Tag: APJ abdul kalam

  • ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ಧನುಷ್

    ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ಧನುಷ್

    ಟ ಧನುಷ್ (Dhanush) ಅವರು ಇತ್ತೀಚೆಗೆ ಇಳಯರಾಜ ಅವರ ಬಯೋಪಿಕ್‌ನಲ್ಲಿ ನಟಿಸುವ ಬಗ್ಗೆ ಅನೌನ್ಸ್ ಆಗಿತ್ತು. ಈ ಬೆನ್ನಲ್ಲೇ ಎಪಿಜೆ ಅಬ್ದುಲ್ ಕಲಾಂ ಜೀವನ ಚರಿತ್ರೆಯಲ್ಲೂ ಧನುಷ್ ನಟಿಸುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದರ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಇದನ್ನೂ ಓದಿ:ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್

    ಕಾಲಿವುಡ್ ಸ್ಟಾರ್ ಧನುಷ್ ಅವರು ಎಪಿಜೆ ಅಬ್ದುಲ್ ಕಲಾಂ (APJ Abdul Kalam) ಪಾತ್ರವನ್ನು ಮಾಡಲಿದ್ದಾರೆ. ಅವರ ಜೀವನಗಾಥೆಯನ್ನು ಸಿನಿಮಾ ರೂಪದಲ್ಲಿ ತರಲು ಪ್ಲ್ಯಾನ್ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಈ ಚಿತ್ರಕ್ಕೆ ‘ಕಲಾಂ: ದಿ ಮಿಸೈಲ್ ಮ್ಯಾನ್ ಆಫ್ ಇಂಡಿಯಾ’ ಅಂತ ಟೈಟಲ್ ಇಡಲಾಗಿದೆ. ಈ ಚಿತ್ರಕ್ಕೆ ‘ಆದಿಪುರುಷ್’ ಡೈರೆಕ್ಟರ್ ಓಂ ರಾವುತ್ ನಿರ್ದೇಶನ ಮಾಡಲಿದ್ದಾರೆ.

     

    View this post on Instagram

     

    A post shared by Dhanush (@dhanushkraja)

    ಈ ಸಿನಿಮಾ ಬಗ್ಗೆ ಧನುಷ್ ರಿಯಾಕ್ಟ್ ಮಾಡಿ, ನಮ್ಮ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಸ್ಪೂರ್ತಿದಾಯಕ ಮತ್ತು ಉದಾತ್ತ ನಾಯಕನ ಜೀವನವನ್ನು ತೆರೆಮೇಲೆ ತರಲು ನಾನು ನಿಜವಾಗಿಯೂ ಧನ್ಯ ಮತ್ತು ಅತ್ಯಂತ ವಿನಮ್ರನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ

    ರಶ್ಮಿಕಾ ಮಂದಣ್ಣ ಜೊತೆಗಿನ ಕುಬೇರ, ಇಳಯರಾಜ ಬಯೋಪಿಕ್ ಸೇರಿದಂತೆ ಹಲವು ಸಿನಿಮಾಗಳು ಧನುಷ್ ಕೈಯಲ್ಲಿವೆ.

  • ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದ ಸುಷ್ಮಾ ಸ್ವರಾಜ್

    ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದ ಸುಷ್ಮಾ ಸ್ವರಾಜ್

    ನವದೆಹಲಿ: ಮಂಗಳವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು 2003ರಲ್ಲಿ ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

    2003ರಲ್ಲಿ ಕೇಂದ್ರ ಆರೋಗ್ಯ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ಹೆಚ್‍ಐವಿ ರೋಗದ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು, ಹೆಚ್‍ಐವಿ ಪೀಡಿತ ಮಕ್ಕಳನ್ನು ತಬ್ಬಿ ಮುದ್ದಾಡಿದ್ದರು. ಈ ಮೂಲಕ ಮುಟ್ಟುವುದು ಮತ್ತು ತಬ್ಬಿಕೊಳ್ಳುವುದರಿಂದ ಹೆಚ್‍ಐವಿ ಹರಡುವುದಿಲ್ಲ ಎಂದು ಜನರಿಗೆ ಸಂದೇಶ ನೀಡಿದ್ದರು.

    ಈಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಪಿಯೂ ನಾಯರ್ ಎಂಬುವರು ಈ ಫೋಟೋವನ್ನು ಟ್ವಿಟ್ಟರ್‍ ನಲ್ಲಿ ಹಾಕಿ “ಹಳೇಯ ಫೋಟೋ, ಸುಷ್ಮಾ ಜೀ ಹೆಚ್‍ಐವಿ ಪೀಡಿತ ಇಬ್ಬರು ಕೇರಳದ ಮಕ್ಕಳನ್ನು ಅಪ್ಪಿಕೊಂಡಿದ್ದಾರೆ. ಅ ಮಕ್ಕಳಿಗೆ ತಮ್ಮ ತಾಯಿಯಿಂದ ಕಾಯಿಲೆ ಬಂದಿದೆ (ಮಕ್ಕಳ ಪೋಷಕರು ಹೆಚ್‍ಐವಿ ಕಾರಣದಿಂದ ಮೃತ ಪಟ್ಟಿದ್ದರು) ಈ ಮಕ್ಕಳಿಂದ ಹೆಚ್‍ಐವಿ ಹರಡುತ್ತದೆ ಎಂಬ ಕಾರಣಕ್ಕೆ ಶಾಲೆಯಿಂದ ಹೊರಹಾಕಲಾಗಿತ್ತು” ಎಂದು ಬರೆದುಕೊಂಡಿದ್ದಾರೆ.

    ಈ ಮಕ್ಕಳನ್ನು ಭೇಟಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಮಕ್ಕಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರ ಯೋಚನೆಗಳನ್ನು ಪ್ರಸ್ತಾಪ ಮಾಡಿದ್ದರು. ನಂತರ ಅ ಮಕ್ಕಳನ್ನು ಅಂದಿನ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಭೇಟಿಯಾಗಿ ಅ ಇಬ್ಬರು ಹೆಚ್‍ಐವಿ ಪೀಡಿತ ಮಕ್ಕಳನ್ನು ಶಾಲೆ ಸೇರಿಸುವ ವ್ಯವಸ್ಥೆ ಮಾಡಿದ್ದರು.

    ಇದಾದ ನಂತರ ಸುಷ್ಮಾ ಸ್ವರಾಜ್ ಅವರು ಅ ಇಬ್ಬರು ಮಕ್ಕಳ ಶಿಕ್ಷಣದ ಬಗ್ಗೆ ಖಚಿತಪಡಿಸಿಕೊಂಡು. ಈ ರೀತಿಯ ಮಕ್ಕಳಿಗಾಗಿ ವಿಶೇಷ ಬೋಧಕರನ್ನು ನೇಮಿಸಬೇಕು. ದೇಶದ ವಿವಿಧ ಭಾಗಗಳಲ್ಲಿ ಈ ರೀತಿ ಹೆಚ್‍ಐವಿ ಪೀಡಿತ ಮಕ್ಕಳು ಇದ್ದಾರೆ. ಅವರಿಗೂ ಶಿಕ್ಷಣ ಕೊಡಿಸಬೇಕು ಎಂದು ಹೇಳಿದ್ದರು.

    ಇಂದು ಈ ವಿಚಾರದ ಬಗ್ಗೆ ಮಾತನಾಡಿರುವ ಹೆಚ್‍ಐವಿ ಪೀಡಿತ ಮಕ್ಕಳ ಅಜ್ಜಿ ಸಲ್ಲಮ್ಮ “ಸುಷ್ಮಾ ಸ್ವರಾಜ್ ಅವರ ಅಪ್ಪುಗೆಯಿಂದ ನನ್ನ ಮೊಮ್ಮಕ್ಕಳ ಜೀವನ ಸಂಪೂರ್ಣ ಬದಲಾಗಿದೆ. ಅವರ ವಿದ್ಯಾಭ್ಯಾಸಕ್ಕೆಂದು ನಮಗೆ ತಿಂಗಳಿಗೊಮ್ಮೆ ಬೆಂಬಲ ರೂಪದಲ್ಲಿ ಹಣ ಬರುತ್ತಿದೆ. ನಾವು ಅವಳನ್ನು ಎಂದಿಗೂ ಮರೆಯುವುದಿಲ್ಲ” ಎಂದು ಹೇಳಿದ್ದಾರೆ.

    ಇಂದು ಅವರ ಸಾವಿನ ಸುದ್ದಿ ಕೇಳಿ ಕಂಬನಿ ಮಿಡಿದ ಸಲ್ಲಮ್ಮ, ನನ್ನ ಇಬ್ಬರು ಹೆಚ್‍ಐವಿ ಪೀಡಿತ ಮೊಮ್ಮಕ್ಕಳ ಮೇಲೆ ಅವರು ದಯೆ ತೋರಿಸದೆ ಇದ್ದರೆ 2003ರಲ್ಲೆ ನನ್ನ ಮತ್ತು ನನ್ನ ಮೊಮ್ಮಕ್ಕಳ ಜೀವನ ಮುಗಿದು ಹೋಗುತಿತ್ತು ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಹೆಚ್‍ಐವಿ ಪೀಡಿತ ಈ ಇಬ್ಬರು ಮಕ್ಕಳಲ್ಲಿ ಹೆಣ್ಣು ಮಗು 2010ರಲ್ಲಿ ಸಾವನ್ನಪ್ಪಿದ್ದು. ಯುವಕನಿಗೆ 23 ವರ್ಷವಾಗಿದೆ.

  • ಉಡುಪಿಯ ನಕಲಿ ಅಬ್ದುಲ್ ಕಲಾಂಗೆ ಶಿಕ್ಷೆ ಪ್ರಕಟ

    ಉಡುಪಿಯ ನಕಲಿ ಅಬ್ದುಲ್ ಕಲಾಂಗೆ ಶಿಕ್ಷೆ ಪ್ರಕಟ

    ಉಡುಪಿ: 9 ವರ್ಷಗಳ ಹಿಂದೆ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸಹಿಯನ್ನು ಫೋರ್ಜರಿ ಮಾಡಿ ಅವರ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಯವು ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

    ಉಡುಪಿಯ ಕೊಡವೂರು ಗ್ರಾಮದ ಮೂಡಬೆಟ್ಟು ನಿವಾಸಿ ನಿರಂಜನ್ ಚಿದಾನಂದ ಭಟ್ ಶಿಕ್ಷೆಗೆ ಗುರಿಯಾದ ಆರೋಪಿ. 2010ರಲ್ಲಿ ಈತ ವಂಚಿಸುವ ಮತ್ತು ತಾನೇ ಭಾರತ ದೇಶದ ರಾಷ್ಟ್ರಪತಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಎಂದು ವ್ಯವಹರಿಸಿ ರಾಷ್ಟ್ರಪತಿಯ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸಹಿಯನ್ನು ನಕಲಿ ಮಾಡಿ, ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದನು.

    ಉಡುಪಿ ಕರಾವಳಿ ಬೈಪಾಸ್ ಬಳಿಯ ಸರ್ಫ್ ಆಂಡ್ ವೀವ್ ಎಂಬ ಹೆಸರಿನ ಸೈಬರ್ ಕೆಫೆಯಲ್ಲಿ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಈತ ನಕಲಿ ಇಮೇಲ್ ಐಡಿಯನ್ನು ತಯಾರಿಸಿ, ಅದರ ಮೂಲಕ ಅಬ್ದುಲ್ ಕಲಾಂ ಅವರಿಗೆ ಅಭಿನಂದನಾ ಪತ್ರ ವನ್ನು ಕಳುಹಿಸಿಕೊಟ್ಟಿದ್ದನು. ಅದಕ್ಕೆ ಉತ್ತರವಾಗಿ ಅಬ್ದುಲ್ ಕಲಾಂ ಕಳುಹಿಸಿದ್ದ ಕೃತಜ್ಞತಾ ಪತ್ರದಲ್ಲಿದ್ದ ಅವರ ಸಹಿಯನ್ನು ಆರೋಪಿ ನಕಲಿ ಮಾಡಿದ್ದ. ಮಾನವ ಕುಲಕ್ಕಾಗಿ ಅತ್ಯುನ್ನತ ಸೇವೆಗಳನ್ನು ಮಾಡಿದ ಎಂಜಿನಿಯರ್ಸ್ ಗಳಿಗೆ ಅಮೆರಿಕನ್ ಎಂಜಿನಿಯರಿಂಗ್ ಆರ್ಗನೈಝೇಶನ್ ನೀಡುವ ಹೂವೇರ್ ಪ್ರಶಸ್ತಿಗಾಗಿ ಆರೋಪಿಯು ನಾಮಪತ್ರವನ್ನು ಅಬ್ದುಲ್ ಕಲಾಂ ಅವರದ್ದು ಎನ್ನಲಾದ ನಕಲಿ ಶಿಫಾರಸ್ಸು ಪತ್ರದೊಂದಿಗೆ ಕಳುಹಿಸಿದ್ದನು.

    ಅಬ್ದುಲ್ ಕಲಾಂ ಅವರ ನಕಲಿ ಇಮೇಲ್ ಐಡಿಯಿಂದ ಗೋಸ್ವಾಮಿ ಡಿ.ಯೋಗಿ ನ್ಯೂಯಾರ್ಕ್ ಇವರಿಗೆ ಭಾರತ ದೇಶದಲ್ಲಿರುವ 50 ಎಂಡಬ್ಲ್ಯೂ ಸೋಲಾರ್ ಥರ್ಮಲ್ ಪ್ಲಾಂಟ್‍ನ ಪ್ರಾಜೆಕ್ಟ್ ರಿಪೋರ್ಟನ್ನು ಕಳುಹಿಸಿಕೊಡುವಂತೆ ಕೋರಿ, ತಾನು ಸೃಷ್ಟಿಸಿದ ದಾಖಲೆಗಳು ನೈಜ ದಾಖಲೆಗಳು ಎಂದು ಬಳಸಿದ್ದ. ಈ ಮೂಲಕ ಆತ ತಾನೇ ರಾಷ್ಟ್ರಪತಿ ಅಬ್ದುಲ್ ಕಲಾಂ ಎಂದು ವ್ಯವಹರಿಸಿ ಅವರ ವ್ಯಕ್ತಿತ್ವ ಹಾಗೂ ಗೌರವಕ್ಕೆ ಧಕ್ಕೆಯುಂಟು ಮಾಡಿದ್ದನು ಎಂದು ದೂರಲಾಗಿತ್ತು. ವಿಚಾರಣೆ ವೇಳೆ ನಿರಂಜನ್ ಚಿದಾನಂದ ಭಟ್ ಮೇಲಿದ್ದ ಆರೋಪ ಸಾಬೀತಾಗಿದ್ದು ಕೋರ್ಟ್ 3 ವರ್ಷ ಜೈಲು, 7 ಸಾವಿರ ರುಪಾಯಿ ದಂಡ ವಿಧಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv