Tag: AP Arjun

  • ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗೆ ನೀಡುವೆವು : ಮಾರ್ಟಿನ್ ನಿರ್ದೇಶಕ ಅರ್ಜುನ್ ಘೋಷಣೆ

    ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗೆ ನೀಡುವೆವು : ಮಾರ್ಟಿನ್ ನಿರ್ದೇಶಕ ಅರ್ಜುನ್ ಘೋಷಣೆ

    ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ (Martin) ಟೀಸರ್ (Teaser) ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ರೆಸ್ಪಾನ್ಸ್ ಬಂದಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಟೀಸರ್ ಅನ್ನು ಟಿಕೆಟ್ ಖರೀದಿಸಿ ನೋಡುವಂತಹ ವ್ಯವಸ್ಥೆಯನ್ನು ಚಿತ್ರತಂಡ ಮಾಡಿತ್ತು. ಅದರಿಂದ ಬಂದ ಹಣವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗಿಸುವುದಾಗಿ ನಿರ್ದೇಶಕ ಎ.ಪಿ.ಅರ್ಜುನ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗಳಿಗೆ ನೀಡುವುದಾಗಿ ತಿಳಿಸಿದ್ದಾರೆ.

    ಕನ್ನಡದ ಮತ್ತೊಂದು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು, ಟೀಸರ್ ನೋಡಿದ ಪರಭಾಷಾ ನಟರು ಹಾಗೂ ತಂತ್ರಜ್ಞರು ಅಭಿನಂದನೆಯ ಸುರಿಮಳೆಗೈದಿದ್ದಾರೆ. ಕನ್ನಡದಲ್ಲಿ ಈ ಮಟ್ಟದ ಚಿತ್ರಗಳು ಬರುತ್ತಿರುವುದಕ್ಕೆ ಅಕ್ಷರಶಃ ಬಾಲಿವುಡ್ ಕಂಗಾಲಾಗಿದೆ. ಈಗಾಗಲೇ ಕೆಜಿಎಫ್, ಕಾಂತಾರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿವೆ. ಕಬ್ಜ ಸಿನಿಮಾ ಇನ್ನಷ್ಟೇ ರಿಲೀಸ್ ಆಗುತ್ತಿದೆ. ನಂತರ ಮಾರ್ಟಿನ್ ಮತ್ತೆ ಬಾಲಿವುಡ್ ಅನ್ನು ನಿದ್ದೆಗೆಡಿಸಲಿದೆ.

    ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಕಾಂಬಿನೇಷನ್ ನ ಮಾರ್ಟಿನ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆ ಆಗಿದೆ. ಈ ಟೀಸರ್ ನೋಡಲೆಂದೇ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಇದೇ ಮೊದಲ ಬಾರಿಗೆ ಟೀಸರ್ ನೋಡುವುದಕ್ಕಾಗಿ ಟಿಕೆಟ್ ಖರೀದಿಸಬೇಕಿತ್ತು. ಟೀಸರ್ ನೋಡಿದ ನಂತರ ಟಿಕೆಟ್ ಹಣಕ್ಕೆ ಮೋಸವಾಗಿಲ್ಲ ಎಂದಿದ್ದಾರೆ ಅಭಿಮಾನಿಗಳು. ಆ ರೀತಿಯಲ್ಲಿ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಮಾರ್ಟಿನ್ ಸಾಹಸ ಪ್ರಧಾನ ಸಿನಿಮಾ ಎನ್ನುವುದು ಟೀಸರ್ ನ ಪ್ರತಿ ಫ್ರೇಮ್ ಹೇಳುತ್ತದೆ. ಅದರಲ್ಲೂ ಅಚ್ಚರಿ ಮೂಡುವಂತಹ ಮೈಕಟ್ಟಿನ ಧ್ರುವ ಸರ್ಜಾ ಎದುರಾಳಿಗಳನ್ನು ಕುಟ್ಟಿ ಪುಡಿ ಮಾಡುವುದನ್ನು ನೋಡುವುದೇ ರೋಮಾಂಚನ. ಆ ಮಟ್ಟಿಗೆ ಚಿತ್ರದಲ್ಲಿ ತಮ್ಮ ಇರುವಿಕೆಯನ್ನು ತೋರಿಸಿದ್ದಾರೆ ಧ್ರುವ ಸರ್ಜಾ. ಟೀಸರ್ ತುಂಬಾ ಹೊಡೆದಾಟ, ಬಂದೂಕು, ಬಾಂಬುಗಳೇ ಘರ್ಜಿಸಿವೆ. ಅದರಲ್ಲೂ ಕಾರ್ ಚೇಸ್ ದೃಶ್ಯ ಮತ್ತಷ್ಟು ಸಿನಿಮಾದ ತೂಕವನ್ನು ಹೆಚ್ಚಿಸಿದೆ.

    ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ನಾಯಕ. ಆ ನಾಯಕನ ಸುತ್ತ ಹೆಣೆದಿರುವ ಕಥೆ ಮಾರ್ಟಿನ್ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಭಾರತಕ್ಕೂ ಮತ್ತು ಪಾಕಿಸ್ತಾನದಲ್ಲಿ ಬಂಧಿಯಾಗಿರುವ ನಾಯಕನಿಗೆ ಕನೆಕ್ಷನ್ ಏನಿರಲಿದೆ ಎನ್ನುವುದು ಕುತೂಹಲದ ಪ್ರಶ್ನೆ. ಒಟ್ಟಿನಲ್ಲಿ ಸಿನಿಮಾ ಅದ್ಧೂರಿಯಾಗಿ ಮೂಡಿ ಬಂದಿದೆ. ನಿರ್ದೇಶಕರ ಶ್ರಮವೂ ಎದ್ದು ಕಾಣುತ್ತದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಮತ್ತೊಂದು ಕನ್ನಡ ಸಿನಿಮಾ ಭಾರತದಾದ್ಯಂತ ಹವಾ ಸೃಷ್ಟಿ ಮಾಡಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಿವುಡ್ ನಿದ್ದೆಗೆಡಿಸಿದ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ಬಾಲಿವುಡ್ ನಿದ್ದೆಗೆಡಿಸಿದ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ನ್ನಡದ ಮತ್ತೊಂದು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ (Martin) ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು, ಟೀಸರ್ (Teaser) ನೋಡಿದ ಪರಭಾಷಾ ನಟರು ಹಾಗೂ ತಂತ್ರಜ್ಞರು ಅಭಿನಂದನೆಯ ಸುರಿಮಳೆಗೈದಿದ್ದಾರೆ. ಕನ್ನಡದಲ್ಲಿ ಈ ಮಟ್ಟದ ಚಿತ್ರಗಳು ಬರುತ್ತಿರುವುದಕ್ಕೆ ಅಕ್ಷರಶಃ ಬಾಲಿವುಡ್ ಕಂಗಾಲಾಗಿದೆ. ಈಗಾಗಲೇ ಕೆಜಿಎಫ್, ಕಾಂತಾರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿವೆ. ಕಬ್ಜ ಸಿನಿಮಾ ಇನ್ನಷ್ಟೇ ರಿಲೀಸ್ ಆಗುತ್ತಿದೆ. ನಂತರ ಮಾರ್ಟಿನ್ ಮತ್ತೆ ಬಾಲಿವುಡ್ (Bollywood) ಅನ್ನು ನಿದ್ದೆಗೆಡಿಸಲಿದೆ.

    ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಕಾಂಬಿನೇಷನ್ ನ ಮಾರ್ಟಿನ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆ ಆಗಿದೆ. ಈ ಟೀಸರ್ ನೋಡಲೆಂದೇ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಇದೇ ಮೊದಲ ಬಾರಿಗೆ ಟೀಸರ್ ನೋಡುವುದಕ್ಕಾಗಿ ಟಿಕೆಟ್ ಖರೀದಿಸಬೇಕಿತ್ತು. ಟೀಸರ್ ನೋಡಿದ ನಂತರ ಟಿಕೆಟ್ ಹಣಕ್ಕೆ ಮೋಸವಾಗಿಲ್ಲ ಎಂದಿದ್ದಾರೆ ಅಭಿಮಾನಿಗಳು. ಆ ರೀತಿಯಲ್ಲಿ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ.

    ಮಾರ್ಟಿನ್ ಸಾಹಸ ಪ್ರಧಾನ ಸಿನಿಮಾ ಎನ್ನುವುದು ಟೀಸರ್ ನ ಪ್ರತಿ ಫ್ರೇಮ್ ಹೇಳುತ್ತದೆ. ಅದರಲ್ಲೂ ಅಚ್ಚರಿ ಮೂಡುವಂತಹ ಮೈಕಟ್ಟಿನ ಧ್ರುವ ಸರ್ಜಾ ಎದುರಾಳಿಗಳನ್ನು ಕುಟ್ಟಿ ಪುಡಿ ಮಾಡುವುದನ್ನು ನೋಡುವುದೇ ರೋಮಾಂಚನ. ಆ ಮಟ್ಟಿಗೆ ಚಿತ್ರದಲ್ಲಿ ತಮ್ಮ ಇರುವಿಕೆಯನ್ನು ತೋರಿಸಿದ್ದಾರೆ ಧ್ರುವ ಸರ್ಜಾ. ಟೀಸರ್ ತುಂಬಾ ಹೊಡೆದಾಟ, ಬಂದೂಕು, ಬಾಂಬುಗಳೇ ಘರ್ಜಿಸಿವೆ. ಅದರಲ್ಲೂ ಕಾರ್ ಚೇಸ್ ದೃಶ್ಯ ಮತ್ತಷ್ಟು ಸಿನಿಮಾದ ತೂಕವನ್ನು ಹೆಚ್ಚಿಸಿದೆ.

    ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ನಾಯಕ. ಆ ನಾಯಕನ ಸುತ್ತ ಹೆಣೆದಿರುವ ಕಥೆ ಮಾರ್ಟಿನ್ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಭಾರತಕ್ಕೂ ಮತ್ತು ಪಾಕಿಸ್ತಾನದಲ್ಲಿ ಬಂಧಿಯಾಗಿರುವ ನಾಯಕನಿಗೆ ಕನೆಕ್ಷನ್ ಏನಿರಲಿದೆ ಎನ್ನುವುದು ಕುತೂಹಲದ ಪ್ರಶ್ನೆ. ಒಟ್ಟಿನಲ್ಲಿ ಸಿನಿಮಾ ಅದ್ಧೂರಿಯಾಗಿ ಮೂಡಿ ಬಂದಿದೆ. ನಿರ್ದೇಶಕರ ಶ್ರಮವೂ ಎದ್ದು ಕಾಣುತ್ತದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಮತ್ತೊಂದು ಕನ್ನಡ ಸಿನಿಮಾ ಭಾರತದಾದ್ಯಂತ ಹವಾ ಸೃಷ್ಟಿ ಮಾಡಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿರೀಕ್ಷೆ ಹೆಚ್ಚಿಸಿದ ‘ಮಾರ್ಟಿನ್’ ಟೀಸರ್ : ಧ್ರುವ ಸರ್ಜಾ ಆ್ಯಕ್ಷನ್ ಭರ್ಜರಿ

    ನಿರೀಕ್ಷೆ ಹೆಚ್ಚಿಸಿದ ‘ಮಾರ್ಟಿನ್’ ಟೀಸರ್ : ಧ್ರುವ ಸರ್ಜಾ ಆ್ಯಕ್ಷನ್ ಭರ್ಜರಿ

    ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಕಾಂಬಿನೇಷನ್ ನ ಮಾರ್ಟಿನ್ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದೆ. ಈ ಟೀಸರ್ ನೋಡಲೆಂದೇ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಇದೇ ಮೊದಲ ಬಾರಿಗೆ ಟೀಸರ್ ನೋಡುವುದಕ್ಕಾಗಿ ಟಿಕೆಟ್ ಖರೀದಿಸಬೇಕಿತ್ತು. ಟೀಸರ್ ನೋಡಿದ ನಂತರ ಟಿಕೆಟ್ ಹಣಕ್ಕೆ ಮೋಸವಾಗಿಲ್ಲ ಎಂದಿದ್ದಾರೆ ಅಭಿಮಾನಿಗಳು. ಆ ರೀತಿಯಲ್ಲಿ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ.

    ಮಾರ್ಟಿನ್ ಸಾಹಸ ಪ್ರಧಾನ ಸಿನಿಮಾ ಎನ್ನುವುದು ಟೀಸರ್ ನ ಪ್ರತಿ ಫ್ರೇಮ್ ಹೇಳುತ್ತದೆ. ಅದರಲ್ಲೂ ಅಚ್ಚರಿ ಮೂಡುವಂತಹ ಮೈಕಟ್ಟಿನ ಧ್ರುವ ಸರ್ಜಾ ಎದುರಾಳಿಗಳನ್ನು ಕುಟ್ಟಿ ಪುಡಿ ಮಾಡುವುದನ್ನು ನೋಡುವುದೇ ರೋಮಾಂಚನ. ಆ ಮಟ್ಟಿಗೆ ಚಿತ್ರದಲ್ಲಿ ತಮ್ಮ ಇರುವಿಕೆಯನ್ನು ತೋರಿಸಿದ್ದಾರೆ ಧ್ರುವ ಸರ್ಜಾ. ಟೀಸರ್ ತುಂಬಾ ಹೊಡೆದಾಟ, ಬಂದೂಕು, ಬಾಂಬುಗಳೇ ಘರ್ಜಿಸಿವೆ. ಅದರಲ್ಲೂ ಕಾರ್ ಚೇಸ್ ದೃಶ್ಯ ಮತ್ತಷ್ಟು ಸಿನಿಮಾದ ತೂಕವನ್ನು ಹೆಚ್ಚಿಸಿದೆ. ಇದನ್ನೂ ಓದಿ: ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾದ ನಟ ಅನಂತ್ ನಾಗ್

    ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ನಾಯಕ. ಆ ನಾಯಕನ ಸುತ್ತ ಹೆಣೆದಿರುವ ಕಥೆ ಮಾರ್ಟಿನ್ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಭಾರತಕ್ಕೂ ಮತ್ತು ಪಾಕಿಸ್ತಾನದಲ್ಲಿ ಬಂಧಿಯಾಗಿರುವ ನಾಯಕನಿಗೆ ಕನೆಕ್ಷನ್ ಏನಿರಲಿದೆ ಎನ್ನುವುದು ಕುತೂಹಲದ ಪ್ರಶ್ನೆ. ಒಟ್ಟಿನಲ್ಲಿ ಸಿನಿಮಾ ಅದ್ಧೂರಿಯಾಗಿ ಮೂಡಿ ಬಂದಿದೆ. ನಿರ್ದೇಶಕರ ಶ್ರಮವೂ ಎದ್ದು ಕಾಣುತ್ತದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಮತ್ತೊಂದು ಕನ್ನಡ ಸಿನಿಮಾ ಭಾರತದಾದ್ಯಂತ ಹವಾ ಸೃಷ್ಟಿ ಮಾಡಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ಧ್ರುವ ಸರ್ಜಾ (Dhruva Sarja) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಮಾರ್ಟಿನ್. ಎ.ಪಿ. ಅರ್ಜುನ್‌ (AP Arjun)  ನಿರ್ದೇಶನದಲ್ಲಿ ಮೂಡಿ ಬರುತ್ತಿರುವ  ಈ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಅಡಿಯಲ್ಲಿ  ಉದಯ್ ಕೆ.ಮೆಹ್ತಾ ಅವರು ನಿರ್ಮಿಸುತ್ತಿರುವ  9ನೇ ಚಿತ್ರ ಇದಾಗಿದೆ, ಮಾರ್ಟಿನ್ ಚಿತ್ರದ  ಪ್ಯಾನ್ ಇಂಡಿಯಾ ಟೀಸರ್ (Teaser) ಇದೇ ತಿಂಗಳ 23ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ  ಹಾಜರಿದ್ದ ಚಿತ್ರತಂಡ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.

    ಮೊದಲು ಮಾತನಾಡಿದ ನಿರ್ಮಾಪಕ ಉದಯ್ ಕೆ.ಮೆಹ್ತಾ ಕಳೆದ ಆಗಸ್ಟ್ 15ಕ್ಕೆ ನಮ್ಮ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವುದರೊಂದಿಗೆ ಚಿತ್ರವನ್ನು ಆರಂಭಿಸಿದೆವು. ಈಗಾಗಲೇ ಚಿತ್ರದ ಟಾಕಿ ಪೋರ್ಷನ್ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಫೆ.23ರಂದು ವಿಐಪಿ ಅಭಿಮಾನಿಗಳಿಗೋಸ್ಕರ ಪೇಯ್ಡ್ ಪ್ರೀಮಿಯರ್ ಟೀಸರ್ ಪ್ರದರ್ಶನವನ್ನು ವೀರೇಶ್  ಚಿತ್ರಮಂದಿರದಲ್ಲಿ ಏರ್ಪಡಿಸಿದ್ದೇವೆ. ಹಾಗಂತ ಇದರಿಂದ ಹಣ ಮಾಡುವ ಉದ್ದೇಶವಿಲ್ಲ, ಚಿತ್ರಮಂದಿರದಲ್ಲಿ ಹೆವಿ ಕ್ರೌಡ್ ಆಗಬಾರದೆಂಬ ಉದ್ದೇಶ ನಮ್ಮದು.  ಇದರಿಂದ ಬಂದ ಹಣವನ್ನು ಗೋಶಾಲೆಗೆ ಕೊಡುತ್ತಿದ್ದೇವೆ. ಅಲ್ಲದೆ ಅದೇ ದಿನ ಸಂಜೆ ತಮ್ಮ ಮೊಬೈಲ್‌ಗಳಲ್ಲೇ ಅಭಿಮಾನಿಗಳು ಮಾರ್ಟಿನ್ ಟೀಸರ್ ನೋಡಬಹುದು. ಅಲ್ಲದೆ 5 ಭಾಷೆಗಳಲ್ಲಿ  ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿರುವುದರಿಂದ ಬೇರೆ ಭಾಷೆಗಳ ಮಾದ್ಯಮದವರನ್ನು ಆಹ್ವಾನಿಸಿ ಪ್ಯಾನ್ ಇಂಡಿಯಾ ಪ್ರೆಸ್‌ಮೀಟ್ ಮಾಡುತ್ತಿದ್ದೇವೆ. ಆರಂಭದಲ್ಲಿ ನಮ್ಮ ಚಿತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಆಗುತ್ತೆ ಅಂದುಕೊಂಡಿರಲಿಲ್ಲ, ಬರುಬರುತ್ತಾ ದೊಡ್ಡದಾಗುತ್ತಾ ಹೋಯಿತು ಎಂದು ಹೇಳಿದರು.  ಇದನ್ನೂ ಓದಿಬಾಲಯ್ಯ ಜೊತೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿಗೆ ಭರ್ಜರಿ ಸಂಭಾವನೆ

    ನಿರ್ದೇಶಕ ಎಪಿ. ಅರ್ಜುನ್ ಮಾತನಾಡುತ್ತ ಮಾರ್ಟಿನ್ ನಮ್ಮ ಕನ್ನಡದ ಸಿನಿಮಾ. ಮೊದಲು ನಮ್ಮವರ ಜೊತೆ ಮಾಹಿತಿ ಹಂಚಿಕೊಂಡು ನಂತರ ಬೇರೆಯವರ ಮುಂದೆ ಹೋಗುತ್ತಿದ್ದೇವೆ.  ಇದು ಎಲ್ಲಾ ಕಡೆಗೂ ಸಲ್ಲುವ ಯೂನಿವರ್ಸಲ್ ಕಥೆಯಾಗಿದ್ದರಿಂದ, ಬೇರೆ ಬೇರೆ ಭಾಷೆಗಳಲ್ಲಿ ನಿರ್ಮಿಸಿದ್ದೇವೆ, ಕಳೆದ 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಆರಂಭವಾಯಿತು, ಇಷ್ಟುದಿನ, ಈ ಮಟ್ಟದಲ್ಲಿ ಆಗುತ್ತೆ ಅಂದ್ಕೊಂಡಿರಲಿಲ್ಲ,  ಹೈದರಾಬಾದ್‌ ನಲ್ಲಿ ಸೆಟ್ ಹಾಕಿ 45ದಿನ ಶೂಟ್ ಮಾಡಿದೆವು. ವೈಜಾಕ್‌ನಲ್ಲಿ ಚೇಸ್‌ಸೀನ್ 20 ದಿನಗಳವರೆಗೆ ಆಯಿತು, ಜೊತೆಗೆ  ಆಗಾಗ ಬರುತ್ತಿದ್ದ ಮಳೆಯಿಂದಲೂ ತಡವಾಯಿತು, ಇನ್ನು ಕಾಶ್ಮೀರದಲ್ಲಿ 25 ದಿನ  ಅಲ್ಲದೆ ಮುಂಬೈನಲ್ಲಿ ಚೇಸಿಂಗ್ ಸೀನ್  ಚಿತ್ರೀಕರಣ ಮಾಡಿಕೊಂಡು ಬಂದೆವು. ಒಂದೊಂದು ಕಡೆ ಶೂಟ್ ಮಾಡಿಕೊಂಡು ಬಂದಾಗಲೂ ಒಂದಷ್ಟು ದಿನ ಗ್ಯಾಪ್ ಬೇಕಾಯಿತು. ಚಿತ್ರದಲ್ಲಿ ಧ್ರುವ ಅವರಿಗೆ ತುಂಬಾ ಗೆಟಪ್ ಇದೆ, ನನ್ನ ಕೆರಿಯರ್‌ನಲ್ಲೇ ಅತಿದೊಡ್ಡ ಪವರ್ ಪ್ಯಾಕ್ಡ್ ಚಿತ್ರವಿದು. ವಿಶೇಷವಾದ ಮೋಕೋಬೋಟ್ ಕ್ಯಾಮೆರಾದಲ್ಲಿ  52 ದಿನ  ಕ್ಲೈಮ್ಯಾಕ್ಸ್ ಸೀನ್ ಚಿತ್ರೀಕರಿಸಿದ್ದೇವೆ.  ರಾಮ್ ಲಕ್ಷ್ಮಣ್ ಆಕ್ಷನ್ ಹಾಗೂ ರವಿವರ್ಮಾ ಚೇಸಿಂಗ್ ಸೀನ್ ಮಾಡಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಪರೀಕ್ಷೆಗಳು, ಐಪಿಎಲ್, ಚುನಾವಣೆ ಮುಗಿದ ನಂತರ ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ ಎಂದು ಹೇಳಿದರು.

    ನಾಯಕ ಧ್ರುವ ಮಾತನಾಡಿ 23ರ ಸಂಜೆ 5.55ಕ್ಕೆ ಲಹರಿ ಯುಟ್ಯೂಬ್ ಚಾನೆಲ್‌ನಲ್ಲಿ ನಮ್ಮ ಚಿತ್ರದ ಟೀಸರ್ ರಿಲೀಸಾಗುತ್ತಿದೆ. ಈ ಚಿತ್ರದಲ್ಲಿ ನನ್ನ ಪಾತ್ರ ಈವರೆಗೆ ಮಾಡಿದ್ದಕ್ಕಿಂತ ಬೇರೆ ಥರನೇ ಇದೆ. ಇಡೀ ಸಿನಿಮಾದಲ್ಲಿ  ತುಂಬಾ ಕಡಿಮೆ ಡೈಲಾಗ್ ಇದ್ದು,  ಆ್ಯಕ್ಷನ್ ಸೀನ್ ಜಾಸ್ತಿ ಇರುತ್ತದೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ ಮಾತನಾಡಿ ಕ್ಯಾಮೆರಾ ವರ್ಕ್ ಬಗ್ಗೆ ಮಾಹಿತಿ ನೀಡಿದರು.

    ಬಹುಭಾಷಾ ನಟಿ ವೈಭವಿ ಶಾಂಡಿಲ್ಯ (Shandilya) ಚಿತ್ರದ  ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.  ತೆಲುಗಿನ ಮಣಿ ಶರ್ಮಾ ಅವರ ಸಂಗೀತ ಸಂಯೋಜನೆ, ಕೆಜಿಎಫ್  ಖ್ಯಾತಿಯ ರವಿ ಬಸ್ರೂರು ಅವರ ಹಿನ್ನೆಲೆ  ಸಂಗೀತ ಈ ಚಿತ್ರಕ್ಕಿದೆ. ಕಾಶ್ಮೀರದ ಮೈನಸ್ 7 ಡಿಗ್ರಿ ತಾಪಮಾನ ಇರುವ ಲೊಕೇಶನ್‌ಗಳಲ್ಲಿ  ಆಕ್ಷನ್‌ಸೀನ್  ಚಿತ್ರೀಕರಿಸಲಾಗಿದೆ. ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳು ಚಿತ್ರದ ಹೈಲೈಟ್.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌

    ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌

    ಸ್ಯಾಂಡಲ್‌ವುಡ್ (Sandalwood) ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. `ಮಾರ್ಟಿನ್’ (Martin) ಚಿತ್ರದ ಅಪ್‌ಡೇಟ್‌ಗಾಗಿ ಕಾಯ್ತಿದ್ದ ಫ್ಯಾನ್ಸ್‌ಗೆ ಚಿತ್ರದ ಬಗ್ಗೆ ಈಗ ಬಿಗ್ ಅಪ್‌ಡೇಟ್‌ವೊಂದನ್ನ ಚಿತ್ರತಂಡ ನೀಡಿದ್ದಾರೆ.

    `ಪೊಗರು’ (Pogaru) ಚಿತ್ರದ ನಂತರ ಈಗ ಧ್ರುವಾ ಸರ್ಜಾ ರಗಡ್- ಮಾಸ್ ಲುಕ್‌ನಲ್ಲಿ ಮಾರ್ಟಿನ್ ಆಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ನಿರ್ದೇಶಕ ಎಪಿ ಅರ್ಜುನ್ (Ap Arjun) ನಿರ್ದೇಶನದ `ಅದ್ದೂರಿ’ (Adduri Film) ಚಿತ್ರದಲ್ಲಿ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದ ಧ್ರುವ ಈಗ ಮತ್ತೆ ಮಾರ್ಟಿನ್‌ಗಾಗಿ ಸಾಥ್ ನೀಡಿದ್ದಾರೆ. ಈ ಚಿತ್ರದ ಬಗ್ಗೆ ಮಾಹಿತಿ ಸಿಗದೇ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಚಿತ್ರತಂಡ ಸಿಹಿ ಸುದ್ದಿ ನೀಡಿದ್ದಾರೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

     

    View this post on Instagram

     

    A post shared by AP ARJUN (@aparjun_official)

    ʻಮಾರ್ಟಿನ್ʼ ಚಿತ್ರದ ಟೀಸರ್ ಝಲಕ್ ಇದೇ ತಿಂಗಳು ಫೆ.23ಕ್ಕೆ ರಿಲೀಸ್ ಆಗಲಿದೆ. ಈ ಬಗ್ಗೆ ಸ್ವತಃ ಚಿತ್ರದ ನಿರ್ದೇಶಕ ಎಪಿ ಅರ್ಜುನ್ ಅಪ್‌ಡೇಟ್ ನೀಡಿದ್ದಾರೆ. ಸದ್ಯದಲ್ಲೇ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದ್ದಾರೆ.

    ಉದಯ್ ಮೆಹ್ತಾ ನಿರ್ಮಾಣದ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಧ್ರುವಾಗೆ ವೈಭವಿ ಶಾಂಡಲ್ಯ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    `ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಸ್ಯಾಂಡಲ್‌ವುಡ್‌ನ `ಪೊಗರು’ ಹೀರೋ ಧ್ರುವಾ ಸರ್ಜಾ ಸದ್ಯ `ಮಾರ್ಟಿನ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಎ.ಪಿ ಅರ್ಜುನ್ ಜತೆ ಆ್ಯಕ್ಷನ್ ಸಿಕ್ವೇನ್ಸ್ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

    ಎ.ಪಿ ಅರ್ಜುನ್ ನಿರ್ದೇಶನದ `ಅದ್ದೂರಿ’ ಚಿತ್ರದ ಮೂಲಕ ಧ್ರುವಾ ಸರ್ಜಾ ಎಂಟ್ರಿ ಕೊಟ್ಟಿದ್ದರು. ಮೊದಲ ಚಿತ್ರದಲ್ಲೇ ಭರ್ಜರಿ ಸಕ್ಸಸ್ ಕಂಡು ಗಾಂಧಿನಗರದ ಆ್ಯಕ್ಷನ್ ಪ್ರಿನ್ಸ್ ಆಗಿ ರಾರಾಜಿಸುತ್ತಿದ್ದಾರೆ. `ಪೊಗರು’ ಸೂಪರ್ ಹಿಟ್ ನಂತರ ಈಗ ಎ.ಪಿ ಜತೆ ಮತ್ತೆ ಧ್ರುವಾ ಸರ್ಜಾ ಕೈ ಜೋಡಿದ್ದಾರೆ. ಇದನ್ನೂ ಓದಿ:71,000 ರೂ. ಸೀರೆಯುಟ್ಟು ಬಂದ ಹನ್ಸಿಕಾ ಮೋಟ್ವಾನಿ

    ಮಾರ್ಟಿನ್‌ಗಾಗಿ ಒಂದಾಗಿರುವ ಧ್ರುವಾ ಮತ್ತು ಎ.ಪಿ ಅರ್ಜುನ್ ಸದ್ಯ ಈ ಚಿತ್ರದ ಕೊನೆಯ ಹಂತದ ಚಿತ್ರೀಕರಣಕ್ಕೆ ಬಂದು ತಲುಪಿದೆ. ಸೆಪ್ಟೆಂಬರ್ ೩೦ಕ್ಕೆ ತೆರೆಗೆ ಬರಲಿರುವ ಈ ಚಿತ್ರದ ಆ್ಯಕ್ಷನ್ ಸಿಕ್ವೇನ್ಸ್ ಮತ್ತು ಎರಡು ಹಾಡು ಬಾಕಿಯಿದೆ. ಸ್ಟಂಟ್ ಮಾಸ್ಟರ್ ರವಿ ವರ್ಮಾ ಸಾರಥ್ಯದಲ್ಲಿ ಆ್ಯಕ್ಷನ್ ಸೀನ್ಸ್ ಮೂಡಿಬರಲಿದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಜತೆಗೆ ಜನಪ್ರಿಯ ಸ್ಟಂಟ್ ಮಾಸ್ಟರ್ಸ್‌ ರಾಮ ಲಕ್ಷ್ಮಣ   ಕೂಡ ಚಿತ್ರತಂಡಕ್ಕೆ ಸಾಥ್ ನೀಡುತ್ತಿದ್ದಾರೆ.

    ಧೃವಾ ಸರ್ಜಾಗೆ ನಾಯಕಿಯಾಗಿ ವೈಭವಿ ಕಾಣಿಸಿಕೊಂಡಿದ್ದು, ಬಾಲಿವುಡ್ ನಟ ನಿಕಿತ್, ಅನ್‌ವೇಷಿ ಜೈನ್ ಕೂಡ ಸಾಥ್ ನೀಡಿದ್ದಾರೆ. ಸದ್ಯದಲ್ಲೇ ಬಹುಭಾಷೆಗಳಲ್ಲಿ ಉದಯ್ ಕೆ ಮೆಹ್ತಾ ನಿರ್ಮಾಣದ `ಮಾರ್ಟಿನ್’ ಚಿತ್ರ ತೆರೆಗೆ ಅಬ್ಬರಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಈವರೆಗೂ ಖರ್ಚಾಗಿದ್ದು ಬರೋಬ್ಬರಿ 60 ಕೋಟಿ?

    ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಈವರೆಗೂ ಖರ್ಚಾಗಿದ್ದು ಬರೋಬ್ಬರಿ 60 ಕೋಟಿ?

    ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ನಾನಾ ವಿಚಾರಗಳಿಂದಾಗಿ ಸಖತ್ ಸದ್ದು ಮಾಡುತ್ತಿದೆ. ಅಲ್ಲದೇ ಈ ಸಿನಿಮಾದ ಕುರಿತು ಸಾಕಷ್ಟು ಇಂಟ್ರಸ್ಟಿಂಗ್ ಸಂಗತಿಗಳು ಈ ಚಿತ್ರದಲ್ಲಿದೆ. ಪೊಗರು ನಂತರ ಧ್ರುವ ಮಾಗಿದ್ದ ಕಾರಣದಿಂದಾಗಿ ಅಳೆದು-ತೂಗಿ ಮಾರ್ಟಿನ್‌ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ ಆಕ್ಷನ್ ಪ್ರಿನ್ಸ್. ಅಲ್ಲದೇ, ಅನೇಕ ಸಂಗತಿಗಳ ಕುರಿತು ಬೆಳಕು ಚೆಲ್ಲಿ ಮಾರ್ಟಿನ್‌ಗೆ ಬಣ್ಣಹಚ್ಚಿದ್ದಾರೆ. ಈಗ ಮಾರ್ಟಿನ್ ಸಿನಿಮಾದ ಶೂಟಿಂಗ್ ಫೈನಲ್ ಹಂತಕ್ಕೆ ತಲುಪಿದ್ದು, ಮುಂದಿನ ವಾರದಿಂದ ಹೈದರಾಬಾದ್‌ನಲ್ಲಿ ಫೈನಲ್ ಶೆಡ್ಯೂಲ್ ಪ್ಲಾನ್ ಆಗಿದೆಯಂತೆ.

    ಮಾರ್ಟಿನ್ ಧ್ರುವ ವೃತ್ತಿ ಜೀವನದ ದುಬಾರಿ ಬಜೆಟ್ ಸಿನಿಮಾ. ಮಾರ್ಟಿನ್‌ಗಾಗಿ ಇಲ್ಲಿವರೆಗೆ ಸುಮಾರು ೬೦ ಕೋಟಿ ಖರ್ಚು ಮಾಡಿದ್ದಾರಂತೆ ನಿರ್ಮಾಪಕ ಉದಯ್ ಮೆಹ್ತಾ. ನಿರ್ದೇಶಕ ಎ.ಪಿ ಅರ್ಜುನ್ ಪ್ರತಿ ಫ್ರೇಮ್‌ ಅನ್ನೂ ಸಖತ್ ರಿಚ್ಚಾಗಿ ಶೂಟ್ ಮಾಡಿದ್ದಾರಂತೆ. ಒಂದೂವರೆ ನಿಮಿಷದ ಒಂದು ಕಾರ್ ಛೇಸಿಂಗ್ ದೃಶ್ಯವನ್ನು 9 ದಿನ ಶೂಟ್ ಮಾಡಿದ್ದಾರೆ ಅಂದ್ರೆ ಮಾರ್ಟಿನ್ ವಿಶ್ಯುವಲ್ಸ್‌ಗೆ ಎಷ್ಟು ಮಹತ್ವವಿದೆ ಎನ್ನುವುದು ಈ ಮೂಲಕ ಗೊತ್ತಾಗಲಿದೆ.

    ಸಿನಿಮಾದಲ್ಲಿ ಹತ್ತು ಹಲವು ವಿಶೇಷತೆಗಳಿದ್ದು ತೆಲುಗು, ತಮಿಳಿನ ಸಿನಿರಂಗದ ಖ್ಯಾತನಾಮರು ಮಾರ್ಟಿನ್‌ಗಾಗಿ  ಬಣ್ಣ ಹಚ್ಚಲಿದ್ದಾರೆ ಅನ್ನುವುದು ಸದ್ಯದ ಅಪ್‌ಡೇಟ್. ಎಲ್ಲಾ ಭಾಷೆಯ ಎಲ್ಲಾ ವರ್ಗದ ಜನರು ಮಾರ್ಟಿನ್ ಮೆಚ್ಚಲಿದ್ದಾರೆ ಅನ್ನೊದು ಚಿತ್ರತಂಡ ನಂಬಿಕೆ. ಮಾರ್ಟಿನ್ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡದ ಮತ್ತೊಂದು ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆಯಲಿದೆ ಎನ್ನುವ ನಂಬಿಕೆ ಚಿತ್ರತಂಡದ್ದು. ಇದನ್ನೂ ಓದಿ : ‘ಮದುವೆನೂ ಇಲ್ಲ, ರಿಂಗೂ ಇಲ್ಲ’ ಲಲಿತ್ ಮೋದಿಗೆ ತಿವಿದ ಸುಶ್ಮಿತಾ ಸೇನ್

    ಈವರೆಗೂ ಮಾರ್ಟಿನ್ ಮೋಷನ್ ಪೋಸ್ಟರ್ ಬಿಟ್ಟು ಬೇರೆನೂ ರಿವಿಲ್ ಮಾಡಿಲ್ಲ ಚಿತ್ರತಂಡ. ಫೈನಲ್ ಕಾಪಿ ಕೈಗೆ ಬರೋವರೆಗೆ ಏನೂ ರಿವಿಲ್ ಮಾಡೋದು ಬೇಡ ಅಂತ ಫಿಲಂ ಟೀಮ್ ತಿರ್ಮಾನ ಮಾಡಿದೆಯಂತೆ. ಈ ಸಿನಿಮಾದಲ್ಲಿ ಧ್ರುವ ಡಬಲ್ ರೋಲ್‌ನಲ್ಲಿ ಕಾಣಿಸಿದ್ದಾರೆ ಎನ್ನುವ ಸುದ್ದಿಯೂ ಆದೆ. ಆದ್ರೆ ಈ ಪ್ರಶ್ನೆಗೆ ಚಿತ್ರತಂಡದ ಸದಸ್ಯರು ಇನ್ನೂ ಸ್ವಲ್ಪ ದಿನ ಕಾದು ನೋಡಿ ಅಂತಿದ್ದಾರೆ. ಒಟ್ಟಾರೆ ಇದುವರೆಗೆ ಈ ಸಿನಿಮಾಗೆ ೬೦ ಕೋಟಿ ಖರ್ಚಾಗಿದ್ದು, ೧೦ ಫೈಟ್‌ಗಳಿಂದ ಈ ಚಿತ್ರ ಕೂಡಿದೆ ಎನ್ನುವುದು ಬಲ್ಲ ಮೂಲಗಳ ಮಾಹಿತಿ.

    Live Tv
    [brid partner=56869869 player=32851 video=960834 autoplay=true]

  • `ಅದ್ದೂರಿ ಲವರ್’ಗಾಗಿ `ಕಿಸ್’ ಹೀರೋ ವಿರಾಟ್ ಭರ್ಜರಿ ವರ್ಕೌಟ್

    `ಅದ್ದೂರಿ ಲವರ್’ಗಾಗಿ `ಕಿಸ್’ ಹೀರೋ ವಿರಾಟ್ ಭರ್ಜರಿ ವರ್ಕೌಟ್

    `ಕಿಸ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಲಗ್ಗೆಯಿಟ್ಟ ಪ್ರತಿಭಾವಂತ ನಟ ವಿರಾಟ್ ಈಗ ಅದ್ದೂರಿ ಲವರ್ ಆಗಿ ಮಿಂಚಲು ರೆಡಿಯಾಗಿದ್ದಾರೆ. ಈ ಚಿತ್ರಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ಆಗಿ ವರ್ಕೌಟ್ ಮಾಡ್ತಿದ್ದಾರೆ. ಸದ್ಯ ಈ ವಿಡಿಯೋ ಭಾರೀ ವೈರಲ್ ಆಗ್ತಿದೆ.

    ನಟ ವಿರಾಟ್ ಕಿರುತೆರೆ ಟು ಹಿರಿತೆರೆಯವರೆಗೂ ಅಪಾರ ಅಭಿಮಾನಿಗಳ ಬಳಗ ಹೊಂದಿರೋ ನಟ, ಎ.ಪಿ ಅರ್ಜುನ್ ನಿರ್ದೇಶನದ `ಕಿಸ್’ ಸಿನಿಮಾದಿಂದ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ನಟ ಈಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಎ.ಪಿ ಅರ್ಜುನ್ ನಿರ್ದೇಶನದ `ಅದ್ದೂರಿ ಲವರ್’ ಚಿತ್ರದಲ್ಲಿ ಅದ್ದೂರಿಯಾಗಿ ಮಿಂಚಲು ಜಿಮ್‌ನಲ್ಲಿ ಬೆವರಿಳಿಸುತ್ತಿದ್ದಾರೆ. ಸದ್ಯ ವಿರಾಟ್ ವರ್ಕೌಟ್ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾ ತುಂಬೆಲ್ಲಾ ವೈರಲ್ ಆಗ್ತಿದೆ. ಇದನ್ನೂ ಓದಿ:ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ: ಅಭಿಮಾನಿಗಳಿಗೆ ಸುಂದರ ಕಥೆ ಹೇಳಿದ ರಾಕಿಭಾಯ್

     

    View this post on Instagram

     

    A post shared by Viraat (@viraat_official)

    `ಅದ್ದೂರಿ ಲವರ್’ ಕನ್ನಡ ಮತ್ತು ತೆಲುಗಿನಲ್ಲಿ ಮೂಡಿ ಬರುತ್ತಿದ್ದು, ವಿರಾಟ್‌ ಡಿಫರೆಂಟ್ ಶೇಡ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಅದಕ್ಕಾಗಿ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಾ 8 ಪ್ಯಾಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.  ನಟ ವಿರಾಟ್ ಜಬರ್‌ದಸ್ತ್ ವರ್ಕೌಟ್‌ಗೆ ಮತ್ತು ಲುಕ್ಕಿಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ. ಪಾತ್ರಕ್ಕಾಗಿ ಜಿಮ್‌ನಲ್ಲಿ ಬೆವರಿಳಿಸುತ್ತಿರೋ ವಿರಾಟ್ ಶ್ರಮಕ್ಕೆ ಅಭಿಮಾನಿಗಳು ಉಘೇ ಉಘೇ ಅಂದಿದ್ದಾರೆ. ಹೀಗೆ ಚಂದನವನದಲ್ಲಿ ಸಿನಿಮಾಗಳ ಮೂಲಕ ಸೌಂಡ್ ಮಾಡಲಿ ಎಂಬುದೇ ಅಭಿಮಾನಿಗಳ ಆಶಯ.

  • ಧ್ರುವ ಸರ್ಜಾ ನಟನೆಯ `ಮಾರ್ಟಿನ್’ ಅಬ್ಬರಕ್ಕೆ ಮುಹೂರ್ತ ಫಿಕ್ಸ್

    ಧ್ರುವ ಸರ್ಜಾ ನಟನೆಯ `ಮಾರ್ಟಿನ್’ ಅಬ್ಬರಕ್ಕೆ ಮುಹೂರ್ತ ಫಿಕ್ಸ್

    `ಪೊಗರು’ ಚಿತ್ರದ ಸಕ್ಸಸ್ ನಂತರ ನಟ ಧ್ರುವ ಸರ್ಜಾ ಎ.ಪಿ ಅರ್ಜುನ್ ನಿರ್ದೇಶನದ `ಮಾರ್ಟಿನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ನಟನೆಯ `ಮಾರ್ಟಿನ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ.

    ಸ್ಯಾಂಡಲ್‌ವುಡ್ ಸ್ಟಾರ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ `ಮಾರ್ಟಿನ್’ ಚಿತ್ರದಲ್ಲಿ ಧ್ರುವಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಉದಯ್ ಕೆ ಮೆಹ್ತಾ ನಿರ್ಮಾಣದ `ಮಾರ್ಟಿನ್’ ಇದೇ ಸಪ್ಟೆಂಬರ್ 30ಕ್ಕೆ ತೆರೆಗೆ ಬರಲು ಸಜ್ಜಾಗಿದೆ.

    ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ ನಟನೆಯ ಎರಡನೇ ಚಿತ್ರ ಇದಾಗಿದೆ. `ಮಾರ್ಟಿನ್’ ಸಿನಿಮಾದ ಚಿತ್ರೀಕರಣ ಬಹುತೇಕ ಕಂಪ್ಲೀಟ್ ಆಗಿದ್ದು, ತೆರೆಗೆ ಅಪ್ಪಳಿಸಲು ತೆರೆಮರೆಯಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ನಟ ಧ್ರುವಾಗೆ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದನ್ನು ಓದಿ:ಆರ್‌ಸಿಬಿ ತಂಡದ ಜೊತೆ ಕೈ ಜೋಡಿಸಿದ ಹೊಂಬಾಳೆ ಫಿಲ್ಮ್ಸ್

    ಈಗಾಗಲೇ ಚಿತ್ರದ ಪೋಸ್ಟರ್ ಲುಕ್‌ನಿಂದ ಗಮನ ಸೆಳೆದಿರೋ `ಮಾರ್ಟಿನ್’ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ.ಸೆಪ್ಟೆಂಬರ್ 30ಕ್ಕೆ ತೆರೆಗೆ ಬರುತ್ತಿರೋ ಮಾರ್ಟಿನ್‌ಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

  • ‘ಅದ್ದೂರಿ ಲವರ್’ ಸ್ಟೈಲಿಶ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಎ.ಪಿ ಅರ್ಜುನ್

    ‘ಅದ್ದೂರಿ ಲವರ್’ ಸ್ಟೈಲಿಶ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಎ.ಪಿ ಅರ್ಜುನ್

    ಸ್ಟಾರ್ ಡೈರೆಕ್ಟರ್ ಎ.ಪಿ ಅರ್ಜುನ್ ಮತ್ತೊಮ್ಮೆ ಅದ್ದೂರಿ ಪ್ರೇಮ್ ಕಹಾನಿಯನ್ನು ಸಿಲ್ವರ್ ಸ್ಕ್ರೀನ್ ಮೇಲೆ ಚಿತ್ರಿಸಲು ಮುಂದಾಗಿರುವ ಚಿತ್ರ `ಅದ್ದೂರಿ ಲವರ್’. ಎ.ಪಿ ಅರ್ಜುನ್ ನಿರ್ದೇಶನದ ಕಿಸ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟಿರುವ ಹ್ಯಾಂಡ್ಸಂ ಹುಡುಗ ವಿರಾಟ್ ಮತ್ತೊಮ್ಮೆ ಎ.ಪಿ ಅರ್ಜುನ್ ಚಿತ್ರದಲ್ಲಿ ಅದ್ದೂರಿ ಲವರ್ ಆಗಿ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಟೈಟಲ್ ಮೂಲಕವೇ ಕ್ರೇಜ್ ಕ್ರಿಯೇಟ್ ಮಾಡಿರುವ ಸಿನಿಮಾ ತಂಡ ಇಂದು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ಸಖತ್ ಸ್ಟೈಲಿಶ್ ಆಗಿ ಮೂಡಿ ಬಂದಿರುವ ಫಸ್ಟ್ ಲುಕ್ ಪೋಸ್ಟರ್ ಎಲ್ಲರ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.‌

    ಲವ್ ಸಬ್ಜೆಕ್ಟ್ ಜೊತೆಗೆ ಪಕ್ಕಾ ಕಮರ್ಷಿಯಲ್ ಆ್ಯಂಡ್ ಆಕ್ಷನ್ ಓರಿಯೆಂಟೆಡ್ ಸಿನಿಮಾವಿದು. ಅದಕ್ಕೆ ತಕ್ಕಂತೆ ನಾಯಕ ನಟ ವಿರಾಟ್ ಕೂಡ ಸಖತ್ ಆಗಿಯೇ ಪ್ರಿಪರೇಶನ್ ನಡೆಸಿದ್ದಾರೆ. ಚಿತ್ರದಲ್ಲಿ ಎನರ್ಜೆಟಿಕ್ ಹುಡುಗನಾಗಿ ನಯಾ ಅವತಾರ ತಾಳಿರುವ ವಿರಾಟ್ ಸಿನಿಮಾ ಮೇಲೆ ಸಿಕ್ಕಾಪಟ್ಟೆ ಹೋಪ್ ಇಟ್ಟುಕೊಂಡಿದ್ದಾರೆ. ಅದ್ದೂರಿ ಸಿನಿಮಾ ಮೂಲಕ ಟ್ರೆಂಡ್ ಸೆಟ್ ಮಾಡಿರುವ ನಿರ್ದೇಶಕ ಎ.ಪಿ ಅರ್ಜುನ್ ‘ಅದ್ದೂರಿ ಲವರ್’ ಮೂಲಕ ನಯಾ ಟ್ರೆಂಡ್ ಸೃಷ್ಟಿಸಲು ಸಕಲ ರೀತಿಯಲ್ಲಿ ವಿಶೇಷ ತಯಾರಿ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಏಕಕಾಲದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

    ನಿರ್ದೇಶನದ ಜೊತೆಗೆ ಎ.ಪಿ ಅರ್ಜುನ್ ಫಿಲಂಸ್ ಮೂಲಕ ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡು ಹೈ ಬಜೆಟ್ ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಟೀಂ ವ್ಯಾಲಂಟೈನ್ಸ್ ಡೇ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿ ಗಮನ ಸೆಳೆಯುತ್ತಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಾರಥ್ಯ ಚಿತ್ರಕ್ಕಿರಲಿದ್ದು, ಸಂಕೇತ್ ಎಂವೈಸ್ ಕ್ಯಾಮೆರಾ ವರ್ಕ್, ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.