Tag: Arpita Mukherjee

  • ದಯವಿಟ್ಟು ನನ್ನನ್ನು ಬದುಕಲು ಬಿಡಿ: ವಿಚಾರಣೆ ವೇಳೆ ಕಣ್ಣೀರು ಹಾಕಿದ ಪಾರ್ಥ ಚಟರ್ಜಿ

    ದಯವಿಟ್ಟು ನನ್ನನ್ನು ಬದುಕಲು ಬಿಡಿ: ವಿಚಾರಣೆ ವೇಳೆ ಕಣ್ಣೀರು ಹಾಕಿದ ಪಾರ್ಥ ಚಟರ್ಜಿ

    ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದ(Teacher Recruitment Scam) ವಿಚಾರಣೆ ಸಂದರ್ಭ ಪಶ್ಚಿಮ ಬಂಗಾಳದ(West Bengal) ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ(Partha Chatterjee) ಅವರು, ನನಗೆ ಜಾಮೀನು ಕೊಡಿ, ನನ್ನನ್ನು ಬದುಕಲು ಬಿಡಿ ಎಂದು ನ್ಯಾಯಾಲಯದ(Court) ಮುಂದೆ ಕಣ್ಣಿರು ಹಾಕಿದ್ದಾರೆ.

    ಬುಧವಾರ ಪಾರ್ಥ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ(Arpita Mukherjee) ನ್ಯಾಯಾಲಯಕ್ಕೆ ಹಾಜರಾಗಿದ್ದರೆ, ಪಾರ್ಥ ಚಟರ್ಜಿ 14 ದಿನಗಳ ಬಂಧನದ ಬಳಿಕ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    ಪಾರ್ಥ ಅವರ ಪರ ವಕೀಲರು ಜಾಮೀನು ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದ್ದ ಸಂದರ್ಭ ಚಟರ್ಜಿ ತಮ್ಮ ಅಳಲು ತೋಡಿಕೊಂಡು ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.

    ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಆರೋಪದ ಮೇಲೆ ಪಾರ್ಥ ಚಟರ್ಜಿ ಅವರನ್ನು ಜುಲೈ 23 ರಂದು ಬಂಧಿಸಲಾಗಿತ್ತು. 3 ಸುತ್ತಿನ ಇಡಿ ವಿಚಾರಣೆಯ ಬಳಿಕ ಪ್ರಸ್ತುತ ಅವರನ್ನು ಪ್ರೆಸಿಡೆನ್ಸಿ ಜೈಲಿನಲ್ಲಿ ಇರಿಸಲಾಗಿದೆ. ವರ್ಚುವಲ್ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಧೀಶ ಬಿದ್ಯುತ್ ಕುಮಾರ್ ರಾಯ್, ಪಾರ್ಥ ಅವರು ಬಯಸಿದರೆ ಏನು ಬೇಕಾದರೂ ಹೇಳಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಂಗೂಲಿ, ಜಯ್‌ ಶಾಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌ – ಐಸಿಸಿಯ ಬಾಸ್‌ ಆಗ್ತಾರಾ ದಾದಾ?

    ಪಾರ್ಥ ವಕೀಲರು, ದಿನಕ್ಕೆ 3 ಬಾರಿ ಔಷಧಿ ತೆಗೆದುಕೊಳ್ಳಬೇಕು. ಅವರಿಗೆ ನಿಯಮಿತ ಚಿಕಿತ್ಸೆಯ ಅಗತ್ಯವಿದೆ. ತನಿಖಾಧಿಕಾರಿಗಳು ಅವರ ಮನೆಯಲ್ಲಿ 30 ಗಂಟೆಗಳ ಕಾಲ ಹುಡುಕಾಡಿದರೂ ಏನೂ ಪತ್ತೆಯಾಗಿರಲಿಲ್ಲ. ಆದರೂ ಅವರಿಗೆ ಜಾಮೀನು ಸಿಕ್ಕಿಲ್ಲ ಯಾಕೆ ಎಂದು ಪ್ರಶ್ನಿಸಿದರು.

    ಮೂಲಗಳ ಪ್ರಕಾರ ಹಲವು ಅಕ್ರಮ ವಹಿವಾಟುಗಳು ಪತ್ತೆಯಾಗಿವೆ. ಹಲವಾರು ಆಸ್ತಿಗಳು ಮತ್ತು ದಾಖಲೆಗಳ ಸ್ಥಳಗಳು ಸಹ ಪತ್ತೆಯಾಗಿವೆ. ಇವರ ಮೂಲಕ ಕಪ್ಪುಹಣವನ್ನು ಬಿಳಿ ಮಾಡಿಕೊಳ್ಳಲಾಗಿದೆ ಎಂದು ಇಡಿ ನ್ಯಾಯಾಲಯದಲ್ಲಿ ವಾದಿಸಿದೆ. ಇದುವರೆಗೆ ಪತ್ತೆಯಾಗಿರುವ ನೂರಾರು ಬ್ಯಾಂಕ್ ಖಾತೆಗಳನ್ನು ಉಲ್ಲೇಖಿಸಿದ ಇಡಿ ವಕೀಲರು, ಗಂಭೀರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ಪಾರ್ಥ ಮತ್ತು ಅರ್ಪಿತಾರನ್ನು ಬಿಡುಗಡೆ ಮಾಡಬಾರದು. ಬಿಡುಗಡೆ ಮಾಡಿದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಯಿದೆ ಎಂದು ವಾದಿಸಿದರು. ಇದನ್ನೂ ಓದಿ: 6 ವಾರದೊಳಗೆ ಸರ್ಕಾರಿ ಬಂಗಲೆಯನ್ನು ತೊರೆಯಿರಿ – ಸುಬ್ರಮಣಿಯನ್ ಸ್ವಾಮಿಗೆ ಕೋರ್ಟ್ ಗಡುವು

    Live Tv
    [brid partner=56869869 player=32851 video=960834 autoplay=true]

  • 3 ತಿಂಗಳಲ್ಲಿ 100 ಕೋಟಿ ರೂ. ಸೀಜ್ ಮಾಡಿದ ED – ಈ ಹಣ ಏನ್ ಮಾಡ್ತಾರೆ ಗೊತ್ತಾ?

    3 ತಿಂಗಳಲ್ಲಿ 100 ಕೋಟಿ ರೂ. ಸೀಜ್ ಮಾಡಿದ ED – ಈ ಹಣ ಏನ್ ಮಾಡ್ತಾರೆ ಗೊತ್ತಾ?

    ಮುಂಬೈ: ಕಳೆದ ಮೂರು ತಿಂಗಳ ಅವಧಿಯಲ್ಲಿ ದೇಶಾದ್ಯಂತ ವಿವಿಧೆಡೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ED) (Enforcement Directorate) ಒಟ್ಟು 100 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಸೀಜ್ ಮಾಡಿದೆ.

    ಕಳೆದ ಕೆಲ ದಿನಗಳ ಹಿಂದೆ ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ವಂಚನೆ ಮಾಡುತ್ತಿದ್ದ ಕೋಲ್ಕತ್ತಾದ ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಬರೋಬ್ಬರಿ 17 ಕೋಟಿ ರೂ. ವಶಪಡಿಕೊಂಡಿತ್ತು. ಈ ಮೊದಲು ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee)  ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಮನೆ ಮೇಲೆ ದಾಳಿ ನಡೆಸಿ 50 ಕೋಟಿ ರೂ.ಗೂ ಅಧಿಕ ಮೊತ್ತ ವಶಪಡಿಸಿಕೊಂಡಿತ್ತು. ಇದನ್ನೂ ಓದಿ: ಬ್ಯಾಂಕ್ ಖಾತೆಯಿಂದ ಹೆಂಡತಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾದ ಬ್ಯಾಂಕ್ ಸಿಬ್ಬಂದಿ

    ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇ.ಡಿ ದಾಳಿ ನಡೆಸಿದ ವೇಳೆ ಹಣ ಎಣಿಕೆಗಾಗಿ 24 ಗಂಟೆಗಳನ್ನು ಇ.ಡಿ ಅಧಿಕಾರಿಗಳು ತೆಗೆದುಕೊಂಡಿದ್ದರು. ಅಷ್ಟರ ಮಟ್ಟಿಗೆ ನೋಟಿನ ಕಂತೆ ಸಿಕ್ಕಿತ್ತು. ಇದನ್ನೂ ಓದಿ: ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

    ಇ.ಡಿ ವಶಪಡಿಕೊಂಡ ಹಣ ಏನ್‌ ಮಾಡುತ್ತೆ:
    ಇ.ಡಿ ನಿಯಮದ ಪ್ರಕಾರ ವಶಪಡಿಸಿಕೊಂಡ ಹಣವನ್ನು ತಮ್ಮ ಬಳಿ ಇರಿಸಿಕೊಳ್ಳುವಂತಿಲ್ಲ. ಇ.ಡಿಯು ನಗದನ್ನು ವಶಪಡಿಸಿಕೊಂಡ ಬಳಿಕ ಆರೋಪಿಗೆ ನಗದು ಮೂಲವನ್ನು ವಿವರಿಸಲು ಅವಕಾಶವನ್ನು ನೀಡಲಾಗುತ್ತದೆ. ಇದಾದ ಬಳಿಕ ತನಿಖಾಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದೆ ಇದ್ದರೆ ನಗದನ್ನು ಅಕ್ರಮವಾಗಿ ಗಳಿಸಿದ ಹಣ ಎಂದು ಪರಿಗಣಿಸಲಾಗುತ್ತದೆ. ಇದನ್ನೂ ಓದಿ: ಮದರಸಾದಲ್ಲಿ ಮರ್ಡರ್ – ಬಾಲಕನನ್ನು ಕೊಂದ ಮತ್ತೋರ್ವ ವಿದ್ಯಾರ್ಥಿ ಬಂಧನ

    ಒಮ್ಮೆ ಹಣವನ್ನು ಸೀಲ್ ಮಾಡಿದರೆ ಮತ್ತು ಜಪ್ತಿ ಮೆಮೋ ಸಿದ್ಧಪಡಿಸಿದರೆ, ವಶಪಡಿಸಿಕೊಂಡ ಹಣದ ಪೆಟ್ಟಿಗೆಯನ್ನು ಆ ರಾಜ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇ.ಡಿಯ ವೈಯಕ್ತಿಕ ಠೇವಣಿ (ಪಿಡಿ) ಖಾತೆಯಲ್ಲಿ ಜಮೆ ಮಾಡಲಾಗುತ್ತದೆ. ಅಂದರೆ ನಗದನ್ನು ಕೇಂದ್ರ ಸರ್ಕಾರದ ಖಜಾನೆಯಲ್ಲಿ ಜಮೆ ಮಾಡಲಾಗುತ್ತದೆ.

    ವಶಪಡಿಸಿಕೊಂಡ ಹಣವನ್ನು ಜಾರಿ ನಿರ್ದೇಶನಾಲಯ ಬಳಸುವುದಿಲ್ಲ. ಇದಲ್ಲದೇ ಬ್ಯಾಂಕ್ ಅಥವಾ ಸರ್ಕಾರವು ಬಳಸುವಂತಿಲ್ಲ. ಹಣದ ಮೌಲ್ಯಗಳ ಸೂಕ್ತ ಲೆಕ್ಕಾಚಾರವನ್ನು ದೃಢಪಡಿಸಿದ ನಂತರ, ಪ್ರಕರಣ ವಿಚಾರಣೆ ಮುಗಿಯುವವರೆಗೆ ಹಣವನ್ನು ಬ್ಯಾಂಕ್‍ನಲ್ಲಿ ಇರಿಸಲಾಗುತ್ತದೆ. ಆರೋಪಿಗೆ ಶಿಕ್ಷೆಯಾದರೆ, ನಗದು ಮೊತ್ತವು ಕೇಂದ್ರದ ಆಸ್ತಿಯಾಗುತ್ತದೆ. ಆರೋಪಿಯನ್ನು ನ್ಯಾಯಾಲಯವು ಖುಲಾಸೆಗೊಳಿಸಿದರೆ, ನಗದನ್ನು ಹಿಂತಿರುಗಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಪಾರ್ಥ ಚಟರ್ಜಿ, ಆಪ್ತೆ ಅರ್ಪಿತಾ ಮುಖರ್ಜಿಗೆ 14 ದಿನ ನ್ಯಾಯಾಂಗ ಬಂಧನ

    ಪಾರ್ಥ ಚಟರ್ಜಿ, ಆಪ್ತೆ ಅರ್ಪಿತಾ ಮುಖರ್ಜಿಗೆ 14 ದಿನ ನ್ಯಾಯಾಂಗ ಬಂಧನ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಆಪ್ತೆ ಅರ್ಪಿತಾ ಮುಖರ್ಜಿಗೆ ವಿಶೇಷ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಇಡಿ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಯನ್ನು ಬಂಧಿಸಿ ತನಿಖೆ ನಡೆಸಿತ್ತು. ಆ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿಬೋನ್ ಕುಮಾರ್ ಸಾಧು ನೇತೃತ್ವದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ನ್ಯಾಯಾಧೀಶರು ಪ್ರಕರಣದ ಎಲ್ಲಾ ಸಾಕ್ಷ್ಯಾಧಾರಗಳನ್ನು ಆಲಿಸಿದ ನಂತರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಕಾಯ್ದಿರಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ದಾಳಿ – 50 ಕೋಟಿ ರೂ., 5 ಕೆ.ಜಿ ಚಿನ್ನ ಪತ್ತೆ

    ಸರ್ಕಾರಿ ಶಿಕ್ಷಕರ ನೇಮಕಾತಿ ಹಗರಣ ಮತ್ತು ಅಕ್ರಮ ಹಣ ಆರೋಪದಡಿ ಇಡಿ ಜುಲೈ 23 ರಂದು ಪಾರ್ಥ ಚಟರ್ಜಿಯನ್ನು ಬಂಧಿಸಿತ್ತು. ಬಳಿಕ ಪಾರ್ಥ ಚಟರ್ಜಿ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮನೆಯಲ್ಲಿ ತನಿಖೆ ನಡೆಸಿತ್ತು. ಚಟರ್ಜಿ ಆಪ್ತೆ ಅರ್ಪಿತಾ ಮನೆಯಲ್ಲೂ ಇಡಿ ತನಿಖೆ ನಡೆಸಿ, ಸುಮಾರು 21 ಕೋಟಿ ರೂ. ಮೊತ್ತದ ಹಣವನ್ನು ಬಯಲಿಗೆ ತಂದಿತ್ತು. ಆ ಬಳಿಕ ಎರಡನೇ ಬಾರಿ ಇಡಿ ದಾಳಿ ನಡೆಸಿ ಬೆಲ್‍ಘಾರಿಯಾ ಟೌನ್ ಕ್ಲಬ್‍ನಲ್ಲಿರುವ ಫ್ಲಾಟ್‍ನಲ್ಲಿ 50 ಕೋಟಿ ರೂ.ಗೂ ಹೆಚ್ಚು ಮತ್ತು 5 ಕೆ.ಜಿಗೂ ಅಧಿಕ ಚಿನ್ನವನ್ನು ವಶಪಡಿಕೊಂಡಿತ್ತು. ನಂತರ ಅರ್ಪಿತಾ ಚಟರ್ಜಿಯನ್ನು ಇಡಿ ಬಂಧಿಸಿತ್ತು. ಇದನ್ನೂ ಓದಿ: ಅಧಿವೇಶನ ಇಲ್ಲದಿದ್ದಾಗಲೂ ರಾಹುಲ್, ಸೋನಿಯಾ ಇಡಿ ತನಿಖೆಗೆ ಸಹಕರಿಸಿಲ್ಲ: ಖರ್ಗೆಗೆ ಪ್ರಹ್ಲಾದ್ ಜೋಶಿ ತಿರುಗೇಟು

    Live Tv
    [brid partner=56869869 player=32851 video=960834 autoplay=true]

  • ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

    ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

    ಕೋಲ್ಕತ್ತಾ: ಇಡಿ ದಾಳಿ ನಡೆಸಿದಾಗ ನನ್ನ ಮನೆಯಲ್ಲಿ ಸಿಕ್ಕಿದ್ದ ಹಣ ನನಗೆ ಸೇರಿದ್ದಲ್ಲ, ಬದಲಿಗೆ ನನ್ನ ಅನುಪಸ್ಥಿತಿಯಲ್ಲಿ ಆ ಹಣವನ್ನು ಇಲ್ಲಿ ಇರಿಸಲಾಗಿದೆ ಎಂದು ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ತಿಳಿಸಿದರು.

    ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿರುವ ಆಕೆಯ ಮನೆಗಳಿಂದ ಜಾರಿ ನಿರ್ದೇಶನಾಲಯ (ಇಡಿ) ಈ ಹಿಂದೆ 50 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 3 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, IX-XII ತರಗತಿಗಳ ಸಹಾಯಕ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಚಟರ್ಜಿ ಭಾಗಿಯಾಗಿದ್ದಾರೆ.

    ಜಾರಿ ನಿರ್ದೇಶನಾಲಯ (ಇಡಿ) ಜುಲೈ 22 ರಂದು ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ರೂ. ತನಿಖಾ ಸಂಸ್ಥೆಯು 56 ಲಕ್ಷ ರೂ. ವಿದೇಶಿ ಕರೆನ್ಸಿ ಮತ್ತು 76 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದೆ. ಇದಾದ ಕೆಲವೇ ದಿನಗಳಲ್ಲಿ ಅರ್ಪಿತಾ ಮುಖರ್ಜಿ ಅವರ ಎರಡನೇ ಅಪಾರ್ಟ್‍ಮೆಂಟ್‍ನಿಂದ ಇಡಿ 28.90 ಕೋಟಿ ರೂ. ನಗದು, 5 ಕೆ.ಜಿಗೂ ಹೆಚ್ಚು ಚಿನ್ನ ಮತ್ತು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ವಸೂಲಿಯಾದ ಮೊತ್ತವು ಶಿಕ್ಷಕರ ನೇಮಕಾತಿ ಹಗರಣದಿಂದ ಅಪರಾಧದ ಆದಾಯ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ

    ಈ ಹಿಂದೆ ಇಡಿ ತನಿಖೆಗೆ ಒಳಪಟ್ಟ ಬಳಿಕ ಅರ್ಪಿತಾ ಮುಖರ್ಜಿ ಈ ಹಣ ಚಟರ್ಜಿ ಅವರಿಗೆ ಸೇರಿದ್ದಾಗಿ ತಿಳಿಸಿದ್ದು, ಈ ಹಣವನ್ನು ತನಗೆ ಸಂಬಂಧಿಸಿದ ಕಂಪನಿಯಲ್ಲಿ ತುಂಬಿಸಬೇಕಾಗಿತ್ತು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದರು. ಅರ್ಪಿತಾ ವಿಚಾರಣೆಯ ಸಂದರ್ಭ ಇಡಿ ರೇಡ್‍ಗೂ ಮುನ್ನ 1-2 ದಿನಗಳಲ್ಲಿ ತನ್ನ ಮನೆಯಲ್ಲಿದ್ದ ಹಣದ ರಾಶಿಯನ್ನು ಸ್ಥಳಾಂತರಿಸುವ ಯೋಜನೆ ಮಾಡಿದ್ದಾಗಿ ಬಹಿರಂಗಪಡಿಸಿದ್ದರು. ಇದನ್ನೂ ಓದಿ: HDK ಬೆಂಗಾವಲು ವಾಹನ ಅಪಘಾತ – ಮೂವರಿಗೆ ಗಂಭೀರ ಗಾಯ

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆ ಎದುರು ಹೈಡ್ರಾಮಾ – ಗಳಗಳನೆ ಅತ್ತು ಕಾರಿನಿಂದ ಇಳಿಯಲು ನಿರಾಕರಿಸಿದ ಅರ್ಪಿತಾ

    ಆಸ್ಪತ್ರೆ ಎದುರು ಹೈಡ್ರಾಮಾ – ಗಳಗಳನೆ ಅತ್ತು ಕಾರಿನಿಂದ ಇಳಿಯಲು ನಿರಾಕರಿಸಿದ ಅರ್ಪಿತಾ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕಿ ಅರ್ಪಿತಾ ಮುಖರ್ಜಿಯವರನ್ನು ಇಂದು ನ್ಯಾಯಾಲಯದ ಆದೇಶದಂತೆ ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅರ್ಪಿತಾ ಆಸ್ಪತ್ರೆ ಆವರಣದಲ್ಲಿ ಗಳಗಳನೆ ಅತ್ತು ರಾದ್ಧಾಂತ ನಡೆಸಿದ್ದಾರೆ. ಕಾರಿನಿಂದ ಇಳಿಯದೇ ಆಸ್ಪತ್ರೆಗೆ ಹೋಗಲು ನಿರಾಕರಿಸಿದ ಅರ್ಪಿತಾ ಅವರನ್ನು ಬಳಿಕ ಬಲವಂತವಾಗಿ ಕರೆದೊಯ್ಯಲಾಗಿದೆ.

    ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇಡಿ) ಬಂಧನಕ್ಕೊಳಗಾಗಿದ್ದಾರೆ. ಅವರನ್ನು ನ್ಯಾಯಾಲಯದ ಆದೇಶದಂತೆ ಪ್ರತಿ 42 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕಾಗುತ್ತದೆ.

    ಶುಕ್ರವಾರ ಇಡಿ ಅಧಿಕಾರಿಗಳು ಜೋಕಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಅರ್ಪಿತಾ ಮುಖರ್ಜಿ ಅವರನ್ನು ಕಾರಿನಲ್ಲಿ ಕರೆತಂದಿದ್ದರು. ಆದರೆ ಮೊದಲಿಗೆ, ಅರ್ಪಿತಾ ಕಾರಿನಿಂದ ಇಳಿಯಲು ನಿರಾಕರಿಸಿದರು. ಅತ್ತುಕೊಂಡೇ ಅಧಿಕಾರಿಗಳೊಂದಿಗೆ ಜಗಳವಾಡಿದರು. ಅವರನ್ನು ಅಧಿಕಾರಿಗಳು ಬಲವಂತವಾಗಿ ಕಾರಿನಿಂದ ಇಳಿಸಲು ಪ್ರಯತ್ನಿಸಿದಾಗ ಅರ್ಪಿತಾ ನೆಲದ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ: ಸಿಎಂ ಇಬ್ರಾಹಿಂ

    ಅಧಿಕಾರಿಗಳು ಅರ್ಪಿತಾ ಅವರನ್ನು ಎಳೆದಾಡಿ, ಆಸ್ಪತ್ರೆಗೆ ನಡೆಯುವಂತೆ ಮನವೊಲಿಸಲು ಪ್ರಯತ್ನಿಸಿದ್ದಾರೆ. ಇದಕ್ಕೆ ಒಪ್ಪದ ಅರ್ಪಿತಾ ಅವರನ್ನು ಕೊನೆಗೆ ವ್ಹೀಲ್‌ಚೇರ್‌ನಲ್ಲಿ ಬಲವಂತದಿಂದ ಕೂರಿಸಿ, ಆಸ್ಪತ್ರೆಯೊಳಗೆ ಕರೆದೊಯ್ಯಲಾಯಿತು.

    2016ರಲ್ಲಿ ಶಿಕ್ಷಣ ಸಚಿವರಾಗಿದ್ದ ಪಾರ್ಥ ಚಟರ್ಜಿ ಶಿಕ್ಷಕರು ಹಾಗೂ ಸಿಬ್ಬಂದಿ ನೇಮಕಾತಿ ವೇಳೆ ಲಂಚ ಪಡೆದಿರುವ ಆರೋಪದ ಮೇಲೆ ಇಡಿ ಇತ್ತೀಚೆಗೆ ಅವರ ಹಾಗೂ ಅರ್ಪಿತಾ ಮುಖರ್ಜಿ ಮನೆಯಲ್ಲಿ ರೇಡ್ ನಡೆಸಿತ್ತು. ಈ ವೇಳೆ ಅರ್ಪಿತಾ ಮನೆಯಲ್ಲಿ 50 ಕೋಟಿ ರೂ. ನಗದು ಪತ್ತೆಯಾಗಿದೆ. ಇದನ್ನೂ ಓದಿ: ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

    ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಚಟರ್ಜಿ ಇದೀಗ ಭ್ರಷ್ಟಾಚಾರದ ಆರೋಪದಿಂದ ತೃಣಮೂಲ ಸರ್ಕಾರಕ್ಕೆ ಮುಜುಗರ ತಂದಿದ್ದಾರೆ. ಈ ಹಿನ್ನೆಲೆ ಚಟರ್ಜಿ ಅವರನ್ನು ಗುರುವಾರ ಸಚಿವ ಸ್ಥನದಿಂದ ವಜಾಗೊಳಿಸಿ, ತೃಣಮೂಲ ಕಾಂಗ್ರೆಸ್‌ನ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

    ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

    ಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಹಗರಣದ ರೂವಾರಿ, ಪಶ್ಚಿಮ ಬಂಗಾಳದ ಸಚಿವರಾಗಿದ್ದ ಪಾರ್ಥ ಚಟರ್ಜಿಯನ್ನು ಬಂಧಿಸಲಾಗಿದೆ. ಸಚಿವ ಸ್ಥಾನದಿಂದಲೂ ವಜಾ ಮಾಡಲಾಗಿದೆ. ಅಲ್ಲದೇ, ಸಚಿವರಿಗೆ ಆಪ್ತೆಯಾಗಿದ್ದ, ನಟಿ ಅರ್ಪಿತಾ ಮುಖರ್ಜಿ ಮನೆಯ ಮೇಲೆ ದಾಳಿ ಮಾಡಿ ಅಪಾರ ಚಿನ್ನಾಭರಣ ಮತ್ತು 21 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆ ಸಮಯದಲ್ಲಿ ನಟಿಯ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ಸೆಕ್ಸ್ ಟಾಯ್ಸ್ ಪತ್ತೆಯಾಗಿವೆಯಂತೆ.

    ಅರ್ಪಿತಾ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದಾಗ ಬರೋಬ್ಬರಿ 21 ಕೋಟಿ ರೂಪಾಯಿ ನಗದು ಸಿಕ್ಕಿದೆ. ಜೊತೆಗೆ ಲೈಂಗಿಕ ಕ್ರಿಯೆಗೆ ಬಳಸುವಂತಹ ಆಟಿಕೆಗಳು ಕೂಡ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಟಿಕೆಗಳು ಮಾತ್ರವಲ್ಲ, ಸಾಕಷ್ಟು ಪ್ರಮಾಣದಲ್ಲಿ ಬೆಳ್ಳಿ ಬಟ್ಟಲುಗಳನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರಂತೆ. ಸಾಮಾನ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಮದುವೆಯ ಸಂದರ್ಭದಲ್ಲಿ ಬೆಳ್ಳಿ ಬಟ್ಟಲು ಕೊಡುವುದು ವಾಡಿಕೆ. ಹಾಗಾಗಿ ಈ ಬಟ್ಟಲು ಅಲ್ಲಿಗೆ ಬಂದಿದ್ದು ಯಾಕೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆಯಂತೆ. ಇದನ್ನೂ ಓದಿ:ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

     

    ಅರ್ಪಿತಾ ಅವರನ್ನು ಕೂಡ ಬಂಧನ ಮಾಡಲಾಗಿದ್ದು, ಸೆಕ್ಸ್ ಟಾಯ್ಸ್ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಸೆಕ್ಸ್ ಟಾಯ್ಸ್ ನಿಷೇಧ. ಹಾಗಾಗಿ ಅವುಗಳನ್ನು ಎಲ್ಲಿಂದ ತರಿಸಲಾಗಿತ್ತು ಮತ್ತು ಯಾಕೆ ಅಷ್ಟೊಂದು ಆಟಿಕೆಗಳನ್ನು ಈ ಮನೆಯಲ್ಲಿ ಇಡಲಾಗಿತ್ತು ಎನ್ನುವ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಪಾರ್ಥ ಚಟರ್ಜಿಯನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ಮಮತಾ ಬ್ಯಾನರ್ಜಿ

    ಪಾರ್ಥ ಚಟರ್ಜಿಯನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ಇತರ ಸಿಬ್ಬಂದಿ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಿದ್ದ ಪಾರ್ಥ ಚಟರ್ಜಿ ಅವರನ್ನು ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ.

    ಪಾರ್ಥ ಚಟರ್ಜಿಯನ್ನು ಪಕ್ಷ ಮತ್ತು ಸಚಿವ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಟಿಎಂಸಿಯಲ್ಲೇ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಕಾಮರ್ಸ್ ಮತ್ತು ಇಂಡಸ್ಟ್ರಿ, ಸಂಸದೀಯ ವ್ಯವಹಾರ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್, ಪಬ್ಲಿಕ್ ಎಂಟರ್ ಪ್ರೈಸಸ್ ಆಂಡ್ ಇಂಡಸ್ಟ್ರಿಯಲ್ ರೀಕನ್ ಸ್ಟ್ರಕ್ಷನ್ ಖಾತೆಗಳನ್ನು ಚಟರ್ಜಿ ಹೊಂದಿದ್ದರು.

    ಅಷ್ಟೇ ಅಲ್ಲದೇ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಒಡೆತನದ ಎರಡನೇ ಫ್ಲ್ಯಾಟ್‍ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗಳಲ್ಲಿ ಅಧಿಕ ಚಿನ್ನಾಭರಣ ಹಾಗೂ 25 ಕೋಟಿ ರೂ.ನಷ್ಟು ನಗದು ಪತ್ತೆಯಾದ ಹಿನ್ನೆಲೆಯಲ್ಲಿ ಪಾರ್ಥ ಚಟರ್ಜಿಯನ್ನು ವಜಾ ಮಾಡಲಾಗಿದೆ. ಇದನ್ನೂ ಓದಿ: ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

    ಇಡಿ ತನಿಖೆಗೆ ಒಳಪಟ್ಟ ಬಳಿಕ ಅರ್ಪಿತಾ ಮುಖರ್ಜಿ ಈ ಹಣ ಚಟರ್ಜಿ ಅವರಿಗೆ ಸೇರಿದ್ದಾಗಿ ತಿಳಿಸಿದ್ದು, ಈ ಹಣವನ್ನು ತನಗೆ ಸಂಬಂಧಿಸಿದ ಕಂಪನಿಯಲ್ಲಿ ತುಂಬಿಸಬೇಕಾಗಿತ್ತು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದರು. ಅರ್ಪಿತಾ ವಿಚಾರಣೆಯ ಸಂದರ್ಭ ಇಡಿ ರೇಡ್‍ಗೂ ಮುನ್ನ 1-2 ದಿನಗಳಲ್ಲಿ ತನ್ನ ಮನೆಯಲ್ಲಿದ್ದ ಹಣದ ರಾಶಿಯನ್ನು ಸ್ಥಳಾಂತರಿಸುವ ಯೋಜನೆ ಮಾಡಿದ್ದಾಗಿ ಬಹಿರಂಗಪಡಿಸಿದ್ದರು. ಇದನ್ನೂ ಓದಿ: ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮಗನನ್ನು ಸುಡಲಾಗಿದೆ: ಬಿಕ್ಕಿ ಬಿಕ್ಕಿ ಅತ್ತ ಪ್ರವೀಣ್ ತಾಯಿ

    Live Tv
    [brid partner=56869869 player=32851 video=960834 autoplay=true]

  • ಶಿಕ್ಷಕರ ನೇಮಕಾತಿ ಹಗರಣ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ದಾಳಿ – 50 ಕೋಟಿ ರೂ., 5 ಕೆ.ಜಿ ಚಿನ್ನ ಪತ್ತೆ

    ಶಿಕ್ಷಕರ ನೇಮಕಾತಿ ಹಗರಣ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ದಾಳಿ – 50 ಕೋಟಿ ರೂ., 5 ಕೆ.ಜಿ ಚಿನ್ನ ಪತ್ತೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಫ್ಲಾಟ್‍ನಲ್ಲಿ ಮತ್ತೆ ಕೋಟ್ಯಂತರ ನಗದು ಪತ್ತೆಯಾಗಿದೆ.

    ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅರ್ಪಿತಾ ಮುಖರ್ಜಿ ಸಂಬಂಧಿಸಿದ ಬೆಲ್‍ಘಾರಿಯಾ ಟೌನ್ ಕ್ಲಬ್‍ನಲ್ಲಿರುವ ಫ್ಲಾಟ್‍ನಲ್ಲಿ 50 ಕೋಟಿ ರೂ. ಮತ್ತು 5 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ ಇಡಿ ಅಧಿಕಾರಿಗಳು ಬೆಲ್‍ಘಾರಿಯಾ ಟೌನ್ ಕ್ಲಬ್‍ನಲ್ಲಿರುವ ಅರ್ಪಿತಾ ಅವರ ಫ್ಲಾಟ್‍ಅನ್ನು ಪರಿಶೀಲಿಸುವಾಗ ಶೆಲ್ಫ್‌ನಲ್ಲಿ ನೋಟುಗಳ ಕಂತೆ ಪತ್ತೆಯಾಗಿದೆ. ನೋಟ್ ಎಣಿಕೆ ಯಂತ್ರಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಬ್ಯಾಂಕ್ ಅಧಿಕಾರಿಗಳು ಈವರೆಗೆ ಎಣಿಸಲಾದ ಹಣಗಳ ಪ್ರಮಾಣವೇ 50 ಕೋಟಿ ರೂ. ಗಳಾಗಿದ್ದು, ಇನ್ನೂ ನಗದು ಎಣಿಕಾ ಪ್ರಕ್ರಿಯೆ ಮುಂದುವರಿದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ಲಾಂಗಿಂತ ದೊಡ್ಡ ಧರ್ಮವಿಲ್ಲ ಅಲ್ಲಾಹುಗಾಗಿ ಎಲ್ಲದಕ್ಕೂ ಸಿದ್ಧ – ಪಾಕ್‍ಗೆ ತೆರಳಲು ಸಿದ್ಧರಾಗಿದ್ರು ಶಂಕಿತ ಉಗ್ರರು

    ಬೆಲ್‍ಘಾರಿಯಾದ ರತ್ತಲಾ ಪ್ರದೇಶದಲ್ಲಿ ಎರಡು ಫ್ಲಾಟ್‍ಗಳಲ್ಲಿ ಹಣವಿದೆ ಎಂದು ಹೇಳಲಾಗಿದ್ದ ರೂಮ್‌ನ ಬಾಗಿಲಿಗೆ ಬೀಗ ಹಾಕಲಾಗಿತ್ತು. ಈ ಬೀಗ ತೆರೆಯಲು ಸಾಧ್ಯವಾಗದೇ ಇದ್ದಾಗ ಇಡಿ ಅಧಿಕಾರಿಗಳು ರೂಮ್‌ನ ಬೀಗ ಒಡೆದು ಪ್ರವೇಶಿಸಿದ್ದಾರೆ. ಈ ವೇಳೆ ರೂಮ್‍ನಲ್ಲಿ ಅಡಗಿಸಿಡಲಾಗಿದ್ದ ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಹಣವನ್ನು ಎಣಿಸಲು ಮೂರು ನೋಟು ಎಣಿಕೆ ಯಂತ್ರಗಳನ್ನು ತರಿಸಿದ್ದಾರೆ. ದಾಳಿ ವೇಳೆ ಫ್ಲಾಟ್‍ಗಳಲ್ಲಿ ಹಲವಾರು ಪ್ರಮುಖ ದಾಖಲೆಗಳು ಸಹ ವಶಕ್ಕೆ ಪಡೆದಿದ್ದು ಶೋಧ ಕಾರ್ಯ ಮುಂದುವರಿಸಲಾಗಿದೆ. ಇದನ್ನೂ ಓದಿ: ನಾಯಿಗಳಿಗೂ ಏರ್ ಕಂಡೀಷನ್ ಫ್ಲ್ಯಾಟ್ ಒದಗಿಸಿದ್ದ ಪಾರ್ಥ

    ಇತ್ತೀಚೆಗೆ ಇಡಿ ಶಿಕ್ಷಕರ ಅಕ್ರಮ ನೇಮಕಾತಿಯ ಆರೋಪದ ಅಡಿಯಲ್ಲಿ ಸಚಿವ ಪಾರ್ಥ ಚಟರ್ಜಿ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮನೆಯಲ್ಲಿ ತನಿಖೆ ನಡೆಸಿತ್ತು. ಚಟರ್ಜಿಯವರ ಆಪ್ತೆ ಅರ್ಪಿತಾ ಮನೆಯಲ್ಲೂ ಇಡಿ ತನಿಖೆ ನಡೆಸಿ, ಸುಮಾರು 21 ಕೋಟಿ ರೂ. ಮೊತ್ತದ ಹಣವನ್ನು ಬಯಲಿಗೆ ತಂದಿತ್ತು. ಆ ಬಳಿಕ ಇದೀಗ ಎರಡನೇ ಬಾರಿ ಇಡಿ ದಾಳಿ ನಡೆಸಿದೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅರೆಸ್ಟ್

    ನಿನ್ನೆ ಇಡಿ ತನಿಖೆಗೆ ಒಳಪಟ್ಟ ಬಳಿಕ ಅರ್ಪಿತಾ ಮುಖರ್ಜಿ ಈ ಹಣ ಚಟರ್ಜಿ ಅವರಿಗೆ ಸೇರಿದ್ದಾಗಿ ತಿಳಿಸಿದ್ದು, ಈ ಹಣವನ್ನು ತನಗೆ ಸಂಬಂಧಿಸಿದ ಕಂಪನಿಯಲ್ಲಿ ತುಂಬಿಸಬೇಕಾಗಿತ್ತು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದರು. ಅರ್ಪಿತಾ ವಿಚಾರಣೆಯ ಸಂದರ್ಭ ಇಡಿ ರೇಡ್‍ಗೂ ಮುನ್ನ 1-2 ದಿನಗಳಲ್ಲಿ ತನ್ನ ಮನೆಯಲ್ಲಿದ್ದ ಹಣದ ರಾಶಿಯನ್ನು ಸ್ಥಳಾಂತರಿಸುವ ಯೋಜನೆ ಮಾಡಿದ್ದಾಗಿ ಬಹಿರಂಗಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು: ಆಪ್ತೆ ಅರ್ಪಿತಾ

    ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು: ಆಪ್ತೆ ಅರ್ಪಿತಾ

    ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣ ಆರೋಪದ ಮೇಲೆ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಮೂಖರ್ಜಿ ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಅರ್ಪಿತಾ ತಮ್ಮ ಮನೆಯನ್ನು ಚಟರ್ಜಿಯವರು ಮಿನಿ ಬ್ಯಾಂಕ್‌ನಂತೆ ಬಳಸಿಕೊಂಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.

    ಕಳೆದ ಶುಕ್ರವಾರ ಜಾರಿ ನಿರ್ದೇಶನಾಲಯ ಶಿಕ್ಷಕರ ನೇಮಕಾತಿ ಹಗರಣದ ಆರೋಪದ ಮೇಲೆ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬರೋಬ್ಬರಿ 21 ಕೋಟಿ ರೂ. ಹಣದ ರಾಶಿ ಪತ್ತೆಯಾಗಿತ್ತು. ಇದಾದ ಮರುದಿನವೇ ಪಾರ್ಥ ಚಟರ್ಜಿ ಅವರನ್ನು ಇಡಿ ಬಂಧಿಸಿತ್ತು. ಇದನ್ನೂ ಓದಿ: ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್‌ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ

    ಮೂಲಗಳ ಪ್ರಕಾರ ಅರ್ಪಿತಾ ಮುಖರ್ಜಿ ತಮ್ಮ ಮನೆಯಲ್ಲಿ ಪತ್ತೆಯಾದ ಅಷ್ಟೂ ಹಣ ಪಾರ್ಥ ಚಟರ್ಜಿಗೆ ಸೇರಿದ್ದು ಎಂದು ತಿಳಿಸಿದ್ದಾರೆ. ಅವರು ಎಲ್ಲಾ ಹಣವನ್ನು ನನ್ನ ಮನೆಯ ಒಂದೇ ಕೋಣೆಯಲ್ಲಿಡುತ್ತಿದ್ದರು. ಪ್ರತೀ ವಾರ ಅಥವಾ 10 ದಿನಗಳಿಗೊಮ್ಮೆ ಅವರು ನನ್ನ ಮನೆಗೆ ಭೇಟಿ ನೀಡುತ್ತಿದ್ದರು. ಆದರೆ ತನ್ನ ಮನೆಯಲ್ಲಿ ಅವರು ಎಷ್ಟು ಹಣವನ್ನು ಇಟ್ಟಿದ್ದಾರೆ ಎಂಬ ಮಾಹಿತಿಯನ್ನು ತಿಳಿಸಿರಲಿಲ್ಲ ಎಂದಿದ್ದಾರೆ.

    ಚಟರ್ಜಿಯವರು ನನ್ನ ಮನೆ ಹಾಗೂ ಇನ್ನೊಬ್ಬ ಮಹಿಳೆಯ ಮನೆಯನ್ನೂ ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾರೆ. ಆ ಮಹಿಳೆ ಕೂಡಾ ಚಟರ್ಜಿಯವರ ಆಪ್ತ ಸ್ನೇಹಿತೆ ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ಕೊಲೆಗೆ ಕೊಲೆ ಪ್ರತಿಕಾರವಲ್ಲ – ಸರ್ಕಾರ ಹೆಣದ ರಾಜಕೀಯ ಬಿಟ್ಟು ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲಿ: ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ಶಿಕ್ಷಕರ ನೇಮಕಾತಿ ಹಗರಣ – ಚಟರ್ಜಿ ಆಪ್ತೆಯ ಮನೆಯಲ್ಲಿ ಸ್ಫೋಟಕ ಮಾಹಿತಿಯಿರುವ ಡೈರಿ ಪತ್ತೆ

    ಶಿಕ್ಷಕರ ನೇಮಕಾತಿ ಹಗರಣ – ಚಟರ್ಜಿ ಆಪ್ತೆಯ ಮನೆಯಲ್ಲಿ ಸ್ಫೋಟಕ ಮಾಹಿತಿಯಿರುವ ಡೈರಿ ಪತ್ತೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿಯ ವೇಳೆ ಕಪ್ಪು ಡೈರಿಯೊಂದನ್ನು ಪತ್ತೆ ಮಾಡಿದೆ.

    ಇಡಿ ಮೂಲಗಳ ಪ್ರಕಾರ ಡೈರಿಯು ಪಶ್ಚಿಮ ಬಂಗಾಳ ಸರ್ಕಾರದ ಉನ್ನತ ಶಿಕ್ಷಣ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ಸೇರಿದ್ದಾಗಿದೆ. ಡೈರಿಯ 40 ಪುಟಗಳಲ್ಲಿ ಬರೆಯಲಾಗಿದ್ದು, ಅದರಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಲವು ರಹಸ್ಯಗಳು ಸೇರಿವೆ ಎಂದಿದೆ. ಇದನ್ನೂ ಓದಿ: ನಾನು ಮುಖ್ಯಮಂತ್ರಿ ಆಗಿದ್ದರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸ್ತಿದ್ದೆ: ವಾಟಾಳ್ ನಾಗರಾಜ್

    ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆಗೆ ಶುಕ್ರವಾರ ರಾತ್ರಿ ಇಡಿ ದಾಳಿ ನಡೆಸಿ, ಬರೋಬ್ಬರಿ 20 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿತ್ತು. ಮರುದಿನ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಚಟರ್ಜಿ ಅವರನ್ನು ಇಡಿ ಬಂಧಿಸಿತ್ತು. ಇದನ್ನೂ ಓದಿ: ಲವ್ಲಿನಾ ಕೋಚ್‌ಗೆ ಕಾಮನ್ ವೆಲ್ತ್ ಗೇಮ್ಸ್ ಪ್ರವೇಶಿಸಲು ಮಾನ್ಯತೆ

    Live Tv
    [brid partner=56869869 player=32851 video=960834 autoplay=true]