Tag: Arnav

  • ತಂದೆ ಸ್ಥಾನವನ್ನೂ ತುಂಬಿ ಮಗಳಿಗೆ ಹೆಸರಿಟ್ಟ ನಟಿ ದಿವ್ಯಾ ಶ್ರೀಧರ್

    ತಂದೆ ಸ್ಥಾನವನ್ನೂ ತುಂಬಿ ಮಗಳಿಗೆ ಹೆಸರಿಟ್ಟ ನಟಿ ದಿವ್ಯಾ ಶ್ರೀಧರ್

    ನ್ನಡದ ‘ಆಕಾಶದೀಪ’ (Akashadeepa) ಸೀರಿಯಲ್ ನಟಿ ದಿವ್ಯಾ ಶ್ರೀಧರ್ (Divya Shridhar) ತಮಿಳು ಕಿರುತೆರೆಗೆ ಹಾರಿ, ಅಲ್ಲಿಯೂ ಸಾಕಷ್ಟು ಫೇಮಸ್ ಆಗಿದ್ದರು. ನಟ ಆರ್ನವ್ ಜೊತೆ ಮದುವೆಯಾಗಿ ಇದೀಗ ಇಬ್ಬರೂ ದೂರವಾಗಿದ್ದಾರೆ. ದಿವ್ಯಾ ಗರ್ಭಿಣಿಯಾಗಿದ್ದಾರೆ ಎನ್ನುವ ಕಾರಣಕ್ಕಾಗಿ ಆರ್ನವ್ ದೂರವಾಗಿದ್ದಾನೆ ಎನ್ನುವುದು ಆರೋಪ. ಆನಂತರ ದಿವ್ಯಾ ಏಪ್ರಿಲ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ಈಗ ತಂದೆ ಸ್ಥಾನದಲ್ಲೂ ನಿಂತು ಪ್ರಾಯುಷಿ (Prausi) ಎಂದು ಹೆಸರಿಟಿದ್ದಾರೆ. ಸ್ನೇಹಿತರು ಮತ್ತು ಕುಟುಂಬ ಈ ಸಂದರ್ಭದಲ್ಲಿ ಹಾಜರಿತ್ತು.

    ಮಗು ಹುಟ್ಟಿದ ಒಂದೇ ತಿಂಗಳಿಗೆ ಚಿತ್ರೀಕರಣದಲ್ಲಿ ಭಾಗಿ

    ಮಗು ಹುಟ್ಟಿದ ಒಂದೇ ತಿಂಗಳಿಗೆ ಹಸುಗೂಸನ್ನ (Child) ಶೂಟಿಂಗ್ (Shooting)  ಕರೆದುಕೊಂಡು ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ದಿವ್ಯಾ ಹೇಳಿಕೊಂಡಿದ್ದರು. ಚಿತ್ರೀಕರಣ ಮತ್ತು ಮಗು ಪಾಲನೆ ಎರಡನ್ನು ಹೇಗೆ ನಿಭಾಯಿಸುತ್ತಿದ್ದಾರೆ ಎಂದು ವರ್ಕಿಂಗ್ ವುಮೆನ್ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

    ಆಕಾಶದೀಪ, ಅಮ್ಮಾ, ಸೀರಿಯಲ್ ಸೇರಿದಂತೆ ‘ಸನಿಹ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಬಳಿಕ ತಮಿಳು ಸೀರಿಯಲ್‌ನಲ್ಲಿ ನಟಿ ಬ್ಯುಸಿಯಾದರು. ತಮಿಳು ನಟ ಅರ್ನವ್ ಜೊತೆಗಿನ ದಾಂಪತ್ಯದಲ್ಲಿ ಬಿರುಕಿನ ಬೆನ್ನಲ್ಲೇ ನಟಿ ಪೊಲೀಸ್ ಠಾಣೆ ಮಟ್ಟಿಲೇರಿ ಸುದ್ದಿಯಾದರು. ಏಪ್ರಿಲ್ 7ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅದಾಗಿ ಒಂದು ತಿಂಗಳು ಕಳೆಯುತ್ತಿದ್ದಂತೆ, ಮೇ 21ರಿಂದಲೇ ಅವರು ಮತ್ತೆ ಕೆಲಸ ಶುರು ಮಾಡಿದ್ದಾರೆ. ಹಸುಗೂಸನ್ನು ಕೂಡ ಅವರು ಶೂಟಿಂಗ್ ಸ್ಥಳಕ್ಕೆ ಕರೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಕೆಲಸ ಮಾಡುವ ಮಹಿಳೆ ಮಾಡದಿರುವ ಕೆಲಸ ಇಲ್ಲ, ಮರಳಿ ಕೆಲಸಕ್ಕೆ ಎಂದು ದಿವ್ಯಾ ಶ್ರೀಧರ್ ಅವರು ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ಶೂಟಿಂಗ್ ಸ್ಥಳಕ್ಕೆ ಬರುವ ವಿಡಿಯೋವನ್ನು ಹಂಚಿಕೊಂಡಿದ್ದರು.

    ತಾಯಿಯ ಸಂಪತ್ತು ಮಗಳು ಎಂದು ಮುದ್ದು ಮಗಳ ಜೊತೆಗೆ ಆಟ ಆಡುತ್ತಿರುವ ವಿಡಿಯೋವನ್ನು ‘ಆಕಾಶದೀಪ’ ನಟಿ ದಿವ್ಯಾ ಹಂಚಿಕೊಂಡಿದ್ದರು. ದಿವ್ಯಾ ಅವರಿಗೆ ಮೊದಲ ಮದುವೆಯಿಂದ ಓರ್ವ ಹೆಣ್ಣು ಮಗಳಿದ್ದಾಳೆ. ಆ ನಂತರ ಪತಿಗೆ ವಿಚ್ಛೇದನ ಕೊಟ್ಟ ಬಳಿಕ ಅವರು ಅರ್ನವ್ (Arnaav) ಎನ್ನುವವರನ್ನು ಮದುವೆಯಾಗಿದ್ದಾರೆ. ಪರಭಾಷೆಯ ಸೀರಿಯಲ್‌ನಲ್ಲಿ ಆಕ್ಟೀವ್ ಆಗಿದ್ದ ವೇಳೆ ಅವರು ಸಹನಟ ಆರವ್ ಜೊತೆ ಸ್ನೇಹ ಬೆಳೆಸಿದರು, ಅದು ಪ್ರೀತಿಗೆ ತಿರುಗಿತ್ತು. ಆ ನಂತರ ಆರವ್, ದಿವ್ಯಾ ಅವರು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಆ ನಂತರ ಇವರಿಬ್ಬರು ಖಾಸಗಿಯಾಗಿ ಕೆಲವೇ ಕೆಲವರ ಸಾಕ್ಷಿಯಾಗಿ ಹಿಂದು, ಮುಸ್ಲಿಂ ಸಮುದಾಯದ ಪ್ರಕಾರ ಮದುವೆಯಾದರು.

