Tag: ANUGRAHA SCHEME

  • `ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರ ಆದೇಶ

    `ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರ ಆದೇಶ

    ಚಿತ್ರದುರ್ಗ: `ಅನುಗ್ರಹ’ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.

    SHEEP'S DIED

    ಪಶುಸಂಗೋಪನೆ ಇಲಾಖೆಯ `ಅನುಗ್ರಹ’ ಯೋಜನೆ ಮುಂದುವರಿಸಲು ಸರ್ಕಾರದ ಆದೇಶವಾಗಿದೆ ಎಂದು ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಆಗ್ಲೇಬೇಕುಂತ ರಗ್ಗು ಹೊದ್ದು ಮಲಗಿದ್ದ ಸಿದ್ದರಾಮಯ್ಯರನ್ನು ಕರ್ಕೊಂಡು ಬಂದಿದ್ದು ನಾನು: ಹೆಚ್‍ಡಿಕೆ

     

    ಇಂದು ಬೆಳಗ್ಗೆ ಪಶುಪಾಲನೆ ಇಲಾಖೆಯ ವರದಿ ಪಡೆಯುವ ಸಂದರ್ಭದಲ್ಲಿ ಅನುಗ್ರಹ ಯೋಜನೆಯನ್ನು ಮುಂದುವರಿಸಲು ಸರ್ಕಾರ ಆದೇಶ ಮಾಡಿದೆ. ಆಕಸ್ಮಿಕವಾಗಿ ಮೃತಪಟ್ಟ ಕುರಿಗಳಿಗೆ 5 ಸಾವಿರ, ದನಗಳಿಗೆ 10 ಸಾವಿರ ರೂ. ಹಾಗೂ ಕುರಿ ಮರಿಗಳಿಗೆ 2,500 ರೂ. ನೀಡಲು ಆದೇಶದಲ್ಲಿ ತಿಳಿಸಲಾಗಿದೆ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ.

    MANJUNATH PRASAD

    ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಕುರಿಗಾಹಿಯೊಬ್ಬರ 35 ಕುರಿಗಳು ಮೃತಪಟ್ಟಿರುವ ಫೋಟೊವನ್ನು ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದ ಸಿದ್ದರಾಮಯ್ಯ ಅವರು, ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿ ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಅನುಗ್ರಹ ಯೋಜನೆಗೆ ಹಣ ಒದಗಿಸಿ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದರು.