Tag: Appachhu Ranjan

  • RSS ಬ್ಯಾನ್ ವಿಚಾರ – ಸಿದ್ದರಾಮಯ್ಯಗೆ ತಲೆಕೆಟ್ಟಿದೆ ಎಂದು ಅಪ್ಪಚ್ಚು ರಂಜನ್ ಕಿಡಿ

    RSS ಬ್ಯಾನ್ ವಿಚಾರ – ಸಿದ್ದರಾಮಯ್ಯಗೆ ತಲೆಕೆಟ್ಟಿದೆ ಎಂದು ಅಪ್ಪಚ್ಚು ರಂಜನ್ ಕಿಡಿ

    ಮಡಿಕೇರಿ: ಪಿಎಫ್‍ಐ (PFI) ಸಂಘಟನೆ ಬ್ಯಾನ್ ಮಾಡಿದ ಹಾಗೆ ಆರ್‌ಎಸ್‍ಎಸ್ (RSS) ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಅವರಿಗೆ ತಲೆ ಕೆಟ್ಟಿದೆ, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಹೇಳುವ ಮೂಲಕ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ (Appachhu Ranjan) ತಿರುಗೇಟು ನೀಡಿದ್ದಾರೆ.

    ಮಡಿಕೇರಿಯಲ್ಲಿ (Madikeri) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‍ಎಸ್‍ನಲ್ಲಿ ರಾಷ್ಟ್ರೀಯ ಚಿಂತನೆ ತೊಡಗಿದೆ. ನಾವು ಕೂಡ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಕಲಿಸುವುದು ದೇಶ ಪ್ರೇಮ ಹಾಗೂ ದೇಶ ಭಕ್ತಿಯನ್ನು, ದೇಶ ಒಡೆಯುವ ಕೆಲಸವನ್ನು ಆರ್‌ಎಸ್‍ಎಸ್ ಮಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

    ಆರ್‌ಎಸ್‍ಎಸ್ ಯಾವುದೇ ಬಾಂಬ್ ಹಾಕಲು ಕೂಡ ಕಲಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಹೀಗೆ ಅರ್ಥವಿಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಸಿದ್ದರಾಮಯ್ಯರ ಮಾತನ್ನು ಯಾರು ಕೂಡ ಒಪ್ಪುವುದಿಲ್ಲ. ಈಗಾಗಲೇ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಪಿಎಫ್‍ಐ ಬ್ಯಾನ್ ಆಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಜಿಲ್ಲೆಯ ಪರವಾಗಿ ಹೇಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷದಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್ ನಿಯಮ ಜಾರಿಗೆ – ನಿತಿನ್ ಗಡ್ಕರಿ

    Live Tv
    [brid partner=56869869 player=32851 video=960834 autoplay=true]

  • ಮೊಟ್ಟೆ ಎಸೆದ ಪ್ರಕರಣ : ಸಂಪತ್ ಯಾರು ಅಂತ ನಮಗೆ ಗೊತ್ತಿಲ್ಲ: ಕೆ.ಜಿ. ಬೋಪಯ್ಯ

    ಮೊಟ್ಟೆ ಎಸೆದ ಪ್ರಕರಣ : ಸಂಪತ್ ಯಾರು ಅಂತ ನಮಗೆ ಗೊತ್ತಿಲ್ಲ: ಕೆ.ಜಿ. ಬೋಪಯ್ಯ

    ಮಡಿಕೇರಿ: ಸಂಪತ್ ಬಿಜೆಪಿ ಕಾರ್ಯಕರ್ತನಲ್ಲ. ಬಿಜೆಪಿ ಕಾರ್ಯಕರ್ತರಿಗೂ ಮೊಟ್ಟೆ ಎಸೆದಿದ್ದಕ್ಕೂ ಸಂಬಂಧವಿಲ್ಲ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದ್ದಾರೆ.

    ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಇಷ್ಟು ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ಸಿದ್ದರಾಮಯ್ಯನವರ ಸ್ಥಾನ ಮಾನ ನಮಗೂ ತಿಳಿದಿದೆ. ಅವರು ವಿರೋಧ ಪಕ್ಷದ ನಾಯಕರು, ಅವರನ್ನು ಶ್ಯಾಡೋ ಚೀಫ್ ಮಿನಿಸ್ಟರ್ ಅಂತ ಕೂಡ ಕರೆಯುತ್ತೇವೆ. ಅವರಿಗೆ ಪ್ರೋಟೋಕಾಲ್ ಇದೆ. ಅಂತಹ ದೊಡ್ಡ ವ್ಯಕ್ತಿ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತರಲ್ಲ ಎಂದು ಹತ್ತು ಬಾರಿ ಬೇಕಾದರೂ ಹೇಳುತ್ತೇನೆ ಎಂದಿದ್ದಾರೆ.

    ಶಾಸಕ ಅಪ್ಪಚ್ಚು ರಂಜನ್ ಜೊತೆಗಿರುವ ಸಂಪತ್ ಫೋಟೋ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಎಲ್ಲಾ ಮೆಂಬರ್ ಶಿಪ್ ಡಿಜಿಟಲ್ ಆಗಿದೆ. ಅದರಲ್ಲಿ ಸಂಪತ್ ಹೆಸರಿಲ್ಲ ಎಂದು ನಮ್ಮ ಜಿಲ್ಲಾಧ್ಯಕ್ಷರು ಪರಿಶೀಲನೆ ನಡೆಸಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತರೇ, ಆದರೆ ಅದರ ಮಧ್ಯೆ ಯಾರೋ ಬಂದು ಮೊಟ್ಟೆ ಎಸೆದಿರುವುದಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಯಾವ ಬಿಜೆಪಿ ಕಾರ್ಯಕರ್ತರು ಹಾಗೇ ಮಾಡುವುದಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!

    ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಶಾಸಕ ಅಪ್ಪಚ್ಚು ರಂಜನ್ ಆಪ್ತ ಹಾಗೂ ಬಿಜೆಪಿ ಕಾರ್ಯಕರ್ತ ಸಂಪತ್ ಮೊಟ್ಟೆ ಎಸೆದಿದ್ದನು. ಈ ಪ್ರಕರಣ ಎಕ್ಸ್‍ಕ್ಲೂಸಿವ್ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸೋಮವಾರಪೇಟೆಯ ಲೋಡರ್ಸ್ ಕಾಲೋನಿಯ ಸಂಪತ್ ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿದ್ದಾನಂತೆ. ಸಣ್ಣಪುಟ್ಟ ಕಾಮಗಾರಿಗಳ ಗುತ್ತಿಗೆ ಕೆಲಸ ಮಾಡುತ್ತಿದ್ದ ಸಂಪತ್ ಅನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]