Tag: Apple Box

  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಮೊನ್ನೆ ಮೊನ್ನೆಯಷ್ಟೇ ತಮ್ಮ ನಿರ್ಮಾಣದ ಸಿನಿಮಾ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು ರಮ್ಯಾ. ಈ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆಯನ್ನೂ ಉಂಟು ಮಾಡಿದ್ದರು. ಈ ಆಸೆ, ನಿರಾಸೆಗಳು ಇನ್ನೂ ಮರೆಯಾಗಿಲ್ಲ, ಅಷ್ಟರಲ್ಲಿ ಸಿನಿಮಾದ ಶೂಟಿಂಗ್ ಅನ್ನೇ ಮುಗಿಸಿದ್ದಾರೆ. ಇಷ್ಟು ಬೇಗ ಚಿತ್ರೀಕರಣ ಮುಗಿಸುವ ಮೂಲಕ ಅಚ್ಚರಿಯನ್ನೂ ಉಂಟು ಮಾಡಿದ್ದಾರೆ.

    ರಮ್ಯಾ  (Ramya) ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಶೂಟಿಂಗ್‌ ಮುಕ್ತಾಯಗೊಳಿಸಿದೆ. ಇಂದು ಈ ಚಿತ್ರಕ್ಕೆ ಕುಂಬಳಕಾಯಿ ಪೂಜೆ ನೆರವೇರಲಿದೆ. ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಾಜ್‌ ಬಿ ಶೆಟ್ಟಿ  (Raj B Shetty) ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್‌ (Siri Ravikumar) ಮತ್ತು ರಾಜ್‌ ಶೆಟ್ಟಿ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ರಮ್ಯಾ ಅವರೇ ನಟಿಸಬೇಕಿತ್ತು. ಹಾಗಂತ  ಅನೌನ್ಸ್ ಕೂಡ ಆಗಿತ್ತು. ಆದರೆ, ತಾವು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ, ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತೇನೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು ರಮ್ಯಾ. ಈ ವಿಷಯ ತಿಳಿಸಿದ ಕೆಲವೇ ದಿನಗಳ ನಂತರ ಮತ್ತೊಂದು ಸಿಹಿ ಸುದ್ದಿಯನ್ನೂ ನೀಡಿ, ತಾವು ಡಾಲಿ ಧನಂಜಯ್ ಜೊತೆ ಉತ್ತರಕಾಂಡ ಚಿತ್ರದಲ್ಲಿ ನಟಿಸುತ್ತಿರುವುದಾಗಿಯೂ ತಿಳಿಸಿದ್ದರು. ಇದೀಗ ರಮ್ಯಾ ಬ್ಯಾನರ್ ನ ಮೊದಲ ಸಿನಿಮಾ ಕಂಪ್ಲೀಟ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ರಮ್ಯಾ ನಿರ್ಮಾಣದ ಸಿನಿಮಾದಿಂದ ರಮ್ಯಾನೇ ಔಟ್ : ಕೈ ಜಾರಿತಾ ಸ್ವಾತಿ ಮುತ್ತು?

    ರಮ್ಯಾ ನಿರ್ಮಾಣದ ಸಿನಿಮಾದಿಂದ ರಮ್ಯಾನೇ ಔಟ್ : ಕೈ ಜಾರಿತಾ ಸ್ವಾತಿ ಮುತ್ತು?

    ಮೋಹಕ ತಾರೆ ರಮ್ಯಾ (Ramya) ಮತ್ತೆ ಸಿನಿಮಾ ರಂಗಕ್ಕೆ ಬರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿತ್ತು. ಹಲವು ವರ್ಷಗಳ ನಂತರ ಮತ್ತೆ ರಮ್ಯಾ ಸ್ಯಾಂಡಲ್ ವುಡ್ ಗೆ ಬಂದರಲ್ಲ ಅಂತ ಸಂಭ್ರಮಿಸುವ ಹೊತ್ತಿನಲ್ಲೇ, ಏನೋ ಯಡವಟ್ಟಾದ ವಿಚಾರವೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅವರೇ ನಿರ್ಮಾಣ ಮಾಡುತ್ತಿದ್ದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ರಮ್ಯಾ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ಆ್ಯಪಲ್ ಬಾಕ್ಸ್ ತಿಳಿಸಿದಂತೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swati Muttina Malehaniye) ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿ, ಅವರೇ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ನಾಯಕಿಯ ಸ್ಥಾನವನ್ನು ಬೇರೊಬ್ಬರು ತುಂಬಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು

    ಆ್ಯಪಲ್ ಬಾಕ್ಸ್ (apple box) ಅಧಿಕೃತ ಪೇಜಿನಲ್ಲಿ ಹಾಕಿರುವಂತೆ, ‘ಸಿರಿ ರವಿಕುಮಾರ್ (Siri Ravikumar) ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಯ ಮೇಲೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆಯಲಾಗಿದೆ. ಅಲ್ಲಿಗೆ ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಉಳಿಯಲಿದ್ದಾರಾ ಅಥವಾ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇದ್ದಾರಾ ಎನ್ನುವುದು ಸದ್ಯಕ್ಕಿರುವ ಕುತೂಹಲ.

    ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜ್ ಬಿ ಶೆಟ್ಟಿ (Raj B. Shetty) ಈ ಚಿತ್ರದ ನಿರ್ದೇಶಕರು. ಅವರು ಕೂಡ ಪ್ರಧಾನ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಅಲ್ಲದೇ, ನಿರ್ಮಾಣದಲ್ಲೂ ಹೂಡಿಕೆ ಮಾಡಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತಾರಾ? ಅಥವಾ ನಟಿಯಾಗಿಯೂ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಅಕ್ಟೋಬರ್ 5ಕ್ಕೆ ಗುಡ್ ನ್ಯೂಸ್ ಕೊಡಲಿದ್ದಾರೆ ನಟಿ ರಮ್ಯಾ

    ಅಕ್ಟೋಬರ್ 5ಕ್ಕೆ ಗುಡ್ ನ್ಯೂಸ್ ಕೊಡಲಿದ್ದಾರೆ ನಟಿ ರಮ್ಯಾ

    ನ್ನಡ ಸಿನಿಮಾ (Sandalwood) ರಂಗಕ್ಕೆ ನಿರ್ಮಾಪಕಿಯಾಗಿ ಮತ್ತೆ ಕಮ್ ಬ್ಯಾಕ್ ಮಾಡಿರುವ ನಟಿ ರಮ್ಯಾ (Ramya) , ಮೊನ್ನೆಯಷ್ಟೇ ತಮ್ಮ ಸಂಸ್ಥೆಯ ಹೆಸರನ್ನು ಅನೌನ್ಸ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ತಮ್ಮ ಆ್ಯಪಲ್ ಬಾಕ್ಸ್ (Apple Box) ಸಿನಿಮಾ ಸಂಸ್ಥೆಯಿಂದ ಹಲವಾರು ಚಿತ್ರಗಳನ್ನು ಮತ್ತೆ ವೆಬ್ ಸೀರಿಸ್ ಮಾಡುವುದಾಗಿಯೂ ಘೋಷಣೆ ಮಾಡಿದ್ದರು. ಸದ್ಯದಲ್ಲೇ ಪ್ರಥಮ ಸಿನಿಮಾ ಘೋಷಣೆಯ ವಿಚಾರವನ್ನೂ ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಗುಡ್ ನ್ಯೂಸ್ ಕೊಡಲು ಅವರು ಮುಂದಾಗಿದ್ದಾರೆ.

    ಕಾಂತಾರ ಸಿನಿಮಾ ನೋಡಲು ಬಂದಿದ್ದ ರಮ್ಯಾ, ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಸರಾ ಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡುವುದಾಗಿ ತಿಳಿಸಿದರು. ಅಕ್ಟೋಬರ್ 5 ರಂದು ಆ ಸುದ್ದಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ಬಹುಶಃ ಅವರ ಸಂಸ್ಥೆಯ ಚೊಚ್ಚಲು ಸಿನಿಮಾದ ಬಗ್ಗೆ ಮಾಹಿತಿ ನೀಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ

    RAMYA

    ರಮ್ಯಾ ಅವರ ನಿರ್ಮಾಣ ಸಂಸ್ಥೆಯಿಂದ ಪ್ರಥಮ ಚಿತ್ರವಾಗಿ ರಾಜ್ ಬಿ ಶೆಟ್ಟಿ (Raj B Shetty) ನಿರ್ದೇಶನದ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ ಬಿ ಶೆಟ್ಟಿ ಮತ್ತು ರಮ್ಯಾ ಅವರು ಒಂದು ಸುತ್ತಿನ ಮಾತುಕತೆ ಕೂಡ  ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಥಮ ಚಿತ್ರವಾಗಿ ಅದೇ ನಿರ್ಮಾಣಗೊಳ್ಳಬಹುದಂತೆ. ಬಹುಶಃ ಇದೇ ಸಿನಿಮಾ ಸಮಾಚಾರವನ್ನು ಅವರು ಅಕ್ಟೋಬರ್ 5 (October 5) ರಂದು ತಿಳಿಸಲಿದ್ದಾರಾ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ರಮ್ಯಾ ಬ್ಯಾನರ್ ನಿಂದ ಮೊದಲ ಅವಕಾಶಗಿಟ್ಟಿಸಿಕೊಂಡ ನಿರ್ದೇಶಕ ಯಾರು? ಕರಾವಳಿ ಹುಡುಗನಿಗೆ ಒಲಿದ ಅವಕಾಶ

    ರಮ್ಯಾ ಬ್ಯಾನರ್ ನಿಂದ ಮೊದಲ ಅವಕಾಶಗಿಟ್ಟಿಸಿಕೊಂಡ ನಿರ್ದೇಶಕ ಯಾರು? ಕರಾವಳಿ ಹುಡುಗನಿಗೆ ಒಲಿದ ಅವಕಾಶ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮೊನ್ನೆಯಷ್ಟೇ ತಮ್ಮ ಹೊಸ ಬ್ಯಾನರ್ ಘೋಷಣೆ ಮಾಡಿದ್ದಾರೆ. ಅದಕ್ಕೆ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ಅಂತ ಹೆಸರು ಇಟ್ಟಿದ್ದಾರೆ. ಪ್ರೊಡಕ್ಷನ್ ಹೆಸರು ಘೋಷಣೆ ಮಾಡುವ ದಿನವೇ ಎರಡು ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ವಿಷಯವನ್ನೂ ಬಹಿರಂಗ ಪಡಿಸಿದ್ದರು. ಆ ಎರಡು ಸಿನಿಮಾಗಳನ್ನು ಯಾರೆಲ್ಲ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು. ಮೂಲಗಳ ಪ್ರಕಾರ ಕರಾವಳಿ ಹುಡುಗ ರಾಜ್ ಬಿ ಶೆಟ್ಟಿ ಮೊದಲ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.

    ರಮ್ಯಾ ಅವರಿಗೆ ಸಿನಿಮಾ ಮಾಡುತ್ತಿಲ್ಲ ಎಂದು ರಾಜ್ ಬಿ ಶೆಟ್ಟಿ ಹೇಳುತ್ತಿದ್ದರೂ, ಆ್ಯಪಲ್ ಬಾಕ್ಸ್ ನಿರ್ಮಾಣ ಸಂಸ್ಥೆಯಿಂದ ರಾಜ್ ಬಿ ಶೆಟ್ಟಿ ಅವರೇ ಮೊದಲ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಆದರೆ, ಈ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿಲ್ಲ. ಹಾಗಾಗಿ ರಮ್ಯಾಗೆ ಸಿನಿಮಾ ಮಾಡುತ್ತಿಲ್ಲವೆಂದು ಮಾತು ಬದಲಿಸುತ್ತಿದ್ದಾರಂತೆ ರಾಜ್ ಬಿ. ಶೆಟ್ಟಿ. ಆದರೆ, ಇವರೇ ಮೊದಲ ಸಿನಿಮಾ ನಿರ್ದೇಶನ ಮಾಡುವುದು ಪಕ್ಕಾ ಎನ್ನುತ್ತಿವೆ ಬಲ್ಲ ಮೂಲಗಳು. ಇದನ್ನೂ ಓದಿ: ಹಳೆ ಗರ್ಲ್ ಫ್ರೆಂಡ್‍ಗಾಗಿ ಹಂಬಲಿಸುತ್ತಿರುವ ಜಶ್ವಂತ್..!

    ಈಗಾಗಲೇ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಎರಡು ಹಂತದಲ್ಲಿ ಮಾತುಕತೆ ಕೂಡ ಮಾಡಿದ್ದಾರೆ. ಸ್ವತಃ ರಮ್ಯಾ ಮನೆಗೆ ಹೋಗಿ ಶೆಟ್ಟಿ ಅವರು ಕಥೆ ಕೂಡ ಹೇಳಿ ಬಂದಿದ್ದಾರೆ. ಮುಂದಿನ ಹಂತದ ಕೆಲಸಗಳಲ್ಲೂ ಅವರು ತೊಡಗಿದ್ದಾರೆ. ರಮ್ಯಾ ಅವರೇ ಈ ವಿಷಯವನ್ನು ಬಹಿರಂಗ ಪಡಿಸಲಿ ಎಂದು ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ರಮ್ಯಾ ಅವರ ಮೊದಲ ನಿರ್ಮಾಣದ ಸಿನಿಮಾ ರಾಜ್ ಬಿ ಶೆಟ್ಟಿ ಅವರದ್ದೇ ಆಗಿರಲಿದೆ.

    Live Tv
    [brid partner=56869869 player=32851 video=960834 autoplay=true]