Tag: areca nut

  • ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ

    ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ

    ಶಿವಮೊಗ್ಗ: ಭೂತಾನ್ (Bhutan) ದೇಶದಿಂದ ಅಡಿಕೆ (Areca Nut) ಆಮದು (Import) ಮಾಡಿಕೊಳ್ಳದಂತೆ ಆಗ್ರಹಿಸಿ, ಎಲೆ ಚುಕ್ಕೆ ರೋಗ ಬಾಧಿತ ರೈತರಿಗೆ (Farmers) ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ (Shivamogga) ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ನಗರದ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಆಮದು ಸುಂಕ ವಿನಾಯ್ತಿ ನೀಡಲಾಗಿದೆ. ಈ ಅಡಿಕೆ ನಮ್ಮ ದೇಶಕ್ಕೆ ಬರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಇದನ್ನೂ ಓದಿ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಧರಿಸುತ್ತಾರೆ: ಓವೈಸಿ

    ಆದರೆ ಅಡಿಕೆ ಆಮದಿನಿಂದಾಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕಡಿಮೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಅಡಿಕೆ ಆಮದು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದಂಡ ಹಾಕಿದ್ದಕ್ಕೆ ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ ಅಂದರ್

    Live Tv
    [brid partner=56869869 player=32851 video=960834 autoplay=true]

  • ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ: ಆರಗ ಜ್ಞಾನೇಂದ್ರ

    ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ: ಆರಗ ಜ್ಞಾನೇಂದ್ರ

    ಬೆಂಗಳೂರು: ಲಕ್ಷಾಂತರ ಜನ ರೈತರ ಬದುಕಿಗೆ ಬೆನ್ನೆಲುಬು ಆಗಿರುವ ಅಡಿಕೆ ಬಳಕೆ ಆರೋಗ್ಯಕ್ಕೆ ಹಾನಿಕರವಲ್ಲ, ಬದಲಿಗೆ ಅನೇಕ ಬಗೆಯಲ್ಲಿ ಲಾಭಕರವಿದೆ ಎಂಬ ಬಗ್ಗೆ, ಸಂಶೋಧನೆಗಳು ನಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಲೋಕಸಭಾ ಸದಸ್ಯರೊಬ್ಬರು ಅಡಿಕೆ ಹಾನಿಕಾರಕ ಹಾಗೂ ಅದನ್ನು ಬ್ಯಾನ್ ಮಾಡಬೇಕು ಎಂದು ನೀಡಿದ್ದ ಹೇಳಿಕೆಯಿಂದ, ರೈತರು ಆತಂಕಕ್ಕೆ ಒಳಗಾಗಿದ್ದರು. ಈ ಕಾರಣದಿಂದಾಗಿ, ಅಡಿಕೆ ದೇಹಕ್ಕೆ ಹಾನಿಕಾರಕ ಅಲ್ಲ. ಈ ರೀತಿ ಹೇಳಿಕೆಯಿಂದಾಗಿ ಅಡಿಕೆ ಮಾರುಕಟ್ಟೆ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಕರ್ನಾಟಕ ರಾಜ್ಯದ ಅಡಿಕೆ ಟಾಸ್ಕ್ ಫೋರ್ಸ್ (Karnataka State Areca Task Force) ನಿಯೋಗದ ವತಿಯಿಂದ ದೆಹಲಿಗೆ ತೆರಳಿ ಸಚಿವರನ್ನು ಭೇಟಿ ಮಾಡಲಾಗಿತ್ತು ಎಂದರು. ಇದನ್ನೂ ಓದಿ: ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಈ ಸಂಬಂಧ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ಥೋಮರ್ ಹಾಗೂ ರಾಜ್ಯ ಸಚಿವರನ್ನು ಭೇಟಿ ಮಾಡಲಾಗಿದ್ದು, ಅಡಿಕೆ ಬಗ್ಗೆ ಕೋರ್ಟ್‍ನಲ್ಲಿ ತೀರ್ಮಾನ ಆಗದೆ ಯಾವುದೇ ಹೇಳಿಕೆಗಳನ್ನು ನೀಡಬಾರದು, ಅದು ಅಡಿಕೆ ಬೆಳೆಗಾರರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

    ಅಡಿಕೆ ಮನುಷ್ಯನ ದೇಹಕ್ಕೆ ಹಾನಿಕರಕ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಒಂದು ಅಫಿಡವಿಟ್ ನೀಡಿದ್ದು, ಈ ಅಫಿಡವಿಟ್ ಅನ್ನು ತೆಗೆಯುವ ಸಲುವಾಗಿ ನಾವು ಪ್ರಯತ್ನ ಮಾಡ್ತಿದ್ದೇವೆ ಹಾಗೂ ಅಡಿಕೆ ಹಾನಿಕರಕ ಅಲ್ಲಾ ಎಂಬ ಬಗ್ಗೆ ನಮ್ಮ ರಾಜ್ಯದಲ್ಲಿ ಸಂಶೋಧನೆಯನ್ನು ಸಹ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ತವರಿಗೆ ನವೀನ್ ಮೃತದೇಹ- ಪ್ರಧಾನಿಗೆ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ (Ramaiah institute of medical sciences) ನಮ್ಮ ಟಾಸ್ಕ್ ಫೋರ್ಸ್ ಕಡೆಯಿಂದ ಸಂಶೋಧನೆ ನಡೆಯುತ್ತಲಿದೆ, ಹಾಗೂ ಕೇಂದ್ರದಿಂದಲೂ ಸಹ ಈ ಬಗ್ಗೆ ಅಧ್ಯಯನ ನಡೆಸಲು ಒಂದು ಸಮಿತಿಯನ್ನು ರಚನೆ ಮಾಡಲಾಗುತ್ತಿದೆ. ಅಡಿಕೆ ಸೇವನೆ, ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುದರ ಬಗ್ಗೆ ಒಂದು ಸ್ಪಷ್ಟ ನಿರ್ಧಾರಕ್ಕೆ ಇದರಿಂದ ಬರುವ ನಿರೀಕ್ಷೆಯಿದೆ ಹಾಗೂ ರೈತ ಸಮುದಾಯಕ್ಕೆ ಇದರಿಂದ ಬಹಳ ದೊಡ್ಡ ಯಶಸ್ಸು ದೊರೆಯಲಿದೆ. ನಾವು ನೀಡಿರುವ ಈ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮಗೆ ಅತ್ಯಂತ ಸಂತೋಷವಾಗಿದೆ ಎಂದರು.

  • 13ರ ಪೋರನ ಸಾಹಸ – ಅಡಿಕೆ ಮರ ಏರಿ ಗೊನೆ ಕೊಯ್ಯುದರಲ್ಲಿ ಎಕ್ಸ್‌ಪರ್ಟ್‌

    13ರ ಪೋರನ ಸಾಹಸ – ಅಡಿಕೆ ಮರ ಏರಿ ಗೊನೆ ಕೊಯ್ಯುದರಲ್ಲಿ ಎಕ್ಸ್‌ಪರ್ಟ್‌

    ಕಾರವಾರ: ಅಡಿಕೆ ತೋಟದಲ್ಲಿ ಗೊನೆ ಕೊಯ್ಯುವುದು ಎಂದರೇ ಅದು ಸಾಹಸದ ಕೆಲಸ. ನೂರಾರು ಅಡಿ ಎತ್ತರಕ್ಕೆ ಮರ ಹತ್ತಿ ಗೊನೆ ಇಳಿಸುವುದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ ಕಾರವಾರದಲ್ಲಿ 13 ವರ್ಷದ ಬಾಲಕನೋರ್ವ ಅಡಿಕೆ ಮರ ಏರಿ ಗೊನೆ ಕೊಯ್ಯುದರಲ್ಲಿ ಎಕ್ಸ್‌ಪರ್ಟ್‌ ಎನಿಸಿಕೊಂಡಿದ್ದಾನೆ.

    ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ, 30 ಅಡಿಗೂ ಹೆಚ್ಚಿನ ಎತ್ತರದ ಮರ ಏರಿ ಅಡಕೆ ಕೊಯ್ಯುತ್ತಾ ಒಂದು ಮರದಿಂದ ಮತ್ತೊಂದು ಮರ ಏರುವುದರಲ್ಲಿ ಸೈ ಎನಿಸಿಕೊಂಡ ಬಾಲಕ. ಸಚೇತ ದಿವಸ್ಪತಿ ಹೆಗಡೆ, ಕೊರೊನಾ, ಲಾಕ್‍ಡೌನ್ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ಮಲೆನಾಡಿನಲ್ಲಿ ಅಡಿಕೆ ಸುಗ್ಗಿ ಬಂದರೂ ಗೊನೆ ಕೊಯ್ಯುವವರಿಲ್ಲದೆ ಅಡಿಕೆ ಬೆಳೆಗಾರರು ನಷ್ಟ ಅನುಭವಿಸುತ್ತಿರುವುದನ್ನು ನೋಡಿದ್ದಾನೆ. ಅಲ್ಲದೆ ತಮ್ಮ ತೋಟದಲ್ಲಿ ಲಕ್ಷಾಂತರ ರೂಪಾಯಿ ಅಡಿಕೆ ನಷ್ಟವಾಗುದನ್ನು ಗಮನಿಸಿ ತಾನೇ ಮರವೇರಳು ನಿರ್ಧರಿಸಿ ಇದೀಗ ಇದನ್ನು ರೂಢಿಸಿಕೊಂಡಿದ್ದಾನೆ. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಭ್ಯ

    ಮರವೇರಿ ಅಡಿಕೆ ಕೊಯ್ಯಲು ಸಚೇತ ದಿವಸ್ಪತಿ ಹೆಗಡೆ ವಿಶೇಷ ತರಬೇತಿ ಏನು ಪಡೆದಿಲ್ಲ. ಈ ಹಿಂದೆ ಗೊನೆ ಕೊಯ್ಯುವವರನ್ನು ನೋಡಿ, ಆತ ಉಪಯೋಗಿಸುವ ವಸ್ತುಗಳನ್ನು ತಾನೂ ಸಿದ್ಧಪಡಿಸಿಕೊಂಡು 20 ರಿಂದ 50 ಅಡಿ ಎತ್ತರದ ಮರ ಏರಿ ಕ್ವಿಂಟಾಲ್‌ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದ್ದಾನೆ.

    ಕಾರವಾರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲಭಾಗಗಳಲ್ಲಿ ಅಡಿಕೆ ಮರ ಏರಿ ಅಡಿಕೆ ಕೊಯ್ಯಲು ಒಬ್ಬ ವ್ಯಕ್ತಿ 2 ಸಾವಿರ ರೂ. ನಿಂದ 3 ಸಾವಿರ ರೂ. ವರೆಗೂ ದಿನಕ್ಕೆ ಕೂಲಿ ತೆಗೆದುಕೊಳ್ಳುತ್ತಾನೆ. ದುಬಾರಿ ಕೂಲಿ ಕೊಟ್ಟರೂ ಗೊನೆ ಕೊಯ್ಯಲು ಕೆಲಸದವರು ಸಿಗುವುದಿಲ್ಲ. ಹೀಗಾಗಿ ಸಚೇತ ದಿವಸ್ಪತಿ ಹೆಗಡೆ, ತಮ್ಮ ಸ್ವಂತ ತೋಟದ ಅಡಿಕೆಯನ್ನು ಕೊಯ್ಯುತ್ತಿದ್ದಾನೆ. ಈ ಕಾರ್ಯಕ್ಕೆ ಕುಟುಂಬದವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ನಿಯಮ ಮರೆತು ಕ್ರಿಕೆಟ್ ಪಂದ್ಯಾಟ – ಬ್ಯಾಟ್‍ಬೀಸಿ ಸಂಭ್ರಮಿಸಿದ ಜಮೀರ್

    ಇಂದಿನ ತಲೆಮಾರಿನ ಜನ ಕೃಷಿಯಿಂದ ವಿಮುಖವಾಗುತ್ತಿರುವಾಗ ಈ ಪುಟ್ಟ ಬಾಲಕ ಕೃಷಿಯ ಬಗ್ಗೆ ಆಸಕ್ತಿ ತೋರಿಸಿ ಮುನ್ನುಗುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕೈ ಕೆಸರಾದರೇ ಬಾಯಿ ಮೊಸರು ಎನ್ನುವಂತೆ ಕಷ್ಟ ಪಟ್ಟರೇ ಎಂತದ್ದನ್ನೂ ಸಾಧಿಸಬಹುದು ಎನ್ನುವುದಕ್ಕೆ ಸಚೇತ ದಿವಸ್ಪತಿ ಹೆಗಡೆ ಮಾದರಿಯಾಗಿದ್ದಾನೆ.

  • ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ – ನೀರಾವರಿಗೆ ಸಿಕ್ಕಿದ್ದು ಏನು?

    ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ – ನೀರಾವರಿಗೆ ಸಿಕ್ಕಿದ್ದು ಏನು?

    – ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ
    – ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ

    ಬೆಂಗಳೂರು: ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆ 32,259 ಕೋಟಿ ರೂ. ಅನುದಾನವನ್ನು ಯಡಿಯೂರಪ್ಪ ನೀಡಿದ್ದು ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ ಪ್ರಕಟಿಸಿದ್ದಾರೆ.

    ಮುಖ್ಯಾಂಶಗಳು
    ರಾಜ್ಯದ ಪ್ರತಿ ಗ್ರಾಮದಲ್ಲಿ “ಜಲಗ್ರಾಮ ಕ್ಯಾಲೆಂಡರ್” ಸಿದ್ಧಪಡಿಸಲು ಕ್ರಮ. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ “ಕಿಂಡಿ ಅಣೆಕಟ್ಟು ಯೋಜನೆ”ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.

    ಅಟಲ್ ಭೂ-ಜಲ ಯೋಜನೆಯಡಿ 1202 ಕೋಟಿ ರೂ.ಗಳನ್ನು ಬಳಸಿಕೊಂಡು ರಾಜ್ಯದ ಆಯ್ದ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ. ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ ಫ್ಲಡ್ ಇರಿಗೇಷನ್ ಪದ್ಧತಿಯನ್ನು ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸಲು ಕ್ರಮ. ಇದನ್ನೂ ಓದಿ: ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಸಣ್ಣ ರೈತರಿಗೆ 10 ಸಾವಿರ – ಕೃಷಿಗೆ ಸಿಕ್ಕಿದ್ದು ಏನು?

    ಜಲಸಂಪನ್ಮೂಲ ಇಲಾಖೆಯ ಮೂಲಕ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ. ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.

    ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನ, ಮೊದಲನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ. ಹೂಳು ತುಂಬಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಪರ್ಯಾಯ ಹರಿವು ನಾಲೆ ಮೂಲಕ ನವಲೆ ಹತ್ತಿರ ಸಮತೋಲನಾ ಜಲಾಶಯ ನಿರ್ಮಾಣದ ವಿಸ್ತೃತ ಯೋಜನಾ ವರದಿ ತಯಾರಿಕೆಗೆ 20 ಕೋಟಿ ರೂ. ಅನುದಾನ

    ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನ. ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಾಣ- ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕ್ರಮ.

    ರಾಮನಗರ ಜಿಲ್ಲೆಯ ಕಣ್ವ ಫಾರ್ಮ್‍ನಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ರೇಷ್ಮೆ ಹುಳು ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ. ರಾಜ್ಯದಲ್ಲಿ ಪಶುಸಂಗೋಪನಾ ಆರ್ಥಿಕ ಚಟುವಟಿಕೆಗಳ ವಿಸ್ತರಣೆಗೆ ಸಮೀಕ್ಷೆ ನಡೆಸಿ, ಸಮಗ್ರ ನೀತಿ ರಚನೆ.

    ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಗೆ ಐದು ಕೋಟಿ ರೂ. ಅನುದಾನ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯವರ್ಧನ ಕೇಂದ್ರ ಸ್ಥಾಪನೆ.

    ಲಿಂಗ ನಿರ್ಧಾರಿತ ವೀರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಮೂಲಕ ಹೆಣ್ಣು ಕರುಗಳ ಜನನ ಹೆಚ್ಚಿಸಲು ಎರಡು ಕೋಟಿ ರೂ. ಅನುದಾನ. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ” ಜಾರಿ.

    “ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1,000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ. ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.

    ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ. ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ. ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ. ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂ.

    ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ. ಕೊಡೇರಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ಕೋಟಿ ರೂ. ಅನುದಾನ.

    ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (DCC), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (PCARD) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಪ್ರಯೋಜನ.

    ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ

    ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 ಎಫ್‍ಪಿಒ ರಚನೆ, ಈ ಎಫ್‍ಪಿಒ ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ ಎಂಟು ಕೋಟಿ ರೂ. ನೆರವು. ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿಗಾಗಿ ಸ್ಥಾಪಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿಯ ಮೊತ್ತ ಅಗತ್ಯಕ್ಕೆ ಅನುಗುಣವಾಗಿ 2000 ಕೋಟಿ ರೂ. ವರೆಗೆ ಹೆಚ್ಚಳ.