಳ `ನಫಿಜಾ’ ಪಾತ್ರ. ಅದೇ ಪಾತ್ರದಲ್ಲಿ ಅನು ಮಿನುಗಿದ್ದಾರೆ ಎನ್ನಲಾಗಿದೆ.

    ಚಿತ್ರ ಡಬ್ಬಿಂಗ್ ಹಂತದಲ್ಲಿದ್ದು, ಸದ್ಯದಲ್ಲೇ ಚಿತ್ರದ ಒಂಬತ್ತು ಹಾಡುಗಳು ಬಿಡುಗಡೆಯಾಗುವ ನಿರೀಕ್ಷೆ ಇದೆ. ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಅನು ಪ್ರಭಾಕರ್ ಎರಡು ದಶಕಗಳಲ್ಲಿ ಸುಮಾರು 80 ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ರಘು ಮುಖರ್ಜಿಯವರನ್ನು ಕೈಹಿಡಿದಿರುವ ಅವರಿಗೆ ಒಂದೂವರೆ ವರ್ಷದ ಮಗಳಿದ್ದಾಳೆ. ತಾಯ್ತನದ ಖುಷಿಯಲ್ಲಿರುವ ಅವರಿಗೆ, ಈಗ ಮುಸ್ಲಿಮ್ ಕುಟುಂಬವೊಂದರ ಕಥೆ ಹೇಳುವ ‘ನಫಿಜಾ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಚಿತ್ರದ ಕುರಿತು ಮಾತನಾಡಿರುವ ಅನು ಪ್ರಭಾಕರ್, ಖ್ಯಾತ ಲೇಖಕಿಯ ಕಾದಂಬರಿಯ ಕಥಾವಸ್ತುವಿಗೆ ನಟನೆಯ ಮೂಲಕ ನ್ಯಾಯ ಸಲ್ಲಿಸಲು ಸಾಧ್ಯವೇ ಎನ್ನುವ ಅಳುಕು ಆರಂಭದಲ್ಲಿತ್ತು. ಆದರೆ ಇಂತಹ ಪಾತ್ರವೊಂದು ವೃತ್ತಿ ಬದುಕಿನಲ್ಲಿ ಸಿಗುತ್ತಿರುವುದು ಸೌಭಾಗ್ಯ ಹೀಗಾಗಿ ಪಾತ್ರ ಒಪ್ಪಿಕೊಂಡೆ ಎಂದರು.

    ಈ ಚಿತ್ರದಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟ ರಮೇಶ್ ಭಟ್ ಮಾತನಾಡಿ, ಸಿನಿಮಾ ಮೂಲಕ ಕಾದಂಬರಿಗೆ ನ್ಯಾಯ ಕೊಡುವುದು ಕಷ್ಟದ ಕೆಲಸ. ಅದನ್ನು ನಿರ್ದೇಶಕಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಚಿತ್ರವು ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ಎನಿಸಲಿದೆ ಎಂದಿದ್ದಾರೆ.

    ನಟ, ನಿರೂಪಕ ರೆಹಮಾನ್ ಹಾಸನ್, ಈ ಚಿತ್ರದಲ್ಲಿ ಬದ್ರುದ್ದಿನ್ ಪಾತ್ರ ನಿಭಾಯಿಸಿದ್ದಾರೆ. ದೇವೇಂದ್ರ ರೆಡ್ಡಿ ಸಂಭ್ರಮ ಡ್ರೀಮ್ ಹೌಸ್ ಲಾಂಛನದಡಿ ಚಿತ್ರ ನಿರ್ಮಿಸಲಾಗಿದೆ. ನರೇಂದ್ರ ಬಾಬು ಚಿತ್ರಕಥೆ, ಪತ್ರಕರ್ತ ಬಿ.ಎಂ. ಹನೀಫ್ ಸಾಹಿತ್ಯ ಹಾಗೂ ಪರಂ ಛಾಯಾಗ್ರಹಣ ನಿರ್ವಹಿಸಿದ್ದಾರೆ. ಒಂಬತ್ತು ಹಾಡುಗಳಿಗೆ ವಿ.ಮನೋಹರ್ ಸಂಗೀತ ಸಂಯೋಜನೆ ಇದೆ.

  • ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ ಅನುಕ್ತ ಟ್ರೈಲರ್!

    ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ ಅನುಕ್ತ ಟ್ರೈಲರ್!

    ಚಿತ್ರೀಕರಣ ಆರಂಭವಾದಾಗಿನಿಂದಲೂ ಅನುಕ್ತ ಚಿತ್ರ ಒಂದಲ್ಲಾ ಒಂದು ಕಾರಣಕ್ಕಾಗಿ ಸದಾ ಸುದ್ದಿಯಲ್ಲಿದೆ. ವಿಭಿನ್ನವಾದ ಪೋಸ್ಟರ್ ಗಳು, ಅಷ್ಟೇ ಚಕಿತಗೊಳಿಸೋ ಸುದ್ದಿಗಳ ಮೂಲಕ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದನ್ನು ಜನ ಯಾವ ಪರಿಯಾಗಿ ಎಂಜಾಯ್ ಮಾಡುತ್ತಿದ್ದಾರೆಂದರೆ, ಅತ್ಯಂತ ಕಡಿಮೆ ಅವಧಿಯಲ್ಲಿಯೇ ಈ ಟ್ರೈಲರ್ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ.

    ನಿಗೂಢ ಕೊಲೆಯ ಸುತ್ತ ಜರುಗೋ ಕಥಾ ಹಂದರವನ್ನ ಅನುಕ್ತ ಹೊಂದಿದೆ ಎಂಬ ವಿಚಾರ ಈ ಟ್ರೈಲರ್ ನಿಂದ ಜಾಹೀರಾಗಿದೆ. ಈ ಮೂಲಕವೇ ಅನುಕ್ತ ಎಂಥಾ ಸಂಚಲನ ಸೃಷ್ಟಿಸಿದೆ ಎಂದರೆ ರಂಗಿತರಂಗದಂಥಾದ್ದೇ ಮತ್ತೊಂದು ಸೂಪರ್ ಹಿಟ್ ಚಿತ್ರವಾಗಿ ಅನುಕ್ತ ದಾಖಲಾಗಲಿದೆ ಅನ್ನೋ ಮಾತುಗಳೂ ಕೇಳಿ ಬರುತ್ತಿವೆ. ಪಿ.ಆರ್.ಕೆ ಆಡಿಯೋ ಕಂಪೆನಿ ಕಡೆಯಿಂದ ಬಿಡುಗಡೆಯಾಗಿರೋ ಈ ಟ್ರೈಲರ್ ಈಗ ವೇಗವಾಗಿ ವೀಕ್ಷಣೆಯ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ.

    ಅಶ್ವತ್ಥ್ ಸ್ಯಾಮುಯಲ್ ನಿರ್ದೇಶನದ, ಹರೀಶ್ ಬಂಗೇರ ನಿರ್ಮಾಣ ಮಾಡಿರೋ ಅನುಕ್ತ ಚಿತ್ರವೀಗ ಬೇಗನೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಯ ಹಾದಿಯಲ್ಲಿದೆ. ಹೀಗೆ ವೇಗವಾಗಿ ಚಿತ್ರೀಕರಣ ಮುಗಿಸಿಕೊಳ್ಳೋದಕ್ಕೆ ಕಾರಣ ಪ್ಲಾನಿಂಗ್. ಕೇವಲ ಇಪ್ಪತ್ತೆಂಟು ದಿನಗಳಲ್ಲಿ ಚಿತ್ರೀಕರಣ ಸಮಾಪ್ತಿ ಮಾಡಿಕೊಂಡಿದ್ದರ ಹಿಂದೆ ಎಂಟು ತಿಂಗಳ ಶ್ರಮವಿದೆಯಂತೆ. ತುಳುನಾಡಿನ ಸಂಸ್ಕøತಿ ಅಂದರೆ ಮೊಗೆದಷ್ಟೂ ಮುಗಿಯದ ಅಕ್ಷಯ ಪಾತ್ರೆಯಂಥಾದ್ದು. ಈ ಬಗ್ಗೆ ಪ್ರೇಕ್ಷಕರ ಕೌತುಕ ತಣಿಯುವುದೇ ಇಲ್ಲ. ಅಂಥಾದ್ದರಲ್ಲಿ ಅದನ್ನೇ ಜೀವಾಳವಾಗಿಸಿಕೊಂಡಿರೋ ಅನುಕ್ತ ಬಗ್ಗೆ ಸಹಜವಾಗಿಯೇ ಪ್ರೇಕ್ಷಕರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಬೇರೆ ಭಾಷೆಗಳಿಗೂ ರೀಮೇಕ್ ಗಾಗಿ ಬಹು ಬೇಡಿಕೆ ಹೊಂದಿರುವ ಅನುಕ್ತ ಬಿಡುಗಡೆಗೆ ಸಜ್ಜುಗೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv