Tag: Arif Mohammed Khan

  • ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

    ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

    ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠದಲ್ಲಿ (Krishna Matha) ಒಂದು ತಿಂಗಳ ಕಾಲ ನಡೆದ ಶ್ರೀ ಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭದಲ್ಲಿ ಕೇರಳ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಭಾಗವಹಿಸಿದರು. ಎರಡು ದಿನದ ಉಡುಪಿ (Udupi) ಪ್ರವಾಸ ಮಾಡಿದ ಆರಿಫ್ ಮೊಹಮ್ಮದ್ ಖಾನ್ ಕೊಲ್ಲೂರು ಮೂಕಾಂಬಿಕೆ ಹಾಗೂ ಉಡುಪಿಯ ಶ್ರೀ ಕೃಷ್ಣದೇವರ ದರ್ಶನ ಪಡೆದರು.

    ಪರ್ಯಾಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸನ್ಮಾನಿಸಿದರು. ಈ ವೇಳೆ ಶ್ರೀ ಕೃಷ್ಣ ಮಠದ ಇತಿಹಾಸ ಪುರಾಣಗಳ ಬಗ್ಗೆ ಆರಿಫ್ ಮೊಹಮ್ಮದ್ ಖಾನ್ ಸ್ವಾಮೀಜಿಯವರಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ| ಎಲ್ಲಾ ಕನ್ನಡಿಗರಿಗೆ ನಮಸ್ಕಾರ : ಸಮಿತ್ ದ್ರಾವಿಡ್ ಮೊದಲ ಪ್ರತಿಕ್ರಿಯೆ

    ಬಳಿಕ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಧರ್ಮಗಳು ಬೇರೆ ಆಗಿರಬಹುದು. ಆದರೆ ನಾವೆಲ್ಲರೂ ಭಾರತೀಯರು ಮತ್ತು ಒಂದೇ ಸಂಸ್ಕೃತಿಯವರು. ಭಿನ್ನ-ಭಿನ್ನ ಹೆಸರಿನಲ್ಲಿ ದೇವರನ್ನು ಪೂಜಿಸಿದರೂ ಕೊನೆಗೆ ನಮ್ಮೆಲ್ಲರ ಪ್ರಾರ್ಥನೆ ಕೇಶವನಿಗೆ ಸಲ್ಲುವುದು. ವಿವಿಧತೆಯಲ್ಲಿ ಏಕತೆ ನಮ್ಮ ಸಂಸ್ಕೃತಿಯ ಆತ್ಮ ಎಂದು ಬಣ್ಣಿಸಿದರು. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

  • ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ದೇಶಕ್ಕೇ ತೊಂದರೆ- ಆರಿಫ್ ಮೊಹಮ್ಮದ್ ಖಾನ್

    ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ದೇಶಕ್ಕೇ ತೊಂದರೆ- ಆರಿಫ್ ಮೊಹಮ್ಮದ್ ಖಾನ್

    ನವದೆಹಲಿ: ಮುಸ್ಲಿಮರು ಶಿಕ್ಷಣದಲ್ಲಿ (Muslim Education) ಹಿಂದುಳಿದರೆ ದೇಶಕ್ಕೇ ತೊಂದರೆಯಾಗುತ್ತದೆ ಎಂದು ಕೇರಳ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಎಚ್ಚರಿಸಿದ್ದಾರೆ.

    ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ಹಿನ್ನಡೆಗೆ ನಾವೇ (ಮುಸ್ಲಿಮರೇ) ಕಾರಣ. ಏಕೆಂದರೆ ನಾವು ನಮ್ಮ ಮೇಲಿನ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ರಯತ್ನಿಸುವುದಿಲ್ಲ. ಅದಕ್ಕಾಗಿ ಹಿಂದುಳಿದಿದ್ದೇವೆ. ಮುಸ್ಲಿಮರು ಶಿಕ್ಷಣದಲ್ಲಿ (Muslim Education) ಹಿಂದುಳಿದರೆ ಇಡೀ ದೇಶಕ್ಕೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೋವಾ, ಆಟೋ ಡಿಕ್ಕಿ- ಬಾಲಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

    ಆಧುನಿಕ ಶಿಕ್ಷಣ ಇಸ್ಲಾಂಗೆ ವಿರುದ್ಧವಾಗಿ ಪರಿಗಣಿಸಲಾಗಿದೆ. ಆದ್ದರಿಂದ ಮುಸ್ಲಿಮರು ಶಿಕ್ಷಣ ಮುಂದುವರಿಸದೇ ನಿಷೇಧಿಸಲು ನಿರ್ಧರಿಸುತ್ತಿದ್ದಾರೆ. ಹೊರತಾಗಿ ಕಳಿಸಿದ್ರೆ ಅಂಥರವ ವಿರುದ್ಧ ಅವರೇ ಕ್ರಮ ತೆಗೆದುಕೊಳ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 16 ವರ್ಷಗಳ ಹಿಂದೆ ಪತಿ, ಈಗ ಪತ್ನಿ – ದಂಪತಿ ಜೀವನ ವಿಮಾನ ದುರಂತದಲ್ಲಿ ಅಂತ್ಯ

    ಧಾರ್ಮಿಕ ಕಾರಣಗಳಿಗಾಗಿ `ಫತ್ವಾ’ಗಳನ್ನ ಎಂದಿಗೂ ಬಳಸಲಾಗುವುದಿಲ್ಲ. ಕುರಾನ್‌ನಲ್ಲಿ 200 ನಿದರ್ಶನಗಳಿವೆ. ಆ ಪ್ರಕಾರ ಯಾರು ಸರಿ, ಯಾರು ತಪ್ಪು ಎಂದು ಯಾರೊಬ್ಬರೂ ನಿರ್ಧಿರಿಸಲು ಸಾಧ್ಯವಿಲ್ಲ. ಆದ್ರೆ ಈಗ `ಫತ್ವಾ’ಗಳನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡೀಮ್ಡ್ ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್ ಖಾನ್‌ನನ್ನು ವಜಾಗೊಳಿಸಿದ ಕೇರಳ ಸರ್ಕಾರ

    ಡೀಮ್ಡ್ ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್ ಖಾನ್‌ನನ್ನು ವಜಾಗೊಳಿಸಿದ ಕೇರಳ ಸರ್ಕಾರ

    ತಿರುವನಂತಪುರಂ: ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ (Deemed University) ಕುಲಪತಿ (Chancellor) ಸ್ಥಾನದಿಂದ ಕೇರಳ (Kerala) ರಾಜ್ಯಪಾಲ (Governor) ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರನ್ನು ರಾಜ್ಯ ಸರ್ಕಾರ ಗುರುವಾರ ವಜಾಗೊಳಿಸಿದೆ.

    ಕೇರಳದಲ್ಲಿ ಹಲವು ದಿನಗಳಿಂದ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ನಡೆಯುತ್ತಿದ್ದು, ಇದೀಗ ತಾರಕಕ್ಕೇರಿದೆ. ಬುಧವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ವಜಾಗೊಳಿಸಲು ಕೇರಳದ ಎಡ ನೇತೃತ್ವದ ಸರ್ಕಾರ (LDF) ನಿರ್ಧರಿಸಿದ್ದು, ಇಂದು ಅವರನ್ನು ವಜಾಗೊಳಿಸಿದೆ. ಇದನ್ನೂ ಓದಿ: ಮೋದಿ ಬೆಂಗಳೂರು ಡೈರಿ: ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಯಾವೆಲ್ಲ ರಸ್ತೆಗಳು ಬಂದ್‌?

    ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಹೆಚ್ಚು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ವಜಾಗೊಳಿಸಲಾಗಿದೆ.

    ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆಡಳಿತ ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾಲಯಗಳ ಚುಕ್ಕಾಣಿ ಹಿಡಿಯಲು ರಾಜ್ಯಪಾಲರು ಬಯಸುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರು, ಹೈದರಾಬಾದ್‌ನಲ್ಲೂ ಇಂದಿನಿಂದ ಜಿಯೋ ಟ್ರೂ 5G ಲಭ್ಯ

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ಕಾನೂನುಗಳು ಕುರಾನ್‌ಗೆ ವಿರುದ್ಧವಾಗಿವೆ – ರಶ್ದಿ ಮೇಲಿನ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಹೇಳಿದ್ದಿಷ್ಟು

    ಮುಸ್ಲಿಂ ಕಾನೂನುಗಳು ಕುರಾನ್‌ಗೆ ವಿರುದ್ಧವಾಗಿವೆ – ರಶ್ದಿ ಮೇಲಿನ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಹೇಳಿದ್ದಿಷ್ಟು

    ತಿರುವನಂತಪುರಂ: ಲೇಖಕ, ಖ್ಯಾತ ಕಾದಂಬರಿಕಾರರೂ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು ಸೂಕ್ತವಲ್ಲ. ಏಕೆಂದರೆ ಮುಸ್ಲಿಂ ಬಹುತೇಕ ಕಾನೂನುಗಳು ಕುರಾನ್ ಆಧರಿತವಾಗಿಲ್ಲ, ವಿರುದ್ಧವಾಗಿಯೇ ಇವೆ ಎಂದು ಹೇಳಿದ್ದಾರೆ.

    ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲಿನ ಮಾರಣಾಂತಿಕ ದಾಳಿ ಕುರಾನ್‌ನ ಬೋಧನೆಗಳಿಗೆ ವಿರುದ್ಧವಾಗಿದೆ. ಆದರೆ ಇಂತಹ ದಾಳಿಗಳಿಗೆ ಅವಕಾಶ ನೀಡುವ ಕಾನೂನುಗಳಿಗೆ ಮುಸ್ಲಿಂ ಕಾನೂನಿನ ಹಣೆಪಟ್ಟಿ ಕಟ್ಟಲಾಗಿದೆ. ದಿಯೋಬಂದ್ ಹಾಗೂ ನದ್ವಾತುಲ್ ಉಲೇಮಾದಂತಹ ಪ್ರಮುಖ ಮದರಸಾಗಳಲ್ಲಿನ ಪಠ್ಯ ಕ್ರಮದ ಭಾಗವಾಗಿವೆ ಎಂದು ಆರೀಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ಇದನ್ನೂ ಓದಿ: ರಶ್ದಿ ಆರೋಗ್ಯದಲ್ಲಿ ಚೇತರಿಕೆ – ವೆಂಟಿಲೇಟರ್‌ನಿಂದ ಬಿಡುಗಡೆ

    ಇಸ್ಲಾಂ ಹೆಸರಿನಲ್ಲಿ ಏನೇ ನಡೆದರೂ ಅದಕ್ಕೆ ಪುಸ್ತಕದ ಅನುಮೋದನೆ ಇರಬೇಕು. ಆದ್ರೆ ಈಗ ಮುಸ್ಲಿಂ ಸಾಮ್ರಾಜ್ಯದ ಅವಧಿಯಲ್ಲಿ ಬಂದಂತಹ ಕಾನೂನಿಗೆ ಅನುಗುಣವಾಗಿ ನಡೆಯುತ್ತಿದೆ. ಇವೆಲ್ಲಾ ದೇವ ವಿಶ್ವಾಸಿಗಳಿಗೆ ವ್ಯರ್ಥ ಹಾಗೂ ನೋಯಿಸುವ ಅಂಶಗಳಿಂದ ದೂರ ಇರುವಂತೆ ಹೇಳುವ ಕುರಾನ್ ಬೋಧನೆಗಳಿಗೆ ವಿರುದ್ಧವಾಗಿಯೇ ಇದೆ. ಇಂತಹ ಕೃತ್ಯಗಳನ್ನು ಇಸ್ಲಾಮಿಕ್ ಎಂದು ಹೇಳುವುದು ಸೂಕ್ತವಲ್ಲ ಎಂಬುದು ನನ್ನ ಭಾವನೆ ಎಂದಿದ್ದಾರೆ. ಇದನ್ನೂ ಓದಿ: ಟಾಯ್ಲೆಟ್‍ನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆಜಿಗಟ್ಟಲೆ ಚಿನ್ನ ಹೊತ್ತೊಯ್ದರು

    ರಶ್ದಿ ಮೇಲಿನ ದಾಳಿಯಂತಹ ಕೃತ್ಯಗಳಿಗೆ ಅನುಮೋದನೆ ನೀಡುವ ಕಾನೂನನ್ನು ಮುಸ್ಲಿಂ ಕಾನೂನು ಎಂಬ ಹಣೆಪಟ್ಟಿ ಕಟ್ಟಲಾಗಿದೆ. ಸಮಸ್ಯೆ ಏನಾಗಿದೆ ಎಂದರೆ ಮುಸ್ಲಿಂ ಕಾನೂನು ಎಂದು ಹೇಳುತ್ತಿರುವುದು ಬಹುತೇಕ ಕುರಾನ್ ಆಧರಿತವಾಗಿಲ್ಲ. ಅಂದಿನ ಸರ್ಕಾರಗಳಲ್ಲಿದ್ದ ವ್ಯಕ್ತಿಗಳು ನಿರ್ಮಿಸಿರುವಂತಹ ನಿಬಂಧನೆಗಳಾಗಿವೆ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪೌರತ್ವ ಕಾಯ್ದೆ ಪರ ಮಾತು – ಕೇರಳ ರಾಜ್ಯಪಾಲರ ಭಾಷಣಕ್ಕೆ ವಿರೋಧ, ವೇದಿಕೆಯಲ್ಲಿ ಪ್ರತಿಭಟನೆ

    ಪೌರತ್ವ ಕಾಯ್ದೆ ಪರ ಮಾತು – ಕೇರಳ ರಾಜ್ಯಪಾಲರ ಭಾಷಣಕ್ಕೆ ವಿರೋಧ, ವೇದಿಕೆಯಲ್ಲಿ ಪ್ರತಿಭಟನೆ

    ತಿರುವನಂತಪುರ: ಕಣ್ಣೂರು ವಿಶ್ವವಿದ್ಯಾಲಯದಲ್ಲಿ ನಡೆದ ಭಾರತೀಯ ಇತಿಹಾಸ ಕಾಂಗ್ರೆಸ್ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಭಾಷಣಕ್ಕೆ ಅಪಸ್ವರ ಕೇಳಿಬಂದಿದೆ.

    ರಾಜ್ಯಪಾಲರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮಾತನಾಡಿದ್ದಾರೆ ಎಂದು ಕಣ್ಣೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿ, ಇತಿಹಾಸ ತಜ್ಞ ಇರ್ಫಾನ್ ಹಬೀಬ್ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣ ಮಾಡುವುದನ್ನು ಅರ್ಧಕ್ಕೇ ತಡೆದಿದ್ದಾರೆ.

    ಇತಿಹಾಸ ತಜ್ಞ ಇರ್ಫಾನ್ ಹಬೀಬ್ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಖಾನ್ ಅವರು ಅವರ ಭಾಷಣದಲ್ಲಿ ರಾಜಕೀಯ ಭಾಷಣದಂತೆ ಗಣ್ಯರ ಹೇಳಿಕೆಗಳನ್ನು ತಮ್ಮ ಭಾಷಣದಲ್ಲಿ ಬಳಸಿದ್ದಾರೆ ಎಂದು ಇರ್ಫಾನ್ ಆರೋಪಿಸಿದ್ದಾರೆ.

    ಈ ವೇಳೆ ರಾಜ್ಯಪಾಲರು ಇದಕ್ಕೆ ಉತ್ತರಿಸಿ, ನೀವು ಒಂದು ಅಜೆಂಡಾ ಇಟ್ಟುಕೊಂಡು ಬಂದಿದ್ದೀರಿ. ಹೀಗೆ ಕಿರುಚಾಡುವ ಮೂಲಕ ನನ್ನನ್ನು ಸುಮ್ಮನಿರಿಸಲು ಸಾಧ್ಯವಿಲ್ಲ. ಅಲ್ಲದೆ ಪ್ರತಿಭಟನಾಕಾರರು ಅಸಹಿಷ್ಣುತೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದಕ್ಕೆ ಪ್ರತಿಯಾಗಿ ಕಾರ್ಯಕ್ರಮದಲ್ಲಿಯೇ ಇರ್ಫಾನ್ ಕೂಗಾಡಿದ್ದು, ಈ ಕುರಿತು ವಿಡಿಯೋದಲ್ಲಿ ದಾಖಲಾಗಿದೆ. ಖಾನ್ ಅವರೇ ಅಜೆಂಡಾ ಹೊಂದಿದ್ದಾರೆ. ಆದರೆ ಇದು ಪಾಕಿಸ್ತಾನವಲ್ಲ ಭಾರತ ಎಂದು ಕೂಗಿದ್ದಾರೆ.

    ಪ್ರತಿಭಟನೆ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಪಾಲರು ತಮ್ಮ ಭಾಷಣವನ್ನು ಮುಂದುವರಿಸಿದ್ದು, ಮೌಲಾನಾ ಆಜಾದ್ ಅವರು ವಿಭಜನೆಯ ಕೊಳೆಯನ್ನು ಅಳಿಸಿ ಹಾಕಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಇನ್ನೂ ಕೆಲವು ರಸ್ತೆ ಗುಂಡಿಗಳು ಉಳಿದಿವೆ. ಅದರಲ್ಲಿ ನೀರು ಸಂಗ್ರಹವಾಗಿದ್ದರಿಂದ ಇದೀಗ ಗಬ್ಬು ನಾರುತ್ತಿದೆ ಎಂದು ತಿಳಿಸಿದ್ದಾರೆ.

    ಇದಕ್ಕೆ ಅಸಮಾಧಾನಗೊಂಡ ಇರ್ಫಾನ್, ನಿಮ್ಮಿಂದ ದುರ್ವಾಸನೆ ಬರುತ್ತಿದೆ ಎಂದು ರಾಜ್ಯಪಾಲರಿಗೆ ತಿರುಗೇಟು ನೀಡಿ, ಮೌಲಾನಾ ಆಜಾದ್ ಅವರು ನಿಮ್ಮೆಲ್ಲರಿಗೂ ಇದನ್ನು ಹೇಳಿದ್ದಾರೆ ಎಂದು ಉತ್ತರಿಸಿದ್ದಾರೆ.

    ಘಟನೆ ನಂತರ ರಾಜ್ಯಪಾಲರು ಈ ಕುರಿತು ಟ್ವೀಟ್ ಮಾಡಿ, ತಮ್ಮ ಭಾಷಣಕ್ಕೆ ಅಡ್ಡಿ ಪಡಿಸಿ ಪ್ರತಿಭಟಿಸಲು ಮುಂದಾದ ಇರ್ಫಾನ್ ಹಬೀಬ್ ಅವರ ಹೇಳಿಕೆ ಕುರಿತು ತಿಳಿಸಿದ್ದಾರೆ. ನನ್ನ ಭಾಷಣಕ್ಕೆ ಅಡ್ಡಿ ಪಡಿಸಿ, ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್ ನಾಯಕ ಮೌಲಾನಾ ಆಜಾದ್ ಬದಲಿಗೆ ಗೋಡ್ಸೆ ಅವರ ಹೆಸರನ್ನು ಉಲ್ಲೇಖಿಸುವಂತೆ ಕೂಗಿದರು ಎಂದು ಟ್ವೀಟಿನಲ್ಲಿ ತಿಳಿಸಿದ್ದಾರೆ.

    ನಾನು ಭಾಷಣ ಮಾಡುವ ಮುನ್ನ ಮಾತನಾಡಿದ್ದ ಅತಿಥಿಗಳು ಎತ್ತಿದ್ದ ಅಂಶಗಳಿಗೆ ನಾನು ಉತ್ತರ ನೀಡುತ್ತಿದ್ದೆ. ಸಂವಿಧಾನವನ್ನು ರಕ್ಷಿಸುವುದು ನನ್ನ ಕರ್ತವ್ಯ. ಹೀಗಾಗಿ ನಾನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದು ಕೆಲವರಿಗೆ ಇಷ್ಟವಾಗದ್ದಕ್ಕೆ ಗಲಾಟೆ ಎಬ್ಬಿಸಿದ್ದಾರೆ ಎಂದು ರಾಜ್ಯಪಾಲರು ಹೇಳಿದ್ದಾರೆ.