Tag: Army jawans

  • ಪಬ್‌ಜೀ ಮೂಲಕವೇ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಸೀಮಾ – ಸ್ಫೋಟಕ ರಹಸ್ಯ ಬಯಲು

    ಪಬ್‌ಜೀ ಮೂಲಕವೇ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಸೀಮಾ – ಸ್ಫೋಟಕ ರಹಸ್ಯ ಬಯಲು

    ಲಕ್ನೋ: ಸೀಮಾ ಹೈದರ್‌ ಪಬ್‌ಜೀ (PUBG) ಮೂಲಕ ಸಚಿನ್‌ ಜೊತೆಗೆ ಮಾತ್ರವಲ್ಲ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಅನ್ನೋ ಸ್ಫೋಟಕ ರಹಸ್ಯ ವಿಚಾರಣೆ ವೇಳೆ ಬಯಲಾಗಿದೆ. ಸೀಮಾ ದೆಹಲಿ ಎನ್‌ಸಿಆರ್‌ (Delhi NCR) ಪ್ರದೇಶದ ಹಲವರನ್ನ ಪಬ್‌ಜೀ ಮೂಲಕ ಸಂಪರ್ಕಿಸಿದ್ದಾಳೆ ಎಂದು ತಿಳಿದುಬಂದಿದೆ. ಇದೀಗ ಎಲ್ಲ ಆಯಾಮಗಳಲ್ಲೂ ವಿಚಾರಣೆ ನಡೆಸುತ್ತಿರುವ ನೋಯ್ಡಾ ಪೊಲೀಸರು ಅಕ್ರಮವಾಗಿ ಭಾರತ ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆಯ ಎಲ್ಲಾ ದಾಖಲೆಗಳನ್ನ ವಶಪಡಿಸಿಕೊಂಡಿದ್ದು, ದೆಹಲಿಯಲ್ಲಿರುವ ಪಾಕಿಸ್ತಾನ ರಾಜಭಾರಿ ಕಚೇರಿಗೆ ಪರಿಶೀಲನೆಗಾಗಿ ಕಳುಹಿಸಿದ್ದಾರೆ.

    ಮೇ ತಿಂಗಳಲ್ಲಿ ತನ್ನ ಪ್ರೇಮಿ ಸಚಿನ್‌ ಮೀನಾ ಜೊತೆ ನೆಲೆಸಲು ನೇಪಾಳ ಗಡಿ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಸೀಮಾ ಹೈದರ್‌ ಪಾಕಿಸ್ತಾನದ ಗೂಢಚಾರಿ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳು ತೀವ್ರ ನಿಗಾ ವಹಿಸಿವೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    ಸೀಮಾಳ ಪಾಸ್‌ಪೋರ್ಸ್‌, ಪಾಕಿಸ್ತಾನಿ ಗುರುತಿನ ಚೀಟಿ ಹಾಗೂ ಮಕ್ಕಳ ಪಾಸ್‌ಪೋರ್ಟ್‌ ಸೇರಿದಂತೆ ಎಲ್ಲಾ ದಾಖಲೆಗಳನ್ನ ಪೊಲೀಸರು ತನಿಖೆ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ. ಆಕೆಯ ಗುರುತು ಪರಿಶೀಲನೆಗಾಗಿ ಪಾಕಿಸ್ತಾನ ರಾಯಭಾರಿ ಕಚೇರಿಗೆ ಕಳುಹಿಸಿದ್ದಾರೆ. ಅಲ್ಲಿಂದ ವರದಿ ಬರುವವರೆಗೆ ತನಿಖೆ ಮುಂದುವರಿಯಲಿದೆ. ಆರೋಪಗಳು ದೃಢಪಟ್ಟ ನಂತರ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಸೀಮಾ ಹೈದರ್‌ ತನ್ನ ಮೊಬೈಲ್‌ ಡೇಟಾವನ್ನು ಡಿಲೀಟ್‌ ಮಾಡಿರುವ ಶಂಕೆ ಹಿನ್ನೆಲೆ ಮೋಬೈಲ್‌ ಅನ್ನು ಗಾಜಿಯಾಬಾದ್‌ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಆದ್ರೆ ಸೀಮಾ ಹೈದರ್‌ ತನ್ನ ಯಾವುದೇ ಡೇಟಾವನ್ನ ಅಳಿಸಿಹಾಕಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

