Tag: Aparna

  • ನಿರೂಪಣೆ ನೀವಿಲ್ಲದೇ ಅಪೂರ್ಣ ಅಪರ್ಣಾ ಅಕ್ಕ: ಅನುಶ್ರೀ ಭಾವುಕ

    ನಿರೂಪಣೆ ನೀವಿಲ್ಲದೇ ಅಪೂರ್ಣ ಅಪರ್ಣಾ ಅಕ್ಕ: ಅನುಶ್ರೀ ಭಾವುಕ

    ನ್ನಡದ ಖ್ಯಾತ ನಿರೂಪಕಿ ಅಪರ್ಣಾ (Aparna) ಜು.11ರಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ (Anushree) ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ನಿರೂಪಣೆ ನೀವಿಲ್ಲದೇ ಅಪೂರ್ಣ ಎಂದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:ಶ್ವಾಸಕೋಶ ಕ್ಯಾನ್ಸರ್‌ ಈ ಹಂತದಲ್ಲಿತ್ತು, ವೈದ್ಯರು ಆರೇ ತಿಂಗಳು ಗ್ಯಾರಂಟಿ ಕೊಟ್ಟಿದ್ದರು – ಮಡದಿ ಸಾವು ನೆನೆದು ಪತಿ ಭಾವುಕ!

    ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ. ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.

    ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

    ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

  • ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ

    ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ

    ನ್ನಡಿಗರ ಮನಗೆದ್ದಿದ್ದ ನಿರೂಪಕಿ ಅಪರ್ಣಾ (Aparna) ಜು.11ರಂದು ಚಿರನಿದ್ರೆಗೆ ಜಾರಿದ್ದಾರೆ. ಇದೀಗ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಇಂದು (ಜು.12) ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ.

    ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 12ರ ಬಳಿಕ ಹೊಯ್ಸಳ ಕರ್ನಾಟಕ ಭಾಗದ ಆಚರಣೆಯಂತೆ ನಡೆಯಲಿರುವ ವಿಧಿ ವಿಧಾನ ನಡೆಯಲಿದೆ. ಇದನ್ನೂ ಓದಿ:ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

    ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

  • `ಬೆಳಗಿಕೊಂಡಿರೆಂದು ಕಿಡಿ ತಾಕಿಸಿ ಹೊರಟಿತು ಹೆಣ್ಣು’ – ಪ್ರೀತಿಯ ಮಡದಿ ನೆನೆದು ಪತಿ ಬರೆದ ಕವನವಿದು..!

    `ಬೆಳಗಿಕೊಂಡಿರೆಂದು ಕಿಡಿ ತಾಕಿಸಿ ಹೊರಟಿತು ಹೆಣ್ಣು’ – ಪ್ರೀತಿಯ ಮಡದಿ ನೆನೆದು ಪತಿ ಬರೆದ ಕವನವಿದು..!

    ಬೆಂಗಳೂರು: ಅಚ್ಚಕನ್ನಡದ ನಿರೂಪಕಿ ಅಪರ್ಣಾ (Kannada Anchor Aparna) ಅವರಿಂದು ಕೊನೆಯುಸಿರೆಳೆದಿದ್ದಾರೆ. ಇತ್ತ ಪ್ರೀತಿಯ ಮಡದಿ ಕಳೆದುಕೊಂಡು ಭಾವುಕರಾಗಿರುವ ಪತಿ ನಾಗರಾಜ್ ವಸ್ತಾರೆ (Nagaraj Ramaswamy Vastarey) ಭಾವುಕರಾಗಿದ್ದಾರೆ. ಮಡದಿಗಾಗಿ ಕವನವೊಂದನ್ನು ಬರೆದು ಪೃಥ್ವಿಯಿಂದ ಬೀಳ್ಕೊಟ್ಟಿದ್ದಾರೆ. ಪತ್ನಿಯೊಂದಿಗಿನ ಕೊನೇ ಕ್ಷಣಗಳನ್ನು ನೆನೆದು ಬರೆದ ಸಾಲುಗಳು ಹೀಗಿವೆ….

    ಬೆಳಗಿಕೊಂಡಿರೆಂದು
    ಕಿಡಿ ತಾಕಿಸಿ ಹೊರಟಿತು
    ಹೆಣ್ಣು

    ಚಿತ್ತು ತೆಗೆದು
    ಬತ್ತಿಯ ನೆತ್ತಿ ಚೆನ್ನಾಗಿಸಿ
    ತಿರುಪಿ ತಿದ್ದಿ
    ಇರು

    ತುಸುವಿರೆಂದು ಕರೆದರೂ
    ನಿಲ್ಲದೆಯೇ
    ಬೇರಾವುದೋ ಕರೆಗೆ
    ತಣ್ಣಗೆ ಓಗೊಟ್ಟ ಮೇರೆ
    ಯಲ್ಲಿ

    ಒಂದೇ ಒಂದು
    ನಿಮಿಷ
    ಬಂದೇನೆಂದು ಕಡೆಗಳಿಗೆ
    ಯ ಸೆರಗಿನ ಬೆನ್ನಿನಲ್ಲಿ
    ಅಂದು.

    ಕಾದಿದ್ದೇನೆ
    ಈಗ ಬಂದಾಳೆಂದು
    ಆಗ ಬಂದಾಳೆಂದು
    ಮರಳಿ
    ಜೀವ ತಂದಾಳೆಂದು
    ಇದು

    ಮೂರನೇ ದಿವಸ
    ಇಷ್ಟಾಗಿ
    ಬೆಳಗಲಿಟ್ಟ ಕಿರಿಸೊಡರ
    ಬೆಳಕು ನಾನು
    ಉರಿವುದಷ್ಟೇ ಕೆಲಸ
    ಇರುವ ತನಕ.

  • ಶ್ವಾಸಕೋಶ ಕ್ಯಾನ್ಸರ್‌ ಈ ಹಂತದಲ್ಲಿತ್ತು, ವೈದ್ಯರು ಆರೇ ತಿಂಗಳು ಗ್ಯಾರಂಟಿ ಕೊಟ್ಟಿದ್ದರು – ಮಡದಿ ಸಾವು ನೆನೆದು ಪತಿ ಭಾವುಕ!

    ಶ್ವಾಸಕೋಶ ಕ್ಯಾನ್ಸರ್‌ ಈ ಹಂತದಲ್ಲಿತ್ತು, ವೈದ್ಯರು ಆರೇ ತಿಂಗಳು ಗ್ಯಾರಂಟಿ ಕೊಟ್ಟಿದ್ದರು – ಮಡದಿ ಸಾವು ನೆನೆದು ಪತಿ ಭಾವುಕ!

    ಬೆಂಗಳೂರು: ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ (Aparna) ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಇತ್ತ ಪ್ರೀತಿಯ ಮಡದಿ ಕಳೆದುಕೊಂಡು ಪತಿ ನಾಗರಾಜ್ ವಸ್ತಾರೆ (Nagaraj Ramaswamy Vastarey)  ಭಾವುಕರಾಗಿದ್ದಾರೆ.

    ಅಪರ್ಣಾ ವಿಧಿವಶರಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಾಜ್‌ ವಸ್ತಾರೆ, ತುಂಬಾ ಖಾಸಗಿಯಾಗಿ ಬದುಕಿದವಳು ಅಪರ್ಣಾ, ಅಷ್ಟೇ ಖಾಸಗಿಯಾಗಿ ಬೀಳ್ಕೊಡಲು ಬಯಸುತ್ತೇನೆ. ಅವಳು ನನಗೆ ಸಲ್ಲೋದಕ್ಕೆ ಮುಂಚೆನೇ ಕರ್ನಾಟಕಕ್ಕೆ ಸೇರಿದವಳು. ಮಾಧ್ಯಮದವರ ಮುಂದೆಯೇ ನಿಂತು ಏನಾಯ್ತು ಅಂತಾ ಹೇಳಬೇಕು ಅನ್ನೋದು ಅವಳ ಆಸೆಯಾಗಿತ್ತು. ಅಷ್ಟನ್ನೇ ನಾನು ಹೇಳ್ತಿದ್ದೀನಿ ಎಂದರು. ಇದನ್ನೂ ಓದಿ: ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ಕ್ಯಾನ್ಸರ್‌ ಗೊತ್ತಾಗಿದ್ದು ಹೇಗೆ?
    ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) ಇರುವುದು ತಪಾಸಣೆಯಲ್ಲಿ ಗೊತ್ತಾಯ್ತು. ಅದಾಗಲೇ ನಾಲ್ಕನೇ ಹಂತದಲ್ಲಿತ್ತು. ಮೊದಲು ನೋಡಿದಾಗ ವೈದ್ಯರು ಇನ್ನೂ 6 ತಿಂಗಳು ಬುಕಿದ್ದರೆ ಹೆಚ್ಚು ಅಂತ ಹೇಳಿದ್ದರು. ಆದ್ರೆ ಅವಳು ಛಲಗಾತಿ, ಏನಾದರೂ ಗೆದ್ದೇ ಗೆಲ್ಲುತ್ತೇನೆ ಅನ್ನುವ ಛಲವಿತ್ತು. ಅದಾದಮೇಲೂ ಒಂದೂವರೆ ವರ್ಷ ಹೋರಾಡಿದಳು. ಆದ್ರೆ ಕಳೆದ ಫೆಬ್ರವರಿ ತಿಂಗಳಿನಿಂದ ಸೋತಿದ್ದಳು. ಏಕೆಂದರೆ ಇದು ದೇಹವೇ ದೇಹವನ್ನ ಬಾಧಿಸುವ ವ್ಯಾದಿ, ನಾನು ಅರಿತಿರುವ ಹಾಗೆಯೇ ಕ್ಯಾನ್ಸರ್‌ ಅನ್ನೋದು ನೀನಲ್ಲದ ಇನ್ನೊಂದು ವ್ಯಕ್ತಿತ್ವವನ್ನ ಹೇರಲು ಬಯಸುತ್ತೆ. ಅವಳು ಧೀರೆ ಇಷ್ಟು ವರ್ಷ ಸಾಧ್ಯವಾದಷ್ಟೂ ಮಣಿಸಿದಳು. ಆದರೀಗ ನಾವಿಬ್ಬರೂ ಜಂಟಿಯಾಗಿ ಸೋತಿದ್ದೇವೆ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    ಮುಂಬರುವ ಅಕ್ಟೋಬರ್‌ಗೆ 58 ವರ್ಷ ತುಂಬುತ್ತಿತ್ತು. ಅವಳ ದೇಹ ಅನ್ನೋದು ಮಾಯಕ ಅನ್ನೋದು ತೋರುತ್ತದೆ. ಏಕೆಂದರೆ ನಿಜವಾದ ವಯಸ್ಸನ್ನು ಯಾವತ್ತೂ ತೋರಿಸಲಿಲ್ಲ. 9:30 ಸುಮಾರಿನಲ್ಲಿ ದೇಹ ತನ್ನನ್ನ ತಾನೂ ಹಿಂಪಡೆದುಕೊಂಡಿತು ಎಂದು ಭಾವುಕರಾದರು. ಇದನ್ನೂ ಓದಿ: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ! 

  • ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ಬೆಂಗಳೂರು: ಆಕೆಯ ಧ್ವನಿಯಲ್ಲಿ ಹೊಮ್ಮುತ್ತಿದ್ದ ಕನ್ನಡ ನುಡಿಗಳು ಎಂಥವರನ್ನೂ ತಲೆದೂಗುವಂತೆ ಮಾಡುತ್ತಿತ್ತು, ಭಾಷೆಗೆ ತಕ್ಕ ಭಾವನೆ, ಅಚ್ಚ ಕನ್ನಡವನ್ನು‌ ಸ್ವಚ್ಛವಾಗಿ ಮಾತನಾಡುವ ಶೈಲಿ, ಪದಕ್ಕೆ ಪದ ಸೇರಿಸಿ ಅಕ್ಷರಗಳಿಗೂ ಭಾವ ತುಂಬುತ್ತಿದ್ದ ದನಿ ಇಂದು ಚಿರಮೌನಕ್ಕೆ ಜಾರಿದೆ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಕನ್ನಡಿಗರ ಮನಗೆದ್ದಿದ್ದ ಅಪರ್ಣಾ ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.

    ಹೌದು. ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ (Kannada Anchor Aparna) ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

    ನಮ್ಮ ಮೆಟ್ರೋಗೆ ದನಿಯಾಗಿದ್ದ ಅಪರ್ಣಾ:
    ಯಶಸ್ವಿ ನಿರೂಪಕಿಯಾಗಿ 3 ದಶಕಗಳ ವರೆಗೆ ಕನ್ನಡ ಸೇವೆ ಸಲ್ಲಿಸಿದ ಅಪರ್ಣಾ, 2014 ರಲ್ಲಿ ಬೆಂಗಳೂರಿನ ʻನಮ್ಮ ಮೆಟ್ರೋʼದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ, ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. ಇದನ್ನೂ ಓದಿ: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

    ಬಾಡಿದ ಮಸಣದ ಹೂವು:
    1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ʻಸಣದ ಹೂವುʼಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ. ಇದನ್ನೂ ಓದಿ: ಜು.16ರಂದು ಸಿಗಲಿದೆ ‌’ಮ್ಯಾಕ್ಸ್‌’ ಚಿತ್ರದ ಅಪ್‌ಡೇಟ್‌- ಕಿಚ್ಚ ಕೊಟ್ರು ಗುಡ್‌ ನ್ಯೂಸ್ 

  • ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

    ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

    ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ (kannada anchor aparna) ಅವರಿಂದು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.

    ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಬಸವರಾಜ ಬೊಮ್ಮಾಯಿ:
    ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

    ಸಂತೋಷ್‌ ಲಾಡ್‌:
    ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಕಾಲಿಕ ನಿಧನ‌‌ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ.

    ಜಮೀರ್ ಅಹಮದ್ ಖಾನ್:
    ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ಅವರ ಅಗಲಿಕೆ ಕಿರುತೆರೆ ಹಾಗೂ ಚಲನ ಚಿತ್ರ ರಂಗಕ್ಕೆ ಅಪಾರ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

    ಡಿಕೆ ಶಿವಕುಮಾರ್: 
    ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು.

  • Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    ಬೆಂಗಳೂರು: ಕ್ಯಾನ್ಸರ್‌ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ  (Kannada Anchor Aparna) ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಇದನ್ನೂ ಓದಿ: ಪ್ರೆಗ್ನೆಂಟ್ ದೀಪಿಕಾ ಪಡುಕೋಣೆ ಬೇಬಿ ಬಂಪ್ ಮುಟ್ಟಿ ಪೋಸ್ ಕೊಟ್ಟ ಓರ್ರಿ

    ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ. ಈ ಮೂಲಕ ತಮ್ಮ ಕನ್ನಡ ಸೇವೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ರೆ ಶಿಕ್ಷೆಯಾಗುತ್ತದೆ, ಕಾನೂನಿಗಿಂತ ಯಾರು ದೊಡ್ಡವರಿಲ್ಲ: ಧನ್ವೀರ್‌ ಗೌಡ

    ಕಿರುತೆರೆಯಲ್ಲಿ ʻಮೂಡಲಮನೆʼ, ʻಮುಕ್ತʼ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌! 

  • ಮಲಯಾಳಂ ಜೊತೆ ಕನ್ನಡದಲ್ಲೂ ಧೂಮಂ ರಿಲೀಸ್: ಹೊಂಬಾಳೆ ಫಿಲ್ಮ್ಸ್ ಘೋಷಣೆ

    ಮಲಯಾಳಂ ಜೊತೆ ಕನ್ನಡದಲ್ಲೂ ಧೂಮಂ ರಿಲೀಸ್: ಹೊಂಬಾಳೆ ಫಿಲ್ಮ್ಸ್ ಘೋಷಣೆ

    ಲೂಸಿಯಾ ಪವನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಧೂಮಂ’ (Dhoomam) ಸಿನಿಮಾ ಇದೇ ಜೂನ್ 23 ರಂದು ದೇಶದಾದ್ಯಂತ ಬಿಡುಗಡೆ (Release) ಆಗುತ್ತಿದೆ. ಸಿನಿಮಾ ರಿಲೀಸ್ ಗೆ ಸಂಬಂಧಿಸಿದಂತೆ ಹಲವಾರು ಗೊಂದಲಗಳು ಇದ್ದವು. ಆ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ ಹೊಂಬಾಳೆ ಫಿಲ್ಮ್ಸ್ (Hombale Films). ಇದು ಮಲಯಾಳಂ ಸಿನಿಮಾವಾಗಿದ್ದರಿಂದ ಕೇವಲ ಮಲಯಾಳಂನಲ್ಲಿ ಮಾತ್ರ ಬಿಡುಗಡೆ ಆಗತ್ತಾ? ಅಥವಾ ಕನ್ನಡದಲ್ಲೂ ಡಬ್ ಆಗಿ ರಿಲೀಸ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಯನ್ನು ಹಲವರು ಮಾಡಿದ್ದರು.

    ಸಿನಿಮಾ ರಿಲೀಸ್ ಗೆ ಸಂಬಂಧಿಸಿದಂತೆ ಹೊಂಬಾಳೆ ಫಿಲ್ಮ್ಸ್ ಪ್ರತಿಕ್ರಿಯೆ ನೀಡಿದ್ದು ಜೂನ್ 23 ರಂದು ಏಕಕಾಲದಲ್ಲೇ ಕನ್ನಡ ಮತ್ತು ಮಲಯಾಳಂ ಎರಡೂ ಭಾಷೆಯಲ್ಲೂ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಸ್ಪಷ್ಟ ಪಡಿಸಿದೆ. ಇತ್ತೀಚೆಗಷ್ಟೇ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನೂ ಓದಿ:ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ

    ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ (Pawan Kumar) ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ (Aparna), ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸುರೇಶ್ ಅವರ ಸಂಕಲನ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

    ಸಮಯದ ವಿರುದ್ಧದ ಓಟದಲ್ಲಿ ಸಿಕ್ಕಿರುವ ಅವಿ (ಫಹಾದ್ ಫಾಸಿಲ್) (Fahadh Faasil) ಮತ್ತು ದಿಯಾ (ಅಪರ್ಣ) ಸುತ್ತ ಈ ಚಿತ್ರ ಸುತ್ತುತ್ತದೆ. ಸುತ್ತ ಅಪಾಯ ಮತ್ತು ಮನಸ್ಸೊಳಗಿನ ಭಯವನ್ನು ಮೆಟ್ಟಿ ನಿಲ್ಲುವುದಕ್ಕೆ ಅವರಿಬ್ಬರೂ ಏನೆಲ್ಲಾ ತ್ಯಾಗಗಳನ್ನು ಮಾಡುತ್ತಾರೆ ಎಂಬುದೇ ಈ ಚಿತ್ರದ ಕಥೆ. ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಪವನ್ ಅವರೇ ರಚಿಸಿದ್ದಾರೆ.

     

    ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪವನ್ ಕುಮಾರ್, ‘ಕಳೆದ ಒಂದು ದಶಕದಿಂದ ಈ ಚಿತ್ರವನ್ನು ಮಾಡಬೇಕು ಎಂಬ ಪ್ರಯತ್ನದಲ್ಲಿದ್ದೆ ಹಾಗೂ ಒಂದು ಅದ್ಭುತ ಚಿತ್ರ ಮಾಡುವ ನಿಟ್ಟಿನಲ್ಲಿ ಚಿತ್ರಕಥೆಯನ್ನು ಹಲವು ಬಾರಿ ತಿದ್ದಿದ್ದೆ. ಒಂದು ದಶಕದ ನನ್ನ ಕನಸನ್ನು ಇದೀಗ ಹೊಂಬಾಳೆ ಪ್ರೊಡಕ್ಷನ್ಸ್ ಸಂಸ್ಥೆಯು ನನಸು ಮಾಡಿದೆ. ಒಂದು ವಿಭಿನ್ನವಾದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿದೆ. ಹಲವು ಪ್ರತಿಭಾವಂತರ ತಂಡವನ್ನು ನೀಡಿ ಒಂದೊಳ್ಳೆಯ ಚಿತ್ರ ನೀಡುವುದಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಈ ಚಿತ್ರ ಮತ್ತು ಕಥೆಯನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ನನಗಿದೆ’ ಎನ್ನುತ್ತಾರೆ.