Tag: aravind limbavali

  • ದಕ್ಷಿಣ ಕರ್ನಾಟಕದ ಮತದಾನ ದಿನವೇ ರಾಜ್ಯದಲ್ಲಿ ಪ್ರಧಾನಿ ಮೋದಿ ರ‍್ಯಾಲಿ

    ದಕ್ಷಿಣ ಕರ್ನಾಟಕದ ಮತದಾನ ದಿನವೇ ರಾಜ್ಯದಲ್ಲಿ ಪ್ರಧಾನಿ ಮೋದಿ ರ‍್ಯಾಲಿ

    ಬೆಂಗಳೂರು: ದಕ್ಷಿಣ ಕರ್ನಾಟಕದ ಮತದಾನ ದಿನವೇ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮತದಾನ ಏಪ್ರಿಲ್ 18ರಂದು ನಡೆಯಲಿದೆ. ಅದೇ ದಿನವೇ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಎರಡು ಕಡೆಗಳಲ್ಲಿ ರ‍್ಯಾಲಿ ನಡೆಸಲಿದ್ದಾರೆ. ಈ ಮೂಲಕ ರಾಜ್ಯದ 6 ಕಡೆಗಳಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

    ಎಲ್ಲೆಲ್ಲಿ ಮೋದಿ ರ‍್ಯಾಲಿ?:
    ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 8ರಂದು ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗ, 3ಕ್ಕೆ ಮೈಸೂರಿನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಏಪ್ರಿಲ್ 13ರಂದು ಬೆಳಗ್ಗೆ ಮಂಗಳೂರು, ಸಂಜೆ ಬೆಂಗಳೂರಿನಲ್ಲಿ ಮೋದಿ ಸಮಾವೇಶ ನಡೆಯಲಿದೆ. ದಕ್ಷಿಣ ಕರ್ನಾಟಕದ ಮತದಾನದ ದಿನವಾದ ಏಪ್ರಿಲ್ 18ರಂದು ಬೆಳಗ್ಗೆ ಚಿಕ್ಕೋಡಿ, ಮಧ್ಯಾಹ್ನ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೂಡ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಏಪ್ರಿಲ್ 10, 12, 17 ಮತ್ತು 20 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಮೂಲಕ ದಾವಣಗೆರೆ, ಹಾಸನ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದು ತಿಳಿಸಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಗರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನಗರಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಹೇಗೆ ಅಕೌಂಟಿಬಿಲಿಟಿ ಇರಬೇಕು ಅಂತ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಬಿಎಂಪಿ ಡಿವೈಡ್ ಮಾಡೋದಕ್ಕೆ ನಮ್ಮ ವಿರೋಧವಿತ್ತು. ಆದರೆ ಮೇಯರ್ ಇನ್ ಕೌನ್ಸಿಲ್‍ಗೆ ನಾವು ಬೆಂಬಲ ನೀಡಿದ್ದೇವು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೂ ಯಾಕೆ ಕಾರ್ಯಗತಕ್ಕೆ ತರಲಿಲ್ಲ. ಸುಳ್ಳು ಹೇಳಿಕೆಗಳನ್ನು ರಾಹುಲ್ ಗಾಂಧಿ ಅವರು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್‍ನವರು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಡೈರಿ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳ ಮೇಲೆ ನಾವು ಪ್ರಚಾರ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್‍ನವರು ಸುಳ್ಳು ಆರೋಪಗಳಿಂದ ಮತದಾರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ರಾಹುಲ್ ಗಾಂಧಿ ಸಲಹೆ ಪಡೆದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ತಿದ್ದುಪಡಿ ಮಾಡುವ ಸಾಧ್ಯತೆ ಇದೆ. ಕೇಂದ್ರ ಬಿಜೆಪಿ ಸರ್ಕಾರವು ರೈತರ ಖಾತೆಗೆ ವಾರ್ಷಿಕವಾಗಿ 6 ಸಾವಿರ ರೂ. ಹಾಕುತ್ತಿದೆ. ಆದರೆ ಕಾಂಗ್ರೆಸ್‍ನವರು ಈಗ 72 ಸಾವಿರ ರೂ. ಪಾವತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದರು.

    ನಾನು ಈಗಾಗಲೇ ಗೆದ್ದಿದ್ದೇನೆ. ಯಾರ ಪ್ರಚಾರವೂ ಅಗತ್ಯವಿಲ್ಲ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿರಲು ಸಾಧ್ಯವಿಲ್ಲ. ಆದರೂ ಯುವಕ, ಅತಿ ಉತ್ಸಾಹದಿಂದ ಹಾಗೇನಾದರೂ ಹೇಳಿದ್ದರೆ ಕರೆದು ಬುದ್ಧಿ ಹೇಳುತ್ತೇವೆ ಎಂದು ಅರವಿಂದ್ ಲಿಂಬಾವಳಿ ತಿಳಿಸಿದರು.

  • ಕಾಂಗ್ರೆಸ್ಸಿನವರಿಗೆ ಮಕ್ಳಾಗದಿದ್ದರೆ ಬಿಜೆಪಿಗೆ ಬೈತಾರೆ – ಅರವಿಂದ ಲಿಂಬಾವಳಿ

    ಕಾಂಗ್ರೆಸ್ಸಿನವರಿಗೆ ಮಕ್ಳಾಗದಿದ್ದರೆ ಬಿಜೆಪಿಗೆ ಬೈತಾರೆ – ಅರವಿಂದ ಲಿಂಬಾವಳಿ

    ಬೆಂಗಳೂರು: ಕಾಂಗ್ರೆಸ್ ಪಕ್ಷದವರಿಗೆ ಮಕ್ಕಳಗದಿದ್ದರೂ ಅವರು ಬಿಜೆಪಿಗೇ ಬೈತಾರೆ ಎಂದು ಶಾಸಕ ಅರವಿಂದ ಲಿಂಬಾವಳಿಯವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾರ್ಟಿಯವರು ನಮ್ಮನ್ನೇ ದೂಷಿಸುತ್ತಾರೆ. ಮಕ್ಕಳಾಗದಿದ್ದರೂ ಅವರು ಬಿಜೆಪಿಯನ್ನೇ ಬೈತಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರು ಅರ್ಥಮಾಡಿಕೊಳ್ಳಬೇಕು. ಬಾಯಿಗೆ ಬಂದಂತೆ ಮಾತನಾಡೋದು ಅಲ್ಲ. ಅವರ ಪಕ್ಷವನ್ನು ಸರಿಯಾಗಿ ಇಟ್ಟುಕೊಳ್ಳಲ್ಲ. ಇನ್ನು ಬಿಜೆಪಿ ಮೇಲೆ ಹರಿಹಾಯ್ದರೆ ಜನ ಏನು ನಂಬಲ್ಲ ಅಂದುಕೊಂಡಿದ್ರಾ ಎಂದು ಪ್ರಶ್ನಿಸಿದ್ದಾರೆ.

    ಅವರ ಪಕ್ಷದ ಶಾಸಕರನ್ನು ಅವರು ಹೆಂಗೆ ನಡೆಸಿಕೊಂಡಿದ್ದಾರೆ ಎಂಬುದು ಗೊತ್ತಿದೆಯಾ. ಈ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಾನೆ ಇದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಅಸಮಾಧಾನಗಳು ವ್ಯಕ್ತವಾಯಿತು. ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ಮಧ್ಯೆ ಹೊಡೆದಾಟವೇ ನಡೆಯಿತು. ಅವುಗಳನ್ನು ನಿಭಾಯಿಸಲು ಸಾಧ್ಯವಾಗದಿದ್ದವರೂ ಅನಗತ್ಯವಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ರು.

    ಒಟ್ಟಿನಲ್ಲಿ ಅವರೊಳಗೆ ಹುಳುಕನ್ನು ಮುಚ್ಚಿಕೊಳ್ಳುವ ಸಲುವಾಗಿ ಬಿಜೆಪಿ ಮೇಲೆ ಆರೋಪ ಮಾಡುವುದು ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷಗಿರಿಗೆ ಶೋಭೆ ತರುವಂತದ್ದಲ್ಲ ಎಂದು ಗರಂ ಆದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಚ್‍ಡಿಕೆ ವಿರುದ್ಧ ಬಿಜೆಪಿಯಿಂದ 25 ಕೋಟಿಯ ವಿಡಿಯೋ ಬಾಂಬ್!

    ಎಚ್‍ಡಿಕೆ ವಿರುದ್ಧ ಬಿಜೆಪಿಯಿಂದ 25 ಕೋಟಿಯ ವಿಡಿಯೋ ಬಾಂಬ್!

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಮಲ ಆರೋಪ ಕಮಲ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ್ದ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಿಡಿಯೋ ಆಸ್ತ್ರ ಬಿಡುಗಡೆ ಮಾಡಿದ್ದಾರೆ.

    ಬಿಎಸ್‍ವೈ ನಿವಾಸದ ಬಳಿ ಮಾತನಾಡಿದ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಅವರು, ಬಿಜೆಪಿ ವಿರುದ್ಧ ಆಪರೇಷನ್ ಕಮಲ ಹೆಸರಿನಲ್ಲಿ ಸಿಎಂ ಕುಮಾರಸ್ವಾಮಿ ಅವರು ಸುಳ್ಳು ಆರೋಪ ಮಾಡಿದ್ದಾರೆ. ಆದರೆ ಈ ಹಿಂದೆ ಕುಮಾರಸ್ವಾಮಿ ಅವರೇ ಎಂಎಲ್‍ಸಿ ಸ್ಥಾನಕ್ಕಾಗಿ 25 ಕೋಟಿ ರೂ. ಬೇಡಿಕೆ ಇಟ್ಟಿರುವ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

    ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸದನದಲ್ಲಿ ಪ್ರಸ್ತಾಪ ಮಾಡಿ ವಿಡಿಯೋವನ್ನು ಬಿಡುಗಡೆ ಮಾಡಲಿದ್ದಾರೆ. ಅಲ್ಲದೇ ವಿಡಿಯೋವನ್ನು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ನೀಡಿ ಅವರ ಕೊಠಡಿಯಲ್ಲಿ ವೀಕ್ಷಿಸಲು ಮನವಿ ಮಾಡಿಕೊಳ್ಳಲಾಗುತ್ತದೆ. ಈ ವೇಳೆ ಸ್ವತಃ ಸಿಎಂ ಅವರು ಕೂಡ ವಿಡಿಯೋ ನೋಡಿ ಈ ಬಗ್ಗೆ ಉತ್ತರ ನೀಡಲು ಅವಕಾಶ ನೀಡಲಾಗುವುದು ಎಂದು ಅರವಿಂದ ಲಿಂಬಾವಳಿ ವಿವರಿಸಿದರು.

    ಆಪರೇಷನ್ ಕಮಲ ಮಾಡಲು ಅರವಿಂದ ಲಿಂಬಾವಳಿ ಹಾಗೂ ಬಿಎಸ್‍ವೈ ಪುತ್ರ ವಿಜಯೇಂದ್ರ ಅವರು ಮುಂಬೈನಲ್ಲಿ ತಂಗಿದ್ದಾರೆ ಎಂದು ಸಮ್ಮಿಶ್ರ ಸರ್ಕಾರದ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಾನು ಪಕ್ಷದ ಜವಾಬ್ದಾರಿ ನಿರ್ವಹಿಸಲು ತೆಲಂಗಾಣಕ್ಕೆ ತೆರಳಿದ್ದೆ. ಹಾಗಿದ್ದರೂ ಕೂಡ ತಮ್ಮ ಮೇಲೆ ಆಪರೇಷನ್ ಕಮಲದ ಆರೋಪ ಮಾಡುತ್ತಿದ್ದಾರೆ. ಆದರೆ ಆರೋಪ ಮಾಡುವವರಿಗೆ ಯಾವುದೇ ಉತ್ತರ ನೀಡಬೇಕಾದ ಅಗತ್ಯವಿಲ್ಲ ಎಂದು ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗೆಳೆದರು.

    ಬಿಜೆಪಿ ಬಿಡುಗಡೆ ಮಾಡಲಿರುವ ವಿಡಿಯೋ ಬಗ್ಗೆ ಹೆಚ್ಚಿನ ವಿವರ ನೀಡಲು ನಿರಾಕರಿಸಿದ ಅರವಿಂದ ಲಿಂಬಾವಳಿ, ಸದನದಲ್ಲಿ ಈ ಕುರಿತು ಬಿಎಸ್‍ವೈ ಅವರೇ ಹೆಚ್ಚಿನ ಮಾಹಿತಿ ನೀಡುತ್ತಾರೆ ಎಂದು ಕುತೂಹಲವನ್ನು ಕಾಯ್ದುಕೊಂಡರು.

