Tag: aradhana mahotsava

  • ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

    ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

    ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ 354 ವರ್ಷಗಳು ಸಂದಿರುವ ಹಿನ್ನೆಲೆ ಎಲ್ಲೆಡೆ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ (Aradhana Mahotsava) ವಿಜೃಂಭಣೆಯಿಂದ ನಡೆಯುತ್ತಿದೆ.

    ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆಯ ಸಡಗರವಿದ್ದು, ಬೆಳಗಿನ ಜಾವದಿಂದಲೇ ನಾನಾ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಇಂದು ವಿಶೇಷವಾಗಿ ನಿರ್ಮಾಲ್ಯ ವಿಸರ್ಜನ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ, ಅಲಂಕಾರ ಸಂತರ್ಪಣ, ಹಸ್ತೋದಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ನಡೆಯಲಿದೆ. ಮಠದ ಪ್ರಾಕಾರದಲ್ಲಿ ರಜತ ಸಿಂಹ, ಗಜ ವಾಹನೋತ್ಸವ ಪಲ್ಲಕ್ಕಿ ಸೇವೆ ನಡೆದವು. ಶ್ರೀರಂಗದ ರಂಗನಾಥ ಸ್ವಾಮಿ ಹಾಗೂ ಕಂಚಿ ವರದರಾಜ ದೇವರ ವಸ್ತ್ರ ಪ್ರಸಾದವನ್ನ ರಾಯರಿಗೆ ಸಮರ್ಪಿಸಲಾಯಿತು. ಇದನ್ನೂ ಓದಿ: ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು!

    ಸಂಜೆ ವೇಳೆಗೆ ಜ್ಞಾನಯೋಗ, ಸ್ವಸ್ತಿ ವಾಚನ, ಹಗಲು ದೀವಟಿಗೆ, ಪ್ರಾಕಾರ ಉತ್ಸವಗಳು ಬೆಳ್ಳಿ ,ಚಿನ್ನದ ರಥೋತ್ಸವ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯವಾಗಿ ರಾಯರು ರಚಿಸಿದ ಪರಿಮಳ ಗ್ರಂಥವನ್ನ ಪಲ್ಲಕ್ಕಿಯಲ್ಲಿಟ್ಟು ಪಲ್ಲಕ್ಕಿ ಉತ್ಸವ ನಡೆಸಲಾಗುತ್ತದೆ. ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ನಿರ್ಬಂಧ – ಪಾಕಿಗೆ 1,240 ಕೋಟಿ ನಷ್ಟ

    ಸಂಜೆ ವೇಳೆ ಸಭಾ ಮಂಟಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಗುರು ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು. ದೇಶ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಭಕ್ತರ ದಂಡು ಹರಿದು ಬಂದಿದೆ. ಸಪ್ತರಾತ್ರೋತ್ಸವ ಹಿನ್ನೆಲೆ ಏಳುದಿನಕಾಲ ಧಾರ್ಮಿಕ ಕಾರ್ಯಕ್ರಮಗಳ ಜೊತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಸಣ್ಣನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಂತ್ರಾಲಯ ಮಠಕ್ಕೆ ಭೇಟಿ ನೀಡಿ ಪೂರ್ವಾರಾಧನೆ ಸಂಭ್ರಮದಲ್ಲಿ ಭಾಗವಹಿಸಿದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಭಕ್ತರಿಗೆ ಆಶಿರ್ವಚನ ನೀಡಿದರು. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

  • ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ಮಹಾರಥೋತ್ಸವ

    ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ಮಹಾರಥೋತ್ಸವ

    ರಾಯಚೂರು: ಮಂತ್ರಾಲಯದಲ್ಲಿ (Mantralayam) ರಾಘವೇಂದ್ರ ಸ್ವಾಮಿಗಳ (Raghavendra Swamy) 352ನೇ ಆರಾಧನಾ ಮಹೋತ್ಸವದ (Aradhana Mahotsava) ಕೊನೆಯ ಘಟ್ಟ ಉತ್ತರಾಧನೆ ಅದ್ದೂರಿಯಾಗಿ ನಡೆಯಿತು. ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ರಾಯರ ಆರಾಧನಾ ಮಹೋತ್ಸವದ ವೈಭವದಲ್ಲಿ ಪಾಲ್ಗೊಂಡಿದ್ದರು.

    ಕಲಿಯುಗದ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಉತ್ತರಾಧನೆಯಾಗಿ ಆಚರಿಸಲಾಗುತ್ತದೆ. ಉತ್ತರಾಧನೆ ಹಿನ್ನೆಲೆ ನಡೆದ ಮಹಾರಥೋತ್ಸವ ರಾಯರ ಆರಾಧನೆಗೆ ಮೆರಗು ತಂದಿತು. ಈ ದಿನ ರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜ ಬೀದಿಯಲ್ಲಿ ದರ್ಶನ ಕೊಡುತ್ತಾರೆ ಎನ್ನುವ ಪ್ರತೀತಿಯಿದೆ. ಗುರುರಾಯರನ್ನು ಪ್ರಹ್ಲಾದ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯುವ ಮೂಲಕ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಮಹಾರಥೋತ್ಸಕ್ಕೂ ಮುನ್ನ ರಾಮದೇವರು ಮತ್ತು ಎಲ್ಲಾ ಮಠದ ಬೃಂದಾವನಗಳಿಗೂ ಗುಲಾಲ್ ಸಮರ್ಪಣೆ ಮಾಡುವ ಮೂಲಕ ಶ್ರೀಗಳು ವಸಂತೋತ್ಸವ ಆಚರಿಸಿದರು. ಇದನ್ನೂ ಓದಿ: ಜಿ20ಗೂ ಮುನ್ನ ಮೋದಿ – ಬೈಡೆನ್ ನಡುವೆ ದ್ವಿಪಕ್ಷೀಯ ಮಾತುಕತೆ

    ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಿತು. ಮಹಾ ರಥೋತ್ಸವದ ಹಿನ್ನೆಲೆ ಶ್ರೀಗಳು ರಥದಲ್ಲಿ ಕುಳಿತು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.

    ಈ ವೇಳೆ ಚಂದ್ರಯಾನ-3 ದೇಶದ ಹೆಮ್ಮೆಯ ಕೊಡುಗೆಯಾಗಿದೆ. ಈ ಯಶಸ್ಸಿನ ಮೂಲಕ ದೇಶ ಅತ್ಯುನ್ನತ ಸ್ಥಾನಕ್ಕೆ ಏರಿದೆ. ಸೂರ್ಯಮಂಡಲಕ್ಕೂ ಇಂದು ಲಗ್ಗೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಎಲ್ಲರೂ ದೇಶಭಕ್ತಿ ಮತ್ತು ಧರ್ಮಶ್ರದ್ದೆಯನ್ನಿಟ್ಟುಕೊಳ್ಳಬೇಕು. ಭಗವಂತ ವಿಶೇಷ ಅನುಗ್ರಹ ಮಾಡಲಿದ್ದಾನೆ ಎಂದರು.

    ರಾಯರು ಪ್ರತಿನಿತ್ಯದಲ್ಲಿ ಅಂತರ್ಮುಖವಾಗಿ ಜಪತಪ ಮಾಡುತ್ತಿದ್ದರೆ ಉತ್ತರಾಧನೆ ದಿನ ಬಹಿರ್ಮುಖವಾಗಿ ತಮ್ಮ ದೃಷ್ಟಿಯನ್ನ ಭಕ್ತರ ಕಡೆಗೆ ಹರಿಸುತ್ತಾರೆ. ಭಕ್ತರ ಬೇಡಿಕೆ ಈಡೇರಿಸುತ್ತಾರೆ ಎನ್ನುವ ನಂಬಿಕೆಯಿದೆ. ಹೀಗಾಗಿ ಉತ್ತರಾಧನೆ ದಿನ ರಾಯರ ಅನುಗ್ರಹಕ್ಕೆ ಪಾತ್ರರಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಾಯರ ಮಠಕ್ಕೆ ಆಗಮಿಸಿ ಮಹಾರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

    ಈ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಈ ವೇಳೆ ಹೆಲಿಕ್ಯಾಪ್ಟರ್ ಮೂಲಕ ಪ್ರತಿ ವರ್ಷದಂತೆ ರಥಕ್ಕೆ ಪುಷ್ಪವೃಷ್ಠಿ ಮಾಡಲಾಯಿತು. ಈ ಮೂಲಕ ರಾಯರ ಆರಾಧನೆಯ ಮುಖ್ಯ ಮೂರು ದಿನಗಳು ಇಂದಿಗೆ ಮುಕ್ತಾಯವಾದವು. ಸಪ್ತರಾತ್ರೋತ್ಸವ ಹಿನ್ನೆಲೆ ಸೆ.4ರ ವರೆಗೆ ಮಠದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮುಂದುವರೆಯುತ್ತವೆ. ಇದನ್ನೂ ಓದಿ: ರಾಮನಗರದಲ್ಲೇ ಮೆಡಿಕಲ್ ಕಾಲೇಜು ಉಳಿಯುತ್ತೆ, ವಿಪಕ್ಷಗಳು ರಾಜಕೀಯಕ್ಕೆ ಗೊಂದಲ ಮಾಡ್ತಿವೆ: ಇಕ್ಬಾಲ್ ಹುಸೇನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯರ ಆರಾಧನೆ- ಪಾದಯಾತ್ರೆ ಮೂಲಕ ಹರಿದು ಬಂತು ಭಕ್ತರ ದಂಡು

    ರಾಯರ ಆರಾಧನೆ- ಪಾದಯಾತ್ರೆ ಮೂಲಕ ಹರಿದು ಬಂತು ಭಕ್ತರ ದಂಡು

    – ರಾಯರು ಸಶರೀರವಾಗಿ ವೃಂದಾವನಸ್ಥರಾಗಿ ಇಂದಿಗೆ 350 ವರ್ಷ

    ರಾಯಚೂರು: ರಾಯರ ಆರಾಧನೆಗೆ ಪಾದಯಾತ್ರೆ ಮೂಲಕ ಭಕ್ತರ ದಂಡು ಹರಿದು ಬರುತ್ತಿದೆ. ಮಂತ್ರಾಲಯದಲ್ಲಿ ನಡೆಯುತ್ತಿರುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಏಳುದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದು ಮುಖ್ಯವಾದ ದಿನ. ರಾಯರು ಸಶರೀರವಾಗಿ ವೃಂದಾವನಸ್ಥರಾಗಿ ಇಂದಿಗೆ 350 ವರ್ಷ ಸಂದಿವೆ.

    ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಹಿನ್ನೆಲೆ ನಾನಾ ಕಡೆಗಳಿಂದ ಭಕ್ತರು ಬರಿಗಾಲಲ್ಲೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಮಂತ್ರಾಲಯಕ್ಕೆ ಪಾದಯಾತ್ರೆ ಬರುತ್ತಿದ್ದಾರೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ನಟ ಕಾರ್ತಿಕೇಯ ನಿಶ್ಚಿತಾರ್ಥ – ಫೋಟೋ ವೈರಲ್

    ಭಜನಾ ಮಂಡಳಿಗಳು, ಭಕ್ತರ ತಂಡಗಳು ಪ್ರತೀವರ್ಷ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ರಾಯರ ಮಠವನ್ನು ಪಾದಯಾತ್ರೆ ಮೂಲಕ ತಲುಪುತ್ತವೆ. ಕಳೆದ ವರ್ಷ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಆರಾಧನಾ ಮಹೋತ್ಸವವನ್ನ ಮಠದ ಸಿಬ್ಬಂದಿ ಅಷ್ಟೆ ಸರಳವಾಗಿ ಆಚರಿಸಿದ್ದರು. ಈ ಬಾರಿ ಆಂಧ್ರಪ್ರದೇಶದಲ್ಲಿ ಲಾಕ್‍ಡೌನ್ ಸಡಿಲಿಕೆ ಇರುವುದರಿಂದ ವಿಜೃಂಭಣೆಯಿಂದ ರಾಯರ 350 ನೇ ಆರಾಧನಾ ಮಹೋತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ವಿವಿಧೆಡೆಯಿಂದ ಭಕ್ತರು ಪಾದಯಾತ್ರೆ ಮೂಲಕ ಬರುತ್ತಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

    ಪ್ರತೀವರ್ಷದಂತೆ ತಿರುಮಲ ತಿರುಪತಿ ದೇವಾಲಯದಿಂದ ಮಂತ್ರಾಲಯ ಮಠಕ್ಕೆ ವೆಂಕಟೇಶ್ವರ ಸ್ವಾಮಿ ಶೇಷವಸ್ತ್ರವನ್ನ ತರಲಾಗಿದೆ. ವಾದ್ಯಗೋಷ್ಠಿಯೊಂದಿಗೆ ತಿರುಮಲ ತಿರುಪತಿ ದೇವಾಲಯದ ಅಧಿಕಾರಿಗಳನ್ನ ಶ್ರೀ ಮಠದ ಶ್ರೀಗಳು ಹಾಗೂ ಆಡಳಿತ ಮಂಡಳಿ ಬರಮಾಡಿಕೊಂಡಿತು. ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರಿಗೆ ಶೇಷವಸ್ತ್ರ ಸಮರ್ಪಣೆ ಮಾಡಿದರು. ಇದನ್ನೂ ಓದಿ: ಯಾರ ಹಂಗಿನಲ್ಲೂ ಇರದ ಸರ್ಕಾರ ಕೊಡಿ: ಎಚ್.ಡಿ ಕುಮಾರಸ್ವಾಮಿ

    350 ನೇ ಆರಾಧನಾ ಮಹೋತ್ಸವ ಹಿನ್ನೆಲೆ ರಾಯರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ನಡೆಯಿತು. ಪಂಚಾಮೃತ ಅಭಿಷೇಕ, ಶೇಷವಸ್ತ್ರ ಸಮರ್ಪಣೆ ಬಳಿಕ ಚಿನ್ನದ ರಥೋತ್ಸವ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಲಿದ್ದಾರೆ.

  • ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಳೆಕಟ್ಟಿದ ರಾಯರ ಆರಾಧನೆ

    ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಳೆಕಟ್ಟಿದ ರಾಯರ ಆರಾಧನೆ

    ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅದ್ದೂರಿಯಾಗಿ ಜರುಗುತ್ತಿದೆ. ಪೂರ್ವಾರಾಧನೆ ಹಿನ್ನೆಲೆ ಇಂದು ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

    ಇಂದು ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಅಭಿನಂದನಾ ಸನ್ಮಾನ ನಡೆಯಿತು. ವಿವಿಧ ಕಲಾವಿದರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಾಳೆ ಆಗಸ್ಟ್ 24 ರಂದು ರಾಯರ ಮಧ್ಯಾರಾಧನೆ ನಡೆಯಲಿದೆ. ಇದನ್ನೂ ಓದಿ: ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ

    ರಾಯರು ಸಶರೀರವಾಗಿ ವೃಂದಾವನಸ್ಥರಾಗಿ 350 ವರ್ಷಗಳಾಗಲಿವೆ. ರಾಯರು 700 ವರ್ಷ ಕಾಲ ವೃಂದಾವನದಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ 350ನೇ ಆರಾಧನಾ ಮಹೋತ್ಸವಕ್ಕೆ ವಿಶೇಷತೆಯಿದ್ದು, 700 ವರ್ಷ ಅವಧಿಯ ಮಧ್ಯಭಾಗವೇ ಈ ವರ್ಷದ ಮಧ್ಯಾರಾಧನೆಯಾಗಿದೆ. ಮಧ್ಯಾರಾಧನೆ ಹಿನ್ನೆಲೆ ತಿರುಮಲ ತಿರುಪತಿ ದೇವಾಲಯದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದೆ. ಇದನ್ನೂ ಓದಿ: ಮಂತ್ರಾಲಯ ಶ್ರೀಗಳಿಂದ ಹೊಸ ಸಂಪ್ರದಾಯಕ್ಕೆ ನಾಂದಿ – ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್​​​ಗಳ ನೇಮಕ

  • ಆಗಸ್ಟ್ 21 ರಿಂದ ರಾಯರ 350ನೇ ಆರಾಧನಾ ಮಹೋತ್ಸವ: ಸುಬುಧೇಂದ್ರ ತೀರ್ಥ ಸ್ವಾಮಿ

    ಆಗಸ್ಟ್ 21 ರಿಂದ ರಾಯರ 350ನೇ ಆರಾಧನಾ ಮಹೋತ್ಸವ: ಸುಬುಧೇಂದ್ರ ತೀರ್ಥ ಸ್ವಾಮಿ

    ರಾಯಚೂರು: ಗುರುರಾಘವೇಂದ್ರ ಸ್ವಾಮಿ ಮಠ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವ ಆಗಸ್ಟ್ 21 ರಿಂದ 27ರವರೆಗೆ ನಡೆಯಲಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮಿ ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು, ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ ವೃಂದಾವನಸ್ಥರಾದ ದಿನದ ಹಿನ್ನೆಲೆ ಆರಾಧನಾ ಮಹೋತ್ಸವ ಆಚರಣೆ ಮಾಡಲಾಗುತ್ತದೆ. ಕೋವಿಡ್ ನಿಯಮಗಳನ್ನ ಪಾಲಿಸಿ ಆರಾಧನಾ ಮಹೋತ್ಸವ ನಡೆಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

    ದುಂದುವೆಚ್ಚ ಹಾಗೂ ವಿಜೃಂಭಣೆಯಿಂದ ಮಾಡದೇ ಸಾಂಸ್ಕೃತಿಕವಾಗಿ ಆಚರಿಸಲಾಗುತ್ತದೆ. ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ನಡೆಯಲಿದೆ. ಈ ಬಾರಿಯೂ ದೇಶದ ವಿವಿಧೆಡೆಯಿಂದ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಸ್ಯಾನಿಟೈಸೇಷನ್, ಎಲೆಕ್ಟ್ರಾನಿಕ್ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆಧುನಿಕ ಯಂತ್ರಗಳ ಅಳವಡಿಕೆ ಮಾಡಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು, ವೈದ್ಯರ ಸೇವೆಗೆ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ವಸತಿ, ಊಟ, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ ಬರಲಿದೆ. ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು ಹೊರ ಪ್ರಾಂಗಣದಲ್ಲಿ ಏಳುದಿನ ನಡೆಯಲಿವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಪಿಂಗ್ – ಕೊರೊನಾ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ ಜನ

    ಭಕ್ತರ ಕಾಣಿಕೆಯಿಂದ 14 ಕೆ.ಜಿ. ಚಿನ್ನದ ಪೂಜಾ ಪಾತ್ರೆಗಳ ತಯಾರಿಕೆ ನಡೆದಿದೆ. ಭವ್ಯವಾದ ಮ್ಯೂಸಿಯಂ ಸಿದ್ದಗೊಳಿಸಿದ್ದು ಆರಾಧನಾ ಕಾರ್ಯಕ್ರಮ ವೇಳೆ ಲೋಕಾರ್ಪಣೆ ನಡೆಯಲಿದೆ. ಮಿನಿ ಏರ್ಪೋರ್ಟ್ ನಿರ್ಮಾಣಕ್ಕೆ ದಾನಿಗಳು ಮುಂದೆ ಬಂದಿದ್ದು, ಮುಂದಿನ ದಿನಗಳಲ್ಲಿ ಆಗಲಿದೆ. ರಾಯಚೂರಿನಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಯರ ಹೆಸರನ್ನು ಇಡುವುದು ಸೂಕ್ತ. ವಿಮಾನದಲ್ಲಿ ಬರುವ ಹೆಚ್ಚು ಪ್ರಯಾಣಿಕರು ರಾಯರ ಭಕ್ತರು ಆಗಿರುತ್ತಾರೆ. ಮಂತ್ರಾಲಯಕ್ಕೆ ಬರುವವರೇ ಹೆಚ್ಚು ಇರುತ್ತಾರೆ ಅಂತ ಸುಬುಧೇಂದ್ರತೀರ್ಥ ಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ:2 ದಿನ ಹಂಪಿ ವೀಕ್ಷಣೆ ಮಾಡಲಿದ್ದಾರೆ ವೆಂಕಯ್ಯ ನಾಯ್ಡು

  • ಮಂತ್ರಾಲಯದಲ್ಲಿ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ

    ಮಂತ್ರಾಲಯದಲ್ಲಿ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ

    ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಆದರೆ ಸಾರ್ವಜನಿಕರಿಗೆ ಅವಕಾಶವಿಲ್ಲದ ಕಾರಣ ಕೇವಲ ಮಠದ ಸಿಬ್ಬಂದಿ ಮಾತ್ರ ಭಾಗಿಯಾಗಿದ್ದರು.

    ರಾಯರ ಮೂಲ ಬೃಂದಾವನ ಹಾಗೂ ವಾದೀಂದ್ರ ತೀರ್ಥರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಪಂಚಾಮೃತ ಅಭಿಷೇಕ ನಡೆಯಿತು.

    ಆರಾಧನೆ ಹಿನ್ನೆಲೆ ಶ್ರೀ ಮಠದ ಪ್ರಾಂಗಣದಲ್ಲಿ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಕೇವಲ ಶ್ರೀಮಠದ ಸಿಬ್ಬಂದಿ ಮಾತ್ರ ಭಾಗಿಯಾಗಿದ್ದರು. ಜೂನ್ 22ರಿಂದ ರಾಯರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ನಿಯಮಾವಳಿ ಪ್ರಕಾರ ದರ್ಶನಕ್ಕೆ ಮಠದ ಆಡಳಿತ ಮಂಡಳಿ ಅನುವು ಮಾಡಿಕೊಟ್ಟಿದೆ.

  • ಗುರುರಾಯರ 349 ನೇ ಆರಾಧನಾ ಮಹೋತ್ಸವಕ್ಕೆ ಇಂದು ತೆರೆ

    ಗುರುರಾಯರ 349 ನೇ ಆರಾಧನಾ ಮಹೋತ್ಸವಕ್ಕೆ ಇಂದು ತೆರೆ

    ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 349 ನೇ ಆರಾಧನಾ ಮಹೋತ್ಸವಕ್ಕೆ ಇಂದು ಉತ್ತರರಾಧನೆ ಸಂಭ್ರಮದ ಮೂಲಕ ತೆರೆ ಬಿದ್ದಿದೆ.

    ಪ್ರತಿ ವರ್ಷ ಉತ್ತರರಾಧನೆ ದಿನ ಮಂತ್ರಾಲಯದಲ್ಲಿ ಮಹಾರಥೋತ್ಸವ ನಡೆಯುತ್ತಿತ್ತು. ಆದ್ರೆ ಈ ಬಾರಿ ಕೊರೊನಾ ಆತಂಕ ಹಿನ್ನೆಲೆ ಮಠದ ಪ್ರಾಂಗಣದಲ್ಲಿ ಮಾತ್ರ ರಥೋತ್ಸವ ನಡೆಯಿತು. ಇಂದು ವಸಂತೋತ್ಸವ, ಮೂಲರಾಮದೇವರ ಪೂಜೆ ಸೇರಿ ನಾನಾ ವಿಶೇಷ ಪೂಜೆ ಹಾಗೂ ಮಹಾಪಂಚಾಮೃತ ಅಭೀಷೇಕದೊಂದಿಗೆ ಉತ್ತರರಾಧನೆ ನಡೆಯಿತು.

    ಆಗಸ್ಟ್ 2 ರಿಂದ ಆರಂಭವಾದ ಸಪ್ತರಾತ್ರೊತ್ಸವ ಆಗಸ್ಟ್ 8 ರವರೆಗೆ ನಡೆಯಲಿದೆ. ಶನಿವಾರ ಸರ್ವಸಮರ್ಪಣೋತ್ಸವ ಕಾರ್ಯಕ್ರಮದೊಂದಿಗೆ ಆರಾಧನಾ ಕಾರ್ಯಕ್ರಮ ಸಂಪೂರ್ಣ ಮುಕ್ತಾಯಗೊಳ್ಳಲಿದೆ. ಕೇವಲ ಸೀಮಿತ ಸಿಬ್ಬಂದಿ ಹಾಗೂ ಭಕ್ತಾಧಿಗಳು ಮಾತ್ರ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತ್ಯಂತ ಸರಳವಾಗಿ ಈ ಬಾರಿ ರಾಯರ ಆರಾಧನಾ ಮಹೋತ್ಸವ ಮುಕ್ತಾಯಗೊಂಡಿದೆ.

  • ರಾಯರ 349ನೇ ಆರಾಧನಾ ಮಹೋತ್ಸವ ಯೂ ಟ್ಯೂಬ್‍ನಲ್ಲಿ ಪ್ರಸಾರ

    ರಾಯರ 349ನೇ ಆರಾಧನಾ ಮಹೋತ್ಸವ ಯೂ ಟ್ಯೂಬ್‍ನಲ್ಲಿ ಪ್ರಸಾರ

    – ಮಹೋತ್ಸವಕ್ಕೆ ಇಂದು ಮಂತ್ರಾಲಯ ಶ್ರೀಗಳಿಂದ ಚಾಲನೆ

    ರಾಯಚೂರು: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಯ 349ನೇ ಆರಾಧನಾ ಮಹೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದ್ದು, ಗೋ ಪೂಜೆ, ಗಜ ಪೂಜೆ ಧ್ವಜಾರೋಹಣದ ಮೂಲಕ ಆರಾಧನಾ ಮಹೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಚಾಲನೆ ನೀಡಿದರು.

    ಆಗಸ್ಟ್ 2 ರಿಂದ 8 ರವರೆಗೆ ಆರಾಧನೆ ಹಿನ್ನೆಲೆ ಸಪ್ತರಾತ್ರೋತ್ಸವ ನಡೆಯಲಿದೆ. ಕೊರೊನಾ ಹಿನ್ನೆಲೆ ಈ ಬಾರಿ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಹೀಗಾಗಿ ಮಠದ ಆಡಳಿದ ಮಂಡಳಿ ಆರಾಧನಾ ಸಪ್ತರಾತ್ರೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ಮಠದ ಅಧಿಕೃತ ಯೂ ಟ್ಯೂಬ್ ಚಾನಲ್ ‘ಮಂತ್ರಾಲಯ ವಾಹಿನಿ’ಯಲ್ಲಿ ನೇರಪ್ರಸಾರ ಮಾಡಲು ನಿರ್ಧರಿಸಿದೆ.

    ಮಂತ್ರಾಲಯ ಮಠದ ಪ್ರಾಕಾರದಲ್ಲಿ ಮಾತ್ರ ಕಾರ್ಯಕ್ರಮಗಳು ನಡೆಯುತ್ತಿದ್ದು. ಧಾರ್ಮಿಕ, ಆಧ್ಯಾತ್ಮಿಕ, ಉತ್ಸವ, ಪ್ರವಚನ ಸೇರಿ ಎಲ್ಲ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗುವುದು. ನಾಳೆ ಬೆಳಗ್ಗೆಯಿಂದ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮೂಲ ರಾಮದೇವರಿಗೆ ಪೂಜೆ ಹಾಗೂ ರಥೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ದೇಶದ ವಿವಿಧೆಡೆಯಿರುವ ಗುರುರಾಘವೇಂದ್ರ ಸ್ವಾಮಿಯ ಶಾಖಾ ಮಠಗಳಲ್ಲೂ ಏಳು ದಿನಗಳ ಕಾಲ ಸಡಗರದಿಂದ ಆರಾಧನಾ ಮಹೋತ್ಸವ ಆಚರಿಸಲಾಗುತ್ತದೆ.