Tag: apartment

  • ನೆಲಮಂಗಲ | ಅಪಾರ್ಟ್ಮೆಂಟ್‌ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

    ನೆಲಮಂಗಲ | ಅಪಾರ್ಟ್ಮೆಂಟ್‌ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

    ನೆಲಮಂಗಲ: 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ (Nelamangala) ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ.

    ಅಲಸೂರು (Halasuru) ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಿಸಿಟಿವಿ ದೃಶ್ಯ `ಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.ಇದನ್ನೂ ಓದಿ: ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಗೆ 2 ಬಾರಿ ಬ್ಯಾಡ್ ಟಚ್ – ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದ ಕಾಮುಕ ಅರೆಸ್ಟ್

    ಮೃತ ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು. ಹೀಗಾಗಿ ಅಕ್ಕ ಗರ್ಭಿಣಿಯಾಗಿದ್ದರಿಂದ ತವರು ಮನೆಗೆ ಬಂದಿದ್ದರು. ಈ ವೇಳೆ ಲೋಕೇಶ್ ಅಕ್ಕನ ಮನೆಯ ಕೀ ತೆಗೆದುಕೊಂಡು ಅಪಾರ್ಟ್ಮೆಂಟ್‌ಗೆ ಬಂದಿದ್ದ. ಎರಡು ದಿನ ಮನೆಯಲ್ಲಿದ್ದು, ಶನಿವಾರ ಬೆಳಗಿನ ಜಾವ 3:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಅನಾರೋಗ್ಯದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆ ಮುಗಿಸಿ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ದಾಖಲಾಗಿದೆ.ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಹೆಚ್ಚಿದ ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು 55 ಗ್ರಾಂ ಚಿನ್ನ ಕಳ್ಳತನ

  • ಬೆಂಗಳೂರು; 383 ಅಪಾರ್ಟ್ಮೆಂಟ್, 43 ಸಾವಿರ ಮನೆಗಳಿಗೆ ಜಲಮಂಡಳಿ ನೋಟಿಸ್!

    ಬೆಂಗಳೂರು; 383 ಅಪಾರ್ಟ್ಮೆಂಟ್, 43 ಸಾವಿರ ಮನೆಗಳಿಗೆ ಜಲಮಂಡಳಿ ನೋಟಿಸ್!

    – ಬರೋಬ್ಬರಿ 283 ಕೋಟಿ ದಂಡ ವಿಧಿಸಿ ನೋಟಿಸ್ ಜಾರಿ

    ಬೆಂಗಳೂರು: ಇಲ್ಲಿನ ಅಪಾರ್ಟ್ಮೆಂಟ್, ಮನೆಗಳಿಗೆ ಜಲಮಂಡಳಿ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಿನ (Bengaluru) 383 ಅಪಾರ್ಟ್ಮೆಂಟ್, 43 ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ ಜಲಮಂಡಳಿ ನೋಟಿಸ್ ಜಾರಿ ಮಾಡಿದೆ.

    ಕಾವೇರಿ ನೀರಿನ ಸಂಪರ್ಕ ಪಡೆಯದೇ ಅಕ್ರಮವಾಗಿ ನೀರಿನ ಸಂಪರ್ಕ ಪಡೆದಿರುವ ಬಗ್ಗೆ ಜಲಮಂಡಳಿ (Bangalore Water Supply and Sewerage Board) ತನಿಖೆ ಮಾಡುತ್ತಿತ್ತು. ಜಲಮಂಡಳಿ ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲಾಗಿದೆ. ದೊಡ್ಡ ದೊಡ್ಡ ಅಪಾರ್ಟ್ಮೆಂಟ್‌ಗಳು ಜಲಮಂಡಳಿಗೆ ವಂಚಿಸಿರೋದು ಬಯಲಾಗಿದೆ. ಇದನ್ನೂ ಓದಿ: ಇನ್ನು ಮುಂದೆ ಅರಣ್ಯದಲ್ಲಿ ಮರ ಕಡಿದ್ರೂ ಗೊತ್ತಾಗುತ್ತೆ – ನಿಸಾರ್‌ ಉಡಾವಣೆ ಯಶಸ್ವಿ

    ನೀರಿನ ಸಂಪರ್ಕ ಪಡೆಯದೇ ಅಕ್ರಮವಾಗಿ ನೀರಿನ ಸಂಪರ್ಕ ಪಡೆದು 383 ಅಪಾರ್ಟ್ಮೆಂಟ್ ಗಳು 43 ಸಾವಿರ ಮನೆಗಳು ಅಕ್ರಮವಾಗಿ ನೀರಿನ ಸಂಪರ್ಕ ಪಡೆದಿರೋದು ಜಲಮಂಡಳಿ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಪವರ್‌ ತೋರಿಸಲು ಡಿಕೆಶಿಯನ್ನು ಸಭೆಗೆ ಆಹ್ವಾನಿಸಿಲ್ಲ: ಆರ್‌.ಅಶೋಕ್

    ಇನ್ನೂ 383 ಅಪಾರ್ಟ್ಮೆಂಟ್ ಮತ್ತು 43 ಸಾವಿರ ಮನೆಗಳಿಗೆ ಜಲಮಂಡಳಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿ ಮಾಡಿ ಬರೋಬ್ಬರಿ 200 ಕೋಟಿ ರೂ. ದಂಡ ವಿಧಿಸಿದೆ. ಹಲವು ವರ್ಷಗಳಿಂದ ನೀರನ್ನ ಕದಿಯುತ್ತಾ ಇರೋದು ಬಯಲಾಗಿದೆ. ಹೀಗಾಗಿ ದಂಡ ವಿಧಿಸಿ ಕ್ರಮವಹಿಸುತ್ತಾ ಇದೆ. ಅಕ್ರಮ ಕನೆಕ್ಷನ್‌ಗಳಿಗೆ ನೋಟಿಸ್ ಕೊಟ್ಟಿದ್ದು ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಒಟ್ಟಾರೆ ಬೆಂಗಳೂರಿನಲ್ಲಿ ಕಾವೇರಿ ನೀರಿನ ಸಂಪರ್ಕವನ್ನ ಅಕ್ರಮವಾಗಿ ಪಡೆಯುತ್ತಿರುವ ಮನೆಗಳಿಗೆ ಅಪಾರ್ಟ್ಮೆಂಟ್‌ಗಳಿಗೆ ಜಲಮಂಡಳಿ ಬಿಸಿ ಮುಟ್ಟಿಸಿದೆ. ಅಧಿಕೃತವಾಗಿ ನೀರಿನ ಸಂಪರ್ಕ ಪಡೆಯದೇ ಅಕ್ರಮವಾಗಿ ಪಡೆಯುತ್ತಿರುವುದು ಬಯಲಾಗಿದ್ದು, ಯಾರೇ ತಪ್ಪು ಮಾಡಿದ್ರು ನೀರಿನ ಸಂಪರ್ಕ ಕಡಿತವಾಗೋದು ಕಟ್ಟಿಟ್ಟಬುತ್ತಿಯಾಗಿದೆ.

  • 12 ಮಹಡಿಯಿಂದ ಬಿದ್ದು 3 ವರ್ಷದ ಮಗು ಸಾವು

    12 ಮಹಡಿಯಿಂದ ಬಿದ್ದು 3 ವರ್ಷದ ಮಗು ಸಾವು

    ಮುಂಬೈ: ಮೂರು ವರ್ಷದ ಪುಟ್ಟ ಮಗುವೊಂದು (3 Year Old) 12ನೇ ಮಹಡಿಯಿಂದ ಮೃತಪಟ್ಟ ಘಟನೆ ಮುಂಬೈನ (Mumbai) ನೈಗಾಂವ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

    ತಾಯಿ ತನ್ನ ಅಪಾರ್ಟ್‌ಮೆಂಟ್‌ನ ಹೊರಗೆ ಶೂ ರ‍್ಯಾಕ್ ಮೇಲೆ ಕೂರಿಸಿದಾಗ ಆಕಸ್ಮಿಕವಾಗಿ ಮಗು ಕಿಟಕಿ ಮೂಲಕ ಕೆಳಗೆ ಬಿದ್ದಿದೆ. ಇದನ್ನೂ ಓದಿ: PUBLiC TV Impact | ಕೊನೆಗೂ ದೇವದಾಸಿ ಮಹಿಳೆಯ ಮಗಳಿಗೆ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸೀಟು ಹಂಚಿಕೆ

    ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ 8:15ಕ್ಕೆ ಈ ಘಟನೆ ಸಂಭವಿಸಿದೆ. ಬಾಲಕಿಯ ತಾಯಿ ಚಪ್ಪಲಿ ಹಾಕಿಸಿಕೊಳ್ಳಲು ಪ್ರಯತ್ನಿಸುವಾಗ ಅವಳನ್ನು ಶೂ ರ‍್ಯಾಕ್ ಮೇಲೆ ಕೂರಿಸಿದ್ದಳು. ತಾಯಿ ಚಪ್ಪಲಿ ಹಾಕುತ್ತಿದ್ದಾಗ ಬಾಲಕಿ ಹಿಂದಕ್ಕೆ ಬಾಗಿದ್ದಾಳೆ. ಈ ವೇಳೆ ನಿಯಂತ್ರಣ ತಪ್ಪಿ ಕಿಟಕಿಯಿಂದ ಕೆಳಗೆ ಬಿದ್ದಿದ್ದಾಳೆ.

    ತಾಯಿಯ ಕಿರುಚಾಟ ಕೇಳಿದ ನಂತರ ನೆರೆಹೊರೆಯವರು ಸಹಾಯಕ್ಕೆ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು. ತಾಯಿ ಚಪ್ಪಲಿ ಹಾಕುತ್ತಿರುವ ಮತ್ತು ಬಾಲಕಿ ಕಿಟಕಿಯಿಂದ ಕೆಳಗೆ ಬಿದ್ದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

  • ಮಂಗಳೂರು| ಐದನೇ ಮಹಡಿಯಿಂದ ಬಿದ್ದು ಬಾಲಕ ಸಾವು

    ಮಂಗಳೂರು| ಐದನೇ ಮಹಡಿಯಿಂದ ಬಿದ್ದು ಬಾಲಕ ಸಾವು

    ಮಂಗಳೂರು: ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನ (Mangaluru) ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ (Apartment) ನಡೆದಿದೆ.

    ಮೃತ ಬಾಲಕನನ್ನು ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್ ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

    ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

  • ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

    ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

    ಮೈಸೂರು: ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮೃತ ಚೇತನ್‌ ಅಮೆರಿಕದಲ್ಲಿರುವ ತನ್ನ ಸಹೋದರ ಭರತ್‌ಗೆ ಮುಂಜಾನೆ 4 ಗಂಟೆಗೆ ಕರೆ ಮಾಡಿ ಕುಟುಂಬದ ಮೂವರನ್ನು ಕೊಲೆ ಮಾಡಿದ್ದೇನೆ. ನಾನು ಸಾಯುತ್ತೇನೆ ಎಂದು ಹೇಳಿ ಕರೆ ಕಟ್‌ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಚೇತನ್‌ ಮೊದಲು ಕುಟುಂಬಸ್ಥರಿಗೆ ವಿಷ ಉಣಿಸಿ ಹತ್ಯೆಗೆ ಯೋಚಿಸಿದ್ದರು. ಅದರಂತೆ ವಿಷ ಉಣಿಸಿದ್ದರು. ವಿಷ ಉಣಿಸಿ ಸಾವನ್ನಪ್ಪದೇ ಇದ್ದಾಗ ಮೂವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿ, ನೇಣಿಗೆ ಶರಣಾಗಿದ್ದಾರೆ.

    ಮೃತನ ಸಹೋದರ ಭರತ್, ಚೇತನ್ ಪತ್ನಿಯ ತಂದೆ ತಾಯಿಗೆ ಕರೆ ಮಾಡಿ ಈ ಬಗ್ಗೆ ತಕ್ಷಣ ಮಾಹಿತಿ ನೀಡಿ, ಅಪಾರ್ಟ್‍ಮೆಂಟ್ ಬಳಿ ತೆರಳುವಂತೆ ಹೇಳಿದ್ದರು. ಅಷ್ಟರಲ್ಲಾಗಲೇ ಚೇತನ್‌ ನೇಣಿಗೆ ಶರಣಾಗಿದ್ದ.

    ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ (Apartment) ಒಂದರಲ್ಲಿ ಚೇತನ್ (45), ರೂಪಾಲಿ (43), ಪ್ರಿಯಂವದ ಮತ್ತು ಕುಶಾಲ್ (15) ಶವ ಪತ್ತೆಯಾಗಿತ್ತು. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿತ್ತು.‌ ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ ಸಹ ಪತ್ತೆಯಾಗಿತ್ತು.

    ಪೊಲೀಸರು ಈಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೂವರ ಸಾವಿಗೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬರಲಿದೆ.

    ಡೆತ್‌ನೋಟ್‌ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರು ಕಾರಣರಲ್ಲ. ನನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಯಾರು ತೊಂದರೆ ಕೊಡಬೇಡಿ. ನಮ್ಮನ್ನ ಕ್ಷಮಿಸಿಬಿಡಿ, ಐ ಆಮ್ ಸಾರಿ ಎಂದು ಬರೆಯಲಾಗಿದೆ.

  • ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ!

    ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ!

    ಮೈಸೂರು: ಇಲ್ಲಿನ (Mysuru) ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ (Apartment) ಒಂದರಲ್ಲಿ ನಾಲ್ವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದೆ.

    ಡೆತ್‌ನೋಟ್‌ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರು ಕಾರಣರಲ್ಲ. ನನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಯಾರು ತೊಂದರೆ ಕೊಡಬೇಡಿ. ನಮ್ಮನ್ನ ಕ್ಷಮಿಸಿಬಿಡಿ, ಐ ಆಮ್ ಸಾರಿ ಎಂದು ಬರೆಯಲಾಗಿದೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ – ಪತ್ನಿ, ಮಕ್ಕಳಿಗೆ ವಿಷ ನೀಡಿ ನೇಣಿಗೆ ವ್ಯಕ್ತಿ ಶರಣು!

    ಅಪಾರ್ಟ್‍ಮೆಂಟ್‍ನಲ್ಲಿ ಚೇತನ್ (45), ರೂಪಾಲಿ (43), ಪ್ರಿಯಂವದ ಮತ್ತು ಕುಶಾಲ್ (15) ಶವ ಪತ್ತೆಯಾಗಿತ್ತು. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿತ್ತು.

    ಮೃತ ಚೇತನ್‌ ಅಣ್ಣ, ಚೇತನ್‌ ಹೆಂಡತಿಯ ಅಪ್ಪ ಅಮ್ಮನಿಗೆ ಇಂದು (ಫೆ.17) ಬೆಳ್ಳಗಿನ ಜಾವ ಕರೆ ಮಾಡಿ, ಅಪಾರ್ಟ್‌ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ವಿಚಾರ ಗೊತ್ತಾಗಿದೆ. ಭಾನುವಾರ ಸಂಜೆ ಚೇತನ್ ಕುಟುಂಬ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದರು.

    ಈ ಬಗ್ಗೆ ಪ್ರತಿಕ್ರಿಯಿಸಿರುವ, ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್, ನಾಲ್ಕು ಜನರ ಸಾವಾಗಿದೆ. ಅವರು 2 ಅಪಾರ್ಟ್‌ಮೆಂಟ್‌ನಲ್ಲಿದ್ದರು. ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸವನ್ನು ಚೇತನ್ ಮಾಡುತ್ತಿದ್ದರು. 2019 ರಲ್ಲಿ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಮಗ 10 ನೇ ತರಗತಿ ಓದುತ್ತಿದ್ದ. ಚೇತನ್ ಅಣ್ಣ ವಿದೇಶದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮಂಗಳೂರು ಹೈವೇಯಲ್ಲಿ ಸರಣಿ ಅಪಘಾತ; 7 ಕಾರುಗಳು ಜಖಂ

  • ಅಪಾರ್ಟ್‌ಮೆಂಟ್‌ನಲ್ಲಿ ನಿರಂತರ ಕಳ್ಳತನ – 18 ವರ್ಷದಿಂದ ಸೆಕ್ಯೂರಿಟಿಯಾಗಿದ್ದ ಕಳ್ಳ ಅರೆಸ್ಟ್‌

    ಅಪಾರ್ಟ್‌ಮೆಂಟ್‌ನಲ್ಲಿ ನಿರಂತರ ಕಳ್ಳತನ – 18 ವರ್ಷದಿಂದ ಸೆಕ್ಯೂರಿಟಿಯಾಗಿದ್ದ ಕಳ್ಳ ಅರೆಸ್ಟ್‌

    ಬಳ್ಳಾರಿ: ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರ ಕಳ್ಳತನ ನಡೆಯುತ್ತಿದ್ದ ಪ್ರಕರಣವನ್ನು ಕೊನೆಗೂ ಪೊಲೀಸರು (Police) ಬೇಧಿಸಿ ಆರೋಪಿ ಸೆಕ್ಯೂರಿಟಿಗಾರ್ಡ್‌ನನ್ನು (Security Guard) ಬಂಧಿಸಿದ್ದಾರೆ.

    ಹೊಸಪೇಟೆಯ ಸಾಯಿಸದನ ಅಪಾರ್ಟ್‌ಮೆಂಟ್‌ನಲ್ಲಿ (Apartment) ಕಳೆದ ಎರಡು ವರ್ಷಗಳಿಂದ ಹಲವು ಮನೆಗಳಲ್ಲಿ ಕಳ್ಳತನ ನಡೆಯುತ್ತಿತ್ತು. ನಿರಂತರ ಕಳ್ಳತನದಿಂದ ಹೊಸಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಕಳ್ಳರ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ.

     
    ಹೊರಗಡೆಯಿಂದ ಈ ಕೃತ್ಯ ನಡೆಯುತ್ತಿಲ್ಲ. ಒಳಗಡೆ ಇದ್ದವರಿಂದಲೇ ಕೃತ್ಯ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ 18 ವರ್ಷಗಳ ಕಾಲ ಸೆಕ್ಯೂರಿಟಿಯಾಗಿ ಕೆಲಸ ಪ್ರವೀಣ್ ವಿಚಾರಣೆ ನಡೆಸಿದ್ದರು. ಅನುಮಾನ ಬಂದು ಮತ್ತಷ್ಟು ವಿಚಾರಣೆ ನಡೆಸಿದಾಗ ಕಳ್ಳತನ ಎಸಗಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ.

    ಒಂದು ವರ್ಷದಿಂದ ಅಪಾರ್ಟ್‌ಮೆಂಟ್‌ನ ಎರಡು ಮನೆಗಳಲ್ಲಿ ಕಳ್ಳತನ ನಡೆದಿತ್ತು. ಆರೋಪಿ ಪ್ರವೀಣ್ ನನ್ನು ಬಂಧಿಸಿದ ಪೊಲೀಸರು 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

     

  • ದಿನ ರಾತ್ರಿ 2-3 ಹುಡುಗರನ್ನ ಕರೆದುಕೊಂಡು ಬರುತ್ತಿದ್ದಳು – ಅಪಾರ್ಟ್ಮೆಂಟ್‌ ಮಾಲೀಕ ಕೆಂಪೇಗೌಡ

    ದಿನ ರಾತ್ರಿ 2-3 ಹುಡುಗರನ್ನ ಕರೆದುಕೊಂಡು ಬರುತ್ತಿದ್ದಳು – ಅಪಾರ್ಟ್ಮೆಂಟ್‌ ಮಾಲೀಕ ಕೆಂಪೇಗೌಡ

    – ಯುವತಿ ಮೇಲಿನ ಹಲ್ಲೆ ಕೇಸ್‌ಗೆ ಟ್ವಿಸ್ಟ್‌

    ಬೆಂಗಳೂರು: ಸಂಜಯನಗರ ಅಪಾರ್ಟ್ಮೆಂಟ್‌ವೊಂದರ (Apartment) ಮಾಲೀಕನ ಮಗ ಕಂಠಪೂರ್ತಿ ಕುಡಿದು ಯುವತಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್‌ ಸಿಕ್ಕಿದೆ. ಅಪಾರ್ಟ್‌ಮೆಂಟ್‌ ಮಾಲೀಕರೂ ಆಗಿರುವ ಕೆಂಪೇಗೌಡ (Kempegowda) ಅವರು ನೀಡಿದ ಹೇಳಿಕೆ‌ಯಲ್ಲಿ ಹಲವು ರಹಸ್ಯಗಳು ಬೆಳಕಿಗೆ ಬಂದಿವೆ.

    ಹಲ್ಲೆ ಆರೋಪಕ್ಕೆ ಒಳಗಾಗಿರುವ ಮಂಜುನಾಥ್ ಗೌಡನ ತಂದೆ ಕೆಂಪೇಗೌಡ ಮಾಧ್ಯಮಗಳೊಂದಿಗೆ ಮಾತನಾಡಿ, ಯುವತಿ ಹಲವು ತಿಂಗಳಿಂದ ಫ್ಲಾಟ್‌ನಲ್ಲಿ ವಾಸವಾಗಿದ್ದಾಳೆ. ಆಕೆ ಮನೆ ಬಾಡಿಗೆ ಕೊಡುವಾಗಲೇ ಬೇರೆ ಗಂಡಸರನ್ನು ಕರೆದುಕೊಂಡು ಬರದಂತೆ ಹೇಳಿದ್ದೆವು. ಆರಂಭದಲ್ಲಿ ಒಂದು ತಿಂಗಳು ಸುಮ್ಮನಿದ್ದಳು. ನಂತರ ಗಂಡಸರನ್ನ ಕರೆದುಕೊಂಡು ಬರೋದಕ್ಕೆ ಶುರು ಮಾಡಿದಳು ಎಂದಿದ್ದಾರೆ.

    ಅಪಾರ್ಟ್‌ಮೆಂಟ್‌ ಮುಂಭಾಗಕ್ಕೆ ಬಂದು, ಸಿಗರೇಟ್‌ ಸೇದುತ್ತಿದ್ದಳು, ಹುಡುಗರೊಂದಿಗೆ ಸೇರಿಕೊಂಡು ಶಬದ್ಧ ಮಾಡುತ್ತಿದ್ದಳು. ಸಾಕು ನಾಯಿಯನ್ನು ಮನೆಯಲ್ಲೇ ಗಲೀಜುಮಾಡಿಸುತ್ತಿದ್ದಳು. ಇದರಿಂದ ಸ್ಥಳೀಯರು ರೋಹಿಹೋಗಿದ್ದರು ಬಂದ 6 ತಿಂಗಳಲ್ಲೇ ಇಷ್ಟೊಂದು ರಂಪಾಟ ಮಾಡಿದ್ದಾಳೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದು ಬಂದು ಯುವತಿ ಜೊತೆ ಅಸಭ್ಯ ವರ್ತನೆ – ಅಪಾರ್ಟ್ಮೆಂಟ್ ಮಾಲೀಕನ ಪುತ್ರನ ವಿರುದ್ಧ ದೂರು

    ರಾತ್ರಿ ಆದ್ರೆ ಹುಡುಗರು ಬರ್ತಾ ಇದ್ದರು, ದಿನ ರಾತ್ರಿ ಇಬ್ಬರು, ಮೂವರು ಹುಡುಗರನ್ನ ಕರೆದುಕೊಂಡು ಬರ್ತಿದ್ಲು. ರಾತ್ರಿ ವೇಳೆ ತುಂಬಾ ಲೇಟಾಗಿ ಮನೆಗೆ ಬರ್ತಿದ್ಲು. ಸೆಕ್ಯೂರಿಟಿಗೆ ಬಾಯಿಗೆ ಬಂದ ಹಾಗೆ ಬೈದು ಗೇಟ್ ಓಪನ್ ಮಾಡಿಸ್ತಿದ್ಲು. ಹುಡುಗರ ಜೊತೆ ಮನೆಯಲ್ಲೇ ಕುಡಿದು ಗಲಾಟೆ ಮಾಡ್ತಾ ಇದ್ದಳು. ಅಕ್ಕಪಕ್ಕದ ಫ್ಲ್ಯಾಟ್ ನವರು ನಮಗೆ ಹೇಳಿದ್ರು. ಹಾಗಾಗಿ ಈ ಹಿಂದೆಯೂ ಮನೆ ಕಾಲಿ ಮಾಡುವಂತೆ ತಿಳಿಸಿದ್ವಿ. ಖಾಲಿ ಮಾಡಲ್ಲ ಅಂತ ಗಲಾಟೆ ಮಾಡಿದ್ಲು, ಹಲ್ಲೆ ಮಾಡೋಕೆ ಬರ್ತಿದ್ಲು ಎಂದು ಯುವತಿ ರಂಪಾಟಗಳನ್ನ ಬಿಚ್ಚಿಟ್ಟಿದ್ದಾರೆ.

