Tag: arrest

  • ಅಕ್ರಮ ಗಾಂಜಾ ಮಾರಾಟ ಯತ್ನ- ಇಬ್ಬರ ಬಂಧನ

    ಅಕ್ರಮ ಗಾಂಜಾ ಮಾರಾಟ ಯತ್ನ- ಇಬ್ಬರ ಬಂಧನ

    ಮಡಿಕೇರಿ: ಅಕ್ರಮವಾಗಿ ಗಾಂಜಾ (Ganja) ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆಯಲ್ಲಿ (Virajpet) ನಡೆದಿದೆ.

    ವಿರಾಜಪೇಟೆ ತಾಲೂಕಿನ ಇಂಜಿಲಗೆರೆ ಗ್ರಾಮದ ಕಲ್ಲುಕೋರೆ ನಿವಾಸಿ ಪ್ರವೀಣ (31) ಹಾಗೂ ಗಾಂಧಿನಗರ ನಿವಾಸಿ ಇಮ್ರಾನ್ ಅಲಿಯಾಸ್ ಸೋನು (22) ಬಂಧಿತ ಆರೋಪಿಗಳು. ಪ್ರಕರಣದ ಎರಡನೇ ಆರೋಪಿಯಾಗಿರುವ ಸೋನು 2020ರಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜೈಲುವಾಸ ಅನುಭವಿಸಿ ಹಿಂದಿರುಗಿದ್ದಾನೆ. ಅಲ್ಲದೇ ಜೈಲುವಾಸದ ಸಮಯದಲ್ಲಿ ಅನೇಕ ಮಂದಿಯ ಪರಿಚಯವಾಗಿದ್ದು, ಗಾಂಜಾ ಖರೀದಿ ಮತ್ತು ದೊರಕುವ ಸ್ಥಳದ ಬಗ್ಗೆ ಈತನಿಗೆ ಖಚಿತ ಮಾಹಿತಿ ಇತ್ತು ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು 

    CRIME 2

    ಸೋನು ತನ್ನ ಸ್ನೇಹಿತನಾದ ಪ್ರವೀಣ್‌ಗೂ ಮಾಹಿತಿ ತಿಳಿಸಿ ಹಣ ಹೊಂದಿಸಿಕೊಂಡು ಮೈಸೂರಿಗೆ ತೆರಳಿದ್ದಾನೆ. ಮಾರ್ಚ್ 30ರ ರಾತ್ರಿ ವೇಳೆಯಲ್ಲಿ ಮೈಸೂರಿನ (Mysuru) ಹೊರವಲಯದಲ್ಲಿ ಗಾಂಜಾ ಖರೀದಿಸಿ ವಿರಾಜಪೇಟೆ ನಗರಕ್ಕೆ ಆಗಮಿಸಿದ್ದಾನೆ. ಮಾರ್ಚ್ 31ರಂದು ಬೆಳಗ್ಗೆ 11 ಗಂಟೆಯ ವೇಳೆಗೆ ಆರೋಪಿಗಳು ತಮ್ಮ ಬಳಿಯಿದ್ದ ಗಾಂಜಾವನ್ನು ಮಾರಾಟ ಮಾಡಲು ವಿರಾಜಪೇಟೆಯ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದ ಮುಂಭಾಗದಲ್ಲಿ ಗಿರಾಕಿಗಳಿಗೆ ಹೊಂಚು ಹಾಕುತ್ತಿದ್ದರು. ಇದನ್ನೂ ಓದಿ: ಸಾಕುನಾಯಿಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ 60ರ ವ್ಯಕ್ತಿ

    ನಿಖರ ಮಾಹಿತಿಯ ಅನ್ವಯ ಪೊಲೀಸರು ಆರೋಪಿಗಳ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರ ಕೈಯಲ್ಲಿ ಮಾರಾಟಕ್ಕೆ ಸಿದ್ಧಗೊಂಡಿದ್ದ 1.222 ಕೆಜಿ ಗಾಂಜಾ ಮತ್ತು 770 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಗಾಂಜಾ ಸುಮಾರು 30 ಸಾವಿರ ರೂ. ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ 

    ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ 20/ಬಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

  • ಸಿನಿಮಾದಲ್ಲಿ ಚಾನ್ಸ್ ಕೊಡೋದಾಗಿ ಹೇಳಿ ವಂಚಿಸಿದ್ದ ಆರೋಪಿ ಬಂಧನ

    ಸಿನಿಮಾದಲ್ಲಿ ಚಾನ್ಸ್ ಕೊಡೋದಾಗಿ ಹೇಳಿ ವಂಚಿಸಿದ್ದ ಆರೋಪಿ ಬಂಧನ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಖತರ್ನಾಕ್ ನಯ ವಂಚಕನೊಬ್ಬನ ಬಂಧನವಾಗಿದೆ.

    ಸಿನಿಮಾ ಚಾನ್ಸ್ (Film Chance) ಕೊಡೋದಾಗಿ ಹೇಳಿ ವಂಚಿಸಿದ್ದ ಆರೋಪಿ ಧವನ್ ಸೋಹಾನನ್ನು ರಾಜಾಜಿನಗರ ಪೊಲೀಸರು (Rajajinagar Police) ಬಂಧಿಸಿದ್ದಾರೆ.

    ಧವನ್ ಬರೋಬ್ಬರಿ 58 ಮಂದಿಗೆ ವಂಚನೆ ಮಾಡಿದ್ದಾನೆ. ಪ್ರಖ್ಯಾತ ಸಿನಿಮಾ ನಟ-ನಟಿಯರ ಜೊತೆ ರೀಲ್ಸ್ ಮತ್ತೆ ಫೋಟೋ ತೆಗೆಸಿಕೊಳ್ತಾನೆ. ಈತನ ವಂಚನೆಗೆ ಫೋಟೋ, ವೀಡಿಯೋಸ್‍ಗಳನ್ನೆ ಬಂಡವಾಳ ಮಾಡಿಕೊಳ್ತಾ ಇದ್ದ. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ

    ಆಕ್ಟಿಂಗ್ ಕ್ಲಾಸ್ ಗಾಗಿ ಪ್ಲೆಮಿಂಗೋ ಸೆಲೆಬ್ರಿಟೀಸ್ ವಲ್ಡ್ ಎಂಬ ಇನ್ಸ್ ಟಿಟ್ಯೂಟ್ ತೆರೆದಿದ್ದ ಆರೋಪಿ ಧವನ್, ಸಿನಿಮಾದಲ್ಲಿ ನಟಿಸಬೇಕಂಬ ಹಂಬಲ ಇರುವವರನ್ನು ಟಾರ್ಗೆಟ್ ಮಾಡುತ್ತಿದ್ದ. ಪ್ರತಿಭಾವಂತ ಯುವಕ ಯುವತಿಯರನ್ನ ನಂಬಿಸಿ ವಂಚನೆ ಮಾಡುತ್ತಿದ್ದ.

    ಈ ಇನ್ಸ್ ಟ್ಯೂಟ್ ನಟನೆ ಕಲಿಯಲು ಬರುವವರಿಗೆ ವಂಚನೆ ಮಾಡಿದ್ದ. ಹೀಗೆ ಒಬ್ಬೊಬ್ಬರ ಬಳಿ 30 ರಿಂದ 50 ಸಾವಿರ ಪಡೆದು ವಂಚಿಸುತ್ತಿದ್ದ. ಇದೇ ರೀತಿ ಹಲವರಿಗೆ ಲಕ್ಷಾಂತರ ರೂಪಾಯಿ ವಂಚಿಸಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.

  • ಸಾಕುನಾಯಿಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ 60ರ ವ್ಯಕ್ತಿ

    ಸಾಕುನಾಯಿಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ 60ರ ವ್ಯಕ್ತಿ

    ಕೋಲ್ಕತ್ತಾ: 60 ವರ್ಷದ ವ್ಯಕ್ತಿಯೊಬ್ಬ ತನ್ನ ಮನೆಯ ಸಾಕು ನಾಯಿಯ (Pet Dog) ಮೇಲೆ 2 ವರ್ಷಗಳ ಕಾಲ ಅತ್ಯಾಚಾರ (Rape) ನಡೆಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ಆರೋಪಿಯನ್ನು ರತಿಕಾಂತ್ ಸರ್ದಾರ್ ಎಂದು ಗುರುತಿಸಲಾಗಿದೆ. ನಾಯಿ ಕೂಗುತ್ತಿದ್ದಂತೆ ಸ್ಥಳೀಯರು ಸರ್ದಾರ್ ಅನ್ನು ಅಮಲೇರಿದ ಮತ್ತು ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಗುರುತಿಸಿದ್ದಾರೆ. ಅದಾದ ಬಳಿಕ ರತಿಕಾಂತ್ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಕೃತ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಈ ಬಗ್ಗೆ ಸ್ಥಳೀಯನೊಬ್ಬ ಮಾತನಾಡಿ, ಸರ್ದಾರ್ ಸುಮಾರು 2 ವರ್ಷಗಳಿಂದ ತನ್ನ ಸಾಕು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ನಾಯಿಯನ್ನು ಬಿಡುಗಡೆ ಮಾಡುವಂತೆ ಮತ್ತು ಅಂತಹ ಕೃತ್ಯದಿಂದ ದೂರವಿರುವಂತೆ ಪದೇ ಪದೇ ಕೇಳಿಕೊಂಡಿದ್ದೆವು. ಆದರೆ ಆತ ಮಾತನ್ನು ಕೇಳಲು ನಿರಾಕರಿಸುತ್ತಿದ್ದ ಎಂದು ಹೇಳಿದರು.

    ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯರು ಹರಿಬಿಟ್ಟಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಣಿ ಪ್ರೇಮಿಗಳ ಸಂಘಟನೆಯ ಸದಸ್ಯರೊಬ್ಬರು ಸೋನಾರ್‌ಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರತಿಕಾಂತ್ ಸರ್ದಾರ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ಈ ಬಗ್ಗೆ ಮಾತನಾಡಿದ ಪ್ರಾಣಿ ಸಂರಕ್ಷಣಾ ಸಂಘಟನೆಯ ಸದಸ್ಯರು, ಈ ವಿಡಿಯೋವನ್ನು ಸ್ಥಳೀಯರು ಒಂದು ವರ್ಷದ ಹಿಂದೆ ಚಿತ್ರೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಅವರಿಗೆ ಪ್ರಾಣಿ ಸಂರಕ್ಷಣಾ ಕಾಯಿದೆಗಳ ಬಗ್ಗೆ ತಿಳಿದಿರಲಿಲ್ಲ, ಹೀಗಾಗಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊನೆ ಗಳಿಗೆ ಕಸರತ್ತಿನಲ್ಲಿ ಸಿದ್ದರಾಮಯ್ಯ, ಡಿಕೆಶಿ ಆಟ- 45 ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಲು ಪಟ್ಟು

  • ಅಕ್ರಮ ಗಾಂಜಾ ಮಾರಾಟ- ಮೂವರು ಅರೋಪಿಗಳ ಬಂಧನ

    ಅಕ್ರಮ ಗಾಂಜಾ ಮಾರಾಟ- ಮೂವರು ಅರೋಪಿಗಳ ಬಂಧನ

    ಮಡಿಕೇರಿ: ಅಕ್ರಮವಾಗಿ ಗಾಂಜಾ (Drugs) ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.

    ಕೊಡಗು ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ನಾಪೋಕ್ಲು ವ್ಯಾಪ್ತಿಯ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಅಸ್ಸಾಂ (Assam) ಮೂಲದ ಸೈಫುಲ್ ಇಸ್ಲಾಂ, ಅನಾರ್ ಹುಸೇನ್, ಜಹೀರ್ ಅಲಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಚರಂಡಿ ಮೂಲಕ 10 ಅಡಿ ಸುರಂಗ ಕೊರೆದು ಜ್ಯುವೆಲರಿ ಅಂಗಡಿಗೆ ಕನ್ನ 

    ನಾಪೋಕ್ಲು ಠಾಣಾ ಸರಹದ್ದಿನ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ನಾಪೋಕ್ಲು ಠಾಣಾ ಪಿಎಸ್‌ಐ ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಅಲ್ಲದೇ ಅರೋಪಿಗಳನ್ನು ಬಂಧಿಸಿ 2.150 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಕೊಡಗು ಎಸ್.ಪಿ ರಾಜರಾಜನ್ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು

  • Breaking- ಬಂಧಿತನಾಗಿದ್ದ ನಟ ಚೇತನ್ ಗೆ ಜಾಮೀನು

    Breaking- ಬಂಧಿತನಾಗಿದ್ದ ನಟ ಚೇತನ್ ಗೆ ಜಾಮೀನು

    ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ನಟ ಚೇತನ್ ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.  ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಅವರು ಆದೇಶಿಸಿದ್ದಾರೆ. ಶಿವಕುಮಾರ್ ನೀಡಿದ್ದ ದೂರಿನ ಮೇಲೆ ಚೇತನ್ ಬಂಧನವಾಗಿತ್ತು.

    ಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಎರಡು ದಿನಗಳ ಹಿಂದೆ ನಟ ಚೇತನ್ ನನ್ನು (Chetan) ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟಿಗೂ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು  ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.  ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾನ್ಯ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತ್ತು. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

    ಚೇತನ್ ಅವರು ಉರಿಗೌಡ (Urigowda), ನಂಜೇಗೌಡ (Nanjegowda) ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು.

  • ಉರಿ-ನಂಜೇಗೌಡ ಟ್ವೀಟ್ ಪ್ರಕರಣ : 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

    ಉರಿ-ನಂಜೇಗೌಡ ಟ್ವೀಟ್ ಪ್ರಕರಣ : 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

    ಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ನನ್ನು (Chetan) ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟಿಗೂ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು  ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾನ್ಯ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

    ಚೇತನ್ ಅವರು ಉರಿಗೌಡ (Urigowda), ನಂಜೇಗೌಡ (Nanjegowda) ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು.

  • ಒಂಟಿ ಮನೆಗೆ ನುಗ್ಗಿ ಡಕಾಯಿತಿ ಮಾಡಿದ್ದ ರೌಡಿ ಗ್ಯಾಂಗ್ ಅರೆಸ್ಟ್

    ಒಂಟಿ ಮನೆಗೆ ನುಗ್ಗಿ ಡಕಾಯಿತಿ ಮಾಡಿದ್ದ ರೌಡಿ ಗ್ಯಾಂಗ್ ಅರೆಸ್ಟ್

    ಬೆಂಗಳೂರು: ಒಂಟಿ ಮನೆ ಟಾರ್ಗೆಟ್ ಮಾಡಿ ಡಕಾಯಿತಿ ಮಾಡಿದ್ದ ರೌಡಿ ಗ್ಯಾಂಗ್ ಬೆಂಗಳೂರಿನ (Bengaluru) ಸೋಲದೇವನಹಳ್ಳಿ ಪೊಲೀಸರ ಬಲೆಗೆ ಬಿದ್ದಿದೆ.

    ಮೂವರು ರೌಡಿ ಶೀಟರ್‌ಗಳು ಪ್ಲ್ಯಾನ್ ಮಾಡಿ ಡಕಾಯಿತಿ ಮಾಡಿಸಿದ್ದರು. ಸದ್ಯ ಮೂವರು ರೌಡಿಗಳು ಸೇರಿದಂತೆ 8 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನಾಲ್ವರು ವಾಸವಿದ್ದ ಒಂದು ಮನೆಗೆ ನುಗ್ಗಿದ್ದ ಆರೋಪಿಗಳು, ಬಾಗಿಲು ತೆಗೆದ ತಕ್ಷಣ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆಯುತ್ತಿದ್ದರು. ಅಷ್ಟೇ ಅಲ್ಲದೇ ಮನೆಯಲ್ಲಿದ್ದವರ ಕೈ ಕಾಲು ಕಟ್ಟಿ ಹಾಕಿದ್ದರು. ವಿರೋಧ ಒಡ್ಡಿದ್ದ ಓರ್ವ ವ್ಯಕ್ತಿಗೆ ಆ ಗುಂಪು ಮಚ್ಚಿನಿಂದ ಹಲ್ಲೆ ಕೂಡ ಮಾಡಿತ್ತು. ಅದಾದ ಬಳಿಕ ಮನೆಯಲ್ಲಿ ಇದ್ದ ಹಣ ಮತ್ತು ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದರು. ಇದನ್ನೂ ಓದಿ: ನಾಳೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿಕೆಶಿ

    ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಪೊಲೀಸರು, ರೌಡಿ ಶೀಟರ್‌ಗಳಾದ ನಿತಿನ್ ಅಲಿಯಾಸ್ ಲೊಡ್ಡೆ, ಕಿಶನ್, ಶಿವರಾಜ್ ಅಲಿಯಾಸ್ ರಾಜ ಉರುಫ್ ಶಿವ ಸೇರಿದಂತೆ 8 ಆರೋಪಿಗಳನ್ನು ಅರೆಸ್ಟ್ (Arrest) ಮಾಡಿದ್ದಾರೆ. ಕಟ್ಟಡ ನಿರ್ಮಾಣ ಮಾಡುವ ಮೇಸ್ತ್ರಿಗಳು ವಾಸ ಮಾಡುತ್ತಿದ್ದ ಮನೆಯಲ್ಲಿ ದರೋಡೆ ಮಾಡಿದ್ದ ಅವರು, ಸದ್ಯ ಜೈಲು ಕಂಬಿ ಎಣಿಸುತ್ತಿದ್ದಾರೆ. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ

  • Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್:  ನಟ ಚೇತನ್ ಬಂಧನ

    Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ

    ಟ, ಸಾಮಾಜಿಕ ಹೋರಾಟಗಾರ ಚೇತನ್ (Chetan) ಬಂಧನವಾಗಿದೆ. ಉರಿಗೌಡ (Urigowda) ನಂಜೇಗೌಡ (Nanjegowda) ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

  • ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಕತ್ತು ಸೀಳಿ ಹತ್ಯೆ – 24 ಗಂಟೆಯಲ್ಲಿ ಚಾಲಕನ ಬಂಧನ

    ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಕತ್ತು ಸೀಳಿ ಹತ್ಯೆ – 24 ಗಂಟೆಯಲ್ಲಿ ಚಾಲಕನ ಬಂಧನ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಹೈದರಾಬಾದ್‍ನ ವೈದ್ಯನನ್ನು (Doctor) ಮನೆಯೊಳಗೆ ಆತನ ಚಾಲಕ ಕತ್ತು (Throat) ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ 24 ಗಂಟೆಯೋಳಗೆ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

    ಮೃತನನ್ನು ಧರಮ್ ದೇವ್ ರಾಠಿ ಎಂದು ಗುರುತಿಸಲಾಗಿದೆ. ಪಾಕಿಸ್ತಾನದ ಹೈದರಾಬಾದ್‍ನ ವೈದ್ಯನಾಗಿದ್ದ ಧರಮ್ ಠಾಟಿ ಬಳಿ ಹನೀಫ್ ಲೆಘರಿ ಎಂಬಾತ ಚಾಲಕನಾಗಿ (Driver) ಕೆಲಸ ಮಾಡುತ್ತಿದ್ದ. ಆದರೆ ಮನೆಗೆ ಹೋಗುವಾಗ ಧರಮ್ ದೇವ್ ಹಾಗೂ ಹನೀಫ್ ಮಧ್ಯೆ ಜಗಳ ನಡೆದಿತ್ತು.

    ಈ ವೇಳೆ ಮನೆಗೆ ತಲುಪಿದ ನಂತರ ಹನೀಫ್ ಅಡುಗೆ ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ವೈದ್ಯ ಧರಮ್ ರಾಠಿಯ ಕತ್ತು ಸೀಳಿ, ಹತ್ಯೆ ಮಾಡಿದ್ದಾನೆ. ನಂತರ ಹನೀಫ್ ಸ್ಥಳದಿಂದ ವೈದ್ಯರ ಕಾರಿನಲ್ಲೇ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ

    ಹೈದರಾಬಾದ್ ಪ್ರದೇಶದಲ್ಲಿ ಪ್ರಸಿದ್ಧ ಚರ್ಮರೋಗ ವೈದ್ಯನಾಗಿದ್ದ ಡಾ. ಧರಮ್ ದೇವ್ ರಾಠಿ ಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ಚಾಲಕನನ್ನು ಖೈರ್‌ಪುರದ ಆತನ ಮನೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

  • 5,000 ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್‌ನಲ್ಲಿ ಕಿಡಿಗೇಡಿಗಳ ಬಂಧನ ಪ್ರಾರಂಭ

    5,000 ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್‌ನಲ್ಲಿ ಕಿಡಿಗೇಡಿಗಳ ಬಂಧನ ಪ್ರಾರಂಭ

    ಟೆಹ್ರಾನ್: ಕಳೆದ ವರ್ಷ ನವೆಂಬರ್‌ನಿಂದ ಇರಾನ್‌ನಲ್ಲಿ (Iran) ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು. ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿಗಳು (Students) ವಿಷಪ್ರಾಶನಕ್ಕೊಳಗಾಗಿ (Poisoning) ಅಸ್ವಸ್ಥರಾದ ಬಳಿಕ ಇದೀಗ ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ.

    ಇರಾನ್‌ನ ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ವರದಿಗಳ ಪ್ರಕಾರ, ಇರಾನ್‌ನ ಉಪ ಆಂತರಿಕ ಸಚಿವ ಮಜಿದ್ ಮಿರಹ್ಮಾಡಿ, ಗುಪ್ತಚರ ಸಂಸ್ಥೆಗಳು ಆರೋಪಿಗಳ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ. ಸಂಬಂಧಿತ ಏಜೆನ್ಸಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

    ಖುಜೆಸ್ತಾನ್, ಪಶ್ಚಿಮ ಅಜೆರ್ಬೈಜಾನ್, ಫಾರ್ಸ್, ಕೆರ್ಮಾನ್ಶಾ, ಖೊರಾಸನ್ ಹಾಗೂ ಅಲ್ಬೋರ್ಜ್ ಪ್ರದೇಶಗಳಲ್ಲಿ ಹಲವರ ಬಂಧನವಾಗಿದೆ. ನವೆಂಬರ್‌ನಲ್ಲಿ ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಮಹ್ಸಾ ಅಮಿನಿ ಎಂಬ ಯುವತಿ ಬಂಧನವಾಗಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಳು. ಈ ಸಾವಿನ ಬಳಿಕ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದು, ಹಲವರು ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿದೆ.

    ಕಳೆದ ವರ್ಷ ನವೆಂಬರ್ ಅಂತ್ಯದ ವೇಳೆಗೆ ಇರಾನ್‌ನ ಶಿಯಾ ಮುಸ್ಲಿಂ ನಗರವಾದ ಕೋಮ್‌ನಲ್ಲಿ ಮೊದಲ ಬಾರಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿರುವ ಘಟನೆ ವರದಿಯಾಗಿತ್ತು. ಪ್ರಾರಂಭದಲ್ಲಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿಲ್ಲ, ಇದು ಆಕಸ್ಮಿಕ ಎಂದು ಹೇಳಲಾಯಿತಾದರೂ ಬಳಿಕ ಇಂತಹುದೇ ಘಟನೆ ದೇಶದೆಲ್ಲೆಡೆ ವರದಿಯಾಗುತ್ತಲೇ ಹೋಯಿತು. ಇದರಿಂದ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ತಡೆಯಲು ಈ ಕೃತ್ಯ ಮಾಡಲಾಗುತ್ತಿದೆ ಎಂಬುದು ಬಯಲಿಗೆ ಬಂದಿತು. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ಇರಾನ್‌ನ 31 ಪ್ರಾಂತ್ಯಗಳ ಪೈಕಿ 25 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿರುವ ಪ್ರಕರಣ ವರದಿಯಾಗಿದೆ. ಸುಮಾರು 230 ಶಾಲೆಗಳಲ್ಲಿ 5,000 ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಷ ಸೇವಿಸಿದ ವಿದ್ಯಾರ್ಥಿನಿಯರಲ್ಲಿ ಯಾರೂ ಇಲ್ಲಿಯವರೆಗೆ ಸಾವನ್ನಪ್ಪಿಲ್ಲ. ಆದರೆ ಅವರಲ್ಲಿ ಉಸಿರಾಟದ ತೊಂದರೆ, ವಾಕರಿಕೆ, ತಲೆತಿರುಗುವಿಕೆಗಳಂತಹ ಸಮಸ್ಯೆಗಳು ಕಂಡುಬಂದಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್