Tag: appeal

  • ಕೋರ್ಟ್ ಆದೇಶ ಪ್ರಶ್ನಿಸಿ ಸೋಮವಾರ ರಾಹುಲ್ ಮೇಲ್ಮನವಿ ಸಾಧ್ಯತೆ

    ಕೋರ್ಟ್ ಆದೇಶ ಪ್ರಶ್ನಿಸಿ ಸೋಮವಾರ ರಾಹುಲ್ ಮೇಲ್ಮನವಿ ಸಾಧ್ಯತೆ

    ನವದೆಹಲಿ: ಮಾನನಷ್ಟ (Defamation) ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿರುವ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ (Rahul Gandhi) ಸೋಮವಾರ ಸೂರತ್ ಕೋರ್ಟ್‌ನಲ್ಲಿ ಮೇಲ್ಮನವಿ (Appeal) ಸಲ್ಲಿಸುವ ಸಾಧ್ಯತೆಯಿದೆ.

    ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ ಅವರ ಕಾನೂನು ತಂಡವು 2 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸೂರತ್‌ನ (Surat) ಸೆಷನ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ. ಇದನ್ನೂ ಓದಿ: ಭಾರತದಿಂದ 85 ದೇಶಗಳಿಗೆ ರಕ್ಷಣಾ ಸಾಮಾಗ್ರಿ ರಫ್ತು – 1,5920 ಕೋಟಿ ದಾಖಲೆ 

    ರಾಹುಲ್ ಗಾಂಧಿ ಹಿರಿಯ ನಾಯಕರಾದ ಕೆ.ಸಿ ವೇಣುಗೋಪಾಲ್ (K.C.Venugopal) ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

    ರಾಜ್ಯಸಭಾ ಸದಸ್ಯ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ (Abhishek Singhvi) ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿ ಹಲವು ಸಲಹೆ ನೀಡಿದ್ದಾರೆ. ಸೂರತ್‌ನ ಖ್ಯಾತ ಕ್ರಿಮಿನಲ್ ಮತ್ತು ಹಿರಿಯ ವಕೀಲ ಆರ್‌ಎಸ್ ಚೀಮಾ (R.S.Cheema) ಅವರು ರಾಹುಲ್ ಪರ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸರ್ವಾಧಿಕಾರದ ವಿರುದ್ಧ ರಾಹುಲ್‌ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ 

    ಏನಿದು ಪ್ರಕರಣ?
    ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Narendra Modi) ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ (BJP) ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ 

    ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ಮಾರ್ಚ್ 23 ರಂದು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆ ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: 10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ – ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

    2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಅತ್ಯಂತ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮೋದಿ ಚಾಲನೆ

  • Breaking- ಮನವಿ ಪತ್ರ ಹಿಡಿದು ಸಿಎಂ ಬೊಮ್ಮಾಯಿ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

    Breaking- ಮನವಿ ಪತ್ರ ಹಿಡಿದು ಸಿಎಂ ಬೊಮ್ಮಾಯಿ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

    ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನು ಭೇಟಿ ಮಾಡಿದ್ದಾರೆ ನಟ ರಿಷಬ್ ಶೆಟ್ಟಿ (Rishabh Shetty). ಸಿಎಂ ಭೇಟಿಯ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಭೇಟಿಯ ಹಿಂದೆ ಮಹತ್ವದ ಉದ್ದೇಶವಿತ್ತು ಎನ್ನುವುದನ್ನೂ ಅವರು ಹೇಳಿಕೊಂಡಿದ್ದಾರೆ. ತಾವು ಕೊಟ್ಟಿರುವ ಮನವಿಗೂ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದೂ ಅವರು ವಿಡಿಯೋ ಮೂಲಕ ಹೇಳಿದ್ದಾರೆ.

    ಕಾಂತಾರ 2 RISHAB SHETTY

    ಕಾಂತಾರ ಚಿತ್ರದ ನಂತರ ಅವರು ಅನೇಕ ಕಾಡುಗಳಿಗೆ ಭೇಟಿ ನೀಡಿದ್ದಾರಂತೆ. ಕರ್ನಾಟಕದ ನಾನಾ ಭಾಗಗಳಲ್ಲಿ ಸಂಚರಿಸಿದ್ದಾರಂತೆ. ಅದರಲ್ಲೂ ಕಾಡಂಚಲ್ಲಿ ವಾಸಿಸುವವರ ಜೊತೆ ಬೆರೆತಿದ್ದಾರೆ. ಅವರ ನೋವು ನಲಿವುಗಳಿಗೆ ಸಾಕ್ಷಿಯಾಗಿದ್ದಾರೆ. ಅಲ್ಲದೇ, ಕಾಡಿನಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಯೂ ಮಾತನಾಡಿದ್ದಾರಂತೆ. ಅವರು ಕಷ್ಟಗಳು ಏನು ಎನ್ನುವುದನ್ನು ಪಟ್ಟಿಮಾಡಿ, ಆ ಪಟ್ಟಿಯನ್ನು ಸಿಎಂಗೆ ನೀಡಿದ್ದಾರೆ ರಿಷಬ್. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

    ಕಾಡಿನ ಪಕ್ಕದಲ್ಲೇ ವಾಸಿಸುವ ಅನೇಕರಿಗೆ ಏನೆಲ್ಲ ಕಷ್ಟ ಪಡುತ್ತಿದ್ದಾರೆ, ಅವರಿಗೆ ಏನೆಲ್ಲ ಪರಿಹಾರ ನೀಡಬಹುದು ಹಾಗೂ ಕಾಡು ಪ್ರಾಣಿಗಳಿಂದ ಯಾವ ರೀತಿಯಲ್ಲಿ ತೊಂದರೆ ಆಗುತ್ತಿದೆ ಮತ್ತು ಅರಣ್ಯ ಸಿಬ್ಬಂದಿ ಎಷ್ಟೆಲ್ಲ ಸಂಕಟಗಳನ್ನು ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅಕ್ಷರ ರೂಪದಲ್ಲಿ ಮುಖ್ಯಮಂತ್ರಿಗಳಿಗೆ ತೋರಿಸಿದ್ದಾರೆ. ಸಿಎಂ ಕೂಡ ಕೂಡಲೇ ಅವುಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರಂತೆ.

    ಕಾಂತಾರ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್, ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ದೈವನರ್ತಕರಿಗೆ ಮತ್ತು ಅವರ ಕುಟುಂಬಕ್ಕೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಲ್ಲದೇ, ಜನಪದ ಕಲೆಗಳು ಮತ್ತು ಜನಪದರ ಭಾವನೆಗಳಿಗೆ ಸ್ಪಂದಿಸಿದ್ದಾರೆ. ಅದರ ಮುಂದುವರೆಕೆಯಾಗಿ ಸಿಎಂ ಭೇಟಿ ಮಾಡಿದ್ದಾರೆ.

  • ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ಉಡುಪಿ: ಹಿಜಬ್ ಹೋರಾಟ ಆರಂಭವಾದ ನಂತರ ಉಡುಪಿಯಲ್ಲಿ ವ್ಯಾಪಾರ ಬಹಿಷ್ಕಾರ ನಡೆಯುತ್ತಿದೆ. ಮುಸಲ್ಮಾನ ವ್ಯಾಪಾರಿಗಳಿಗೆ ಜಾತ್ರೆ ಉತ್ಸವ ದೇವಸ್ಥಾನಗಳ ವ್ಯಾಪಾರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ. ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಜಾತ್ರೆ, ಬೀದಿ ವರ್ತಕರ ಸಂಘ ವ್ಯಾಪಾರ ಅವಕಾಶ ಮಾಡಿಕೊಡುವಂತೆ ಹಿಂದೂ ಸಮಾಜಕ್ಕೆ ಕರೆ ನೀಡುವಂತೆ ಮನವಿ ಮಾಡಿದರು.

    ಮುಸಲ್ಮಾನ ನಾಯಕರುಗಳು ಕ್ರೈಸ್ತ ಧರ್ಮಗುರುಗಳು ಪೇಜಾವರಶ್ರೀಗಳನ್ನು ಭೇಟಿಯಾಗಿ ಉಡುಪಿಯಲ್ಲಿ ಸೌಹಾರ್ದ ವಾತಾವರಣ ನೆಲೆಸುವಂತೆ, ಹಿಂದೂಗಳು ವ್ಯಾಪಾರಕ್ಕೆ ಅವಕಾಶ ಮಾಡಿ ಕೊಡುವಂತೆ ಪೇಜಾವರ ಶ್ರೀಗಳನ್ನು ಭೇಟಿಯಾಗಿ ಮನವಿ ಸಲ್ಲಿಕೆ ಮಾಡಲಾಯ್ತು. ಉಡುಪಿಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿಯಾಗಿದ್ದು, ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ. ನೂರಾರು ವರ್ಷಗಳಿಂದ ಉಡುಪಿಯಲ್ಲಿ ಹಿಂದೂ ಮತ್ತು ಮುಸಲ್ಮಾನರ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದೇವೆ. ಕೆಲ ಬೆಳವಣಿಗೆಗಳಿಂದ ಎರಡು ಧರ್ಮಗಳ ನಡುವೆ ಭಿನ್ನಾಭಿಪ್ರಾಯಗಳು ಬಂದಿದೆ. ಸಮಸ್ಯೆಯನ್ನು ಬಗೆಹರಿಸಿ ಕೊಡಲು ತಾವು ನೇತೃತ್ವದ ಬೇಕು ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮುಸಲ್ಮಾನ ವ್ಯಾಪಾರಿಗಳ ಮನವಿ ಮಾಡಿದರು. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಧರ್ಮಗುರುಗಳು ಸಮಾಜದ ಸಾಮರಸ್ಯ ತೆಯ ಬಗ್ಗೆ ಮಾತನಾಡಿದರು. ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೌಲಾ, ಮಹಮ್ಮದ್ ಆರಿಫ್ ಮತ್ತಿತರ ವ್ಯಾಪಾರಿಗಳು ಮನವಿ ಸಂದರ್ಭ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೇಜಾವರ ಸ್ವಾಮೀಜಿಗಳು ಹಣ್ಣುಗಳನ್ನು ನೀಡಿದರು.

  • ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

    ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

    -ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ

    ಬೆಂಗಳೂರು: ವಯೋಸಹಜವಾದ ಕಾಯಿಲೆಯಿಂದ ಇಂದು ತಾಯಿಯನ್ನು ಕಳೆದುಕೊಂಡಿರುವ ನಟಿ ವಿಜಯಲಕ್ಷ್ಮಿ ಅವರು ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ ಎಂದು ತಮ್ಮ ದುಃಖವನ್ನು ತೊಡಿಕೊಂಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೆನ್ನೈಯಲ್ಲಿ ಸಮಸ್ಯೆ ಆಗಿ ತಾಯಿ, ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದೇನೆ. ಅಕ್ಕ, ತಾಯಿ ನನ್ನ ಮಕ್ಕಳ ಸಮವಾಗಿದ್ದಾರೆ. ಬೆಳಗ್ಗೆ 12 ಗಂಟೆಗೆ ಅಮ್ಮನಿಗೆ ನೋಡಿ ಆಘಾತ ಆಯಿತು. ಕೂಡಲೇ ಹೋಟೆಲ್ ಅವರನ್ನು ಕರೆದು ನೋಡಿದಾಗ ಅವರು ಇನ್ನಿಲ್ಲ ಅಂತ ತಿಳಿಯಿತು. ಕೂಡಲೇ ಬಾ. ಮಾ ಹರೀಶ್ ಅವರಿಗೆ ತಿಳಿಸಿದೆ, ಅವರು ಬಂದು ಸಹಾಯ ಮಾಡುತ್ತಿದ್ದಾರೆ. ಇದನ್ನೂ ಓದಿ:  ನಟಿ ವಿಜಯಲಕ್ಷ್ಮಿ ತಾಯಿ ನಿಧನ

    ಸಾಕಷ್ಟು ಹೊಡೆತ ತಿಂದಿದ್ದೇನೆ, ನೀವೆಲ್ಲ ಜೊತೆಗೆ ಇದ್ದೀರಾ. ಅನಾಥ ಆಶ್ರಮಕ್ಕೆ ಕರೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುತ್ತೇವೆ. ನನ್ನ ಅಕ್ಕ ಉಷಾ ಅವರಿಗೆ ಚಿಕಿತ್ಸೆ ಕೊಡಬೇಕು. ನನ್ನ ಅಕ್ಕನಿಗೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ನಾನು ಮಾತನಾಡೋದು ಒರಟು ಅನ್ನಿಸಬಹುದು. ಅಕ್ಕನಿಗೆ ಎಲ್ಲಾ ರೀತಿಯ ಸೇವೆ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

    ಅಮ್ಮ ಬಿಟ್ಟು ಹೋದ ಮೇಲೆ ನಾನು ಬದಲಾಗುತ್ತೇನೆ. ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ. ಇಲ್ಲೇ ಇರುತ್ತೇನೆ ಇಲ್ಲೇ ಜೀವನ ಸಾಗಿಸುತ್ತೇನೆ. ಅಕ್ಕನಿಗೆ ಸಮಸ್ಯೆ ಆದ ಮೇಲೆ ಅಮ್ಮ ಮಾನಸಿಕವಾಗಿ ನೊಂದಿದ್ದರು. ನೀವೆಲ್ಲಾ ಇದ್ದೀರ, ನಾನು ಧೈರ್ಯವಾಗಿ ಇರುತ್ತೇನೆ ಎಂದು ಹೇಳುತ್ತಾ ತಾಯಿ ಅಗಲಿರುವ ನೋವನ್ನು ಹೇಳಿಕೊಂಡಿದ್ದಾರೆ.

  • ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

    ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

    ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

    ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

  • ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ- ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

    ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ- ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

    ಮಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ.

    ದೇಶದಲ್ಲಿ ಸದ್ಯ ಪ್ರತಿದಿನ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವ ದಿನದ ಗುರಿಯನ್ನು ಒಂದು ಕೋಟಿಗೆ ನಿಗದಿ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ. ಇದನ್ನೂ ಓದಿ: ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ

    ಕಾಂಗ್ರೆಸ್ ನಿಯೋಗದಲ್ಲಿ ಡಿಸಿಸಿ ಅಧ್ಯಕ್ಷರೂ ಆದ ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ್ ರೈ ಮತ್ತು ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದೀನ್ ಬಾವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

    ದೇಶದಲ್ಲಿ ಕಳೆದ ಮೇ 31ರ ವರೆಗೆ 21.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಂದರೆ ಕೇವಲ 4.45 ಕೋಟಿ ಜನರಿಗೆ ಲಸಿಕೆ ನೀಡಿದಂತಾಗುತ್ತದೆ. ಇದು ಭಾರತದ ಜನಸಂಖ್ಯೆಯ ಕೇವಲ ಶೇ.3.17 ಮಾತ್ರ. ಕಳೆದ 134 ದಿನಗಳಲ್ಲಿ ಪ್ರತಿ ದಿನ ಸರಾಸರಿ ಕೇವಲ 16 ಲಕ್ಷ ಡೋಸ್ ಲಸಿಕೆ ಮಾತ್ರ ನೀಡಲಾಗುತ್ತಿದೆ. ಈ ರೀತಿಯಲ್ಲಿ ಲಸಿಕಾ ಕಾರ್ಯಕ್ರಮ ನಡೆದರೆ ಎಲ್ಲ ವಯಸ್ಕ ಜನರಿಗೆ ಲಸಿಕೆ ನೀಡುವುದು ವಿಳಂಬ ಆಗಲಿದ್ದು, ಮೂರನೇ ಅಲೆಗೆ ಮುನ್ನ ನಮ್ಮ ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ನರೇಂದ್ರ ಮೋದಿ ಸರ್ಕಾರ ಉತ್ತರಿಸಬೇಕಾಗಿದೆ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

    ಕೇಂದ್ರ ಸರ್ಕಾರ ಲಸಿಕೆಗಳನ್ನು ಖರೀದಿಸಿ ಉಚಿತವಾಗಿ ರಾಜ್ಯ ಸರ್ಕಾರಗಳಿಗೆ ನೀಡಬೇಕಾಗಿರುವುದು ಇಂದಿನ ಅಗತ್ಯ. ಡಿಸೆಂಬರ್ ಅಂತ್ಯದ ವೇಳೆಗೆ ಹದಿನೆಂಟು ಮತ್ತು ಹೆಚ್ಚಿನ ವಯೋಮಾನದವರಿಗೆ ಉಚಿತ ಲಸಿಕೆ ಹಾಕಬೇಕಾಗುತ್ತದೆ. ಕೇಂದ್ರ ಸರ್ಕಾರ ಮೂರು ರೀತಿಯ ದರ ನಿಗದಿ ಮಾಡಿರುವುದು ನ್ಯಾಯಯುತವಾಗಿಲ್ಲ. ಇಂದು ಖಾಸಗಿ ಆಸ್ಪತ್ರೆಗಳಲ್ಲಿ 600 ರೂ.ನಿಂದ 1,500 ರೂಪಾಯಿ ದರದಲ್ಲಿ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಸಂಕಷ್ಟ ಕಾಲದಲ್ಲಿ ಮೋದಿ ಸರ್ಕಾರ ಕೆಲವು ಮಂದಿಗೆ ಲಾಭ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಮನವಿಯಲ್ಲಿ ಹೇಳಿದೆ.

  • ಪೋಸ್ಟ್ ನೋಡಿ ಮೋಸ ಹೋಗಬೇಡಿ – ಅಭಿಮಾನಿಗಳಲ್ಲಿ ಡಾಲಿ ಮನವಿ

    ಪೋಸ್ಟ್ ನೋಡಿ ಮೋಸ ಹೋಗಬೇಡಿ – ಅಭಿಮಾನಿಗಳಲ್ಲಿ ಡಾಲಿ ಮನವಿ

    ಬೆಂಗಳೂರು: ಪೋಸ್ಟ್ ನೋಡಿ ಮೋಸ ಹೋಗಬೇಡಿ ಎಂದು ತಮ್ಮ ಅಭಿಮಾನಿಗಳಲ್ಲಿ ನಟ ಡಾಲಿ ಧನಂಜಯ್ ಅವರು ಮನವಿ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ನಟ ನಟಿಯರ ಹೆಸರನ್ನು ಹೇಳಿಕೊಂಡು ಜನರಿಗೆ ಮೋಸ ಮಾಡುವ ಮಂದಿ ಬಹಳ ಇದ್ದಾರೆ. ಕೆಲವೊಮ್ಮೆ ನಟ-ನಟಿಯರ ಹೆಸರಿನಲ್ಲಿ ಫೇಸ್‍ಬುಕ್ ಖಾತೆ ತೆರೆದು ಹಣ ಕೇಳಿರುವ ಪ್ರಕರಣಗಳು ಕೂಡ ಬೆಳಕಿಗೆ ಬಂದಿವೆ. ಈಗ ಈ ರೀತಿಯ ಪ್ರಕರಣದ ಬಗ್ಗೆ ಸ್ವತಃ ನಟ ಧನಂಜಯ್ ಅವರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟಿಟ್ಟರಿನಲ್ಲಿ ಬರೆದುಕೊಂಡಿರುವ ಡಾಲಿ, ಈ ತರಹದ ಪೋಸ್ಟ್‍ಗಳನ್ನು ನಂಬಿ ಮೋಸ ಹೋಗಬೇಡಿ. ಈ ರೀತಿಯ ಎರಡು ಮೂರು ಘಟನೆಗಳು ಗಮನಕ್ಕೆ ಬಂದಿವೆ. ಜೋಪಾನವಾಗಿರಿ, ಯಾವುದನ್ನೇ ನಂಬುವ ಮುನ್ನ ಅದನ್ನು ಒಂದು ಬಾರಿ ಪರೀಕ್ಷೆ ಮಾಡಿ. ಅದರಲ್ಲೂ ಯಾವುದನ್ನಾದರೂ ಮತ್ತು ಯಾರಾನ್ನದರೂ ಸೋಶಿಯಲ್ ಮೀಡಿಯಾದಲ್ಲಿ ನಂಬುವ ಮೊದಲು ಎಲ್ಲವನ್ನೂ ಪರಿಶೀಲಿಸಿ ಎಂದು ಬರೆದುಕೊಂಡಿದ್ದಾರೆ.

    ಇದರ ಜೊತೆಗೆ ಡಾಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದು, ಈ ಫೋಟೋದಲ್ಲಿ ಆಕಾಶ್ ಗೌಡ ಎಂಬ ಹೆಸರಿನ ವ್ಯಕ್ತಿ ಡಾಲಿಯವರ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾನೆ. ಈ ಪೋಸ್ಟಿನಲ್ಲಿ ನಮ್ಮ ಹೊಸ ಕನ್ನಡ ಸಿನಿಮಾಗೆ ತಂದೆ, ಮಹಿಳೆ, ಪುರುಷ ಮತ್ತು ಮಕ್ಕಳ ಪಾತ್ರದಲ್ಲಿ ನಟಿಸುವವರು ಬೇಕಾಗಿದ್ದಾರೆ. ಈ ಸಿನಿಮಾದಲ್ಲಿ ಡಾಲಿ ಸರ್ ಕೂಡ ನಟಿಸಲಿದ್ದಾರೆ. ಯಾರಿಗದರೂ ಆಸಕ್ತಿ ಇದ್ದರೆ, ನಮಗೆ ಮಸೇಜ್ ಮಾಡಿ. ವೃತ್ತಿಪರರು ಮಾತ್ರ ಎಂದು ಬರೆದುಕೊಂಡಿದ್ದಾರೆ.

    ಈ ಪೋಸ್ಟ್ ನೋಡಿ ಗರಂ ಆಗಿರುವ ಡಾಲಿ ಇಂತವರನ್ನು ನಂಬಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸದ್ಯ ಧನಂಜಯ್ ಅವರು ರತ್ನನ್ ಪ್ರಪಂಚ ಎಂಬ ಸಿನಿಮಾದಲ್ಲಿ ನಿರತರಾಗಿದ್ದು, ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಯೋಗಿ ಜಿ ರಾಜ್ ಹಾಗೂ ಕಾರ್ತಿಕ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಜೊತೆ ಶಿವಪ್ಪ ಸಿನಿಮಾದಲ್ಲಿ ಡಾಲಿ ನಟಿಸಲಿದ್ದಾರೆ.

  • ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ದಿಗಂಬರ ಜೈನ ಸಮಾಜ ಆಗ್ರಹ

    ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ದಿಗಂಬರ ಜೈನ ಸಮಾಜ ಆಗ್ರಹ

    ಹುಬ್ಬಳ್ಳಿ: ರಾಜ್ಯದಲ್ಲಿ ಜೈನ ಸಮುದಾಯದ ಬಹುತೇಕ ಜನರು ಕೂಡ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಜೈನ ಸಮುದಾಯವನ್ನು ಅಭಿವೃದ್ಧಿಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ರಾಜ್ಯಸರ್ಕಾರ ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ದಿಗಂಬರ ಜೈನ ಸಮಾಜದ ಉಪಾಧ್ಯಕ್ಷ ವಿಮಲ್ ತಾಳಿಕೋಟಿ ಹೇಳಿದರು.

    ನಗರದಲ್ಲಿಂದು ಸುದ್ದಿಗೋಷ್ಟಿ ಮಾತನಾಡಿದ ಅವರು, ಅಭಿವೃದ್ಧಿಯಿಂದ ವಂಚಿತರಾದ ಸಮುದಾಯಗಳ ಬಗೆಗಿನ ರಾಜ್ಯ ಸರ್ಕಾರದ ಕಾಳಜಿ ಪ್ರಶಂಸನೀಯವಾಗಿದ್ದು, ರಾಜ್ಯದಲ್ಲಿ ಅಲ್ಪಸಂಖ್ಯಾತವಾಗಿರುವ ಹಾಗೂ ಅಭಿವೃದ್ಧಿಯಿಂದ ಹಿಂದುಳಿದ ಜೈನ ಸಮುದಾಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದರು.

    ಈಗಾಗಲೇ ಜೈನ ಸಮಾಜದ ಮುಖಂಡರೊಂದಿಗೆ ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದ್ದು, ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಲಾಗುತ್ತದೆ ಎಂದು ಅವರು ಹೇಳಿದರು. ಪ್ರಾಚೀನ ಕಾಲದಿಂದಲೂ ಕನ್ನಡ ನಾಡನ್ನು ಕಟ್ಟಿ ಪೋಷಿಸಲು ಜೈನ ಸಮುದಾಯದವರು ಸಾಕಷ್ಟು ಶ್ರಮವಹಿಸಿದ್ದಾರೆ. ಈ ನಿಟ್ಟಿನಲ್ಲಿ ಜೈನ ಸಮುದಾಯವನ್ನು ಪರಿಗಣನೆಗೆ ತೆಗೆದುಕೊಂಡು ಜೈನ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಬೇಕು ಎಂದು ಅವರು ಹೇಳಿದರು.

  • ಸ್ನೇಹಿತರಾದ ನಿಮಗೆಲ್ಲ ಒಂದು ಸಣ್ಣ ಮನವಿ: ಕಿಚ್ಚ ಸುದೀಪ್

    ಸ್ನೇಹಿತರಾದ ನಿಮಗೆಲ್ಲ ಒಂದು ಸಣ್ಣ ಮನವಿ: ಕಿಚ್ಚ ಸುದೀಪ್

    ಬೆಂಗಳೂರು: ಕೊರೊನಾ ಕಾರಣದಿಂದ ಈ ವರ್ಷದ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದಾರೆ.

    ಬುಧವಾರ 47 ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವನ್ನು ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    https://www.instagram.com/p/CEjmH0DHdiB/?utm_source=ig_web_copy_link

    ಪತ್ರದಲ್ಲಿ ಏನಿದೆ?
    ಬಹಳ ವರ್ಷಗಳಿಂದ ನಿಮ್ಮನ್ನೆಲ್ಲಾ ಭೇಟಿಯಾಗುವುದು ಒಂದು ಸಂಸ್ಕೃತಿಯಂತಾಗಿದೆ. ಬೇರೆ ಯಾವುದೇ ಸಂತೋಷ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಪತ್ರಿವರ್ಷ ಶುಭಾಶಯ ಕೋರಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದ ನಿಮ್ಮೊಂದಿಗೆ ಒಂದು ದಿನ ಪೂರ್ತಿ ಸಮಯ ಕಳೆಯುವ ಅವಕಾಶ ನನಗೆ ಸಿಗುತ್ತಿತ್ತು.

    ಈ ವರ್ಷ ಸದ್ಯದ ಪರಿಸ್ಥಿತಿ ಸರಿಯಿಲ್ಲ. ಈ ಬಾರಿಯ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಆಚರಣೆ ಮಾಡುತ್ತಿಲ್ಲ ಎಂದು ಹೇಳಲು ನಾನು ವಿಷಾದಿಸುತ್ತೇನೆ. ನಾನು ನಿಮ್ಮೆಲ್ಲರ ಹಾಗೂ ನನ್ನ ವಯಸ್ಸಾಗುತ್ತಿರುವ ಪೋಷಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತೆ. ಈ ಬಾರಿ ಹುಟ್ಟುಹಬ್ಬ ಆಚರಿಸಿದರೆ 10 ಹೆಜ್ಜೆ ಹಿಂದಿಟ್ಟು ಯಾವುದನ್ನು ತೊಲಗಿಸಲು ಪ್ರಯತ್ನಿಸುತ್ತಿದ್ದೇವೋ ಅದನ್ನು ಮತ್ತೆ ಆಮಂತ್ರಿಸಿದಂತೆ ಆಗುತ್ತದೆ.

    ಕೋವಿಡ್ ಇನ್ನು ದೊಡ್ಡ ಬೆದರಿಕೆಯಾಗಿಯೇ ಇದೆ. ನಾವೆಲ್ಲರೂ ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ನಿಮ್ಮ ಕುಟುಂಬದವರು ನಮ್ಮ ಕುಟುಂಬದವರು ಇದ್ದಂತೆ. ಅವರು ರೋಗಕ್ಕೆ ತುತ್ತಾಗಿ ಕಷ್ಟಪಟ್ಟರೆ, ನರಳುವ ಸುದ್ದಿ ಕೇಳಿದರೆ ನಿಮ್ಮಷ್ಟೇ ನನಗೂ ನೋವಾಗುತ್ತದೆ. ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ.

    ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ.

    ಈ ಅನೇಕ ವರ್ಷಗಳು ನನ್ನ ಪರವಾಗಿ ನಿಂತಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು. ಒಂದೊಂದು ಸಲ ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಾನು ಇರುವುದಿಲ್ಲ. ಆ ರೀತಿ ಇರಲು ಖಂಡಿತವಾಗಿಯೂ ಪ್ರಯತ್ನ ಮಾಡುತ್ತೇನೆ. ನಿಮ್ಮನ್ನೆಲ್ಲಾ ಹೆಚ್ಚು ಮನೋರಂಜಿಸಲು ಯತ್ನಿಸುವೆ. ಕೋವಿಡ್ ಜೊತೆ ಯುದ್ಧ ಮುಗಿದ ನಂತರ ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವೆ ಎಂದು ಕಿಚ್ಚ ಬರೆದುಕೊಂಡಿದ್ದಾರೆ.

  • ರಾಜ್ಯದಲ್ಲಿ ಯೂರಿಯಾ ಕೊರತೆ – ರಸಗೊಬ್ಬರ ಒದಗಿಸುವಂತೆ ಡಿವಿಎಸ್‍ಗೆ ಬಿ.ಸಿ ಪಾಟೀಲ್ ಮನವಿ

    ರಾಜ್ಯದಲ್ಲಿ ಯೂರಿಯಾ ಕೊರತೆ – ರಸಗೊಬ್ಬರ ಒದಗಿಸುವಂತೆ ಡಿವಿಎಸ್‍ಗೆ ಬಿ.ಸಿ ಪಾಟೀಲ್ ಮನವಿ

    ನವದೆಹಲಿ: ರಾಜ್ಯಕ್ಕೆ ಅಗತ್ಯ ಪ್ರಮಾಣ ರಸಗೊಬ್ಬರ ಒದಗಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದಗೌಡ ಅವರಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಹಿನ್ನೆಲೆ ದೆಹಲಿಯ ಶಾಸ್ತ್ರೀ ಭವನದಲ್ಲಿರುವ ಕಚೇರಿಯಲ್ಲಿ ಭೇಟಿಯಾದ ಬಿ.ಸಿ ಪಾಟೀಲ್, ರಾಜ್ಯದಲ್ಲಿ ಸೃಷ್ಟಿಯಾಗಿರುವ ಯೂರಿಯಾ ಗೊಬ್ಬರ ಅಭಾವದ ಬಗ್ಗೆ ಮಾಹಿತಿ ನೀಡಿದರು. ಮುಂಗಾರು ಮಳೆ ಉತ್ತಮವಾಗುತ್ತಿದ್ದು ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹೀಗಾಗಿ ರಾಜ್ಯದಲ್ಲಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಕೇಂದ್ರ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

    ಬಿ.ಸಿ ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡ ಡಿ.ವಿ ಸದಾನಂದಗೌಡ ಅಧಿಕಾರಗಳ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈಗಾಗಲೇ ರಾಜ್ಯ ಸರ್ಕಾರ ಅಗತ್ಯತೆಗೆ ಅನುಸಾರ ರಸಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.