Tag: APL Card

  • ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

    ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

    ಬೆಂಗಳೂರು: ಗ್ರಾಮ ಪಂಚಾಯಿತಿ (Gram Panchayat) ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್‌ಗಳನ್ನ ರದ್ದು ಮಾಡುವುದಾಗಿ ಸಚಿವ ಕೆ.ಹೆಚ್‌ ಮುನಿಯಪ್ಪ (KH Muniyappa) ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿಂದು ರೇಷನ್ ಕಾರ್ಡ್ (Ration Card) ರದ್ದು ವಿಷಯ ಪ್ರಸ್ತಾಪ ಆಯ್ತು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ರು. ರೇಷನ್ ಕಾರ್ಡ್ ಹಂಚಿಕೆಯಲ್ಲಿ ಗೊಂದಲ ಆಗಿದೆ. ಅನೇಕ ಜನರ ರೇಷನ್ ಕಾರ್ಡ್ ರದ್ದು ಆಗಿದೆ. ಈ ಗೊಂದಲ ಸರಿ ಮಾಡಿ, ಮಾಹಿತಿ ಪ್ರಕಾರ 25 ಲಕ್ಷ ರೇಷನ್ ಕಾರ್ಡ್ ರದ್ದು ಆಗಿದೆ ಅಂತ ಆರೋಪ ಮಾಡಿದ್ರು.

    ಇದಕ್ಕೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಆಹಾರ ಭದ್ರತಾ ಕಾಯ್ಡೆ ಯುಪಿಎ ಸರ್ಕಾರ ಜಾರಿ ಮಾಡಿತು. ಕರ್ನಾಟಕದಲ್ಲಿ 2014 ಎಲ್ಲಿ ಜಾರಿ ಆಯ್ತು? BPL, APL ಕಾರ್ಡ್‌ಗಳು ಸೇರಿ ಒಟ್ಟು 1,53,64,648 ಕಾರ್ಡ್ ಗೆ ರೇಷನ್ ಕೊಡ್ತಿದ್ದೇವೆ. ಒಟ್ಟು 5,29,01,752 ಫಲಾನುಭವಿಗಳಿಗೆ ರೇಷನ್ ಕೊಡಲಾಗ್ತಿದೆ. BPL ಕಾರ್ಡ್ ಗಳನ್ನ ರದ್ದು ಮಾಡಿಲ್ಲ. ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ. ಉಳಿದ ಯಾರಿಗೂ ಕಾರ್ಡ್ ರದ್ದು ಮಾಡೊಲ್ಲ ಅಂತ ಭರವಸೆ ಕೊಟ್ರು.

    ಮುಂದುವರಿದು… APL ಕಾರ್ಡ್ ಗೆ ರೇಷನ್ ಕೊಡೋದು ಈಗ ನಿಲ್ಲಿಸಿದ್ದೇವೆ‌. 25 ಲಕ್ಷ ಕಾರ್ಡ್ ನಲ್ಲಿ 1 ಲಕ್ಷ ಕಾರ್ಡ್ ಜನರು ಮಾತ್ರ ರೇಷನ್ ತೆಗೆದುಕೊಳ್ಳುತ್ತಿದ್ದರು. ಹೀಗಾಗಿ ಸದ್ಯಕ್ಕೆ APL ಕಾರ್ಡ್ ಗೆ ರೇಷನ್ ಕೊಡ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

    APL ಕಾರ್ಡ್ ಅರ್ಹತೆ ಇರೋರು BPL ಕಾರ್ಡ್ ಪಡೆದಿದ್ದಾರೆ. ಈ ರೀತಿ 20% ಕಾರ್ಡ್ ಗಳು ರಾಜ್ಯದಲ್ಲಿವೆ. ಇದನ್ನ ಪರಿಷ್ಕರಣೆ ಮಾಡೋಕೆ ಮುಂದಾಗಿದ್ದೇವೆ. ಆದರೆ ಗೊಂದಲ ಆಯ್ತು, ಹೀಗಾಗಿ ಸದ್ಯಕ್ಕೆ ಪರಿಷ್ಕರಣೆ ನಿಲ್ಲಿಸಿದ್ದೇನೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಇದನ್ನ ಸರಿಯಾಗಿ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡ್ತೀವಿ. BPL ಕಾರ್ಡ್ ಒಬ್ಬರಿಗೂ ಸಮಸ್ಯೆ ಇಲ್ಲದಂತೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

    ಕರ್ನಾಟಕದಲ್ಲಿ ರೇಷನ್ ಕಾರ್ಡ್ ಜಾಸ್ತಿ ಆಗಿರೋದಕ್ಕೆ ಎಲ್ಲಾ ಸರ್ಕಾರಗಳು ಕಾರಣ. ಅದರಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಂತ ಇಲ್ಲ. ಈಗ ಕಾರ್ಡ್ ಪರಿಷ್ಕರಣೆ ಮಾಡಿದ್ರೆ ಗೊಂದಲ ಆಗಿದೆ. ಇದಕ್ಕೂ ರಾಜಕೀಯ ಪಕ್ಷಗಳು ಕಾರಣ ಆಗುತ್ತದೆ. ಹೀಗಾಗಿ ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಣೆ ಮಾಡ್ತೀವಿ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸರಿಯಾಗಿ ಮಾಹಿತಿ ಪರಿಶೀಲನೆ ಮಾಡಿ BPL ಕಾರ್ಡ್ ಪರಿಷ್ಕರಣೆ ಮಾಡ್ತೀವಿ. ಬಳಿಕ APL ಕಾರ್ಡ್ ಪರಿಷ್ಕರಣೆ ಮಾಡೋ ಕೆಲಸ ಮಾಡ್ತೀವಿ ಅಂತ ತಿಳಿಸಿದರು.

  • ವಕ್ಫ್, ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಿಜೆಪಿಯವರು ಜನರ ದಾರಿ ತಪ್ಪಿಸ್ತಿದ್ದಾರೆ: ಮಧು ಬಂಗಾರಪ್ಪ

    ವಕ್ಫ್, ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಿಜೆಪಿಯವರು ಜನರ ದಾರಿ ತಪ್ಪಿಸ್ತಿದ್ದಾರೆ: ಮಧು ಬಂಗಾರಪ್ಪ

    ಬೆಂಗಳೂರು: ಬಿಜೆಪಿಯವರು (BJP) ವಕ್ಫ್ ಮತ್ತು ಬಿಪಿಎಲ್ ಕಾರ್ಡ್ (BPL Card) ವಿಚಾರವಾಗಿ ಸುಮ್ಮನೆ ಅಪಪ್ರಚಾರ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ (Madhu Bangarappa) ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಕ್ಫ್ ಮತ್ತು ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ವಕ್ಫ್ ವಿಚಾರದಲ್ಲಿ ಯಾರಿಗೆ ಜಮೀನು ಸೇರಬೇಕೋ ಅವರಿಗೆ ಸೇರುತ್ತದೆ. ಯಾರೋ ಎಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬುದು ಸುಳ್ಳು‌. ಈ ಬಗ್ಗೆ ದಾಖಲಾತಿ ಇರುತ್ತದೆ. ಯಾರು ತೆಗೆದುಕೊಂಡು ಹೋಗಿಲ್ಲ‌. ಎಲ್ಲದ್ದಕ್ಕೂ ಕಾನೂನು ಇದೆ. ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಚುನಾವಣೆ ಮುಗೀತು, ಈಗ ಬಿಜೆಪಿಯವರು ಕಡಿಮೆ ಮಾಡ್ತಾರೆ. ಫಲಿತಾಂಶ ಮುಗಿದ ಮೇಲೆ ಏನ್ ಫಿಟ್ಟಿಂಗ್ ಇಡಬೇಕು ಎಂದು ಯೋಚನೆ ಮಾಡ್ತಾರೆ. ಇದೆಲ್ಲ ನಡೆಯೋದಿಲ್ಲ. ಪ್ರತಿಭಟನೆ ಮಾಡಲಿ, ಊರು ಊರಲ್ಲಿ ಮಾಡಲಿ. ಪಬ್ಲಿಸಿಟಿ ಸಿಗಲಿ ಎಂದು ಮಾಡ್ತಿದ್ದಾರೆ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.

    ಬಿಪಿಎಲ್ ಕಾರ್ಡ್ ಅರ್ಹತೆ ಇದ್ದವರಿಗೆ ಯಾರಿಗೂ ರದ್ದು ಆಗುವುದಿಲ್ಲ. ಕಾರ್ಡ್ ರದ್ದಾದ್ರೆ, ನಾನು ಶಾಸಕ ನನ್ನನ್ನ ಜನ ಬಿಡ್ತಾರಾ? ಕ್ಯಾನ್ಸಲ್ ಆಗಿದ್ರೆ ನಾನು ಕೊಡಿಸುತ್ತೇನೆ. ಸಿಎಂ ಕೂಡಾ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದಿದ್ದಾರೆ. ಅರ್ಹತೆ ಇದ್ದವರಿಗೆ ಕ್ಯಾನ್ಸಲ್ ಆದ್ರೆ ಕೊಡಿಸೋಕೆ ಶಾಸಕರು ಇದ್ದಾರೆ. ಯಾರು ಭಯ ಪಡಿವುದು ಬೇಡ. ಅರ್ಹರಿಗೆ ಕಾರ್ಡ್ ರದ್ದಾಗಲ್ಲ ಎಂದು ಭರವಸೆ ನೀಡಿದ್ದಾರೆ.

  • ಈಗ 2.46 ಲಕ್ಷ ಕಾರ್ಮಿಕರ ಕಾರ್ಡ್‌ ಅಮಾನತು – ಯಾವ ಜಿಲ್ಲೆಯಲ್ಲಿ ಎಷ್ಟು?

    ಈಗ 2.46 ಲಕ್ಷ ಕಾರ್ಮಿಕರ ಕಾರ್ಡ್‌ ಅಮಾನತು – ಯಾವ ಜಿಲ್ಲೆಯಲ್ಲಿ ಎಷ್ಟು?

    – ಹಾವೇರಿಯಲ್ಲಿ ಅತಿ ಹೆಚ್ಚು 1.69 ಲಕ್ಷ ನಕಲಿ ಕಾರ್ಡ್‌

    ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ (APL Card) ಬೆನ್ನಲ್ಲೇ ಸರ್ಕಾರ  ಈಗ ಕಾರ್ಮಿಕರ ಕಾರ್ಡ್‌ಗಳನ್ನು (Labour Card) ಅಮಾನತು ಮಾಡಲು ಮುಂದಾಗಿದೆ. ಸರ್ಕಾರ ಈಗ 2.46 ಲಕ್ಷ ಕಾರ್ಮಿಕರ ಕಾರ್ಡ್‌ಗಳನ್ನು ಅಮಾನತು ಮಾಡಿದೆ.

    ಕಟ್ಟಡ ಮತ್ತುಇತರೇ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿದ್ದಾರೆ. ಈ ಪೈಕಿ 2,46,951 ಕಾರ್ಡನ್ನು ನಕಲಿ ಎಂದು ಲಿಸ್ಟ್ ಮಾಡಿದ ಕಾರ್ಮಿಕ ಇಲಾಖೆ ಅಮಾನತು ಮಾಡಲು ಆದೇಶಿಸಿದೆ.

    ನಕಲಿ ಕಾರ್ಡ್ ಗಳನ್ನು ಮಾಡಿಸಿ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ನಕಲಿ ಕಾರ್ಡ್‌ಗಳ (Fake Card) ಪತ್ತೆಗೆ ಮುಂದಾಗಿತ್ತು. ಈ ಪೈಕಿ ಹಾವೇರಿ ಜಿಲ್ಲೆಯೊಂದರಲ್ಲೇ ಅತಿ ಹೆಚ್ಚು 1,69,180 ಕಾರ್ಡ್‌ಗಳನ್ನು ಅಮಾನತು ಮಾಡಿದೆ. ನಕಲಿ ಕಾರ್ಮಿಕರ ಕಾರ್ಡ್‌ಗಳನ್ನು ಅಮಾನತು ಮಾಡಿದ್ದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ಉಳಿತಾಯವಾಗಲಿದೆ.

    ಕಾರ್ಮಿಕರ ಕಾರ್ಡ್‌ನಿಂದ ವಯೋ ನಿವೃತ್ತಿ ಪಿಂಚಣಿ, ಅಂಗವಿಕಲ ಪಿಂಚಣಿ, ಟೂಲ್ ಕಿಟ್, ವಸತಿ ಸೌಲಭ್ಯ, ಹೆರಿಗೆ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ ಸೌಲಭ್ಯ, ಅಪಘಾತ ಪರಿಹಾರ, ಮದುವೆ ಸಹಾಯಧನ, ಅಂತ್ಯಕ್ರಿಯೆ ಸೇರಿ 15ಕ್ಕೂ ಹೆಚ್ಚು ಸೌಲಭ್ಯಗಳಿಗೆ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆರ್ಥಿಕ ನೆರವು ನೀಡುತ್ತದೆ. ಇದನ್ನೂ ಓದಿ: ಆಹಾರ ಸುರಕ್ಷತಾ ಇಲಾಖೆಯಿಂದ ರಾಜ್ಯದ 127 ಪಿಜಿಗಳಿಗೆ ನೋಟಿಸ್ – 4 ಪಿಜಿಗಳಿಗೆ ದಂಡ

    ಕಾರ್ಮಿಕ ಕಾರ್ಡ್ ಪಡೆಯಲು ಮಾನದಂಡಗಳೇನು?
    – ನಿರ್ಮಾಣಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರಬೇಕು
    – ಪ್ಲಂಬರ್,ಪೇಂಟಿಂಗ್, ರಸ್ತೆ ನಿರ್ಮಾಣ, ಇಟ್ಟಿಗೆ ನಿರ್ಮಾಣ ಸೇರಿ 56 ವೃತ್ತಿ ಮಾಡುವವರು ಈ ಕಾರ್ಡ್ ಪಡೆಯಲು ಅರ್ಹರು
    – ನಿರ್ಮಾಣಕ್ಕೆ ಸಂಬಂಧಪಟ್ಟಂತೆ 90 ದಿನ ಕೆಲಸ ಮಾಡಿದ್ದರೆ ಅಂತವರು ಕಾರ್ಮಿಕರ ಕಾರ್ಡ್ ಪಡೆಯಲು ಅರ್ಹರು

    – ಕಾರ್ಮಿಕ ಇಲಾಖೆಯಲ್ಲಿ 14 ಯೋಜನೆಗಳ ಲಾಭವನ್ನ ಕಾರ್ಡ್ ಹೊಂದಿದವರು ಪಡೆಯಬಹುದು
    – ಪ್ರತಿ ವರ್ಷ 1,800 ಕೋಟಿ ರೂ. ಹಣವನ್ನು, ಈ ಯೋಜನೆಗಳಿಗೆ ಮೀಸಲಿಡುವ ಇಲಾಖೆ
    – 1800 ರೂ. ಕೋಟಿ ಪೈಕಿ 1209 ಕೋಟಿ ರೂ ಹಣ ಫಲಾನುಭವಿಗಳಿಗೆ ಹೋಗ್ತಿತ್ತು
    – ತೆರಿಗೆ ಹಣ ಸಂಗ್ರಹಿಸಿ, ಈ ಯೋಜನೆಗಳಿಗೆ ಈ ಹಣ ಮೀಸಲಿಡ್ತಿದ್ದ ಇಲಾಖೆ

  • ಬಿಪಿಎಲ್, ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ

    ಬಿಪಿಎಲ್, ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ

    ಬೆಂಗಳೂರು: ಬಿಪಿಎಲ್ (BPL Card) ಹಾಗೂ ಎಪಿಎಲ್ (APL Card )ಯಾವ ಕಾರ್ಡ್ ರದ್ದಾಗಲ್ಲ. ಈ ಬಗ್ಗೆ ಯಾರೂ ಭಯ ಪಡುವುದು ಬೇಡ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ (K.H Muniyappa) ಹೇಳಿದ್ದಾರೆ,

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, 20-25% ಅರ್ಹರಲ್ಲದವರು ಬಿಪಿಎಲ್ ಗೆ ಸೇರಿಕೊಂಡಿದ್ದಾರೆ. ಬಡವರಲ್ಲದವರು ಹಾಗೂ ಅರ್ಹರಲ್ಲದವರೂ ಕೂಡ ಇದರಲ್ಲಿ ಸೇರಿಕೊಂಡಿದ್ದಾರೆ. 80% ರಾಜ್ಯದಲ್ಲಿ ಬಡವರ ಪ್ರಮಾಣ ಇದೆ. ಇದು ಸಾಧ್ಯವಾ? ಕರ್ನಾಟಕ ರಾಜ್ಯದಲ್ಲಿ 80% ಬಡವರಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

    ಯಾವುದೇ ಕಾರಣಕ್ಕೂ ಬಿಪಿಎಲ್ ರದ್ದು ಮಾಡುವುದಿಲ್ಲ. ಇದಕ್ಕೆ ರಾಜಕೀಯ ಬೆರೆಸಿ ದೊಡ್ಡ ಗದ್ದಲ ಮಾಡ್ತಿದ್ದಾರೆ. ಯಾರು ಬಡತನ ರೇಖೆಗಿಂತ ಕೆಳಗಿದ್ದಾರೆ, ಯಾರು ಮೇಲಿದ್ದಾರೆ ಸತ್ಯವಾದ ಮಾಹಿತಿ ಹೊರಗೆ ಬಿಡುತ್ತೇನೆ. ಬಿಜೆಪಿಯವರು (BJP) ಸುಮ್ಮನೆ ತರಲೆ ಮಾಡ್ತಿದ್ದಾರೆ. ಬಿಪಿಎಲ್‌ನವರು ಯಾರೂ ಕೂಡ ಭಯ ಪಡಬೇಕಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

    ನಿಜವಾದ ಬಿಪಿಎಲ್‌ನವರಿಗೆ ಯಾರಿಗೂ ತೊಂದರೆ ಆಗುವುದಿಲ್ಲ. ಅಕಸ್ಮಾತ್ ಅರ್ಹರಿದ್ದು ಬಿಪಿಎಲ್‌ನಿಂದ ಕೈ ಬಿಟ್ಟರೆ, ಅಂತವರಿಗೆ ಪುನಃ ಬಿಪಿಎಲ್ ಕಾರ್ಡ್ ಸಿಗುವ ವ್ಯವಸ್ಥೆ ಮಾಡುತ್ತೇವೆ. 15-20 ದಿನಗಳಲ್ಲಿ ಸಂಪೂರ್ಣ ಪರಿಷ್ಕರಣೆ ಆಗುತ್ತದೆ. ಈ ಬಗ್ಗೆ ಬುಧವಾರ ಮಾತಾಡುತ್ತೇನೆ. ಈ ಬಗ್ಗೆ ಅಂಕಿ ಅಂಶ ಕೊಡುತ್ತೇನೆ. ಹೊಸ ಕಾರ್ಡ್ ಕೂಡ ಬಿಡುಗಡೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

  • ಸರ್ಕಾರದ ಮೇಲಿನ ಹೊರೆ ತಪ್ಪಿಸಲು 11 ಲಕ್ಷ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಶಿಫ್ಟ್‌: ಹೆಚ್‌ಡಿಕೆ ಬಾಂಬ್‌

    ಸರ್ಕಾರದ ಮೇಲಿನ ಹೊರೆ ತಪ್ಪಿಸಲು 11 ಲಕ್ಷ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಶಿಫ್ಟ್‌: ಹೆಚ್‌ಡಿಕೆ ಬಾಂಬ್‌

    – ಗ್ಯಾರಂಟಿಯಿಂದ ಕಾಂಗ್ರೆಸ್‌ ದಿವಾಳಿಯಾಗಿಲ್ಲ ಎಂದ ಕೇಂದ್ರ ಸಚಿವ

    ಕೋಲಾರ: ಸರ್ಕಾರದ ಮೇಲಿನ ಹೊರೆ ತಪ್ಪಿಸಲು 11 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನ ಎಪಿಎಲ್‌ಗೆ (BPL APL Card) ಬದಲಾವಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಬಾಂಬ್‌ ಸಿಡಿಸಿದ್ದಾರೆ.

    ಕೋಲಾರದಲ್ಲಿಂದು (Kolara) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 11 ಲಕ್ಷ ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಗೆ ಬದಲಾವಣೆ ಆಗ್ತಿದೆ. ಬದಲಾವಣೆಗೆ ಕೈ ಹಾಕಿರುವ ಸರ್ಕಾರದ ಬಗ್ಗೆ ಜನರು ಪ್ರಶ್ನೆ ಮಾಡ್ತಿದ್ದಾರೆ. ಕೇಂದ್ರ ಸರ್ಕಾರ ಎಲ್ಲೂ ಅಕ್ಕಿ ಕಡಿತ ಮಾಡ್ತಿಲ್ಲ. ಬಿಪಿಎಲ್‌ನಿಂದ ನಿಂದ ಎಪಿಎಲ್‌ಗೆ ಬದಲಾವಣೆ ಬಗ್ಗೆ ಯೋಚನೆ ಮಾಡಿದಿರಾ? ಎಪಿಎಲ್‌ ಕಾರ್ಡ್‌ನವರು ದುಡ್ಡು ಕೊಡಬೇಕಲ್ವಾ? ಸರ್ಕಾರದ ಮೇಲೆ ಹೊರೆ ತಪ್ಪಿಸಲು ಈ ರೀತಿ ಮಾಡ್ತಿದ್ದಾರೆ. ಗ್ಯಾರಂಟಿ ಯೋಜನೆಗೆ (Guarantee Scheme) 52 ಸಾವಿರ ಕೋಟಿ ರೂ. ಕೊಡ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಕ್ಕೆ ಉಪಯೋಗ ಮಾಡೋದು ಬೇರೆ. ಗ್ಯಾರಂಟಿ ಸ್ಕೀಮ್ ನಿಂದ ಸರ್ಕಾರಕ್ಕೆ ಏನೂ ಹೊರೆ ಇಲ್ಲ. ಹಾಗಾದ್ರೆ ತೆರಿಗೆ ಹೆಚ್ಚಿಗೆ ಮಾಡಿ ಸಂಗ್ರಹ ಮಾಡಿರುವ ಹಣ ಏನಾಯ್ತು? ಎಂದು ಪ್ರಶ್ನೆ ಮಾಡಿದ್ದಾರೆ.

    ಗ್ಯಾರಂಟಿ ಸ್ಕೀಮ್ ಪರಿಶೀಲನೆ ಮಾಡಲು ಮೋದಿ (PM Modi) ಅವರಿಗೆ ಫ್ಲೈಟ್ ಮಾಡಿಕೊಡ್ತೀವಿ ಅಂತ ಸಿಎಂ ಹಾಗೂ ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಈಗ ರಾಜ್ಯ ಸರ್ಕಾರ 1.5 ಲಕ್ಷ ಕೋಟಿ ರೂ. ಸಾಲ ಮಾಡ್ತಿದೀರಿ, ಗ್ಯಾರಂಟಿ ಸ್ಕೀಮ್‌ನಿಂದ ಖಜಾನೆ ಏನೂ ಖಾಲಿ ಆಗಿಲ್ಲ. ಮೋದಿ ಅವರು ಬಂದು ನೋಡಬೇಕಿಲ್ಲ, ನಾವೇ ಇಲ್ಲಿ ನೋಡ್ತಿದ್ದೇವೆ. ಸಿಎಂ ಹೇಳಿದಂತೆ ಕೇಸ್ ಹಾಕಲಿ ಬಿಡಿ ನೋಡೋಣ ಎಂದಿದ್ದಾರೆ. ಇದನ್ನೂ ಓದಿ: Mangaluru| ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ದುರ್ಮರಣ

    ವಕ್ಫ್ ಆಸ್ತಿ ವಿವಾದ ಕುರಿತು ಮಾತನಾಡಿದ ಹೆಚ್‌ಡಿಕೆ, ವಕ್ಫ್ ಆಸ್ತಿ ವಿವಾದಕ್ಕೆ ಸರ್ಕಾರವೇ ತೆರೆ ಎಳೆಯನೇಕು ಎಂದರು. ನೋಟಿಸ್‌ ಹಿಂಪಡೆಯಲು ಸಿಎಂ ಸೂಚನೆ ಕೊಟ್ಟಿದ್ದಾರೆ ಅಂತ ಮಂತ್ರಿನೇ ಹೇಳ್ತಿದ್ದಾರೆ. ಸರ್ಕಾರದ ಕೆಲವೂ ತೀರ್ಮಾನದಿಂದ ಗೊಂದಲ ಸೃಷ್ಟಿಯಾಗಿದೆ. ಉಳ್ಳವರು ವಕ್ಫ್ ಆಸ್ತಿ ವಶಕ್ಕೆ ಪಡೆದಿರುವ ಬಗ್ಗೆ ಏನೂ ಕ್ರಮ ಆಗಿಲ್ಲ. ರೈತರ ಜಮೀನು ಮಾತ್ರ ವಕ್ಫ್ ಆಸ್ತಿ ಮಾಡಲಾಗ್ತಿದೆ. ಅಶಾಂತಿ ಉಂಟು ಮಾಡಲು ಸರ್ಕಾರ ಮಾಡಿರುವ ಮಹಾ ಅಪರಾಧ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ಬಿಪಿಎಲ್‌ ಕಾರ್ಡ್‌ ರದ್ದು – ಕಲಬುರಗಿಯಲ್ಲಿ ಹೆಚ್ಚು, ಉಡುಪಿಯಲ್ಲಿ ಅತಿ ಕಡಿಮೆ

    ಕೋಲಾರ ಜಿಲ್ಲೆಯಲ್ಲೂ ಅಮಾಯಕ ರೈತರ ಜಮೀನುಗಳ ಬಗ್ಗೆ ಅರಣ್ಯ ಇಲಾಖೆ ಒಕ್ಕಲೆಬ್ಬಿಸಿದ್ದಾರೆ. ಆಮೂಲಕ ರೈತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಊರಿಗೆಲ್ಲಾ ಬುದ್ದಿ ಹೃಳುವವರದ್ದು ತೆರವುಗೊಳಿಸಿಲ್ಲ. ಆದೇಶ ಮಾಡಿದ್ರು ಕೇಂದ್ರ ಸೂಚನೆ ನೀಡಿದ್ರು ತೆರವುಗೊಳಿಸುತ್ತಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ

    ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅವರಿಂದ ಅರಣ್ಯ ಒತ್ತುವರಿ ಆರೋಪದ ಸರ್ವೇ ಸ್ಥಗಿತ ಕುರಿತು ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಅಮಾಯಕ ರೈತರ ಭೂಮಿಯನ್ನು ಅರಣ್ಯ ಹಾಗೂ ಕಂದಾಯ ಅಧಿಕಾರಿಗಳು ತೆರವು ಮಾಡಿದ್ದಾರೆ. ಶ್ರೀನಿವಾಸಪುರದಲ್ಲಿ ರೈತರನ್ನು ಒಕ್ಕಲೆಬ್ಬಿಸಿ ಖಾಲಿ ಮಾಡಿಸಿದ್ದಾರೆ. 126 ಎಕರೆ ಒತ್ತುವರಿ ಸರ್ವೇ ಬಗ್ಗೆ ಕೋರ್ಟ್ ಸೂಚನೆ ನೀಡಿದೆ. ಹಾಗಾದ್ರೆ ಬಡವರಿಗೆ ಒಂದು ನ್ಯಾಯ ಇವರಿಗೆ ಒಂದು ನ್ಯಾಯನಾ? ಇದೇ ತಿಂಗಳ 6ನೇ ತಾರೀಖು ಸರ್ವೇ ಮಾಡಲು ನಿಗಧಿ ಆಗಿದ್ದು ಏನಾಯ್ತು? ಅದ್ಯಾವುದೋ ಹೆಚ್‌ಎಂಟಿ ಬಗ್ಗೆ ಇಡ್ಕೊಂಡು ಅರಣ್ಯ ಮಂತ್ರಿ ಮಾತಾಡುತ್ತಿದ್ದಾರೆ. ದೇಶಕ್ಕೆ ಬುದ್ದಿ ಹೇಳೋರು ಇವರೊಬ್ಬರೂ ಅಲ್ವೇ ಅಂತ ಸಚಿವ ಕೃಷ್ಣಭೈರೆಗೌಡ ಹಾಗೂ ರಮೇಶ್ ಕುಮಾರ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

  • ಚಿಕ್ಕಬಳ್ಳಾಪುರದಲ್ಲಿ 2,021 ಬಿಪಿಎಲ್ ಕಾರ್ಡುಗಳು ಎಪಿಎಲ್‌ಗೆ ಮಾರ್ಪಾಡು

    ಚಿಕ್ಕಬಳ್ಳಾಪುರದಲ್ಲಿ 2,021 ಬಿಪಿಎಲ್ ಕಾರ್ಡುಗಳು ಎಪಿಎಲ್‌ಗೆ ಮಾರ್ಪಾಡು

    ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಾಂತ ಇದುವರೆಗೂ 2,021 ಬಿಪಿಎಲ್ ಕಾರ್ಡುಗಳು (BPL Card) ಎಪಿಎಲ್ ಕಾರ್ಡುಗಳಾಗಿ ಮಾರ್ಪಾಡಾಗಿರುವ ಬಗ್ಗೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾ ಆಹಾರ ಹಾಗೂ ನಾಗರೀಕ ಪೂರೈಕೆ ಸರಬರಾಜು ಇಲಾಖೆ ಉಪನಿರ್ದೇಶಕ ನಾಗರಾಜು ಸ್ಪಷ್ಟಪಡಿಸಿದ್ದಾರೆ.

    ಅಂದಹಾಗೆ ಟ್ಯಾಕ್ಸ್ ಪಾವತಿ ಮಾಡುತ್ತಿರುವುದು, ಸರ್ಕಾರಿ ನೌಕರರಾಗಿದ್ರೂ ಬಿಪಿಎಲ್ ಕಾರ್ಡು ಪಡೆದಿದ್ದವರು, ಸೇರಿದಂತೆ 1.20 ಲಕ್ಷಕ್ಕಿಂತಲೂ ಹೆಚ್ಚಿನ ವಾರ್ಷಿಕ ಆದಾಯವಿದ್ದ ಕುಟುಂಬಸ್ಥರ ಕಾರ್ಡುಗಳನ್ನ ಬಿಪಿಎಲ್ ಆಗಿ ಬದಲವಾಣೆ ಮಾಡಲಾಗಿದೆ. ಇದನ್ನೂ ಓದಿ: ಸಚಿವ ಕೆ.ಜೆ ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಂದ್‌ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3 ಲಕ್ಷದ 23 ಸಾವಿರದ 814 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ 2 ಲಕ್ಷದ 74 ಸಾವಿರದ 299 ಬಿಪಿಎಲ್ ಕಾರ್ಡುಗಳು, 21,485 ಎಪಿಎಲ್ ಕಾರ್ಡುಗಳು ಹಾಗೂ 28,030 ಅಂತ್ಯೋದಯ ಕಾರ್ಡುಗಳಾಗಿವೆ. ಜಿಲ್ಲೆಯಾದ್ಯಾಂತ ಶೇ.92 ರಷ್ಟು ಮಂದಿ ಆಧಾರ್ ಜೋಡಣೆ ಇ-ಕೆವೈಸಿ *(E-KYC) ಮಾಡಿಸಿಕೊಂಡಿದ್ದು, ಯಾವುದೇ ಕಾರ್ಡುಗಳು ಅಮಾನತು ರದ್ದು ಮಾಡಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: BBK 11: ಕಿಚ್ಚನ ಕೋಪಕ್ಕೆ ಚೈತ್ರಾ ಕುಂದಾಪುರ ಗಪ್‌ ಚುಪ್‌- ಅಷ್ಟಕ್ಕೂ ಆಗಿದ್ದೇನು?

  • ಬಿಪಿಎಲ್, ಎಪಿಎಲ್‌ ಕಾರ್ಡ್‌ದಾರರಿಗೆ ಬಿಗ್‌ ಶಾಕ್!

    ಬಿಪಿಎಲ್, ಎಪಿಎಲ್‌ ಕಾರ್ಡ್‌ದಾರರಿಗೆ ಬಿಗ್‌ ಶಾಕ್!

    – 60 ಸಾವಿರ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಶಿಫ್ಟ್‌

    ಬೆಂಗಳೂರು: ಬಿಪಿಎಲ್‌, ಎಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಆಧಾರ್‌(ಇ ಕೆವೈಸಿ) ಜೋಡಣೆಯಾಗದ ಬಿಪಿಎಲ್‌, ಎಪಿಎಲ್‌ ಕಾರ್ಡ್‌ಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಮಾನತು ಮಾಡಿದೆ.

    ಈಗಾಗಲೇ ಲಕ್ಷಾಂತರ ಎಪಿಎಲ್ ಕಾರ್ಡ್‌ಗಳು ರದ್ದಾಗಿದ್ದು 60 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು (BPL Card) ಎಪಿಎಲ್‌ಗೆ ಶಿಫ್ಟ್‌ ಮಾಡಲಾಗಿದೆ. ರೇಷನ್‌ ಅಂಗಡಿಗೆ (Ration Shop) ತೆರಳಿದಾಗಲೇ ಈ ವಿಚಾರ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಆಹಾರ ಇಲಾಖೆ ಈಗ ಎಪಿಎಲ್ ಕಾರ್ಡ್​ದಾರರಿಗೂ ಬಿಸಿ ಮುಟ್ಟಿಸಿದೆ.

    22 ಲಕ್ಷ ಎಪಿಎಲ್ (APL Card) ಮತ್ತು ಬಿಪಿಎಲ್ ಕಾರ್ಡ್‌ಗಳನ್ನು (BPL Card) ಆಹಾರ ಇಲಾಖೆ ಅಮಾನತು ಮಾಡಿದ್ದು ಸರಿಯಾಗಿ ಕೆವೈಸಿ ಜೋಡಣೆಯಾದ ಬಳಿಕ ಈ ಕಾರ್ಡ್‌ದಾರರಿಗೆ ಅಕ್ಕಿ ಸಿಗಲಿದೆ. ಇದನ್ನೂ ಓದಿ: ನನ್ನನ್ನ ಮುಟ್ಟಿದರೆ ಹುಷಾರ್ – ಸದ್ದಿಲ್ಲದೇ ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾದ ಸಿಎಂ

    ರಾಜ್ಯದಲ್ಲಿ ಪ್ರಸ್ತುತ 25,62,562 ಎಪಿಎಲ್ ಕಾರ್ಡ್​ಗಳಿದ್ದು 87,86,886 ಸದಸ್ಯರಿದ್ದಾರೆ. ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಎಪಿಎಲ್ ಹೊಂದಿರುವ ಪ್ರತಿ ಕಾರ್ಡ್​ಗೆ ಕೆಜಿ ಅಕ್ಕಿಗೆ 15 ರೂ.ನಂತೆ 10 ಕೆಜಿ ಅಕ್ಕಿ ನೀಡಲಾಗುತ್ತದೆ.

    ಬಿಪಿಎಲ್‌ ಆಪರೇಷನ್‌:
    ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್‌ ಮಾಡಿಕೊಂಡಿದೆ. ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಸಿಎಂ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೇ ಇಲಾಖೆಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ ರೇಷನ್ ಕಾರ್ಡ್ ಪರಿಶೀಲನೆ ಕಾರ್ಯ ನಡೆದಿತ್ತು. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀ‍ಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್‌

    ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲಿದೆ ಎಂದು ಹಿಂದೆ ಪಬ್ಲಿಕ್‌ ಟಿವಿ ವರದಿ ಮಾಡಿತ್ತು. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆಯ ನೆರವು ಪಡೆದು ಆಪರೇಷನ್‌ಗೆ ಮಾಡಲಿದೆ ಎಂದು ವರದಿಯಾಗಿತ್ತು.

     

    ಎಪಿಎಲ್ ರದ್ದಾದ್ರೆ ಏನೆಲ್ಲ ಸೌಲಭ್ಯ ಸಿಗಲ್ಲ?
    1. ಎಪಿಎಲ್ ರದ್ದತಿಯಿಂದ ಗೃಹಲಕ್ಷ್ಮೀ ಯೋಜನೆಯಡಿ ಪಡೆಯುತ್ತಿದ್ದ ಹಣ ಸ್ಥಗಿತ
    2. ಕುಟುಂಬದ ಐಡಿ ಕಾರ್ಡ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
    3. ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಆಗಲ್ಲ
    4. ವಿವಿಧ ಸರ್ಕಾರಿ ಸೌಲಭ್ಯ ಸಿಗಲ್ಲ
    5. ಆಯುಷ್ಮಾನ್ ಭಾರತ್ ಯೋಜನೆ ಲಾಭ ಪಡೆಯಲು ಸಾಧ್ಯವಿಲ್ಲ.
    6. ರಿಯಾಯಿತಿ ದರದಲ್ಲಿ ಅಕ್ಕಿ ಸಿಗಲ್ಲ

    ರದ್ದು ಯಾಕೆ?
    ಆದಾಯ ತೆರಿಗೆ ಪಾವತಿ, ಸರ್ಕಾರಿ ನೌಕರರಾಗಿದ್ದರೂ ಬಿಪಿಎಲ್‌ ಕಾರ್ಡ್‌ ಬಳಸಿ ಸರ್ಕಾರಿ ಯೋಜನೆಗಳ ಲಾಭ ಪಡೆಯುತ್ತಿದ್ದಕ್ಕೆ ಕಾರ್ಡ್‌ ರದ್ದು ಮಾಡಲಾಗಿದೆ.