Tag: Arbail Shivaram Hebbar

  • ಕಾರ್ಮಿಕ ಸಚಿವರ ಹೆಬ್ಬಾರ್ ಪುತ್ರನ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    ಕಾರ್ಮಿಕ ಸಚಿವರ ಹೆಬ್ಬಾರ್ ಪುತ್ರನ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    ಹಾವೇರಿ: ಕಾರ್ಮಿಕ ಸಚಿವ (Minister of Labour Department) ಶಿವರಾಮ್ ಹೆಬ್ಬಾರ್ (Shivaram Hebbar) ಮಗನ ಕಾರ್ಖಾನೆಯ ಯಂತ್ರದ ಬೆಲ್ಟ್‍ಗೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾವಿ (Shiggavi) ತಾಲೂಕಿನ ಕೋಣನಕೇರಿಯಲ್ಲಿ ನಡೆದಿದೆ.

    POLICE JEEP

    ಕಾರ್ಮಿಕನನ್ನು ದುಂಢಸಿ ಗ್ರಾಮದ ನವೀನ ಬಸಪ್ಪ ಚಲವಾದಿ (19) ಎಂದು ಗುರುತಿಸಲಾಗಿದೆ. ಕಾರ್ಖಾನೆಯಲ್ಲಿ ಕಬ್ಬಿನ ಪುಡಿ ತುಂಬುವಾಗ ಈ ದುರ್ಘಟನೆ ಸಂಭವಿಸಿದೆ. ಸಚಿವರ ಮಗ ವಿವೇಕ್ ಹೆಬ್ಬಾರ್ ಅವರ ಮಾಲೀಕತ್ವದ ವಿಐಪಿಎನ್ ಡಿಸ್ಟಲರಿಸ್ (VIPN Distilleries) ಕಾರ್ಖಾನೆಯಲ್ಲಿ ಈ ದುರಂತ ನಡೆದಿದೆ. ಇದನ್ನೂ ಓದಿ: ಹಸಿರು ಉಡುಗೆಯಲ್ಲಿ ಸಪ್ನಾ ಶೈನ್ – ಕೊಹ್ಲಿ ಜೊತೆ ಜಗಳವಾಡಿದ್ರೆ ಇನ್ನೂ ಫೇಮಸ್ ಆಗ್ತೀರಿ: ನೆಟ್ಟಿಗರಿಂದ ತರಾಟೆ

    ಕಾರ್ಖಾನೆಯಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿರದ ಕಾರಣ ಈ ಅವಘಡ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಂಕಾಪುರ (Bankapura) ಪೊಲೀಸ್ ಠಾಣೆಯಲ್ಲಿ ಫ್ಯಾಕ್ಟರಿ ಮಾಲೀಕ ಸೇರಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜ್ವರವೆಂದು ಆಸ್ಪತ್ರೆಗೆ ಅಡ್ಮಿಟ್ ಆದ ಯುವಕ ಸಾವು- ವೈದ್ಯರ ನಿರ್ಲಕ್ಷ್ಯ ಆರೋಪ

    Bankapura,
    Arbail Shivaram Hebbar Minister of Labour Department, Shiggavi VIPN Distilleries

  • ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ:  ಹೆಬ್ಬಾರ್

    ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ: ಹೆಬ್ಬಾರ್

    ಬೆಂಗಳೂರು: ಕಳೆದ ಮೂರು ನಾಲ್ಕು ದಿನದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನದಿ ಹಳ್ಳಕೊಳ್ಳಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಇಡೀ ಜಿಲ್ಲೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಕದರ ಮತ್ತು ಕೊಡಸಳ್ಳಿಯ ಎರಡು ಡ್ಯಾಂ ನಿಂದ 2500 ಲಕ್ಷಕ್ಕೂ ಅಧಿಕ ನೀರನ್ನ ಹೊರ ಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದ 5 ಗ್ರಾಮಗಳನ್ನ ಶಿಫ್ಟ್ ಮಾಡಿಸಲಾಗಿದೆ. ಅಂಕೋಲಾ ತಾಲೂಕಿನಲ್ಲಿ ಉಂಟಾಗಿರೋ ಪ್ರವಾಹದಿಂದ ಇಬ್ಬರು ತಪ್ಪಿಸಿಕೊಂಡಿದ್ದಾರೆ. ಅವರ ಹುಡುಕಾಟದ ಕಾರ್ಯವನ್ನ ಸಹ ಈಗಾಗಲೇ ಶುರುಮಾಡಲಾಗಿದೆ. ಪ್ರವಾಹದಲ್ಲಿ ಸಿಲುಕಿದ 6 ಜನ ಪ್ರವಾಸಿಗರನ್ನ ರಕ್ಷಣೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ನಟೋರಿಯಸ್ ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ

    ಹೋಟೆಲ್ ನವಮಿಯಲ್ಲಿ 11 ಜನ ಸಿಲುಕಿದ್ದಾರೆ. ಹೋಟೆಲ್ ನಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, 11 ಜನ ಹೋಟೆಲ್ ಮೇಲ್ಭಾಗದಲ್ಲಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಏರ್ ಲಿಫ್ಟ್ ಮಾಡಿಸುವಂತೆ ಸಹ ಸೂಚನೆ ನೀಡಲಾಗಿದೆ. ಎರಡು ದಿನ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿರೀಕ್ಷೆಗೂ ಮೀರಿದ ಮಳೆಯಾಗ್ತಿರುವುದರಿಂದ ಜಿಲ್ಲೆಯ ಜನರ ಜೀವನ ಅಸ್ತವ್ಯಸ್ತವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಟೀ ಶರ್ಟ್, ಜೀನ್ಸ್ ಪ್ಯಾಂಟ್ ತೊಟ್ಟಳೆಂದು ಹುಡುಗಿಯ ಕೊಲೆ ಮಾಡಿದ್ರು!

    ನಾನು ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ, ಎಲ್ಲಾ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನ ತಡಯುವ ಮತ್ತು ಜನರ ಸುರಕ್ಷಿತೆಗಳ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಪಬ್ಲಿಕ್ ಟಿವಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ.

  • ಸರ್ವಪಕ್ಷಗಳ ಸಭೆ ನಡೆಸಲು ಸಿದ್ಧ: ಶಿವರಾಮ್ ಹೆಬ್ಬಾರ್

    ಸರ್ವಪಕ್ಷಗಳ ಸಭೆ ನಡೆಸಲು ಸಿದ್ಧ: ಶಿವರಾಮ್ ಹೆಬ್ಬಾರ್

    ಕಾರವಾರ: ಜಿಲ್ಲೆಯ ಕಾಸರಕೋಡ ಬಂದರು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಹಕಾರ ಅಗತ್ಯವಿದ್ದು, ಸರ್ವಪಕ್ಷದ ಸಭೆ ನಡೆಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಿದ್ಧ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.  ಇದನ್ನೂ ಓದಿ: ಬಾದಾಮಿ ಜನ ಒಳ್ಳೆಯವರು, ಚಾಮುಂಡೇಶ್ವರಿ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

    ಶಿರಸಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಅಹಂಕಾರ ತೋರುವುದಿಲ್ಲ. ಎಲ್ಲಾ ಪಕ್ಷಗಳ ಸಹಕಾರ ಅಗತ್ಯವಿದೆ. ಎಲ್ಲರ ಜೊತೆ ಒಂದು ವೇದಿಕೆಯಲ್ಲಿ ವಿಷಯ ಚರ್ಚಿಸಿ ಮೀನುಗಾರರ ಹಿತಕ್ಕೆ ಬದ್ದನಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ತೆರಿಗೆ ಕಟ್ಟಲು ಹಣವಿಲ್ಲ ಎಂದ ನಟ ದಳಪತಿ ವಿಜಯ್‍ಗೆ ಕೋರ್ಟ್ ಛೀಮಾರಿ

    ಕಾಸರಕೋಡ ಬಂದರು ವಿಚಾರದಲ್ಲಿ ಸರ್ಕಾರದ ನಿಲುವೆ ನನ್ನ ನಿಲುವಾಗಿದೆ. ಮುಖ್ಯಮಂತ್ರಿ ನಿಲುವಿಗೆ ನನ್ನ ಬೆಂಬಲ ಇದೆ. ಅಭಿವೃದ್ದಿಗೆ ಅನೇಕ ಅಡೆತಡೆಗಳು ಬರುತ್ತವೆ. ಎಲ್ಲಾ ಯೋಜನೆ ಅನುಷ್ಠಾನ ಮಾಡುವಾಗ ಸಾಕಷ್ಟು ವಿರೋಧ ಎದಿರಾಗಿದೆ. ಅವನ್ನು ಮೀರಿ ಅಭಿವೃದ್ಧಿ ಆಗಬೇಕು. ಈ ಯೋಜನೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಾಲುದಾರರು. ಈ ಜಿಲ್ಲೆಯಲ್ಲಿ ಎಲ್ಲಾ ಯೋಜನೆಯಲ್ಲಿ ಜನ ನಿರಾಶ್ರಿತರಾಗಿದ್ದಾರೆ. ಮೀನುಗಾರರ ವಿಶ್ವಾಸಗಳಿಸಿ ಯೋಜನೆ ಅನುಷ್ಠಾನ ಮಾಡಲಾಗುವುದು. ಮೀನುಗಾರರ ರಕ್ಷಣೆ ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಪಕ್ಷದ ಸಹಕಾರ ಬಯಸುತ್ತೇನೆ ಎಂದು ತಿಳಿಸಿದ್ದಾರೆ.