Tag: anupam kher

  • ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ಅನುಪಮ್ ಖೇರ್: ಇದು ಅವರ 534ನೇ ಚಿತ್ರ

    ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ಅನುಪಮ್ ಖೇರ್: ಇದು ಅವರ 534ನೇ ಚಿತ್ರ

    ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿರುವುದಾಗಿ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಘೋಷಿಸಿದ್ದಾರೆ. ಇಂಥದ್ದೊಂದು ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ ಎಂದಿರುವ ಅವರು, ಇದು ಅವರ 534ನೇ ಸಿನಿಮಾ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ಆಕರ್ಷಕ ಮತ್ತು ಸ್ಫೂರ್ತಿದಾಯಕ ಎಂದು ಹೆಮ್ಮೆಪಟ್ಟಿದ್ದಾರೆ. ಶೂಟಿಂಗ್ ಸೆಟ್ ನಿಂದಲೇ ಕ್ಲ್ಯಾಪ್ ಬೋರ್ಡ್ ಹಿಡಿದುಕೊಂಡಿರುವ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅಲ್ಲದೇ, ಈ ಸಿನಿಮಾ ವಿವಾದವಾದಾಗ ನಿರ್ದೇಶಕರ ಪರವಾಗಿ ನಿಂತಿದ್ದರು. ಈಗ ಮತ್ತೆ ವಿವೇಕ್ ಜೊತೆ ಮತ್ತೊಂದು ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ಈ ನಿರ್ದೇಶಕರ ಜೊತೆ ಮತ್ತೆ ಮತ್ತೆ ಸಿನಿಮಾ ಮಾಡುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಮತ್ತೆ ಮತ್ತೆ ಈ ರೀತಿಯ ಚಿತ್ರಗಳಲ್ಲಿ ಕಾಣಿಸಿಕೊಳ್ಳಲು ಹೆಮ್ಮೆ ಪಡುತ್ತೇನೆ ಎಂದೂ ಅವರು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ಸದ್ಯ ದಿ ವಾಕ್ಸಿನ್ ವಾರ್ ಸಿನಿಮಾದ ಶೂಟಿಂಗ್ ಲಖನೌದಲ್ಲಿ ನಡೆದಿದೆ. ಈ ಸಿನಿಮಾದಲ್ಲಿ ನಾಯಕನಾಗಿ ನಾನಾ ಪಾಟೇಕರ್ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಗೋಪಾಲ್ ಸಿಂಗ್, ದಿವ್ಯಾ ಸೇಠ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ ವಿವೇಕ್ ಅಗ್ನಿಹೋತ್ರಿ.

    Live Tv
    [brid partner=56869869 player=32851 video=960834 autoplay=true]

  • ಕಂಗನಾ ಮತ್ತು ಜಯಾ ಬಚ್ಚನ್ ಮುಖಾಮುಖಿ: ಕಂಗನಾಳ ಮುಖ ಕೂಡ ನೋಡಲಿಲ್ಲ ಜಯಾ

    ಕಂಗನಾ ಮತ್ತು ಜಯಾ ಬಚ್ಚನ್ ಮುಖಾಮುಖಿ: ಕಂಗನಾಳ ಮುಖ ಕೂಡ ನೋಡಲಿಲ್ಲ ಜಯಾ

    ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಮತ್ತು ಜಯಾ ಬಚ್ಚನ್ ನಡುವೆ ಈ ಹಿಂದೆ ಮಾತಿನ ಸಮರ ನಡೆದದ್ದನ್ನು ಬಾಲಿವುಡ್ ಯಾವತ್ತೂ ಮರೆಯುವುದಿಲ್ಲ. ಸುಶಾಂತ್ ಸಿಂಗ್ ನಿಧನಾ ನಂತರ ಕಂಗನಾ ಇಡೀ ಬಾಲಿವುಡ್ ಅನ್ನೇ ದೂಷಿಸಿದ್ದರು. ಬಾಲಿವುಡ್ ಮಾಫಿಯಾ, ವಂಶಪಾರಂಪರೆ ಸೇರಿದಂತೆ ಹಲವು ವಿಚಾರಗಳನ್ನು ಅವರು ಪ್ರಶ್ನಿಸಿದ್ದರು. ಬಾಲಿವುಡ್ ಕೆಲವರ ಹಿಡಿತದಲ್ಲಿರುವ ಮತ್ತು ಅವರು ತಮ್ಮ ಮಕ್ಕಳನ್ನು ಮಾತ್ರ ಬೆಳೆಸುತ್ತಾರೆ ಎಂದೆಲ್ಲ ಮಾತನಾಡಿದ್ದರು. ಕಂಗನಾ ಅವರ ಈ ಮಾತು ಜಯಾ ಬಚ್ಚನ್ ಅವರನ್ನು ಕೆರಳಿಸಿತ್ತು.

    ಬಾಲಿವುಡ್ ಅನ್ನು ಕೀಳು ಮಟ್ಟದಲ್ಲಿ ಜರಿದಿದ್ದ ಕಂಗನಾ ವಿರುದ್ಧ ಜಯಾ ಬಚ್ಚನ್ (Jaya Bachchan) ಕೂಡ ಮಾತನಾಡಿದ್ದರು. ಕಂಗನಾ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತೆ ವಿಶ್ಲೇಷಿಸಿದ್ದರು. ಈ ಮಾತಿಗೆ ಕಂಗನಾ ಕೂಡ ಅಷ್ಟೇ ಖಡಕ್ಕಾಗಿಯೇ ಉತ್ತರ ನೀಡಿದ್ದರು. ಹೀಗಾಗಿ ಇವರ ಮಾತಿನ ಏಟು-ತಿರುಗೇಟು ಸಾಕಷ್ಟು ಸುದ್ದಿ ಮಾಡಿತ್ತು. ಆ ನಂತರ ಇದೇ ಮೊದಲ ಬಾರಿಗೆ ಜಯಾ ಮತ್ತು ಕಂಗನಾ ಊಂಚೈ ಸಿನಿಮಾದ ಸ್ಪೆಷಲ್ ಸ್ಕ್ರೀನ್ ನಲ್ಲಿ ಮುಖಾಮುಖಿ ಆಗಿದ್ದಾರೆ. ಇದನ್ನೂ ಓದಿ:ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

    ಕಂಗನಾ ಎದುರಿಗೆ ಸಿಕ್ಕರು ಜಯಾ ಮಾತ್ರ ಅವರನ್ನು ಕಣ್ಣೆತ್ತಿಯೂ ನೋಡಲಿಲ್ಲ. ಹಾಗೆಯೇ ಅಲ್ಲಿಂದ ಪಾಸ್ ಆಗಿದ್ದಾರೆ. ಕಂಗನಾ ಕುರಿತು ಅನುಪಮ್ ಖೇರ್ (Anupam Kher) ಏನೋ ಹೇಳುವುದಕ್ಕೆ ಬಂದರೂ, ಜಯಾ ಅದಕ್ಕೆ ಆಸ್ಪದ ನೀಡದೇ ಕಂಗನಾಳನ್ನು ದಾಟಿಕೊಂಡು ಹೋಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಕಂಗನಾಳಿಗೆ ಮುಜುಗರ ತರುವಂತೆ ಈ ವಿಡಿಯೋವನ್ನು ಟ್ರೋಲ್ ಮಾಡಲಾಗುತ್ತಿದೆ.

    ಜಯಾ ಅವರನ್ನು ಕಂಗನಾ ನೋಡಿದರೂ, ಜಯಾ ಮಾತ್ರ ನೋಡಿಯೂ ನೋಡದವರಂತೆ ಅಲ್ಲಿಂದ ಹೊರಡುತ್ತಾರೆ. ಅಲ್ಲದೇ ಕಂಗನಾ ಹೆಸರು ಕೇಳಿದ ಮೇಲೂ ಅವರು ಅದರತ್ತ ಲಕ್ಷ್ಯ ಕೊಡದೇ ದಾಟಿಕೊಂಡು ಹೊರಟೇ ಬಿಡುತ್ತಾರೆ. ಅಲ್ಲಿಗೆ ಕಂಗನಾ ಮೇಲಿನ ಕೋಪ ಇನ್ನೂ ಇಳಿದಿಲ್ಲ ಎನ್ನುವುದನ್ನು ಜಯಾ ಸಾಬೀತು ಪಡಿಸಿದ್ದಾರೆ. ಈ ವಿಡಿಯೋ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ವೈ ಪ್ಲಸ್ ಭದ್ರತೆಗೆ ಸರಕಾರ ಚಿಂತನೆ

    ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ವೈ ಪ್ಲಸ್ ಭದ್ರತೆಗೆ ಸರಕಾರ ಚಿಂತನೆ

    ಬಾಲಿವುಡ್ ನಟರಿಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗಿರುವ ಕಾರಣದಿಂದಾಗಿ ಮಹಾರಾಷ್ಟ್ರ ಸರಕಾರ ತಲೆಕೆಡಿಸಿಕೊಂಡು ಕೂತಿದೆ. ಸಲ್ಮಾನ್ ಖಾನ್ ಮಾತ್ರವಲ್ಲ ಅನುಪಮ್ ಕೇರ್, ಅಕ್ಷಯ್ ಕುಮಾರ್ (Akshay Kumar) ಸೇರಿದಂತೆ ಹಲವು ಕಲಾವಿದರಿಗೆ ನಾನಾ ಕಡೆಗಳಿಂದ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಭದ್ರತೆ (Security) ಕೊಡಲು ಸರಕಾರ ಚಿಂತನೆ ನಡೆಸಿದೆ. ಅದರಲ್ಲೂ ಸಲ್ಮಾನ್ ಖಾನ್ (Salman Khan) ಅವರಿಗೆ ಸಿಧು ಮೂಸೆವಾಲ ಹತ್ಯೆಕಾರರು ಬೆದರಿಕೆ ಹಾಕಿರುವುದರಿಂದ ಅವರಿಗೆ ವೈ ಪ್ಲಸ್ ಶ್ರೇಣಿಯ ಭದ್ರತೆ ನೀಡಲು ಮಹಾರಾಷ್ಟ್ರ ಸರಕಾರ (Maharashtra Govt) ಸಿದ್ಧವಾಗಿದೆ.

    ಕಳೆದ ಮೇ 29 ರಂದು ಪಂಜಾಬ್ ಖ್ಯಾತ ಗಾಯಕ ಸಿಧು ಮೂಸೆವಾಲ  ಅವರನ್ನು ಹತ್ಯೆ ಮಾಡಲಾಯಿತು. ಈ ಹತ್ಯೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ಇದೆ ಎಂದು ಹೇಳಲಾಯಿತು. ಕೆಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿರುವ ಆತಂಕಕಾರಿ ವಿಚಾರ ಹೊರಬಂತು. ಅಲ್ಲದೇ, ಇದೇ ಗ್ಯಾಂಗ್ ಸಲ್ಮಾನ್ ಖಾನ್ ತಂದೆಗೂ ಪತ್ರ ಬರೆದು ಜೀವ ಬೆದರಿಕೆ ಹಾಕಿತ್ತು. ಈ ಬೆದರಿಕೆಯ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆಯನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ:ಮಲಯಾಳಂಗೆ ಹಾರಿದ ರಾಜ್ ಬಿ. ಶೆಟ್ಟಿ : ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ನಾಯಕಿ

     

    ಈಗಾಗಲೇ ಸಲ್ಮಾನ್ ಖಾನ್ ಗೆ ಗನ್ ಇಟ್ಟುಕೊಳ್ಳಲು ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವೈ ಪ್ಲಸ್ ಭದ್ರತೆಯನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಶ್ರೇಣಿಯ ಭದ್ರತೆಯಲ್ಲಿ ನಾಲ್ಕು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುತ್ತಾರೆ. ಸಲ್ಮಾನ್ ಖಾನ್ ಗೆ ವೈ ಪ್ಲಸ್ ಭದ್ರತೆ ನೀಡಿದರೆ, ಅಕ್ಷಯ್ ಕುಮಾರ್ ಮತ್ತು ಅನುಪಮ್ ಖೇರ್ (Anupam Kher) ಅವರಿಗೆ ಎಕ್ಸ್ ಕೆಟಗರಿ ಭದ್ರತೆ ನೀಡಲು ಸರಕಾರ ಸೂಚಿಸಿದೆ. ಅಲ್ಲದೇ ಭದ್ರತಾ ಸಿಬ್ಬಂದಿ ವೆಚ್ಚವನ್ನು ನಟರೇ ಭರಿಸಬೇಕು ಎಂದು ಸೂಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಡೆ

    ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಡೆ

    ಬಾಲಿವುಡ್ ಖ್ಯಾತತಾರೆ ಕಂಗನಾ ರಣಾವತ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಎಮರ್ಜೆನ್ಸಿ ಸಿನಿಮಾದ ಒಂದೊಂದು ಪಾತ್ರಗಳು ರಿವಿಲ್ ಆಗುತ್ತಿವೆ. ಕಂಗನಾ ರಣಾವತ್ ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಅನುಪಮ್ ಖೇರ್ ಅವರು ಜಯಪ್ರಕಾಶ್ ನಾರಾಯಣ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಪ್ರಮುಖ ಪಾತ್ರದ ಕಲಾವಿದರ ಘೋಷಣೆ ಆಗಿದ್ದು, ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಡೆ ನಟಿಸಲಿದ್ದಾರೆ.

    ಇದು ತರ್ತುಪರಿಸ್ಥಿತಿಯ ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ. ಎಮರ್ಜೆನ್ಸಿ ವೇಳೆಯಲ್ಲಿ ಭಾರತದ ರಾಜಕೀಯ ರಂಗದಲ್ಲಿದ್ದ ಪ್ರಮುಖ ರಾಜಕಾರಣಿಗಳೆಲ್ಲ ಈ ಸಿನಿಮಾದಲ್ಲಿ ಪಾತ್ರವಾಗಿ ಇರಲಿದ್ದಾರಂತೆ. ಈ ಅಷ್ಟೂ ಪಾತ್ರಗಳು ಕಂಗನಾ ರಣಾವತ್ ನಿರ್ವಹಿಸುತ್ತಿರುವ ಇಂದಿರಾ ಗಾಂಧಿ ಪಾತ್ರದ ಸುತ್ತ ಗಿರಕಿ ಹೊಡೆಯಲಿವೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ರಾಕೇಶ್ ಬಾಪಟ್ ಜೊತೆ ಬ್ರೇಕಪ್ ಮಾಡಿಕೊಂಡ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ

    ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ಪ್ರಮುಖ ಪಾತ್ರ ಮಾಡುವುದರ ಜೊತೆಗೆ ಕಂಗನಾ, ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಹಾಗಾಗಿ ಅವರೇ ಕಲಾವಿದರ ಆಯ್ಕೆಯನ್ನೂ ಮಾಡುತ್ತಿದ್ದಾರೆ. ತಮ್ಮನ್ನು ಅಟಲ್ ಬಿಹಾರಿ ವಾಜಪೇಯಿ ಪಾತ್ರಕ್ಕೆ ಆಯ್ಕೆ ಮಾಡಿದ್ದಕ್ಕೆ ಶ್ರೇಯಸ್ ತಲ್ಪಡೆ ಅವರು ಕಂಗನಾ ರಣಾವತ್ ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಎಮರ್ಜೆನ್ಸಿ’ ಚಿತ್ರಕ್ಕಾಗಿ ಜಯಪ್ರಕಾಶ್ ನಾರಾಯಣ್ (ಜೆಪಿ) ಆದ ಅನುಪಮ್ ಖೇರ್

    ‘ಎಮರ್ಜೆನ್ಸಿ’ ಚಿತ್ರಕ್ಕಾಗಿ ಜಯಪ್ರಕಾಶ್ ನಾರಾಯಣ್ (ಜೆಪಿ) ಆದ ಅನುಪಮ್ ಖೇರ್

    ಭಾರತದ ಇತಿಹಾಸದಲ್ಲಿ ಜಯಪ್ರಕಾಶ್ ನಾರಾಯಣ್ ಅವರಿಗೆ ಅವರದ್ದೇ ಆದ ಸ್ಥಾನವಿದೆ. ಜೆಪಿ ಚಳವಳಿಯ ಮೂಲಕ ಅನೇಕ ಹೋರಾಟಗಾರರಿಗೆ ಸ್ಫೂರ್ತಿ ತುಂಬಿದ್ದ ಇವರು, ಗಾಂಧೀಜಿ ನಂತರ ಜನರಿಗೆ ಅತೀ ಹೆಚ್ಚು ಪ್ರಭಾವ ಬೀರಿದವರಾಗಿದ್ದರು. ಅದರಲ್ಲೂ ಇಂದಿರಾ ಗಾಂಧಿ ಅವರು ಹೇರಿದ್ದ ಎಮರ್ಜೆನ್ಸಿ ವೇಳೆಯಲ್ಲಿ ಜೆಪಿ ಹೋರಾಟ ಅತ್ಯಂತ ದಿಟ್ಟ ಉತ್ತರದಂತಿತ್ತು. ಹಾಗಾಗಿ ಎಮರ್ಜೆನ್ಸಿ ಸಿನಿಮಾದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪಾತ್ರಕ್ಕೂ ಹೆಚ್ಚು ಮಹತ್ವ ನೀಡಲಾಗಿದೆಯಂತೆ. ಈ ಪಾತ್ರವನ್ನು ಬಾಲಿವುಡ್ ನಟ ಅನುಪಮ್ ಖೇರ್ ನಟಿಸುತ್ತಿದ್ದಾರೆ.

    ನಾನೂ ಕೂಡ ಜಯಪ್ರಕಾಶ್ ನಾರಾಯಣ್ ಅವರ ಜೀವನದಿಂದ ಪ್ರಭಾವಿತನಾದವನು. ಅವರ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಸಿನಿಮಾದಲ್ಲಿ ಪಾತ್ರಕ್ಕೂ ಮಹತ್ವ ನೀಡಲಾಗಿದೆ. ಇವೆಲ್ಲ ಕಾರಣದಿಂದಾಗಿ ಈ ಪಾತ್ರವನ್ನು ನಾನು ಒಪ್ಪಿಕೊಂಡೆ ಎಂದು ಹೇಳಿದ್ದಾರೆ ಅನುಪಮ್ ಖೇರ್. ಮೊನ್ನೆಯಷ್ಟೇ ಇವರ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಥೇಟ್ ಜೆಪಿ ಅವತಾರವನ್ನೇ ಎತ್ತಿದ್ದಾರೆ ಅನುಪಮ್ ಖರ್. ಇದನ್ನೂ ಓದಿ:ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಕಂಗನಾ ರಣಾವತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಅವರೇ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈಗಾಗಲೇ ಇವರ ಲುಕ್ ಕೂಡ ರಿವೀಲ್ ಆಗಿದೆ. ಚಿತ್ರದ ಟೀಸರ್ ಕೂಡ ಬಿಡುಗಡೆ ಆಗಿದ್ದು, ಈಗಾಗಲೇ ಇಂದಿರಾ ಗಾಂಧಿ ಅಭಿಮಾನಿಗಳು ಟೀಸರ್ ವಿರೋಧಿಸಿ ಹೋರಾಟ ಕೂಡ ಮಾಡಿದ್ದಾರೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರನ್ನು ಅವಹೇಳನ ಮಾಡಲಾಗುತ್ತಿದ್ದು, ಕೂಡಲೇ ಸಿನಿಮಾ ನಿಲ್ಲಿಸುವಂತೆ ಒತ್ತಡ ಕೂಡ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರೀಯ ಲಾಂಛನ ಹೊಸ ಶಿಲ್ಪ : ಪ್ರಕಾಶ್ ರೈ ವಿರೋಧ, ಅನುಪಮ್ ಖೇರ್ ಬೆಂಬಲ

    ರಾಷ್ಟ್ರೀಯ ಲಾಂಛನ ಹೊಸ ಶಿಲ್ಪ : ಪ್ರಕಾಶ್ ರೈ ವಿರೋಧ, ಅನುಪಮ್ ಖೇರ್ ಬೆಂಬಲ

    ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಲಾಂಛನದ ಹೊಸ ಶಿಲ್ಪವನ್ನು ಅನಾವರಣಗೊಳಿಸಿದ್ದಾರೆ. ಈ ಶಿಲ್ಪ ಅನಾವರಣಗೊಳ್ಳುತ್ತಿದ್ದಂತೆಯೇ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಲಾಂಛನವು ಸೌಮ್ಯ ರೂಪದಲ್ಲಿತ್ತು. ಇದೀಗ ಮೋದಿ ಅನಾವರಣಗೊಳಿಸಿರುವ ಶಿಲ್ಪವು ಉಗ್ರರೂಪದಲ್ಲಿದೆ ಎಂದು ಟೀಕಿಸಲಾಗುತ್ತಿದೆ. ಮೋದಿ ವಿರೋಧಿಗಳೆಲ್ಲ ರಾಷ್ಟ್ರ ಲಾಂಛನ ವಿರೂಪಗೊಳಿಸಲಾಗಿದೆ ಎಂದರೆ, ಮೋದಿ ಪರವಾಗಿದ್ದವರು ಸರಿಯಾಗಿದೆ ಎಂದು ಬೆಂಬಲಿಸುತ್ತಿದ್ದಾರೆ.

    ಈ ಕುರಿತಂತೆ ನಟ ಪ್ರಕಾಶ್ ರೈ ಜಸ್ಟ್ ಆಸ್ಕಿಂಗ್ ಹ್ಯಾಷ್ ಟ್ಯಾಗ್ ಅಡಿ ಪ್ರಶ್ನೆ ಮಾಡಿದ್ದು, ‘ನಾವು ಎತ್ತ ಸಾಗುತ್ತಿದ್ದೇವೆ’ ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಯ ಜೊತೆಗೆ ಬದಲಾವಣೆಯಾದ ರಾಮನ, ಹನುಮಂತನ ಫೋಟೋಗಳನ್ನು ಹಾಕಿದ್ದಾರೆ. ಪ್ರಕಾಶ್ ರೈ ಟ್ವಿಟ್ ಮಾಡುತ್ತಿದ್ದಂತೆಯೇ ಮೋದಿ ಪರವಾಗಿದ್ದವರು ಪ್ರಕಾಶ್ ರೈ ಅವರನ್ನು ತರಾಟೆಗೆ ತಗೆದುಕೊಂಡಿದ್ದರೆ, ಪ್ರಕಾಶ್ ರೈ ಪರವಾಗಿದ್ದವರು ರಾಷ್ಟ್ರೀಯ ಲಾಂಛನಕ್ಕೆ ಅವಮಾನ ಮಾಡಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಇತ್ತ ಬಾಲಿವುಡ್ ನಟ ಅನುಪಮ್ ಖೇರ್, ಹೊಸ ಶಿಲ್ಪವನ್ನು ತಯಾರಿಸಿದವರ ಪರವಾಗಿ ಮಾತನಾಡಿದ್ದು, ಸಿಂಹಕ್ಕೆ ಹಲ್ಲುಗಳಿರುವುದರಿಂದಲೇ ಅದರ ಪ್ರದರ್ಶನ ಸಹಜ ಎಂದು ವ್ಯಂಗ್ಯವಾಡಿದ್ದಾರೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ ಎಂದೂ, ಘರ್ಜಿಸಿದ ಸಿಂಹಗಳು ನಮಗಿಂದು ಬೇಕಾಗಿವೆ ಎಂದು ಹೇಳಿದ್ದಾರೆ. ಒಂದು ವಾರದಿಂದ ಈ ಚರ್ಚೆ ನಡೆಯುತ್ತಿದ್ದು, ಇದೀಗ ಸಿನಿಮಾ ರಂಗಕೂಡ ಅದರಲ್ಲಿ ಭಾಗಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಗಜ್ 2’ ಅನುಪಮ್ ಖೇರ್ ನಟನೆಯ 526ನೇ ಸಿನಿಮಾ

    ‘ಕಾಗಜ್ 2’ ಅನುಪಮ್ ಖೇರ್ ನಟನೆಯ 526ನೇ ಸಿನಿಮಾ

    ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಇದೀಗ 526ನೇ ಸಿನಿಮಾಗೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರಕ್ಕೆ ಕಾಗಜ್ 2 ಎಂದು ಹೆಸರಿಡಲಾಗಿದೆ. ನಟನಾಗಿ, ನಾಯಕನಾಗಿ, ಖಳನಟನಾಗಿ ಸಿನಿಮಾ ರಂಗದಲ್ಲಿ ಮಿಂಚಿರುವ ಅನುಪಮ್ ಖೇರ್, ಇತ್ತೀಚೆಗಷ್ಟೇ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ದೇಶ ವಿದೇಶಗಳಲ್ಲಿ ಭಾರೀ ಸದ್ದು ಮಾಡಿತ್ತು. ಆ ಸಿನಿಮಾದ ನಂತರ ಕಾಗಜ್ 2 ಚಿತ್ರವನ್ನು ಅವರು ಒಪ್ಪಿಕೊಂಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಅನುಪಮ್ ಖೇರ್ ಪಾತ್ರವನ್ನು ಒಪ್ಪಿಕೊಂಡರೆ, ಅಲ್ಲೊಂದು ಖಡಕ್ ಸಂದೇಶ ಇರಲಿದೆ ಎಂದಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲೂ ದೇಶ ಪ್ರೇಮವನ್ನು ಸಾರುವಂತಹ ಮತ್ತು ಕಾಶ್ಮೀರಿ ಪಂಡಿತರ ಹತ್ಯೆಯ ಕುರಿತಾದ ವಿಷಯಗಳು ಇದ್ದವು. ಕಾಗಜ್ 2 ನಲ್ಲೂ ಅಂಥದ್ದೇ ಪವರ್ ಫುಲ್ ಕಥೆ ಇರಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ:ಅಸ್ಸಾಂ ಪ್ರವಾಹ ಪೀಡಿತರ ಸಂಕಷ್ಟಕ್ಕೆ ಮಿಡಿದ ಆಮೀರ್ ಖಾನ್

    Anupam Kher

    ತಮ್ಮ 526ನೇ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಡದ ಅನುಪಮ್ ಖೇರ್, ಕ್ಪ್ಲ್ಯಾಪ್ ಬೋರ್ಡ್ ಇರುವಂತಹ  ವಿಡಿಯೋವೊಂದನ್ನು ಪೋಸ್ಟ್ ಮಾಡಿ, ಹೊಸ ಸಿನಿಮಾಗೆ ಶುಭ ಹಾರೈಸಿ ಎಂದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರವನ್ನು ವಿ.ಕೆ. ಪ್ರಕಾಶ್ ನಿರ್ದೇಶನ ಮಾಡುತ್ತಿದ್ದು, ಎರಡು ದಿನಗಳ ಹಿಂದಿಯೇ ಶೂಟಿಂಗ್ ಆರಂಭಿಸಿದೆ.

    Live Tv

  • ಶಶಿ ತರೂರು ಒಬ್ಬ ಮೂರ್ಖ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಖಡಕ್ ಉತ್ತರ

    ಶಶಿ ತರೂರು ಒಬ್ಬ ಮೂರ್ಖ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಖಡಕ್ ಉತ್ತರ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಪೂರನಲ್ಲಿ ಬ್ಯಾನ್ ಮಾಡಿರುವ ವಿಚಾರ ನಿನ್ನೆಯಿಂದ ನಾನಾ ರೂಪ ಪಡೆದುಕೊಳ್ಳುತ್ತಿದೆ. ಬ್ಯಾನ್ ಮಾಡಿರುವ ಸುದ್ದಿಯನ್ನು ಶಶಿ ತರೂರು ಟ್ವಿಟ್ ಮಾಡಿದ್ದರು. ಇದೊಂದು ಸರಕಾರಿ ಪ್ರಯೋಜಿತ ಸಿನಿಮಾ ಎಂದು ಟೀಕಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಕೂಡ ಶಶಿ ತರೂರ್ ಗೆ ಚಾಟಿ ಬೀಸಿದ್ದರು. ಇದೀಗ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಕಿಡಿಕಾರಿದ್ದಾರೆ. ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

    ದಿ ಕಾಶ್ಮೀರ್ ಫೈಲ್ಸ್ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಂಡಿದೆ. ಇದೀಗ ಓಟಿಟಿಯಲ್ಲೂ ಪ್ರರ್ದಶನಕ್ಕೆ ಸಿದ್ಧವಾಗಿದೆ. ಈ ಹೊತ್ತಿನಲ್ಲಿ ಸಿನಿಮಾವನ್ನು ಸಿಂಗಾಪೂರನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು ಚಿತ್ರತಂಡ. ಸಿಂಗಾಪೂರನಲ್ಲಿ ಪ್ರದರ್ಶನವಾಗಬೇಕಾದರೆ, ಅಲ್ಲಿಯೂ ಸೆನ್ಸಾರ್ ಆಗಬೇಕು. ಆಗ ಈ ಸಿನಿಮಾ ಸಿಂಗಾಪೂರನಲ್ಲಿ ಪ್ರದರ್ಶನಕ್ಕೆ ಯೋಗ್ಯವಾಗಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು. ಅದನ್ನೇ ಶಶಿ ತರೂರು ಟ್ವಿಟ್ ಮಾಡಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಶಶಿ ತರೂರು ಟ್ವಿಟ್ ಗೆ ಪ್ರತಿಕ್ರಿಯೆ ನೀಡಿರುವ ವಿವೇಕ್ ಅಗ್ನಿಹೋತ್ರಿ,, ‘ಶಶಿ ತರೂರು ಸದಾ ತಪ್ಪು ಹುಡುಕುವ ಒಬ್ಬ ಮೂರ್ಖ. ದೂರುವುದೇ ಚಟ ಮಾಡಿಕೊಂಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸುವುದಕ್ಕೆ ಸಾಧ್ಯ?’ ಎಂದು ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ‘ಶಶಿ ತರೂರು ಪತ್ನಿ ಕಾಶ್ಮೀರಿ ಎನ್ನುವುದು ನಿಜವಾದರೆ, ಅವರ ಗೌರವಕ್ಕಾದರೂ ಒಳ್ಳೆಯದನ್ನು ಯೋಚಿಸಿ’ ಎಂದು ಸಲಹೆಯನ್ನೂ ಅವರು ನೀಡಿದ್ದಾರೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

    ಸಿಂಗಪೂರ ಸಿನಿಮಾ ಕಾನೂನು ಬಗ್ಗೆಯೂ ವಿವರಿಸಿರುವ ವಿವೇಕ್ ಅಗ್ನಿಹೋತ್ರಿ, ‘ಅದೊಂದು ಪುರಾತನ, ಅತೀ ಹಿಂದುಳಿದ ಸೆನ್ಸಾರ್ ಬೋರ್ಡ್. ಇನ್ನೂ ಪುರಾತನ ಆಲೋಚನೆಗಳನ್ನೇ ಮುಂದುವರೆಸಿಕೊಂಡು ಹೋಗುತ್ತಿದೆ. ಅದು ಅಪ್ ಗ್ರೇಡ್ ಆಗಬೇಕು’ ಎಂದು ಅವರು ಹೇಳಿದ್ದಾರೆ.

  • ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಕಾಂಗ್ರೆಸ್ ಸಂಸತ್ ಸದಸ್ಯ ಶಶಿ ತರೂರ್ ನಿನ್ನೆಯಷ್ಟೇ ‘ದಿ ಕಾಶ್ಮೀರ್ ಫೈಲ್ಸ್’ ಕುರಿತಾಗಿ ಟ್ವಿಟ್ ವೊಂದನ್ನು ಮಾಡಿದ್ದರು. ನ್ಯೂಸ್ ಚಾನೆಲ್ ವೊಂದರ ವರದಿಯನ್ನು  ಲಿಂಕ್ ಮಾಡಿ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಸಿಂಗಪುರದ‍ಲ್ಲಿ ಬ್ಯಾನ್ ಮಾಡಲಾಗಿದೆ. ಭಾರತದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಪ್ರಯೋಜಿತ ಸಿನಿಮಾ ದಿ ಕಾಶ್ಮೀರ್ ಫೈಲ್ಸ್’ ಎಂದು ಬರೆದುಕೊಂಡಿದ್ದರು. ಈ ಟ್ವಿಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ಈ ಟ್ವಿಟ್ ಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿರುವ ಅನುಪಮ್ ಖೇರ್ ತೀವ್ರ ತರಹದಲ್ಲಿ ಪ್ರತಿಕ್ರಿಯೆ ನೀಡಿದ್ದರು. ತರೂರು ಅವರ ದಿವಂಗತ ಪತ್ನಿ ಸುನಂದಾ ಪುಷ್ಕರ್ ಅವರು ಈ ಹಿಂದೆ ಟ್ವಿಟ್ ಮಾಡಿದ್ದ ಪೋಸ್ಟ್ ವೊಂದನ್ನು ಟ್ಯಾಗ್ ಮಾಡಿ, ಮಡಿದ ಪತ್ನಿಗೋಸ್ಕರವಾದರೂ ಶಶಿ ತರೂರು, ನಿರ್ಭಾವುಕತೆಯನ್ನು ಬಿಡಬೇಕಿತ್ತು. ತರೂರು ಪತ್ನಿ ಮೂಲತಃ ಕಾಶ್ಮೀರಿ. ಹಾಗಾಗಿ ಈ ಸಿನಿಮಾ ಬಗ್ಗೆ ಸಂವೇದನಾಶೀಲತೆ ತೋರಬೇಕಿತ್ತು ಎಂದು ಅನುಪಮ್ ಖೇರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಟ್ವಿಟ್ ಗಳು ಈಗ ಜಟಾಪಟಿಗೆ ಕಾರಣವಾಗಿವೆ.

    ಯಾವುದೋ ಒಂದು ದೇಶ ಕಾಶ್ಮೀರ್ ಫೈಲ್ಸ್ ಅನ್ನು ಬ್ಯಾನ್ ಮಾಡಿದೆ ಎಂದ ಮಾತ್ರಕ್ಕೆ ಅದು ಜಗತ್ತಿನ ಗೆಲುವು ಎನ್ನುವಂತೆ ತರೂರು ಸಂಭ್ರಮಿಸುತ್ತಿದ್ದಾರೆ. ಇದು ದುರಂತ ಎನ್ನುವ ಅರ್ಥದಲ್ಲಿ ಅನುಪಮ್ ಖೇರ್ ಬರೆದುಕೊಂಡಿದ್ದಕ್ಕೆ, ಶಶಿ ತರೂರು ಕೂಡ ಅಷ್ಟೇ ಖಾರವಾಗಿಯೇ ಮತ್ತೊಂದು ಟ್ವಿಟ್ ಮಾಡಿದ್ದಾರೆ. ವಿನಾಕಾರಣ ನನ್ನ ದಿವಗಂತ ಪತ್ನಿಯನ್ನು ಎಳೆದು ತಂದಿರುವುದು ಅವರ ನಿರ್ಲಜ್ಜೆತನ ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಕಾಮೆಂಟ್ ಸೇರಿಸದೆ, ವರದಿಯಾದ ಸುದ್ದಿಯನ್ನು ಮಾತ್ರ ಪೋಸ್ಟ್ ಮಾಡಿದ್ದೇನೆ ಎಂದು ಸಮಜಾಯಿಸಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ತಮ್ಮ ದಿವಗಂತ ಪತ್ನಿಯ ಊರಿಗೂ ಹೋಗಿದ್ದ ವಿಷಯವನ್ನೂ ಪ್ರಸ್ತಾಪಿಸಿರುವ ತರೂರು, ಸುನಂದಾ ಮನೆಯ ಅಕ್ಕಪಕ್ಕದವರನ್ನು ಮಾತನಾಡಿಸಿದ್ದೆ. ಅಲ್ಲಿ ಹಿಂದೂ ಮತ್ತು ಮುಸಲ್ಮಾನರು ಒಟ್ಟಾಗಿಯೇ ಇದ್ದರು. ಈಗ ಏನೇ ಹೇಳಿದರೂ, ನನ್ನ ಮಾತುಗಳನ್ನು ಅನುಮೋದಿಸುವುದಕ್ಕೆ ಸುನಂದಾ ಇಲ್ಲವೆಂದೂ ಅವರು ಮತ್ತೊಂದು ಫೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    ಅನುಪಮ್ ಖೇರ್ ಮತ್ತು ತರೂರ್ ಟ್ವಿಟ್ ಗಳು ಈಗ ಭಾರೀ ಸದ್ದು ಮಾಡುತ್ತಿವೆ. ದಿ ಕಾಶ್ಮೀರ್ ಫೈಲ್ಸ್ ಕುರಿತು ಹೆಮ್ಮೆಯಿಂದ ಅನುಪಮ್ ಖೇರ್ ಮಾತನಾಡುತ್ತಿದ್ದರೆ, ಶಶಿ ತರೂರು ಸಿನಿಮಾ ಬಗ್ಗೆ ಕಾಮೆಂಟ್ ಮಾಡದೇ ಸುದ್ದಿಯನ್ನು ಮಾತ್ರ ಪೋಸ್ಟ್ ಮಾಡಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ, ಅದೊಂದು ಆಡಳಿತ ಸರಕಾರದ  ಕೃಪಾಪೋಷಿತ ಸಿನಿಮಾ ಎನ್ನುವುದನ್ನು ಒಪ್ಪಿಕೊಳ್ಳಬೇಕಾದ ಕಟುಸತ್ಯ ಎಂದೂ ಹೇಳಿದ್ದಾರೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ಸಿಂಗಪೂರ ಸಿನಿಮಾ ಕಾನೂನಿನ ಅಂಶಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾರದೇ ಇರುವ ಕಾರಣಕ್ಕಾಗಿ ಸಿಂಗಾಪೂರದಲ್ಲಿ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ. ಇದೊಂದು ಹಿಂಸೆಯನ್ನು ಪ್ರಚೋದಿಸುವಂತಹ ಸಿನಿಮಾವಾಗಿದ್ದರಿಂದ ಪ್ರದರ್ಶನಕ್ಕೆ ಯೋಗ್ಯವಾಗಿಲ್ಲ ಎಂದು ಅಲ್ಲಿ ಪ್ರಸಾರ ಖಾತೆಯು ತಿಳಿಸಿದೆ ಎಂದು ಸುದ್ದಿಯಾಗಿದೆ.

  • ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

    ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

    ಕೇವಲ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿದ್ದ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ, ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ಜೀ 5 ಓಟಿಸಿಯಲ್ಲಿ ರಿಲೀಸ್ ಆಗುತ್ತಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನ್ನು ಕೊಳ್ಳೆ ಹೊಡೆದಿತ್ತು. ಇದನ್ನೂ ಓದಿ : ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಷ್ಟೆಲ್ಲಾ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಪ್ರಿಮಿಯರ್ ಆಗಲಿದೆ. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅತಿರಥ ಮಹಾರಥ ತಾರಬಳಗ ನಟಿಸಿದ್ದರು. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಮೋಘವಾಗಿ ಅಭಿನಯಿಸಿದ್ದರು. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    1991ರ ಸಮಯದಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಸಿನಿಮಾವನ್ನು ಕಟ್ಟಿಕೊಡಲಾಗಿತ್ತು. ಹೀಗಾಗಿ ಈ ಸಿನಿಮಾ ಬಗ್ಗೆ ವಿರೋಧವೂ ವ್ಯಕ್ತವಾಗಿತ್ತು. ವಿರೋಧ ನಡುವೆಯೂ ಕಾಶ್ಮೀರ್ ಫೈಲ್ಸ್ ಗೆಲುವಿನ ನಗೆ ಬೀರಿತ್ತು. ಬಾಲಿವುಡ್ ನಲ್ಲಿ ತಯಾರಾಗಿದ್ದ ಈ ಸಿನಿಮಾ ಕೇವಲ ಹಿಂದಿ ಭಾಷೆಯಲ್ಲಿ ತೆರೆಗೆ ಬಂದಿತ್ತು. ಆದ್ರೇ ಜೀ 5 ಒಟಿಟಿಯಲ್ಲಿ ನಾಲ್ಕು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ಪ್ರದರ್ಶನ ಕಾಣಲಿದೆ.