    ಡಿಸೆಂಬರ್ 3ರ ರಾತ್ರಿ ನನ್ನ ಮಗನ ಮೇಲೆ ಆಕೆಯೇ ಮೊದಲು ಹಲ್ಲೆ ಮಾಡಿದ್ದಾಳೆ. ಕೆನ್ನೆಗೆ ಹೊಡೆದು ಹಲ್ಲೆ ಮಾಡಿದ್ದಾಳೆ. ನಂತರ ನನ್ನ ಮಗ ಕೈಹಿಡಿದಾಗ ತರಚಿರೋ ಗಾಯ ಆಗಿದೆ. ಅದನ್ನೇ ನೆಪವಾಗಿಟ್ಟುಕೊಂಡು ಪೊಲೀಸರಿಗೆ ದೂರು ಕೊಟ್ಟಿದ್ದಾಳೆ. ನಮ್ಮ ಮನೆಯ ಸಿಸಿಟಿವಿ ಕೊಟ್ಟು ಯುವತಿ ಮೇಲೆ ಕೌಂಟರ್ ಕಂಪ್ಲೆಂಟ್‌ ಕೊಡ್ತೀವಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ

    ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಪ್ರತಿಕ್ರಿಯೆ ನೀಡಿದ್ದು, ಮನೆ ಮಾಲೀಕ ಯುವತಿಯ ಮೇಲೆ ಹಲ್ಲೆ ಮಾಡಿದ್ದಾರೆಂದು ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಯುವತಿಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಂಜುನಾಥ ಗೌಡನನ್ನ ಬಂಧನ ಮಾಡಲಾಗಿದೆ. ಆರೋಪಿ ಯುವತಿ ಬೇರೆ ಹುಡುಗರನ್ನ ಕರೆದುಕೊಂಡು ಪಾರ್ಟಿ ಮಾಡ್ತಾ ಇದ್ದರು, ಪಾರ್ಟಿ ಮಾಡಿ ಗಲಾಟೆ ಮಾಡಿದ್ದನ್ನ ಅಕ್ಕಪಕ್ಕದ ಮನೆಯವರು ನಮಗೆ ದೂರು ಹೇಳ್ತಾ ಇದ್ದರು. ಹಾಗಾಗಿ ಹೇಳಲು ಹೋದಾಗ ನನಗೆ ತಳ್ಳಿದ್ದರಿಂದ ನಾನು ಕೇಳಗಡೆ ಬಿದ್ದೆ, ಆದಾದ ಬಳಿಕ ನಾನು ಹಲ್ಲೆ ಮಾಡಿದ್ದಾಗಿ ಪೊಲೀಸರ ತನಿಖೆಯ ವೇಳೆ ಆರೋಪಿ ಹೇಳಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

  • ಆಯತಪ್ಪಿ ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

    ಆಯತಪ್ಪಿ ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

    ಬೆಂಗಳೂರು: ಆಯತಪ್ಪಿ ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಯಲಹಂಕದ (Yelahanka) ಪಿರಮಿಡ್ ಬನ್ಸಿಕಾ-ಮಹಿಕಾ ಅಪಾರ್ಟ್ಮೆಂಟ್‌ನಲ್ಲಿ (Pyramid Banksia & Mahika) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಇದನ್ನೂ ಓದಿ: ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡೋಕೆ ಆಗುತ್ತೆ – ಶೋಭಾ

    ಮೃತ ಕಾರ್ಮಿಕನನ್ನು ಬಿಹಾರ (Bihar) ಮೂಲದ ಅಬಿದುಲ್ಲಾ ಎಂದು ಗುರುತಿಸಲಾಗಿದೆ.

    ನಿನ್ನೆ ರಾತ್ರಿ ಕಾರ್ಮಿಕ ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಕಾರ್ಮಿಕನ ಕುಟುಂಬಸ್ಥರಿಗೆ ಯಲಹಂಕ ಪೊಲೀಸರು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ವಕ್ಫ್ ವಿವಾದ; ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

  • ಬೆಂಗಳೂರು| ರಾತ್ರಿ ಸುರಿದ ಮಳೆಗೆ ಅಪಾರ್ಟ್‌ಮೆಂಟ್ ಜಲಾವೃತ – ಟ್ರಾಕ್ಟರ್, ಟೆಂಪೋ ಮೂಲಕ ಜನರ ಸ್ಥಳಾಂತರ

    ಬೆಂಗಳೂರು| ರಾತ್ರಿ ಸುರಿದ ಮಳೆಗೆ ಅಪಾರ್ಟ್‌ಮೆಂಟ್ ಜಲಾವೃತ – ಟ್ರಾಕ್ಟರ್, ಟೆಂಪೋ ಮೂಲಕ ಜನರ ಸ್ಥಳಾಂತರ

    – ಬಿಬಿಎಂಪಿ ವಿರುದ್ಧ ಅಪಾರ್ಟ್‌ಮೆಂಟ್ ನಿವಾಸಿಗಳ ಆಕ್ರೋಶ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಭಾನುವಾರ ರಾತ್ರಿ ಸುರಿದ ಮಳೆಯಿಂದ ನಾನಾ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ (Rain) ಪರಿಣಾಮ ಯಲಹಂಕದ (Yelahanka) ಕೋಗಿಲು ಕ್ರಾಸ್ ಬಳಿಯ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ (Apartment) ಜಲಾವೃತಗೊಂಡಿದೆ.

    ಅಪಾರ್ಟ್‌ಮೆಂಟ್ ಜಲಾವೃತಗೊಂಡ ಹಿನ್ನೆಲೆ ನಿವಾಸಿಗಳು ಪರದಾಡುವಂತಾಗಿದೆ. ಅಪಾರ್ಟ್‌ಮೆಂಟ್‌ಗೆ ಹೊಕ್ಕ ನೀರು ಇನ್ನೂ ಕಡಿಮೆಯಾಗಿಲ್ಲ. ಈ ಹಿನ್ನೆಲೆ ಟ್ರಾಕ್ಟರ್, ಟೆಂಪೋ ಮೂಲಕ ಜನರನ್ನು ಅಪಾರ್ಟ್‌ಮೆಂಟ್‌ನಿಂದ ಸ್ಥಳಾಂತರಿಸಲಾಗಿದೆ. ಬಿಬಿಎಂಪಿ (BBMP) ವಿರುದ್ಧ ಅಪಾರ್ಟ್‌ಮೆಂಟ್ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Jammu Kashmir | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ – LG ನಿರ್ಧಾರ ಸರಿಯೇ?

    ಇನ್ನು ಅಪಾರ್ಟ್‌ಮೆಂಟ್‌ಗೆ ಬಿಬಿಎಂಪಿ ಚೀಫ್ ಇಂಜಿನಿಯರ್ ಪ್ರಹ್ಲಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನೊಂದು ಗಂಟೆಯಲ್ಲಿ ಅಪಾರ್ಟ್‌ಮೆಂಟ್‌ಗೆ ತುಂಬಿದ ನೀರನ್ನು ಸಂಪೂರ್ಣವಾಗಿ ಹೊರಹಾಕಲಾಗುವುದು. ಹಿಂದೆ ಇದು ಯಲಹಂಕ ಕೆರೆ ಅಚ್ಚುಕಟ್ಟು ಪ್ರದೇಶವಾಗಿತ್ತು. ಇಲ್ಲಿ ಡಿಫೆನ್ಸ್‌ನವರು ಅನುಮತಿ ತೆಗೆದುಕೊಂಡು ಈ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಿದ್ದಾರೆ. ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿದು ಸೀವೇಜ್ ವಾಟರ್ ತುಂಬಿಕೊಂಡಿದೆ.  ಒಂದು ಗಂಟೆಯಲ್ಲಿ ನೀರನ್ನು ತೆರವು ಮಾಡುವ ಕೆಲಸ ಆಗಲಿದೆ. ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿತದ ಜಾಗದಲ್ಲಿ ಮಣ್ಣಿನ ಚೀಲಗಳನ್ನು ಹಾಕುತ್ತಿದ್ದೇವೆ. ಬಿಬಿಎಂಪಿಯಿಂದ ನೀರು, ಊಟವನ್ನು ಸಪ್ಲೈ ಮಾಡಿದ್ದೇವೆ. ರಾಜಕಾಲುವೆಗೂ ಇದಕ್ಕೂ ಸಂಬಂಧವಿಲ್ಲ. ಅಪಾರ್ಟ್‌ಮೆಂಟ್ ಪಕ್ಕದ ಜಾಗದಲ್ಲಿ ಲೀಡ್ ಆಫ್ ಡ್ರೈನ್ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು