ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರಾಗಿ 2018 ರಿಂದ ನೇಮಕಗೊಂಡ 698 ಮಂದಿಯಲ್ಲಿ 108 ಮಹಿಳೆಯರಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.
ಈ ಅವಧಿಯಲ್ಲಿ 22 ಮಂದಿ ಎಸ್‌ಸಿ ಸಮುದಾಯಕ್ಕೆ ಸೇರಿದವರು, 15 ಮಂದಿ ಎಸ್‌ಟಿ ಸಮುದಾಯಕ್ಕೆ ಸೇರಿದವರು, 87 ಮಂದಿ ಇತರ ಹಿಂದುಳಿದ ವರ್ಗಗಳಿಗೆ ಸೇರಿದವರು ಮತ್ತು 37 ಮಂದಿ ಅಲ್ಪಸಂಖ್ಯಾತ ಸಮುದಾಯದವರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ದೇಶದಾದ್ಯಂತ ನ್ಯಾಯಾಲಯಗಳಲ್ಲಿ ನೇಮಕಗೊಂಡ ಒಟ್ಟು ನ್ಯಾಯಾಧೀಶರಲ್ಲಿ ಎಸ್‌ಸಿ/ಎಸ್‌ಟಿ ನ್ಯಾಯಾಧೀಶರ ಶೇಕಡಾವಾರು ಪ್ರಮಾಣ ಮತ್ತು ಹೈಕೋರ್ಟ್‌ಗಳಲ್ಲಿ ಹೆಚ್ಚಿನ ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ನ್ಯಾಯಾಧೀಶರನ್ನು ನೇಮಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಸಂಸದ ನೀರಜ್ ಡಾಂಗಿ ಅವರು ಕೇಳಿದ ಪ್ರಶ್ನೆಗೆ ಸಚಿವಾಲಯ ಉತ್ತರಿಸಿದೆ.
ಜಿಲ್ಲಾ ನ್ಯಾಯಾಂಗದ ನ್ಯಾಯಾಧೀಶರ ನೇಮಕದ ಬಗ್ಗೆ ಕೇಂದ್ರೀಯವಾಗಿ ನಿರ್ವಹಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. ಇನ್ನು 2018 ರಿಂದ, ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಶಿಫಾರಸು ಮಾಡಿದವರು ತಮ್ಮ ಸಾಮಾಜಿಕ ಹಿನ್ನೆಲೆಯ ಬಗ್ಗೆ ವಿವರಗಳನ್ನು ನಿಗದಿಪಡಿಸಲಾಗಿದೆ ನಮೂನೆಯಲ್ಲಿ ಒದಗಿಸಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಕಾನೂನು ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಒಟ್ಟು 20,466 ನ್ಯಾಯಾಧೀಶರಲ್ಲಿ, 3,871 ನ್ಯಾಯಾಧೀಶರು ಎಸ್‌ಸಿ/ಎಸ್‌ಟಿ ವರ್ಗಕ್ಕೆ ಸೇರಿದವರಾಗಿದ್ದರೆ, ಒಟ್ಟು ಬಲದ ಶೇ. 19 ರಷ್ಟಿದ್ದಾರೆ.
ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರ್ಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರೊಂದಿಗೆ ಮಹತ್ವದ ಸಭೆ ನಡೆಸಿದರು.
ನವದೆಹಲಿಯ (Newdelhi) ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಗುರುವಾರ (ಜ.9) ನಡೆದ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.ಇದನ್ನೂ ಓದಿ: ತಿರುಪತಿಯಲ್ಲಿ ಕಾಲ್ತುಳಿತ ದುರಂತ – ಬೆಂಗಳೂರಿನ ಟಿಟಿಡಿ ದೇವಸ್ಥಾನದ ಭದ್ರತೆ ಪರಿಶೀಲಿಸಿದ ಪೊಲೀಸರು
ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ ಎಂದರು.
ಮುಖ್ಯವಾಗಿ 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂತಹ ಮಹತ್ವಾಕಾಂಕ್ಷೆಯ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.ಇದನ್ನೂ ಓದಿ: ಶರಣಾದ ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ ಆಗ್ರಹ
– ವಿಪಕ್ಷಗಳಿಂದ ವಿರೋಧ – ಮಸೂದೆ ಮಂಡನೆ ಪರ 269, ವಿರುದ್ಧ 198 ಮತ
ನವದೆಹಲಿ: ಇಡೀ ದೇಶವೇ ಕುತೂಹಲದಿಂದ ನೋಡುತ್ತಿದ್ದ ʻಒಂದು ರಾಷ್ಟ್ರ ಒಂದು ಚುನಾವಣೆʼ ಮಸೂದೆಯನ್ನು (One Nation, One Election Bill) ಕೇಂದ್ರ ಸರ್ಕಾರ ಲೋಕಸಭೆಯಲ್ಲಿ (Lok Sabha) ಮಂಡಿಸಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಹೊಸ ಸಂಸತ್ ಭವನದಲ್ಲಿ ಮಸೂದೆ ಮಂಡನೆಗೆ ಇದೇ ಮೊದಲ ಬಾರಿಗೆ ಎಲೆಕ್ಟ್ರಾನಿಕ್ ವೋಟಿಂಗ್ (E Voting) ವ್ಯವಸ್ಥೆ ಬಳಕೆ ಮಾಡಲಾಯಿತು. 269 ಸದಸ್ಯರು ಪರವಾಗಿ ಮತ ಚಲಾಯಿಸಿದ್ರೆ, 198 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ನಂತರ ಕಲಾಪವನ್ನು 1 ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು. ನಂತರ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಸರ್ಕಾರದ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ ಕಾಯ್ದೆ, 1991 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ದಿನದ ವೇಳಾಪಟ್ಟಿಯಂತೆ ತಿದ್ದುಪಡಿ ಮಸೂದೆ ಮಂಡಿಸಿದರು.
ಒಂದು ದೇಶ – ಒಂದು ಚುನಾವಣೆ ಅಂದ್ರೆ ಏನು?
ಪ್ರಮುಖವಾಗಿ ಒಂದು ದೇಶ, ಒಂದು ಚುನಾವಣೆ ಅಂದ್ರೆ ಏನು ಎಂಬುದನ್ನು ನೋಡುವುದಾದರೆ, ಹೆಸರೇ ಹೇಳುವಂತೆ ಒನ್ ನೇಷನ್ ಒನ್ ಎಲೆಕ್ಷನ್ ಅಂದ್ರೆ ರಾಷ್ಟ್ರದ ಎಲ್ಲ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಯತ್ನ. ಈಗ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬೇರೆ ಬೇರೆ ಅವಧಿಯಲ್ಲಿ ನಡೆಯುತ್ತಿದ್ದು, ಅವುಗಳನ್ನು ಏಕಕಾಲದಲ್ಲಿ ನಡೆಸಬೇಕು ಎನ್ನುವ ಉದ್ದೇಶ ಈ ಮಸೂದೆಯ ಹಿಂದಿದೆ.
ಸ್ವಾತಂತ್ರ್ಯ ಬಂದಾಗಿನಿಂದ ವಿಧಾನಸಭೆ, ಲೋಕಸಭೆ ಸೇರಿ ಭಾರತದಲ್ಲಿ ಸುಮಾರು 400 ಚುನಾವಣೆಗಳು ನಡೆದಿವೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ. ಜೊತೆಗೆ ಪ್ರತಿ ಚುನಾವಣೆಗೂ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಹಿನ್ನೆಲೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಈ ಕಾರಣಕ್ಕಾಗಿ ಒಂದು ದೇಶ, ಒಂದು ಚುನಾವಣೆ ತರಬೇಕು ಎಂದು ಕೇಂದ್ರ ಸರ್ಕಾರ ಮುಂದಾಗಿದೆ. ಅದರಲ್ಲೂ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ಕೂಡ ನೀಡಿದ್ದು, ಅದರಂತೆ ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆಯಾಗಿದೆ.
ವಿಧೇಯಕ ಮಂಡಿಸಲು ನಡೆದ ಮತದಾನದಲ್ಲಿ 461 ಸದಸ್ಯರು ಪಾಲ್ಗೊಂಡಿದ್ದರು. ಈ ಪೈಕಿ ಬಹುಮತಕ್ಕೆ 3ನೇ ಎರಡರಷ್ಟು ಅಂದ್ರೆ, 307 ಮತಗಳ ಅಗತ್ಯವಿತ್ತು. ಆದ್ರೆ ಎನ್‌ಡಿಎ 269 ಮತಗಳನ್ನು ಪಡೆದುಕೊಂಡು, ಪ್ರತಿಪಕ್ಷಗಳು 198 ಮತ ಗಳಿಸಿಕೊಂಡವು. ಇದರಿಂದ ಬಬಹುಮತ ಗಳಿಸುವಲ್ಲಿ ಸರ್ಕಾರ ವಿಫಲವಾಯಿತು. ಈ ಕುರಿತ ಇ-ವೋಟಿಂಗ್‌ನ ಸ್ಕ್ರೀನ್‌ಶಾಟ್ ಚಿತ್ರವೊಂದನ್ನು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ ದರವು 5.4% ರಷ್ಟಿದೆ – ನಿರ್ಮಲಾ ಸೀತಾರಾಮನ್
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಮತದಾನದ ಮೂಲಕ ಬಿಜೆಪಿಯವರು ಹೆಚ್ಚುಕಾಲ ಉಳಿಬಾರದು ಎಂಬ ಸಂದೇಶ ಸ್ಪಷ್ಟವಾಗಿದೆ. ಈ ಮಸೂದೆಗೆ ಸ್ಪಷ್ಟ ಬೆಂಬಲ ಸಿಕ್ಕಿಲ್ಲ. ಅನೇಕ ಪಕ್ಷಗಳು ಇದರ ವಿರುದ್ಧವಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ
ಕೋಲ್ಕತ್ತಾ: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು (New Criminal Laws) ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ತಿಳಿಸಿದ್ದಾರೆ.
ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ಜಾರಿಗೊಳಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮುಂದುವರಿದು ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
2023ರ ಡಿಸೆಂಬರ್‌ನಲ್ಲಿ ಈ ಮೂರು ಕಾನೂನುಗಳನ್ನು ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಬಳಿಕ ಈ ಮೂರು ಕಾಯ್ದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಆದ್ರೆ ಕೇಂದ್ರ ಸರ್ಕಾರ ಅಧಿಸೂಚನೆ ಮುಂದೂಡಿದ್ದರಿಂದ ಅಧಿಕೃತವಾಗಿ ಜಾರಿಗೆ ಬಂದಿರಲಿಲ್ಲ. ಪ್ರಸಕ್ತ ವರ್ಷಾರಂಭದಲ್ಲಿ ಮೂರು ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‍ಕೌಂಟರ್ – ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಂಪುಟ ಪುನರ್‌ರಚನೆಯಾಗಿದ್ದು (Cabinet) ಸಚಿವರಾದ ರಿಜಿಜು (Kiren Rijiju) ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರ ಖಾತೆ ಬದಲಾವಣೆಯಾಗಿದೆ.
ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರಿಗೆ ಕಾನೂನು ಸಚಿವ (Law Minister) ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ
ರಿಜಿಜು 2021ರ ಜು.8 ರಂದು ಕಾನೂನು ಮತ್ತು ನ್ಯಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು, ಅವರು ಮೇ 2019 ರಿಂದ ಜು. 2021 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡೆಗಳ ರಾಜ್ಯ (ಸ್ವತಂತ್ರ ಖಾತೆ)ಯನ್ನು ನೋಡಿಕೊಳ್ಳುತ್ತಿದ್ದರು.
ಈ ವಾರ ನ್ಯಾಯಾಧೀಶರ ನೇಮಕಾತಿ ನಡೆಸುವ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ರಿಜಿಜು ನೀಡಿದ್ದ ಹೇಳಿಕೆಗಳ ವಿರುದ್ಧ ಬಾಂಬೆ ವಕೀಲರ ಸಂಘ (ಬಿಎಲ್‍ಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹೇಳಿಕೆ ಮತ್ತು ನಡವಳಿಕೆಯಿಂದಾಗಿ ಕೇಂದ್ರ ಸಚಿವರಿಗೆ ಸಂವಿಧಾನ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಬಿಎಲ್‍ಎ ಆರೋಪಿಸಿತ್ತು. ಅಷ್ಟೇ ಅಲ್ಲದೇ ಬಿಎಲ್‍ಎ ರಿಜಿಜು ಅವರು ಕಾನೂನು ಖಾತೆಯನ್ನು ನಿರ್ವಹಿಸದಂತೆ ಆದೇಶ ನೀಡಬೇಕೆಂದು ಮನವಿ ಮಾಡಿತ್ತು.
ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಅವರಿಗೆ ಈ ಹಿಂದೆ ರಿಜಿಜು ಪತ್ರ ಬರೆದಿದ್ದರು. ಇದನ್ನೂ ಓದಿ: ಡಿಕೆಶಿಗೆ ಡಿಸಿಎಂ ಸ್ಥಾನ ನೀಡಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ: ಡಿ.ಕೆ ಸುರೇಶ್
ನವದೆಹಲಿ: ಕೊರೊನಾ ವೈರಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಗಲು ರಾತ್ರಿ ಹೋರಾಟ ನಡೆಸುತ್ತಿದ್ದರೆ, ಇತ್ತ ಅವರದ್ದೇ ಸಂಪುಟದ ಸಚಿವ ಅರ್ಜುನ್ ರಾಮ್ ಮೇಘವಾಲ್ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಕೆಲಸ ಮಾಡಿದ್ದಾರೆ.
ಕೊರೊನಾ ಬಿಕ್ಕಿಟ್ಟಿನ ವೇಳೆ ಹಪ್ಪಳದ ಪ್ಯಾಕೇಟ್ ಬ್ರ್ಯಾಂಡ್‍ವೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಈ ಹಪ್ಪಳ ಕೊರೊನಾ ವಿರುದ್ಧ ದೇಹದಲ್ಲಿ ಪ್ರತಿಕಾಯಗಳನ್ನು ಉತ್ಪಾದಿಸಲಿದೆ ಎಂದು ಸಂಸದೀಯ ಸಹಾಯಕ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
‘ಭಾಭಿ ಜಿ ಪಪಾಡ್’ ಹೆಸರಿನ ಹಪ್ಪಳ ಆತ್ಮ ನಿರ್ಭರ್ ಭಾರತ್ ಅಡಿಯಲ್ಲಿ ಉತ್ಪಾದನೆ ಮಾಡಲಾಗಿದೆ. ಇದು ಕೊರೊನಾ ವಿರುದ್ಧ ಹೋರಾಡಲು ಸಹಕಾರಿಯಾಗಲಿದೆ ಎಂದು ವಿಡಿಯೋ ಒಂದರಲ್ಲಿ ಹೇಳಿದ್ದಾರೆ. ಈ ಹಪ್ಪಳ ಬಿಡುಗಡೆಯ ವಿಡಿಯೋ ವೈರಲ್ ಆಗಿದ್ದು ಸಚಿವರ ವಿರುದ್ಧ ಟೀಕೆಗಳು ಕೇಳಿ ಬಂದಿದೆ.