Tag: Arogya Karnataka

  • ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ

    ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ

    ಬೆಂಗಳೂರು: ಆಯುಷ್ಮಾನ್ ಭಾರತ್ (Ayushman Bharat) ಹಾಗೂ ಆರೋಗ್ಯ ಕರ್ನಾಟಕ (Arogya Karnataka) ವಿಮೆ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಅನುದಾನ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

    ಡೆಹ್ರಾಡೂನ್ ಸ್ವಾಸ್ಥ್ಯ ಚಿಂತನ ಶಿಬಿರದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆ ಇದೆ. ಯೋಜನೆಗೆ ಕೇಂದ್ರದ ನೆರವಿನ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಂಡೋವಿಯಾ ಅವರ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    ABPMJAY ಸ್ಕೀಮ್‍ನಲ್ಲಿ ಕರ್ನಾಟಕವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಅದರೂ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನೀರಿಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ 64% ರಷ್ಟು ಹಣಕಾಸಿನ ನೆರವು ನೀಡುತ್ತಿದೆ. ಕೇಂದ್ರ ಸರ್ಕಾರ 36% ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. 64% ರಷ್ಟು ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದಿದ್ದಾರೆ.

    ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಹಣಕಾಸಿನ ನೆರವು ನೀಡಿದರೆ ಹೆಚ್ಚಿನ ಜನರಿಗೆ ಯೋಜನೆಯನ್ನ ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 60% ರಾಜ್ಯ ಸರ್ಕಾರ 40% ದರಗಳಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಸಾರ್ವಜನಿಕರ ಆರೋಗ್ಯ ಭದ್ರತೆ ಉದ್ದೇಶದಿಂದ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಕೇಂದ್ರ ನಿರ್ಣಯ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    ಸ್ವಾಸ್ಥ್ಯ ಚಿಂತನ ಶಿಬಿರದ ಎರಡನೇ ದಿನವಾದ ಶನಿವಾರ ಆಯುಷ್ಮಾನ್ ಭವ ವಿಚಾರ ಸಂಕಿರಣದಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರೋಗ್ಯ ಕರ್ನಾಟಕ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿವಮೊಗ್ಗ ನಂ.1: ಬಿ.ವೈ ರಾಘವೇಂದ್ರ

    ಆರೋಗ್ಯ ಕರ್ನಾಟಕ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿವಮೊಗ್ಗ ನಂ.1: ಬಿ.ವೈ ರಾಘವೇಂದ್ರ

    ಶಿವಮೊಗ್ಗ: ಪ್ರೇರಣಾ ಸಂಸ್ಥೆಯು ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ, ಫೆಬ್ರವರಿ 27ರಿಂದ 29ರವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ 83,273 ಕಾರ್ಡ್ ವಿತರಿಸಲಾಗಿದೆ. ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಫೆಬ್ರವರಿ ಮಾಹೆಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಈ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನ 42 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 14,190, ಭದ್ರಾವತಿ ತಾಲೂಕಿನ 41 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 11,678, ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 8,781, ಸಾಗರ ತಾಲೂಕಿನ 34 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 8,079, ಸೊರಬ ತಾಲೂಕಿನ 41 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 11,139, ಶಿಕಾರಿಪುರ ತಾಲೂಕಿನ 44 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 13,978, ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 7,867 ಹಾಗೂ ಬೈಂದೂರು ಪ್ರದೇಶದ ವ್ಯಾಪ್ತಿಯಲ್ಲಿ 1,867 ಮತ್ತು ನಗರ ಮತ್ತು ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿ.ಹೆಚ್.ಸಿ ಮೂಲಕ 6,048 ಜನರಿಗೆ ಆರೋಗ್ಯ ಕಾರ್ಡ್‍ಗಳನ್ನು ವಿತರಿಸಲಾಗಿದೆ ಎಂದು ಸಂಸದರು ಮಾಹಿತಿ ನೀಡಿದ್ದಾರೆ.

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿಎಸ್‍ವೈ ಅವರ ಆಶಯದ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರೇರಣಾ ಟ್ರಸ್ಟ್ ಶ್ರಮಿಸಿತ್ತು. ಬೈಂದೂರು ಮತಕ್ಷೇತ್ರ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಡ್‍ಗಳ ವಿತರಣೆಗಾಗಿ ವಿಶೇಷ ಆಂದೋಲನವನ್ನು ಆಯೋಜಿಸಿತ್ತು. ಇದರಿಂದಾಗಿ 75 ಸಾವಿರಕ್ಕೂ ಅಧಿಕ ಮಂದಿ ಆರೋಗ್ಯ ಕಾರ್ಡ್‍ನ್ನು ಪಡೆದುಕೊಂಡಿದ್ದರು. ಈ ಮೂಲಕ ಈವರೆಗೆ ಒಟ್ಟು 1,58,273 ಮಂದಿ ಕಾರ್ಡುಗಳನ್ನು ಪಡೆದುಕೊಂಡಂತಾಗಿದೆ ಎಂದಿದ್ದಾರೆ.

    ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 313 ಬಾಪೂಜಿ ಸೇವಾ ಕೇಂದ್ರಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿನ 19 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಕಾರ ಪ್ರಮುಖವಾಗಿದೆ. ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಸಹಕರಿಸಿದ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂಧಿ ವರ್ಗದವರು, ಜಿಲ್ಲಾ ಪಂಚಾಯ್ತಿ ಅಧೀನಕ್ಕೊಳಪಟ್ಟ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ವರ್ಗ, ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಅಭಿನಂದನಾರ್ಹರು ಎಂದು ರಾಘವೇಂದ್ರ ಅವರು ತಿಳಿಸಿದ್ದಾರೆ.

  • ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ವಿಲೀನ!

    ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ವಿಲೀನ!

    ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳುವತ್ತ ಹೆಜ್ಜೆ ಹಾಕಿದ್ದು, ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡಲು ನಿರ್ಧರಿಸಲಾಗಿದೆ.

    ನಗರದ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಆರೋಗ್ಯ ಇಲಾಖೆ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ಸಿಎಂರೊಂದಿಗೆ ನಡೆದ ಸಭೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡುವ ನಿರ್ಧಾರ ಮಾಡಲಾಗಿದ್ದು, ಇದಕ್ಕೂ ಮುನ್ನ ವೈದ್ಯರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.

    ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎರಡು ಮಹತ್ವದ ಯೋಜನೆಗಳ ವಿಲೀನದಿಂದ ಉಂಟಾಗಬಹುದಾದ ಸಾಧಕ ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿಲು ಸೂಚನೆ ಸಿಎಂ ಸೂಚನೆ ನೀಡಿದ್ದಾರೆ. ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಹುತೇಕ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ರಾಜ್ಯ ಸರ್ಕಾರ ಯೋಜನೆ ವಿಲೀನಗೊಳ್ಳುವುದು ಖಚಿತವಾಗಿದೆ. ಇಂದು ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=H6_XYSZLZu8