    2014 ರಲ್ಲಿ ವಿಜುಗೌಡ ಪಾಟೀಲ್ ಅವರ ಬಳಿ ಎಂಎಲ್‍ಸಿ ಮಾಡಲು ಎಚ್‍ಡಿಕೆ ಅವರು 25 ಕೋಟಿ ರೂ. ಕೇಳಿದ್ದಾರೆ ಎನ್ನಲಾಗಿದ್ದ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಲಿ ಎಂದು ಹೇಳಲಾಗುತ್ತಿದೆ. ಈ ಹಿಂದಿನ ಚುನಾವಣೆಯ ವೇಳೆಯಲ್ಲೂ ಕೂಡ ಇದೇ ವಿಡಿಯೋವನ್ನು ಮಂಡ್ಯದಲ್ಲಿ ಬಿಡುಗಡೆ ಮಾಡಲಾಗಿತ್ತು. ಈಗ ಆದೇ ಹಳೆ ವಿಡಿಯೋ ಆಸ್ತ್ರವನ್ನು ಬಿಜೆಪಿ ಮತ್ತೆ ಪ್ರಯೋಗಿಸಲಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಡಹಗಲೇ ಪೊಲೀಸರ ಮೇಲೆ ಹಲ್ಲೆಗೈದ ಯುವನಾಯಕ ಬಿಜೆಪಿಯಿಂದ ಅಮಾನತು: ಆರ್. ಅಶೋಕ್

    ಹಾಡಹಗಲೇ ಪೊಲೀಸರ ಮೇಲೆ ಹಲ್ಲೆಗೈದ ಯುವನಾಯಕ ಬಿಜೆಪಿಯಿಂದ ಅಮಾನತು: ಆರ್. ಅಶೋಕ್

    ಬೆಂಗಳೂರು: ಪೊಲೀಸರ ಮೇಲೆ ಹಾಡಹಗಲೇ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಬಿಜೆಪಿ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.

    ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿಸದಂತೆ ಆರೋಪಿಗಳಲ್ಲಿ ಒಬ್ಬನಾದ ಸಂದೀಪ್, ಶಾಸಕ ಅರವಿಂದ ಲಿಂಬಾವಳಿ ಬೆಂಬಲಿಗನಾಗಿದ್ದಾನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಶೋಕ್, ಆರೋಪಿ ಸಂದೀಪ್, ಗುಂಡೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನಾಗಿದ್ದಾನೆ. ಹೀಗಾಗಿ ಆತನನ್ನು ಪಕ್ಷದಿಂದ ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ- ಪುಡಿರೌಡಿಗಳ ಅಟ್ಟಹಾಸಕ್ಕೆ ಓಡಿಹೋದ ಪೇದೆಗಳು

    ಉಳಿದ ಮೂವರು ಆರೋಪಿಗಳು ಯಾವ ಪಕ್ಷದವರು ಅಂತಾ ಗೃಹಸಚಿವರು ಸ್ಪಷ್ಟಪಡಿಸಬೇಕು. ಆ ಮೂವರು ಕಾಂಗ್ರೆಸ್ ನವರು ಅಂತಾ ಹೇಳಲಾಗ್ತಿದೆ. ಅವರ ಹೆಸರು ಯಾಕೆ ಹೇಳ್ತಿಲ್ಲ ಅಂತ ಪ್ರಶ್ನಿಸಿದ್ರು.

    ಪೊಲೀಸರ ಮೇಲಿನ ಹಲ್ಲೆಗಳನ್ನು ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗಿದೆ ಅನ್ನೋದು ಗೊತ್ತಾಗುತ್ತೆ. ಯಾರೇ ತಪ್ಪು ಮಾಡಿದ್ರು, ಅದು ತಪ್ಪು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಅಂತ ಅವರು ಹೇಳಿದ್ದಾರೆ.

    ನಗರದ ವರ್ತೂರು ಮುಖ್ಯರಸ್ತೆಯ ಸಿದ್ದಾಪುರ ಬಳಿ ಭಾನುವಾರ ಪೇದೆಗಳಾದ ಬಸಪ್ಪ ಗಾಣೆಗಾರ, ಶರಣಬಸಪ್ಪ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕುಡಿತ ಮತ್ತಿನಲ್ಲಿದ್ದ ಗ್ಯಾಂಗ್ ಪೊಲೀಸರ ಮೇಲೆಯೇ ಹಾಡಹಗಲೇ ಹಲ್ಲೆ ನಡೆಸಿವೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕುಮಾರ್, ಸುದೀಪ್, ಮೂರ್ತಿ, ಮುರಳಿ ಮೋಹನ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    https://www.youtube.com/watch?v=6caEcDoIStw

    https://www.youtube.com/watch?v=DrZ-G_iCIfI