Tag: anushka sharma

  • ನೀವಿಬ್ಬರು ಉತ್ತಮ ಪೋಷಕರಾಗುತ್ತೀರಿ – ಶುಭಕೋರಿದ ವಿರುಷ್ಕಾಗೆ ಮೋದಿ ರಿಪ್ಲೈ

    ನೀವಿಬ್ಬರು ಉತ್ತಮ ಪೋಷಕರಾಗುತ್ತೀರಿ – ಶುಭಕೋರಿದ ವಿರುಷ್ಕಾಗೆ ಮೋದಿ ರಿಪ್ಲೈ

    ನವದೆಹಲಿ: ನೀವಿಬ್ಬರು ಉತ್ತಮ ಪೋಷಕರಾಗುತ್ತೀರಿ ಎಂಬ ನಂಬಿಕೆ ನನಗಿದೆ ಎಂದು ಎಂದು ಪ್ರಧಾನಿ ಮೋದಿಯವರು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾಗೆ ವಿಶ್ ಮಾಡಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ತಮ್ಮ 70ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ದೇಶ ವಿದೇಶದಿಂದ ಹಲವಾರು ರಾಜಕೀಯ ನಾಯಕ, ನಟ-ನಟಿಯರು ಮತ್ತು ಕ್ರೀಡಾಪಟುಗಳು ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭ ಕೋರಿದ್ದರು.

    ನಿನ್ನೆ ಮೋದಿ ಅವರಿಗೆ ವಿಶ್ ಮಾಡಿದ್ದ ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ, ಹುಟ್ಟು ಹಬ್ಬದ ಶುಭಾಶಯಗಳು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ಮೋದಿಯವರು, ಧನ್ಯವಾದಗಳು ವಿರಾಟ್ ಕೊಹ್ಲಿ. ನಾನು ಕೂಡ ನಿಮಗೆ ಮತ್ತು ಅನುಷ್ಕಾ ಶರ್ಮಾ ಅವರಿಗೆ ಶುಭಾಶಯ ಹೇಳಲು ಇಷ್ಟಪಡುತ್ತೇನೆ. ನೀವಿಬ್ಬರು ಉತ್ತಮ ಪೋಷಕರಾಗುತ್ತೀರಿ ಎಂದು ನನಗೆ ನಂಬಿಕೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.

    ಮೋದಿಯವರು ಟ್ವೀಟ್‍ಗೆ ಮತ್ತೆ ಉತ್ತರ ನೀಡಿರುವ ಕೊಹ್ಲಿಯವರು, ನಿಮ್ಮ ಶುಭ ಹಾರೈಕೆಗೆ ಧನ್ಯವಾದಗಳು ಸರ್ ಎಂದಿದ್ದರು. ನಂತರ ನಟಿ ಅನುಷ್ಕಾ ಶರ್ಮಾ ಕೂಡ ನಿಮ್ಮ ಪ್ರೀತಿಯ ಶುಭಾಶಯಕ್ಕೆ ಧನ್ಯವಾದಗಳು ಸರ್. ನಿಮ್ಮ ಹುಟ್ಟುಹಬ್ಬ ಅದ್ಭುತವಾಗಿ ನಡೆದಿದೆ ಎಂದು ನಾನು ಭಾವಿಸುತ್ತೇನೆ. ನಿಮಗೆ ದೇವರು ಒಳ್ಳೆಯ ಆರೋಗ್ಯವನ್ನು ಕೊಡಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮತ್ತೆ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಕೊಹ್ಲಿಯನ್ನು ಟಗರಿಗೆ ಹೋಲಿಸಿದ ಶಿವಣ್ಣ – ಕ್ರಿಕೆಟ್ ಬಗ್ಗೆ ರಾಜ್ ಪುತ್ರನ ಮಾತು

    ವಿರುಷ್ಕಾ ದಂಪತಿ ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ಆಗಸ್ಟ್ 27ರಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದರು. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹವಾಗಿದ್ದು, ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದ ಕೊಹ್ಲಿ, ನಾವು ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದರು.

  • ನನ್ನ ಜಗತ್ತನ್ನ ಒಂದೇ ಫ್ರೇಮ್‍ನಲ್ಲಿ ನೋಡ್ತಿದ್ದೇನೆ: ವಿರಾಟ್ ಕೊಹ್ಲಿ

    ನನ್ನ ಜಗತ್ತನ್ನ ಒಂದೇ ಫ್ರೇಮ್‍ನಲ್ಲಿ ನೋಡ್ತಿದ್ದೇನೆ: ವಿರಾಟ್ ಕೊಹ್ಲಿ

    ಮುಂಬೈ: ವಿರುಷ್ಕಾ ದಂಪತಿ ಮಗುವಿನ ನಿರೀಕ್ಷೆಯಲ್ಲಿರುವುದು ತಿಳಿದೇ ಇದೆ. ಅನುಷ್ಕಾ ಗರ್ಭಿಣಿಯಾಗಿರುವ ಈ ಹಿಂದೆ ಜೋಡಿ ಮಾಹಿತಿ ನೀಡಿತ್ತು. ಇದೀಗ ಮತ್ತೊಂದು ಫೋಟೋವನ್ನು ನಟಿ ಅನುಷ್ಕಾ ಶರ್ಮಾ ಹಂಚಿಕೊಂಡಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಸಹ ಕಮೆಂಟ್ ಮಾಡಿದ್ದಾರೆ.

    ಇನ್‍ಸ್ಟಾಗ್ರಾಮ್‍ನಲ್ಲಿ ನಟಿ ಅನುಷ್ಕಾ ಶರ್ಮಾ ಫೋಟೋ ಪೋಸ್ಟ್ ಮಾಡಿದ್ದು, ಇದಕ್ಕೆ ಭಾವನಾತ್ಮಕ ಸಾಲುಗಳನ್ನು ಸಹ ಬರೆದಿದ್ದಾರೆ. ಜೀವನ ಸೃಷ್ಟಿಯನ್ನು ಅನುಭವಿಸುವುದಕ್ಕಿಂತ ಹೆಚ್ಚು ನೈಜ ಮತ್ತು ವಿನಮ್ರತೆ ಇನ್ನೊಂದಿಲ್ಲ. ಇದು ನಿಮ್ಮ ನಿಯಂತ್ರಣದಲ್ಲಿಲ್ಲ, ಹಾಗಾದರೆ ಏನಿದು? ಎಂದು ಬರೆದುಕೊಂಡಿದ್ದಾರೆ. ಈ ಸಾಲುಗಳನ್ನು ಬರೆದು ಪೋಸ್ಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಕಮೆಂಟ್ ಮಾಡಿ ಕಾಳಜಿ ವಹಿಸುವಂತೆ ಸಲಹೆ ನೀಡುತ್ತಿದ್ದಾರೆ.

    ಇನ್ನೂ ವಿಶೇಷವೆಂಬಂತೆ ಸ್ವತಃ ಅನುಷ್ಕಾ ಪತಿ, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಮೆಂಟ್ ಮಾಡಿದ್ದು, ನನ್ನ ಇಡೀ ಜಗತ್ತು ಒಂದೇ ಫ್ರೇಮ್‍ನಲ್ಲಿದೆ ಎಂದು ಹಾರ್ಟ್ ಸಿಂಬಾಲ್ ಹಾಕಿ ಕಮೆಂಟ್ ಮಾಡಿದ್ದಾರೆ. ಈ ಕುರಿತು ಸಹ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

     

    View this post on Instagram

     

    Nothing is more real & humbling than experiencing creation of life in you . When this is not in your control then really what is ?

    A post shared by AnushkaSharma1588 (@anushkasharma) on

    ವಿರುಷ್ಕಾ ದಂಪತಿ ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ಆಗಸ್ಟ್ 27ರಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದರು. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದರು.

    ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹವಾಗಿದ್ದು, ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದ ಕೊಹ್ಲಿ, ನಾವು ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದರು.

    2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ದರು.

  • ಸಿಹಿ ತಿನ್ನಲು ನಾಚ್ಕೋಬೇಡಿ, ನಮ್ಮ ವಿರಾಟ ಸೇವೆ ಲಭ್ಯ- ಝೊಮ್ಯಾಟೋ

    ಸಿಹಿ ತಿನ್ನಲು ನಾಚ್ಕೋಬೇಡಿ, ನಮ್ಮ ವಿರಾಟ ಸೇವೆ ಲಭ್ಯ- ಝೊಮ್ಯಾಟೋ

    – ಝೊಮ್ಯಾಟೋ ಪದಗಳಲ್ಲೇ ಆಟವಾಡಿದೆ ಎಂದ ನೆಟ್ಟಿಗರು

    ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಾಯಿಯಗ್ತಿರುವ ಕುರಿತು ವಿರುಷ್ಕಾ ದಂಪತಿ ಸುದ್ದಿ ಹಂಚಿಕೊಳ್ಳುತ್ತಿದ್ದಂತೆ ಹೆಚ್ಚು ಚರ್ಚೆ ಆರಂಭವಾಗಿದೆ. ಅದರಲ್ಲೂ ನೆಟ್ಟಿಗರು ಈ ಕುರಿತು ವಿವಿಧ ಬಗೆಯ ಪೋಸ್ಟ್ ಹಾಗೂ ಸಾಲುಗಳ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಆನ್‍ಲೈನ್ ಆಹಾರ ಮಾರಾಟ ಜಾಲತಾಣ ಝೊಮ್ಯಾಟೋ ಸಹ ಈ ಕುರಿತು ವಿಭಿನ್ನವಾಗಿ ಪೋಸ್ಟ್ ಮಾಡುವ ಮೂಲಕ ಗಮನಸೆಳೆದಿದೆ.

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ನಾವೀಗ ಮೂವರು ಎಂಬ ಸಾಲುಗಳನ್ನು ಬರೆಯುವ ಮೂಲಕ ಈ ಸುದ್ದಿಯನ್ನು ತಿಳಿಸಿದ್ದರು. ಇದಾದ ಬೆನ್ನಲ್ಲೇ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ವಿವಿಧ ರೀತಿಯ ಪೋಸ್ಟ್‍ಗಳನ್ನು ಹಾಕುವ ಮೂಲಕ ತಮ್ಮ ನೆಚ್ಚಿನ ಕ್ರಿಕೆಟರ್ ಹಾಗೂ ನೆಚ್ಚಿನ ನಟಿಗೆ ಶುಭ ಕೋರುತ್ತಿದ್ದಾರೆ.

    ಅದೇ ರೀತಿ ಇದೀಗ ಝೊಮ್ಯಾಟೋ ಟ್ವೀಟ್ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಶುಭ ಕೋರಿದೆ. ಟ್ವೀಟ್ ಮಾಡಿರುವ ಝೊಮ್ಯಾಟೋ, ಇದು ನಿಜವಾಗಲೂ ಶುಭ ಸುದ್ದಿ. ಸಿಹಿ ತಿನ್ನಲು (ಶರ್ಮಾನಾ) ನಾಚಿಕೊಳ್ಳಬೇಡಿ, ನಿಮಗಾಗಿ ನಮ್ಮ ‘ವಿರಾಟ’ ಸೇವೆ ಲಭ್ಯವಿರುತ್ತೆ ಎಂದು ಬರೆದಿದೆ. ಈ ಟ್ವೀಟ್ ಕುರಿತು ಸಹ ಸಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆ ನಡೆಯುತ್ತಿದೆ. ಹಲವರು ತಮಗಿಷ್ಟದ ಆಹಾರ ಖಾದ್ಯಗಳನ್ನು ಹೆಸರಿಸಿ ಕಮೆಂಟ್ ಮಾಡುತ್ತಿದ್ದಾರೆ.

    https://twitter.com/ZomatoIN/status/1298889729874767872

    ವಿರುಷ್ಕಾ ದಂಪತಿ ಗುಡ್ ನ್ಯೂಸ್ ನೀಡಿದ ಬಳಿಕ ಇಬ್ಬರ ಹೆಸರು (ಶರ್ಮಾ ಮತ್ತು ವಿರಾಟ) ಬಳಸಿ ಝೊಮ್ಯಾಟೋ ಶುಭಾಶಯ ತಿಳಿಸಿದೆ. ಇನ್ನು ವಿಶ್ ನೋಡಿದ ನೆಟ್ಟಿಗರು ಝೊಮ್ಯಾಟೋ ಪದಗಳಲ್ಲೇ ಆಟವಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ 1,500ಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. ಅಲ್ಲದೆ ವಿವಿಧ ಜೋಕ್‍ಗಳ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

    ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹ ಆಗಿದ್ದರು. ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ಹಂಚಿಕೊಂಡಿರುವ ಕೊಹ್ಲಿ ಹಾಗೂ ಅನುಷ್ಕಾ, ನಾವು ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದಾರೆ.

    2017ರ ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ರು.

  • ನಾವು ಈಗ ಮೂವರು – ಸಿಹಿ ಸುದ್ದಿ ಕೊಟ್ಟ ವಿರುಷ್ಕಾ

    ನಾವು ಈಗ ಮೂವರು – ಸಿಹಿ ಸುದ್ದಿ ಕೊಟ್ಟ ವಿರುಷ್ಕಾ

    ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

    ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹ ಆಗಿದ್ದರು. ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ  ಹಂಚಿಕೊಂಡಿರುವ, ಕೊಹ್ಲಿ ನಾವೂ ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದಾರೆ.

    https://www.instagram.com/p/CEYZIPllBzF/?utm_source=ig_web_button_share_sheet

    2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ರು.

    ಸದ್ಯ ವಿರಾಟ್ ಕೊಹ್ಲಿಯವರು ಐಪಿಎಲ್‍ನಲ್ಲಿ ಭಾಗವಹಿಸಲು ಯುಎಇಗೆ ತೆರಳಿದ್ದಾರೆ. ಸದ್ಯ ಅಲ್ಲಿ ಆರು ದಿನಗಳ ಕಾಲ ಕೆಹ್ಲಿ ಕ್ವಾರಂಟೈನ್ ಆಗಿದ್ದಾರೆ. ಆದನಂತರ ಐಪಿಎಲ್ ಸಿದ್ಧತೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದಿನಂತೆ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನೆಡೆಸಲಿದ್ದಾರೆ. ಐಪಿಎಲ್‍ನಲ್ಲಿ ಸ್ಟಾರ್ ತಂಡ ಎಂದು ಗುರುತಿಸಿಕೊಂಡಿರುವ ಆರ್‌ಸಿಬಿತಂಡ ಈವರೆಗೂ ಒಂದು ಬಾರಿಯೂ ಕಪ್ ಗೆದ್ದಿಲ್ಲ.

  • ಸ್ನೇಹಿತರ ದಿನಕ್ಕೆ ಮನ ಮಿಡಿಯುವ ಅನುಷ್ಕಾ ಪೋಸ್ಟ್

    ಸ್ನೇಹಿತರ ದಿನಕ್ಕೆ ಮನ ಮಿಡಿಯುವ ಅನುಷ್ಕಾ ಪೋಸ್ಟ್

    ಮುಂಬೈ: ಸ್ನೇಹಿತರ ದಿನದ ಅಂಗವಾಗಿ ಅನುಷ್ಕಾ ಶರ್ಮಾ ತಮ್ಮ ಬಾಲ್ಯದ ಸ್ನೇಹಿತರನ್ನು ನೆನೆದು, ಪೋಸ್ಟ್ ಹಾಕಿದ್ದು, ಅಪರೂಪದ ಫೋಟೋ ಪರಿಚಯಿಸಿದ್ದಾರೆ. ಇದಕ್ಕೆ ಅದ್ಭುತ ಸಾಲುಗಳನ್ನು ಬರೆದಿದ್ದಾರೆ.

    ತಮ್ಮ ಬಾಲ್ಯದ ಫೋಟೋ ಹಂಚಿಕೊಂಡಿದ್ದು, ಚಿತ್ರದಲ್ಲಿ ಅನುಷ್ಕಾ ಮಧ್ಯದಲ್ಲಿ ನಿಂತಿದ್ದು, ಸುತ್ತಲೂ ಸ್ನೇಹಿತೆಯರು ನಿಂತಿದ್ದಾರೆ. ನಗುತ್ತ ನಿಂತಿರುವ ಅನುಷ್ಕಾ ಕ್ಯೂಟ್ ಆಗಿ ಕಾಣುತ್ತಿದ್ದಾರೆ. ಅವರ ಪೋನಿ ಹೇರ್ ಸ್ಟೈಲ್ ಸಹ ಗಮನ ಸೆಳೆಯುತ್ತದೆ.

    ಪೋಸ್ಟ್ ಗೆ ಸಾಲುಗಳನ್ನು ಬರೆದಿರುವ ಅನುಷ್ಕಾ, ನಿಮ್ಮ ಜೀವನದಲ್ಲಿ ಹಲವರನ್ನು ಸ್ನೇಹಿತರನ್ನಾಗಿಸಿಕೊಂಡಿರುತ್ತೀರಿ. ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಿಉತ್ತಾರೆ. ತಿಳಿದೋ, ತಿಳಿಯದೆಯೋ ನಮ್ಮಲ್ಲಿ ಅವರು ಪ್ರಭಾವ ಬೀರಿರುತ್ತಾರೆ. ಕೆಲವರು ಸಂಪರ್ಕದಲ್ಲಿರುತ್ತಾರೆ. ಇನ್ನೂ ಕೆಲವರು ಕೇವಲ ನೆನಪಿನಲ್ಲಿ ಉಳಿದಿರುತ್ತಾರೆ. ಆಗಾಗ ನಮ್ಮ ಮುಖದಲ್ಲಿ ನಗು ತರಿಸುತ್ತಿರುತ್ತಾರೆ. ಆರ್ಮಿ ಕುಟುಂಬ ಹಿನ್ನೆಲೆಯಾದವಳಾದ ನನಗೆ ತುಂಬಾ ಜನ ಸ್ನೇಹಿತರಿದ್ದರು. ಆದರೆ ಪೋಷಕರಿಗೆ ಬೇರೆ ಸ್ಥಳಗಳಿಗೆ ಪೋಸ್ಟಿಂಗ್ ಆದರೆ ನಾವು ಅವರ ಸಂಪರ್ಕವನ್ನು ಕಳೆದುಕೊಳ್ಳುತ್ತಿದ್ದೆವು ಎಂದು ಬರೆದಿದ್ದಾರೆ.

    ಇದು ನನ್ನೆಲ್ಲ ಸ್ನೇಹಿತರಿಗಾಗಿ. ನನ್ನೊಂದಿಗೆ ಬೆಳೆದವರಿಗೆ, ಇಂದು ನಮ್ಮೊಂದಿಗೆ ಇರುವವರಿಗೆ ಎಲ್ಲರಿಗೂ ಸ್ನೇತರ ದಿನದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‍ಗೆ 9 ಲಕ್ಷಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಅನುಷ್ಕಾ ಸ್ನೇಹಿತರ ದಿನವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

    ಅನುಷ್ಕಾ ಝೀರೋ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದು, ಇದೀಗ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಝುಲನ್ ಗೋಸ್ವಾಮಿ ಅವರ ಕುರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

  • ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

    ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

    – ನನ್ನನ್ನು ಒಳ್ಳೆಯ ವ್ಯಕ್ತಿಯನ್ನಾಗಿ ಮಾಡಿದ್ದು ಅನುಷ್ಕಾ

    ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ.

    ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ.

    ನಾನು ನನ್ನ ಬವದಲಾವಣೆಯ ಪೂರ್ಣ ಪ್ರಮಾಣದ ಕ್ರೆಡಿಟ್ ಅನ್ನು ಅನುಷ್ಕಾಗೆ ನೀಡುತ್ತೇನೆ. ಆಕೆ ನನ್ನ ಬಾಳ ಸಂಗಾತಿಯಾಗಿರುವುದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಜೀವನದಲ್ಲಿ ಮಾಡುವ ಒಳ್ಳೆಯ ಕೆಲಸಗಳು ಇನ್ನೂ ಮುಂದೆ ಬಹಳ ಇದೆ ಎಂದು ಆಕೆ ನನಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ. ಒಬ್ಬ ಆಟಗಾರನಾಗಿ ನನ್ನ ಜವಾಬ್ದಾರಿ ಏನು? ನಾನು ಈಗಿರುವ ಸ್ಥಾನದಲ್ಲಿ ಯಾವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಉತ್ತಮ ಗುಣಗಳ ಮೂಲಕ ಜನರಿಗೆ ಒಳ್ಳೆಯ ಮಾದರಿಯಾಗಿರಬೇಕು ಎಂಬುದೆಲ್ಲವನ್ನು ಕಲಿಸಿ ಕೊಟ್ಟವಳು ಅನುಷ್ಕಾ ಎಂದು ವಿರಾಟ್ ತಿಳಿಸಿದ್ದಾರೆ.

    ನಾನು ಅನುಷ್ಕಾಳನ್ನು ಭೇಟಿ ಮಾಡದಿದ್ದರೆ ನಾನು ಮುಕ್ತ ವ್ಯಕ್ತಿಯಾಗುತ್ತಿರಲಿಲ್ಲ. ನನ್ನ ಸ್ವಭಾವ ತುಂಬಾ ಕಠಿಣವಾಗಿದ್ದರಿಂದ ನಾನು ಬದಲಾಗುತ್ತಿರಲಿಲ್ಲ. ಆದರೆ ಇಂದು ಅವಳು ಒಳ್ಳೆಯ ವ್ಯಕ್ತಿಯಾಗಿ ನನ್ನನ್ನು ಬದಲಾಯಿಸಿದ್ದಾಳೆ ಎಂದು ಪತ್ನಿ ಅನುಷ್ಕಾ ಶರ್ಮಾರನ್ನ ವಿರಾಟ್ ಹಾಡಿಹೊಗಳಿದ್ದಾರೆ. ಜೊತೆಗೆ ಈ ಕಾರ್ಯಕ್ರಮದಲ್ಲಿ ನಾನು ಅನುಷ್ಕಾಳಿಗಾಗಿ ಅವಳ ಹುಟ್ಟುಹಬ್ಬದ ದಿನ ಕೇಕ್ ಮಾಡಿದ್ದೆ ಎಂದು ಕೊಹ್ಲಿ ತಿಳಿಸಿದ್ದಾರೆ.

    ಕೊರೊನಾ ಲಾಕ್‍ಡೌನ್‍ನಿಂದ ಕಳೆದ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದಕ್ಕೆ ಹೋಗಿತ್ತು. ಈಗ ಈ ವರ್ಷದ ಐಪಿಎಲ್ ಅನ್ನು ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ನಡೆಸಲು ಬಿಸಿಸಿಐ ತೀರ್ಮಾನ ಮಾಡಿದೆ. ಎಂದಿನಂತೆ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)ಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ 177 ಪಂದ್ಯಗಳನ್ನು ಆಡಿದ್ದಾರೆ.

    ಐಪಿಎಲ್‍ನಲ್ಲಿ ಬ್ಯಾಟ್ಸ್ ಮ್ಯಾನ್ ಆಗಿ ಉತ್ತಮ ಸಾಧನೆ ಮಾಡಿರುವ ಕೊಹ್ಲಿ, ಐಪಿಎಲ್‍ನಲ್ಲಿ 37.84ರ ಸರಾಸರಿಯೊಂದಿಗೆ ಒಟ್ಟು 5,412 ರನ್ ಗಳಿಸಿದ್ದಾರೆ ಮತ್ತು 131.61 ಸ್ಟ್ರೈಕ್ ರೇಟ್ ಬ್ಯಾಟ್ ಬೀಸಿದ್ದಾರೆ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಐದು ಶತಕ ಮತ್ತು ಮೂವತ್ತಾರು ಅರ್ಧಶತಕ ಗಳಿಸಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ ಇದುವರೆಗೆ ನಾಯಕನಾಗಿ ಅವರು ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

  • ಅನುಷ್ಕಾ ಶರ್ಮಾ ಹಾಟ್ ಫೋಟೋಗಳಿಗೆ ಕೊಹ್ಲಿ ರಿಯಾಕ್ಷನ್..!

    ಅನುಷ್ಕಾ ಶರ್ಮಾ ಹಾಟ್ ಫೋಟೋಗಳಿಗೆ ಕೊಹ್ಲಿ ರಿಯಾಕ್ಷನ್..!

    ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಬಳಿಕವೂ ಸಿನಿಮಾಗಳಿಂದ ದೂರವೇ ಉಳಿದ್ದರೂ ತಮ್ಮ ಹಾಟ್ ಫೋಟೋಶೂಟ್ ಸಾಕಷ್ಟು ಸುದ್ದಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅನುಷ್ಕಾ ಅಭಿಮಾನಿಗಳೊಂದಿಗೆ ತಮ್ಮ ಹೊಸ ಫೋಟೋಶೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಶರ್ಮಾ ವೋಗ್ ಇಂಡಿಯಾಗಾಗಿ ಫೋಟೋಶೂಟ್ ಮಾಡಿದ್ದು, ಈ ಫೋಟೋವೊಂದನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋ ಅನುಷ್ಕಾ ಪತಿ ವಿರಾಟ್ ಕೊಹ್ಲಿ ಕೂಡ ಪ್ರತಿಕ್ರಿಯೆ ನೀಡಿ ಕಾಮೆಂಟ್ ಮಾಡಿದ್ದು, ಹಾರ್ಟ್ ಸಿಂಬಲ್ ಇಮೋಜಿ ಹಾಕುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

    32 ವರ್ಷದ ಅನುಷ್ಕಾ ಶರ್ಮಾ ‘ಝೀರೋ’ ಸಿನಿಮಾದಲ್ಲಿ ಅಂತಿಮವಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಆ ಬಳಿಕ ‘ಅಂಗ್ರೇಜಿ ಮಿಡಿಯಂ’ನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಮದುವೆ ಬಳಿಕ ನಟನೆಯಿಂದ ದೂರವೇ ಉಳಿದಿರುವ ಅನುಷ್ಕಾ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ ಅನುಷ್ಕಾ ಲೀಡ್ ರೋಲ್‍ನಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸ ಸಿನಿಮಾ ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಬೇಕಿದೆ.

    ಮದುವೆ ಬಳಿಕ ನಿರ್ಮಾಪಕರಾಗಿ ಬದಲಾಗಿರುವ ಅನುಷ್ಕಾ ಶರ್ಮಾ, ‘ಕ್ಲೀನ್ ಸ್ಲೇಟ್ ಫಿಲ್ಮ್ಸ್’ ಮೂಲಕ ‘ಪಾತಾಳ್ ಲೋಕ್’ ಮತ್ತು ‘ಬುಲ್‍ಬುಲ್’ ಎಂಬ ವೆಬ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಅಲ್ಲದೇ ಉತ್ತಮ ಪ್ರಚಾರವನ್ನು ಪಡೆದಿದ್ದ ಅನುಷ್ಕಾ ಶರ್ಮಾ ನಿರ್ಮಾಣದ ಸಿನಿಮಾಗಳಿಗೆ ವಿಮರ್ಶಕರು ಮತ್ತು ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

    ಕೊರೊನಾ ಅನ್‍ಲಾಕ್ ನಡುವೆಯೂ ಅನುಷ್ಕಾ ವೋಗ್ ಇಂಡಿಯಾ ಫೋಟೋಶೂಟ್‍ನಲ್ಲಿ ಭಾಗಿಯಾಗಿದ್ದಾರೆ. ಇತ್ತೀಚೆಗೆ ಲಾಕ್‍ಡೌನ್ ಸಂದರ್ಭದ ಕುರಿತು ಇನ್‍ಸ್ಟಾ ಲೈವ್‍ನಲ್ಲಿ ಮಾತನಾಡಿದ್ದ ಕೊಹ್ಲಿ, ಮದುವೆ ಬಳಿಕ ಒಂದೇ ಸ್ಥಳದಲ್ಲಿ ಇಷ್ಟು ದಿನಗಳನ್ನು ನಾವಿಬ್ಬರೂ ಒಟ್ಟಿಗೆ ಕಳೆದಿದ್ದೇವೆ. ಇದು ನಿಜಕ್ಕೂ ಅಚ್ಚರಿ ವಿಚಾರವಾದರೂ ಸಾಕಷ್ಟು ಸಂತಸ ತಂದಿದೆ. ಅಲ್ಲದೇ ಎಚ್ಚರಿಕೆಯಿಂದಲೂ ಇದ್ದೇವೆ ಎಂದು ಕೊಹ್ಲಿ ಹೇಳಿದ್ದರು.

  • ಅನುಷ್ಕಾ ಶರ್ಮಾ ನಿರ್ಮಾಣದ ‘ಬುಲ್ ಬುಲ್’ ಸಿನಿಮಾಗೆ ಕೊಹ್ಲಿ ರಿವ್ಯೂ!

    ಅನುಷ್ಕಾ ಶರ್ಮಾ ನಿರ್ಮಾಣದ ‘ಬುಲ್ ಬುಲ್’ ಸಿನಿಮಾಗೆ ಕೊಹ್ಲಿ ರಿವ್ಯೂ!

    ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಿರ್ಮಾಣದ ‘ಬುಲ್ ಬುಲ್’ ಸಿನಿಮಾಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರಿವ್ಯೂ ನೀಡಿದ್ದು, ಸಿನಿಮಾ ತನಗೆ ಇಷ್ಟವಾಗಿದೆ. ಯಾರು ಮಿಸ್ ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ.

    ಅನ್ವಿತಾ ದತ್ ನಿರ್ದೇಶನದ ವೆಬ್ ಸಿನಿಮಾ ‘ಬುಲ್ ಬುಲ್’ ನಿರ್ಮಾಪಕರಲ್ಲಿ ಅನುಷ್ಕಾ ಶರ್ಮಾ ಕೂಡ ಒಬ್ಬರು. ರಾಹುಲ್ ಬೋಸ್, ತೃಪ್ತಿ ದಿಮಿ, ಅವಿನಾಶ್ ತಿವಾರಿ, ಪರಂಬ್ರತ ಚಟ್ಟೋಪಾಧ್ಯಾಯ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

    ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಬುಲ್ ಬುಲ್’ ಸಿನಿಮಾದ ಟ್ರೈಲರ್ ಭಾರೀ ಪ್ರಶಂಸೆ ಪಡೆದುಕೊಂಡಿತ್ತು. ಬುಧವಾರ ನೆಟ್‍ಫ್ಲಿಕ್ಸ್‍ನಲ್ಲಿ ಸಿನಿಮಾ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾವನ್ನು ನೋಡಿದ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪ್ರತಿಯೊಬ್ಬರು ಹೃದಯವನ್ನ ಕಲಕುವ ಕಥೆಯೊಂದಿದ್ದು, ಇಂತಹ ಕಥೆಯನ್ನು ತೆರೆಗೆ ಅಳವಡಿಸಿರುವ ವಿಧಾನ ಇಷ್ಟ ಆಯ್ತು. ಅಣ್ಣ, ತಂಗಿ ಫುಲ್ ಫೈರ್ ಆಗಿದ್ದಾರೆ (ಅನುಷ್ಕಾ, ಸಹೋದರ ಕರ್ಣೇಶ್). ಸಿನಿಮಾ ಬಿಡುಗಡೆಯಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.

    32 ವರ್ಷದ ಅನುಷ್ಕಾ ಶರ್ಮಾ ಜೀರೋ ಸಿನಿಮಾದಲ್ಲಿ ಅಂತಿಮವಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಆ ಬಳಿಕ ‘ಅಂಗ್ರೇಜಿ ಮಿಡಿಯಂ’ನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಮದುವೆ ಬಳಿಕ ನಟನೆಯಿಂದ ದೂರವೇ ಉಳಿದಿರುವ ಅನುಷ್ಕಾ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ ಅನುಷ್ಕಾ ಲೀಡ್ ರೋಲ್‍ನಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸ ಸಿನಿಮಾ ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಬೇಕಿದೆ.

  • #VirushkaDivorce ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗ್ತಿರೋದ್ಯಾಕೆ?

    #VirushkaDivorce ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗ್ತಿರೋದ್ಯಾಕೆ?

    ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ #ವಿರುಷ್ಕಾ_ಡಿವೋರ್ಸ್ ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೀಮ್ಸ್ ಗಳು ವೈರಲ್ ಆಗ್ತಿವೆ.

    2017 ಡಿಸೆಂಬರ್ 11ರಂದು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ಪರಿ, ಅನುಷ್ಕಾ ಶರ್ಮಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅಂದಿನಿಂದ ಜೋಡಿ ತಮ್ಮ ಬ್ಯುಸಿ ಲೈಫ್ ನಡುವೆ ಒಬ್ಬರಿಗೊಬ್ಬರು ತಮ್ಮ ಸಮಯವನ್ನು ಮೀಸಲಿಡುತ್ತಾ ಬಂದಿದ್ದಾರೆ. ಕೊಹ್ಲಿ ಜೊತೆ ಆಗಾಗ ಕ್ರಿಕೆಟ್ ಮೈದಾನದಲ್ಲಿ ಅನುಷ್ಕಾ ಕಾಣಿಸಿಕೊಳ್ಳುತ್ತಿರುತ್ತಾರೆ. ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲಿರೋ ಜೋಡಿ ಫುಲ್ ಎಂಜಾಯ್ ಮಾಡುತ್ತಿದ್ದಾರೆ.

    https://twitter.com/Nhiipata/status/1268951155629047808

    ಟ್ರೆಂಡ್ ಆಗ್ತಿರೋದ್ಯಾಕೆ?: ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ವಿಚ್ಛೇಧನಕ್ಕೆ ಮುಂದಾಗಿದ್ದಾರೆ ಎಂದು ಬಿಂಬಿಸುವ ಹ್ಯಾಶ್ ಟ್ಯಾಗ್ ವೈರಲ್ ಆಗಿದೆ. ಮದುವೆಗೂ ಮುನ್ನ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡೇಟಿಂಗ್ ನಲ್ಲಿದ್ದರು. ಆದ್ರೆ ಎಲ್ಲಿಯೂ ತಮ್ಮ ಪ್ರೇಮ ವಿಚಾರವನ್ನು ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಪ್ರೀತಿ ಆರಂಭಗೊಂಡ ಕೆಲ ದಿನಗಳ ಬಳಿಕ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಬ್ರೇಕಪ್ ಆಗಿದೆ ಎಂಬಿತ್ಯಾದಿ ಸುದ್ದಿಗಳು ಬಿತ್ತರವಾಗಿದ್ದವು. ಆ ವೇಳೆ ಪ್ರಕಟವಾದ ಲೇಖನವೊಂದರ ಫೋಟೋ ವೈರಲ್ ಆಗಿದ್ದರಿಂದ #VirushkaDivorce ಟ್ಯಾಗ್ ಹರಿದಾಡುತ್ತಿದೆ ಎಂದು ವರದಿಯಾಗಿದೆ.

    https://twitter.com/ABHISHKBHATTAR/status/1268994550833414144

    ಈ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದ್ದಂತೆ ವಿರುಷ್ಕಾ ಆಪ್ತರು, ಇದು ಸುಳ್ಳು ಸುದ್ದಿ ಅಂತಾ ಸ್ಪಷ್ಟನೆ ನೀಡಿದ್ದಾರೆ. ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದುಕೊಂಡಿರುವ ಅನುಷ್ಕಾ ವೆಬ್ ಸೀರೀಸ್ ನಿರ್ಮಾಣ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

  • ಅವಳ ನಂಬಿಕೆಯನ್ನು ನಾವು ಉಳಿಸಿಕೊಳ್ಳಲಿಲ್ಲ: ವಿಜಯಲಕ್ಷ್ಮಿ ದರ್ಶನ್

    ಅವಳ ನಂಬಿಕೆಯನ್ನು ನಾವು ಉಳಿಸಿಕೊಳ್ಳಲಿಲ್ಲ: ವಿಜಯಲಕ್ಷ್ಮಿ ದರ್ಶನ್

    ಬೆಂಗಳೂರು: ಗರ್ಭಿಣಿ ಆನೆ ಸಾವನ್ನಪ್ಪಿದ ಸುದ್ದಿ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ಹೆಚ್ಚು ಸದ್ದು ಮಾಡುತ್ತಿದ್ದು, ಮಾನವೀಯತೆ ಸತ್ತು ಹೋಗಿದೆ ಎಂಬ ಹ್ಯಾಷ್ ಟ್ಯಾಗ್‍ನೊಂದಿಗೆ ಹಲವರು ಆನೆ ಸಾವಿಗೆ ಮರುಕ ಪಡುತ್ತಿದ್ದಾರೆ. ಅದೇ ರೀತಿ ಇದೀಗ ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ ಸಹ ಈ ಕೃತ್ಯವನ್ನು ಖಂಡಿಸಿದ್ದಾರೆ.

    ಗರ್ಭಿಣಿ ಆನೆ ಸಾವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನವೇ ಸೃಷ್ಟಿಯಾಗಿದ್ದು, ಹಲವರು ನಟ, ನಟಿಯರು, ಆಟಗಾರರು ಖಂಡನೆ ವ್ಯಕ್ತಪಡಿಸಿದ್ದಾರೆ. ಮಾನವೀಯತೆಯ ಕಗ್ಗೊಲೆ ಎಂದಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿಯವರು ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ನೀರಲ್ಲಿ ಮುಳುಗಿದ ಆನೆಯ ಗ್ರಾಫಿಕ್ ಫೋಟೋ ಹಂಚಿಕೊಂಡು, ಅಂತಿಮವಾಗಿ ಮಾನವೀಯತೆ ಸತ್ತಿತು. ಅವಳು ಗರ್ಭಿಣಿ, ನಮ್ಮನ್ನು ನಂಬಿದ್ದಳು. ಆದರೆ ನಾವು ಅದನ್ನು ಹುಸಿಯಾಗಿಸಿದೆವು. ದ್ರೋಹಕ್ಕೆ ಮತ್ತೊಂದು ಹೆಸರೇ ಮಾನವರು ಎಂದು ಬರೆದುಕೊಂಡಿದ್ದಾರೆ.

    ಕೆಲ ದಿನಗಳ ಹಿಂದೆ ಕೇರಳದಲ್ಲಿ ಈ ಘಟನೆ ಸಂಭವಿಸಿದ್ದು, ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಗರ್ಭಿಣಿ ಆನೆಗೆ ಪೈನಾಪಲ್‍ನಲ್ಲಿ ಪಟಾಕಿ ಇಟ್ಟು ತಿನಿಸಲಾಗಿತ್ತು. ಮದ್ದು ಬಾಯಿಯಲ್ಲಿಯೇ ಬ್ಲಾಸ್ಟ್ ಆಗಿದ್ದು, ತಕ್ಷಣವೇ ಹತ್ತಿರದಲ್ಲೇ ಇದ್ದ ನದಿಯಲ್ಲಿ ಆನೆ ಮುಳುಗಿತ್ತು. ಅಷ್ಟೊತ್ತಿಗೆ ಅರಣ್ಯಾಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ಆಗಮಿಸಿದರು. ಆದರೆ ಆನೆ ಆಗಲೇ ಕೊನೆಯುಸಿರೆಳೆದಿತ್ತು. ಕೊನೆಗೂ ಪಾಪಿಗಳ ಕೃತ್ಯಕ್ಕೆ ಗರ್ಭಿಣಿ ಆನೆ ಹೊಟ್ಟೆಯಲ್ಲಿನ ತನ್ನ ಮಗುವಿನೊಂದಿಗೆ ಪ್ರಾಣ ಬಿಟ್ಟಿತ್ತು.

    ಇದು ಸುದ್ದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ ನಲ್ಲಿ ಸಹ ಟ್ರೆಂಡಿಂಗ್‍ನಲ್ಲಿತ್ತು. ಹ್ಯುಮ್ಯಾನಿಟಿ ಇಸ್ ಡೆಡ್ ಎಂಬ ಹ್ಯಾಶ್ ಟ್ಯಾಗ್‍ನೊಂದಿಗೆ ಅಭಿಯಾನವನ್ನೇ ಆರಂಭಿಸಲಾಗಿತ್ತು. ದೇಶಾದ್ಯಂತ ಹಲವು ಜನ ಮರುಕ ಪಟ್ಟಿದ್ದರು. ಅದೇ ರೀತಿ ವಿಜಯಲಕ್ಷ್ಮಿ ಸಹ ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆನೆಯ ಕಾರ್ಟೂನ್ ಫೋಟೋ ಟ್ವೀಟ್ ಮಾಡಿ, ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು, ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಕರೆ ನೀಡಿದ್ದಾರೆ.

    ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಸಹ ಇನ್‍ಸ್ಟಾಗ್ರಾಮ್‍ನಲ್ಲಿ ಈ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಯ ಕೃತ್ಯ ಎಸಗಿದವರನ್ನು ಹಿಡಿದು ಶಿಕ್ಷಿಸಬೇಕು. ಈ ಮೂಲಕ ನ್ಯಾಯ ಒದಗಿಸಬೇಕು ಎಂದು ಕೇರಳ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.