Tag: Arjuna Elephant

  • ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ದರ್ಶನ್ ಹೆಸರ‍್ಹೇಳಿ ಲಕ್ಷಾಂತರ ರೂ. ದೋಖಾ

    ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ದರ್ಶನ್ ಹೆಸರ‍್ಹೇಳಿ ಲಕ್ಷಾಂತರ ರೂ. ದೋಖಾ

    ಸರಾ ಆನೆ ಅರ್ಜುನ (Arjuna Elephant) ಸಾವನ್ನಪ್ಪಿ 5 ತಿಂಗಳೂ ಕಳೆದರೂ ಸ್ಮಾರಕ ನಿರ್ಮಾಣಕ್ಕೆ ಚಾಲನೆ ಸಿಗುತ್ತಿಲ್ಲ. 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಮಾಧಿ ವಿಚಾರವನ್ನೇ ಬಂಡವಾಳ ಮಾಡಿಕೊಂಡು ನಾನು ನಟ ದರ್ಶನ್ (Actor Darshan) ಅಭಿಮಾನಿ ಎಂದು ಹೇಳಿಕೊಂಡು ಓರ್ವ ವ್ಯಕ್ತಿ ಅಕ್ರಮವಾಗಿ ಹಣ ಸಂಗ್ರಹಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

    ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್ ಎಂಬುವನು ‘ಅರ್ಜುನ ಪಡೆ ಕರ್ನಾಟಕ’ ಎಂಬ ವಾಟ್ಸಪ್ ಗ್ರೂಪ್ ಕ್ರಿಯೇಟ್ ಮಾಡಿ, ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಅಂತ ಹಣಕ್ಕಾಗಿ ಸಂಗ್ರಹಿಸಿದ್ದಾರೆ. ನವೀನ್ ಹೆಚ್.ಎನ್ ಖಾತೆಗೆ ಲಕ್ಷಾಂತರ ಹಣ ಜಮೆ ಆಗಿರುವ ಬಗ್ಗೆ ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಾಗರ್ ಆರೋಪ ಮಾಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ದರ್ಶನ್ ಫ್ಯಾನ್ಸ್ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ:ಸಮರ್ಜಿತ್ ಲಂಕೇಶ್ ಜೊತೆ ಆರ್‌ಸಿಬಿ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಮಸ್ತ್ ಸ್ಟೆಪ್ಸ್

    ನವೀನ್‌ರನ್ನು ನಂಬಿದ ಹಲವರು ಹಣ ಸಹಾಯ ಮಾಡಿದ್ದಾರೆ. ನವೀನ್ ಅಕೌಂಟ್‌ಗೆ ನೂರಾರು ಜನರಿಂದ ಹಣ ಸಂದಾಯ ಆಗಿರುವ ಸ್ಕ್ರೀನ್ ಶಾಟ್‌ಗಳು ವೈರಲ್ ಆಗುತ್ತಿದೆ. ದರ್ಶನ್ ಹೆಸರು ಹೇಳಿ ಅಕ್ರಮ ಹಣ ಪಡೆದಿದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದರ್ಶನ್ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

    ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

    ಹಾಸನ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ನಾಳೆಯಿಂದ (ಶನಿವಾರ) ಮತ್ತೆ ಆರಂಭಗೊಳ್ಳಲಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದಿಂದ ಎಂಟು ಸಾಕಾನೆಗಳು ಆಗಮಿಸಿದ್ದು, ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಬಳಿಯ ಕ್ಯಾಂಪ್‌ನಲ್ಲಿವೆ. ಈ ಭಾರಿ ನುರಿತ ತಂಡದೊಂದಿಗೆ ಕಾರ್ಯಾಚರಣೆ ಆಗಮಿಸಲಿದ್ದು ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

    ಅಂಬಾರಿ ಹೊತ್ತಿದ್ದ ಅಭಿಮನ್ಯು (Abhimanyu Elephant) ಸಹ ಕಾಡಾನೆಗಳ ಹಂಟಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಇಂದು (ಶುಕ್ರವಾರ) ಎಂಟು ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಲಾಯಿತು. ಈಗಾಗಲೇ ಸೆರೆ ಹಿಡಿಯುವ ಸಲಗಗಳನ್ನು ಗುರುತಿಸಲಾಗಿದ್ದು, ನಾಳೆಯಿಂದ ಸತತ ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ಇದನ್ನೂ ಓದಿ: ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿಲ್ಲ, ಯಾವುದೇ ಲೋಪ ಆಗಿಲ್ಲ: ವೈದ್ಯ ರಮೇಶ್ ಸ್ಪಷ್ಟನೆ

    ಮಲೆನಾಡ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನ.24 ರಿಂದ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಆರು ಸಾಕಾನೆಗಳೊಂದಿಗೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅಲ್ಲಿಯೇ ಬಿಡಲಾಗಿದ್ದರೆ, ಮೂರು ಪುಂಡಾನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಡಿ.4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಟದ ವೇಳೆ ಅರ್ಜುನ ವೀರಮರಣವನ್ನಪ್ಪಿದ್ದ. ಅಂದಿನಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಮುಂದುವರೆಸಲು ತೀರ್ಮಾನಿಸಲಾಗಿದ್ದು, ನಾಳೆಯಿಂದ ಕಾಡಾನೆ ಹಂಟಿಂಗ್ ಆಪರೇಷನ್ ಶುರುವಾಗಲಿದೆ.

    ದುಬಾರೆ, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಪ್ರಶಾಂತ, ಸುಗ್ರೀವ, ಅಶ್ವತ್ಥಾಮ, ಕರ್ನಾಟಕ ಭೀಮ, ಹರ್ಷ, ಮಹೇಂದ್ರ, ಧನಂಜಯ ಸೇರಿ ಎಂಟು ಸಾಕಾನೆಗಳು ಬಿಕ್ಕೋಡು ಬಳಿಯ ಶಿಬಿರಕ್ಕೆ ಆಗಮಿಸಿದ್ದು ಇಂದು ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಹಾಗೂ ಅರಣ್ಯ ಅಧಿಕಾರಿಗಳು ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಿ ಆಪರೇಷನ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಬೇಲೂರು ಭಾಗದಲ್ಲಿ ಸುಮಾರು ನಲವತ್ತು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಕಳೆದ ವಾರ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವಸಂತ ಎಂಬವರು ಬಲಿಯಾಗಿದ್ದರು. ಇದರಿಂದ ಸರ್ಕಾರದ ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ ನಾಳೆ ಬೇಲೂರು ಭಾಗದಿಂದಲೇ ನರಹಂತಕ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದ್ದು, ಜನರಿಗೆ ಆಗುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹೆಚ್.ಕೆ.ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜಪಡೆ – ಗುಂಪಿನಲ್ಲಿ ಸೇರಿಕೊಂಡ ಅರ್ಜುನನನ್ನು ಕೊಂದ ಪುಂಡಾನೆ

    ಕಳೆದ ಬಾರಿಯ ಕಾರ್ಯಾಚರಣೆಯಲ್ಲಿ ಆದ ಅನಾಹುತದಿಂದ ಎಚ್ಚೆತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಸಲ ನುರಿತ ಅರವಳಿಕೆ ವೈದ್ಯರು ಹಾಗೂ ತಂಡದೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಇಂದು ಪೂಜೆ ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ತಂಡದ ಜೊತೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಹಾಗೂ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು. ಮೊದಲು ಮುಂದುವರಿದ ಭಾಗವಾಗಿ ಮೂರು ಸಲಗಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ನಂತರ ಹೆಚ್ಚು ಉಪಟಳ ನೀಡುತ್ತಿರುವ ಕಾಡಾನೆಗಳ ಜೊತೆಗೆ ಅರ್ಜುನನ ಸಾವಿಗೆ ಕಾರಣವಾದ ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ಇದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಸಿಸಿಎಫ್ ರವಿಶಂಕರ್ ಮನವಿ ಮಾಡಿದ್ದಾರೆ.

    ಕಳೆದ ಎರಡು ದಶಗಳಿಂದ ಸಕಲೇಶಪುರ, ಆಲೂರು ಹಾಗೂ ನಾಲ್ಕೈದು ವರ್ಷಗಳಿಂದ ಬೇಲೂರು ಭಾಗದಲ್ಲಿ ಗಜಪಡೆ ಗಲಾಟೆ ಮಿತಿಮೀರಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ. ಆದರೆ ಸರ್ಕಾರಗಳು ಒಂದೆರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಿದರೆ ಸಾಲದು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂಬುದು ಎಲ್ಲರ ಒಕ್ಕೊರಲ ಒತ್ತಾಯವಾಗಿದೆ. ಆದರೆ ಭರವಸೆಗಳನ್ನು ನೀಡುತ್ತಲೇ ಇರುವ ಸರ್ಕಾರ ಹಾಗೂ ಅರಣ್ಯ ಇಲಾಖೆ ಮಲೆನಾಡು ಭಾಗದ ಜನರ ನೆಮ್ಮದಿ ಕೆಡಿಸಿರುವ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವ ಮೂಲಕ ತಾತ್ಕಾಲಿಕ ಪರಿಹಾರ ನೀಡಲು ಮುಂದಾಗಿವೆ. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

  • ತಿಥಿಮತಿ ಮೇಲ್ಸೇತುವೆಗೆ ಅರ್ಜುನನ ಹೆಸರು, ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು ಹೆಸರಿಡಲು ಆಗ್ರಹ

    ತಿಥಿಮತಿ ಮೇಲ್ಸೇತುವೆಗೆ ಅರ್ಜುನನ ಹೆಸರು, ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು ಹೆಸರಿಡಲು ಆಗ್ರಹ

    – ದೇವರಾಜ್ ಅರಸ್ ಪ್ರತಿಮೆ ಸ್ಥಾಪನೆಗೆ ಬಿ.ಕೆ ಹರಿಪ್ರಸಾದ್‌ ಒತ್ತಾಯ

    ಬೆಳಗಾವಿ: ವಿಧಾನ ಪರಿಷತ್ (Vidhan Parishad) ಕಲಾಪದ ಶೂನ್ಯ ವೇಳೆಯಲ್ಲಿಂದು ಹಲವು ಮಹತ್ವದ ವಿಷಯಗಳು ಪ್ರಸ್ತಾಪವಾಯಿತು. ಆದ್ರೆ ಸರ್ಕಾರ ಯಾವುದಕ್ಕೂ ತಕ್ಷಣ ಸದನದಲ್ಲಿ ಉತ್ತರ ಕೊಡದೇ ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವ ಭರವಸೆ ನೀಡಿತು.

    ಸಾವರ್ಕರ್ (VD Savarkar) ಫೋಟೋ ತೆಗೆಯಲು ನನಗೆ ಅವಕಾಶ ಕೊಡಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವನ್ನು ಶೂನ್ಯ ವೇಳೆಯಲ್ಲಿ ಬಿಜೆಪಿ (BJP) ಸದಸ್ಯ ರವಿಕುಮಾರ್ ಪ್ರಸ್ತಾಪಿಸಿದರು. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು, ಪ್ರಿಯಾಂಕ್ ಖರ್ಗೆ (Priyank Kharge) ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಿದರು.

    ನಂತರ ಚಿಕ್ಕೋಡಿ ತಾಲೂಕನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಬೇಕು ಅಂತ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ವಿಷಯ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಮುಂದಿನ ವರ್ಷದಿಂದ್ಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ – ಮಧು ಬಂಗಾರಪ್ಪ ಭರವಸೆ

    ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರಿಗೆ `ಭಾರತ ರತ್ನ’ ಘೋಷಣೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ತಲಕಾವೇರಿ ಉದ್ಭವ ದಿನದಂದು ರಜೆ ಘೋಷಿಸಬೇಕು. ದಸರಾದಲ್ಲಿ ಭಾಗವಹಿಸುವ ಆನೆಗಳು ಸೇರಿದಂತೆ ಇತರೇ ಆನೆಗಳ ಕುರಿತು ಒಂದು ವಸ್ತುಸಂಗ್ರಹಾಲಯ ಸ್ಥಾಪಿಸಬೇಕು. ತಿಥಿಮತಿ ಮೇಲ್ಸೇತುವೆಗೆ ಅರ್ಜುನ ಆನೆಯ ಹೆಸರು ಇಡಬೇಕು ಅಂತ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಒತ್ತಾಯಿಸಿದರು.

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamoga Airport) ಕುವೆಂಪು ಹೆಸರು ಇಡಬೇಕು ಅಂತ ಶೂನ್ಯ ವೇಳೆಯಲ್ಲಿ ಮಂಜುನಾಥ್ ಭಂಡಾರಿ ವಿಷಯ ಪ್ರಸ್ತಾಪ ಮಾಡಿದ್ರು. ಕೂಡಲೇ ಸರ್ಕಾರ ಕ್ಯಾಬಿನೆಟ್ ನಿರ್ಧಾರ ಮಾಡಿ ಕುವೆಂಪು ಹೆಸರು ಅಂತಿಮ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರೋಹಿತ್ ಶರ್ಮಾ ಫಾರ್ಮ್‍ನಲ್ಲಿದ್ದರೆ 2024ರ ಟಿ20 ವಿಶ್ವಕಪ್‍ನಲ್ಲಿ ತಂಡವನ್ನು ಮುನ್ನೆಡಸಲಿ: ಗಂಭೀರ್

    ಇನ್ನೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad), ಮೈಸೂರು ಡಿಸಿ ಕಚೇರಿ ಹಾಗೂ ಬೆಳಗಾವಿ ಸುವರ್ಣಸೌಧದ ಮುಂದೆ ದೇವರಾಜ್ ಅರಸ್ ಪ್ರತಿಮೆ ನಿರ್ಮಾಣ ಮಾಡಬೇಕು ಅಂತ ಶೂನ್ಯ ವೇಳೆಯಲ್ಲಿ ಒತ್ತಾಯಿಸಿದರು. ಎಲ್ಲಾ ಸಮುದಾಯಗಳ ವರ್ಗಕ್ಕೆ ಅರಸರ ಕೊಡುಗೆ ಅಪಾರವಾಗಿದೆ. ಎರಡು ಬಾರಿ ಸಿಎಂ ಆಗಿ ರಾಜ್ಯದ ಸೇವೆ ಸಲ್ಲಿಸಿದ್ದಾರೆ. ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣ ಅವಶ್ಯಕವಾಗಿದೆ ಎಂದು ಸಿಎಂಗೆ ಒತ್ತಾಯ ಮಾಡಿದರು.

  • ಕಾಕನ ಕೋಟೆಯ ಭೀಮ – ಶೌರ್ಯ ಸಾಹಸಕ್ಕೆ ನಿಸ್ಸೀಮ; ಅರ್ಜುನನ ಹಾದಿಯೇ ರೋಚಕ!

    ಕಾಕನ ಕೋಟೆಯ ಭೀಮ – ಶೌರ್ಯ ಸಾಹಸಕ್ಕೆ ನಿಸ್ಸೀಮ; ಅರ್ಜುನನ ಹಾದಿಯೇ ರೋಚಕ!

    – ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಅರ್ಜುನನ ಸಾಹಸ ಮರೆಯುವಂತಿಲ್ಲ
    – 4 ಜನರನ್ನು ತಿಂದಿದ್ದ ಹುಲಿಯನ್ನು ಸೆರೆ ಹಿಡಿದು ಪ್ರಶಸ್ತಿ ಗೆದ್ದುದ್ದು ಇದೇ ಅರ್ಜುನ

    ಮೈಸೂರು/ಬೆಂಗಳೂರು: ಮೈಸೂರು ದಸರಾ (Mysuru Dasara) ಮಹೋತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್‌ ಅರ್ಜುನನ (Arjuna Elephant) ಹಠಾತ್ ನಿಧನಕ್ಕೆ ನಾಡಿನ ಜನರು ಕಂಬನಿ ಮಿಡಿದಿದ್ದಾರೆ. ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆಯ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರ್ಜುನ ತನ್ನೊಂದಿಗೆ ತೆರಳಿದ್ದ ಹಲವರ ಜೀವ ಉಳಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ. ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಶೌರ್ಯ, ಸಾಹಸಕ್ಕೆ ಹೆಸರು ವಾಸಿಯಾಗಿದ್ದ ಅರ್ಜುನ, ಸಾಯುವ ಕೊನೇ ಕ್ಷಣದಲ್ಲೂ ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿರುವುದು ಸುಳ್ಳಲ್ಲ.

    2012 ರಿಂದ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಅರ್ಜುನ 8 ಬಾರಿ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ. ಆದ್ರೆ ಅರ್ಜುನನ ವಯಸ್ಸು 60 ವರ್ಷ ದಾಟಿದ ನಂತರ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುವಿಗೆ ಬಿಟ್ಟುಕೊಟ್ಟು ನಂತರ ನಿಶಾನಿ ಆನೆಯಾಗಿ ಗಜಪಡೆಯನ್ನು ಮುನ್ನಡೆಸಲು ಮುಂದಾಯಿತು. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?

    ಬಲದಲ್ಲಿ ಭೀಮ – ಸಾಹಸಕ್ಕೆ ನಿಸ್ಸೀಮ:
    1968ರಲ್ಲಿ ಕಾಕನ ಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದಾಗ ಅರ್ಜುನನಿಗೆ ಇನ್ನೂ 10 ವರ್ಷವೂ ದಾಟಿರಲಿಲ್ಲ. ಆರಂಭದಲ್ಲಿ ಉಗ್ರ ಕೋಪಕ್ಕೆ ಹೆಸರು ವಾಸಿಯಾಗಿದ್ದ ಅರ್ಜುನ ನಂತರ ಮಾವುತರು, ಕವಾಡಿಗಳ ಜೊತೆ ಹೊಂದಿಕೊಂಡು ಶೌರ್ಯ ಸಾಹಸಕ್ಕೂ ಹೆಸರುವಾಸಿಯಾಯಿತು. 2010ರಲ್ಲಿ 4,541 ಕೆಜಿ ತೂಕವಿದ್ದ ಅರ್ಜುನ 2016ರ ದಸರಾ ಜಂಬೂ ಸವಾರಿ ವೇಳೆಗೆ 5,870 ಕೆಜಿಗೆ ಹೆಚ್ಚಿಸಿಕೊಂಡು ಬಲಭೀಮನಾದ. ಆದ್ದರಿಂದಲೇ ಪುಂಡಾನೆ ಸೆರೆ, ಹುಲಿ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನನ್ನು ನಿರಂತರವಾಗಿ ಬಳಸಿಕೊಳ್ಳಲಾಗುತ್ತಿತ್ತು.

    90ರ ದಶಕದಲ್ಲಿಯೇ ಅರ್ಜುನ ದಸರಾ ಗಜಪಡೆಯ ಭಾಗವಾಗಿದ್ದ. 1997ರಲ್ಲಿ ದ್ರೋಣ ಆನೆ ವಿದ್ಯುತ್‌ ಅವಘಡದಿಂದ ಮೃತಪಟ್ಟಾಗ ಅಂಬಾರಿ ಆನೆಯ ಸ್ಥಾನಕ್ಕೆ ಅರ್ಜುನನೇ ಮೊದಲ ಆಯ್ಕೆಯಾಗಿದ್ದ. ಆದ್ರೆ ಅದೇ ಸಂದರ್ಭದಲ್ಲಿ ದಸರೆಗೆ ಬಂದ ಸಂಗಾತಿ ಆನೆಯ ಕವಾಡಿಗನನ್ನು ಬಲಿಪಡೆದ ಕಾರಣಕ್ಕೆ ಒಂದಷ್ಟು ವರ್ಷಗಳವರೆಗೆ ಅರ್ಜುನನನ್ನು ಜಂಬೂಸವಾರಿಯಿಂದಲೇ ಹೊರಗಿಡಲಾಗಿತ್ತು. ಈ ಅವಘಡ ನಡೆಯದೇ ಇದ್ದಿದ್ದರೇ ಅರ್ಜುನ 20 ವರ್ಷಗಳಿಗೂ ಹೆಚ್ಚು ಕಾಲ ಅಂಬಾರಿ ಹೊತ್ತ ಇತಿಹಾಸವಿರುತ್ತಿತ್ತು.

    ದಸರಾ ಹೊರತು ಪಡಿಸಿ ಇತರೆ ದಿನಗಳಲ್ಲಿ ಬಳ್ಳೆ ಆನೆ ಶಿಬಿರದಲ್ಲಿ ವಾಸ್ತವ್ಯ ಹೂಡುವ ಅರ್ಜುನ ಎಲ್ಲಿಯೇ ಹುಲಿ ಸೆರೆ, ಪುಂಡಾನೆ ಸೆರೆ ಕಾರ್ಯಾಚರಣೆ ಇರಲಿ ಅಲ್ಲಿಗೆ ರೆಡಿಯಾಗಿರುತ್ತಿದ್ದ. ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ಒರಿಸ್ಸಾಗಳಲ್ಲಿಲ್ಲೂ ಪುಂಡಾನೆಗಳನ್ನ ಸೆರೆಹಿಡಿಯಲು ಬಳಸಿಕೊಂಡಿರುವುದು ಅರ್ಜುನನ ಶೌರ್ಯಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಮೈಸೂರಿಗೆ ಕಳುಹಿಸಿಕೊಡಿ ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಗೋಳಾಡಿದ ಮಾವುತ

    2019ರಲ್ಲಿ ನಾಲ್ಕು ಜನರನ್ನು ತಿಂದಿದ್ದ ಹುಲಿಯನ್ನು ಸೆರೆ ಹಿಡಿಯಲು ಅರ್ಜುನನನ್ನ ಬಳಸಿಕೊಳ್ಳಲಾಗಿತ್ತು. ಅಂದು ಸತತ ಮೂರು ದಿನ ಕಾರ್ಯಾಚರಣೆ ನಡೆಸಿ ಹುಲಿಯ ಹೆಜ್ಜೆಗುರುತುಗಳನ್ನ ಆಧರಿಸಿ ಹುಲಿಯನ್ನು ಸೆರೆಹಿಡಿಯಲಾಗಿತ್ತು. ಇದಕ್ಕೆ ಮೆಚ್ಚಿ ಸರ್ಕಾರ ಅರ್ಜುನ ಮತ್ತು ಮಾವುತ ವಿನುಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿತ್ತು. ಇದೀಗ ಅಂತಹದ್ದೇ ಕಾರ್ಯಾಚರಣೆ ವೇಳೆ ಅರ್ಜುನ ವೀರಣ ಮರಣ ಹೊಂದಿದ್ದಾನೆ.

  • ಅರ್ಜುನ ಆನೆಗೆ 64 ವರ್ಷ.. ಕಾಡಾನೆ ಸೆರೆಗೆ ಯಾಕೆ ಬಳಸಿದ್ರು: ಸರ್ಕಾರಕ್ಕೆ ಕೋಟಾ ಪ್ರಶ್ನೆ

    ಅರ್ಜುನ ಆನೆಗೆ 64 ವರ್ಷ.. ಕಾಡಾನೆ ಸೆರೆಗೆ ಯಾಕೆ ಬಳಸಿದ್ರು: ಸರ್ಕಾರಕ್ಕೆ ಕೋಟಾ ಪ್ರಶ್ನೆ

    ಬೆಳಗಾವಿ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ (Arjuna Elephant) ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojari) ಗರಂ ಆಗಿದ್ದಾರೆ.

    ಪರಿಷತ್‌ ಕಲಾಪದ ವೇಳೆ ಮಾತನಾಡಿದ ಅವರು, 60 ವರ್ಷ ಮೀರಿದ ಅನೆಯನ್ನ ಕಾರ್ಯಾಚರಣೆಗೆ ಬಳಕೆ ಮಾಡಬಾರದು ಅಂತ ನಿಯಮ ಇತ್ತು. ಈಗ ಅರ್ಜುನ ಆನೆಗೆ 64 ವರ್ಷ. ಕಾಡಾನೆ ಸೆರೆ ಹಿಡಿಯಲು ಯಾಕೆ ಉಪಯೋಗ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಬಲಿ

    ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು. ಇದನ್ನೂ ಓದಿ: ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿದ ಅರ್ಜುನ – ನಡೆದಿದ್ದೇನು?

    ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

    ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?

  • ಮೈಸೂರಿನಲ್ಲಿ ದಸರಾ ಸಂಭ್ರಮ – ನಾಳೆ ಕ್ಯಾಪ್ಟನ್ ಅರ್ಜುನ ಸಾರಥ್ಯದಲ್ಲಿ ಗಜಪಯಣ ಆರಂಭ

    ಮೈಸೂರಿನಲ್ಲಿ ದಸರಾ ಸಂಭ್ರಮ – ನಾಳೆ ಕ್ಯಾಪ್ಟನ್ ಅರ್ಜುನ ಸಾರಥ್ಯದಲ್ಲಿ ಗಜಪಯಣ ಆರಂಭ

    ಮೈಸೂರು: ನಾಡಹಬ್ಬ ದಸರಾ ಚಟುವಟಿಕೆಗಳು ಮೈಸೂರಿನಲ್ಲಿ ಗರಿಗೆದರುತ್ತಿವೆ. ಇದರ ಮೊದಲ ಭಾಗವಾಗಿ ನಾಳೆ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡ ಮೈಸೂರಿಗೆ ಬರಲಿದೆ.

    ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ. ಗಜಪಡೆಯ ಕ್ಯಾಪ್ಟನ್ ಅರ್ಜುನ ಸೇರಿದಂತೆ 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು ಸ್ಟ್ಯಾಂಡ್‌ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ರಾಧಿಕಾ ಪಂಡಿತ್ ಗೆ ಸಹಾಯ ಮಾಡಿದ ಪುತ್ರಿ ಐರಾ

    ಹೀಗೆ ಬಂದ ಆನೆಗಳನ್ನು ಎರಡು ದಿನ ಅರಣ್ಯ ಇಲಾಖೆಯ ಆವರಣದಲ್ಲಿ ವಿಶ್ರಾಂತಿಗೆ ಬಿಡಲಾಗುತ್ತದೆ. ಆಗಸ್ಟ್ 10 ರಂದು ಮೈಸೂರು ಅರಮನೆಗೆ ಈ ಆನೆಗಳನ್ನು ಸ್ವಾಗತಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]