Tag: Aram Arvind Swamy

  • ಆರಾಮ್ ಅರವಿಂದ್ ಸ್ವಾಮಿ: ರೊಮ್ಯಾಂಟಿಕ್ ಹಾಡಿನಲ್ಲಿ ಅನೀಶ್ ತೇಜಶ್ವರ್

    ಆರಾಮ್ ಅರವಿಂದ್ ಸ್ವಾಮಿ: ರೊಮ್ಯಾಂಟಿಕ್ ಹಾಡಿನಲ್ಲಿ ಅನೀಶ್ ತೇಜಶ್ವರ್

    ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರೋ ಅನೀಶ್ ತೇಜೇಶ್ವರ್ ಆರಾಮ್ ಅರವಿಂದ ಸ್ವಾಮಿ ಸಿನಿಮಾ ಮೂಲಕ ರೋಮ್ಯಾಂಟಿಕ್ ಹೀರೋ ಆಗಿ ನಿಮ್ಮ ಮುಂದೆ ಬರ್ತಿದ್ದಾರೆ. ಆರಂಭದಿಂದಲೂ ವಿಭಿನ್ನ ಪ್ರಚಾರದ ಮೂಲಕ ಪ್ರೇಕ್ಷಕರನ್ನು ಗಮನಸೆಳೆಯುತ್ತಿರುವ ಚಿತ್ರತಂಡ ಈಗ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಆರಾಮ್ ಅರವಿಂದ ಸ್ವಾಮಿ ಸಿನಿಮಾ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ.

    ಮುಂದೆ ಹೇಗೋ ಕುಣಿದು ಅನೀಶ್ ಟೈಟಲ್ ಟ್ರ್ಯಾಕ್ ಮೂಲಕ ಜಬರ್ದಸ್ತ್ ಆಗಿ ಕುಣಿದಿದ್ದ ಅನೀಶ್ ತೇಜೇಶ್ವರ್ ಈಗ ಮುಂದೆ ಹೇಗೋ ಏನೋ ಎನ್ನುತ್ತಾ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಅನೀಶ್ ಗೆ ಮಿಲನಾ ನಾಗರಾಜ್ ಸಾಥ್ ಕೊಟ್ಟಿದ್ದು, ಮಲ್ಲು ಕುಟ್ಟಿಯಾಗಿ ಮಿಂಚಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯದ ಮೆಲೋಡಿ ಹಾಡಿಗೆ ನಿಹಾಲ್ ಟೌರೊ ಧ್ವನಿಯಾಗಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಹಾಡಿನ ಶ್ರೀಮಂತಿಕೆ ಹೆಚ್ಚಿಸಿದೆ.

    ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರೋ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್. ಬಿ. ಸಂಕಲನ ಈ ಸಿನಿಮಾಗಿದೆ. ಪ್ರಚಾರದ ಪಡಸಾಲೆಗೆ ಇಳಿದಿರುವ ಚಿತ್ರತಂಡ ಭರದಿಂದ ಪ್ರಚಾರ ನಡೆಸ್ತಿದೆ.

  • ಅನೀಶ್ ನಟನೆಯ ಸಿನಿಮಾದ ಮತ್ತೊಂದು ಸಾಂಗ್ ಬಿಡುಗಡೆಗೆ ರೆಡಿ

    ಅನೀಶ್ ನಟನೆಯ ಸಿನಿಮಾದ ಮತ್ತೊಂದು ಸಾಂಗ್ ಬಿಡುಗಡೆಗೆ ರೆಡಿ

    ರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗವೀಗ ಮೊದಲ ಹಾಡು ಬಿಡುಗಡೆ ಮಾಡುವ ತಯಾರಿಯಲ್ಲಿದೆ. ಶೀಘ್ರದಲ್ಲಿ ಆರಾಮ್ ಅರವಿಂದ ಸ್ವಾಮಿ ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣವಾಗಲಿದ್ದು, ಈ ಮೂಲಕ ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ನೀಡಲಿದೆ.

    ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿದೆ. ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ  ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಚಿತ್ರ ಇದಾಗಿದೆ. ಅನೀಶ್ ತೇಜೇಶ್ವರ್ ಗೆ ಜೋಡಿಯಾಗಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ.

    ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನ ಚಿತ್ರಕ್ಕಿದೆ. . ಬೆಂಗಳೂರು,  ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

  • ‘ಆರಾಮ್ ಅರವಿಂದ್ ಸ್ವಾಮಿ’ ತಂಡ ಸೇರಿಕೊಂಡ ಅರ್ಜುನ್ ಜನ್ಯ

    ‘ಆರಾಮ್ ಅರವಿಂದ್ ಸ್ವಾಮಿ’ ತಂಡ ಸೇರಿಕೊಂಡ ಅರ್ಜುನ್ ಜನ್ಯ

    ಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ಮಾಸ್ ಹೀರೋ ಆಗಿ ಮಿಂಚಿದ್ದ ಅನೀಶ್ ತೇಜೇಶ್ವರ್ ಇದೇ ಮೊದಲ ಬಾರಿಗೆ ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಟೈಟಲ್ ಮೂಲಕ ಗಮನ ಸೆಳೆದಿರುವ ಈ ಚಿತ್ರದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.

    ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ. ಚಿತ್ರತಂಡ ಅಧೀಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಅರ್ಜುನ್ ಜನ್ಯ ಎಂಟ್ರಿಯಿಂದ ಸಿನಿಮಾ ಮೇಲಿನ ನಿರೀಕ್ಷೆಯೂ ದುಪ್ಪಟ್ಟಾಗಿದೆ.

    ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ  ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.  ಇದನ್ನೂ ಓದಿ: ಅರವಿಂದ್- ದಿವ್ಯಾ ಉರುಡುಗ ಪ್ರೀತಿಗೆ 2 ವರ್ಷಗಳ ಸಂಭ್ರಮ

    ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.

  • ಅನೀಶ್ ಹೊಸ ಚಿತ್ರಕ್ಕೆ ನಾಯಕಿಯಾದ ಮಿಲನ ನಾಗರಾಜ್

    ಅನೀಶ್ ಹೊಸ ಚಿತ್ರಕ್ಕೆ ನಾಯಕಿಯಾದ ಮಿಲನ ನಾಗರಾಜ್

    ನಾಯಕ ನಟ ಅನೀಶ್ (Anish) ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾ ಖ್ಯಾತಿಯ ನಿರ್ದೇಶಕ ಅಭಿಷೇಕ್ ಶೆಟ್ಟಿ (Abhishek Shetty) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರೋ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ನಾಯಕ ನಟಿ ಯಾರೆಂಬುದನ್ನು ಚಿತ್ರತಂಡ ರಿವೀಲ್ ಮಾಡಿದೆ.

    ಲವ್ ಮಾಕ್ಟೇಲ್ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮಿಲನ ನಾಗರಾಜ್ (Milan Nagaraj) ‘ಆರಾಮ್ ಅರವಿಂದ್ ಸ್ವಾಮಿ’ (Aram Arvind Swamy) ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ನಾಯಕ ಅನೀಶ್  ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಮಿಲನ ನಾಗರಾಜ್ ಬಹಳ ವಿಭಿನ್ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಿ ಹುಡುಗಿ ಹಾಗೂ ಟೀಚರ್ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಮಿಲನ ನಾಗರಾಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಸದ್ಯದಲ್ಲೇ ಇಬ್ಬರ ಪೋಸ್ಟರ್ ರಿಲೀಸ್ ಮಾಡುವುದಾಗಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

    ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುತ್ತಿದ್ದು, ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ಗುಳ್ಟು ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಅನೀಶ್  ಇಲ್ಲಿವರೆಗಿನ ಸಿನಿಮಾಗಳಿಗಿಂತ ಭಿನ್ನವಾಗಿ  ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k