Tag: Aravind Kumar

  • ಸುಪ್ರೀಂಕೋರ್ಟ್ ಜಡ್ಜ್ ಆಗಿ ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಪ್ರಮಾಣ ವಚನ ಸ್ವೀಕಾರ

    ಸುಪ್ರೀಂಕೋರ್ಟ್ ಜಡ್ಜ್ ಆಗಿ ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ನ್ಯಾ. ಅರವಿಂದ್ ಕುಮಾರ್ (Justice Aravind Kumar), ನ್ಯಾ. ರಾಜೇಶ್ ಬಿಂದಾಲ್ (Justice Rajesh Bindal) ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಇಬ್ಬರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಇಬ್ಬರು ನ್ಯಾಯಾಧೀಶರ ನೇಮಕದಿಂದ ಸದ್ಯ ಸುಪ್ರೀಂಕೋರ್ಟ್ ನಲ್ಲಿ ಪೂರ್ಣ ಪ್ರಮಾಣ (34) ನ್ಯಾಯಾಧೀಶರ ಹುದ್ದೆ ಭರ್ತಿಯಾಗಿದೆ.

    ಹಾಸನ ಮೂಲದ ನ್ಯಾ.ಅರವಿಂದ್ ಕುಮಾರ್ ಅವರನ್ನು ಜೂನ್ 2009 ರಲ್ಲಿ ಕರ್ನಾಟಕ ಹೈಕೋರ್ಟ್ (Karnataka Highcourt) ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಗಿತ್ತು, ಡಿಸೆಂಬರ್ 2012 ರಲ್ಲಿ ಖಾಯಂ ನ್ಯಾಯಾಧೀಶರಾಗಿ ದೃಢೀಕರಿಸಲಾಯಿತು. ಅಕ್ಟೋಬರ್ 2021 ರಲ್ಲಿ ಗುಜರಾತ್‍ನ ಗುಜರಾತ್ ಹೈಕೋರ್ಟ್ )Gujrath Highcourt) ನ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲ್ಪಟ್ಟರು.

    ನ್ಯಾ.ರಾಜೇಶ್ ಬಿಂದಾಲ್ ಅವರನ್ನು ಮಾರ್ಚ್ 2006 ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ನ್ಯಾಯಾಧೀಶರಾಗಿ ನೇಮಿಸಲಾಯಿತು ಬಳಿಕ ಅಕ್ಟೋಬರ್ 2021 ರಲ್ಲಿ ಅಲಹಾಬಾದ್ ಹೈಕೋರ್ಟ್ (Alahabad Highcourt) ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಹಿರಿತನದ ಪ್ರಕಾರ, ನ್ಯಾಯಮೂರ್ತಿ ಬಿಂದಾಲ್ ಅವರು ಹೈಕೋರ್ಟ್‍ನಲ್ಲಿ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದರು. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

    ನ್ಯಾ.ರಾಜೇಶ್ ಬಿಂದಾಲ್ ಹೆಸರು ಶಿಫಾರಸು ಮಾಡುವಾಗ ಅತಿದೊಡ್ಡ ಹೈಕೋರ್ಟ್‍ಗಳಲ್ಲಿ ಒಂದಾಗಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ಗೆ ಸುಪ್ರೀಂ ಕೋರ್ಟ್ (Supreme Court) ನಲ್ಲಿ ಸಮರ್ಪಕವಾಗಿ ಪ್ರಾತಿನಿಧ್ಯವಿಲ್ಲ ಎಂದು ಕೊಲಿಜಿಯಂ ಗಮನಿಸಿತ್ತು. ಅಖಿಲ ಭಾರತ ಹಿರಿತನದ ಪ್ರಕಾರ, ನ್ಯಾ. ಅರವಿಂದ ಕುಮಾರ್ ಪ್ರಸ್ತುತ ಹೈಕೋರ್ಟ್ ನ್ಯಾಯಾಧೀಶರಲ್ಲಿ 26 ನೇ ಹಿರಿಯ-ಅತ್ಯಂತ ನ್ಯಾಯಾಧೀಶರಾಗಿದ್ದಾರೆ. ಇದಲ್ಲದೆ, ಪ್ರಸ್ತುತ ಕರ್ನಾಟಕ ಹೈಕೋರ್ಟ್‍ನಿಂದ ಬಂದಿರುವ ನ್ಯಾಯಾಧೀಶರಲ್ಲಿ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಶಿಫಾರಸು

    ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಶಿಫಾರಸು

    ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂ 8 ಹೈಕೋರ್ಟ್‍ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಹೆಸರುಗಳನ್ನು ಶಿಫಾರಸು ಮಾಡಿದ್ದು, ಜೊತೆಗೆ 5 ನ್ಯಾಯಮೂರ್ತಿಗಳ ವರ್ಗಾವಣೆಗೆ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನೀಡಿದ ಶಿಫಾರಸು ಪಟ್ಟಿಯಲ್ಲಿ ರಾಜ್ಯ ಹೈಕೋರ್ಟ್‍ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಅರವಿಂದ್ ಕುಮಾರ್ ಹೆಸರು ಕೂಡ ಇದ್ದು ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.

    ಸೆಪ್ಟೆಂಬರ್ 16 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದೀಗ ಗುಜರಾತ್ ಹೈಕೋರ್ಟ್ ಮುಖ್ಯ ನಾಯಮೂರ್ತಿ ಸ್ಥಾನಕ್ಕೆ ಕನ್ನಡಿಗರಾದ ನ್ಯಾ.ಅರವಿಂದ್ ಕುಮಾರ್ ನೇಮಕವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

    ನ್ಯಾ.ಅರವಿಂದ್ ಕುಮಾರ್, 1987 ರಲ್ಲಿ ವಕೀಲರಾಗಿ ಸೇವೆ ಆರಂಭಿಸಿ, 4 ವರ್ಷಗಳ ಕಾಲ ಸಿವಿಲ್ ನ್ಯಾಯಾಲಯಗಳು, ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು, ಮೇಲ್ಮನವಿ ನ್ಯಾಯಮಂಡಳಿಗಳಲ್ಲಿ ಕಾರ್ಯ ನಿರ್ವಹಿಸದರು. ಬಳಿಕ ಅವರು ಹೈಕೋರ್ಟ್‍ನಲ್ಲಿ ತಮ್ಮ ವಕೀಲಿ ವೃತ್ತಿ ಮುಂದುವರಿಸಿದರು. 1999 ರಲ್ಲಿ ರಾಜ್ಯ ಹೈಕೋರ್ಟ್‍ನಲ್ಲಿ ಹೆಚ್ಚುವರಿ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ ನೇಮಕಗೊಂಡಿದ್ದರು. ಇದನ್ನೂ ಓದಿ: ವಾಯು ಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿ.ಆರ್ ಚೌಧರಿ ನೇಮಕ

    2002ರಲ್ಲಿ ಪ್ರಾದೇಶಿಕ ನೇರ ತೆರಿಗೆ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಬಳಿಕ ಅವರು, ಆದಾಯ ತೆರಿಗೆ ಇಲಾಖೆಗೆ ಸ್ಥಾಯಿ ಸಲಹೆಗಾರರಾಗಿ ನೇಮಕವಾದರು. ಸುಧೀರ್ಘ ಅನುಭವದ ಬಳಿಕ 2005 ರಲ್ಲಿ ದೇಶದ ಅಡಿಷನಲ್ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು. 2009ರಂದು ಕರ್ನಾಟಕ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕವಾದ ಅವರು 2012 ರಲ್ಲಿ ಖಾಯಂ ನ್ಯಾಯಾಧೀಶರಾಗಿನೇಮಕಗೊಂಡರು. ಈಗ ಕೊಲಿಜಿಯಂ ಶಿಫಾರಸು ಸರ್ಕಾರದ ಅನುಮೋದಿಸಿದರೇ ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಅವರು ಗುಜರಾತ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.