ಕಾರ್ಯನಿಮಿತ್ತವಾಗಿ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೋಮವಾರ (ನ.25) ಚೆನ್ನೈಗೆ ಭೇಟಿ ನೀಡಿದ್ದರು. ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಇಂದು (ನ.26) ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ, ನಿನ್ನೆ ಎದೆಯುರಿಯಿಂದ ಬಳಲಿದ ಪರಿಣಾಮ ಶಕ್ತಿಕಾಂತ ದಾಸ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದ್ದು. ಅವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ. ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದೆ.ಇದನ್ನೂ ಓದಿ: ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು – ನಮ್ಮ ಮೆಟ್ರೋ ವಿರುದ್ಧ ಮಾಲೀಕನ ಆಕ್ರೋಶ
ಬೆಂಗಳೂರು: ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ನನ್ನನ್ನು ಕಾಪಾಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ (Apollo Hospital) ಹೃದಯ ಶಸ್ತ್ರಚಿಕಿತ್ಸೆ (Heart Surgery) ನಡೆದಿ ಇಂದು ಡಿಸ್ಚಾರ್ಜ್ ಆಗಿದ್ದ ಕುಮಾರಸ್ವಾಮಿ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‍ಎಎಲ್‍ಗೆ ಬಂದಿಳಿದು ಜೆಪಿ ನಗರದ ನಿವಾಸಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ ಗೌಡ ಯಾವುದೇ ಹಣದ ಸಹಾಯ ಮಾಡಿಲ್ಲ- ಪೊಲೀಸರಿಂದ ಸ್ಥಳ ಮಹಜರು
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿತ್ತು, ಈಗ ಮತ್ತೆ ಚಿಕಿತ್ಸೆ ಪಡೆದಿದ್ದೇನೆ ಎಂದಿದ್ದಾರೆ.
ನಾಡಿನಾದ್ಯಂತ ಅಭಿಮಾನಿಗಳು, ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ಚಿಕಿತ್ಸೆ ಬಳಿಕ, ವೈದ್ಯರು ನನ್ನ ಬಳಿ ಚರ್ಚೆ ಮಾಡಿದರು. ವೈದ್ಯರು ಸಾಯಿಬಾಬಾನ ಭಕ್ತರಾಗಿದ್ದು, ಸಾಯಿಬಾಬಾನಿಗೆ ಪೂಜೆ ಸಲ್ಲಿಸಿ ಆಪರೇಷನ್ ನೆರವೇರಿಸಿದ್ದಾರೆ. ನಾನು ಆಪರೇಷನ್ ಮಾಡಿಲ್ಲ, ಸಾಯಿಬಾಬಾನೇ ಆಪರೇಷನ್ ಮಾಡಿದ್ದು ಎಂದು ವೈದ್ಯರು ಹೇಳಿದರು. ಮತ್ತೊರ್ವ ವೈದ್ಯ ಹಂಗೇರಿಯಾದವರು, ನನಗೆ ಮರುಜನ್ಮ ನೀಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಗೆ ನನ್ನ ಕೈಲಾದ ರೀತಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಎನ್‍ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ನಡೆಸುತ್ತೇನೆ. ವೈದ್ಯರು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡಲು ಹೇಳಿದ್ದಾರೆ. ಇನ್ನೆರೆಡು ದಿನಗಳಲ್ಲಿ ಮಂಡ್ಯ ಅಭ್ಯರ್ಥಿ ಯಾರೆಂಬುದು ಫೈನಲ್ ಆಗಲಿದೆ ಎಂದಿದ್ದಾರೆ.
ಕೇಂದ್ರ ತೆರಿಗೆ ಹಣ ಕೊಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‍ಗೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ದುಡ್ಡು, ನಮ್ ತೆರಿಗೆ ಅನ್ನೋದೆಲ್ಲ ಡ್ರಾಮಾ, ಇದೊಂದು ಸ್ಟಂಟ್. ಇದನ್ನು ಬಿಟ್ಟು ಸಿಎಂ ಕೆಲಸ ಮಾಡ್ಬೇಕು ಎಂದಿದ್ದಾರೆ.
ಬಳಿಕ ಮನೆ ಬಳಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರನ್ನ ಮಾತನಾಡಿಸಿ ಅವರು ವಿಶ್ರಾಂತಿಗೆ ತೆರಳಿದ್ದಾರೆ. ನೂರಾರು ಕಾರ್ಯಕರ್ತರು ಭೇಟಿ ನೀಡುವ ನಿರೀಕ್ಷೆ ಇದ್ದು, ಜೆಪಿನಗರದ ನಿವಾಸದ ಬಳಿ ಸ್ಪೀಕರ್ ಅಳವಡಿಕೆ ಮಾಡಲಾಗಿದೆ. ಸ್ಪೀಕರ್ ಮೂಲಕ ಮಂಡ್ಯ ಕಾರ್ಯಕರ್ತರು, ಮುಖಂಡರೊಂದಿಗೆ ಅವರು ಮಾತಾಡಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ
ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಚೆನ್ನೈ ಆಸ್ಪತ್ರೆಯಿಂದ (Hospital) ಡಿಸ್ಚಾರ್ಜ್ ಆಗಿದ್ದಾರೆ.
ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದ ಹೆಚ್‌ಡಿಕೆ ಇಂದು ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಕಣಕ್ಕೆ ಇಳಿಯಲಿರುವ ಅಜಯ್ ರೈ ಯಾರು?
ನವದೆಹಲಿ: ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಸದ್ಗುರು ಜಗ್ಗಿ ವಾಸುದೇವ್ ( Sadhguru Jaggi Vasudev) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
66 ವರ್ಷದ ಸದ್ಗುರು ಮೆದುಳಿನಲ್ಲಿ ಭಾರೀ ಊತ ರಕ್ತಸ್ರಾವ ಉಂಟಾಗಿದ್ದು, ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದಾರೆ. ಸದ್ಯ ಜಗ್ಗಿ ವಾಸುದೇವ್ ಅವರಿಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ (Emergency brain surgery) ನಡೆಸಲಾಗಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಇಶಾ ಫೌಂಡೇಶನ್ ಸಾಮಾಜಿಕ ಜಾಲತಾಣದ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.
ಕಳೆದ ನಾಲ್ಕು ವಾರಗಳಿಂದ ಸದ್ಗುರು ತೀವ್ರ ತಲೆನೋವಿನಿಂದ ಬಳಲುತ್ತಿದ್ದರು. 2024 ರ ಮಾರ್ಚ್ 14 ರಂದು ಅವರು ಮಧ್ಯಾಹ್ನದ ವೇಳೆಗೆ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ವಿಪರೀತ ತಲೆನೋವಿನಿಂದ ಬಳಲಿದ್ದಾರೆ. ಹೀಗಾಗಿ ಅದೇ ದಿನ ಸಂಜೆ 4.30 ಕ್ಕೆ ಸದ್ಗುರುಗಳನ್ನು ತುರ್ತು MRI ಗೆ ಒಳಪಡಿಸಲಾಯಿತು. ಈ ವೇಳೆ ರಕ್ತಸ್ರಾವವಾಗುತ್ತಿರುವ ಬಗ್ಗೆ ಬೆಳಕಿಗೆ ಬಂದಿದೆ. ಕೂಡಲೇ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 58ನೇ ವರ್ಷದಲ್ಲಿ ಮಗುವಿಗೆ ಜನ್ಮ ನೀಡಿದ ಸಿಧು ಮೂಸೇವಾಲಾ ತಾಯಿಗೆ ಸಂಕಷ್ಟ!
ಈ ಸಂಬಂಧ ಪ್ರತಿಕ್ರಿಯಿಸಿರುವ ಜಗ್ಗಿ ವಾಸುದೇವ್, ನಾನು ಸದ್ಯ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿದ್ದೇನೆ. ಇಲ್ಲಿಯ ನ್ಯೂರೋ ಸರ್ಜನ್ ನನ್ನ ತಲೆಯಲ್ಲಿ ಹೇನು ಹುಡುಕಲು ಹೋಗಿದ್ದರು. ಆದರೆ ಅವರಿಗೆ ಹೇನು ಸಿಗಲಿಲ್ಲ. ಕೊನೆಗೆ ತಲೆಗೆ ಬ್ಯಾಂಡೇಜ್ ಹಾಕಿದ್ದು, ಮೆದುಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ.
ಬ್ರೈನ್ ಟ್ಯೂಮರ್ ಮೆದುಳಿಗೆ ಸಂಬಂಧ ಪಟ್ಟ ಆರೋಗ್ಯ ಸಮಸ್ಯೆಯಾಗಿದ್ದು, ಇದನ್ನು ʼಮೆದುಳಿನ ಕ್ಯಾನ್ಸರ್’ ಎಂದು ಕರೆಯುತ್ತಾರೆ. ಮೆದುಳಿನ ಜೀವಕೋಶಗಳು ಕೆಲವೊಂದು ಕಾರಣಗಳಿಂದ ನಿಧಾನವಾಗಿ ಹಾನಿಯಾಗಿ ಗೆಡ್ಡೆಯಾಕಾರದಲ್ಲಿ ಬೆಳೆದು ಈ ಕಾಯಿಲೆಯಾಗಿ ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೂ ಆರಂಭದ ಹಂತದಲ್ಲೇ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಹತೋಟಿಯಲ್ಲಿಡಬಹುದು. ಇನ್ನೂ ಕೆಲವೇ ಕೆಲವು ಬೆರಳೆಣಿಕೆಯಷ್ಟು ಜನ ಗುಣಮುಖರಾಗುತ್ತಾರೆ ಎಂಬ ಮಾತಿದೆ. ಇದೀಗ ಈ ಸಮಸ್ಯೆಗೆ ನೂತನ ಚಿಕಿತ್ಸೆಯಾದ ZAP-X ಭಾರತದಲ್ಲಿ ಲಭ್ಯವಿದ್ದು, ಇದು ದಕ್ಷಿಣ ಏಷ್ಯಾದಲ್ಲೇ ಮೊದಲಾಗಿದೆ.
ಮಾರಣಾಂತಿಕ ಕಾಯಿಲೆಯಾದ ಬ್ರೈನ್ ಟ್ಯೂಮರ್ ವಿರುದ್ಧ ಇಡೀ ವೈದ್ಯಕೀಯ ಲೋಕವೇ ಹೋರಾಡುತ್ತಿದೆ. ಅದೇ ರೀತಿ ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಈ ಆಸ್ಪತ್ರೆಯಲ್ಲಿ ZAP-X ಯಂತ್ರವನ್ನು ಅಳವಡಿಸಲಾಗಿದ್ದು, ಇದು ಮೆದುಳಿನ ಕ್ಯಾನ್ಸರ್‌ಗೆ ನೋವಿಲ್ಲದ ಚಿಕಿತ್ಸಾ ವಿಧಾನವಾಗಿದೆ. ಈ ವಿಧಾನದಲ್ಲಿ ಕ್ಯಾನ್ಸರ್ ಸೆಲ್‌ಗಳನ್ನು ಅಥವಾ ಗಡ್ಡೆಗಳನ್ನು ಕರಗಿಸಲು ನಿಖರವಾಗಿ ವಿಕಿರಣವನ್ನು ಬಳಸಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಒಂದೇ ಸೆಷನ್‌ನಲ್ಲಿ ಚಿಕಿತ್ಸೆ ನೀಡಬಹುದಾಗಿದೆ. ಇದನ್ನೂ ಓದಿ: ಸಿಎಎಗೆ ತಡೆ ಇಲ್ಲ: ಅರ್ಜಿಗಳಿಗೆ 3 ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ಬ್ರೈನ್ ಟ್ಯೂಮರ್ ಸಮಸ್ಯೆ ಮೊದಲು ಮೆದುಳಿನಲ್ಲಿ ಪ್ರಾರಂಭವಾದರೆ ಅದನ್ನು ‘ ಪ್ರೈಮರಿ ಬ್ರೈನ್ ಟ್ಯೂಮರ್ ‘ ಎಂದು, ಮನುಷ್ಯನ ದೇಹದ ಇತರ ಭಾಗಗಳಲ್ಲಿ ಕ್ಯಾನ್ಸರ್ ಕಾಯಿಲೆ ಉಂಟಾಗಿ ನಂತರ ಅದು ಮೆದುಳಿಗೆ ಹಬ್ಬಿದರೆ ಅದನ್ನು ‘ ಸೆಕೆಂಡರಿ ಬ್ರೈನ್ ಟ್ಯೂಮರ್ ‘ ಅಥವಾ ‘ ಮೆಟಾಸ್ಟಾಟಿಕ್ ಬ್ರೈನ್ ಟ್ಯೂಮರ್ ‘ ಎಂದು ಗುರುತಿಸಲಾಗುತ್ತದೆ.
ZAP-X ಹೇಗೆ ಕೆಲಸ ಮಾಡುತ್ತದೆ?
ಯಂತ್ರವು ಹೆಚ್ಚಿನ ತೀವ್ರತೆಯ, ಕೇಂದ್ರೀಕೃತ ವಿಕಿರಣವನ್ನು ಕೇವಲ ಮೆದುಳಿನ ಗೆಡ್ಡೆಗೆ ಕಡಿಮೆ ಅಂತರದಲ್ಲಿ ತಲುಪಿಸುತ್ತದೆ. ಇದರಿಂದ ಸುತ್ತಮುತ್ತಲಿನ ಅಂಗಾಂಶಗಳಿಗೆ ಈ ಚಿಕಿತ್ಸೆಯಿಂದ ಹಾನಿ ಉಂಟಾಗದೆ, ಕೇವಲ ಗೆಡ್ಡೆಯನ್ನು ಮಾತ್ರ ಗುರಿಯಾಗಿಸಿ ದಾಳಿ ಮಾಡುತ್ತದೆ. ಇದರಿಂದಾಗಿ ಕ್ಯಾನ್ಸರ್ ಗಡ್ಡೆ ಕರಗುತ್ತದೆ.
ಯಂತ್ರದ ಸೃಷ್ಟಿಕರ್ತ ಮತ್ತು Zap ಶಸ್ತ್ರಚಿಕಿತ್ಸಾ ಸಿಇಒ ಡಾ.ಜಾನ್ ಆಡ್ಲರ್ ಪ್ರಕಾರ, ರೇಡಿಯೊ ಸರ್ಜರಿಯು ಅಮೆರಿಕಾದಲ್ಲಿ ನರಶಸ್ತ್ರ ಚಿಕಿತ್ಸಕರು ಮಾಡುವ ಅತ್ಯಂತ ಸಾಮಾನ್ಯವಾದ ವಿಧಾನವಾಗಿದೆ. ಪ್ರಪಂಚದ ಎಲ್ಲಾ ಭಾಗಗಳನ್ನು ಗಮನದಲ್ಲಿಟ್ಟುಕೊಂಡು ಈ ಯಂತ್ರವನ್ನು ವಿನ್ಯಾಸಗೊಳಿಸಲಾಗಿದೆ. ಇದರಿಂದ ಭಾರತದಲ್ಲಿ ಸುಮಾರು 10 ಲಕ್ಷ ಜನರು ಈ ಚಿಕಿತ್ಸೆಯಿಂದ ಪ್ರಯೋಜನ ಪಡೆಯಬಹುದು ಎಂಬುದು ಅವರ ಅಭಿಪ್ರಾಯ.
ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆಗಿಂತ ZAP-X ಹೇಗೆ ಭಿನ್ನ?
ರೋಗಿಗಳು ಆಸ್ಪತ್ರೆಗೆ ದಾಖಲಾದ ಒಂದು ದಿನದಲ್ಲೇ ಡಿಸ್ಚಾರ್ಜ್ ಮಾಡಬಹುದು. ZAP-X ಚಿಕಿತ್ಸೆಗೆ ಅರಿವಳಿಕೆ ನೀಡುವ ಅಗತ್ಯ ಇರುವುದಿಲ್ಲ. ಚಿಕಿತ್ಸೆಯ ನಂತರ ವಿಶ್ರಾಂತಿಯ ಅಗತ್ಯವಿಲ್ಲದೆ ರೋಗಿಗಳು ಮನೆಗೆ ತೆರಳಬಹುದಾಗಿದೆ. ಚಿಕಿತ್ಸೆಯನ್ನು ಕೇವಲ 30 ನಿಮಿಷದಿಂದ ಗರಿಷ್ಠ 1 ಗಂಟೆ 30 ನಿಮಿಷಗಳವರೆಗೆ ಒಂದೇ ಅವಧಿಯಲ್ಲಿ ಮಾಡಲಾಗುತ್ತದೆ. ಗೆಡ್ಡೆ ತುಂಬಾ ದೊಡ್ಡದಾಗಿದ್ದರೆ ಅಥವಾ ಮೆದುಳಿನಲ್ಲಿನ ಪ್ರಮುಖ ರಚನೆಗಳಿಗೆ ಹತ್ತಿರದಲ್ಲಿದ್ದಾಗ ಮಾತ್ರ ಹೆಚ್ಚಿನ ಸಮಯ ಹಿಡಿಯುತ್ತದೆ ಎಂಬುದು ವೈದ್ಯರ ಅಭಿಪ್ರಾಯ.
ಮೆದುಳಿನ ಆಳವಾದ, ಬಹುಮುಖ್ಯ ರಚನೆಗಳಿಗೆ ಹತ್ತಿರವಿರುವ (ಇತರ ಸಮಸ್ಯೆಗಳಿಗೆ ಸ್ಕ್ಯಾನ್ ಮಾಡುವಾಗ ಪತ್ತೆಯಾದ ಸಣ್ಣ ಗೆಡ್ಡೆಗಳು) ರೋಗಿಗಳಿಗೆ ಇದು ಶಸ್ತ್ರಚಿಕಿತ್ಸೆಗಿಂತ ಉತ್ತಮವಾಗಿರುತ್ತದೆ. ಯಂತ್ರವು ಗೆಡ್ಡೆಗಳಿಗೆ ಚಿಕಿತ್ಸೆ ನೀಡುವುದಲ್ಲದೆ, ಇದು ಮೆದುಳಿನಲ್ಲಿನ ಆಳವಾದ ಗಾಯಗಳು ಅಥವಾ ಅಪಧಮನಿಯ ವಿರೂಪತೆಗೆ ಸಹ ಚಿಕಿತ್ಸೆ ನೀಡುತ್ತದೆ.
ರೇಡಿಯೋ ಸರ್ಜರಿ ತಂತ್ರಗಳಲ್ಲಿ ಬಳಸುವ ರೇಡಿಯೋಥೆರಪಿಯಿಂದ Zap-X ಹೇಗೆ ಭಿನ್ನ?
ರೇಡಿಯೋಥೆರಪಿಯು ಸೂರ್ಯನ ಬೆಳಕಿನಂತೆ ಚದರುತ್ತದೆ. ಅಲ್ಲದೇ ಇದರ ಪರಿಣಾಮವು ಕಡಿಮೆಯಾಗಿದೆ. ಚಿಕಿತ್ಸೆಗೆ ತಗಲುವ ಸಮಯವು ಹೆಚ್ಚು. ರೇಡಿಯೊಸರ್ಜರಿ – ಮತ್ತು Zap-X ತಂತ್ರಜ್ಞಾನ ವಿಕಿರಣವನ್ನು ನಿರ್ದಿಷ್ಟ ಬಿಂದುವಿಗೆ ಕೇಂದ್ರೀಕರಿಸಲು ಭೂತಗನ್ನಡಿಯನ್ನು ಬಳಸುವುದಕ್ಕೆ ಸಮಾನವಾಗಿದೆ ಎಂಬುದು ಡಾ.ಆಡ್ಲರ್ ಅಭಿಪ್ರಾಯವಾಗಿದೆ.
ಚಿಕಿತ್ಸೆಯ ವೆಚ್ಚ ಎಷ್ಟು?
Zap-X ಚಿಕಿತ್ಸೆಯ ವೆಚ್ಚವು ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆಗೆ ಸಮನಾಗಿರುತ್ತದೆ. ಇದರ ವೆಚ್ಚ ಭಾರತದಲ್ಲಿ 1,90,000 ರೂ. ಆಗಲಿದ್ದು, ಭಾರತದ ಹೊರಗೆ, ಇದರ ಬೆಲೆ ಸುಮಾರು 3,30,000 ರೂ. ಆಗಲಿದೆ.
ಈ ಹೊಸ ಬೆಳವಣಿಗೆಯು ಭಾರತದ ವೈದ್ಯಕೀಯ ಪ್ರವಾಸೋದ್ಯಮದ ಭವಿಷ್ಯವನ್ನು ವೃದ್ಧಿಸುವ ಭರವಸೆ ಮೂಡಿಸಿದೆ. ಏಕೆಂದರೆ ಇದರಿಂದ ದಕ್ಷಿಣ ಏಷ್ಯಾ ಮತ್ತು ಹತ್ತಿರದ ಪ್ರದೇಶಗಳ ಜನರಿಗೆ ಮೆದುಳಿನ ಗೆಡ್ಡೆಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ. ಇದನ್ನೂ ಓದಿ: JMM ತೊರೆದು ಬಿಜೆಪಿ ಸೇರಿದ ಹೇಮಂತ್ ಸೊರೇನ್ ಸೊಸೆ ಸೀತಾ ಸೊರೇನ್
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ (ICU) ವಾರ್ಡ್‌ಗೆ (Ward) ಶಿಫ್ಟ್ ಮಾಡಲಾಗಿದೆ.
ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಸೆ.3 ರಂದು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಚಾಲನೆ: ಜಯಮೃತ್ಯುಂಜಯ ಸ್ವಾಮೀಜಿ
ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ
ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಯಾವಾಗ ಡಿಸ್ಚಾರ್ಜ್ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ಕುಮಾರಸ್ವಾಮಿಯವರು ಚೆನ್ನಾಗಿ ಮಾತನಾಡಿದರು. ಅವರು ಬೇಗ ಗುಣಮುಖರಾಗಿ ಬರುತ್ತಾರೆ ಎಂದರು. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (H.D.Kumaraswamy) ಅವರಿಗೆ ಏಕಾಏಕಿ ಅನಾರೋಗ್ಯ (Illness) ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ತಡರಾತ್ರಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ.
ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಲ್ಲದೇ ಸತತ ಪ್ರವಾಸದ ಹಿನ್ನೆಲೆ ಜ್ವರ ಕಾಣಿಸಿಕೊಂಡಿದ್ದು, ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೋಲೋ (Apollo) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ
ಈ ಹಿಂದೆ ಕೂಡಾ ಚುನಾವಣಾ ಸಮಯದಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಇದೀಗ ಎರಡೆರಡು ಬಾರಿ ವಿದೇಶ ಪ್ರವಾಸ ಮಾಡಿದ್ದು, ಸತತ ಪ್ರವಾಸದಿಂದ ಅನಾರೋಗ್ಯ ಕಾಣಿಸಿಕೊಂಡಿದೆ. ಇದನ್ನೂ ಓದಿ: ಇಂದೇ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆಯಲ್ಲಿ ರಾಯಚೂರಿನ 3,64,059 ಫಲಾನುಭವಿಗಳು
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ.
ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ (Chennai) ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ. ಇದನ್ನೂ ಓದಿ: `ಕೈ’ಗೆ ಶಾಕ್ – ಚುನಾವಣಾ ರಾಜಕೀಯದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ
ಕಳೆದ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿತ್ತು. ಇದನ್ನೂ ಓದಿ: ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