ಬಾಲಿವುಡ್ ಬೆಡಗಿ ಐಶ್ವರ್ಯಾ ರೈ (Aishwarya Rai) ಮತ್ತು ಅಭಿಷೇಕ್ ಬಚ್ಚನ್ (Abhishek Bachchan) ದಂಪತಿಯ ಡಿವೋರ್ಸ್ ವಿಚಾರ ಆಗಾಗ ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತದೆ. ಹೀಗರುವಾಗ ಡಿವೋರ್ಸ್ ಸುದ್ದಿ ಬಂದೇ ಇಲ್ಲ ಎಂಬಷ್ಟು ಹ್ಯಾಪಿಯಾಗಿ ಪತಿ ಅಭಿಷೇಕ್ ಜೊತೆ ಐಶ್ವರ್ಯಾ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿದ ನಿವೇದಿತಾಗೆ ಕಾಲೆಳೆದ ನೆಟ್ಟಿಗರು
ಇತ್ತೀಚೆಗೆ ಪತ್ನಿ ಐಶ್ವರ್ಯಾ ಮತ್ತು ಪುತ್ರಿ ಆರಾಧ್ಯ ಜೊತೆ ಅಭಿಷೇಕ್ ಬಚ್ಚನ್ ಅವರು ಸಂಬಂಧಿಕರ ಮದುವೆಗೆ ಹಾಜರಿ ಹಾಕಿದ್ದರು. ಈ ವೇಳೆ, ಐಶ್ವರ್ಯಾ ಜೋಡಿ ಕಜರಾರೇ ಹಿಂದಿ ಹಾಡಿಗೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅಭಿಷೇಕ್ ಮತ್ತು ಐಶ್ವರ್ಯಾ ಕಜರಾರೆ ಹಾಡಿನ ಹುಕ್ ಸ್ಟೆಪ್ಸ್ ಹಾಕ್ತಾ ಎಂಜಾಯ್ ಮಾಡಿದ್ದಾರೆ. ಇವರೊಂದಿಗೆ ಪುತ್ರಿ ಆರಾಧ್ಯ ಕೂಡ ಡ್ಯಾನ್ಸ್ ಮಾಡಿದ್ದಾರೆ. ಈ ಮೂಲಕ ಡಿವೋರ್ಸ್ ಸುದ್ದಿ ಹಬ್ಬಿಸುವವರ ಬಾಯಿ ಮುಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ಐಶ್ವರ್ಯ ರೈ ಕಾರಿಗೆ ಬಸ್ ಡಿಕ್ಕಿ – ನಟಿ ಸೇಫ್
ಅಂದಹಾಗೆ, ಅಭಿಷೇಕ್ ಮತ್ತು ಐಶ್ವರ್ಯಾ ರೈ ಅವರು 2007ರಲ್ಲಿ ಮದುವೆಯಾದರು. ಮುದ್ದಾದ ಮಗಳು ಆರಾಧ್ಯ ಜೊತೆ ಈ ಜೋಡಿ ಖುಷಿಯಿಂದ ಜೀವನ ನಡೆಸುತ್ತಿದ್ದಾರೆ.
ಹೊಸ ಪಾತ್ರಗಳ ಮೂಲಕ ಅಭಿಷೇಕ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಐಶ್ವರ್ಯಾ ರೈ ಅವರು ಮದುವೆ ಬಳಿಕ ಕಮ್ಮಿ ಸಿನಿಮಾ ಮಾಡಿದ್ರೂ ಕೂಡ ವಿಭಿನ್ನ ಎಂದೆನಿಸುವ ಪಾತ್ರಗಳ ಮೂಲಕ ಬರುತ್ತಿದ್ದಾರೆ. ಅದಕ್ಕೆ ‘ಪೊನ್ನಿಯನ್ ಸೆಲ್ವನ್ 1’ ಮತ್ತು ‘ಪೊನ್ನಿಯನ್ ಸೆಲ್ವನ್ 2’ ಸಿನಿಮಾಗಳೇ ಸಾಕ್ಷಿ.
ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮದುವೆ (Marriage) ವಿಚಾರ ಹಲವು ಬಾರಿ ಚರ್ಚೆಗೆ ಬಂದಿದೆ. ಅದರಲ್ಲೂ ಕನ್ನಡತಿ ರಶ್ಮಿಕಾ ಮಂದಣ್ಣ ಜೊತೆ ಲವ್ವಿಡವ್ವಿ ವಿಚಾರ ಬಂದಾಗೆಲ್ಲ ಮದುವೆ ಬಗ್ಗೆ ಪ್ರಶ್ನೆಗಳನ್ನು ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ತಮ್ಮ ಮದುವೆಯ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮದುವೆಗೆ ಹೇಗಿರಬೇಕು ಎಂದು ಅವರು ಹೇಳಿಕೊಂಡಿದ್ದಾರೆ.
ಸಮಂತಾ ಮತ್ತು ವಿಜಯ್ ನಟನೆಯ ಖುಷಿ ಸಿನಿಮಾದ ಹಾಡೊಂದು ಬಿಡುಗಡೆಯಾಗಿದೆ. ‘ಆರಾಧ್ಯ..’ (Aradhya) ಎಂದು ಶುರುವಾಗುವ ಹಾಡಿನಲ್ಲಿ ಸಮಂತಾ ಜೊತೆ ವಿಜಯ್ ಖುಷಿ ಖುಷಿಯಾದ ಕ್ಷಣಗಳನ್ನು ಕಳೆದಿದ್ದಾರೆ. ತುಂಟಾಟ, ರೊಮ್ಯಾನ್ಸ್, ಪ್ರೀತಿ, ಪ್ರೇಮ ಹೀಗೆ ಎಲ್ಲವೂ ಹದವಾಗಿ ಬೆರೆತಿದೆ. ಈ ಹಾಡನ್ನು ತೋರಿಸುವ ಮೂಲಕ ವಿಜಯ್, ನನ್ನ ಮದುವೆ ಮತ್ತು ಜೀವನ ಹೀಗೆಯೇ ಇರಬೇಕು ಎಂದು ಹೇಳಿಕೊಂಡಿದ್ದಾರೆ.
ಮದುವೆ ಬಗ್ಗೆ ನನಗೂ ನನ್ನದೇ ಆದ ಕನಸುಗಳು ಇವೆ. ಈ ಕನಸುಗಳು ಥೇಟ್ ಖುಷಿ ಸಿನಿಮಾದ ಹಾಡಿನಂತಿದೆ. ಒಂದು ವೇಳೆ ಮದುವೆ ಅಂತಾದರೆ, ಈ ಹಾಡಿನಂತಿಯೇ ನನ್ನ ಬದುಕು ಕೂಡ ಇರಲಿದೆ ಎಂದು ಮದುವೆ ವಿಚಾರ ಮಾತನಾಡಿದ್ದಾರೆ. ತಮ್ಮದೇ ಸಿನಿಮಾದ ಪಾತ್ರವೊಂದನ್ನು ಕನಸಾಗಿ ಅವರು ಸ್ವೀಕರಿಸಿದ್ದಾರೆ.
ಈ ಹಿಂದೆ ವಿಜಯ್ ದೇವರಕೊಂಡ ಹುಟ್ಟುಹಬ್ಬದ (Birthday) ದಿನದಂದು ಸ್ಪೆಷಲ್ ಆಗಿ ಖುಷಿ ಸಿನಿಮಾದ ಮೊದಲ ಹಾಡು (Song) ರಿಲೀಸ್ ಮಾಡಲಾಗಿತ್ತು. ‘ನನ್ನ ರೋಜಾ ನೀನೇ’ (Nanna Roja Neene) ಎಂಬ ಮೆಲೋಡಿ ಟ್ರ್ಯಾಕ್ ಬಿಡುಗಡೆಯಾಗಿದ್ದು, ಕೇಳುಗರನ್ನು ಇಂಪ್ರೆಸ್ ಮಾಡಿತ್ತು. ಈ ಹಾಡು ಕೂಡ ಅಷ್ಟೇ ಬ್ಯೂಟಿಫುಲ್ ಆಗಿ ಮೂಡಿ ಬಂದಿತ್ತು.
ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಈ ಹಾಡಿಗೆ ಹೇಶಾಮ್ ಅಬ್ದುಲ್ ವಹಾಬ್ ಧ್ವನಿಯಾಗುವುದರ ಜೊತೆಗೆ ಟ್ಯೂನ್ ಹಾಕಿದ್ದಾರೆ. ಲವರ್ ಬಾಯ್ ಆಗಿ ವಿಜಯ್ ದೇವರಕೊಂಡ (Vijay Devarakonda) ಕಾಣಿಸಿಕೊಂಡಿದ್ದು, ಸಮಂತಾ (Samantha) ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾಶ್ಮೀರ ಭಾಗದಲ್ಲಿ ಇಡೀ ಸಾಂಗ್ ಅನ್ನು ಚಿತ್ರೀಕರಿಸಲಾಗಿದೆ. ಇದನ್ನೂ ಓದಿ:ಕಣ್ಣು ಕುಕ್ಕುವಂತೆ ಪಡ್ಡೆಹುಡುಗರ ನಿದ್ದೆಗೆಡಿಸಿದ ಸೇಸಮ್ಮ ನಯಾ ಲುಕ್
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನಿರ್ವಣ (Shiva Nirvana) ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ, ಪತಿ ಅಭಿಷೇಕ್ ಬಚ್ಚನ್ ಮತ್ತು ಮಗಳು ಆರಾಧ್ಯ ಶುಕ್ರವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ಯಾರಿಸ್ ಫ್ಯಾಷನ್ ವೀಕ್ ಆಯೋಜಿಸಿದ್ದ ಔಟ್ ಡೋರ್ ರನ್ ವೇ ಶೋನ ಲೆ ಡಿಫಿಲೀ ಲೋರಿಯನ್ ಪ್ಯಾರಿಸ್‍ನ ನಾಲ್ಕನೇ ಆವೃತ್ತಿಗೆ ಕುಟುಂಬ ಸಮೇತ ಐಶ್ವರ್ಯಾ ರೈ ಪ್ಯಾರೀಸ್‍ಗೆ ಹಾರಿದ್ದಾರೆ. ಸುಮಾರು ಎರಡು ವರ್ಷಗಳ ಬಳಿಕ ಐಶ್ವರ್ಯಾ ರೈ ಇದೇ ಮೊದಲ ಬಾರಿಗೆ ಪ್ರವಾಸ ಕೈಗೊಂಡಿದ್ದಾರೆ.
ಈ ವೇಳೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡ ಮಗಳ ಕೈ ಹಾಗೂ ಲಗೇಜ್ ಹಿಡಿದುಕೊಂಡು ಮುಂದೆ ಸಾಗಿದರು. ಅಭಿಷೇಕ್ ಬಚ್ಚನ್ ಗ್ರೆ ಕಲರ್ ಡ್ರೆಸ್ ತೊಟ್ಟಿದ್ದರೆ, ಐಶ್ವರ್ಯಾ ರೈ ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದರು.
ಬೆಂಗಳೂರು: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಕುಟುಂಬ ಸಮೇತ ಇತ್ತೀಚೆಗಷ್ಟೇ ತಮ್ಮ ಸೋದರ ಸಂಬಂಧಿ ಶ್ಲೋಕ್ ಶೆಟ್ಟಿ ವಿವಾಹ ಸಮಾರಂಭಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಐಶ್ವರ್ಯ ರೈ ಹಾಗೂ ಅಭಿಷೇಕ್‍ರೊಂದಿಗೆ ಮುದ್ದಿನ ಮಗಳು ಆರಾಧ್ಯ, ಅಪ್ಪ ಅಭಿನಯಿಸಿದ್ದ ದೋಸ್ತಾನಾ ಸಿನಿಮಾದ ದೇಸಿ ಗರ್ಲ್ ಸಾಂಗ್‍ಗೆ ಸ್ಟೇಜ್ ಮೇಲೆ ಹೆಜ್ಜೆ ಹಾಕಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಹೌದು, ಹಲವು ದಿನಗಳ ಬಳಿಕ ಇತ್ತೀಚೆಗಷ್ಟೇ ನಟಿ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಮದುವೆ ಸಮಾರಂಭವೊಂದಕ್ಕೆ ಹಾಜರಾಗಿದ್ದರು. ಈ ವೇಳೆ ಬಚ್ಚನ್ ಕುಟುಂಬ ಡೇಸಿ ಗರ್ಲ್ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ವಿಶೇಷವೆಂದರೆ ಒಂದೇ ವೇದಿಕೆಯಲ್ಲಿ ಅಭಿಷೇಕ್, ಐಶ್ವರ್ಯ ಜೊತೆ ಮಗಳು ಆರಾಧ್ಯ ಕೂಡ ಒಟ್ಟಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋದಲ್ಲಿ 9 ವರ್ಷದ ಆರಾಧ್ಯ ಡ್ಯಾನ್ಸ್ ಮಾಡುತ್ತಿರುವುದನ್ನು ನೋಡುತ್ತಿದ್ದರೆ ತಾಯಿಯಿಂದ ಈಗಲೇ ಮಗಳು ತರಬೇತಿ ಪಡೆದಿರುವಂತೆ ಕಾಣಿಸುತ್ತಿದೆ. ಅಲ್ಲದೆ ಮಗಳ ಡ್ಯಾನ್ಸ್ ನೋಡಿ ಐಶ್ವರ್ಯ ಆರಾಧ್ಯಳ ತಬ್ಬಿ ಮುದ್ದಾಡಿದ್ದಾರೆ.
ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ಸಂಪ್ರದಾಯಿಕ ಉಡುಪು ಧರಿಸಿದ್ದಾರೆ. ಇದೀಗ ಬಚ್ಚನ ಕುಟುಂಬದ ಡ್ಯಾನ್ಸ್ ವೀಡಿಯೋ ಬಿ-ಟೌನ್‍ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವೀಡಿಯೋಗೆ ಅಭಿಮಾನಿಗಳಿಂದ ಕಮೆಂಟ್‍ಗಳ ಸುರಿಮಳೆಯೇ ಹರಿದು ಬರುತ್ತಿದೆ. ಆರಾಧ್ಯ ಪಿಂಕ್ ಕಲರ್ ಲೆಹೆಂಗಾದಲ್ಲಿ ಮಿಂಚಿದ್ದಾರೆ. ಆರಾಧ್ಯ ಡ್ಯಾನ್ಸ್ ಮಾಡಿದ ಹಾಡು 2008ರಲ್ಲಿ ತೆರೆಕಂಡ ದೋಸ್ತಾನಾ ಸಿನಿಮಾದ ಡೇಸಿ ಗರ್ಲ್ ಹಾಡಗಿದ್ದು, ಈ ಸಿನಿಮಾದಲ್ಲಿ ನಟ ಅಭಿಷೇಕ್ ಬಚ್ಚನ್, ಪ್ರಿಯಾಂಕ ಚೋಪ್ರಾ, ಜಾನ್ ಅಬ್ರಹಾಂ ಅಭಿನಯಿಸಿದ್ದರು.
ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.
T 3607 – T 3607 – अपनी छोटी बिटिया , और बहुरानी को ,अस्पताल से मुक्ति मिलने पर ; मैं रोक ना पाया अपने आंसू 🙏 प्रभु तेरी कृपा अपार , अपरम्पार 🙏🙏
ಸೋಮವಾರ ಸಂಜೆ ಪುತ್ರಿ ಮತ್ತು ಪತ್ನಿ ಮುಂಬೈನ ನಾನಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ವಿಷಯವನ್ನು ಅಭಿಷೇಕ್ ಬಚ್ಚನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. “ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ರು.
Thank you all for your continued prayers and good wishes. Indebted forever. 🙏🏽 Aishwarya and Aaradhya have thankfully tested negative and have been discharged from the hospital. They will now be at home. My father and I remain in hospital under the care of the medical staff.
