Tag: Appoint

  • ಬಳ್ಳಾರಿ ಡಿಸಿಯಾಗಿ ನಕುಲ್ ಅಧಿಕಾರ ಸ್ವೀಕಾರ

    ಬಳ್ಳಾರಿ ಡಿಸಿಯಾಗಿ ನಕುಲ್ ಅಧಿಕಾರ ಸ್ವೀಕಾರ

    ಬಳ್ಳಾರಿ: ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಎಸ್.ಎಸ್ ನಕುಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಗಳಾದ ಜಿಪಂ ಸಿಇಒ ಕೆ. ನಿತೀಶ್ ಅವರು ಅಧಿಕಾರ ಹಸ್ತಾಂತರಿಸಿದರು.

    ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ.ವಿ ರಾಮ್ ಪ್ರಸಾತ್ ಮನೋಹರ್ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಅವರ ಜಾಗಕ್ಕೆ ಎಸ್.ಎಸ್ ನಕುಲ್ ಅವರನ್ನು ನೇಮಿಸಿತ್ತು.

    ಈ ಮೊದಲು ನಕುಲ್ ಅವರು ಬಳ್ಳಾರಿ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಡಾ.ವಿ ರಾಮ್ ಪ್ರಸಾತ್ ಮನೋಹರ್ ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

    ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭಾಶಯ ಕೋರಿದರು. ನಂತರ ಅವರು ಅಧಿಕಾರಿಗಳ ಸಭೆ ನಡೆಸಿ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸಿದ್ದರಾಮಯ್ಯ, ಕೆಂಪಯ್ಯ ಆಪ್ತ ಅಧಿಕಾರಿ ಎತ್ತಂಗಡಿ

    ಸಿದ್ದರಾಮಯ್ಯ, ಕೆಂಪಯ್ಯ ಆಪ್ತ ಅಧಿಕಾರಿ ಎತ್ತಂಗಡಿ

    ಬೆಂಗಳೂರು: ಮುಖ್ಯಮಂತ್ರಿ ಭದ್ರತಾ ಅಧಿಕಾರಿ ಎಸ್.ಪಿ ಆಗಿ ಎಂ.ಯೋಗೇಶ್ ನೇಮಕವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಅಧಿಕಾರಿಯನ್ನು ಎಚ್.ಡಿ.ಕುಮಾರಸ್ವಾಮಿ ವರ್ಗಾವಣೆ ಮಾಡಿದ್ದಾರೆ.

    ಸ್ಥಳ ನಿಗದಿ ಮಾಡದೇ ಸಿದ್ದರಾಮಯ್ಯನವರಿಗೆ ಭದ್ರತಾ ಅಧಿಕಾರಿಯಾಗಿದ್ದ ರಾಮಕೃಷ್ಣ ಪ್ರಸಾದ್ ಅವರನ್ನು ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಮಾಜಿ ಸಿಎಂ ಆಪ್ತ ಅಧಿಕಾರಿಯನ್ನು ಎಚ್.ಡಿ.ಕುಮಾರಸ್ವಾಮಿ ದೂರ ಇಟ್ಟಿದ್ದಾರೆ.

    ರಾಮಕೃಷ್ಣ ಪ್ರಸಾದ್ ಅವರು ಗೃಹ ಇಲಾಖೆ ಸಲಹೆಗಾರರಾಗಿದ್ದ ಕೆಂಪಯ್ಯ ಆಪ್ತರಾಗಿದ್ದರು. ಸಿಎಂ ನೂತನ ಭದ್ರತಾ ಅಧಿಕಾರಿಯಾಗಿ ನೇಮಕವಾಗಿರುವ ಎಂ.ಯೋಗೇಶ್ ಬೆಂಗಳೂರು ಪಶ್ಚಿಮ ವಿಭಾಗದ ಸಿಎಆರ್‍ನ ಡಿಸಿಪಿ ಆಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv