Tag: aravind kejirwal

  • ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್‍ನವರಿಗೆ ತಿಳಿದಿದೆಯೇ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.

    ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್‍ಗೆ ಬರಲು ಬಿಡಬೇಡಿ ಎಂಬ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರು ಇಂತಹ ಹೇಳಿಕೆಗಳನ್ನು ಹೇಗೆ ನೀಡುತ್ತಾರೆಂದು ನನಗೆ ದಿಗ್ಭ್ರಮೆಯಾಗಿದೆ ಎಂದು ಹೇಳಿದರು.

    ಉತ್ತರ ಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಕಾಂಗ್ರೆಸ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮತಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿ, ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ನಿನ್ನೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

  • ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಬಿಜೆಪಿ ಹಾಗೂ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

    ಉತ್ತರಪ್ರದೇಶ ಮತ್ತು ಬಿಹಾರದ ಜನರನ್ನು ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದರು.

    ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತವಾಗಿ ಚರಣ್‍ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚನ್ನಿ ಅವರ ನಾಮನಿರ್ದೇಶನದೊಂದಿಗೆ, ಪಂಜಾಬ್‍ನ ದಲಿತ ಮತದಾರರನ್ನು ಗೆಲ್ಲಲು ಕಾಂಗ್ರೆಸ್ ಯೋಚಿಸುತ್ತಿದೆ. ಪಂಜಾಬ್‍ನ ಜನಸಂಖ್ಯೆಯ ಶೇಕಡಾ 32ಕ್ಕಿಂತ ಹೆಚ್ಚು ದಲಿತರು ಇದ್ದಾರೆ. ಪಂಜಾಬ್‍ನಲ್ಲಿ ದಲಿತ ಸಮುದಾಯದಿಂದ ಚನ್ನಿ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

  • ಬಿಜೆಪಿಯಿಂದ ದೆಹಲಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ: ಅಮಿತ್ ಶಾ

    ಬಿಜೆಪಿಯಿಂದ ದೆಹಲಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ: ಅಮಿತ್ ಶಾ

    ನವದೆಹಲಿ: ದೆಹಲಿಯಲ್ಲಿ ಬಿಜೆಪಿಯಿಂದ ಮೂಲಸೌಕರ್ಯ ಸುಧಾರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

    ಶನಿವಾರ ಪಂಜಾಬಿ ಭಾಗ್‌ನಲ್ಲಿ ಭಾರತ್ ದರ್ಶನ್ ಪಾರ್ಕ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜಧಾನಿಯಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವಲ್ಲಿ ಕೇಂದ್ರ ಮತ್ತು ಬಿಜೆಪಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

    ಬಿಜೆಪಿ ಸರ್ಕಾರವು 31 ಖಾಲಿ ನಿವೇಶನಗಳನ್ನು ಉದ್ಯಾನಗಳಾಗಿ ಪರಿವರ್ತಿಸಿ ಅಭಿವೃದ್ಧಿಪಡಿಸಿದೆ. 27 ಒಳಚರಂಡಿ ಘಟಕಗಳನ್ನು ಅಭಿವೃದ್ಧಿ ಮಾಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ಗಳಿಗೆ ನೀವು 13,000 ಕೋಟಿ ರೂ. ಅನುದಾನ ನೀಡುತ್ತಿದ್ದರೆ, ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳು ಆಗಬೇಕಿತ್ತು ಎಂದು ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬಾಬರ್‌ನ ಆಕ್ರಮಣ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್‌ ಅರಿತಿದ್ದರು: ಮೋದಿ

    ಇಲ್ಲಿ ಎರಡು ರೀತಿಯ ಕೆಲಸದ ಸಂಸ್ಕೃತಿಗಳಿವೆ. ಒಂದು ವಾಸ್ತವಿಕವಾಗಿಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಮತ್ತು ಭರವಸೆಗಳನ್ನು ಈಡೇರಿಸುವುದು. ಇನ್ನೊಂದು ಬಾಯಿ ಮಾತಿಗಷ್ಟೇ ಅಭಿವೃದ್ಧಿ ಬಗ್ಗೆ ಹೇಳಿವುದು ಎಂದು ಕೇಜ್ರಿವಾಲ್ ಅವರನ್ನು ಪರೋಕ್ಷವಾಗಿ ಕುಟುಕಿದ್ದಾರೆ.

    ರಾಜಧಾನಿಯಲ್ಲಿರುವ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳಲ್ಲಿ ಬಿಜೆಪಿ ಸರ್ಕಾರವು ವಿವಿಧ ರೀತಿಯ ಕಲ್ಯಾಣ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

    ಈಗಾಗಲೇ 1,731 ಕಾಲೋನಿಗಳನ್ನು ಸರಿಪಡಿಸುವಂತಹ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಇದರಿಂದ 40 ಲಕ್ಷ ಜನರಿಗೆ ಪ್ರಯೋಜನ ಆಗಲಿದೆ. ಸ್ಲಂ ಪುನರ್ವಸತಿ ಯೋಜನೆಯ ಅಡಿಯಲ್ಲಿ ಮನೆಗಳನ್ನು ಒದಗಿಸುವ ಮೂಲಕ ಸಾವಿರಾರು ಸ್ಲಂ ನಿವಾಸಿಗಳಿಗೆ ಸೂರನ್ನು ಒದಗಿಸಲಾಗುತ್ತಿದೆ. ಕತ್‌ಪುಟ್ಲಿ ಕಾಲೋನಿ, ಕಲ್ಕಾಜಿ ಮತ್ತು ಜೈಲೋರ್‌ವಾಲಾ ಬಾಗ್‌ನಲ್ಲಿರುವ 85,000 ಜನರಿಗೆ ಇದರಿಂದ ಸಾಕಷ್ಟು ಪ್ರಯೋಜವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಸಂದರ್ಭದಲ್ಲಿ ಜನರು ಬಿಜೆಪಿಯನ್ನು ಅಪಹಾಸ್ಯ ಮಾಡುತ್ತಿದ್ದರು. ಆದರೇ ಜನ ಈಗ ದರ್ಶನಕ್ಕೆ ಹೋಗುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ ಎಂದಿದ್ರು ಸಾವರ್ಕರ್‌: ದಿಗ್ವಿಜಯ್‌ ಸಿಂಗ್‌

     

  • ನಟ ಪ್ರಕಾಶ್ ರೈಯಿಂದ ಕೇಜ್ರೀವಾಲ್ ಭೇಟಿ..!

    ನಟ ಪ್ರಕಾಶ್ ರೈಯಿಂದ ಕೇಜ್ರೀವಾಲ್ ಭೇಟಿ..!

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸ್ಪಷ್ಟಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಎಎಪಿ ಅಧ್ಯಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರನ್ನು ಭೇಟಿಯಾಗಿದ್ದಾರೆ.

    ಈ ಭೇಟಿಯ ಫೋಟೋವನ್ನು ಅರವಿಂದ್ ಕೇಜ್ರೀವಾಲ್ ಹಾಗೂ ಪ್ರಕಾಶ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಈ ನಾಯಕರು ಚರ್ಚೆ ನಡೆಸಿ, ಬಿಜೆಪಿ ವಿರುದ್ಧ ಮತ್ತೊಂದು ಅಲೆಯನ್ನು ಹುಟ್ಟು ಹಾಕಲಿದ್ದಾರೆ ಎಂದು ರಾಷ್ಟ್ರ ರಾಜಕಾರಣದಲ್ಲಿ ಇದೀಗ ತೀವ್ರ ಚರ್ಚೆಯಾಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?:
    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರನ್ನು ಭೇಟಿ ಮಾಡಿದೆ. ರಾಜಕೀಯ ಮೊದಲ ಬಾರಿಗೆ ಪಾದಾರ್ಪನೆ ಮಾಡಿದ ನನಗೆ ಬೆಂಬಲ ನೀಡಲು ಮುಂದಾದ ಆಮ್ ಆದ್ಮಿ ಪಾರ್ಟಿಗೆ (ಎಎಪಿ) ಧನ್ಯವಾದಗಳು. ವಿವಿಧ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದೇವೆ. ಸಮಸ್ಯೆಗಳ ಬಗ್ಗೆ ಅವರ ತಂಡ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಕೋರಿದ್ದೇನೆ. ಲೋಕಸಭಾ ಚುನಾವಣೆಗೆ ಬೆಂಗಳೂರು ಸೆಂಟರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಸಿಟಿಜನ್ಸ್ ವಾಯ್ಸ್ ಪಾರ್ಲಿಮೆಂಟ್‍ನಲ್ಲಿ ಸದ್ದು ಮಾಡಲಿದೆ ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.

    ಪ್ರಕಾಶ್ ರೈ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿ, ಪ್ರಕಾಶ್ ರೈ ಅವರಂತಹ ವ್ಯಕ್ತಿಗಳು ಸಂಸತ್ತಿಗೆ ಬರಬೇಕು. ನಿಮ್ಮ ಭೇಟಿ ಸಂತಸ ತಂದಿದ್ದು, ಎಎಪಿ ನಿಮ್ಮ ಬೆಂಬಲಕ್ಕೆ ನಿಲ್ಲುತ್ತದೆ. ಜೊತೆಗೆ ನೀನು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯುತ್ತಿರುವುದನ್ನು ಒಪ್ಪುತ್ತೇನೆ ಹಾಗೂ ಬೆಂಬಲಿಸುತ್ತೇನೆ. ಸಂಸತ್ತಿಗೆ ಸ್ವತಂತ್ರ ಅಭ್ಯರ್ಥಿಗಳು ಹಾಗೂ ನಿಸ್ಪಕ್ಷಪಾತವಾಗಿ ಹೋರಾಡುವವರು ಬೇಕಾಗಿದ್ದಾರೆ ಎಂದು ರೀಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv