Tag: Arab

  • ಮೃತ ಹಜ್ ಯಾತ್ರಿಕರ ಸಂಖ್ಯೆ 1,300ಕ್ಕೆ ಏರಿಕೆ – ಘಟನೆಗೆ ಕಾರಣ ತಿಳಿಸಿದ ಸೌದಿ!

    ಮೃತ ಹಜ್ ಯಾತ್ರಿಕರ ಸಂಖ್ಯೆ 1,300ಕ್ಕೆ ಏರಿಕೆ – ಘಟನೆಗೆ ಕಾರಣ ತಿಳಿಸಿದ ಸೌದಿ!

    ಜೆರುಸಲೇಂ: ಮೆಕ್ಕಾದಲ್ಲಿ (Mecca) ಮಿತಿ ಮೀರಿದ ತಾಪಮಾನದಿಂದ ಹಜ್‌ ಯಾತ್ರೆ ಸಂದರ್ಭದಲ್ಲಿ ಮೃತಪಟ್ಟ 1,300ಕ್ಕೂ ಹೆಚ್ಚು ಜನರ ಪೈಕಿ 83% ಜನರು (Hajj Pilgrims) ಅಧಿಕೃತವಾಗಿ ನೋಂದಣಿ ಮಾಡಿಕೊಂಡಿರಲಿಲ್ಲ ಎಂದು ಸೌದಿ ಅರೇಬಿಯಾ (Saudi Arabia) ಹೇಳಿದೆ.

    ದುರದೃಷ್ಟಕರ ಈ ಬಾರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆಯಾಗಿದೆ. ಈ ಪೈಕಿ 83% ಜನರು ಅನಧಿಕೃತವಾಗಿ ಹಜ್‌ ಯಾತ್ರೆಗೆ ಬಂದಿದ್ದರು. ಅವರಿಗೆ ಸೂರು ಹಾಗೂ ಮೂಲ ಸೌಕರ್ಯ ಸಿಗದ ಕಾರಣ ಬಿಸಿಲಿನಲ್ಲಿ ಬಣಗುವಂತಾಗಿದೆ, ಇದರಿಂದ ಮೃತಪಟ್ಟಿರುವುದಾಗಿ ಸೌದಿ ಅಧಿಕೃತ ಹೇಳಿಕೆ ಪ್ರಕಟಿಸಿದೆ. ಇದನ್ನೂ ಓದಿ: 24 ವರ್ಷಗಳ ನಂತರ ಉ.ಕೊರಿಯಾಗೆ ರಷ್ಯಾ ಅಧ್ಯಕ್ಷ ಭೇಟಿ – ನ್ಯಾಟೊ ಒಕ್ಕೂಟ ರಾಷ್ಟ್ರಗಳಲ್ಲಿ ನಡುಕ!

    ಮರಣ ಸಂಖ್ಯೆ ಹೆಚ್ಚಿದ್ದು ಏಕೆ?
    ಪ್ರತಿ ವರ್ಷದಂತೆ ಈ ವರ್ಷವೂ ಅಮೆರಿಕ (USA), ಇಂಡೋನೇಷ್ಯಾ, ಭಾರತ ಸೇರಿದಂತೆ 10ಕ್ಕೂ ಹೆಚ್ಚು ರಾಷ್ಟ್ರಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಬಂದಿದ್ದರು. ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 1,301 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ. ಸುಮಾರು 3000 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಪೈಕಿ ಶೇ.83 ಮಂದಿ ಅಧಿಕೃತವಾಗಿ ನೋಂದಣಿ ಮಾಡಿಕೊಂಡಿರಲಿಲ್ಲ. ಅಧಿಕೃತವಾಗಿ ನೋಂದಣಿ ಮಾಡಿಕೊಂಡಿದ್ದವರಿಗಷ್ಟೇ ಕೊಠಡಿ ಹಾಗೂ ಮೂಲ ಸೌಕರ್ಯಗಳ ವ್ಯವಸ್ಥೆ ಸಿಗಲಿದೆ ಎಂದ ಹೇಳಲಾಗಿದೆ. ಈ ನಡುವೆ ಅರಬ್ ರಾಜತಾಂತ್ರಿಕರು ಈಜಿಪ್ಟ್‌ನಿಂದ ಬಂದವರಲ್ಲಿ ಕಳೆದವಾರ 658 ಸಾವನ್ನಪ್ಪಿದ್ದಾರೆ. ಅವರಲ್ಲಿ 630 ನೋಂದಾಯಿಸದ ಯಾತ್ರಿಕರು ಎಂದು ಹೇಳಿದ್ದಾರೆ.

    ಸೌದಿ ಅರೇಬಿಯಾದ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ ಈ ವರ್ಷ ಮೆಕ್ಕಾದಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಡಿಗ್ರಿ ಫ್ಯಾರನ್‌ಹೀಟ್)ಗೆ ಏರಿಕೆಯಾಗಿತ್ತು. ಇದನ್ನೂ ಓದಿ: ಕುರಾನ್‌ಗೆ ಅಪಮಾನ – ಠಾಣೆಗೆ ನುಗ್ಗಿ ಆರೋಪಿಯನ್ನ ಗುಂಡಿಕ್ಕಿ ಕೊಂದ ಉದ್ರಿಕ್ತ ಗುಂಪು!

    ಹಜ್‌ ಯಾತ್ರೆ ಕೈಗೊಳ್ಳುವುದು ಏಕೆ?
    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ.

  • ಹಜ್ ಯಾತ್ರೆಗೆ ತೆರಳಿದ್ದ ಬೆಂಗ್ಳೂರಿನ ಇಬ್ಬರು ಸಾವು – ಕರ್ನಾಟಕದ 10,000ಕ್ಕೂ ಹೆಚ್ಚು ಮಂದಿ ಸೇಫ್‌!

    ಹಜ್ ಯಾತ್ರೆಗೆ ತೆರಳಿದ್ದ ಬೆಂಗ್ಳೂರಿನ ಇಬ್ಬರು ಸಾವು – ಕರ್ನಾಟಕದ 10,000ಕ್ಕೂ ಹೆಚ್ಚು ಮಂದಿ ಸೇಫ್‌!

    – ಮೆಕ್ಕಾದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

    ಬೆಂಗಳೂರು / ಜೆರುಸಲೇಂ: ಮುಸ್ಲಿಮರ (Muslims) ಪವಿತ್ರ ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಮೃತಪಟ್ಟ 645 ಹಜ್‌ ಯಾತ್ರಾರ್ತಿಗಳ ಪೈಕಿ 90 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತರು ಬಕ್ರೀದ್ ಹಬ್ಬದ (Bakrid Festival) ಹಿನ್ನೆಲೆ ಹಜ್ ಯಾತ್ರೆ ಕೈಗೊಂಡಿದ್ದರು.

    ಮೆಕ್ಕಾಗಿಂತ 8 ಕಿಲೋಮೀಟರ್ ದೂರದ ಮೀನಾ ನಗರದಲ್ಲಿ ಬೆಂಗಳೂರಿನ ಇಬ್ಬರು ಯಾತ್ರಿಕರು (Bengaluru Pilgrims) ಸಾವನ್ನಪ್ಪಿದ್ದಾರೆ. ಮೃತರನ್ನು ಆರ್‌.ಟಿ ನಗರದ ಕೌಸರ್ ರುಕ್ಸಾನ (69) ಮತ್ತು ಫ್ರೆಝರ್‌ ಟೌನ್‌ನ ಮೊಹಮ್ಮದ್ ಇಲಿಯಾಸ್ (50) ಎಂದು ಗುರುತಿಸಲಾಗಿದೆ. ಮೆಕ್ಕಾದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು, ಕರ್ನಾಟಕದ ಉಳಿದ ಯಾತ್ರಿಕರು ಸೇಫ್‌ ಆಗಿದ್ದಾರೆ ಎಂದು ಹಜ್ ಕಮಿಟಿ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ʻಪಬ್ಲಿಕ್‌ ಟಿವಿʼಗೆ ಮಾಹಿತಿ ನೀಡಿದ್ದಾರೆ.

    ಈ ಬಾರಿ ಕರ್ನಾಟಕದಿಂದ 10,300 ಮಂದಿ ಹಜ್‌ ಯಾತ್ರೆಗೆ ತೆರಳಿದ್ದರು. ಇವರೊಂದಿಗೆ ರುಕ್ಸಾನ ಸಹ ತಮ್ಮ ಕುಟುಂಬದ ಜೊತೆಗೆ ಹಜ್ ಯಾತ್ರೆಗೆ ತೆರಳಿದ್ದರು ಎಂದು ಸರ್ಫರಾಜ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಿಸ್ ವಿಜ್ಞಾನಿಗಳಿಂದ ಬಯೋ ಕಂಪ್ಯೂಟರ್ ಸಂಶೋಧನೆ – ಏನಿದರ ವಿಶೇಷ?

    ಮರಣ ಸಂಖ್ಯೆ ಹೆಚ್ಚಿದ್ದು ಏಕೆ?
    ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಮಂದಿ ಯಾತ್ರಿಕರು ಹಜ್ ಯಾತ್ರೆ ಹಮ್ಮಿಕೊಂಡಿದ್ದರು. ವಿವಿಧ ದೇಶಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಬಂದಿದ್ದರು. ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 645 ಮಂದಿ ಯಾತ್ರಿಕರು ಮೃತಪಟ್ಟಿದ್ದು, 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಹಜ್ ಯಾತ್ರೆಗೆ ಬರುವವರಿಗೆ ಸೂಕ್ತ ಎಸಿ ಸೌಲಭ್ಯ ಇರುವುದಿಲ್ಲ, ಸೂರು ಸಿಗುವುದಿಲ್ಲ. ಈ ಕಾರಣದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

    ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಕ್ಕಾದಲ್ಲಿ ಮಿತಿಮೀರಿದ ತಾಪಮಾನ – 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು!

    ಏನಿದು ಹಜ್ ಯಾತ್ರೆ?
    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ.

  • ಮೆಕ್ಕಾದಲ್ಲಿ ಮೃತಪಟ್ಟ 645 ಹಜ್ ಯಾತ್ರಿಕರ ಪೈಕಿ 68 ಮಂದಿ ಭಾರತೀಯರು!

    ಮೆಕ್ಕಾದಲ್ಲಿ ಮೃತಪಟ್ಟ 645 ಹಜ್ ಯಾತ್ರಿಕರ ಪೈಕಿ 68 ಮಂದಿ ಭಾರತೀಯರು!

    – 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥ – ಸಾವು ಸಂಭವಿಸಲು ಕಾರಣವೇನು?

    ಜೆರುಸಲೇಂ: ಇಸ್ಲಾಂ ಧರ್ಮದ ಪವಿತ್ರ ಹಜ್‌ ಯಾತ್ರೆ ವೇಳೆ ಮೆಕ್ಕಾದಲ್ಲಿ (Mecca) ದಾಖಲಾದ 51.8 ಡಿಗ್ರಿ ಸೆಲ್ಸಿಯಸ್‌ ತಾಪಮಾನದಿಂದ ಭಾರೀ ಪ್ರಮಾಣದ ಸಾವು-ನೋವಾಗಿದೆ. ಮೃತಪಟ್ಟವರ ಸಂಖ್ಯೆ 645ಕ್ಕೆ ಏರಿಕೆಯಾಗಿದ್ದು, ಈ ಪೈಕಿ 68 ಮಂದಿ ಭಾರತೀಯರೂ ಇದ್ದಾರೆ ಎಂದು ಅರಬ್‌ ರಾಜತಾಂತ್ರಿಕರು ತಿಳಿಸಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ (Hajj Pilgrims) ತೆರಳಿದ್ದರು.

    ಮರಣ ಸಂಖ್ಯೆ ಹೆಚ್ಚಿದ್ದು ಏಕೆ?
    ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಮಂದಿ ಯಾತ್ರಿಕರು ಹಜ್‌ ಯಾತ್ರೆ ಹಮ್ಮಿಕೊಂಡಿದ್ದರು. ವಿವಿಧ ದೇಶಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಬಂದಿದ್ದರು. ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 645 ಮಂದಿ ಯಾತ್ರಿಕರು ಮೃತಪಟ್ಟಿದ್ದು, 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಹಜ್‌ ಯಾತ್ರೆಗೆ ಬರುವವರಿಗೆ ಸೂಕ್ತ ಎಸಿ ಸೌಲಭ್ಯ ಇರುವುದಿಲ್ಲ, ಸೂರು ಸಿಗುವುದಿಲ್ಲ. ಈ ಕಾರಣದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

    ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ

    ಏನಿದು ಹಜ್ ಯಾತ್ರೆ?
    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ.

  • ಮೆಕ್ಕಾದಲ್ಲಿ ಮಿತಿಮೀರಿದ ತಾಪಮಾನ – 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು!

    ಮೆಕ್ಕಾದಲ್ಲಿ ಮಿತಿಮೀರಿದ ತಾಪಮಾನ – 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು!

    ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರು (Hajj Pilgrims) ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ (Bakrid Festival) ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು.

    ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು (Egyptians), ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ (Mecca) ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್‌ ರಾಜತಾಂತ್ರಿಕರು ತಿಳಿಸಿದ್ದಾರೆ.

    ಈ ವರ್ಷ ಸುಮಾರು 18 ಲಕ್ಷ ಯಾತ್ರಾರ್ಥಿಗಳು ಹಜ್‌ ಯಾತ್ರೆಯಲ್ಲಿ ಭಾಗವಹಿಸಿದ್ದರು, ಅವರಲ್ಲಿ 16 ಲಕ್ಷ ಯಾತ್ರಿಕರು ವಿವಿಧ ದೇಶಗಳಿಂದ ಬಂದಿದ್ದರು ಎಂದು ರಾಜತಾಂತ್ರಿಕರು ತಿಳಿಸಿದ್ದಾರೆ. ಇದನ್ನೂ ಓದಿ: ತ್ಯಾಗ ಬಲಿದಾನಗಳ ಸಂಕೇತ ʻಬಕ್ರೀದ್‌ʼ

    ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು (Muslims) ಒಮ್ಮೆಯಾದರೂ ಹಜ್‌ ಯಾತ್ರೆಯನ್ನು ಪೂರ್ಣಗೊಳಿಸಬೇಕು ಎಂದು ಭಾವಿಸುತ್ತಾರೆ. ಆದ್ರೆ ಈ ಬಾರಿ ಮೆಕ್ಕಾದಲ್ಲಿ ಬಿಸಿಲಿನ ತಾಪಮಾನ ಏರಿಕೆಯಿಂದ ನೂರಾರು ಜನ ಮೃತಪಟ್ಟಿದ್ದಾರೆ, ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ಕಂಡುಬಂದಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ. ತಾಪಮಾನ ಏರಿಕೆ ಸಂದರ್ಭದಲ್ಲಿ ಕೆಲವರು ಮೈಮೇಲೆ ನೀರು ಸುರಿದುಕೊಂಡು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಕಂಡುಬಂದಿದೆ.

    ಏನಿದು ಹಜ್ ಯಾತ್ರೆ?
    ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ.  ಇದನ್ನೂ ಓದಿ: ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ 

  • ನೂಪುರ್ ಶರ್ಮಾ ವಿರುದ್ಧ ಕತಾರ್ ಕಿಡಿ – ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

    ನೂಪುರ್ ಶರ್ಮಾ ವಿರುದ್ಧ ಕತಾರ್ ಕಿಡಿ – ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

    ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆಯ ಬಳಿಕ ಇದೀಗ ಭಾರತ ಹಾಗೂ ಅರಬ್ ದೇಶಗಳ ಮಧ್ಯೆ ತಿಕ್ಕಾಟ ತಾರಕಕ್ಕೇರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಯ್‍ಕಾಟ್ ಕೂಗು ಕೇಳಿಬರುತ್ತಿದೆ.

    ನೂಪುರ್ ಶರ್ಮಾ, ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರಂಭಗೊಂಡ ವಿವಾದ ಬಳಿಕ ನೂಪುರ್ ಶರ್ಮಾರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸುವ ಮಟ್ಟಿಗೆ ಮುಂದುವರಿದಿತ್ತು. ಆ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ನೂಪುರ್ ಶರ್ಮಾ ಕೇವಲ ಉದಾಹರಣೆಯಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಮಾತನಾಡಿದ್ದಾರೆ. ಹೊರತು ಅವಹೇಳನಕಾರಿ ಮಾಡಿಲ್ಲ ಎಂದು ನೂಪುರ್ ಶರ್ಮಾರ ಹೇಳಿಕೆ ಪರ ಧ್ವನಿ ಕೇಳಿ ಬರುತ್ತಿದೆ. ಈ ನಡುವೆ ಅರಬ್ ದೇಶಗಳಾದ ಕತಾರ್, ಓಮನ್, ಸೌದಿ ಅರೇಬಿಯಾದಲ್ಲಿ ಭಾರತದಿಂದ ರಫ್ತಾಗುತ್ತಿರುವ ಸರಕುಗಳು ಸೇರಿದಂತೆ ಆಹಾರ ಉತ್ಪನ್ನಗಳನ್ನು ಖರೀದಿಸದಂತೆ ಬಾಯ್‍ಕಾಟ್ ಚಳವಳಿ ಆರಂಭವಾಗಿದೆ. ಈ ನಡುವೆ ಭಾರತದಲ್ಲಿ ಕಾರ್ಯಚರಿಸುತ್ತಿರುವ ಕತಾರ್ ಏರ್ವೇಸ್‍ಗೆ ಬಹಿಷ್ಕಾರ ಹಾಕಿ. ನಾವು ಅರಬ್ ದೇಶಗಳ ಯಾವುದೇ ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ ಎಂಬ ಅಭಿಯಾನ ಭಾರತದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

    https://twitter.com/ALoanIndian/status/1533486948161323008

    ಭಾರತೀಯರ ವಾದವೇನು?
    ನಮ್ಮ ಹಿಂದೂ ದೇವರುಗಳನ್ನು ಮಾತ್ರವಲ್ಲದೆ ನಮ್ಮ ಭಾರತ ಮಾತೆಯನ್ನು ಅವಮಾನಿಸಿದ ಎಂ.ಎಫ್ ಹುಸೇನ್‍ಗೆ ಕತಾರ್ ಪೌರತ್ವ ನೀಡಿದೆ. ಈ ಬಗ್ಗೆ ಕ್ಷಮೆಯಾಚಿಸಬೇಕು. ಹುಸೇನ್ ಭಾರತ ಮಾತೆಯ ನಗ್ನ ಚಿತ್ರಕಲೆ ಬಿಡಿಸಿ ಅವಮಾನ ಮಾಡಿದ್ದ ಅಂತವರಿಗೆ ಪೌರತ್ವ ನೀಡಿದೆ. ಆದರೆ ನೂಪುರ್ ಶರ್ಮಾ ಕೇವಲ ಉದಾಹರಣೆಗಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಆಡಿದ ಮಾತಿಗೆ ಈ ರೀತಿಯ ಪ್ರತಿಕಾರ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

    https://twitter.com/DivyaRajput060/status/1533737481798942722

    ಭಯೋತ್ಪಾದನೆಯ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಧನಸಹಾಯವನ್ನು ಸೌದಿ ಸ್ಥಗಿತಗೊಳಿಸಿದ ನಂತರ ಕತಾರ್ ಭಾರತದಲ್ಲಿ ಇಸ್ಲಾಮಿ ಭಯೋತ್ಪಾದನೆಯ ಪ್ರಮುಖ ಪ್ರಾಯೋಜಕವಾಗಿ ಹೊರಹೊಮ್ಮುತ್ತಿದೆ. ಕತಾರ್ ಮತ್ತು ಟರ್ಕಿ ಸೌದಿ ಅರೇಬಿಯಾವನ್ನು ವಿಶ್ವದ ಹೊಸ ಇಸ್ಲಾಮಿಸ್ಟ್ ನಾಯಕನಾಗಿ ಬದಲಾಯಿಸುವ ಕಾರ್ಯಕ್ಕೆ ಮುಂದಾಗುತ್ತಿದೆ. ಇದನ್ನೂ ಓದಿ: ಹಿಂದಿ ಹಿಂದುಳಿದ ರಾಜ್ಯಗಳ ಭಾಷೆ, ಇದು ಶೂದ್ರರಿಗೆ ಮಾತ್ರ: ಡಿಎಂಕೆ ಸಂಸದ

    https://twitter.com/Ajay67525201/status/1533713285618421761

    ಗಲ್ಫ್ ದೇಶಗಳ ಪ್ರಮುಖ ಆದಾಯದ ಮೂಲ ಪ್ರವಾಸೋದ್ಯಮ. ನಮ್ಮ ದೇಶದ ವಿಚಾರಕ್ಕೆ ತಲೆ ಹಾಕಿದ್ದಕ್ಕೆ ಅಲ್ಲಿನ ವಿಮಾನ ಸೇವೆಯ ಬಳಸಬಾರದು. ಜೊತೆ ಆ ದೇಶಗಳಿಗೆ ಪ್ರವಾಸ ಹೋಗುವುದನ್ನು ನಿಲ್ಲಿಸಬೇಕು ಎಂಬ ಮಾತು ಕೇಳಿಬರುತ್ತಿದೆ.