     

    ದಿವ್ಯಾ ಅವರು ಗರ್ಭಿಣಿಯಾದಾಗ ಇವರಿಬ್ಬರ ಮಧ್ಯೆ ಮನಸ್ತಾಪ ಶುರುವಾಗಿತ್ತು. ಆರವ್ ನನ್ನ ಕೇರ್ ಮಾಡೋದಿಲ್ಲ, ನಾನು ಟ್ಯಾಬ್ಲೆಟ್ ತಗೊಂಡೆನಾ? ಬಿಟ್ನಾ ಅಂತ ಕೇಳೋದಿಲ್ಲ, ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಅಂತ ದಿವ್ಯಾ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿ ಆರವ್ ವಿರುದ್ಧ ದೂರು ನೀಡಿದ್ದರು. ಆರವ್ ಹಾಗೂ ದಿವ್ಯಾ ಅವರು ಪರಸ್ಪರ ಸಾಕಷ್ಟು ಆರೋಪ ಮಾಡಿಕೊಂಡಿದ್ದರು. ಈಗ ಎರಡನೇ ಪತಿಯಿಂದ ದೂರ ಆಗಿರುವ ದಿವ್ಯಾ ಅವರು ಇಬ್ಬರು ಹೆಣ್ಣು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿರುಕುಳ ಕೊಟ್ಟ ನಟಿಯ ಪತಿಯಿಂದಲೇ ಮಗುವನ್ನು ತೋರಿಸುವಂತೆ ಕಣ್ಣೀರು

    ಕಿರುಕುಳ ಕೊಟ್ಟ ನಟಿಯ ಪತಿಯಿಂದಲೇ ಮಗುವನ್ನು ತೋರಿಸುವಂತೆ ಕಣ್ಣೀರು

    ಟ ಹಾಗೂ ತಮ್ಮ ಪತಿ ಅರ್ನವ್ ಕಿರುಕುಳ ನೀಡಿದ್ದಾರೆ ಎಂದು ಕಣ್ಣೀರಿಡುತ್ತಲೇ ಪೊಲೀಸರಿಗೆ ದೂರು ನೀಡಿದ್ದ ಕನ್ನಡದ ನಟಿ ದಿವ್ಯಾ ಶ್ರೀಧರ್ ಇತ್ತೀಚೆಗಷ್ಟೇ ಹೆಣ್ಣು (girl) ಮಗುವಿಗೆ ಜನ್ಮ ನೀಡಿದ್ದಾರೆ. ಮೊನ್ನೆಯಷ್ಟೇ ಆ ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿದ್ದರು. ಗಂಡನಿಂದ ದೂರವಿರುವ ಅವರು ಮಗುವನ್ನು ಬಲು ಪ್ರೀತಿಯಿಂದ ಬೆಳೆಸುತ್ತಿದ್ದಾರೆ. ಈಗ ಆಮಗುವನ್ನು ನೋಡಬೇಕು ಎಂದು ಅರ್ನವ್ ಕೇಳಿಕೊಂಡಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿದ ಅನರ್ವ್, ‘ಬೇರೆಯವರ ಮಕ್ಕಳನ್ನು ಎತ್ತಿಕೊಂಡು ಮುದ್ದಾಡುತ್ತಿರುವೆ. ನನ್ನ ಮಗುವನ್ನು ನೋಡುವುದಕ್ಕೂ ಆಗುತ್ತಿಲ್ಲ. ದಯವಿಟ್ಟು ನನ್ನ ಮಗುವಿನ ವಿಡಿಯೋವನ್ನಾದರೂ ದಿವ್ಯಾ ಹಂಚಿಕೊಳ್ಳಲಿ ಎಂದು ಕೇಳಿಕೊಂಡಿದ್ದಾರೆ. ಕಾನೂನು ಮೂಲಕ ಹೋಗಬಹುದು. ಆದರೆ, ನನಗೆ ಅದು ಇಷ್ಟವಿಲ್ಲ’ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:Exclusive: ‘ಬಡವ ರಾಸ್ಕಲ್’ ನಿರ್ದೇಶಕನ ಜೊತೆ ಡಾಲಿ ಹೊಸ ಸಿನಿಮಾ

    ‘ಆಕಾಶದೀಪ’ (Akashadeepa) ಸೀರಿಯಲ್ ನಾಯಕಿ ದಿವ್ಯಾ ಶ್ರೀಧರ್ (Divya Shridhar) ಅವರು ಪತಿ ಅರ್ನವ್ (Arnav) ಕಿರುಕುಳ ವಿರುದ್ಧ ತಿರುಗಿ ಬಿದ್ದಿದ್ದರು. ಕಳೆದ ವರ್ಷ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಅರ್ನವ್‌ನ ಬಂಧಿಸಿದ್ದರು. ಎರಡು ದಿನಗಳ ಹಿಂದೆ ನಟಿ ದಿವ್ಯಾ ಮುದ್ದಾದ ಹೆಣ್ಣು ಮಗುವಿಗೆ ಫೋಟೋ ಹಂಚಿಕೊಂಡಿದ್ದಾರೆ.

    ಪ್ರೀತಿಸಿ ಮದುವೆಯಾದ ಗಂಡ ನಾನು ಗರ್ಭಿಣಿ ಆಗುತ್ತಿದ್ದಂತೆ ಮತ್ತೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ. ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಿರುತೆರೆ ನಟ ಅರ್ನವ್ ಬಂಧನವಾಗಿತ್ತು. ಕಳೆದ ವರ್ಷ ಈ ವಿಚಾರ ದೊಡ್ಡದಾಗಿ ಸದ್ದು ಮಾಡಿತ್ತು. ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮಗಳ ಆಗಮನದ ಖುಷಿಯಲ್ಲಿದ್ದಾರೆ.

    ನನ್ನ ಮುದ್ದು ಕಂದ ಲವ್ ಯೂ ಡಾರ್ಲಿಂಗ್ ಎಂದು ಮಗಳ ಆಗಮನದ ಬಗ್ಗೆ ನಟಿ ಹೇಳಿಕೊಂಡಿದ್ದರು. ಈ ಬೆನ್ನಲ್ಲೇ ಮುದ್ದಾದ ಮಗಳ ಮುಖವನ್ನ ರಿವೀಲ್ ಮಾಡಿದ್ದಾರೆ. ಪುಟ್ಟ ದೇವತೆ ಸ್ವಾಗತ ಎಂದು ಅಡಿಬರಹ ನೀಡಿ ಶೇರ್ ಮಾಡಿದ್ದಾರೆ. ಆಕಾಶದೀಪ, ಕಣ್ಮಣಿ ಸೀರಿಯಲ್ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೇವಂತಿ ಧಾರಾವಾಹಿ ಮೂಲಕ ತಮಿಳು ಕಿರುತೆರೆಗೆ ದಿವ್ಯಾ ಶ್ರೀಧರ್ ಕಾಲಿಟ್ಟರು.

  • ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ದಿವ್ಯಾ ಶ್ರೀಧರ್

    ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ದಿವ್ಯಾ ಶ್ರೀಧರ್

    ‘ಆಕಾಶದೀಪ’ (Akashadeepa) ಸೀರಿಯಲ್ ನಾಯಕಿ ದಿವ್ಯಾ ಶ್ರೀಧರ್ (Divya Shridhar) ಅವರು ಪತಿ ಅರ್ನವ್ (Arnav) ಕಿರುಕುಳ ವಿರುದ್ಧ ತಿರುಗಿ ಬಿದ್ದಿದ್ದರು. ಕಳೆದ ವರ್ಷ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಅರ್ನವ್‌ನ ಬಂಧಿಸಿದ್ದರು. ಎರಡು ದಿನಗಳ ಹಿಂದೆ ನಟಿ ದಿವ್ಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಮುದ್ದಾದ ಮಗಳ ಫೋಟೋ ಹಂಚಿಕೊಂಡಿದ್ದಾರೆ.

    ಪ್ರೀತಿಸಿ ಮದುವೆಯಾದ ಗಂಡ ನಾನು ಗರ್ಭಿಣಿ ಆಗುತ್ತಿದ್ದಂತೆ ಮತ್ತೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ. ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಿರುತೆರೆ ನಟ ಅರ್ನವ್ ಬಂಧನವಾಗಿತ್ತು. ಕಳೆದ ವರ್ಷ ಈ ವಿಚಾರ ದೊಡ್ಡದಾಗಿ ಸದ್ದು ಮಾಡಿತ್ತು. ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮಗಳ ಆಗಮನದ ಖುಷಿಯಲ್ಲಿದ್ದಾರೆ. ಇದನ್ನೂ ಓದಿ: ಮತ್ತೆ ಒಂದಾಯಿತು ‘ಕರ್ಣನ್’ ಜೋಡಿ: ಧನುಷ್ ಚಿತ್ರಕ್ಕೆ ಮಾರಿ ಸೆಲ್ವರಾಜ್ ಡೈರೆಕ್ಟರ್

    ನನ್ನ ಮುದ್ದು ಕಂದ ಲವ್ ಯೂ ಡಾರ್ಲಿಂಗ್ ಎಂದು ಮಗಳ ಆಗಮನದ ಬಗ್ಗೆ ನಟಿ ಹೇಳಿಕೊಂಡಿದ್ದರು. ಈ ಬೆನ್ನಲ್ಲೇ ಮುದ್ದಾದ ಮಗಳ ಮುಖವನ್ನ ರಿವೀಲ್ ಮಾಡಿದ್ದಾರೆ. ಪುಟ್ಟ ದೇವತೆ ಸ್ವಾಗತ ಎಂದು ಅಡಿಬರಹ ನೀಡಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಒಂದಾಯಿತು ‘ಕರ್ಣನ್’ ಜೋಡಿ: ಧನುಷ್ ಚಿತ್ರಕ್ಕೆ ಮಾರಿ ಸೆಲ್ವರಾಜ್ ಡೈರೆಕ್ಟರ್

     

    View this post on Instagram

     

    A post shared by Divya Shridhar (@divya_shridhar_1112)

    ಆಕಾಶದೀಪ, ಕಣ್ಮಣಿ ಸೀರಿಯಲ್ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೇವಂತಿ ಧಾರಾವಾಹಿ ಮೂಲಕ ತಮಿಳು ಕಿರುತೆರೆಗೆ ದಿವ್ಯಾ ಶ್ರೀಧರ್ ಕಾಲಿಟ್ಟರು.

  • ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಗೆ ಮಂಗಳಮುಖಿ ಜೊತೆ ಸಂಬಂಧ

    ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಗೆ ಮಂಗಳಮುಖಿ ಜೊತೆ ಸಂಬಂಧ

    ನ್ನಡದ ನಟಿ ದಿವ್ಯಾ ಶ್ರೀಧರ್ (Divya Shridhar) ಹಾಗೂ ಅಮ್ಜಾದ್ ಖಾನ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಈ ಸುದ್ದಿಯಿಂದ ಸ್ವತಃ ದಿವ್ಯಾ ಶಾಕ್ ಆಗಿದ್ದಾರೆ. ಸದ್ಯ ಅಮ್ಜಾದ್ ಖಾನ್ ಜೈಲಿನಲ್ಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಮಂಗಳಮುಖಿ ಜೊತೆ ಸಂಬಂಧ ಇತ್ತು ಎನ್ನುವ  ಆಡಿಯೋ ವೈರಲ್ ಆಗಿದೆ. ಸಂಬಂಧ ಇತ್ತು ಎಂದು ಸ್ವತಃ ಆ ಮಂಗಳಮುಖಿಯೇ ಹೇಳಿರುವ ಆಡಿಯೋ (Audio) ಅದಾಗಿದೆ. ಅಲ್ಲದೇ, ಮಂಗಳಮುಖಿ ಜೊತೆ ಅಮ್ಜಾದ್ ಇರುವಂತಹ ಫೋಟೋಗಳು ಕೂಡ ಹರಿದಾಡುತ್ತಿವೆ.

    ಪ್ರಿಯದರ್ಶಿನಿ (Priyadarshini) ಹೆಸರಿನ ಈ ಮಂಗಳಮುಖಿ ಸದ್ಯ ಇರುವುದು ಮಲೇಶಿಯಾದಲ್ಲಿ. ಈಕೆಯ ಜೊತೆಯೇ ಅಮ್ಜಾದ್ ಗೆ ಸಂಬಂಧವಿತ್ತು ಎಂದು ಆ ಆಡಿಯೋದಲ್ಲಿ ಹೇಳಲಾಗಿದೆ. ‘ಅವನು ನನ್ನನ್ನು ಪ್ರೀತಿಸಿದ. ಆನಂತರ ಗೊತ್ತಾಯಿತು ಅವನೊಬ್ಬ ಹೆಣ್ಣುಬಾಕಾ ಅಂತ. ಚೆನ್ನೈನಲ್ಲಿ ಅವನು ನನ್ನ ಜೊತೆ ಸಹ ಜೀವನ ನಡೆಸಿದ್ದಾನೆ. ಅಲ್ಲದೇ, ವಿವಾಹ ಕೂಡ ಆಗಿದ್ದ. ಎರಡು ವರ್ಷ ಒಟ್ಟಿಗೆ ಇದ್ದೆವು. ಆಮೇಲೆ ನನ್ನನ್ನು ಅವನು ದೂರ ಮಾಡಿದ. ನಾನು ನೋವು ತಾಳಲಾರದೆ ಮಲೇಶಿಯಾಗೆ ಹೊರಟೆ’ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಈ ಆಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಮ್ಜಾದ್ ಸದ್ಯ ಜೈಲಿನಲ್ಲಿ ಇರುವುದರಿಂದ ಈ ಆಡಿಯೋ ಅವರ ಜೀವನಕ್ಕೆ ಯಾವೆಲ್ಲ ರೀತಿಯಲ್ಲಿ ತೊಂದರೆ ತಂದು ಇಡಲಿದೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ. ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ವತಃ ದಿವ್ಯಾ ಶ್ರೀಧರ್ ಅವರೇ ಶಾಕ್ ಗೆ ಒಳಗಾಗಿದ್ದು, ಆ ಹುಡುಗಿ ಯಾರು ಎಂದು ತಿಳಿದುಕೊಳ್ಳುವ ಪ್ರಯತ್ನ ಕೂಡ ಮಾಡಿಕೊಳ್ಳುತ್ತಿದ್ದಾರಂತೆ.

    ಪತಿ ಮೇಲೆ ಸ್ವತಃ ದಿವ್ಯಾ ಶ್ರೀಧರ್ ಅವರೇ ದೂರು ನೀಡಿದ್ದರು. ಅಮ್ಜಾದ್ (Amjad Khan) ಬಂಧನಕ್ಕೂ ಮುನ್ನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಿಳಾ ಆಯೋಗ ಕೂಡ  ಪ್ರವೇಶ ಮಾಡಿತ್ತು. ಕರ್ನಾಟಕದ ನಟಿ ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ರಹಿಸಿ, ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದರು.

    ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿಯಲ್ಲಿ ಮಾತನಾಡುವುದರ ಜೊತೆಗೆ ಲಿಖಿತ ರೂಪದಲ್ಲೂ ಆಯೋಗಕ್ಕೆ ಪತ್ರ ಬರೆದು, ದಿವ್ಯಾಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರಂತೆ. ದಿವ್ಯಾ ಶ್ರೀಧರ್ ತನ್ನ ಗಂಡನಿಂದ ದೈಹಿಕ ಹಲ್ಲೆ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರಿಂದ ಅವರಿಗೆ ರಕ್ಷಣೆ ನೀಡಬೇಕು. ಗರ್ಭಿಣಿ ಅನ್ನುವುದನ್ನೂ ನೋಡದೇ ಆಕೆಯ ಪತಿಯು ಹೊಟ್ಟೆಗೆ ಒದ್ದಿರುವ ಕುರಿತು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

    ಸ್ಯಾಂಡಲ್ ವುಡ್ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ದಿವ್ಯಾ ಶ್ರೀಧರ್, ಆನಂತರ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಸಿನಿಮಾ ರಂಗದಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಆಕಾಶ ದೀಪ ಧಾರಾವಾಹಿ ಮೂಲಕ ಸಖತ್ ಫೇಮಸ್ ಆದರು. ಈ ಧಾರಾವಾಹಿಯ ಯಶಸ್ಸು ಅವರನ್ನು ತಮಿಳು ಕಿರುತೆರೆ ಜಗತ್ತಿಗೂ ಕಾಲಿಡುವಂತೆ ಮಾಡಿತು. ತಮಿಳು ಧಾರಾವಾಹಿಯಲ್ಲೂ ದಿವ್ಯಾ ಸಾಕಷ್ಟು ಹೆಸರು ಮಾಡಿದರು.

    ತಮಿಳು ಧಾರಾವಾಹಿಯ ಸಂದರ್ಭದಲ್ಲೇ ನಟ ಅನರ್ವ್ ಅಲಿಯಾಸ್ ಅಮ್ಜದ್ ಖಾನ್ ಜೊತೆ ಸ್ನೇಹ ಬೆಳೆದು, ಅದು ಪ್ರೀತಿಗೂ ತಿರುಗಿ ನಂತರ ಮದುವೆಯಾಗಿದ್ದಾರೆ. ದಿವ್ಯಾ ಪ್ರಗ್ನೆಂಟ್ ಎಂದು ತಿಳಿಯುತ್ತಿದ್ದಂತೆಯೇ ಪತಿ ಅವರಿಂದ ದೂರವಾಗುವುದಕ್ಕೆ ಶುರು ಮಾಡಿದರು ಎಂದು ಆರೋಪಿಸಿದ್ದಾರೆ ದಿವ್ಯಾ. ಅಲ್ಲದೇ, ತಮಗೆ ಪತಿಯಿಂದ ದೈಹಿಕ ಹಿಂಸೆ ಸೇರಿದಂತೆ ಹಲವು ಆರೋಪಗಳನ್ನು ದಿವ್ಯಾ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲವ್ ದೋಖಾ ಆರೋಪ: ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಕೊನೆಗೂ ಬಂಧನ

    ಲವ್ ದೋಖಾ ಆರೋಪ: ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಕೊನೆಗೂ ಬಂಧನ

    ನ್ನಡ ಕಿರುತೆರೆ ಹಾಗೂ ಹಿರಿತೆರೆ ನಟಿ ದಿವ್ಯಾ ಶ್ರೀಧರ್ (Divya Sridhar) ಅವರ ಪತಿ ಅಮ್ಜಾದ್ ಖಾನ್ (Amjad Khan) ಅವರನ್ನು ತಮಿಳು ನಾಡು ಪೊಲೀಸರು ಬಂಧಿಸಿದ್ದಾರೆ (Arrest). ತನಗೆ ಸುಳ್ಳು ಹೇಳಿ ಮದುವೆ ಆಗಿದ್ದಾನೆ, ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಹಾಗೂ ಲವ್ ಜಿಹಾದ್ ಆರೋಪವನ್ನೂ ಪತಿಯ ಮೇಲೆ ಹೊರೆಸಿ, ದಿವ್ಯಾ ದೂರು ನೀಡಿದ್ದರು. ಈ ದೂರಿನಲ್ಲಿ ಪತಿಯು ತಮ್ಮ ಮೇಲೆ ಮಾಡಿದ ಹಲ್ಲೆಯಿಂದಾಗಿ ಗರ್ಭಪಾತದ ಭಯವೂ ಕಾಡುತ್ತಿದೆ ಎಂದು ಉಲ್ಲೇಖಿಸಿದ್ದರು. ಈ ದೂರಿನ ಅನ್ವಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಮೊನ್ನೆಯಷ್ಟೇ ಆಸ್ಪತ್ರೆಯಿಂದ ಸೀದಾ ಪತಿ ಅಮ್ಜಾದ್ ಖಾನ್ ಮನೆಗೆ ಹೋಗಿರುವ ದಿವ್ಯಾ ಶ್ರೀಧರ್, ತನಗೆ ಈ ರೀತಿ ಯಾಕೆ ಮೋಸ ಮಾಡಿದೆ ಎಂದು ಪ್ರಶ್ನಿಸಿದ್ದರು. ಪತಿ ಜೊತೆ ಜೋರು ಮಾತಿಗೆ ನಿಂತಿದ್ದರು. ದಿವ್ಯಾ ಶ್ರೀಧರ್ ಕೂಗಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ಅಮ್ಜಾದ್ ಖಾನ್ ಅದನ್ನು ಮಾಧ್ಯಮಗಳಿಗೆ ನೀಡಿದ್ದರು ಇದನ್ನೂ ಓದಿ:`ಕೆಜಿಎಫ್ 2’ಗೆ ಸೆಡ್ಡು ಹೊಡೆದ ಕಾಂತಾರ: 100 ಕೋಟಿ ಕಲೆಕ್ಷನ್‌ನತ್ತ ಸಿನಿಮಾ

    ಮಾಧ್ಯಮಗಳ ಜೊತೆ ಹಂಚಿಕೊಂಡಿರುವ ವಿಡಿಯೋದಲ್ಲಿ ‘ನೀನು ಯಾಕೆ ನನಗೆ ಮೋಸ ಮಾಡಿ ಮದುವೆಯಾದೆ. ಸುಳ್ಳು ಯಾಕೆ ಹೇಳಬೇಕಿತ್ತು’ ಎಂದು ದಿವ್ಯಾ ಕೇಳುತ್ತಾರೆ. ‘ಮೋಸ ಮಾಡಿದ್ದು ನಾನಲ್ಲ, ನೀನು. ನೀನೇ ನನ್ನನ್ನು ಪ್ರೀತಿಸಿ ಮದುವೆ ಆಗಿದ್ದು. ನಾನು ಮೋಸ ಮಾಡಿಲ್ಲ. ನೀನೇ ನನಗೆ ಮೋಸ ಮಾಡುತ್ತಿರುವದು’ ಎಂದು ಅಮ್ಜಾದ್ ಖಾನ್ ಹೇಳುತ್ತಾರೆ. ಇಬ್ಬರೂ ಒಬ್ಬರಿಗೊಬ್ಬರು ಮೋಸದ ಆರೋಪ ಮಾಡುತ್ತಾರೆ. ಈ ವಿಡಿಯೋ ವೈರಲ್ ಆಗಿತ್ತು.

    ದಿವ್ಯಾ ಶ್ರೀಧರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಿಳಾ ಆಯೋಗ ಕೂಡ  ಪ್ರವೇಶ ಮಾಡಿತ್ತು. ಕರ್ನಾಟಕದ ನಟಿ ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ರಹಿಸಿ, ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದರು.

    ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿಯಲ್ಲಿ ಮಾತನಾಡುವುದರ ಜೊತೆಗೆ ಲಿಖಿತ ರೂಪದಲ್ಲೂ ಆಯೋಗಕ್ಕೆ ಪತ್ರ ಬರೆದು, ದಿವ್ಯಾಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರಂತೆ. ದಿವ್ಯಾ ಶ್ರೀಧರ್ ತನ್ನ ಗಂಡನಿಂದ ದೈಹಿಕ ಹಲ್ಲೆ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರಿಂದ ಅವರಿಗೆ ರಕ್ಷಣೆ ನೀಡಬೇಕು. ಗರ್ಭಿಣಿ ಅನ್ನುವುದನ್ನೂ ನೋಡದೇ ಆಕೆಯ ಪತಿಯು ಹೊಟ್ಟೆಗೆ ಒದ್ದಿರುವ ಕುರಿತು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

    ಸ್ಯಾಂಡಲ್ ವುಡ್ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ದಿವ್ಯಾ ಶ್ರೀಧರ್, ಆನಂತರ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಸಿನಿಮಾ ರಂಗದಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಆಕಾಶ ದೀಪ ಧಾರಾವಾಹಿ ಮೂಲಕ ಸಖತ್ ಫೇಮಸ್ ಆದರು. ಈ ಧಾರಾವಾಹಿಯ ಯಶಸ್ಸು ಅವರನ್ನು ತಮಿಳು ಕಿರುತೆರೆ ಜಗತ್ತಿಗೂ ಕಾಲಿಡುವಂತೆ ಮಾಡಿತು. ತಮಿಳು ಧಾರಾವಾಹಿಯಲ್ಲೂ ದಿವ್ಯಾ ಸಾಕಷ್ಟು ಹೆಸರು ಮಾಡಿದರು.

    ತಮಿಳು ಧಾರಾವಾಹಿಯ ಸಂದರ್ಭದಲ್ಲೇ ನಟ ಅನರ್ವ್ ಅಲಿಯಾಸ್ ಅಮ್ಜದ್ ಖಾನ್ ಜೊತೆ ಸ್ನೇಹ ಬೆಳೆದು, ಅದು ಪ್ರೀತಿಗೂ ತಿರುಗಿ ನಂತರ ಮದುವೆಯಾಗಿದ್ದಾರೆ. ದಿವ್ಯಾ ಪ್ರಗ್ನೆಂಟ್ ಎಂದು ತಿಳಿಯುತ್ತಿದ್ದಂತೆಯೇ ಪತಿ ಅವರಿಂದ ದೂರವಾಗುವುದಕ್ಕೆ ಶುರು ಮಾಡಿದರು ಎಂದು ಆರೋಪಿಸಿದ್ದಾರೆ ದಿವ್ಯಾ. ಅಲ್ಲದೇ, ತಮಗೆ ಪತಿಯಿಂದ ದೈಹಿಕ ಹಿಂಸೆ ಸೇರಿದಂತೆ ಹಲವು ಆರೋಪಗಳನ್ನು ದಿವ್ಯಾ ಮಾಡಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಯಿಂದ ಡಿಸ್ಚಾರ್ಜ್‌: ಪತಿ ಜೊತೆ ದಿವ್ಯಾ ಶ್ರೀಧರ್ ಡಿಶುಂ ಡಿಶುಂ ವಿಡಿಯೋ

    ಆಸ್ಪತ್ರೆಯಿಂದ ಡಿಸ್ಚಾರ್ಜ್‌: ಪತಿ ಜೊತೆ ದಿವ್ಯಾ ಶ್ರೀಧರ್ ಡಿಶುಂ ಡಿಶುಂ ವಿಡಿಯೋ

    ರ್ನಾಟಕ ಮಹಿಳಾ ಆಯೋಗ ತಮ್ಮ ಬೆನ್ನಿಗೆ ನಿಂತ ಬೆನ್ನಲ್ಲೇ ಆಸ್ಪತ್ರೆಯಿಂದ ಸೀದಾ ಪತಿ ಅಮ್ಜಾದ್ ಖಾನ್ (Amjad Khan) ಮನೆಗೆ ಹೋಗಿರುವ ದಿವ್ಯಾ ಶ್ರೀಧರ್, ತನಗೆ ಈ ರೀತಿ ಯಾಕೆ ಮೋಸ ಮಾಡಿದೆ ಎಂದು ಪ್ರಶ್ನಿಸಿದ್ದಾರೆ. ಪತಿ ಜೊತೆ ಜೋರು ಮಾತಿಗೆ ನಿಂತಿದ್ದಾರೆ. ದಿವ್ಯಾ ಶ್ರೀಧರ್ (Divya Sridhar) ಕೂಗಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ಅಮ್ಜಾದ್ ಖಾನ್ ಅದನ್ನು ಮಾಧ್ಯಮಗಳಿಗೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಹಂಚಿಕೊಂಡಿರುವ ವಿಡಿಯೋದಲ್ಲಿ ‘ನೀನು ಯಾಕೆ ನನಗೆ ಮೋಸ ಮಾಡಿ ಮದುವೆಯಾದೆ. ಸುಳ್ಳು ಯಾಕೆ ಹೇಳಬೇಕಿತ್ತು’ ಎಂದು ದಿವ್ಯಾ ಕೇಳುತ್ತಾರೆ. ‘ಮೋಸ ಮಾಡಿದ್ದು ನಾನಲ್ಲ, ನೀನು. ನೀನೇ ನನ್ನನ್ನು ಪ್ರೀತಿಸಿ ಮದುವೆ ಆಗಿದ್ದು. ನಾನು ಮೋಸ ಮಾಡಿಲ್ಲ. ನೀನೇ ನನಗೆ ಮೋಸ ಮಾಡುತ್ತಿರುವದು’ ಎಂದು ಅಮ್ಜಾದ್ ಖಾನ್ ಹೇಳುತ್ತಾರೆ. ಇಬ್ಬರೂ ಒಬ್ಬರಿಗೊಬ್ಬರು ಮೋಸದ ಆರೋಪ ಮಾಡುತ್ತಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.

     

    ನಿನ್ನೆಯಷ್ಟೇ ದಿವ್ಯಾ ಶ್ರೀಧರ್ ಪ್ರಕರಣಕ್ಕೆ ಕರ್ನಾಟಕ ಮಹಿಳಾ ಆಯೋಗ ಪ್ರವೇಶ ಮಾಡಿದೆ. ಕರ್ನಾಟಕದ ನಟಿ ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ರಹಿಸಿದ್ದು, ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದಾರೆ. ಇದನ್ನೂ ಓದಿ:ಸಿಮ್ ಖರೀದಿಸಲು ಬಂದ ನಟಿಯನ್ನು ಕೂಡಿ ಹಾಕಿದ ಕಚೇರಿ ಸಿಬ್ಬಂದಿ

    ತಮಿಳು ನಾಡು (Tamil) ಮಹಿಳಾ ಆಯೋಗದ ಜೊತೆ ದೂರವಾಣಿಯಲ್ಲಿ ಮಾತನಾಡುವುದರ ಜೊತೆಗೆ ಲಿಖಿತ ರೂಪದಲ್ಲೂ ಆಯೋಗಕ್ಕೆ ಪತ್ರ ಬರೆದು, ದಿವ್ಯಾಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರಂತೆ. ದಿವ್ಯಾ ಶ್ರೀಧರ್ ತನ್ನ ಗಂಡನಿಂದ ದೈಹಿಕ ಹಲ್ಲೆ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರಿಂದ ಅವರಿಗೆ ರಕ್ಷಣೆ ನೀಡಬೇಕು. ಗರ್ಭಿಣಿ ಅನ್ನುವುದನ್ನೂ ನೋಡದೇ ಆಕೆಯ ಪತಿಯು ಹೊಟ್ಟೆಗೆ ಒದ್ದಿರುವ ಕುರಿತು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಅನ್ನಲಾಗುತ್ತಿದೆ.

    ಸ್ಯಾಂಡಲ್ ವುಡ್ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ದಿವ್ಯಾ ಶ್ರೀಧರ್, ಆನಂತರ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಸಿನಿಮಾ ರಂಗದಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಆಕಾಶ ದೀಪ ಧಾರಾವಾಹಿ ಮೂಲಕ ಸಖತ್ ಫೇಮಸ್ ಆದರು. ಈ ಧಾರಾವಾಹಿಯ ಯಶಸ್ಸು ಅವರನ್ನು ತಮಿಳು ಕಿರುತೆರೆ ಜಗತ್ತಿಗೂ ಕಾಲಿಡುವಂತೆ ಮಾಡಿತು. ತಮಿಳು ಧಾರಾವಾಹಿಯಲ್ಲೂ ದಿವ್ಯಾ ಸಾಕಷ್ಟು ಹೆಸರು ಮಾಡಿದರು.

    ತಮಿಳು ಧಾರಾವಾಹಿಯ ಸಂದರ್ಭದಲ್ಲೇ ನಟ ಅನರ್ವ್ (Arnav) ಅಲಿಯಾಸ್ ಅಮ್ಜದ್ ಖಾನ್ ಜೊತೆ ಸ್ನೇಹ ಬೆಳೆದು, ಅದು ಪ್ರೀತಿಗೂ ತಿರುಗಿ ನಂತರ ಮದುವೆಯಾಗಿದ್ದಾರೆ. ದಿವ್ಯಾ ಪ್ರಗ್ನೆಂಟ್ ಎಂದು ತಿಳಿಯುತ್ತಿದ್ದಂತೆಯೇ ಪತಿ ಅವರಿಂದ ದೂರವಾಗುವುದಕ್ಕೆ ಶುರು ಮಾಡಿದರು ಎಂದು ಆರೋಪಿಸಿದ್ದಾರೆ ದಿವ್ಯಾ. ಅಲ್ಲದೇ, ತಮಗೆ ಪತಿಯಿಂದ ದೈಹಿಕ ಹಿಂಸೆ ಸೇರಿದಂತೆ ಹಲವು ಆರೋಪಗಳನ್ನು ದಿವ್ಯಾ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Breaking- ನಟಿ ದಿವ್ಯಾ ಶ್ರೀಧರ್ ಗೆ ಅಮ್ಜಾದ್ ಖಾನ್ 2ನೇ ಪತಿ: ಮಗಳ ಜೊತೆ ದಿವ್ಯಾ ವಿಡಿಯೋ

    Breaking- ನಟಿ ದಿವ್ಯಾ ಶ್ರೀಧರ್ ಗೆ ಅಮ್ಜಾದ್ ಖಾನ್ 2ನೇ ಪತಿ: ಮಗಳ ಜೊತೆ ದಿವ್ಯಾ ವಿಡಿಯೋ

    ನ್ನಡದ ಕಿರುತೆರೆಯ ಖ್ಯಾತ ನಟಿ ದಿವ್ಯಾ ಶ್ರೀಧರ್ (Divya Sridhar) ತಮ್ಮ ಮೇಲೆ ಪತಿ ಅಮ್ಜಾದ್ ಖಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಇತ್ತ ಅಮ್ಜಾದ್ ಖಾನ್ ಕೂಡ ಚೆನ್ನೈನಲ್ಲಿ ಪ್ರತಿ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಗರ್ಭಪಾತ ಮಾಡಿಸಿಕೊಳ್ಳುವುದಕ್ಕಾಗಿ ದಿವ್ಯಾ ಈ ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೂಡ ನೀಡಿದ್ದಾರೆ. ಈ ಮಧ್ಯ ದಿವ್ಯಾ ಮದುವೆ ವಿಚಾರವಾಗಿ ಮತ್ತೊಂದು ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

    ದಿವ್ಯಾ ಈ ಹಿಂದೆಯೇ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಮದುವೆಯಾಗಿದ್ದು, ಈ ದಂಪತಿಗೆ ಹೆಣ್ಣು ಮಗು ಕೂಡ ಇದೆ ಎನ್ನಲಾಗುತ್ತಿದೆ. ದಿವ್ಯಾ ಅವರಿಗೆ ಅಮ್ಜಾದ್ ಖಾನ್ ಎರಡನೇ ಪತಿಯಂತೆ (Second Marriage). ತಮ್ಮದೇ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ತಮ್ಮ ಮಗುವಿನ ಜೊತೆ ಇರುವ ವಿಡಿಯೋವೊಂದನ್ನು ದಿವ್ಯಾ ಶೇರ್ ಮಾಡಿದ್ದು, ‘ಇದು ನಿಮ್ಮ ಮಗಳಾ?’ ಎಂದು ಫ್ಯಾನ್ಸ್ ಒಬ್ಬರು ಕೇಳಿದ ಪ್ರಶ್ನೆಗೆ ‘ಹೌದು’ ಎಂದು ಉತ್ತರಿಸಿದ್ದಾರೆ. ಈ ವಿಡಿಯೋ 16 ಏಪ್ರಿಲ್ 2019ರಂದು ಇನ್ಸ್ಟಾ ಪೇಜ್ ನಲ್ಲಿ ಅಪ್ ಲೋಡ್ ಆಗಿದೆ.

     

    View this post on Instagram

     

    A post shared by Divya Shridhar (@divya_shridhar_1112)

    ಅಲ್ಲದೇ, ಕನ್ನಡದ ವೆಬ್ ಸೈಟ್ ವೊಂದರ ಜೊತೆ ಮಾತನಾಡಿರುವ ದಿವ್ಯಾ ‘ತಮ್ಮ ಗಂಡ ಇಂಜಿನಿಯರ್ ಆಗಿದ್ದು, ತಮಗೊಬ್ಬಳು ಮಗಳಿದ್ದಾಳೆ. ನನ್ನ ತಾಯಿಯು ಮಗುವನ್ನು ನೋಡಿಕೊಳ್ಳುತ್ತಿರುವುದರಿಂದ ತಮಗೆ ಚೆನ್ನೈಗೆ ಹೋಗಿ ಶೂಟಿಂಗ್ ಮಾಡುವುದಕ್ಕೆ ಸಾಧ್ಯವಾಗಿದೆ’ ಎಂದು ಹೇಳಿಕೊಂಡಿದ್ದಾರೆ. ಈ ಸಂದರ್ಶನವು 18 ಮೇ 2020 ರಲ್ಲಿ ಪ್ರಕಟವಾಗಿದೆ. ಅಷ್ಟೇ ಅಲ್ಲದೇ, ತಮ್ಮ ಮಗಳ ಜೊತೆಗಿರುವ ಸಾಕಷ್ಟು ವಿಡಿಯೋಗಳನ್ನು ದಿವ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ತಮ್ಮದು ಸುಖಿ ಕುಟುಂಬ ಅಂತಾನೂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

    ಮೊದಲನೇ ಗಂಡನ ಜೊತೆ ಬಹುಶಃ ಡಿವೋರ್ಸ್ ಆಗಿರಬಹುದು. ಹಾಗಾಗಿ ತಮ್ಮೊಂದಿಗೆ ನಟಿಸುತ್ತಿದ್ದ ಅರ್ನವ್ (Arnav) ಜೊತೆ ಎರಡು ವರ್ಷಗಳ ಹಿಂದೆ ಅವರು ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಅರ್ನವ್ ಅಲಿಯಾಸ್ ಅಮ್ಜದ್ ಖಾನ್ (Amjad Khan) ಕೂಡ ಖ್ಯಾತ ಕಿರುತೆರೆಯ ನಟ. 2017ರಲ್ಲಿ ಅರ್ನವ್ ಮತ್ತು ದಿವ್ಯಾ ಒಂದೇ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದ್ದರು. ದಿನವೂ ಶೂಟಿಂಗ್ ನಲ್ಲಿ ಸಿಗುತ್ತಿದ್ದರಿಂದ ಸ್ನೇಹವಾಗಿ, ಆನಂತರ ಪ್ರೀತಿ ಬೆಳೆದಿದೆ. ಐದು ವರ್ಷಗಳ ಕಾಲ ಇಬ್ಬರೂ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದಾರೆ. ಆನಂತರ ಮದುವೆ ಆಗಿದ್ದಾರೆ. ಈ ವಿಷಯವನ್ನು ಸ್ವತಃ ದಿವ್ಯಾ ಶ್ರೀಧರ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು, ‘ತಮ್ಮಿಬ್ಬರದ್ದು ಬೇರೆ ಬೇರೆ ಸಂಪ್ರದಾಯವಾಗಿದ್ದರೂ, ತಾವು ಅದೃಷ್ಟವಂತ ಜೋಡಿಗಳು’ ಎಂದು ಬರೆದುಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

    ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

    ತಿ ಅರ್ನವ್ ಅಲಿಯಾಸ್ ಅಮ್ಜಾದ್ ಖಾನ್ ತಮಗೆ ದೈಹಿಕವಾಗಿ ಹಿಂಸೆ ನೀಡಿದ್ದು, ಇದರಿಂದಾಗಿ ತಮ್ಮ ಹೊಟ್ಟೆಯಲ್ಲಿರುವ ಮಗುವಿಗೆ ತೊಂದರೆ ಆಗಿದೆ. ನನ್ನ ಮಗುವನ್ನು ನಾನು ಉಳಿಸಿಕೊಳ್ಳಬೇಕಿದೆ ಎಂದು ನಿನ್ನೆಯಷ್ಟೇ ಕನ್ನಡದ ಖ್ಯಾತ ನಟಿ ದಿವ್ಯಾ ಶ್ರೀಧರ್ (Divya Sridhar) ವಿಡಿಯೋವೊಂದರಲ್ಲಿ ಮಾತನಾಡಿದ್ದರು. ತಾವೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ತಿಳಿಸಿದ್ದರು.

    ಈ ಕುರಿತಂತೆ ದಿವ್ಯಾ ಪತಿ ಅಮ್ಜಾದ್ ಖಾನ್ (Amjad Khan) ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಹಲ್ಲೆ ಮಾಡುವಂತಹ ಹುಡುಗ ಅಲ್ಲ. ನನ್ನ ಮನೆಯಲ್ಲಿ ಸಿಸಿಟಿವಿ ಇದೆ. ಯಾರು ಬೇಕಾದರೂ ಬಂದು ನೋಡಬಹುದು. ದಿವ್ಯಾಗೆ ಕೆಲ ಕೆಟ್ಟ ಸ್ನೇಹಿತರ ಸಹವಾಸವಿದೆ. ಅವರೆಲ್ಲ ಸೇರಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಗರ್ಭಪಾತ ಮಾಡಿಸಿಕೊಳ್ಳಲು ದಿವ್ಯಾ ಈ ರೀತಿಯಲ್ಲಿ ನಾಟಕವಾಡುತ್ತಿರಬೇಕು. ನನಗೆ ನನ್ನ ಮಗು ಬೇಕು. ನಾನು ಕೂಡ ಕಮಿಷ್ನರ್ ಗೆ ದೂರು ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:‘ಅರ್ಧಂಬರ್ಧ ಪ್ರೇಮಕಥೆ’ಯಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ

    ಅರ್ನವ್ (Arnav) ಅಲಿಯಾಸ್ ಅಮ್ಜದ್ ಖಾನ್ ಕೂಡ ಖ್ಯಾತ ಕಿರುತೆರೆಯ ನಟ. 2017ರಲ್ಲಿ ಅರ್ನವ್ ಮತ್ತು ದಿವ್ಯಾ ಒಂದೇ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದ್ದರು. ದಿನವೂ ಶೂಟಿಂಗ್ ನಲ್ಲಿ ಸಿಗುತ್ತಿದ್ದರಿಂದ ಸ್ನೇಹವಾಗಿ, ಆನಂತರ ಪ್ರೀತಿ ಬೆಳೆದಿದೆ. ಐದು ವರ್ಷಗಳ ಕಾಲ ಇಬ್ಬರೂ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದಾರೆ. ಆನಂತರ ಮದುವೆ ಆಗಿದ್ದಾರೆ. ಈ ವಿಷಯವನ್ನು ಸ್ವತಃ ದಿವ್ಯಾ ಶ್ರೀಧರ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು, ‘ತಮ್ಮಿಬ್ಬರದ್ದು ಬೇರೆ ಬೇರೆ ಸಂಪ್ರದಾಯವಾಗಿದ್ದರೂ, ತಾವು ಅದೃಷ್ಟವಂತ ಜೋಡಿಗಳು’ ಎಂದು ಬರೆದುಕೊಂಡಿದ್ದರು.

    ಇದೀಗ ಇಬ್ಬರ ನಡುವೆ ಮನಸ್ತಾಪ ಬಂದು, ‘ನಿನ್ನೆ ನನ್ನ ಗಂಡ ಹಲ್ಲೆ ಮಾಡಿದ್ದಾನೆ. ಕೆಳಗೆ ಬಿದ್ದು ಹೊಟ್ಟೆಯ ಭಾಗಕ್ಕೆ ನೋವಾಗಿದೆ. ಕೈಕಾಲಿನ್ನೆಲ್ಲಾ ತುಳಿದು ನೋವು ತಡೆಯಲಾಗದೇ ಪೇಚಾಡಿದ್ದೇನೆ. ಆಗ ಲೋ ಬಿಪಿಯಾಗಿ ಅಸ್ವಸ್ಥಳಾಗಿದ್ದೆ. ತುಂಬಾ ಸಮಯವಾದ ಮೇಲೆ ನನಗೆ ಪ್ರಜ್ಞೆ ಬಂತು. ನನ್ನ ಗಂಡ ಮನೆಯಲ್ಲೇ ಇದ್ದ. ಆದರೂ ನನ್ನನ್ನು ಆಸ್ಪತ್ರೆಗೆ ಸೇರಿಸಿಲ್ಲ. ನನಗೆ ಪ್ರಜ್ಞೆ ಬಂದ ಮೇಲೆ ಮನೆಯಿಂದ ಹೊರಗಡೆ ಹೋದ. ಅಲ್ಲದೇ ಹೊಟ್ಟೆ ನೋವಿನಿಂದ ನಾನು ನರಳಿದೆ. ಮರುದಿನ ಬೆಳಗ್ಗೆ ಅತೀವ ರಕ್ತಸ್ರಾವ ವಾಯ್ತು. ನನ್ನ ಗಂಡನಿಗೆ ಕರೆ ಮಾಡಿದೆ. ಅವನು ಬೇರೆ ಅಪಾರ್ಟ್‍ಮೆಂಟ್‍ನಲ್ಲಿ ಇದ್ದಾನೆ ಎಂದು ಹೇಳಿದ್ರು’ ಎನ್ನುತ್ತಾರೆ ದಿವ್ಯಾ ಶ್ರೀಧರ್.

    ಈಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಗೆ ತುಂಬಾ ಪೆಟ್ಟಾಗಿರೋದ್ರಿಂದ ಯಾವಾಗ ಬೇಕಿದ್ದರು ಗರ್ಭಪಾತವಾಗಬಹುದು ಎಂದು ವೈದ್ಯರು ಹೇಳಿದ್ದಾರಂತೆ.  ‘ಅವನಿಗಾಗಿ ನಾನು ಎಲ್ಲವನ್ನೂ ಮಾಡಿದ್ದೇನೆ. ಆದ್ರೆ ಅವನು ನನ್ನ ನಂಬರ್ ಬ್ಲಾಕ್ ಮಾಡಿದ್ದಾನೆ. ನನ್ನ ಮೆಸೇಜ್‍ಗೆ ರಿಪ್ಲೈ ಕೂಡ ಮಾಡ್ತಿಲ್ಲ. ನನಗೆ ನನ್ನ ಗಂಡ ಬೇಕು. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ದಿವ್ಯಾ ಶ್ರೀಧರ್.

    ದಿವ್ಯಾ ಶ್ರೀಧರ್ ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಹಲವು ಸಿನಿಮಾಗಳಲ್ಲೂ ನಟಿಸಿದ್ದು, ಆಕಾಶ ದೀಪ ಧಾರಾವಾಹಿಯ ಮೂಲಕ ಸಖತ್ ಫೇಮಸ್ ಆಗಿದ್ದವರು. ಇದೀಗ ತಮಿಳಿನ ಧಾರಾವಾಹಿವೊಂದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ದಿವ್ಯಾ ಶ್ರೀಧರನ್ ಕಿರುಕುಳಕ್ಕೆ (Harassment) ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡ ಖ್ಯಾತ ಕಿರುತೆರೆ ನಟಿಗೆ ಗಂಡನಿಂದ ಕಿರುಕುಳ: ಲವ್ ಜಿಹಾದ್ ಆರೋಪ

    ಕನ್ನಡ ಖ್ಯಾತ ಕಿರುತೆರೆ ನಟಿಗೆ ಗಂಡನಿಂದ ಕಿರುಕುಳ: ಲವ್ ಜಿಹಾದ್ ಆರೋಪ

    ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆಯ ಖ್ಯಾತ ನಟಿ ದಿವ್ಯಾ ಶ್ರೀಧರ್ (Divya Sridhar) ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಗಂಡನಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ ಅರ್ನವ್ (Arnav) ಅಲಿಯಾಸ್ ಅಮ್ಜದ್ ಖಾನ್ (Amjad Khan) ವಿರುದ್ಧ ವಿಡಿಯೋ ಮಾಡಿದ್ದಾರೆ.

    ಅವರು ಮಾತನಾಡಿರುವ ವಿಡಿಯೋದಲ್ಲಿ ‘ನಾನು ಮತ್ತು ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ಇತ್ತೀಚೆಗೆ ಮದುವೆಯಾಗಿದ್ದೇವೆ. 2017ರಿಂದ ನಾನು ಮತ್ತು ಅರ್ನವ್ ಇಬ್ಬರೂ ಲಿವಿಂಗ್ ಟು ಗೆದರ್ ಇದ್ದೆವು. 5 ವರ್ಷದಿಂದ ನಾವು ಒಟ್ಟಿಗೆ ಇದ್ದೇವೆ. ಮನೆ ತೆಗೆದುಕೊಳ್ಳಲು ನಾನೇ ಹಣಕಾಸಿನ ನೆರವು ನೀಡಿದ್ದೇನೆ. ಮದುವೆಗಿಂತ ಮೊದಲು ಲಾಕ್‍ಡೌನ್ ಟೈಂನಲ್ಲಿ ಅವನಿಗೆ ಏನು ಕೆಲಸ ಇರಲಿಲ್ಲ. ಕೆಲಸವಿಲ್ಲದೇ ಮನೆಯಲ್ಲಿ ಇದ್ದ, ಆಗ 30 ಲಕ್ಷ ಲೋನ್ ಕೊಡಿಸಿ, 30 ಸಾವಿರದಂತೆ ಲೋನ್ ಕಟ್ಟಿದ್ದೇನೆ. ಅವನಿಗೆ ಕೆಲಸವಿಲ್ಲದಿದ್ದರೂ, ನಾನೇ ಸಾಕಿದ್ದೇನೆ. ಮಗುವಿನ ತರಹ ಅವನಿಗೆ ಏನೂ ಆಗದಂತೆ ಜೋಪಾನವಾಗಿ ನೋಡಿಕೊಂಡಿದ್ದೇನೆ. ಆದರೆ, ಅವನಿಂದಲೇ ಈಗ ಕಿರುಕುಳ (Harassment) ಉಂಟಾಗಿದೆ’ ಎಂದು ಹೇಳಿಕೊಂಡಿದ್ದಾರೆ.

    ಮುಂದುವರೆದು ಮಾತನಾಡಿರುವ ನಟಿ, ‘ನಿನ್ನೆ ನನ್ನ ಗಂಡ ಹಲ್ಲೆ ಮಾಡಿದ್ದಾನೆ. ಕೆಳಗೆ ಬಿದ್ದು ಹೊಟ್ಟೆಯ ಭಾಗಕ್ಕೆ ನೋವಾಗಿದೆ. ಕೈಕಾಲಿನ್ನೆಲ್ಲಾ ತುಳಿದು ನೋವು ತಡೆಯಲಾಗದೇ ಪೇಚಾಡಿದ್ದೇನೆ. ಆಗ ಲೋ ಬಿಪಿಯಾಗಿ ಅಸ್ವಸ್ಥಳಾಗಿದ್ದೆ. ತುಂಬಾ ಸಮಯವಾದ ಮೇಲೆ ನನಗೆ ಪ್ರಜ್ಞೆ ಬಂತು. ನನ್ನ ಗಂಡ ಮನೆಯಲ್ಲೇ ಇದ್ದ. ಆದರೂ ನನ್ನನ್ನು ಆಸ್ಪತ್ರೆಗೆ ಸೇರಿಸಿಲ್ಲ. ನನಗೆ ಪ್ರಜ್ಞೆ ಬಂದ ಮೇಲೆ ಮನೆಯಿಂದ ಹೊರಗಡೆ ಹೋದ. ಅಲ್ಲದೇ ಹೊಟ್ಟೆ ನೋವಿನಿಂದ ನಾನು ನರಳಿದೆ. ಮರುದಿನ ಬೆಳಗ್ಗೆ ಅತೀವ ರಕ್ತಸ್ರಾವ ವಾಯ್ತು. ನನ್ನ ಗಂಡನಿಗೆ ಕರೆ ಮಾಡಿದೆ. ಅವನು ಬೇರೆ ಅಪಾರ್ಟ್‍ಮೆಂಟ್‍ನಲ್ಲಿ ಇದ್ದಾನೆ ಎಂದು ಹೇಳಿದ್ರು’ ಎನ್ನುತ್ತಾರೆ ದಿವ್ಯಾ ಶ್ರೀಧರ್.

    ಈಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಗೆ ತುಂಬಾ ಪೆಟ್ಟಾಗಿರೋದ್ರಿಂದ ಯಾವಾಗ ಬೇಕಿದ್ದರು ಗರ್ಭಪಾತವಾಗಬಹುದು ಎಂದು ವೈದ್ಯರು ಹೇಳಿದ್ದಾರಂತೆ.  ‘ಅವನಿಗಾಗಿ ನಾನು ಎಲ್ಲವನ್ನೂ ಮಾಡಿದ್ದೇನೆ. ಆದ್ರೆ ಅವನು ನನ್ನ ನಂಬರ್ ಬ್ಲಾಕ್ ಮಾಡಿದ್ದಾನೆ. ನನ್ನ ಮೆಸೇಜ್‍ಗೆ ರಿಪ್ಲೈ ಕೂಡ ಮಾಡ್ತಿಲ್ಲ. ನನಗೆ ನನ್ನ ಗಂಡ ಬೇಕು. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ದಿವ್ಯಾ ಶ್ರೀಧರ್.

    ದಿವ್ಯಾ ಶ್ರೀಧರ್ ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಹಲವು ಸಿನಿಮಾಗಳಲ್ಲೂ ನಟಿಸಿದ್ದು, ಆಕಾಶ ದೀಪ ಧಾರಾವಾಹಿಯ ಮೂಲಕ ಸಖತ್ ಫೇಮಸ್ ಆಗಿದ್ದವರು. ಇದೀಗ ತಮಿಳಿನ ಧಾರಾವಾಹಿವೊಂದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ದಿವ್ಯಾ ಶ್ರೀಧರನ್ ಕಿರುಕುಳಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]