    ಸೀಮಾ ಆಧಾರ್‌ ಬದಲಾವಣೆ?
    ಈ ನಡುವೆ ಸಚಿನ್‌ ಮೀನಾ ಮತ್ತು ಸೀಮಾ ಹೈದರ್‌ಗೆ ಸಂಬಂಧಿಸಿದ ದಾಖಲೆಗಳು ಮತ್ತು ಆಧಾರ್‌ ಕಾರ್ಡ್‌ ಬದಲಾವಣೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಇಬ್ಬರು ಸಹೋದರರನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಪುಷ್ಪೇಂದ್ರ ಮೀನಾ ಮತ್ತು ಅವರ ಸಹೋದರ ಪವನ್ ಆರೋಪಿಗಳನ್ನ ಅಹ್ಮದ್‌ಗಢದ ಸಾರ್ವಜನಿಕ ಸೇವಾ ಕೇಂದ್ರದಲ್ಲಿ ಆರೋಪಿಗಳಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    – ಬಾಲಿವುಡ್‌ ನಟ – ನಟಿಯರನ್ನ ಉದಾಹರಣೆ ನೀಡಿ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿ

    ಲಕ್ನೋ: ಪಬ್‌ಜಿ (PUBG) ಪ್ರಿಯಕರನಿಗಾಗಿ ಅಕ್ರಮವಾಗಿ ಪ್ರವೇಶಿಸಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ (Seema Haider) ಭಾರತದಲ್ಲೇ ಉಳಿಯಲು ಅವಕಾಶ ನೀಡುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ.

    ತಾನು ಎಂದೂ ಕಾಣದ ಪ್ರೀತಿಯನ್ನು ನನ್ನ ಪತಿ ಸಚಿನ್‌ ಮೀನಾ ಹಾಗೂ ಅವರ ತಂದೆ-ತಾಯಿಯಿಂದ ಕಂಡಿದ್ದೇನೆ. ತನ್ನ ನಾಲ್ವರು ಮಕ್ಕಳೊಂದಿಗೆ ಭಾರತದಲ್ಲೇ ಉಳಿಯಲು ಅವಕಾಶ ನೀಡಬೇಕು ಎಂದು ರಾಷ್ಟ್ರಪತಿ ಅವರಿಂದ ಮೌಖಿಕ ವಿಚಾರಣೆಗೆ ಒತ್ತಾಯಿಸಿದ್ದಾರೆ. ಸೀಮಾ ಹೈದರ್‌ ಪರ ವಕೀಲ ಎ.ಪಿ ಸಿಂಗ್‌ ಸಲ್ಲಿಸಿದ 38 ಪುಟಗಳ ಅರ್ಜಿಯಲ್ಲಿ ಅನೇಕ ಬಾಲಿವುಡ್‌ ನಟ-ನಟಿಯರನ್ನ ಉದಾಹರಣೆಯಾಗಿ ನೀಡಿದ್ದಾರೆ.

    ಭಾರತದ ಸಂಸ್ಕೃತಿಯ ಉದ್ದೇಶ ವಸುದೈವ ಕುಟುಂಬಕಂ (ಜಗತ್ತು ಒಂದೇ ಕುಟುಂಬ) ಎಂಬಂತೆ ತನ್ನನ್ನು ಗಂಡನ ಮನೆಯಲ್ಲೇ ಉಳಿಯಲು ಅವಕಾಶ ಮಾಡಿಕೊಡಬೇಕು. ಸೀಮಾ ಮದುವೆಯಾಗುವುದಕ್ಕೂ ಮುನ್ನವೇ ಸ್ವಇಚ್ಛೆಯಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಅರ್ಜಿದಾರರಿಗೆ ಭಾರತಕ್ಕೆ ಬರಲು ವೀಸಾ ಸಿಕ್ಕಿಲ್ಲದಿದ್ದರಿಂದ ನೇಪಾಳ ವೀಸಾ ತೆಗೆದುಕೊಂಡು ಭಾರತಕ್ಕೆ ಬಂದಿದ್ದಾರೆ. ಇಸ್ಲಾಂ ಧರ್ಮವನ್ನ ತೊರೆದಿದ್ದಾರೆ. ಕಠ್ಮಂಡುವಿನ ಪವಿತ್ರ ದೇವಾಲಯ ಭಗವಾನ್ ಪಶುಪತಿ ನಾಥ ಮಂದಿರದಲ್ಲಿ ಹಿಂದೂ ವಿಧಿ ವಿಧಾನಗಳ ಪ್ರಕಾರ ಸಚಿನ್ ಮೀನಾ ಅವರನ್ನ ವಿವಾಹವಾಗಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿ ಜೀ, ಯೋಗಿ ಜೀ ನನ್ನನ್ನ ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ – ಸೀಮಾ ಹೈದರ್‌ ಮನವಿ

    ಪ್ರಸಿದ್ಧ ಗಾಯಕ ಅದ್ನಾನ್‌ ಸಾಮಿ (Adnan Sami) ದೇಶದಲ್ಲಿ ದೀರ್ಘಕಾಲ ನೆಲೆಸಿರುವ ಅವರಿಗೆ ಭಾರತದ ಪೌರತ್ವ ನೀಡಲಾಗಿದೆ. ಬಾಲಿವುಡ್‌ ನಟಿ ಆಲಿಯಾ ಭಟ್‌ (Alia Bhatt) ಭಾರತವು ವಿಶ್ವದ ಇತರ ದೇಶಗಳಂತೆ ದ್ವಿಪೌರತ್ವವನ್ನ ನೀಡದ ಕಾರಣ ಭಾರತದಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಬಾಲಿವುಡ್‌ ಸೂಪರ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ (Akshay Kumar) ಕೆನಡಾ ಪೌರತ್ವವನ್ನ ಪಡೆದು ಭಾರತಲ್ಲಿ ನೆಲೆಸಿದ್ದಾರೆ. ಆದ್ದರಿಂದ ತಮ್ಮನ್ನೂ ಭಾರತಲ್ಲೇ ಉಳಿಯಲು ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಸೀಮಾ ಹೈದರ್‌ ತನ್ನನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿ ಜೀ, ಯೋಗಿ ಜೀ ನನ್ನನ್ನ ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ – ಸೀಮಾ ಹೈದರ್‌ ಮನವಿ

    ಮೋದಿ ಜೀ, ಯೋಗಿ ಜೀ ನನ್ನನ್ನ ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ – ಸೀಮಾ ಹೈದರ್‌ ಮನವಿ

    – ನಾನು ಗೂಢಚಾರಿಯಲ್ಲ ಎಂದ ಪಾಕ್‌ ಮಹಿಳೆ

    ಲಕ್ನೋ: ಪಬ್‌ಜೀ ಪ್ರೇಮಿಗಾಗಿ (PUBG Lover) ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ ಪ್ರಕರಣದಲ್ಲಿ ದಿನಕ್ಕೊಂದು ರಹಸ್ಯ ಬಯಲಾಗುತ್ತಿದೆ.

    ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನೊಂದಿಗೆ (ISI) ಆಕೆ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆ ATS ಹಾಗೂ ಇಂಟೆಲಿಜೆನ್ಸ್ ಬ್ಯೂರೋ (IB) ವಿಚಾರಣೆ ನಡೆಸಿದ ನಂತರ ನಾನು ಗೂಢಚಾರಿಯಲ್ಲ, ನನ್ನನ್ನು ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರಿಗೆ ಮನವಿ ಮಾಡಿಕೊಂಡಿದ್ದಾಳೆ.

    ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೀಮಾ (Seema Haider), ನಾನು ಭಾರತಕ್ಕೆ ಹೋಗುತ್ತಿದ್ದೇನೆ ಅನ್ನೋದು ಪಾಕಿಸ್ತಾನದಲ್ಲಿ ಯಾರಿಗಾದರೂ ತಿಳಿದಿದ್ದರೆ ಅಲ್ಲಿಯೇ ನನ್ನನ್ನ ಕೊಂದುಬಿಡುತ್ತಿದ್ದರು. ನಾನು ಗೂಢಚಾರಿಯಲ್ಲ. ಶೀಘ್ರವೇ ಸತ್ಯವೇನೆಂಬುದು ಹೊರಬರಲಿದೆ. ನನ್ನನ್ನ ವಾಪಸ್‌ ಕಳುಹಿಸದಂತೆ ನಾನು ಮೋದಿ ಜೀ, ಯೋಗಿ ಜೀ ಅವರಲ್ಲಿ ವಿನಂತಿಸುತ್ತೇನೆ ಎಂದು ಹೇಳಿದ್ದಾಳೆ. ಇದನ್ನೂ ಓದಿ: ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

    6 ಗಂಟೆಗಳ ಕಾಲ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದಿಂದ ವಿಚಾರಣೆಗೆ ಒಳಗಾಗಿದ್ದ ಸೀಮಾ, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನನಗೆ ಬೇರೆ ಆಯ್ಕೆಗಳು ಇರಲಿಲ್ಲ. ಆದ್ದರಿಂದ ಭಾರತಕ್ಕೆ ಅಕ್ರಮವಾಗಿಯೇ ಪ್ರವೇಶಿಸಬೇಕಾಯ್ತು. ನನಗೆ ಪಾಕಿಸ್ತಾನದಲ್ಲಿ ವಾಸಿಸಲು ಇಷ್ಟವಿರಲಿಲ್ಲ. ನಾನು ಹಿಂದಿನ ನನ್ನ ಯಾವುದೇ ಮಾಹಿತಿಯನ್ನೂ ಮರೆಮಾಚಿಲ್ಲ ಎಂದು ಸೀಮಾ ವಿಚಾರಣೆಯಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

    30 ವರ್ಷದ ಸೀಮಾಗೆ ಆನ್‌ಲೈನ್ ಗೇಮ್ ಪಬ್ಜಿ ಮೂಲಕ ಭಾರತದ ನಿವಾಸಿ ಸಚಿನ್ ಪರಿಚಯವಾಗಿತ್ತು. ಬಳಿಕ ಪರಿಚಯ ಪ್ರೀತಿಗೆ ತಿರುಗಿದ್ದು, ಆತನೊಂದಿಗೆ ಜೀವಿಸುವ ಸಲುವಾಗಿ ತನ್ನ 4 ಮಕ್ಕಳೊಂದಿಗೆ ಮೇ ತಿಂಗಳಿನಲ್ಲಿ ನೇಪಾಳದ ಮೂಲಕ ಬಸ್‌ನಲ್ಲಿ ಭಾರತ ಪ್ರವೇಶಿಸಿದ್ದಳು. ಕಳೆದ 2 ತಿಂಗಳಿನಿಂದ ಆಕೆ ತನ್ನ ಗೆಳೆಯ ಸಚಿನ್ ಮೀನ ಜೊತೆಗೆ ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಇದನ್ನೂ ಓದಿ: ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್‌

    ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನೊಂದಿಗೆ ಆಕೆಗೆ ಸಂಬಂಧದ ಶಂಕೆಯ ಹಿನ್ನೆಲೆ ಎಟಿಎಸ್ ಹಾಗೂ ಇಂಟೆಲಿಜೆನ್ಸ್ ಬ್ಯೂರೋ ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೇ ಸೀಮಾ ಹೈದರ್‌ನ ಈ ಹಿಂದೆ ಡಿಲೀಟ್ ಆಗಿರುವ ಮೊಬೈಲ್ ಡೇಟಾವನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆಕೆಯ ಸೋಷಿಯಲ್‌ ಮೀಡಿಯಾ ಖಾತೆಗಳನ್ನು ಸಹ ತನಿಖೆಗೆ ಒಳಪಡಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

    ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

    ಲಕ್ನೋ: ಆನ್‌ಲೈನ್‌ ಗೇಮ್‌ ಪಬ್ಜಿ (PUBG) ಪ್ರೇಮಿಗಾಗಿ ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕಿಸ್ತಾನದ (Pakistani National) ಮಹಿಳೆ ಸೀಮಾ ಹೈದರ್‌ (Seema Haider) ಪ್ರಕರಣ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್‌ ಪಡೆದುಕೊಳ್ಳುತ್ತಿದೆ.

    ಪ್ರೀತಿಗಾಗಿ ಪಾರಿವಾಳದಂತೆ ಗಡಿ ದಾಟಿ ಬಂದ ಮಹಿಳೆಯ ಕಥೆಗೆ ಈಗ ಐಎಸ್‌ಐ ನಂಟು ತಳಕು ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅದಕ್ಕೆ ಪೂರಕವೆಂಬಂತೆ ಪೊಲೀಸರು ಮತ್ತೊಂದು ಸ್ಫೋಟಕ ಮಾಹಿತಿಯನ್ನು ಹೊರಬಿಟ್ಟಿದ್ದಾರೆ. ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌, ಭಾರತೀಯ ಸೇನಾ ಯೋಧರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

    ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನೊಂದಿಗೆ (ISI) ಆಕೆಗೆ ಸಂಬಂಧದ ಶಂಕೆಯ ಹಿನ್ನೆಲೆ ಎಟಿಎಸ್ ಹಾಗೂ ಇಂಟೆಲಿಜೆನ್ಸ್ ಬ್ಯೂರೋ (IB) ವಿಚಾರಣೆಗೆ ಒಳಪಡಿಸಿದೆ. ಮಾತ್ರವಲ್ಲದೇ ಸೀಮಾ ಹೈದರ್‌ನ ಈ ಹಿಂದೆ ಡಿಲೀಟ್ ಆಗಿರುವ ಮೊಬೈಲ್ ಡೇಟಾವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆಕೆಯ ಸೋಷಿಯಲ್‌ ಮೀಡಿಯಾ ಖಾತೆಗಳನ್ನು ಸಹ ತನಿಖೆಗೆ ಒಳಪಡಿಸಲಾಗಿದೆ.

    30 ವರ್ಷದ ಸೀಮಾಗೆ ಆನ್‌ಲೈನ್ ಗೇಮ್ ಪಬ್ಜಿ ಮೂಲಕ ಭಾರತದ ನಿವಾಸಿ ಸಚಿನ್ ಪರಿಚಯವಾಗಿತ್ತು. ಬಳಿಕ ಪರಿಚಯ ಪ್ರೀತಿಗೆ ತಿರುಗಿದ್ದು, ಆತನೊಂದಿಗೆ ಜೀವಿಸುವ ಸಲುವಾಗಿ ತನ್ನ 4 ಮಕ್ಕಳೊಂದಿಗೆ ಮೇ ತಿಂಗಳಿನಲ್ಲಿ ನೇಪಾಳದ ಮೂಲಕ ಬಸ್‌ನಲ್ಲಿ ಭಾರತ ಪ್ರವೇಶಿಸಿದ್ದಳು. ಕಳೆದ 2 ತಿಂಗಳಿನಿಂದ ಆಕೆ ತನ್ನ ಗೆಳೆಯ ಸಚಿನ್ ಜೊತೆಗೆ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಇದನ್ನೂ ಓದಿ: ಅವಳಿನ್ನೂ ಮುಸಲ್ಮಾನಳಲ್ಲ, ಪಾಕಿಸ್ತಾನಕ್ಕೆ ಬರೋದು ಬೇಡ – ಪಾಕ್ ಮಹಿಳೆ ಪೋಷಕರ ಫಸ್ಟ್ ರಿಯಾಕ್ಷನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೈನಿಕರ ಮೇಲೆ ಮಾರಣಾಂತಿಕ ಹಲ್ಲೆ – ವಿಡಿಯೋ ವೈರಲ್

    ಸೈನಿಕರ ಮೇಲೆ ಮಾರಣಾಂತಿಕ ಹಲ್ಲೆ – ವಿಡಿಯೋ ವೈರಲ್

    ಲಕ್ನೋ: ಸೈನಿಕರಿಬ್ಬರ ಮೇಲೆ ಕೆಲ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ಬಾಘ್ಪತ್‍ನಲ್ಲಿ ಶನಿವಾರ ಏಳು ಜನರ ಗುಂಪೊಂದು ನಡು ರಸ್ತೆಯಲ್ಲಿ ಕೋಲು ಹಿಡಿದು ಸೈನಿಕರಿಗೆ ಹೊಡೆದಿದ್ದಾರೆ. ಇದರಿಂದಾಗಿ ಒಬ್ಬ ಸೈನಿಕರ ತಲೆಗೆ ಪೆಟ್ಟು ಬಿದ್ದು, ರಕ್ತಸ್ರಾವವಾಗುತ್ತಿತ್ತು. ಅಷ್ಟೇ ಅಲ್ಲದೆ ಮತ್ತೊಬ್ಬ ಸೈನಿಕನ ಮೇಲೂ ಹಲ್ಲೆ ಮಾಡಿದ್ದಾರೆ.

    ಸೈನಿಕರು ರೆಸ್ಟೋರೆಂಟ್​ಗೆ ಊಟ ಮಾಡಲು ಹೋಗಿದ್ದರು. ಊಟ ಮುಗಿಸಿ ಹಣ ಪಾವತಿ ಮಾಡುವಾಗ ಬಿಲ್ ನೋಡಿ ಮಾಲೀಕರನ್ನು ಪ್ರಶ್ನಿಸಿದ್ದಾರೆ. ಇದರಿಂದಾಗಿ ಸೈನಿಕರು ಹಾಗೂ ಮಾಲೀಕರ ಮಧ್ಯೆ ವಾಗ್ದಾಳಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುವ 7 ಜನರು ಸೈನಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

    ಇಬ್ಬರು ಸೈನಿಕರಲ್ಲಿ ಒಬ್ಬರು ಬಿಳಿ, ಕೆಂಪು ಪಟ್ಟಿ ಟೀ ಶರ್ಟ್ ಧರಿಸಿದ್ದರೆ, ಮತ್ತೊಬ್ಬರು ಹಸಿರು ಬಣ್ಣದ ಕುರ್ತಾ ಹಾಕಿದ್ದಾರೆ. ನಡು ರಸ್ತೆಯಲ್ಲಿ ಘಟನೆ ನಡೆಯುತ್ತಿದ್ದರೂ ಸ್ಥಳೀಯರು ನಿಂತು ನೋಡಿದರೇ ವಿನಾ: ಯಾರೂ ತಡೆಯಲು ಮುಂದಾಗಲಿಲ್ಲ.

    ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಏಳು ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಪೊಲೀಸ್ ಅಧಿಕಾರಿ ರಾಮ್‍ನಂದ್ ಕುಶ್ವಾಹ ತಿಳಿಸಿದ್ದಾರೆ.