Tag: Army Jawan

  • Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

    Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

    ಲಕ್ನೋ: ದೇಶದಲ್ಲಿ ಇತ್ತೀಚೆಗೆ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ದೇಶ ಕಾಯುವ ಯೋಧರಿಗೂ ಬೆಲೆ ಕೊಡದ ಸ್ಥಿತಿ ನಿರ್ಮಾಣವಾಗಿದೆ. ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್‌ ಪ್ಲಾಜಾ ಸಿಬ್ಬಂದಿ (Toll Plaza Workers) ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ (Meerut) ನಡೆದಿದೆ.

    ಯೋಧ ಕಪಿಲ್ ಕವಾಡ್ ಹಲ್ಲೆಗೊಳಗಾದವರು. ಯೋಧನ (Army Jawan) ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಿರುವ ಅಮಾನವೀಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಬಳಿಕ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ʻಧರ್ಮಸ್ಥಳದ ಮಂಜುನಾಥನನ್ನು ರಕ್ಷಿಸಿʼ – ವಿಧಾನಸೌಧಕ್ಕೆ ಪೋಸ್ಟರ್ ಹಿಡಿದು ಬಂದ ಜೆಡಿಎಸ್ ಶಾಸಕ

    ಏನಿದು ಘಟನೆ?
    ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿದ್ದ ಕಪಿಲ್‌ ಕವಾಡ್‌, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ. ಇದನ್ನೂ ಓದಿ: ಧರ್ಮಾಧಿಕಾರಿಗಳ ವಿರುದ್ಧ ಯಾರೂ ಇಲ್ಲ: ರಾಮಲಿಂಗಾರೆಡ್ಡಿ

    ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನ ಥಳಿಸಿದ್ದಾರೆ. ಕಪಿಲ್‌ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್‌ ಆಗ್ತಿದ್ದಂತೆ ಕೇಸ್‌ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಎಸ್ಪಿ ರಾಕೇಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ‌ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

  • ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಬಾಗೇಪಲ್ಲಿ ಗಡಿಯ ಯೋಧ ಹುತಾತ್ಮ- ಕಂಬನಿ ಮಿಡಿದ ಕರುನಾಡು

    ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಬಾಗೇಪಲ್ಲಿ ಗಡಿಯ ಯೋಧ ಹುತಾತ್ಮ- ಕಂಬನಿ ಮಿಡಿದ ಕರುನಾಡು

    ಚಿಕ್ಕಬಳ್ಳಾಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಗಡಿ ಭಾಗದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಸಂಘರ್ಷದಲ್ಲಿ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶದ (Andhra Pradesh) ಗೋರಂಟ್ಲು ತಾಲೂಕಿನ ಕಲ್ಲಿಕೊಂಡ ಗ್ರಾಮದ ಯೋಧನೊಬ್ಬ (Soldier) ಹುತಾತ್ಮರಾಗಿದ್ದಾರೆ.

    ಮುರಳಿ ನಾಯಕ್‌ ಹುತಾತ್ಮ ಯೋಧ. ಪಾಕಿಸ್ತಾನ ಗಡಿಯಲ್ಲಿ (Pakistan Border) ನಡೆದ ದಾಳಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿ ಅವರ ಏಕೈಕ ಪುತ್ರ ಮುರಳಿ ನಾಯಕ್ ದೇಶಕ್ಕಾಗಿ ಹೋರಾಡಿ ವೀರಮರಣ ಹೊಂದಿದ್ದಾರೆ. ಮುರಳಿ ಹುತಾತ್ಮನಾಧ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬೆಂಗಳೂರು ಪಾಕಿಸ್ತಾನದ ಹಿಟ್‌ಲಿಸ್ಟ್‌ನಲ್ಲಿ ಇದ್ಯಾ? – ಗೃಹಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು…

    ಹುತಾತ್ಮ ಯೋಧ ಮುರಳಿ ನಾಯಕ್‌ (Murali Naik) ಪಾರ್ಥೀವ ಶರೀರವನ್ನು ಇಂದು ಜಮ್ಮುವಿನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ತಂದು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಏರ್‌ಪೋರ್ಟ್‌ನ ಕಾರ್ಗೋ ಟರ್ಮಿನಲ್‌ನಲ್ಲಿ ಯೋಧರಿಂದ ಅಂತಿಮ ನಮನ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಇದನ್ನೂ ಓದಿ: ದೇಶದ ಕರೆಗೆ ಹನಿಮೂನ್‌ ಮೊಟಕುಗೊಳಿಸಿ ಸೇವೆಗೆ ತೆರಳಿದ ಯೋಧ

    ದೇವನಹಳ್ಳಿ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮಾರ್ಗವಾಗಿ ಸ್ವಗ್ರಾಮದತ್ತ ಪಾರ್ಥಿವ ಶರೀರವನ್ನ ಸೇನಾ ವಾಹನದ ಸಾರಥಿಯೊಂದಿಗೆ ಅಂಬುಲೆನ್ಸ್‌ನಲ್ಲಿ ಕೊಂಡೊಯ್ಯಲಾಗುತ್ತಿದೆ. ಈ ವೇಳೆ ಚಿಕ್ಕಬಳ್ಳಾಪುರದಲ್ಲಿ ಮಳೆ ಬಂದರೂ ಜಗದ್ದೇ ದಾರಿಯಲ್ಲೇ ನಿಂತಿದ್ದ ಜನ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ವಾಪಸಂದ್ರದ ಬಳಿ ಜನರು ಆಗಮಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

  • ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ (Andhra Pradesh) ಮೂಲದ ಯೋಧ (Army Jawan) ಹುತಾತ್ಮರಾಗಿದ್ದಾರೆ.

    ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ (Sathya Sai) ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ. ಇದನ್ನೂ ಓದಿ: ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

    ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: India’s Strike | ಪಾಕ್‌ ಮೇಲೆ ಭಾರತ ಪ್ರಯೋಗಿಸಿದ 3 ರಾಷ್ಟ್ರಗಳ ಶಸ್ತ್ರಾಸ್ತ್ರಗಳು ಎಷ್ಟು ಪವರ್‌ಫುಲ್?‌