ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ಆರ್‌ಸಿಬಿ ತಂಡವನ್ನು ಅಭಿಮಾನಿಗಳು ಭರಮಾಡಿಕೊಂಡ ಸಂತಸದ ಕ್ಷಣವನ್ನು ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಈ ಕ್ಷಣಕ್ಕಾಗಿ ಪ್ರೀತಿಯಿಂದ ಹಾಗೂ ತಾಳ್ಮೆಯಿಂದ ಕಾದ ಮುಖಗಳಿವು ಎಂದು ಬರೆದುಕೊಂಡು ಆರ್‌ಸಿಬಿ ಅಭಿಮಾನಿಗಳ ಸಂಭ್ರಮವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಚಾಂಪಿಯನ್ ಟ್ರೋಫಿಯನ್ನು ಗೆದ್ದಿದೆ. ಇದನ್ನೂ ಓದಿ: ಐಪಿಎಲ್ ಟ್ರೋಫಿ ಒಳಗಡೆ ಏನಿದೆ – ಚೆಕ್ ಮಾಡಿ ನೋಡಿದ ಕೊಹ್ಲಿ
ಲಕ್ನೋ: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ (Virat Kohli), ಪತ್ನಿ ಅನುಷ್ಕಾ ಶರ್ಮಾ ಟೆಂಪಲ್ ರನ್ ಶುರು ಮಾಡಿದ್ದಾರೆ. ಇತ್ತೀಚೆಗೆ ವೃಂದಾವನದಲ್ಲಿ ಪ್ರೇಮಾನಂದ ಮಹಾರಾಜ್ ಅವರನ್ನ ಭೇಟಿಯಾಗಿದ್ದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇಂದು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.
#WATCH | Uttar Pradesh: Indian Cricketer Virat Kohli, along with his wife and actor Anushka Sharma, visited and offered prayers at Hanuman Garhi temple in Ayodhya. pic.twitter.com/pJAGntObsE
ಇಂದು ಅಯೋಧ್ಯೆಯ (Ayodhya) ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಆಗಮಿಸಿ ವಿರಾಟ್ ಮತ್ತು ಅನುಷ್ಕಾ ಪ್ರಾರ್ಥಿಸಿದರು. ಈ ವೇಳೆ ಅರ್ಚಕರು ಕೊಹ್ಲಿ ದಂಪತಿಗೆ ದೇವರ ಹಾರ ಹಾಕಿದರು. ಜೊತೆಗೆ ಅನುಷ್ಕಾ ಶರ್ಮಾ ಹಣೆಗೆ ತಿಲಕ ಇಟ್ಟರು. ಸ್ಟಾರ್ ಜೋಡಿ ದೇವಸ್ಥಾನಕ್ಕೆ ಆಗಮಿಸಿದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಟೀಂ ಇಂಡಿಯಾ ಪ್ರಕಟ- ಗಿಲ್‌ಗೆ ನಾಯಕ ಪಟ್ಟ
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದೇವಾಲಯ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ದಾಸ್ ಜಿ ಮಹಾರಾಜ್ ಮಹಂತ್, ‘ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರಿಗೆ ಆಧ್ಯಾತ್ಮಿಕತೆ, ಸಂಸ್ಕೃತಿ, ದೇವರು ಮತ್ತು ಸನಾತನ ಧರ್ಮದ ಬಗ್ಗೆ ಆಳವಾದ ಪ್ರೀತಿ ಇದೆ. ಅವರು ಭಗವಾನ್ ರಾಮಲಲ್ಲಾ ದೇಗುಲಕ್ಕೆ ಭೇಟಿ ನೀಡಿ ನಂತರ ಭಗವಾನ್ ಹನುಮಂತನಿಂದ ಆಶೀರ್ವಾದ ಪಡೆದರು. ಅವರು ಇಲ್ಲಿ ಆಧ್ಯಾತ್ಮಿಕತೆ ಮತ್ತು ಪೌರಾಣಿಕ ವಿಷಯಗಳನ್ನು ಸಹ ಚರ್ಚಿಸಿದರು ಎಂದು ತಿಳಿಸಿದ್ದಾರೆ.
ಲಕ್ನೋ: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ(Virat Kohli) ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ(Anushka Sharma) ಅವರೊಂದಿಗೆ ವೃಂದಾವನಕ್ಕೆ(Vrindavan) ಭೇಟಿ ನೀಡಿದ್ದಾರೆ.
Virat Kohli & Anushka Sharma से पूज्य महाराज जी की क्या वार्तालाप हुई ? Bhajan Marg pic.twitter.com/7IWWjIfJHB
ಪ್ರೇಮಾನಂದ ಸ್ವಾಮೀಜಿ ವಿರಾಟ್ ಕೊಹ್ಲಿ ಬಳಿ ನೀವು ಸಂತೋಷವಾಗಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ಕೊಹ್ಲಿ ನಾವು ಚೆನ್ನಾಗಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ಪ್ರೇಮಾನಂದ ಸ್ವಾಮೀಜಿ ನೀವು ಚೆನ್ನಾಗಿರಬೇಕು ಎಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ?
ವಿರುಷ್ಕಾ ದಂಪತಿ ಮಕ್ಕಳೊಂದಿಗೆ ಈ ವರ್ಷದ ಜನವರಿಯಲ್ಲಿ ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದಿದ್ದರು. ಇದೀಗ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ(Test Cricket) ನಿವೃತ್ತಿ ಘೋಷಿಸಿದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮುಂಗಾರು ಆಗಮನ: ಹವಾಮಾನ ಇಲಾಖೆ
2011ರಲ್ಲಿ ಕಿಂಗ್ ಸ್ಟನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಕೊಹ್ಲಿ ಪದಾರ್ಪಣೆ ಮಾಡಿದ್ದರು. ಇದುವರೆಗೆ ಟೀಂ ಇಂಡಿಯಾ 123 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ 46.85 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕಗಳು, 31 ಅರ್ಧಶತಕಗಳೂ ಸೇರಿವೆ. ಇನ್ನೂ ನಾಯಕನಾಗಿ 68 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ 40 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಕಳೆದ 14 ವರ್ಷಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ದಿಗ್ಗಜರ ದಾಖಲೆಗಳನ್ನ ಮುರಿದು ಮೆರೆದಾಡಿದ ಕೊಹ್ಲಿ ಸೋಮವಾರ ನಿವೃತ್ತಿ ಘೋಷಿಸಿದ್ದಾರೆ.
ಬೆಂಗಳೂರು: ತವರಿನಲ್ಲಿ ಸಿಎಸ್‌ಕೆ (CSK) ವಿರುದ್ಧ ಗೆದ್ದು ಆರ್‌ಸಿಬಿ ಪ್ಲೇ-ಆಫ್ (RCB Playoffs) ಪ್ರವೇಶಿಸಿದ ಕ್ಷಣ ರಾಜ್ಯಾದ್ಯಂತ ಭಾವುಕತೆ ಸೃಷ್ಟಿಸಿತು. ಪ್ಲೇ-ಆಫ್ ಎಂಟ್ರಿಯ ಆ ರೋಚಕ ಸನ್ನಿವೇಶದಲ್ಲಿ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ (Virat Kohli) ಭಾವುಕರಾದರು. ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿದ ಪಂದ್ಯವನ್ನು ವೀಕ್ಷಿಸುತ್ತಿದ್ದ ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಕೂಡ ಒಮ್ಮೆಲೆ ಭಾವೋದ್ವೇಗದಿಂದ ಪ್ರತಿಕ್ರಿಯಿಸಿದರು. ಈ ಎರಡೂ ದೃಶ್ಯಗಳು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿವೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ (Anushka Sharma) ಅವರು ತಂಡದ ನಿರ್ಣಾಯಕ ಗೆಲುವಿನ ನಂತರ ಭಾವೋದ್ವೇಗದಲ್ಲಿ ಮುಳುಗಿದ್ದರಿಂದ ಪಂದ್ಯವು ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಯಿತು. ಇದನ್ನೂ ಓದಿ: Photos Gallery: ಸಂಭ್ರಮದಲ್ಲಿ ಮಿಂದೆದ್ದ ಆರ್‌ಸಿಬಿ – ಭಾವುಕ ಕ್ಷಣಗಳು ಕ್ಯಾಮೆರಾ ಕಣ್ಣಿಗೆ ಸೆರೆ!
ಐಪಿಎಲ್‌ನಲ್ಲಿ RCB ಯ ಪ್ರಯಾಣ ಗಮನಾರ್ಹವಾಗಿದೆ. 17 ಆವೃತ್ತಿಗಳಲ್ಲಿ ಇದುವರೆಗೂ 9 ಬಾರಿ ಪ್ಲೇ-ಆಫ್ ಪ್ರವೇಶಿಸಿದೆ. ಆದರೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಹೀಗಿದ್ದರೂ ಅಭಿಮಾನಿಗಳು ಮಾತ್ರ ಆರ್‌ಸಿಬಿ ಜೊತೆ ವಿಶೇಷ ನಂಟು ಹೊಂದಿದ್ದಾರೆ.
ನಿನ್ನೆ ನಡೆದ ಪಂದ್ಯದಲ್ಲಿ ತಂಡದ ಪರ ಕೊಹ್ಲಿ ಉತ್ತಮ ಆಟವಾಡಿದರು. ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದ ಕೊಹ್ಲಿ 47 ರನ್‌ಗಳ ಕೊಡುಗೆಯೊಂದಿಗೆ ತಂಡದ ಮೊತ್ತ 218/5 ಕ್ಕೆ ಏರಲು ನೆರವಾದರು. ರವೀಂದ್ರ ಜಡೇಜಾ ಮತ್ತು ಎಂ.ಎಸ್.ಧೋನಿ ಅವರ ಉತ್ಸಾಹಭರಿತ ಆಟಕ್ಕೂ ಫಲ ಸಿಗಲಿಲ್ಲ. ಯಶ್ ದಯಾಳ್ ಅವರ ಕೊನೆ ಓವರ್‌ನ ಬೆಂಕಿ ಬೌಲಿಂಗ್ ಆರ್‌ಸಿಬಿಗೆ ಗೆಲುವಿನ ಸಿಹಿ ನೀಡಿತು. ಆರ್‌ಸಿಬಿ ಅಭಿಮಾನಿಗಳು ಪಂದ್ಯವನ್ನು ಆನಂದಿಸಿದರು.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ದಂಪತಿ ಫೆ.15ರಂದು 2ನೇ ಮಗುವನ್ನು ಬರಮಾಡಿಕೊಂಡರು. ಲಂಡನ್‌ನ ಖಾಸಗಿ ಆಸ್ಪತ್ರೆಯಲ್ಲಿಯೊಂದರಲ್ಲಿ ನಟಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ವಿದೇಶದಿಂದ ಮಗನ ಜೊತೆ ಭಾರತಕ್ಕೆ ಮರಳಿದ್ದಾರೆ. ಇದನ್ನೂ ಓದಿ:‘ಕಲ್ಜಿಗ’ ಟೈಟಲ್ ಅನಾವರಣ ಮಾಡಿದ ಸಂಗೀತ ನಿರ್ದೇಶಕ ಹಂಸಲೇಖ
ಮುಂಬೈನ ವಿಮಾನ ನಿಲ್ದಾಣದಲ್ಲಿ ಅನುಷ್ಕಾ ಶರ್ಮಾ (Anushka Sharma) ಮಗುವಿನ ಜೊತೆ ಕಾಣಿಸಿಕೊಂಡಿದ್ದಾರೆ. ನಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ ಮಗನ ಮುಖ ಎಲ್ಲೂ ಕಾಣಿಸದಂತೆ ನಟಿ ಕವರ್ ಮಾಡಿದ್ದಾರೆ.
ಅನುಷ್ಕಾ ದಂಪತಿಯ ಮೊದಲ ಮಗುವಿಗೆ ವಮಿಕಾ ಎಂದು ಹೆಸರಿಟ್ಟಿದ್ರೆ, 2ನೇ ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಿದ್ದನ್ನು ಇತ್ತೀಚೆಗೆ ರಿವೀಲ್ ಮಾಡಿದ್ದರು.
ಹಲವು ವರ್ಷಗಳ ಡೇಟಿಂಗ್ ನಂತರ ವಿರಾಟ್ (Virat Kohli) ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ಹಸೆಮಣೆ ಏರಿದ್ದರು. ಮದುವೆಯ ಬಳಿಕ ಕೂಡ ನಟಿ ಸಿನಿಮಾರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
ಮುಂಬೈ: ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ (Virat Kohli) ಮತ್ತು ಅನುಷ್ಕಾ ಶರ್ಮಾ (Anushka Sharma) ಅವರ ಮನೆಗೆ ಗಂಡು ಮಗುವಿನ ಆಗಮನವಾಗಿದೆ. ವಿರುಷ್ಕಾ ದಂಪತಿ ಮಗುವಿನ ಹೆಸರು ಕೇಳಿ ಫ್ಯಾನ್ಸ್ ತಲೆ ಕೆಡಿಸಿಕೊಂಡಿದ್ದಾರೆ.
ಬಾಲಿವುಟ್ ನಟಿ ಅನುಷ್ಕಾ ಶರ್ಮಾ ಫೆ.15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಫೆ.20 ರಂದು ಹಂಚಿಕೊಂಡಿದ್ದಾರೆ. ಮಗುವಿಗೆ ಈಗಾಗಲೇ ಹೆಸರು ಕೂಡ ಇಟ್ಟಿದ್ದಾರೆ. ವಿರುಷ್ಕಾ ದಂಪತಿ ಮಗುವಿನ ಹೆಸರು ‘ಅಕಾಯ್’. ಇದನ್ನೂ ಓದಿ: ಕೊಹ್ಲಿ ಮನೆಗೆ ಜ್ಯೂನಿಯರ್ ವಿರಾಟ್ ಆಗಮನ
‘ಅಕಾಯ್’ (Akaay) ಎಂಬ ವಿಶಿಷ್ಟ ಮತ್ತು ವಿಶೇಷ ಹೆಸರಿನ ಸುತ್ತ ಈಗ ಚರ್ಚೆ ನಡೆಯುತ್ತಿದೆ. ಅಕಾಯ್ ಎಂಬುದು ಹಿಂದಿ ಪದ ‘ಕಾಯ’ದಿಂದ ಬಂದಿದೆ. ಇದರ ಅರ್ಥ ‘ದೇಹ’. ಅಕಾಯ್ ಎಂದರೆ, ದೈಹಿಕ ಶಕ್ತಿಗಿಂತ ಮಿಗಿಲಾದವನು. ಟರ್ಕಿಶ್ ಮೂಲದಲ್ಲಿ, ‘ಅಕಾಯ್’ ಪದಕ್ಕೆ ‘ಹೊಳೆಯುವ ಚಂದ್ರ’ ಎಂದರ್ಥ.
ಮಗುವಿಗೆ ಹೆಸರಿಡಲು ಯಾವ ಮೂಲದಿಂದ ಈ ಪದವನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ವಿರುಷ್ಕಾ ದಂಪತಿ ಇನ್ನೂ ಖಚಿತಪಡಿಸಿಲ್ಲ. ವಿರಾಟ್ ದಂಪತಿ ಮಗುವಿನ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟ್ ತಾರೆಯರು ಶುಭಹಾರೈಸಿದ್ದಾರೆ. ಇದನ್ನೂ ಓದಿ: IPL 2024; ಐಪಿಎಲ್ ಆರಂಭದ ದಿನಾಂಕ ಘೋಷಣೆ
ಮುಂಬೈ: ಟೀಂ ಇಂಡಿಯಾ (Team India) ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿಗೆ (Boy Baby) ಜನ್ಮ ನೀಡಿದ್ದಾರೆ.
ಅನುಷ್ಕಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ. ಈ ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ ಎಂದು ನಟಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್-ಭಾರತ ಟೆಸ್ಟ್ ಸರಣಿ ನಡೆಯುತ್ತಿದೆ. ಐದು ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ನಡೆದಿವೆ. ಭಾರತ 3-2 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ ಬಾಕಿಯಿದೆ. ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ.
ವೈಯಕ್ತಿಕ ಕಾರಣ ನೀಡಿ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಿಂದ ಹೊರಗಿದ್ದಾರೆ. ಅನುಷ್ಕಾ ಶರ್ಮಾ ಈಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ಟೆಸ್ಟ್ ಸರಣಿಯಿಂದ ಹೊರಗಿದ್ದಾರೆ.
ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಇತ್ತೀಚೆಗೆ ಬಹಿರಂಗಪಡಿಸಿದ್ದರು. ಆದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎಬಿ ಡಿವಿಲಿಯರ್ಸ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ನಾನು ನನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದಂತೆ ಕುಟುಂಬ ಮೊದಲ ಆದ್ಯತೆಯಾಗಿದೆ. ಅದೇ ಸಮಯದಲ್ಲಿ ನಾನು ದೊಡ್ಡ ತಪ್ಪೊಂದನ್ನು ಮಾಡಿದ್ದೇನೆ, ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದೆ. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ (Virat Kohli- Anushka Sharma) 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದೇನೆ. ಇದಕ್ಕಾಗಿ ಕ್ಷಮೆ ಇರಲಿ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಎಬಿ ಡಿವಿಲಿಯರ್ಸ್ ಹೇಳಿದ್ದೇನು..?: ನಾನು ವಿಡಿಯೋ ಮೂಲಕ ಕುಟುಂಬ ಮೊದಲು ಎಂದು ಹೇಳಿದ್ದೆ. ಇದು ಸತ್ಯ ಕೂಡ. ಇದೇ ವೇಳೆ ಮಾತು ಮುಂದುವರಿಸಿ ಕೊಹ್ಲಿ ಹಾಗೂ ಅನುಷ್ಕಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅಂತಾ ಹೇಳಿದ್ದೆ. ಆದರೆ ಈ ಮಾಹಿತಿ ತಪ್ಪಾಗಿದೆ. ವಿರಾಟ್ ಕೊಹ್ಲಿ ಅವರ ಕುಟುಂಬದ ಜೊತೆಗಿದ್ದಾರೆ. ಕೊಹ್ಲಿ ಟೆಸ್ಟ್ ಪಂದ್ಯಕ್ಕೆ ಗೈರಾಗಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಕೊಹ್ಲಿ ವಿಶ್ರಾಂತಿಗೆ ಕಾರಣ ಏನೇ ಇರಬಹುದು. ಆದರೆ ಅವರಿಗೆ ನಾನು ಶುಭ ಹಾರೈಸುತ್ತೇನೆ. ವಿಶ್ರಾಂತಿ ಬಳಿಕ ವಿರಾಟ್ ಕೊಹ್ಲಿ ಮತ್ತಷ್ಟು ಪವರ್‌ಫುಲ್ ಆಗಿ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂದು ಹೇಳುವ ಮೂಲಕ ಎಬಿ ಡಿವಿಲಿಯರ್ಸ್ (AB de Villiers) ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: ರೋಹಿತ್ ಪತ್ನಿ ರಿತಿಕಾ ಅಸಮಾಧಾನ ಬೆನ್ನಲ್ಲೇ ಪಾಂಡ್ಯನಿಗೆ ಬಿಗ್ ವಾರ್ನಿಂಗ್!
ನವೆಂಬರ್ 2023 ರಲ್ಲಿ ಅನುಷ್ಕಾ ಅವರ ಎರಡನೇ ಗರ್ಭಧಾರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹರಿದಾಡಿದವು. ವಿಶೇಷವಾಗಿ ನೆದರ್ಲ್ಯಾಂಡ್ಸ್ ವಿರುದ್ಧ ಟೀಮ್ ಇಂಡಿಯಾದ ವಿಶ್ವಕಪ್ ಪಂದ್ಯದ ಮೊದಲು ಬೆಂಗಳೂರಿನಲ್ಲಿ ನಡೆದ ದೀಪಾವಳಿ ಬ್ಯಾಷ್‌ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಅನುಷ್ಕಾ ಅವರ ಗರ್ಭಿಣಿ ಎಂದು ಕೆಲ ಬೇಬಿ ಬಂಪ್ ಫೋಟೋಗಳು ವೈರಲ್ ಆದವು.
ವಿರಾಟ್ ಮತ್ತು ಅನುಷ್ಕಾ 2017ರ ಡಿಸೆಂಬರ್ 11 ರಂದು ಇಟಲಿಯಲ್ಲಿ ವಿವಾಹವಾದರು. 2021ರ ಜನವರಿ 11 ರಂದು ವಾಮಿಕಾ ಹುಟ್ಟಿದಳು.
ಅಹಮದಾಬಾದ್: ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದ್ದ 2023ರ ಏಕದಿನ ವಿಶ್ವಕಪ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಆದ್ರೆ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಸೋಲು ಭಾರತೀಯ ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲಾರದ ನೋವು ತರಿಸಿದೆ. ಟೀಂ ಇಂಡಿಯಾ (Team India) ಬೆಂಬಲಿಸಲು ಮೈದಾನದಲ್ಲಿ ನೆರೆದಿದ್ದ ಲಕ್ಷಾಂತರ ಮಂದಿ ಕೊನೆಯಲ್ಲಿ ಕಣ್ಣಲ್ಲಿ ನೀರು ತುಂಬಿಕೊಂಡು ಹೊರಟಿದ್ದನ್ನು ಮರೆಯುವಂತಿಲ್ಲ. ಈಗಲೂ ಅಭಿಮಾನಿಗಳು ಸೋಲಿನ ಕ್ಷಣಗಳನ್ನು ಮೆಲುಕುಹಾಕುತ್ತಿದ್ದಾರೆ.
ವಿಶ್ವಕಪ್ ಫೈನಲ್‌ನಲ್ಲಿ ಭಾರತ ಆಸೀಸ್ ಎದುರು ಸೋತ ನಂತರ ಟೀಂ ಇಂಡಿಯಾದ ಭಾವುಕ ಚಿತ್ರಗಳು ಜಾಲತಾಣದಲ್ಲಿ ಸದ್ದು ಮಾಡ್ತಿವೆ. ಚಿತ್ರರಂಗದ ಸೆಲಬ್ರಿಟಿಗಳು ಸೇರಿದಂತೆ ರಾಜಕೀಯ ನಾಯಕರು ಕೂಡ ಟೀಂ ಇಂಡಿಯಾ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಎಲ್ಲದರ ಮಧ್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಅವರ ಭಾವುಕ ಫೋಟೋಗಳು ಅಭಿಮಾನಿಗಳನ್ನೂ ಭಾವುಕರಾಗುವಂತೆ ಮಾಡಿವೆ. ಇದನ್ನೂ ಓದಿ: ಇದೇ ಕೊನೆಯಲ್ಲ, ನಾವು ಕಪ್ ಗೆಲ್ಲೋವರೆಗೂ ಇದು ಮುಗಿಯಲ್ಲ – ಗಿಲ್ ಭಾವುಕ
ವಿಶ್ವಕಪ್‌ನ ಪ್ರತಿ ಪಂದ್ಯಕ್ಕೂ ಹಾಜರಾಗುತ್ತಿದ್ದ ಅನುಷ್ಕಾ ಶರ್ಮಾ, ಕೊಹ್ಲಿ ಅವರಿಂದ ಸಿಡಿದ ಸಾಲು ಸಾಲು ದಾಖಲೆಗಳನ್ನ ಕಣ್ತುಂಬಿಕೊಂಡಿದ್ದರು. ಸ್ಟೇಡಿಯಂನಲ್ಲೇ ಕುಣಿದು ಕುಪ್ಪಳಿಸುತ್ತಾ ಕೊಹ್ಲಿಯನ್ನ ಉರಿದುಂಬಿಸುತ್ತಿದ್ದರು. ಅನುಷ್ಕಾ ಮತ್ತು ವಿರಾಟ್ (Anushka Virat) ಅವರ ಫೋಟೋ-ವೀಡಿಯೊಗಳು ಸಾಕಷ್ಟು ವೈರಲ್ ಆಗುತ್ತಿತ್ತು. ಆದ್ರೆ ವಿಶ್ವಕಪ್ ಸೋಲಿನಿಂದ ನಿರಾಸೆಯಾಗಿ ಬರುತ್ತಿದ್ದ ಕೊಹ್ಲಿಯನ್ನು ಅಪ್ಪಿಕೊಂಡು ಸಂತೈಸಿರುವ ದೃಶ್ಯ ಅಭಿಮಾನಿಗಳ ಕಣ್ಣಿಗೆ ಕಟ್ಟಿದಂತಾಗಿದೆ. ಇದನ್ನೂ ಓದಿ: ಅಪ್ಪಿಕೊಂಡು ಸಮಾಧಾನ ಹೇಳಿದ ಮೋದಿ – ಮತ್ತೆ ನಾವು ಪುಟಿದೇಳುತ್ತೇವೆ ಎಂದ ಶಮಿ
ನವೆಂಬರ್ 19ರ ಸೂಪರ್ ಸಂಡೇ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತ ಕೆಲವೇ ಕ್ಷಣಗಳಲ್ಲಿ, ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್ ಕೊಹ್ಲಿಗೆ ಸಮಾಧಾನ ಮಾಡುತ್ತಿರುವುದು ಕಂಡು ಬಂದಿದೆ. ಪಂದ್ಯ ಸೋತು ಕಣ್ಣಲ್ಲಿ ನೀರು ತುಂಬಿಕೊಂಡು ಬೇಸರದಲ್ಲಿದ್ದ ವಿರಾಟ್ ಕೊಹ್ಲಿ ಸ್ಟ್ಯಾಂಡ್ ಬಳಿ ಬರುತ್ತಿದ್ದಂತೆ ಅನುಷ್ಕಾ ಶರ್ಮಾ ಅವರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಅನುಷ್ಕಾ ಸಹ ಪ್ರೀತಿಯ ಅಪ್ಪುಗೆ ನೀಡಿ ಸಮಾಧಾನ ಪಡಿಸಿದ್ದಾರೆ. ಈ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಅಭಿಮಾನಿಗಳನ್ನೂ ಭಾವುಕರಾಗುವಂತೆ ಮಾಡಿದೆ.
ವಿಶ್ವಕಪ್ ಫೈನಲ್‌ನಲ್ಲಿ ಸೋಲು ಕಂಡರೂ ಕೂಡ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಭಾರತ ತಂಡವನ್ನು ಅಭಿನಂದಿಸಿದ್ದಾರೆ. ಬಾಲಿವುಡ್ ಸ್ಟಾರ್‌ಗಳಾದ ಸುನೀಲ್ ಶೆಟ್ಟಿ, ಶಾರುಖ್ ಖಾನ್, ದಿಯಾ ಮಿರ್ಜಾಸೋನಾಲಿ ಬೇಂದ್ರೆ, ದಿಯಾ ಮಿರ್ಜಾ ಮತ್ತು ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್, ಮೀರಾ ರಜಪೂತ್ ತಮ್ಮ ತಂಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯುತ್ತಿರುವ ಭಾರತ- ಆಸ್ಟ್ರೇಲಿಯಾ (India- Australia) ನಡುವೆ ಹಣಾಹಣಿ ನಡೆಯುತ್ತಿದೆ. ಪಂದ್ಯ ವೀಕ್ಷಿಸಲು ಸಾವಿರಾರು ಮಂದಿ ಜಮಾಯಿಸಿದ್ದಾರೆ. ಅಂತೆಯೇ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಕೆ.ಎಲ್ ರಾಹುಲ್ (KL Rahul) ಪತ್ನಿ ಅಥಿಯಾ ಶೆಟ್ಟಿ ಕೂಡ ಆಗಮಿಸಿದ್ದಾರೆ.
ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಸೋತಿದೆ. ಆಸ್ಟ್ರೇಲಿಯಾ (Australia) ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಅನುಷ್ಕಾ, ಅಥಿಯಾ ಹುರಿದುಂಬಿಸುತ್ತಿದ್ದಾರೆ. ಅನುಷ್ಕಾ ಹಾಗೂ ಅಥಿಯಾ (Athiya Shetty) ಫೋಟೋಗಳು ಸಾಮಾಜಿಕ ಜಾಲತಾಣಗಳಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ದಾಖಲೆಗಾಗಿ ಆಡದೇ ಇದ್ದರೂ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
ಅನುಷ್ಕಾ ಶರ್ಮಾ ತನ್ನ ತಾಯಿಯೊಂದಿಗೆ ಮೂಲೆಯ ಸೀಟಿನಲ್ಲಿ ಕುಳಿತಿದ್ದಾರೆ. ಬಿಳಿ ಹೂವಿನ ಉಡುಪನ್ನು ಧರಿಸಿರುವ ಅನುಷ್ಕಾ ಸುಂದರವಾಗಿ ಕಾಣಿಸುತ್ತಿದ್ದಾರೆ. ತನ್ನ ತಾಯಿಯೊಂದಿಗೆ ಅನುಷ್ಕಾ ಕುಳಿತಿರುವುದು ಸೋಶಿಯಲ್ ಮೀಡಿಯಾದಲ್ಲಿರುವ ವೀಡಿಯೋದಲ್ಲಿ ಕಂಡುಬಂದಿದೆ. ಅನುಷ್ಕಾ ಜೊತೆ ಅಥಿಯಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದಾರೆ.
Anushka, Athiya, Ritika, Rivaba and Prithi have arrived at the Narendra Modi Stadium. pic.twitter.com/0i9olTua45
1,32,000 ಪ್ರೇಕ್ಷಕರ ಆಸನ ಸಾಮರ್ಥ್ಯ ಹೊಂದಿರುವ ಪ್ರಸಿದ್ಧ ಕ್ರೀಡಾಂಗಣದಲ್ಲಿ ಅನುಷ್ಕಾ ಜೊತೆಗೆ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಮತ್ತು ಅನಿಲ್ ಕಪೂರ್ ಕೂಡ ಪಂದ್ಯ ವೀಕ್ಷಿಸಲು ಅಹಮದಾಬಾದ್‍ಗೆ ಬಂದಿದ್ದಾರೆ. ಬಾಲಿವುಡ್‍ನ ಹೊರತಾಗಿ, ಮಾಜಿ ಕ್ರಿಕೆಟಿಗರಾದ ಕಪಿಲ್ ದೇವ್ ಮತ್ತು ಸಚಿನ್ ತೆಂಡೂಲ್ಕರ್ ಕೂಡ ಪಂದ್ಯ ವೀಕ್ಷಿಸಲು ಆಗಮಿಸಿದ್ದಾರೆ.