ಜುಲೈ 11ರಂದು ಅಭಿಷೇಕ್ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಮರುದಿನ ಅಂದ್ರೆ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ಖಚಿತವಾಗಿತ್ತು. ಹಾಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
“ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ದಾರೆ.
ಜು. 11 ರಂದು ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‍ಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ನಟಿ ಐಶ್ವರ್ಯಾ ರೈ ಅವರಿಗೂ ಮತ್ತು ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
Thank you all for your continued prayers and good wishes. Indebted forever. 🙏🏽 Aishwarya and Aaradhya have thankfully tested negative and have been discharged from the hospital. They will now be at home. My father and I remain in hospital under the care of the medical staff.
ಮಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಅವರು ತಮ್ಮ ತವರೂರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ.
ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗಳು ಆರಾಧ್ಯ, ತಾಯಿ ಬೃಂದಾ ರೈ ಜೊತೆ ಪಾಲ್ಗೊಂಡಿದ್ದರು. ಐಶ್ವರ್ಯಾ ರೈ ತಾಯಿ ಬೃಂದಾ ರೈ ಅವರ ಸೋದರನ ಮಗಳ ಮದುವೆ ಸಮಾರಂಭವಾಗಿತ್ತು.
ಸಮಾರಂಭದಲ್ಲಿ ತುಳುನಾಡಿನ ಸಂಪ್ರದಾಯದಂತೆ ನಟಿ ಐಶ್ವರ್ಯಾ ಹಿರಿಯರ ಕಾಲಿಗೆರಗಿ ಆಶೀರ್ವಾದ ಪಡೆದ್ರು. ನಟಿ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ರೆ, ಮಗಳು ಆರಾಧ್ಯ ಕೂಡ ಅದೇ ಬಣ್ಣದ ಡ್ರೆಸ್ ನಲ್ಲಿ ಮಿಂಚುತ್ತಿದ್ದಳು.
ಒಟ್ಟಿನಲ್ಲಿ ಸದ್ದಿಲ್ಲದೇ ತವರೂರಿಗೆ ಆಗಮಿಸಿದ ನಟಿ ಐಶ್ವರ್ಯಾ ಮದುವೆ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು.
ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ತಾರೆಹಾಗೂ ನೀಲಿಕಣ್ಣಿನ ಚೆಲುವೆ ಐಶ್ವರ್ಯಾ ರೈಗೆ ಇಂದು 44ನೇ ಹುಟ್ಟು ಹಬ್ಬದ ಸಂಭ್ರಮ. ಆದ್ರೆ ಈ ಬಾರಿ ರೈಯವರು ತಮ್ಮ ಹುಟ್ಟುಹಬ್ಬವನ್ನು ಅಷ್ಟೊಂದು ಅದ್ಧೂರಿಯಾಗಿ ಆಚರಿಸುತ್ತಿಲ್ಲ.
ಕಳೆದ ಮಾರ್ಚ್‍ನಲ್ಲಿ ಐಶ್ವರ್ಯಾ ರೈ ಅವರ ತಂದೆ ಕೃಷ್ಣ ರಾಜ್ ರೈ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಐಶ್ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಮೂಲಗಳ ಪ್ರಕಾರ ಐಶ್ವರ್ಯಾ ರೈ ಇಂದು ತಮ್ಮ ಇಡೀ ದಿನವನ್ನು ಕುಟುಂಬದೊಂದಿಗೆ ಕಳೆಯಲಿದ್ದಾರೆ. ಬೆಳಗ್ಗೆ ಮಗಳು ಆರಾಧ್ಯಳನ್ನು ಶಾಲೆಗೆ ಡ್ರಾಪ್ ಮಾಡಿ ಅಲ್ಲಿಂದ ನೇರವಾಗಿ ಮುಂಬೈನಲ್ಲಿರೋ ಬಾಂದ್ರಾ ಅಪಾರ್ಟ್‍ನಲ್ಲಿ ನೆಲೆಸಿರೋ ತನ್ನ ತಾಯಿಯ ಜೊತೆ ಅಮೂಲ್ಯ ಸಮಯ ಕಳೆಯಲಿದ್ದಾರೆ. ನಂತ್ರ ನಗರದಲ್ಲಿರೋ ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಲಿದ್ದಾರೆ ಅಂತ ಐಶ್ವರ್ಯಾ ಆಪ್ತ ಮೂಲಗಳು ತಿಳಿಸಿವೆ.
ಇತ್ತ ಪತಿ ಅಭಿಷೇಕ್ ಬಚ್ಚನ್ ಹಾಗೂ ಮಗಳು ಆರಾಧ್ಯ ಸೇರಿ ಐಶ್ವರ್ಯಾ ರೈ ನೆಚ್ಚಿನ ಕೇಕ್ ಆರ್ಡರ್ ಮಾಡಿದ್ದಾರೆ. ಇಂದು ಸಂಜೆ ಕುಟುಂಬದೊಂದಿಗೆ ಇದ್ದು ಐಶ್ವರ್ಯಾ ಈ ಕೇಕ್ ಕತ್ತರಿಸಿ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಪ್ರತಿ ವರ್ಷ ಐಶ್ವರ್ಯಾ ರೈ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಕಳೆದ ವರ್ಷ ತಮ್ಮ ಬರ್ತ್ ಡೇ ದಿನದಂದು ಸುಮಾರು 100 ಸೀಳು ತುಟಿಯ ಮಕ್ಕಳ ಸರ್ಜರಿಗೆ ಧನಸಹಾಯ ಮಾಡಿದ್ದರು. ಈ ಬಾರಿ ಅನಾಥ ಮಕ್ಕಳಿಗೆ ಅನ್ನದಾನ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕದ ಮಂಗಳೂರಿನಲ್ಲಿ ತಂದೆ ಕೃಷ್ಣರಾಜ್ ರೈ ಮತ್ತು ತಾಯಿ ಬೃಂದಾ ರೈ ಮಗಳಾಗಿ 1973ರ ನವೆಂಬರ್ 1 ರಂದು ಐಶ್ವರ್ಯಾ ರೈ ಜನಿಸಿದ್ದಾರೆ. ಮುಂಬಯಿ ನಗರದಲ್ಲಿ ಡಿ ಜಿ ರೂಪಾರೆಲ್ ಕಾಲೇಜ್ ಮತ್ತು ಆರ್ಯ ವಿದ್ಯಾ ಕಾಲೇಜಿನಲ್ಲಿ ಓದಿದ ಐಶ್ವರ್ಯಾ ಒಂಬತ್ತನೆಯ ತರಗತಿಯಲ್ಲಿ ಇದ್ದ ಸಂದರ್ಭದಲ್ಲಿಯೇ ಕ್ಯಾಮೆಲಿನ್ ಸಂಸ್ಥೆಗೆ ಮಾಡೆಲ್ ಆಗಿ ಕೆಲಸ ಮಾಡಿದ್ದರು. ನಂತರ ಅನೇಕ ಜಾಹೀರಾತುಗಳಲ್ಲಿ ನಟಿಸಿದ ಐಶ್ವರ್ಯಾ ಪ್ರಪಂಚಸುಂದರಿ ಪ್ರಶಸ್ತಿಯನ್ನು ಗೆದ್ದ ಮೇಲೆ ಪ್ರಸಿದ್ಧರಾದರು. ಇದರ ನಂತರ ಅನೇಕ ಚಿತ್ರಗಳಲ್ಲಿ ಮತ್ತು ಜಾಹೀರಾತುಗಳಲ್ಲಿ ನಟಿಸಿದ್ದಾರೆ.
2007ರಲ್ಲಿ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ವಿವಾಹದ ನಟಿ ಐಶ್ವರ್ಯಾ ರೈ 2011ರ ನವೆಂಬರ್ 16ರಂದು ಆರಾಧ್ಯಳಿಗೆ ಜನ್ಮ ನೀಡಿದ್ದರು.