Tag: appeal

  • ‘ಶಿವ ನನ್ನ ಜೊತೆ ಮಾತನಾಡು’- ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವತಿ

    ‘ಶಿವ ನನ್ನ ಜೊತೆ ಮಾತನಾಡು’- ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವತಿ

    – ಮೂರು ಯುವಕರಿಗೆ ವಿಡಿಯೋ ಕಳುಹಿಸಿ ನೇಣಿಗೆ ಶರಣು
    – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌

    ಹೈದರಾಬಾದ್: ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನ ಭಕ್ತವತ್ಸಲ ನಗರದಲ್ಲಿ ನಡೆದಿದೆ.

    ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ 21 ವರ್ಷದ ಯುವತಿ, ಈ ವಿಡಿಯೋದಲ್ಲಿ ಕುತ್ತಿಗೆಗೆ ದುಪ್ಪಟ್ಟವನ್ನು ಸುತ್ತಿಕೊಂಡು ‘ಶಿವ ನನ್ನ ಜೊತೆ ಮಾತನಾಡು’ ಎಂದು ಮನವಿ ಮಾಡಿಕೊಂಡಿದ್ದಾಳೆ. ನಂತರ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಮನವಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮನೆಯವರು ಆಕೆಯ ರೂಮಿಗೆ ಹೋಗಿ ನೋಡಿದಾಗ ಈ ಪ್ರರಕರಣ ಬೆಳಕಿಗೆ ಬಂದಿದೆ. ಮಗಳ ಮೃತದೇಹ ನೋಡಿ ಗಾಬರಿಯಾದ ಮನೆಯವರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪ್ರಾಥಮಿಕ ತನಿಖೆ ಮಾಡಿ, ಯುವತಿ ವಿಡಿಯೋ ಮಾಡಿ ಮೂರು ಜನ ಯುವಕರಿಗೆ ಕಳುಹಿಸಿದ್ದಾಳೆ. ಜೊತೆಗೆ ತನ್ನ ಜೊತೆ ಮಾತನಾಡುವಂತೆ ಮನವಿ ಮಾಡಿದ್ದಾಳೆ. ಆದರೆ ಅವರು ರೀಪ್ಲೈ ಮಾಡಿಲ್ಲ. ಹೀಗಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

    ಯುವತಿ ಸಾಯುವ ಮುನ್ನ ಕಳುಹಿಸಿರುವ ಸಂದೇಶದ ಪ್ರಕಾರ, ಶಿವ ಅಲಿಯಾಸ್ ಭಾರ್ಗವ್ ತನ್ನ ಜೊತೆ ಮಾತನಾಡಬೇಕು ಎಂದು ಆಕೆ ಬಯಸಿದ್ದಳು. ಆದರೆ ಯಾರೂ ಅವಳ ಜೊತೆ ಮಾತನಾಡದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಶಿವ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಯುವತಿಯ ಕುಟುಂಬಸ್ಥರು ತನಿಖೆ ವೇಳೆ ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಸಂಬಂಧ ಭಕ್ತವತ್ಸಲ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಯುವತಿ ಸಂದೇಶದ ಕಳುಹಿಸಿದ ಮೂವರು ಯುವಕರು ಪರಾರಿಯಾಗಿದ್ದು, ಯುವತಿಗೆ ಈ ಮೂವರ ಜೊತೆ ಇದ್ದ ಅಕ್ರಮ ಸಂಬಂಧವೇ ಆತ್ಮಹತ್ಯೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

  • ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ ಗೋಲ್ಡನ್ ಸ್ಟಾರ್ ಗಣಿ

    ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ ಗೋಲ್ಡನ್ ಸ್ಟಾರ್ ಗಣಿ

    ಬೆಂಗಳೂರು: ಚಂದನವದ ಚಿನ್ನದ ಹುಡುಗ ಗಣೇಶ್ ಅವರು ತನ್ನ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.

    ಜುಲೈ 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟುಹಬ್ಬವಿದೆ. ನೆಚ್ಚಿನ ನಾಯಕ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳು ಹಾರ-ತುರಾಯಿ ಹೊತ್ತುಕೊಂಡು ದೂರದ ಊರಿನಿಂದ ಬಂದ ವಿಶ್ ಮಾಡುತ್ತಾರೆ. ಆದರೆ ಈ ವರ್ಷ ಕೊರೊನಾ ಇರುವುದರಿಂದ ಯಾರೂ ಕೂಡ ಮನೆ ಬಳಿ ಬರಬೇಡಿ ನೀವು ಇದ್ದಲ್ಲೆ ನನಗೆ ಶುಭ ಕೋರಿ ಆಶೀರ್ವಾದಿಸಿ ಎಂದು ಗಣಿ ಮನವಿ ಮಾಡಿಕೊಂಡಿದ್ದಾರೆ.

    ತಮ್ಮ ಹುಟ್ಟುಹಬ್ಬದ ವಿಚಾರವಾಗಿ ಟ್ವೀಟ್ ಮಾಡಿರುವ ಗಣೇಶ್ ಅವರು, ಪ್ರೀತಿಯ ಸ್ನೇಹಿತರೇ ಕೊರೊನಾ ಸೋಂಕಿನಿಂದಾಗಿ ಈ ವರ್ಷದ ನನ್ನ ಹುಟ್ಟುಹಬ್ಬವನ್ನು ನೇರವಾಗಿ ನಿಮ್ಮನ್ನು ಭೇಟಿಮಾಡಿ ಆಚರಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಕ್ಷಮೆಯಿರಲಿ. ನಿಮ್ಮ ಪ್ರೀತಿ ಮತ್ತು ಹಾರೈಕೆ ಹಾಗೂ ಶುಭಾಶಯ ಸದಾ ನನ್ನ ಜೊತೆಯಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.

    ಜೊತೆಗೆ ನನ್ನೆಲ್ಲಾ ಅಭಿಮಾನಿಗಳೇ, ಬಂದುಗಳೇ, ಸ್ನೇಹಿತರೆ ಹಾಗೂ ಹಿತೈಷಿಗಳೇ ಈ ಕೊರೊನಾದ ಸಂಕಷ್ಟದ ಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲೂ ನೀವು ನೊಂದವರ, ಅಸಹಾಯಕರ, ಹಸಿದವರ ಬೆಂಬಲಕ್ಕೆ ನಿಂತಿರಿ. ಇದಕ್ಕೆ ಯಾವ ಪ್ರಚಾರವನ್ನೂ ಬಯಸದೆ ಸದ್ದುಗದ್ದಲವಿಲ್ಲದೆ ನಿಮ್ಮ ಮಾನವೀಯತೆಯನ್ನು ತೋರಿಸಿದೀರಾ. ಇದಕ್ಕಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ. ನಿಮ್ಮ ಕಾರ್ಯಗಳಿಗಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

    ನಿಮಗೆಲ್ಲ ಗೊತ್ತಿರುವ ಹಾಗೇ ಜುಲೈ 2ರಂದು ಪ್ರತಿವರ್ಷ ಸಾವಿರಾರು ಮಂದಿ ಬೆಂಗಳೂರಿಗೆ ಬಂದು ನನ್ನ ಜನ್ಮ ದಿನವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಿದ್ದೀರಿ. ಇದಕ್ಕೆ ನಾನು ಸದಾ ಚಿರಋಣಿ. ಆದರೆ ಈ ವರ್ಷ ನನಗೆ ಶುಭಕೋರಲು ನನ್ನ ನಿವಾಸಕ್ಕೆ ಬರುವುದು ಬೇಡ. ನೀವೆಲ್ಲಿದ್ದೀರೋ ಅಲ್ಲಿಂದಲೆ ನನಗೆ ಶುಭಕೋರಿ ಆಶೀರ್ವಾದಿಸಿ ಎಂದು ಗಣಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಆದರೆ ಈ ವರ್ಷ ಎಂದಿನಂತಿಲ್ಲ. ಕೊರೊನಾದಿಂದಾಗಿ ನಮ್ಮ ಬದುಕಿನ ಶೈಲಿಯೇ ಬದಲಾಗಿದೆ. ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ. ಬಡಜನರು ದೈನಂದಿನ ಬದುಕನ್ನು ಸಾಗಿಸುವುದಕ್ಕೆ ಕಷ್ಟ ಸಾಧ್ಯವಾಗಿದೆ. ನನ್ನ ನಾಡಿನ ಜನರು ಹೀಗೆ ಸಂಕಷ್ಟದಲ್ಲಿ ಇರುವಾಗ ವೈಭವದ ಹಟ್ಟುಹಬ್ಬ ಆಚರಣೆ ಯಾವುದೇ ಕಾರಣಕ್ಕೂ ಬೇಡವೆಂದು ನಿರ್ಧರಿಸಿದ್ದೇನೆ ಎಂದು ಗಣೇಶ್ ಅಭಿಪ್ರಾಯ ವ್ಯಕ್ತಿ ಪಡಿಸಿದ್ದಾರೆ.

    ಹೊರ ಜಿಲ್ಲೆಗಳಿಂದ ನನ್ನ ಅಭಿಮಾನಿಗಳು ಈ ಸಮಯದಲ್ಲಿ ಬೆಂಗಳೂರಿಗೆ ಬರುವುದು ಬೇಡ. ನೀವು ನನಗಾಗಿ ಖರ್ಚು ಮಾಡುವ ಹಣವನ್ನು ಅದೇ ದಿನ ಬಡಕುಟುಂಬಗಳಿಗೆ ಸಹಾಯಹಸ್ತ ನೀಡಿ ಅದೇ ಅರ್ಥಪೂರ್ಣ ಆಚರಣೆಯಾಗುತ್ತದೆ ಎಂದು ತನ್ನ ಅಭಿಮಾನಿಗಳಿಗೆ ಗಣೇಶ್ ಮನವಿ ಮಾಡಿದ್ದಾರೆ.

  • ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶ ಕೊಡಿ – ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ

    ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶ ಕೊಡಿ – ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ

    ಬೆಂಗಳೂರು: ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿರುವ ಹಿರಿಯ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಕ್ಕೆ ಅವಕಾಶ ಕೊಡಿಸಿ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.

    ಕಿರುತೆರೆಯ ಒಳಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಆದರೆ 60 ವರ್ಷ ಮೇಲ್ಪಟ್ಟ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳದಂತೆ ಷರತ್ತು ವಿಧಿಸಿದೆ. ಹೀಗಾಗಿ ಸೀರಿಯಲ್ ತಂಡ ಹಿರಿಯ ಕಲಾವಿದರನ್ನು ಬಿಟ್ಟು ಶೂಟಿಂಗ್ ಮಾಡುವುದರಲ್ಲಿ ನಿರತರಾಗಿದ್ದಾರೆ.

    ಹಿರಿಯ ಕಲಾವಿದರು ಶೂಟಿಂಗ್ ಇಲ್ಲದೇ, ಸಂಪಾದನೆಗೆ ಬೇರೆ ದಾರಿಯಿಲ್ಲದೇ ಜೀವನಮಾರ್ಗ ಕಂಡುಕೊಳ್ಳುವುದು ಕಷ್ಟವಾಗಿರುವುದರಿಂದ ಚಿತ್ರೀಕರಣದಲ್ಲಿ ತಾವುಗಳು ಪಾಲ್ಗೊಳ್ಳುವುದಕ್ಕೆ ಅನುಮತಿ ಕೊಡಿಸಬೇಕು. ಜೊತೆಗೆ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಹಿರಿಯ ಕಲಾವಿದರಿಗೆ ಪ್ರತಿ ತಿಂಗಳು ಮಾಸಾಶನ ದೊರೆಯುತ್ತಿದೆ. ಕರ್ನಾಟಕದಲ್ಲೂ ಹಿರಿಯ ಕಲಾವಿದರಿಗೆ ಹಾಗೂ ತಂತ್ರಜ್ಞಾನರಿಗೆ ಮಾಸಾಶನ ದೊರೆಯುವಂತಾಗಬೇಕು ಎಂದು ಕೇಳಿಕೊಂಡರು.

    ಈ ಸಂಬಂಧ ಸೂಕ್ತ ಕ್ರಮಕೈಗೊಳ್ಳಿ ಸರ್ಕಾರದ ಗಮನಕ್ಕೆ ತಂದು ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಹಿರಿಯ ಕಲಾವಿದರುಗಳಾದ ಲಕ್ಷ್ಮಿ ದೇವಮ್ಮ, ಡಿಂಗ್ರಿ ನಾಗಾರಾಜ್, ಬಿಎಲ್ ಮಂಜುಳಾ, ಗಣೇಶ್ ರಾವ್ ಸೇರಿದಂತೆ ಹಲವರು ಡಿಸಿಎಂ ಅಶ್ವತ್ಥ್ ನಾರಾಯಣ್‍ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

  • ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಿಸಿ – ದೆಹಲಿ ಬಳಿಕ ಐದು ರಾಜ್ಯಗಳಿಂದ ಕೇಂದ್ರಕ್ಕೆ ಮನವಿ

    ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಿಸಿ – ದೆಹಲಿ ಬಳಿಕ ಐದು ರಾಜ್ಯಗಳಿಂದ ಕೇಂದ್ರಕ್ಕೆ ಮನವಿ

    ನವದೆಹಲಿ: ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಣೆ ಮಾಡುವಂತೆ ದೆಹಲಿ ಬಳಿಕ ಐದು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ನಾಳೆ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸಭೆ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

    ಮೇ 3ರ ಬಳಿಕ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಗೊಂದಲದಲ್ಲಿರುವ ಕೇಂದ್ರ ಸರ್ಕಾರ ಈ ಬಗ್ಗೆ ಎಲ್ಲ ರಾಜ್ಯಗಳ ಸಿಎಂಗಳ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ನಾಳೆ ಬೆಳಗ್ಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಭೆ ನಡೆಯಲಿದೆ.

    ನಾಳಿನ ಸಭೆಗೂ ಮುನ್ನ ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್, ಒಡಿಶಾ, ಪಶ್ಚಿಮ ಬಂಗಾಳ ಲಾಕ್‍ಡೌನ್ ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿವೆ. ನಾಳಿನ ಸಭೆಯಲ್ಲೂ ಇದೇ ಅಂಶವನ್ನು ಒತ್ತಿ ಹೇಳುವ ಪ್ರಯತ್ನವಾಗಲಿದೆ. ಲಾಕ್‍ಡೌನ್ ಮುಂದುವರಿಸುವುದು ಸೂಕ್ತ ಹಂತ ಹಂತವಾಗಿ ವಿನಾಯಿತಿ ನೀಡಬೇಕು. ರಾಜ್ಯದ ಹಲವು ಪ್ರದೇಶದಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಲಾಕ್‍ಡೌನ್ ತೆರವು ಒಳಿತಲ್ಲ ಎಂದು ಆಯಾ ರಾಜ್ಯದ ಸಿಎಂಗಳು ಅಭಿಪ್ರಾಯಪಟ್ಟಿದ್ದಾರೆ.

    ಗುಜರಾತ್, ಆಂಧ್ರಪ್ರದೇಶ, ತಮಿಳುನಾಡು, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಇತರ ಆರು ರಾಜ್ಯಗಳು ಕೇಂದ್ರ ಸರ್ಕಾರದ ನಿರ್ದೇಶನವನ್ನು ಅನುಸರಿಸುವುದಾಗಿ ಹೇಳಿದ್ದು, ಅಸ್ಸಾಂ, ಕೇರಳ ಮತ್ತು ಬಿಹಾರ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ವಿಡಿಯೋ ಸಮಾವೇಶದ ನಂತರ ಮುಂದಿನ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ. ಈ ನಡುವೆ ತೆಲಂಗಾಣ ಮೇ 7ರವರೆಗೂ ಲಾಕ್‍ಡೌನ್ ವಿಸ್ತರಿಸಿದೆ.

    ಮಹಾರಾಷ್ಟ್ರ ಕೇಂದ್ರ ಸರ್ಕಾರ ನೀಡಿರುವ ವಿನಾಯಿತಿಗಳನ್ನು ರಾಜ್ಯದಲ್ಲಿ ನೀಡುವುದಿಲ್ಲ ಎಂದಿದ್ದು, ಉತ್ತರ ಪ್ರದೇಶ ಮತ್ತಷ್ಟು ದಿನ ಕಾದು ನೋಡುವ ಪ್ರಯತ್ನ ಮಾಡಿದೆ. ತುರ್ತು ಅವಶ್ಯಕ ಅಂಗಡಿಗಳು ಮತ್ತು 11 ಬಗೆಯ ಕೈಗಾರಿಗಳಿಗೆ ಮಾತ್ರ ಅವಕಾಶ ನೀಡಿದೆ. ಪಿಎಂ ಸಭೆಗೂ ಮುನ್ನ ಬಿಜೆಪಿ ಹೊರತಾದ ಪಶ್ಚಿಮ ಬಂಗಾಳ, ಪಂಜಾಬ್, ಮಹಾರಾಷ್ಟ್ರ ಮತ್ತು ಒಡಿಶಾ ಲಾಕ್‍ಡೌನ್ ವಿಸ್ತರಣೆಗೆ ಒಲವು ತೋರಿಸುವುದು ಮಹತ್ವ ಪಡೆದುಕೊಂಡಿದೆ.

  • ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ

    ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ

    ಬೆಂಗಳೂರು: ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿದ್ದರೆ.

    ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಲಾಕ್‍ಡೌನ್ ಅವದಿ ಮುಂದುವರೆಯುವುದಿಲ್ಲ. ಅದೂ ನಾವು ಅದನ್ನು ಹೇಗೆ ಕಟ್ಟುನಿಟ್ಟಿನ ಪಾಲನೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಾಡಿನ ಜನತೆ ಲಾಕ್‍ಡೌನ್ ಅನ್ನು ನಮ್ಮೆಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡಿ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕೊರೊನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದ ಒಂದು ವಿಪತ್ತು ಎಂದು ಸಿಎಂ ತಿಳಿಸಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 21 ದಿನಗಳ ಕಾಲ ಲಾಕ್‍ಡೌನ್ ವಿಧಿಸಿದ್ದಾರೆ. ಅನಿವಾರ್ಯ ಪರಿಸ್ಥಿತಿಯಿಂದಾಗಿ ಇಡೀ ದೇಶದ ಜನತೆಯಲ್ಲಿ ಕ್ಷಮೆಯನ್ನು ಪ್ರಧಾನಿಗಳು ಕೇಳಿದ್ದಾರೆ. ಒಬ್ಬ ಪ್ರಧಾನಮಂತ್ರಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆ ಇದೆಯೆಂದರೆ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ. ದೇಶಕ್ಕೆ ಯಾಕೆ ಜಗತ್ತಿನ ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಈಗ ಇಂತಹ ಪರಿಸ್ಥಿತಿ ಬಂದಿದೆ ಎಂದರೆ ಅದನ್ನು ನಾವು ಎದುರಿಸಲೇಬೇಕಾಗಿದೆ ಎಂದು ಹೇಳಿದ್ದಾರೆ.

    ನಾವು ಪ್ರಧಾನಿಗಳ ಕೆಲಸದ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆ ಪಡುವುದು ಮಾತ್ರವಲ್ಲದೇ ಅವರ ಆಜ್ಞೆಯನ್ನು ಪಾಲಿಸಬೇಕಿದೆ. ಜಾಗೃತ ನಾಗರಿಕರಾದ ನಾವೆಲ್ಲ ಪ್ರಧಾನಮಂತ್ರಿಯವರ ಈ ದಿಟ್ಟ ನಿಲುವನ್ನು ಮತ್ತು ನಿರ್ಧಾರವನ್ನು ಬೆಂಬಲಿಸಬೇಕಾಗಿದೆ. ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ ಕರ್ಫ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಈ ಸಮಯದಲ್ಲಿ ನನ್ನ ಕಳಕಳಿಯ ಮನವಿ ಏನೆಂದರೆ, ಎಲ್ಲರೂ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್‍ಡೌನ್ ಪಾಲಿಸಿ ಎಂದು ಸಿಎಂ ಕೇಳಿಕೊಂಡಿದ್ದಾರೆ.

    ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ. ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ. ಇದನ್ನು ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ. ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ. ಮನೆಯಲ್ಲೇ ಕುಳಿತು ಪುಸ್ತಕಗಳನ್ನು ಓದಿರಿ. ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ ಎಂದು ಸಿಎಂ ಜನರಿಗೆ ಸಲಹೆ ನೀಡಿದ್ದಾರೆ.

    ಈ ಸಂದರ್ಭದಲ್ಲಿ ಕೊರೊನಾ ವೈರಸ್ ಪೀಡಿತ ನೂರಾರು ಜನರ ಪ್ರಾಣ ಉಳಿಸಲು ಸತತವಾಗಿ ಕೆಲಸದಲ್ಲಿ ತೊಡಗಿರುವ ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿ ಮತ್ತು ನಾಗರಿಕ ಸೇವೆಯಲ್ಲಿ ತೊಡಗಿರುವ ಸಾವಿರಾರು ಕಾರ್ಯಕರ್ತರಿಗೆ ನಾವುಗಳು ನೈತಿಕ ಬೆಂಬಲ ವ್ಯಕ್ತಪಡಿಸೋಣ. ಅವರಿಗೆ ಮನೋಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಲಾಕ್‍ಡೌನ್ ಬೇಗ ಮುಗಿಯಲು ಕಟ್ಟುನಿಟ್ಟಿನ ಪಾಲನೆ ಅಗತ್ಯ. ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಸರ್ಕಾರ ಎಚ್ಚರವಹಿಸಿದೆ ಎಂದು ತಿಳಿಸಿದರು.

    ಯಾವುದೇ ಸುಳ್ಳು ಸುದ್ದಿಗಳಿಗೆ ಮತ್ತು ವದಂತಿಗಳಿಗೆ ಕಿವಿಗೊಡಬೇಡಿ. ನೀವು ಎಷ್ಟು ಕಟ್ಟುನಿಟ್ಟಿನಿಂದ ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ ಏಪ್ರಿಲ್-14 ಕ್ಕೆ ಲಾಕ್‍ಡೌನ್ ಮುಗಿಯುವುದು. ಲಾಕ್‍ಡೌನ್ ಪರಿಸ್ಥಿತಿ ನಿಮ್ಮ ಕಫ್ರ್ಯೂ ಪಾಲನೆ ಮೇಲೆ ಅವಲಂಬಿತವಾಗಿದೆ. ಇನ್ನೊಮ್ಮೆ ನಿಮ್ಮೆಲ್ಲರಲ್ಲಿ ಮನವಿ ಏನೆಂದರೆ ಕಟ್ಟುನಿಟ್ಟಾಗಿ ಕರ್ಫ್ಯೂ ಪಾಲಿಸಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ಅಟ್ಟಹಾಸ – ಧನಸಹಾಯಕ್ಕೆ ಸಿಎಂ ಮನವಿ

    ರಾಜ್ಯದಲ್ಲಿ ಕೊರೊನಾ ಅಟ್ಟಹಾಸ – ಧನಸಹಾಯಕ್ಕೆ ಸಿಎಂ ಮನವಿ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಧನಸಹಾಯ ಮಾಡುವಂತೆ ದಾನಿಗಳಿಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

    ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಸರ್ಕಾರದ ಜೊತೆ ಕೈಜೋಡಿಸಿ ಎಂದು ದಾನಿಗಳಿಗೆ ಸಿಎಂ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಪರಿಹಾರನಿಧಿ ಕೊವಿಡ್-19 ಹೆಸರಿನ ಖಾತೆಗೆ ಧನಸಹಾಯಕ್ಕೆ ಮನವಿ ಮಾಡಲಾಗಿದೆ. ಧನಸಹಾಯ ಮಾಡಲಿ ಇಚ್ಛಿಸುವವರು ಖಾತೆ ಸಂಖ್ಯೆ-39234923151 ಹಾಗೂ ಐಎಫ್‍ಎಸ್‍ಸಿ ಕೋಡ್ – ಎಸ್‍ಬಿಐಎನ್0040277 ಹಣ ಹಾಕಬಹುದು ಎಂದು ಕೇಳಿಕೊಳ್ಳಲಾಗಿದೆ.

    ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೇ ರಾಜ್ಯದಲ್ಲಿ ಜಾಸ್ತಿಯಾಗುತ್ತಿದೆ. ಇಂದು ಈ ವಿಚಾರವಾಗಿ ಮಾತನಾಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಇಂದು ಒಂದೇ ದಿನ ಹತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮಂಗಳವಾರ 41 ಇದ್ದ ಸಂಖ್ಯೆ ಇಂದು 51ಕ್ಕೆ ಏರಿಕೆಯಾಗಿದೆ. ಹಾಗಾಗಿ ಕೊರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗದುಕೊಳ್ಳುತ್ತಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದು ಕೇಳಿಕೊಂಡಿದ್ದರು.

  • ಕೊರೊನಾ ವೈರಸ್ ತಡೆಗೆ ವಿಶೇಷ ಮನವಿ ಮಾಡಿದ ವಿರುಷ್ಕಾ ಜೋಡಿ

    ಕೊರೊನಾ ವೈರಸ್ ತಡೆಗೆ ವಿಶೇಷ ಮನವಿ ಮಾಡಿದ ವಿರುಷ್ಕಾ ಜೋಡಿ

    ನವದೆಹಲಿ: ದೇಶದಲ್ಲೆಡೆ ಹಬ್ಬುತ್ತಿರುವ ಡೆಡ್ಲಿ ಕೊರೊನಾ ವೈರಸ್ ತಡೆಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಅವರು ವಿಡಿಯೋ ಮೂಲಕ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.

    ಕೊರೊನಾ ವೈರಸ್ ವಿಚಾರವಾಗಿ ವಿಶ್ವದ ಬಹುತೇಕ ಕ್ಷೇತ್ರಗಳು ಸ್ತಬ್ಧವಾಗಿವೆ. ಇಲ್ಲರೂ ಮನೆಯಿಂದ ಹೊರಗೆ ಬರುಲು ಭಯಪಡುತ್ತಿದ್ದಾರೆ. ಕೆಲ ಸೆಲೆಬ್ರಿಟಿಗಳು ಕೂಡ ಕೊರೊನಾ ವೈರಸ್ ತಡೆಯಲು ಹಲವಾರು ಟಿಪ್ಸ್ ಗಳು ಮತ್ತು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಈಗ ಈ ವಿಚಾರವಾಗಿ ಸ್ಟಾರ್ ಜೋಡಿ ವಿರಾಟ್ ಮತ್ತು ಅನುಷ್ಕಾ ವಿಡಿಯೋ ಮಾಡುವ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

    https://www.instagram.com/p/B98Skz4pt-s/?utm_source=ig_embed

    ಪತಿ ಪತ್ನಿ ಜೊತೆಲ್ಲೇ ಕುಳಿತು ವಿಡಿಯೋ ಮಾಡಿದ್ದು, ಈ ವಿಡಿಯೋವನ್ನು ಅನುಷ್ಕಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಂಡಿದ್ದಾರೆ. ಈಗ ನಾವೆಲ್ಲ ಬಹಳ ಕಠಿಣ ಪರಿಸ್ಥಿತಿಯಲ್ಲಿ ಇದ್ದೇವೆ. ನಾವೆಲ್ಲ ಸೇರಿ ಕೊರೊನಾ ವೈರಸ್ ಅನ್ನು ತಡೆಹಿಡಿಯಬೇಕಿದೆ. ನಾವು ನಮ್ಮ ಸುರಕ್ಷತೆಗಾಗಿ ಮನೆಯಲ್ಲೇ ಇದ್ದೇವೆ. ಹಾಗೇ ನೀವು ಕೂಡ ನಿಮ್ಮ ಸುರಕ್ಷತೆಗೆ ಮನೆಯಲ್ಲೇ ಇರಿ. ನಾವೆಲ್ಲರೂ ಸೇರಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಬೇಕು. ನಾವಾಗಿಯೇ ಐಸೋಲೇಷನ್‍ನಲ್ಲಿ ಇರೋಣ ಎಂದು ವಿರುಷ್ಕಾ ಜೋಡಿ ಮನವಿ ಮಾಡಿಕೊಂಡಿದೆ.

    ಕೊರೊನಾ ವೈರಸ್ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡಿರುವ ಕೊಹ್ಲಿ ಅವರು, ಗಮನವಿರಲಿ ಕೊರೊನಾ ವೈರಸ್ ಅನ್ನು ಎದುರಿಸಲು ಜಾಗರೂಕರಾಗಿರಿ. ಜವಾಬ್ದಾರಿಯುತ ನಾಗರಿಕರಾದ ನಾವು ನಮ್ಮ ಸುರಕ್ಷತೆಗಾಗಿ ಗೌರವಾನ್ವಿತ ಪ್ರಧಾನಿ ಮೋದಿ ಅವರು ಘೋಷಿಸಿದಂತೆ ಜಾರಿಗೆ ತಂದಿರುವ ನಿಯಮಗಳಿಗೆ ಬದ್ಧರಾಗಿರಬೇಕು. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೊರೊನಾ ವಿರುದ್ಧ ಹೊರಾಡೋಣ ಎಂದಿದ್ದಾರೆ.

    ಅಲ್ಲದೆ ಕೊರೋನಾ ವೈರಸ್ ವಿರುದ್ಧ ಹೋರಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿರುವ ದೇಶದ ಮತ್ತು ಜಗತ್ತಿನ ಎಲ್ಲ ವೈದ್ಯಕೀಯ ವೃತ್ತಿಪರರಿಗೆ ವಿಶೇಷ ನಮನಗಳು. ಉತ್ತಮ ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಮೂಲಕ ನಾವು ಮತ್ತು ನಮ್ಮ ಸುತ್ತಲಿರುವ ಪ್ರತಿಯೊಬ್ಬರನ್ನು ವೈದ್ಯರಿಗೆ ಬೆಂಬಲ ನೀಡೋಣ ಎಂದು ವೈದ್ಯರ ಬಗ್ಗೆಯೂ ಕೂಡ ವಿರಾಟ್ ಅವರು ಟ್ವೀಟ್ ಮಾಡಿದ್ದಾರೆ.

    ಕೊರೊನಾ ವೈರಸ್ ಮಹಾಮಾರಿಯಿಂದ ಕ್ರೀಡಾ ಜಗತ್ತು ಕೂಡ ತತ್ತರಿಸಿ ಹೋಗಿದೆ. ಕೊರೊನಾ ವೈರಸ್ ಭೀತಿಯಿಂದ ಭಾರತ ಮತ್ತು ದಕ್ಷಿಣ ಅಫ್ರಿಕಾ ವಿರುದ್ಧದ ಏಕದಿನ ಸರಣಿ ರದ್ದಾಗಿದೆ. ಪ್ರವಾಸಕ್ಕಾಗಿ ಭಾರತಕ್ಕ ಬಂದ ಸೌತ್ ಅಫ್ರಿಕಾ ಆಟಗಾರರು ಒಂದು ಪಂದ್ಯವನ್ನು ಆಡದೇ ತಮ್ಮ ದೇಶಕ್ಕೆ ವಪಾಸ್ ಮರಳಿದ್ದಾರೆ. ಇದೇ ತಿಂಗಳ ಕೊನೆಯಲ್ಲಿ ನಡೆಯಬೇಕಿದ್ದ ಐಪಿಎಲ್ ಕೂಡ ಮುಂದಕ್ಕೆ ಹೋಗಿದೆ.

  • ಬಹುಮತ ಸಾಬೀತಿಗೆ ಕಮಲನಾಥ್ ಸರ್ಕಾರಕ್ಕೆ ಸುಪ್ರೀಂ ಡೆಡ್‍ಲೈನ್

    ಬಹುಮತ ಸಾಬೀತಿಗೆ ಕಮಲನಾಥ್ ಸರ್ಕಾರಕ್ಕೆ ಸುಪ್ರೀಂ ಡೆಡ್‍ಲೈನ್

    ನವದೆಹಲಿ: ರಾಜಕೀಯ ಅಸ್ಥಿರತೆಗೆ ವಿಶ್ವಾಸ ಮತಯಾಚನೆಯೊಂದೇ ಮಾರ್ಗ ಈ ಹಿನ್ನಲೆ ನಾಳೆ ಸಂಜೆ ಐದು ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್ ನೇತೃತ್ವದ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

    ಬಿಜೆಪಿ ಮುಖಂಡ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿಸದಸ್ಯ ಪೀಠ ಈ ಮಹತ್ವ ಆದೇಶ ನೀಡಿದೆ.

    ಎರಡು ದಿನಗಳಿಂದ ವಿಚಾರ ನಡೆಸುತ್ತಿದ್ದ ಪೀಠ ಇಂದು ಬಹುಮತ ಸಾಬೀತಿಗೆ ಸೂಚನೆ ನೀಡಿತ್ತು. ಕೈ ಎತ್ತುವ ಮೂಲಕ ವಿಶ್ವಾಸಮತಯಾಚನೆ ಮಾಡಬೇಕು ಈ ಎಲ್ಲ ಪ್ರಕ್ರಿಯೆಗಳನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಬಂಡಾಯ ಶಾಸಕರು ವಿಧಾನಸಭೆ ಆಗಮಿಸುವುದಾದರೆ ಕರ್ನಾಟಕ ಮತ್ತು ಮಧ್ಯಪ್ರದೇಶ ಪೊಲೀಸ್ ಇಲಾಖೆ ಭದ್ರತೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರ 22 ಬೆಂಬಲಿಗ ಶಾಸಕರು ಮುಖ್ಯಮಂತ್ರಿ ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡೆದ್ದಿದ್ದಾರೆ. ಈಗಾಗಲೇ 6 ಮಂದಿ ಶಾಸಕರ ರಾಜೀನಾಮೆ ಅಂಗೀಕಾರವಾಗಿದೆ. ಬಾಕಿ ಶಾಸಕರು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದಾರೆ.

    ಬಹುಮತ ಕಳೆದುಕೊಂಡಿರುವ ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತುಪಡಿಸಲು ಬಿಜೆಪಿ ನಾಯಕರು ಒತ್ತಾಯಿಸಿದ್ದರು. ಕಮಲ್‍ನಾಥ್ ಅವರು ಬಹುಮತ ಸಾಬೀತು ಮಾಡಬೇಕು ಎಂದು ರಾಜ್ಯಪಾಲರೂ ಸೂಚಿಸಿದ್ದರು. ವಿರೋಧ ಪಕ್ಷದ ಒತ್ತಾಯ ಮತ್ತು ರಾಜ್ಯಪಾಲರ ಆದೇಶಗಳ ಹೊರತಾಗಿಯೂ ಸ್ಪೀಕರ್ ವಿಧಾನಸಭೆಯನ್ನು ಮುಂದೂಡಿದ್ದರು. ಇದನ್ನು ಪ್ರಶ್ನಿಸಿ ಶಿವರಾಜ್ ಚೌಹಾನ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

  • ಪವಿತ್ರ ಗಂಗೆಯಲ್ಲಿ ಮಿಂದೆದ್ದ ರೋಡ್ಸ್‌ಗೆ ಹರ್ಭಜನ್ ವಿಶೇಷ ಮನವಿ

    ಪವಿತ್ರ ಗಂಗೆಯಲ್ಲಿ ಮಿಂದೆದ್ದ ರೋಡ್ಸ್‌ಗೆ ಹರ್ಭಜನ್ ವಿಶೇಷ ಮನವಿ

    – ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನ ತಿಳಿಸಿದ ಜಾಂಟಿ

    ನವದೆಹಲಿ: ಗಂಗಾ ನದಿಯಲ್ಲಿ ಮಿಂದೆದ್ದ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್‌ಗೆ ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ವಿಶೇಷ ಮನವಿಯನ್ನು ಸಲ್ಲಿಸಿದ್ದಾರೆ.

    ಸಧ್ಯ ಭಾರತದಲ್ಲಿರುವ ಜಾಂಟಿ ರೋಡ್ಸ್ ಅವರು, ಬುಧವಾರ ಋಷಿಕೇಶಕ್ಕೆ ಹೋಗಿ ಅಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮುಳಗಿರುವ ಫೋಟೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿರುವ ಜಾಂಟಿ, ಪವಿತ್ರ ಗಂಗೆಯ ತಣ್ಣೀರಿನಲ್ಲಿ ಮುಳುಗುವುದರಿಂದ ದೈಹಿಕ ಮತ್ತು ಆಧ್ಯಾತ್ಮಿಕ ಮೋಕ್ಷ ಸಿಗುತ್ತದೆ ಎಂದು ಬರೆದುಕೊಂಡಿದ್ದರು.

    ಈ ಟ್ವೀಟ್‍ಗೆ ರೀಟ್ವೀಟ್ ಮಾಡಿರುವ ಹರ್ಭಜನ್ ಅವರು, ನೀವು ನನಗಿಂತ ಹೆಚ್ಚು ಭಾರತೀಯರನ್ನು ನೋಡಿದ್ದೀರಾ. ನೀವು ಪವಿತ್ರವಾದ ಗಂಗೆಯಲ್ಲಿ ಮುಳುಗಿ ಆನಂದಿಸುತ್ತಿರುವುದನ್ನು ನೋಡಲು ಬಹಳ ಸಂತೋಷವಾಗುತ್ತದೆ. ಮುಂದಿನ ಬಾರಿ ನೀವು ಅಲ್ಲಿಗೆ ಹೋಗುವಾಗ ನನ್ನನ್ನು ಕರೆದುಕೊಂಡು ಹೋಗಿ ಎಂದು ಹರ್ಭಜನ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ರೋಡ್ಸ್‌ಗೆ ಮನವಿ ಸಲ್ಲಿಸಿದ್ದಾರೆ.

    ಈ ತಿಂಗಳ ಕೊನೆಯಲ್ಲಿ ಆರಂಭವಾಗುವ ಐಪಿಎಲ್ 2020ಯಲ್ಲಿ ಭಾಗವಹಿಸಲು ಜಾಂಟಿ ರೋಡ್ಸ್ ಇಂಡಿಯಾಗೆ ಬಂದಿದ್ದಾರೆ. ಈ ಆವೃತ್ತಿಯಲ್ಲಿ ಅವರು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಜಾಂಟಿ ಅವರು 2009 ರಿಂದ 2017ರ ವರೆಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವವಹಿಸಿದ್ದರು. ಈ ತಂಡ ಇವರ ಅವದಿಯಲ್ಲಿ ಮೂರು ಬಾರಿ ಕಪ್ ಗೆದ್ದಿತ್ತು.

    2019 ರ ಡಿಸೆಂಬರ್ ನಲ್ಲಿ ಪಂಜಾಬ್ ತಂಡದ ಫೀಲ್ಡಿಂಗ್ ಕೋಚ್ ಆಗಿ ಆಯ್ಕೆಯಾದ ರೋಡ್ಸ್, ಮುಂಬರುವ ಐಪಿಎಲ್ 2020ರಲ್ಲಿ ಅನಿಲ್ ಕುಂಬ್ಳೆ, ವೆಸ್ಟ್ ಇಂಡೀಸ್‍ನ ಕರ್ಟ್ನಿ ವಾಲ್ಷ್, ಭಾರತದ ಮಾಜಿ ಸ್ಪಿನ್ನರ್ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸುನಿಲ್ ಜೋಶಿ ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ಜಾರ್ಜ್ ಬೈಲಿಯವರನ್ನು ಸೇರಿಕೊಳ್ಳಲಿದ್ದಾರೆ.

    ಭಾರತದ ಮೇಲೆ ವಿಶೇಷ ಪ್ರೀತಿ ಇಟ್ಟಿಕೊಂಡಿರುವ ಜಾಂಟಿ ರೋಡ್ಸ್, 2016ರಲ್ಲಿ ಜನಿಸಿದ ಅವರ ಮಗಳಿಗೆ ಇಂಡಿಯಾ ಎಂದು ನಾಮಕಾರಣ ಮಾಡಿದ್ದರು. ಜೊತೆಗೆ ನಾನು ಬಹುಕಾಲ ಇಂಡಿಯಾದಲ್ಲೇ ಸಮಯ ಕಳೆದಿದ್ದಾನೆ. ಇಲ್ಲಿನ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ನನಗೆ ಬಹಳ ಇಷ್ಟ. ಇಂಡಿಯಾ ಒಂದು ಆಧ್ಯಾತ್ಮಿಕ ದೇಶ, ಬಹಳ ಮುಂದಾಲೋಚನೆಯ ರಾಷ್ಟ್ರ ಎಂದು ಹೇಳಿದ್ದರು.

  • ಮಂತ್ರಾಲಯ ಕರ್ನಾಟಕಕ್ಕೆ ಸೇರಿಸಲು ಸಿಎಂ ಬಿಎಸ್‍ವೈಗೆ ಮನವಿ: ಪಿ.ತಿಕ್ಕಾರೆಡ್ಡಿ

    ಮಂತ್ರಾಲಯ ಕರ್ನಾಟಕಕ್ಕೆ ಸೇರಿಸಲು ಸಿಎಂ ಬಿಎಸ್‍ವೈಗೆ ಮನವಿ: ಪಿ.ತಿಕ್ಕಾರೆಡ್ಡಿ

    ರಾಯಚೂರು: ಮಂತ್ರಾಲಯ ಸೇರಿದಂತೆ ಆಂಧ್ರ ಪ್ರದೇಶದಲ್ಲಿ ಕನ್ನಡ ಮಾತನಾಡುವ ಜನರಿರುವ ಕ್ಷೇತ್ರಗಳನ್ನು ಕರ್ನಾಟಕಕ್ಕೆ ಸೇರಿಸಲು ಪಕ್ಷಾತೀತವಾಗಿ ಸಿಎಂ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನ ಶೀಘ್ರದಲ್ಲೇ ಭೇಟಿ ಮಾಡಿ ಮನವಿ ಮಾಡುವುದಾಗಿ ತೆಲುಗು ದೇಶಂ ಪಕ್ಷದ ಮುಖಂಡ ಪಿ.ತಿಕ್ಕಾರೆಡ್ಡಿ ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ತಿಕ್ಕಾರೆಡ್ಡಿ, ಮಂತ್ರಾಲಯ, ಆದೋನಿ, ಎಮ್ಮಿಗನೂರು, ಪತ್ತಿಕೊಂಡ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರ್ನೂಲ್ ಲೋಕಸಭಾ ಕ್ಷೇತ್ರದಲ್ಲಿ ಕನ್ನಡ ಮಾತನಾಡುವವರೇ ಇದ್ದೇವೆ. ನಮ್ಮ ಮಾತೃ ಭಾಷೆ ಕನ್ನಡ, ನಮ್ಮ ಸಂಸ್ಕೃತಿ ಕನ್ನಡ ಇದೆ. ನಾವು ಹಳೆ ಬಳ್ಳಾರಿ ಜಿಲ್ಲೆಯವರು ಈಗಲೂ ನಮ್ಮನ್ನ ಬಳ್ಳಾರಿ ಜಿಲ್ಲೆಗೆ ಸೇರಿಸಿ ಎಂದರು. ನಮಗೆ ಬೆಂಗಳೂರೇ ರಾಜಧಾನಿಯಾಗಿರಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿಶಾಖಪಟ್ಟಣಂನ್ನ ಆಡಳಿತಾತ್ಮಕ ರಾಜಧಾನಿಯಾಗಿ ಮಾಡಿರುವುದರಿಂದ ನಮಗೆ ಬಹಳ ದೂರವಾಗುತ್ತದೆ. ಸುಮಾರು 800 ಕಿ.ಮೀ ದೂರ ಇರುವುದರಿಂದ ನಾವು ಅಲ್ಲಿಗೆ ಹೋಗಲು 20 ಗಂಟೆ ಸಮಯ ಬೇಕು ಎಂದು ಹೇಳಿದರು.

    ಒಬ್ಬೊಬ್ಬ ಸಿಎಂ ಬಂದಾಗಲೂ ಒಂದೊಂದು ರಾಜಧಾನಿ ಮಾಡಿದರೆ ನಮಗೆ ಕಷ್ಟವಾಗುತ್ತೆ. ಹಾಗಾಗಿ ಕನ್ನಡ ಭಾಷೆ ಮಾತನಾಡುವ ನಮ್ಮನ್ನ ಕರ್ನಾಟಕಕ್ಕೆ ಸೇರಿಸಿ. ಮೊದಲು ನಮಗೆ ಕರ್ನೂಲ್ ರಾಜಧಾನಿ ಮಾಡಿದ್ದರು, ಆಮೇಲೆ ಹೈದರಾಬಾದ್ ಆಯ್ತು, ಬಳಿಕ ಅಮರಾವತಿ ಆಯ್ತು ಈಗ ಮೂರು ರಾಜಧಾನಿ ಮಾಡಿ ವಿಶಾಖಪಟ್ಟಣಂನಲ್ಲಿ ಆಡಳಿತ ನಡೆಸುತ್ತಾರೆ. ಮುಂದೆ ಬೇರೆ ಸಿಎಂ ಬಂದಾಗ ಪುನಃ ಬೇರೆ ರಾಜಧಾನಿ ಮಾಡುತ್ತಾರೆ. ಹೀಗಾಗಿ ನಮಗೆ ಆಂಧ್ರ ಪ್ರದೇಶದ ಸಹವಾಸವೇ ಬೇಡ ನಾವು ಕನ್ನಡದವರು ಕರ್ನಾಟಕಕ್ಕೆ ಸೇರಿಸಿ ಎಂದು ತಿಕ್ಕಾರೆಡ್ಡಿ ಎರಡು ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ.