Tag: Arrest Warrant

  • ಪ್ರಜ್ವಲ್ ರೇವಣ್ಣಗೆ ಸಂಕಷ್ಟ – ಪಾಸ್‌ಪೋರ್ಟ್ ರದ್ದತಿಗೆ ಪರ್ಮಿಷನ್; ಅಕೌಂಟ್ ಫ್ರೀಜ್‌ಗೆ ಎಸ್‌ಐಟಿ ಸಿದ್ಧತೆ

    ಪ್ರಜ್ವಲ್ ರೇವಣ್ಣಗೆ ಸಂಕಷ್ಟ – ಪಾಸ್‌ಪೋರ್ಟ್ ರದ್ದತಿಗೆ ಪರ್ಮಿಷನ್; ಅಕೌಂಟ್ ಫ್ರೀಜ್‌ಗೆ ಎಸ್‌ಐಟಿ ಸಿದ್ಧತೆ

    – ಹೊಳೆನರಸೀಪುರ ಕೇಸಲ್ಲಿ ಅರೆಸ್ಟ್ ವಾರೆಂಟ್‌ಗೆ ಅನುಮತಿ

    ಬೆಂಗಳೂರು: ಪೆನ್‌ಡ್ರೈವ್ ಕೇಸಲ್ಲಿ (Pendrive Case) ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಅತಿದೊಡ್ಡ ಶಾಕ್ ಎದುರಾಗಿದೆ. ಹೊಳೆನರಸೀಪುರ (Holenarasipura) ಕೇಸಲ್ಲಿ ಪಾಸ್‌ಪೋರ್ಟ್ (Passport) ರದ್ದು ಮಾಡಲು ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ಅರೆಸ್ಟ್ ವಾರೆಂಟ್‌ಗೆ (Arrrest Warrant) ಎಸ್‌ಐಟಿ (SIT) ಪರ್ಮಿಷನ್ ಪಡೆದಿದೆ.

    ಎಸ್‌ಐಟಿಗೂ ಸಿಗದೇ ತಲೆಮರೆಸಿಕೊಂಡಿರುವ ಪ್ರಜ್ವಲ್ ವಿದೇಶದಲ್ಲೇ ವಾಸ್ತವ್ಯ ಹೂಡಿದ್ದಾರೆ. ಭೂಗತವಾಗೇ ಇದ್ದು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಾಗಾಗಿ ಏನೇ ಆಗಲಿ ಪ್ರಜ್ವಲ್‌ನನ್ನು ಬಂಧಿಸಲೇಬೇಕು ಎಂದು ಎಸ್‌ಐಟಿ ಪಣ ತೊಟ್ಟಿದೆ. ಅದರಂತೆ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಎಸ್‌ಐಟಿ ಮಾಹಿತಿ ನೀಡಿದೆ. ಇದೀಗ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಇದನ್ನೂ ಓದಿ: ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು

    ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್‌ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಇದೀಗ ಅರೆಸ್ಟ್ ವಾರೆಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ. ಇದನ್ನೂ ಓದಿ: RCB vs CSK ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ – ಸಿಎಂಗೆ ಸಚಿವರ ಸಾಥ್‌

    ಇನ್ನು ದೋಷಾರೋಪ ಪಟ್ಟಿ ಸಲ್ಲಿಕೆಗೆ ಮುಂದಾದ ಎಸ್‌ಐಟಿ, ಈಗ ಮತ್ತೊಂದು ಪ್ರಬಲ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಪ್ರಜ್ವಲ್ ರೇವಣ್ಣ ಅಕೌಂಟ್‌ಗಳನ್ನೇ ಈಗ ಫ್ರೀಜ್ ಮಾಡಲು ಹೊರಟಿದೆ. ಬೆಂಗಳೂರಿನಿಂದಲೇ ಪ್ರಜ್ವಲ್ ಅಕೌಂಟ್‌ಗೆ ಲಕ್ಷಾಂತರ ರೂ. ಹಣ ಸಂದಾಯವಾಗಿದೆ. ಹೀಗಾಗಿ ವಿದೇಶದಲ್ಲಿ ಇರೋ ಪ್ರಜ್ವಲ್‌ನನ್ನು ಆರ್ಥಿಕವಾಗಿ ಕಟ್ಟಿಹಾಕಲು ಅಕೌಂಟ್ ಫ್ರೀಜ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಎಸ್‌ಐಟಿ ಮೂಲಗಳ ಮಾಹಿತಿಯ ಪ್ರಕಾರ ಪ್ರಜ್ವಲ್ 7 ಬ್ಯಾಂಕ್ ಅಕೌಂಟ್‌ಗಳನ್ನು ಹೊಂದಿದ್ದು, ಆ ಬ್ಯಾಂಕ್‌ಗಳ ಸಂಪೂರ್ಣ ಮಾಹಿತಿಯನ್ನು ಎಸ್‌ಐಟಿ ಪಡೆದುಕೊಂಡಿದೆ. ಇದನ್ನೂ ಓದಿ: ನಿಮ್ಮ ಸೇವೆಗೆ ದೇವರು ನನ್ನ ಕಳುಹಿಸಿದ್ದಾನೆ: ಮೋದಿ

    ಒಟ್ಟಿನಲ್ಲಿ ವಿದೇಶದಲ್ಲಿ ಭೂಗತರಾಗಿರುವ ಪ್ರಜ್ವಲ್ ರೇವಣ್ಣಗೆ ಅಸಲಿ ಬಿಗ್ ಶಾಕ್ ಈಗ ಕಾದಿದೆ. ಯಾವ ಕಾರ್ನರ್ ನೋಟಿಸ್‌ಗೂ ಜಗ್ಗದ ಪ್ರಜ್ವಲ್‌ಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿ, ಪಾಸ್‌ಪೋರ್ಟ್ ರದ್ದುಪಡಿಸಿ, ಅರೆಸ್ಟ್ ವಾರೆಂಟ್ ಮೂಲಕ ಪ್ರಜ್ವಲ್ ಬಂಧನಕ್ಕೆ ಎಸ್‌ಐಟಿ ಬಲೆ ಬೀಸಿದೆ. ಇದನ್ನೂ ಓದಿ: ಬರ ಪರಿಹಾರ ಹಣ ಬಿಡುಗಡೆ – ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

  • ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ

    ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ

    ಚಿತ್ರದುರ್ಗ: ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಮುರುಘಾಶ್ರೀಗಳಿಗೆ (Murugha Shree) ಮತ್ತೆ ಬಂಧನದ ಭೀತಿ ಎದುರಾಗಿದೆ.

    ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ (Arrest Warrant) ಜಾರಿಯಾಗಿದೆ. ಶ್ರೀಗಳು ಮೊದಲನೇ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ (Chitradurga) ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಈ ಮೂಲಕ ಕೇವಲ ನಾಲ್ಕೇ ದಿನಕ್ಕೆ ಶ್ರೀಗಳಿಗೆ ಮತ್ತೆ ಬಂಧನದ ಭೀತಿ ಶುರುವಾಗಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ

    ಇತ್ತೀಚೆಗೆ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ; ಭಕ್ತರಿಗೆ ಮೌನವೇ ದೊಡ್ಡ ಸಂದೇಶ: ಜೈಲಿಂದ ಬಂದ ಮುರುಘಾ ಶ್ರೀ

    1ನೇ ಪೊಕ್ಸೋ ಕೇಸಲ್ಲಿ ಹೈಕೋರ್ಟ್ ನಿಂದ (HighCourt) ಷರತ್ತುಬದ್ಧ ಜಾಮೀನು ಹಿನ್ನೆಲೆಯಲ್ಲಿ ಮುರುಘಾಶ್ರೀ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಮುರುಘಾಶ್ರೀ ಮತ್ತೆ ಬಂಧನದ ಅಗತ್ಯವಿಲ್ಲ. ಬಂಧನ ವಾರೆಂಟ್ ಹೈಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆಂದು ಮುರುಘಾಶ್ರೀ ಪರ ವಕೀಲ ಉಮೇಶ್ ವಾದಿಸಿದ್ದಾರೆ. ಸದ್ಯ ಎರಡೂ ಕಡೆಯ ವಾದ ಆಲಿಸಿರುವ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ. ಈ ಮೂಲಕ 2ನೇ ಪ್ರಕರಣದಲ್ಲಿ ನಿರ್ಧಾರ ಪ್ರಕಟಿಸಿದೆ.

    ಕೇರಳದ ಪ್ರಕರಣವೊಂದರ ಉಲ್ಲೇಖದನ್ವಯ ಅರೆಸ್ಟ್ ವಾರೆಂಟ್ ಜಾರಿ ಮಾಡುವಂತೆ ಕೋರ್ಟ್ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದೆ.

  • ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌

    ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌

    ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ.

    ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್‌ ಖಾನ್ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಇಮ್ರಾನ್ ಖಾನ್ ಅಫಿಡವಿಟ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ವಾರಂಟ್ ಬಂದಿದೆ. ಯಾವುದೇ ನ್ಯಾಯಾಲಯ ಮತ್ತು ನ್ಯಾಯಾಂಗದ ಅದರಲ್ಲೂ ಕೆಳಮಟ್ಟದ ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಭವಿಷ್ಯದಲ್ಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.

    ಆ.20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ, ದೇಶದ್ರೋಹದ ಆರೋಪದ ಮೇಲೆ ತನ್ನ ಸಹಾಯಕ ಶಹಬಾಜ್ ಗಿಲ್‌ರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಈ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗುಂಡಿನ ದಾಳಿ -ಚೀನಾ ಪ್ರಜೆ ಬಲಿ

    Live Tv
    [brid partner=56869869 player=32851 video=960834 autoplay=true]

  • ಬಿಗ್‍ಬಾಸ್ ಮಾಜಿ ಸ್ಪರ್ಧಿ, ಜನಪ್ರಿಯ ಡ್ಯಾನ್ಸರ್ ಸಪ್ನ ಚೌಧರಿ ವಿರುದ್ಧ ಅರೆಸ್ಟ್ ವಾರೆಂಟ್

    ಬಿಗ್‍ಬಾಸ್ ಮಾಜಿ ಸ್ಪರ್ಧಿ, ಜನಪ್ರಿಯ ಡ್ಯಾನ್ಸರ್ ಸಪ್ನ ಚೌಧರಿ ವಿರುದ್ಧ ಅರೆಸ್ಟ್ ವಾರೆಂಟ್

    ಲಕ್ನೋ: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಜನಪ್ರಿಯ ನೃತ್ಯಗಾರ್ತಿ ಸಪ್ನ ಚೌಧರಿ ಅವರ ವಿರುದ್ಧ ಲಕ್ನೋ ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ.

    ಕಾರ್ಯಕ್ರಮವೊಂದನ್ನು ನಡೆಸಿಕೊಡುವುದಾಗಿ ಒಪ್ಪಿಕೊಂಡು ಹಣ ಪಡೆದು, ನಂತರ ಕಾರ್ಯಕ್ರಮಕ್ಕೂ ಹೋಗದೇ ಹಣವನ್ನೂ ನೀಡದ ಆರೋಪವನ್ನು ಚೌಧರಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು. ಹೀಗಾಗಿ ಚೌಧರಿ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ.

    ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕವಾದ ನ.22ರೊಳಗೆ ಆದೇಶವನ್ನು ಕಾರ್ಯಗತಗೊಳಿಸುವಂತೆ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ಶಾಂತನು ತ್ಯಾಗಿ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ತನ್ನ ವಿರುದ್ಧದ ಎಫ್‍ಐಆರ್ ಅನ್ನು ರದ್ದುಗೊಳಿಸುವಂತೆ ಸಪ್ನ ಚೌಧರಿ ಅವರು ಕೋರ್ಟ್ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ತಿರಸ್ಕರಿಸಲಾಗಿದೆ.

    ನೃತ್ಯ ಕಾರ್ಯಕ್ರಮವೊಂದನ್ನು ನಡೆಸಿಕೊಡಲು ಸಪ್ನ ಚೌಧರಿ ಅವರು ಸಂಭಾವನೆಯನ್ನು ಪಡೆದಿದ್ದರು. ಕಾರ್ಯಕ್ರಮದಲ್ಲಿ ಚೌಧರಿ ಅವರು ಸರಿಯಾದ ಸಮಯಕ್ಕೆ ಬಂದಿಲ್ಲ. ಸಾವಿರಾರು ಜನ ಸಪ್ನ ಅವರ ನೃತ್ಯ ನೋಡಲು ತಲಾ 300 ರೂ. ನಂತೆ ಟಿಕೆಟ್ ಖರೀದಿಸಿ ಕಿಕ್ಕಿರಿದಿದ್ದರು. ಆದರೆ ಆಕೆ ಕಾರ್ಯಕ್ರಮಕ್ಕೆ ಬರಲಿಲ್ಲ. ಅಲ್ಲದೇ ಕಾರ್ಯಕ್ರಮದ ಹಣವನ್ನೂ ಹಿಂದಿರುಗಿಸಿಲ್ಲ ಎಂಬ ಆರೋಪವನ್ನು ಹೊತ್ತಿದ್ದಾರೆ.

    ಬಿಗ್ ಬಾಸ್ 10ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ಸಪ್ನ ಚೌಧರಿ ಬಹಳ ಜನಪ್ರಿಯತೆ ಗಳಿಸಿದ್ದರು. ನಂತರ ಸಾಕಷ್ಟು ವೀಡಿಯೋ ಕಾರ್ಯಕ್ರಮಗಳಲ್ಲೂ ನೃತ್ಯ ಮಾಡಿ ಜನಮೆಚ್ಚುಗೆ ಗಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲೂ 40 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

  • ಟ್ರಂಪ್‌ ವಿರುದ್ಧ ಅರೆಸ್ಟ್‌ ವಾರೆಂಟ್‌ ಹೊರಡಿಸಿದ ಇರಾನ್‌

    ಟ್ರಂಪ್‌ ವಿರುದ್ಧ ಅರೆಸ್ಟ್‌ ವಾರೆಂಟ್‌ ಹೊರಡಿಸಿದ ಇರಾನ್‌

    ಟೆಹರಾನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಇರಾನ್‌ ಅರೆಸ್ಟ್‌ ವಾರೆಂಟ್‌ ಹೊರಡಿಸಿದ್ದು ಇಂಟರ್‌ಪೋಲ್‌ ಬಳಿ ಸಹಾಯ ಮಾಡುವಂತೆ ಮನವಿ ಮಾಡಿದೆ.

    ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್‌ ಕೋರ್‌ನ ಕಮಾಂಡರ್‌ ಮೇಜರ್‌ ಜನರಲ್‌ ಖಾಸಿಂ ಸುಲೇಮಾನಿ ಅವರನ್ನು ಅಮೆರಿಕ ಸೇನೆ ಈ ವರ್ಷದ ಜನವರಿ 3 ರಂದು ಹತ್ಯೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಟ್ರಂಪ್‌ ಸೇರಿದಂತೆ 30 ಮಂದಿ ವಿರುದ್ಧ ಅರೆಸ್ಟ್‌ ವಾರಂಟ್‌ ಹೊರಡಿಸಿದೆ.

    ಇರಾನ್‌ ಸರ್ಕಾರ ಟ್ರಂಪ್‌ ಮತ್ತು 30 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡುವಂತೆ ಇಂಟರ್‌ಪೋಲ್‌ ಬಳಿ ಮನವಿ ಮಾಡಿಕೊಂಡಿದೆ. ಫ್ರಾನ್ಸಿನ ಲಿಯಾನ್‌ನಲ್ಲಿರುವ ಇಂಟರ್‌ಪೋಲ್‌ ಇಲ್ಲಿಯವರೆಗೆ ಈ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಆರೋಪಿಯನ್ನು ಬಂಧಿಸಲು ಅಥವಾ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಗಡೀಪಾರು ಮಾಡಲು ಸರ್ಕಾರಗಳು ಇಂಟರ್‌ಪೋಲ್‌ ಬಳಿ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡುವಂತೆ ಮನವಿ ಮಾಡುತ್ತವೆ. ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾದರೆ ಆರೋಪಿಯನ್ನು ಬಂಧಿಸಿ ಕರೆ ತರಲು ದೇಶಗಳಿಗೆ ಸಹಾಯವಾಗುತ್ತದೆ.

    ಸಾಮಾನ್ಯವಾಗಿ ದೇಶಗಳಿಂದ ಮನವಿ ಬಂದ ಬಳಿಕ ಇಂಟರ್‌ಪೋಲ್‌(ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಪೊಲೀಸ್‌ ಸಂಘಟನೆ) ತನ್ನ ಸಮಿತಿಯ ಬಳಿ ಚರ್ಚೆ ನಡೆಸಿ ನೋಟಿಸ್‌ ನೀಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸುತ್ತದೆ. ರಾಜಕೀಯ ಉದ್ದೇಶಕ್ಕಾಗಿ ಅಥವಾ ತನ್ನ ಮಾರ್ಗದರ್ಶಿ ನಿಯಮದ ಉಲ್ಲಂಘನೆಯಾಗಿದ್ದಲ್ಲಿ ಇಂಟರ್‌ಪೋಲ್‌ ಸಾಮಾನ್ಯವಾಗಿ ಮನವಿಯನ್ನು ತಿರಸ್ಕರಿಸಿತ್ತದೆ.

    ವೈಮಾನಿಕ ದಾಳಿಯ ಮೂಲಕ ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿ ಬಿಗಿ ಭದ್ರತೆಯಲ್ಲಿದ್ದ ಸುಲೇಮಾನಿಯನ್ನು ಅಮೆರಿಕ ಹತ್ಯೆ ಮಾಡಿತ್ತು. ಇರಾಕ್‍ನ ಮಿಲಿಟರಿ ಕಮಾಂಡರ್ ಅಬು ಮಹ್ದಿ ಅಲ್ ಮುಹಾಂದಿಸ್ ಜೊತೆ ಇರಾಕ್ ರಾಜಧಾನಿ ಬಾಗ್ದಾದ್‍ನ ವಿಮಾನ ನಿಲ್ದಾಣಕ್ಕೆ ಇರಾನ್ ಸೇನಾ ಮುಖ್ಯಸ್ಥರಾಗಿದ್ದ ಸುಲೇಮಾನಿ ಕಾರಿನಲ್ಲಿ ತೆರಳುತ್ತಿದ್ದರು. ಈ ಇಬ್ಬರು ತೆರಳುತ್ತಿದ್ದ ಕಾರನ್ನು ಟಾರ್ಗೆಟ್ ಮಾಡಿದ ಅಮೆರಿಕ ಸೇನೆಗಳು ಡ್ರೋನ್ ಮೂಲಕ ಕ್ಷಿಪಣಿಯನ್ನು ಉಡಾವಣೆ ಮಾಡಿ ಏರ್ ಸ್ಟ್ರೈಕ್ ಮಾಡಿತ್ತು. ದಾಳಿಯ ತೀವ್ರತೆಗೆ ಇಬ್ಬರು ತೆರಳುತ್ತಿದ್ದ ಕಾರುಗಳು ಛಿದ್ರ-ಛಿದ್ರವಾಗಿದ್ದವು. ಇದನ್ನೂ ಓದಿ: ಅಮೆರಿಕದ ’52 ಟಾರ್ಗೆಟ್’ ಸಂಖ್ಯೆಗೆ ‘290’ ಪ್ರಸ್ತಾಪಿಸಿ ತಿರುಗೇಟು ಕೊಟ್ಟ ಇರಾನ್

    ಘಟನೆಯ ಕುರಿತು ಫ್ಲೋರಿಡಾದಲ್ಲಿ ಮಾತನಾಡಿದ್ದ ಟ್ರಂಪ್, ಇತ್ತೀಚೆಗೆ ಅಮೆರಿಕವನ್ನು ಟಾರ್ಗೆಟ್ ಮಾಡಿ ಇರಾಕ್ ನಡೆಸಿದ ದಾಳಿಗಳಲ್ಲಿ ದೇಶದ ಸೈನಿಕ ಸಾವನ್ನಪ್ಪಿದ್ದರು. ಅಲ್ಲದೇ ರಾಕೆಟ್ ದಾಳಿಯಲ್ಲಿ ನಾಲ್ವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದರು. ಬಾಗ್ದಾದ್‍ನ ನಮ್ಮ ವಿದೇಶಾಂಗ ಕಚೇರಿಯ ಮೇಲೆ ಸುಲೈಮನಿ ನಿರ್ದೇಶನದಂತೆ ದಾಳಿ ನಡೆಸಲಾಗಿತ್ತು, ಉಗ್ರರಿಗೆ ಸಹಕಾರ ನೀಡುತ್ತಿದ್ದರು. ಈ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಟ್ರಂಪ್‌ ಏರ್‌ಸ್ಟ್ರೈಕ್‌ ಸಮರ್ಥಿಸಿಕೊಂಡಿದ್ದರು.

    ಸುಲೇಮಾನಿ ಉತ್ತರಾಧಿಕಾರಿ ಇಸ್ಮಾಯಿಲ್ ಖಾನಿ, “ದೇವರು ಪ್ರತೀಕಾರ ತೀರಿಸಿಕೊಳ್ಳುವ ಭರವಸೆ ನೀಡಿದ್ದಾನೆ. ದೇವರ ಅಣತಿಯಂತೆ ಖಂಡಿತವಾಗಿಯೂ ಪ್ರತೀಕಾರ ತೆಗೆದುಕೊಳ್ಳಲಾಗುವುದು” ಎಂದು ಈ ಹಿಂದೆ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದರು. ಡೊನಾಲ್ಡ್ ಟ್ರಂಪ್ ಅವರ ಹತ್ಯೆಗಾಗಿ ಇರಾನ್ ಬಹುಮಾನವನ್ನು ಈಗಾಗಲೇ ಘೋಷಿಸಿದೆ. ಇರಾನ್‍ನಲ್ಲಿ 8 ಕೋಟಿ ಜನರಿದ್ದು ಪ್ರತಿಯೊಬ್ಬರೂ ಒಂದೊಂದು ಡಾಲರ್ ನೀಡಿದರೂ ಅದು ಟ್ರಂಪ್ ತಲೆ ತೆಗೆದವರಿಗೆ ಸೇರುತ್ತದೆ ಎಂದು ಹೇಳಿದೆ.

  • ಮೊಹಮ್ಮದ್ ಶಮಿ ವಿರುದ್ಧ ಅರೆಸ್ಟ್ ವಾರೆಂಟ್

    ಮೊಹಮ್ಮದ್ ಶಮಿ ವಿರುದ್ಧ ಅರೆಸ್ಟ್ ವಾರೆಂಟ್

    ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಕೌಟುಂಬಿಕ ಹಿಂಸೆ ಆರೋಪದ ಅಡಿ ಕೋಲ್ಕತ್ತಾ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

    ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅತ್ಯುತ್ತಮ ಪ್ರರ್ದಶ ನೀಡುತ್ತಿರುವ ಮೊಹಮ್ಮದ್ ಶಮಿ ಕೌಟುಂಬಿಕ ಕಲಹದಿಂದಾಗಿ ಮತ್ತೆ ಸಂಕಷ್ಟಕ್ಕೆ  ಸಿಲುಕಿದ್ದಾರೆ. ಶಮಿ 70 ಏಕದಿನ ಪಂದ್ಯಗಳನ್ನು ಆಡಿ 131 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚೆಗೆ ತಮ್ಮ 42ನೇ ಟೆಸ್ಟ್ ಪಂದ್ಯದಲ್ಲಿ 150 ವಿಕೆಟ್‍ಗಳ ಹೆಗ್ಗುರುತನ್ನು ತಲುಪಿದ್ದಾರೆ.

    ಮೊಹಮ್ಮದ್ ಶಮಿ ಹಾಗೂ ಪತ್ನಿ ಹಸೀನ್ ಜಹಾನ್ ಜಗಳ ಮತ್ತೆ ಹೊಸ ತಿರುವು ಪಡೆದುಕೊಂಡಿದೆ. ಕಾನೂನು ಹೋರಾಟ ನಡೆಸುತ್ತಿರುವ ಪತ್ನಿ ಇದೀಗ ಮೇಲುಗೈ ಸಾಧಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಕೋರ್ಟ್, ಮೊಹಮ್ಮದ್ ಶಮಿ ಸರೆಂಡರ್ ಆಗಲು ಅಥವಾ ಜಾಮೀನು ಪಡೆಯಲು ಕೇವಲ 15 ದಿನಗಳ ಕಾಲಾವಕಾಶ ನೀಡಿದೆ.

    ಏನಿದು ಪ್ರಕರಣ?:
    ಹಸೀನ್ ಜಹಾನ್ ಪತಿ ಮೊಹಮ್ಮದ್ ಶಮಿ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 7 ಲಕ್ಷ ರೂ. ಕೋರಿ ಮನವಿ ಸಲ್ಲಿಸಿದ್ದರು. ಜಹಾನ್ ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯ ಮಗಳ ಜೀವನಕ್ಕಾಗಿ 80 ಸಾವಿರ ರೂ. ನೀಡುವಂತೆ ತಿಳಿಸಿತ್ತು. ಹಸೀನ್ ಜಹಾನ್ ದೂರಿನ ಆಧಾರದ ಮೇಲೆ ಶಮಿ ಹಾಗೂ ಅವರ ಕುಟುಂಬ ಮೇಲೆ ಐಪಿಸಿ ಸೆಕ್ಷನ್ 498ಎ (ವರದಕ್ಷಿಣೆ ಕಿರುಕುಳ) ಮತ್ತು 254ಎ (ಲೈಂಗಿಕ ದೌರ್ಜನ್ಯ) ಸೆಕ್ಷನ್ ಅಡಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

    ಶಮಿ ಅವರ ವಿರುದ್ಧ ಪತ್ನಿ ಜಹಾನ್ ಮ್ಯಾಚ್ ಫಿಕ್ಸಿಂಗ್ ಆರೋಪ ಕೂಡ ಮಾಡಿದ್ದರು. ಅಲ್ಲದೆ ಈ ಬಗ್ಗೆ ನನ್ನ ಬಳಿ ಸಾಕ್ಷಿ ಇದೆ ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಶಮಿ ಬೇರೆ ಬೇರೆ ಮಹಿಳೆಯರೊಂದಿಗೆ ಇದ್ದ ಫೋಟೋ ಹಾಗೂ ಚಾಟ್ ಮಾಡಿದ್ದ ಸ್ಕ್ರೀನ್ ಶಾಟ್ ಗಳನ್ನು ಪೋಸ್ಟ್ ಮಾಡಿದ್ದರು. ಅಲ್ಲದೆ ಸಹೋದರನೊಂದಿಗೆ ಸಂಬಂಧ ಹೊಂದುವಂತೆ ಶಮಿ ಒತ್ತಡ ಹಾಕಿದ್ದರು ಎಂದು ಜಹಾನ್ ಗಂಭೀರ ಆರೋಪಗಳನ್ನು ಮಾಡಿದ್ದರು. ಆದರೆ ಈ ಎಲ್ಲಾ ಆರೋಪಗಳನ್ನು ಶಮಿ ನಿರಾಕರಿಸಿದ್ದರು.

  • ರೈತನ ಬಾಗಿಲಿಗೆ ಕೋಲ್ಕತಾ ಕೋರ್ಟಿನಿಂದ ಅರೆಸ್ಟ್ ವಾರೆಂಟ್

    ರೈತನ ಬಾಗಿಲಿಗೆ ಕೋಲ್ಕತಾ ಕೋರ್ಟಿನಿಂದ ಅರೆಸ್ಟ್ ವಾರೆಂಟ್

    ಬೆಳಗಾವಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಚ್ಚರಿಕೆಯನ್ನು ನೀಡಿದ್ದರೂ ಅವರು ಮಾತನ್ನು ತಿರಸ್ಕರಿಸಿ ಕೋಲ್ಕತ್ತಾದ ಕೋರ್ಟ್ ರೈತರ ಮನೆ ಬಾಗಿಲಿಗೆ ಅರೆಸ್ಟ್ ವಾರೆಂಟ್ ಕಳುಹಿಸಿದೆ.

    ಬೆಳಗಾವಿಯ ಬೈಲಹೊಂಗಲ ನಗರದ ಅಕ್ಸಿಸ್ ಬ್ಯಾಂಕ್‍ನಲ್ಲಿ ಸಾಲ ಪಡೆದ 180 ಕ್ಕೂ ಹೆಚ್ಚು ರೈತರ ವಿರುದ್ಧ ಅರೆಸ್ಟ್ ವಾರೆಂಟ್ ಬಂದಿದೆ. ರೈತರಿಗೆ ಯಾವುದೇ ನೋಟಿಸ್, ಅರೆಸ್ಟ್ ವಾರೆಂಟ್ ಕಳಿಸೋದಿಲ್ಲ ಎಂದು ಮೊಸಳೆ ಕಣ್ಣಿರು ಹಾಕಿದ್ದ ಅಕ್ಸಿಸ್ ಬ್ಯಾಂಕ್ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ವಚನ ನೀಡಿದ್ದು ಇದೀಗ ಮತ್ತೆ ಉಡಾಫೆ ವರ್ತನೆಯನ್ನು ತೋರಿದೆ.

    ಕಳೆದ ತಿಂಗಳ ಕೋರ್ಟ್ ಕೇಸಿಗೆ ಹಾಜರಿರದ ಸವದತ್ತಿ ತಾಲೂಕಿನ ಏಣಗಿ ಗ್ರಾಮದ ರೈತರಿಗೆ ಸವದತ್ತಿ ಠಾಣೆಯಿಂದ ಅರೆಸ್ಟ್ ವಾರೆಂಟ್ ಬಂದಿತ್ತು. ಗ್ರಾಮದಲ್ಲಿ ರೈತರಿಗಾಗಿ ಹುಡುಕಾಟ ನಡೆಯುತ್ತಿದ್ದು, ಸರ್ಕಾರದ ಆದೇಶಕ್ಕೆ ಅಕ್ಸಿಸ್ ಬ್ಯಾಂಕ್ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಪೊಲೀಸ್ ಜಿಲ್ಲಾ ವರಷ್ಠಾಧಿಕಾರಿಗಳು ನೀಡಿದ ಎಚ್ಚರಿಕೆಯನ್ನು ಮರೆತು ಅವರ ಕಚೇರಿಯಿಂದ ಅ.9 ಕ್ಕೆ ಅರೆಸ್ಟ್ ವಾರೆಂಟ್ ಹೊರಬಂದಿದೆ. ಸದ್ಯಕ್ಕೆ ಅನ್ನದಾತರಲ್ಲಿ ಬಂಧನದ ಭೀತಿ ಉಂಟಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್!

    ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್!

    ಉಡುಪಿ: ವಿಶೇಷ ನ್ಯಾಯಾಲಯದಿಂದ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

    ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ.

    ಸರ್ಕಾರಿ ಕೆರೆ ಸೇರಿದಂತೆ ಭೂ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆದರೆ ಡಿಸಿ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿ ಮಾಹಿತಿ ನೀಡಿರಲಿಲ್ಲ. ಕೆರೆ, ಸರಕಾರಿ ಭೂಮಿ, ರಸ್ತೆಯ ಇಕ್ಕೆಲ ಒತ್ತುವರಿ ಬಗ್ಗೆ ವಿಶೇಷ ಭೂ ನ್ಯಾಯಾಲಯದಲ್ಲಿ ಪ್ರಕರಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿತ್ತು.

    ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ಉತ್ತರ ನೀಡದ ಹಿನ್ನೆಲೆ ಬಂಧನ ವಾರೆಂಟ್ ಹೊರಡಿಸಿದೆ. ಆದ್ದರಿಂದ ಜಿಲ್ಲಾ ಎಸ್‍ಪಿ ಕಚೇರಿಗೆ ವಾರೆಂಟ್ ತಲುಪಿದೆ. ಇತ್ತ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಜಾಮೀನಿಗೆ ಪ್ರಯತ್ನಿಸಿದ್ದು, ಮಾರ್ಚ್ 13ರಂದು ಖುದ್ದು ನ್ಯಾಯಾಲಯದಲ್ಲಿ ಹಾಜರಾಗಲು ಡಿಸಿ ನಿರ್ಧರಿಸಿದ್ದಾರೆ.