Tag: Archana Gautam

  • Bigg Boss: ಬಿಗ್ ಬಾಸ್ ಸ್ಪರ್ಧಿ ಅರ್ಚನಾರನ್ನು ಉಚ್ಚಾಟಿಸಿದ ಕಾಂಗ್ರೆಸ್

    Bigg Boss: ಬಿಗ್ ಬಾಸ್ ಸ್ಪರ್ಧಿ ಅರ್ಚನಾರನ್ನು ಉಚ್ಚಾಟಿಸಿದ ಕಾಂಗ್ರೆಸ್

    ದೇಶಾದ್ಯಂತ ಬಿಗ್ ಬಾಸ್ ಜ್ವರ ಜೋರಾಗಿದೆ. ಹಿಂದಿಯಲ್ಲಿ ಈಗಾಗಲೇ ಬಿಗ್ ಬಾಸ್ (Bigg Boss)  ಶೋ ಮುಗಿದಿದ್ದು, ತಮಿಳಿನಲ್ಲಿ ಈಗಷ್ಟೇ ಶುರುವಾಗಿದೆ. ತೆಲುಗುನಲ್ಲೂ ನಡೆಯುತ್ತಿದೆ. ಇದೇ ವಾರ ಕನ್ನಡದಲ್ಲೂ ಬಿಗ್ ಬಾಸ್ ಶುರುವಾಗಲಿದೆ. ಹೀಗೆ ಎಲ್ಲ ಕಡೆ ಬಿಗ್ ಬಾಸ್ ಹವಾ ಇರುವಾಗಲೇ ಮಾಜಿ ಬಿಗ್ ಬಾಸ್ ಸ್ಪರ್ಧಿ, ನಟಿ ಅರ್ಚನಾ ಗೌತಮ್ (Archana Gautam) ಅವರನ್ನು ಕಾಂಗ್ರೆಸ್ (Congress) ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

    ಬಿಗ್ ಬಾಸ್ ಸೀಸನ್ 16ರಲ್ಲಿ ಅರ್ಚನಾ ಭಾಗಿಯಾಗಿದ್ದರು. ಸಿನಿಮಾಗಳ ಜೊತೆ ಜೊತೆಗೆ ರಾಜಕಾರಣದಲ್ಲೂ ಸಕ್ರಿಯರಾಗಿದ್ದರು.  ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ಇವರು ಗುರುತಿಸಿಕೊಂಡಿದ್ದರು. ಪಕ್ಷದ ಕಾರ್ಯಕರ್ತರೊಂದಿಗೆ ಆಕೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ವಕ್ತಾರ ಅಂಶು ಅವಸ್ತಿ ಹೇಳಿದ್ದಾರೆ.

    ಬಿಗ್ ಬಾಸ್ ನಿಂದ ಬಂದ ನಂತರ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು ಅರ್ಚನಾ. ಜನಪ್ರಿಯತೆಯೂ ಸಾಕಷ್ಟಿತ್ತು. ಜೊತೆಗೆ ಪ್ರಿಯಾಂಕಾ ಗಾಂಧಿ ಅವರ ಜೊತೆಯೂ ಗುರುತಿಸಿಕೊಂಡಿದ್ದರು. ಹಾಗಾಗಿ 2022ರಲ್ಲಿ ಕಾಂಗ್ರೆಸ್ ಪಕ್ಷವು ಹಸ್ತಿನಾಪುರ ಕ್ಷೇತ್ರದಿಂದ ಅರ್ಚನಾ ಅವರನ್ನು ಕಣಕ್ಕಿಳಿಸಿತ್ತು. ಇವರ ಬೆಂಬಲಕ್ಕೆ ನಿಂತ ಅಲ್ಲಿನ ಜನರ ಜೊತೆಗೆ ಅವರು ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

     

    ಹಾಗಂತ ಹಸ್ತಿನಾಪುರ ಕ್ಷೇತ್ರದಿಂದ ಅರ್ಚನಾ ಗೆದ್ದಿರಲಿಲ್ಲ. ಕೇವಲ 1519 ಮತಗಳನ್ನು ಪಡೆದಿದ್ದರು. ಈ ಮೂಲಕ ಠೇವಣಿ ಕೂಡ ಕಳೆದುಕೊಂಡಿದ್ದರು. ಈ ಹೀನಾಯ ಸೋಲನ್ನು ಕಾಂಗ್ರೆಸ್ ಅರಗಿಸಿಕೊಳ್ಳಲು ಆಗಿರಲಿಲ್ಲ. ಹೀಗಾಗಿ ಪದೇ ಪದೇ ಅರ್ಚನಾ ಅವರ ಜೊತೆ ಕಾರ್ಯಕರ್ತರು ಜಗಳ ಮಾಡುತ್ತಿದ್ದರು ಎಂದೂ ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಬಿಗ್ ಬಾಸ್ ಮಹಿಳಾ ಸ್ಪರ್ಧಿ ಗಂಭೀರ ಆರೋಪ

    ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಬಿಗ್ ಬಾಸ್ ಮಹಿಳಾ ಸ್ಪರ್ಧಿ ಗಂಭೀರ ಆರೋಪ

    ಬಿಗ್ ಬಾಸ್ (Bigg Boss) ಹಿಂದಿ ಸೀಸನ್ 16ರ ಟಾಪ್ ಕಂಟೆಸ್ಟಂಟ್ ಅರ್ಚನಾ ಗೌತಮ್ (Archana Gautam) , ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರ ಪಿಎ ಸಂದೀಪ್ ಸಿಂಗ್ (Sandeep Singh) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಅರ್ಚನಾ ಗೌತಮ್, ತಮ್ಮ ಪಕ್ಷದವರ ವಿರುದ್ಧವೇ ಗಂಭೀರ ಆರೋಪ ಮಾಡಿದ್ದು, ಪ್ರಿಯಾಂಕಾ ಅವರ ಪಿಎ ವಿರುದ್ಧ ಎಫ್.ಐ.ಆರ್ ಕೂಡ ದಾಖಲಾಗಿದೆ.

    ಕಾಂಗ್ರೆಸ್ ಸಮಾವೇಶಕ್ಕೆ ಸಂಬಂಧಿಸಿದಂತೆ ಅರ್ಚನಾಗೆ ಭೇಟಿಯಾಗುವಂತೆ ಪ್ರಿಯಾಂಕಾ ಗಾಂಧಿ ಆಹ್ವಾನ ನೀಡಿದ್ದರಂತೆ. ಈ ಆಹ್ವಾನದ ಹಿನ್ನೆಲೆಯಲ್ಲಿ ಅರ್ಚನಾ ರಾಯಪುರಕ್ಕೆ ತೆರಳಿದ್ದಾರೆ. ಪ್ರಿಯಾಂಕಾ ಅವರನ್ನು ಭೇಟಿ ಮಾಡಿಸಲು ಅವರ ಪಿಎಗೆ ಅರ್ಚನಾ ಕೇಳಿಕೊಂಡರಂತೆ. ಅವಕಾಶ ನೀಡಲಿಲ್ಲ ಎಂದು ಅರ್ಚನಾ ಅಸಮಾಧಾನಗೊಂಡಿದ್ದರೆ. ಈ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಪ್ರಿಯಾಂಕಾ ಪಿಎ ಕೆಟ್ಟ ಶಬ್ದಗಳಲ್ಲಿ ನಿಂದಿಸಿದ್ದಾರಂತೆ. ಅಲ್ಲದೇ, ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಅರ್ಚನಾ. ಇದನ್ನೂ ಓದಿ: Exclusive: ʻಯುವ’ ಚಿತ್ರಕ್ಕೆ ಸಪ್ತಮಿ ಗೌಡ ಸೆಲೆಕ್ಟ್ ಆಗಿದ್ದು ಹೇಗೆ?

    ಈ ಕುರಿತು ಅರ್ಚನಾ ತಂದೆ ಗೌತಮ್ ಬುದ್ಧ ದೂರು ನೀಡಿದ್ದು, ಆ ದೂರಿನಲ್ಲಿ ‘ನನ್ನ ಮಗಳ ವಿರುದ್ಧ ಜಾತಿನಿಂದನೆ ಮಾಡಲಾಗಿದೆ. ಕೆಟ್ಟ ಶಬ್ದಗಳಲ್ಲೂ ಸಂದೀಪ್ ಬೈದಿದ್ದಾರೆ. ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತಾಗಿ ಮೀರತ್ ನಲ್ಲಿ ದೂರು ದಾಖಲಿಸಿದ್ದೇವೆ’ ಅಂದಿದ್ದಾರೆ. ದೂರನ್ನು ಸ್ವೀಕರಿಸಿರುವ ಎಸ್‍.ಪಿ ಪಿಯುಷ್ ಸಿಂಗ್ ಎಫ್.ಐ.ಆರ್ ದಾಖಲಿಸಿದ್ದಾರೆ.

    ಅರ್ಚನಾ ಗೌತಮ್ ಒಬ್ಬ ಪ್ರತಿಷ್ಠಿತ ಮಾಡಲ್. ಈಗಾಗಲೇ ಮಿಸ್ ಬಿಕಿನಿ ಇಂಡಿಯಾ, ಮಿಸ್ ಉತ್ತರ ಪ್ರದೇಶ ಕಿರೀಟ ತೊಟ್ಟವರು. ಹಲವು ಚಿತ್ರಗಳಲ್ಲೂ ನಟಿಸಿದ್ದಾರೆ. ಹಿಂದಿ ಬಿಗ್ ಬಾಸ್ ಸೀಸನ್ 16ರಲ್ಲಿ ಟಾಪ್ ಲಿಸ್ಟ್ ನಲ್ಲೂ ಕಾಣಿಸಿಕೊಂಡಿದ್ದರು. ಮೂರನೇ ರನ್ನರ್ ಅಪ್ ಆದವರು. ಅಲ್ಲದೇ, ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ. ಕಳೆದ ಬಾರಿ ಉತ್ತರ ಪ್ರದೇಶದಲ್ಲಿ ಚುನಾವಣೆಗೂ ಸ್ಪರ್ಧೆ ಮಾಡಿದ್ದರು.

  • ಮಗು ಬಿದ್ದ ನಂತರವೇ ನಡೆಯಲು ಕಲಿಯುತ್ತದೆ: ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಬಿಕಿನಿ ಗರ್ಲ್

    ಮಗು ಬಿದ್ದ ನಂತರವೇ ನಡೆಯಲು ಕಲಿಯುತ್ತದೆ: ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಬಿಕಿನಿ ಗರ್ಲ್

    ಲಕ್ನೋ: ನಟಿ, ಮಾಡೆಲ್ ಅರ್ಚನಾ ಗೌತಮ್ ಉತ್ತರಪ್ರದೇಶ ಚುನಾವಣೆಯಲ್ಲಿ ಸೋತಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ಸೋಶಿಯಲ್ ಮೀಡಿಯಾ ಮೂಲಕವಾಗಿ ತಮ್ಮ ಬೇಸರವನ್ನು ಹೊರ ಹಾಕಿದ್ದಾರೆ.

    ಮಾಜಿ ಮಿಸ್ ಬಿಕಿನಿ ಇಂಡಿಯಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್, ಹಸ್ತಿನಾಪುರ ಕ್ಷೇತ್ರದಿಂದ ಕಾಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಯುಪಿ ಚುನಾವಣೆಯಲ್ಲಿ ಕೇವಲ 1,519 ಮತಗಳನ್ನು ಪಡೆಯುವ ಮೂಲಕವಾಗಿ ಭಾರತೀಯ ಜನತಾ ಪಕ್ಷದ ದಿನೇಶ್ ಖಟಿಕ್ ವಿರುದ್ಧವಾಗಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ.

    ನಾನು ಹಸ್ತಿನಾಪುರದ ಜನರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದ್ದೇನೆ. ಆದರೆ ನಾನು ಅವರ ನಂಬಿಕೆಯನ್ನು ಪಡೆಯಲಿಲ್ಲ. ಶೀಘ್ರದಲ್ಲೇ ನಾನು ಅವರ ನಂಬಿಕೆಯನ್ನು ಗಳಿಸಿಕೊಳ್ಳುತ್ತೇನೆ. ಮಗು ಬಿದ್ದ ನಂತರವೇ ನಡೆಯಲು ಕಲಿಯುತ್ತದೆ. ಯಾರೂ ಗರ್ಭದಲ್ಲಿರುವಾಗಲೇ ಎಲ್ಲವನ್ನೂ ಕಲಿತು ಹುಟ್ಟುವುದಿಲ್ಲ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜೊತೆಗೆ ಇರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಬಿಕಿನಿ ಗರ್ಲ್‍ಗೆ ಸೋಲು

     

    View this post on Instagram

     

    A post shared by Archana Gautam (@archanagautamm)

    ಚುನಾವಣಾ ಅಭ್ಯರ್ಥಿ ಎಂದು ಸುದ್ದಿಯಾದಾಗಿನಿಂದಲೂ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವಾಗಿ ಮಾತನಾಡಿದ ಅರ್ಚನಾ ಗೌತಮ್, ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. ನಾನು 2014ರಲ್ಲಿ ಮಿಸ್ ಉತ್ತರ ಪ್ರದೇಶ ಮತ್ತು 2018ರಲ್ಲಿ ಮಿಸ್ ಕಾಸ್ಮೊ ವರ್ಲ್ಡ್‌  ಆಗಿದ್ದೆ. ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ನನ್ನ ವೃತ್ತಿಯನ್ನು ಒಂದೇ ಎಂದು ನೋಡಬೇಡಿ ಎಂದು ನಾನು ಜನರನ್ನು ವಿನಂತಿಸುತ್ತೇನೆ ಎಂದು ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಮಿಸ್ ಬಿಕಿನಿ ಇಂಡಿಯಾ ಅರ್ಚನಾ ಕಾಂಗ್ರೆಸ್‍ನಿಂದ ಚುನಾವಣಾ ಅಭ್ಯರ್ಥಿ- ರಾಜಕೀಯಕ್ಕೆ ನನ್ನ ವೃತ್ತಿ ಬೆಸೆಯಬೇಡಿ

    2018ರಲ್ಲಿ ಮಿಸ್ ಉತ್ತರ ಪ್ರದೇಶ ಪ್ರಶಸ್ತಿ ವಿಜೇತೆಯಾಗಿರುವ ಅರ್ಚನಾ 2015ರಲ್ಲಿ ಗ್ರೇಟ್ ಗ್ರ್ಯಾಂಡ್ ಮಸ್ತಿ ಚಿತ್ರದ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಿದ್ದರು. ಅರ್ಚನಾ ಗೌತಮ್ ಮಿಸ್ ಬಿಕಿನಿ ಇಂಡಿಯಾ 2018 ಪ್ರಶಸ್ತಿಯನ್ನು ಗೆದ್ದಿದ್ದಾರೆ ಮತ್ತು ಮಿಸ್ ಕಾಸ್ಮೋಸ್ ವರ್ಲ್ಡ್‌  2018ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೋಸ್ಟ್ ಟ್ಯಾಲೆಂಟ್ 2018 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಈಗ ಸೋತಿರಬಹುದು ಮುಂದೆ ಜನರ ಪ್ರೀತಿ ಗಳಿಸಿಕೊಳ್ಳುತ್ತೇನೆ ಎನ್ನುವ ಭರವಸೆಯ ಮಾತುಗಳನ್ನಾಡಿದ್ದಾರೆ.

  • ಕಾಂಗ್ರೆಸ್ ಪಕ್ಷದ ಬಿಕಿನಿ ಗರ್ಲ್‍ಗೆ ಸೋಲು

    ಕಾಂಗ್ರೆಸ್ ಪಕ್ಷದ ಬಿಕಿನಿ ಗರ್ಲ್‍ಗೆ ಸೋಲು

    ಲಕ್ನೋ: ನಟಿ, ಮಾಡೆಲ್ ಅರ್ಚನಾ ಗೌತಮ್ (Archana Gautam) ಸೋಲನ್ನು ಅನುಭವಿಸಿದ್ದಾರೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್‍ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

    ಮಾಡೆಲ್ ಕಮ್ ರಾಜಕಾರಣಿ ಅರ್ಚನಾ ಗೌತಮ್ 1133 ಮತಗಳನ್ನು ಪಡೆದುಕೊಂಡು ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಭಾರತೀಯ ಜನತಾ ಪಕ್ಷದ ದಿನೇಶ್ ಖಟಿಕ್ 81959 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.

     

    ಚುನಾವಣಾ ಅಭ್ಯರ್ಥಿ ಎಂದು ಸುದ್ದಿಯಾದಾಗಿನಿಂದಲೂ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವಾಗಿ ಮಾತನಾಡಿದ ಅರ್ಚನಾ ಗೌತಮ್, ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. ನಾನು 2014ರಲ್ಲಿ ಮಿಸ್ ಉತ್ತರ ಪ್ರದೇಶ ಮತ್ತು 2018ರಲ್ಲಿ ಮಿಸ್ ಕಾಸ್ಮೊ ವಲ್ರ್ಡ್ ಆಗಿದ್ದೆ. ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ನನ್ನ ವೃತ್ತಿಯನ್ನು ಒಂದೇ ಎಂದು ನೋಡಬೇಡಿ ಎಂದು ನಾನು ಜನರನ್ನು ವಿನಂತಿಸುತ್ತೇನೆ ಎಂದು ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಮಿಸ್ ಬಿಕಿನಿ ಇಂಡಿಯಾ ಅರ್ಚನಾ ಕಾಂಗ್ರೆಸ್‍ನಿಂದ ಚುನಾವಣಾ ಅಭ್ಯರ್ಥಿ- ರಾಜಕೀಯಕ್ಕೆ ನನ್ನ ವೃತ್ತಿ ಬೆಸೆಯಬೇಡಿ

     

    View this post on Instagram

     

    A post shared by Archana Gautam (@archanagautamm)

    ಉತ್ತರ ಪ್ರದೇಶ ಚುನಾವಣೆಯ 125 ಅಭ್ಯರ್ಥಿಗಳಲ್ಲಿ ಅರ್ಚನಾ ಅವರ ಹೆಸರನ್ನು ಘೋಷಿಸಿದ ಕೂಡಲೇ, ಬಿಕಿನಿ ಧರಿಸಿರುವ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಪ್ರಾರಂಭಿಸಿದವು. ಈ ಹಿನ್ನೆಲೆಯಲ್ಲಿ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅರ್ಚನಾ, ಜನರು ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ಮಾಡೆಲಿಂಗ್ ವೃತ್ತಿಯನ್ನು ಬೆರೆಸಬಾರದು ಎಂದು ಜನರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಹುಟ್ಟೂರಿನಿಂದ ಸ್ಪರ್ಧೆ ಮಾಡಿದ್ದ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಸೋಲು

    2018ರಲ್ಲಿ ಮಿಸ್ ಉತ್ತರ ಪ್ರದೇಶ ಪ್ರಶಸ್ತಿ ವಿಜೇತೆಯಾಗಿರುವ ಅರ್ಚನಾ 2015ರಲ್ಲಿ ಗ್ರೇಟ್ ಗ್ರ್ಯಾಂಡ್ ಮಸ್ತಿ ಚಿತ್ರದ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಿದ್ದರು. ಅರ್ಚನಾ ಗೌತಮ್ ಮಿಸ್ ಬಿಕಿನಿ ಇಂಡಿಯಾ 2018 ಪ್ರಶಸ್ತಿಯನ್ನು ಗೆದ್ದಿದ್ದಾರೆ ಮತ್ತು ಮಿಸ್ ಕಾಸ್ಮೋಸ್ ವಲ್ರ್ಡ್ 2018ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೋಸ್ಟ್ ಟ್ಯಾಲೆಂಟ್ 2018 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ.