Tag: apolo hospital

  • ಸಂಧಾನದ ಚಾನ್ಸೇ ಇಲ್ಲ- ಶಾಸಕ ಆನಂದ್ ಸಿಂಗ್ ಮೊದಲ ಪ್ರತಿಕ್ರಿಯೆ

    ಸಂಧಾನದ ಚಾನ್ಸೇ ಇಲ್ಲ- ಶಾಸಕ ಆನಂದ್ ಸಿಂಗ್ ಮೊದಲ ಪ್ರತಿಕ್ರಿಯೆ

    ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಹಲ್ಲೆಗೊಳಗಾಗಿರೋ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಕೊಂಚ ಚೇತರಿಸಿಕೊಳ್ಳುತ್ತಿದ್ದು, ಸಂಧಾನದ ಚಾನ್ಸೇ ಇಲ್ಲ ಎಂದು ಹೇಳಿದ್ದಾರೆ.

    ಶುಕ್ರವಾರ ಅಪೋಲೋ ಆಸ್ಪತ್ರೆಯಿಂದ ನಾರಾಯಣ ನೇತ್ರಾಲಯಕ್ಕೆ ಹೋಗುವ ಮುನ್ನ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸದ್ಯ ನಾನು ಚೇತರಿಸಿಕೊರ್ಳಳುತ್ತಿದ್ದೇನೆ. ಆದ್ರೆ ಪೂರ್ತಿಯಾಗಿ ಚೇತರಿಸಿಕೊಳ್ಳಲು ಇನ್ನು 15-20 ದಿನ ಬೇಕಾಗಬಹುದು. ತುಂಬಾ ಕ್ರ್ಯಾಕ್ ಹಾಗೂ ಎದೆಯ ಭಾಗಕ್ಕೆ ನೋವಾಗಿದೆ ಎಂದು ಹೇಳಿದ್ರು.

    ಇದೇ ವೇಳೆ ಕಂಪ್ಲಿ ಗಣೇಶ್ ಬಗ್ಗೆ ಕೇಳಿದಾಗ, ಅವರು ಎಲ್ಲಿದ್ದಾರೋ ಗೊತ್ತಿಲ್ಲ, ಕಾನೂನು ಪ್ರಕಾರ ಕೈಗೊಳ್ಳಲಿ. ಸಂಧಾನದ ಚಾನ್ಸೇ ಇಲ್ಲ ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ:  12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

    ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು, ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಆನಂದ್ ಸಿಂಗ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಎರಡೂ ಕಾಲು ಕಟ್ ಮಾಡಿದ್ರೂ ಬಾಲಕ ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

    ಎರಡೂ ಕಾಲು ಕಟ್ ಮಾಡಿದ್ರೂ ಬಾಲಕ ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

    ಮೈಸೂರು: ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ. ಆದ್ರೆ ಬಾಲಕನ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಪೋಷಕರು ಪ್ರತಿಭಟಿಸಿದ್ದಾರೆ.

    ಮೈಸೂರು ತಾಲೂಕು ಸಿದ್ದರಾಮನಹುಂಡಿ ಗ್ರಾಮದ 14 ವರ್ಷದ ಶಿವಕುಮಾರ್ ಕಳೆದ ಶುಕ್ರವಾರ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದನು. ಸೋಮವಾರ ಒಂದು ಕಾಲು ತೆಗೆದ ವೈದ್ಯರು ನಿನ್ನೆ ಮತ್ತೊಂದು ಕಾಲನ್ನು ತೆಗೆದಿದ್ದಾರೆ. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲವೆಂದು ವೈದ್ಯರು ಹೇಳಿ ಕಾಲು ತೆಗೆದಿದ್ದರು. ಆದ್ರೆ ಇಂದು ಬೆಳಗ್ಗೆ ಶಿವಕುಮಾರ್ ಮೃತಪಟ್ಟಿದ್ದಾನೆ. ಇದರಿಂದ ಆಸ್ಪತ್ರೆಯ ಮುಂದೆ ಮೃತ ಬಾಲಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

    ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಉಂಟಾಗಿದೆ ಎಂದು ಪೋಷಕರು ಆರೋಪಿಸಿ ಆಸ್ಪತ್ರೆಯ ಮುಂಭಾಗ ಶವವಿಟ್ಟುಕೊಂಡು ಪ್ರತಿಭಟಿಸಿದರು. ಈಗಾಗಲೇ ಮೂರು ಲಕ್ಷ ರೂಪಾಯಿ ಕಟ್ಟಿಸಿಕೊಂಡ ಆಸ್ಪತ್ರೆ ಸಿಬ್ಬಂದಿ ಇನ್ನೂ ಎರಡು ಲಕ್ಷ ಹಣ ಕಟ್ಟಬೇಕೆಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

    ಬಾಲಕನ ಮೃತದೇಹ ನೀಡುವಾಗ ಕೂಡ ಪೋಷಕರು ಮತ್ತು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮಾತಿನ ಚಕಮಕಿ ನಡೆದಿದ್ದು, ಅಪೋಲೊ ಶವಗಾರದ ಮುಂದೆ ತಳ್ಳಾಟ ನೂಕಾಟ ಉಂಟಾಗಿತ್ತು. ಆಸ್ಪತ್ರೆ ಸಿಬ್ಬಂದಿವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಆಸ್ಪತ್ರೆ ಅಧಿಕಾರಿಗಳು 1 ಲಕ್ಷ ಹಣ ವಾಪಸ್ ಕೊಡುವುದಾಗಿ ಒಪ್ಪಿಕೊಂಡರು. ಬಾಕಿ 2 ಲಕ್ಷ ಹಣ ಕಟ್ಟಿಸಿಕೊಳ್ಳದೆ ಮೃತದೇಹ ಹಸ್ತಾಂತರ ಮಾಡಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಕೆ ಆರ್ ಆಸ್ಪತ್ರೆಗೆ ರವಾನಿಸಲಾಯಿತು. ಸಿಎಂ ಸಿದ್ದರಾಮಯ್ಯ ಮೈಸೂರು ಆಪ್ತ ಸಹಾಯಕ ಕುಮಾರ್ ಮಧ್ಯಸ್ಥಿಕೆಯಲ್ಲಿ ಪ್ರಕರಣ ಇತ್ಯರ್ಥವಾಯಿತು.

    https://www.youtube.com/watch?v=QQqb7py3Zrs