Tag: Araga Jnanedra

  • `ಕಾಂತಾರ’ ವಿವಾದದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

    `ಕಾಂತಾರ’ ವಿವಾದದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

    ಚಿತ್ರರಂಗದಲ್ಲಿ `ಕಾಂತಾರ’ (Kantara Film) ಭರ್ಜರಿಯಾಗಿ ಸೌಂಡ್ ಮಾಡುತ್ತಿದೆ. `ಕಾಂತಾರ’ ಆರ್ಭಟಕ್ಕೆ ಇತರೆ ಸಿನಿಮಾಗಳು ಡಲ್ ಹೊಡೆದಿದೆ. ದೈವ ಅಪ್ಪಟ ಕಥೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ನಡುವೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಚೇತನ್ ಹೇಳಿಕೆ ವಿವಾದ ಸೃಷ್ಟಿಸಿದೆ. ಇದೀಗ ಚೇತನ್ ಹೇಳಿಕೆಯನ್ನ ನಾನು ಒಪ್ಪೋದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Gnanendra) ಪ್ರತಿಕ್ರಿಯೆ ನೀಡಿದ್ದಾರೆ.

    ಚಂದನವನದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾಗೆ ಇಡೀ ಚಿತ್ರರಂಗವೇ ತಲೆಬಾಗಿದೆ. ಪರಭಾಷೆಯ ಸ್ಟಾರ್‌ಗಳು ಕೂಡ ಕನ್ನಡದ `ಕಾಂತಾರ’ ಸಿನಿಮಾವನ್ನು ಹಾಡಿಹೊಗಳಿದ್ದಾರೆ. ಹೀಗಿರುವಾಗ ನಟ ಚೇತನ್ ಮಾತಿಗೆ ಆರಗ ಜ್ಞಾನೇಂದ್ರ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:BREAKING:`ಕಾಂತಾರ’ ಪಾರ್ಟ್ 2 ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ರು ನಟ ಪ್ರಮೋದ್ ಶೆಟ್ಟಿ

    ಎಲ್ಲರಿಗೂ ವಾಕ್ ಸ್ವಾತಂತ್ರ‍್ಯ ಇರುತ್ತೆ ಮಾತಾಡಿಕೊಳ್ಳಲಿ  ಬೇಕಾದ್ರೆ. ಆದರೆ ಚೇತನ್‌ ಮಾತನ್ನ ನಾನು ಒಪ್ಪೋದಿಲ್ಲ ಎಂದು ಖಡಕ್‌ ಉತ್ತರ ಕೊಟ್ಟಿದ್ದಾರೆ. `ಕಾಂತಾರ’ (Kantara Film) ಸಿನಿಮಾ ನಾನು ನೋಡಿದೆ ತುಂಬಾ ಚೆನ್ನಾಗಿದೆ. ನಮ್ಮ ಮಲೆನಾಡಿನ ಸೊಗಡನ್ನ ತೋರಿಸಿದ್ದಾರೆ ಎಂದು ಹೇಳಿದ್ದಾರೆ. ಸಿನಿಮಾವೊಂದರ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಚೇತನ್ ವಿವಾದ ಕುರಿತು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಭಿವೃದ್ಧಿ ಪೂರಕ, ಚಲನಶೀಲ ಬಜೆಟ್: ಆರಗ ಜ್ಞಾನೇಂದ್ರ

    ಅಭಿವೃದ್ಧಿ ಪೂರಕ, ಚಲನಶೀಲ ಬಜೆಟ್: ಆರಗ ಜ್ಞಾನೇಂದ್ರ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23 ಸಾಲಿನ ಆಯವ್ಯಯ ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ಧಿ ದೃಷ್ಟಿಕೋನವನ್ನು ಹೊಂದಿದ್ದು, ಪ್ರಗತಿಗೆ ಪೂರಕವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ಇದೊಂದು ಅಭಿವೃದ್ಧಿ ಪೂರಕ, ಚಲನಶೀಲ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಭರವಸೆ ಮೂಡಿಸುವ ಆಯವ್ಯಯವಾಗಿದೆ. ಮಾರಕ ಕೊರೊನಾ ಸಾಂಕ್ರಮಿಕ ರೋಗದಿಂದ ಕರ್ನಾಟಕವೂ ಸೇರಿದಂತೆ ಇಡೀ ವಿಶ್ವವೇ ಆರ್ಥಿಕವಾಗಿ ತತ್ತರಿಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ತಮಗಿರುವ ಅಪಾರ ಆಡಳಿತ ಜ್ಞಾನ ಹಾಗೂ ಸಾಂವಿಧಾನಿಕ ಅನುಭವದ ಸ್ಪರ್ಶವನ್ನು ಆಯವ್ಯಯದಲ್ಲಿ ಕಾಣಿಸಿದ್ದಾರೆ ಎಂದರು. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

    ಅಭಿವೃದ್ಧಿಯಲ್ಲಿ ಇಡೀ ರಾಷ್ಟ್ರದಲ್ಲಿಯೇ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಆರ್ಥಿಕತೆಯ ಬೆನ್ನೆಲುಬಾಗಿರುವ ಮಾನವ ಸಂಪನ್ಮೂಲ, ಇಂಧನ, ನೀರವಾರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಹಿಂದುಳಿದ, ಪರಿಶಿಷ್ಟ ಜಾತಿ ಜನಾಂಗ ಹಾಗೂ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಚೈತನ್ಯ ಒದಗಿಸುವ ನಿಟ್ಟಿನಲ್ಲಿ ಈ ಆಯವ್ಯಯ ಭರವಸೆಯ ಬೆಳಕು ಎನಿಸಲಿದೆ ಎಂದು ಆರಗ ಜ್ಞಾನೇಂದ್ರ ನುಡಿದರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

  • ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ: ಅರಗ ಜ್ಞಾನೇಂದ್ರ

    ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ: ಅರಗ ಜ್ಞಾನೇಂದ್ರ

    ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

    ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇದನ್ನೂ ಓದಿ : 3 ದಿನಗಳ ಹಿಂದೆ ಝೀರೋ ಟ್ರಾಫಿಕ್ – ಇಂದು ಮಾಜಿ ಸಿಎಂಗೆ ಟ್ರಾಫಿಕ್ ಬಿಸಿ

    ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಇದನ್ನೂ ಓದಿ : ಡಿಸಿಎಂಗೆ ಇನ್ನೂ ಹೋಗಿಲ್ಲ ಝೀರೋ ಟ್ರಾಫಿಕ್ ಮೋಹ

    ಈ ಹಿಂದೆ ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದ ಜಿ ಪರಮೇಶ್ವರ ಅವರು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಿದ್ದು ಟೀಕೆ ಗುರಿಯಾಗಿತ್ತು. ಈ ಬಾರಿ ಪ್ರಮಾಣವಚನ ಸಮಾರಂಭಕ್ಕೆ ಶಶಿಕಲಾ ಜೊಲ್ಲೆಯವರು ತಡವಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಝೀರೋ ಟ್ರಾಫಿಕ್ ನಲ್ಲಿ ಬಂದಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು.