Tag: arrest

  • ಅತ್ಯಾಚಾರದ ಆರೋಪದ ಮೇಲೆ ಬಂಧಿಯಾಗಿದ್ದ ಯುವಕ ಜೈಲಿನಲ್ಲೇ ನೇಣಿಗೆ ಶರಣು

    ಅತ್ಯಾಚಾರದ ಆರೋಪದ ಮೇಲೆ ಬಂಧಿಯಾಗಿದ್ದ ಯುವಕ ಜೈಲಿನಲ್ಲೇ ನೇಣಿಗೆ ಶರಣು

    ಮುಂಬೈ: ಅಪ್ರಾಪ್ತ ಬಾಲಕಿಯ (Girl) ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿತನಾಗಿದ್ದ (Arrest) ಯುವಕನೋರ್ವ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿ (Jail) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಕರಣ್ ಪ್ರಮೋದ್ ಸೆರಿಯನ್ (19) ಮೃತ ಆರೋಪಿ. ಕರಣ್ ವಿರುದ್ಧ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಆತ ಸೆ. 26ರಿಂದ ಜೈಲಿನಲ್ಲಿದ್ದ. ಆದರೆ ಆತ ಬ್ಯಾರಕ್‍ನಲ್ಲಿ ತನ್ನ ಪ್ಯಾಂಟ್ ಬಳಸಿ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

    ಇದನ್ನು ಗಮನಿಸಿದ ಇತರ ಕೈದಿಗಳು ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೈಲು ಅಧಿಕಾರಿಗಳು ಕೂಡಲೇ ಕರಣ್‍ಪ್ರಮೋದ್‍ನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಕರಣ್ ಪ್ರಮೋದ್ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

    ಘಟನೆಯೇನು?: ಕರಣ್ ಪ್ರಮೋದ್ ಸಾಮಾಜಿಕ ಜಾಲತಾಣದಲ್ಲಿ ಭೇಟಿಯಾದ 16 ವರ್ಷದ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರು ಓಡಿ ಹೋಗಿ ಥಾಣೆಯ ಮುಂಬ್ರಾದಲ್ಲಿ ಇಬ್ಬರು ವಾಸಿಸುತ್ತಿದ್ದರು. ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಕರಣ್ ಪ್ರಮೋದ್ ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಜಲ ಆಯೋಗ ಅನುಮತಿ: ಪ್ರಹ್ಲಾದ್ ಜೋಶಿ ಮಾಹಿತಿ

    ಆದರೆ ಬಾಲಕಿಯ ಪೋಷಕರು ಇದನ್ನು ವಿರೋಧಿಸಿ ಕರಣ್ ಪ್ರಮೋದ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದರು. ಆದರೆ ಇದರಿಂದ ಮನನೊಂದು ಕರಣ್ ಪ್ರಮೋದ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ದಲಿತರಲ್ಲಿ ಒಗ್ಗಟ್ಟು ಮೂಡಬಾರದು ಅನ್ನೋ ಭಾವನೆ ಬಿಜೆಪಿಯದ್ದು: ಧರ್ಮಸೇನಾ ಕಿಡಿ

    Live Tv
    [brid partner=56869869 player=32851 video=960834 autoplay=true]

  • 4ರ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿದ್ದ ಕಾಮುಕ ಅರೆಸ್ಟ್

    4ರ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿದ್ದ ಕಾಮುಕ ಅರೆಸ್ಟ್

    ನವದೆಹಲಿ: ನಾಲ್ಕು ವರ್ಷದ ಬಾಲಕಿಯನ್ನು (Girl) ಅಪಹರಿಸಿ (Kidnap) ಅತ್ಯಾಚಾರ ಮಾಡಿ ಪಾರ್ಕ್ ಬಳಿ ಬಿಟ್ಟು ಹೋಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest).

    ಆರೋಪಿಯನ್ನು ಅನಿಲ್ ಪಾಠಕ್ ಎಂದು ಗುರುತಿಸಲಾಗಿದೆ. ಹಿಂದಿನ ವಾರ ಹೊರ ಉತ್ತರ ದೆಹಲಿಯ ಭಾಲ್ಸ್ವಾ ಡೈರಿ ಪ್ರದೇಶದಲ್ಲಿ ಈತ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿ ನಂತರ ಪಾರ್ಕ್‍ನಲ್ಲಿ ಬಿಟ್ಟುಹೋಗಿದ್ದ ಎಂಬ ವಿಷಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

    ಘಟನೆಯೇನು?: ದಿನಗೂಲಿ ಕಾರ್ಮಿಕನ ಮಗಳು ಮನೆಯ ಹೊರಗೆ ಆಟವಾಡುತ್ತಿದ್ದಾಗ ಅನಿಲ್ ಪಾಠಕ್ ಎಂಬಾತ ಕಿಡ್ನ್ಯಾಪ್ ಮಾಡಿದ್ದ. ಇತ್ತ ರಾತ್ರಿಯಾದರೂ ಮಗಳು ಕಾಣದೇ ಇದ್ದಕ್ಕೆ ಗಾಬರಿಗೊಂಡ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

    ಪೊಲೀಸರು ಪ್ರಕರಣವನ್ನು ಗಂಭೀರವಾಗಿ ರಾತ್ರಿಯಿಡೀ 3 ತಂಡಗಳಾಗಿ ಬಾಲಕಿಯನ್ನು ಹುಡುಕಿದ್ದಾರೆ. ಆದರೆ ಬೆಳಗಿನ ಜಾವ ಬಾಲಕಿಯು ಪಾರ್ಕ್‍ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಬಾಲಕಿಯು ಪರೀಕ್ಷಿಸಿದಾಗ ಆಕೆಯ ಮೇಲೆ ಅತ್ಯಾಚಾರವೆಸಗಿರುವುದು ದೃಢವಾಗಿತ್ತು. ಇದನ್ನೂ ಓದಿ: ಶೀಘ್ರವೇ 2ನೇ ಬೂಸ್ಟರ್ ಡೋಸ್? – ಕೇಂದ್ರ ಆರೋಗ್ಯ ಸಚಿವರಿಗೆ ವೈದ್ಯಾಧಿಕಾರಿಗಳ ಡಿಮಾಂಡ್

    ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಪೊಲೀಸರಿಗೆ ಸಿಸಿಟಿವಿ (CCTV) ಕ್ಯಾಮರಾದಲ್ಲಿ ಆರೋಪಿ ಅನಿಲ್ ಪಾಠಕ್ ಬಾಲಕಿಯನ್ನು ತನ್ನ ತೋಳುಗಳಲ್ಲಿ ಹೊತ್ತೊಯ್ಯುತ್ತಿರುವುದು ಪತ್ತೆ ಆಗಿದೆ. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಆರೋಪಿ ಅನಿಲ್ ಪಾಠಕ್‍ನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಇದನ್ನೂ ಓದಿ: ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಐವರ ಬಂಧನ

    ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಐವರ ಬಂಧನ

    ಪಾಟ್ನಾ: ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದ ಐವರನ್ನು ಬಿಹಾರದ (Bihar) ಅರ್ರಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

    ಭೋಜ್‍ಪುರದ ಚಾಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬ್ಯಾಡ್ಮಿಟನ್ ಆಟದ ನಂತರ ಗುಂಪೊಂದು ವಿಜಯೋತ್ಸವವನ್ನು ಆಚರಿಸಿದ್ದರು. ಈ ವೇಳೆ ಆ ತಂಡ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ (Slogan) ಕೂಗಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ವೀಡಿಯೋದಲ್ಲಿ ಏನಿದೆ?: ವಿಜಯೋತ್ಸವದ ಮೆರವಣಿಗೆಯಲ್ಲಿ ಇಬ್ಬರು ಟ್ರೋಫಿಯನ್ನು ಕೈಯಲ್ಲಿ ಹಿಡಿದಿದ್ದಾರೆ. ಯುವಕರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದ್ದಾರೆ. ಇದನ್ನೂ ಓದಿ: ನಿಖರವಾಗಿ ಹೇಳುವುದು ಕಷ್ಟ, ಆದರೆ ಸೇತುವೆ ರೂಪದ ರಚನೆ ಇದೆ – ರಾಮ ಸೇತು ಬಗ್ಗೆ ಕೇಂದ್ರ ಉತ್ತರ

    ಘಟನೆಗೆ ಸಂಬಂಧಿಸಿ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಮಾತನಾಡಿ, ನಾವು ಈ ವಿಷಯದಲ್ಲಿ ಐದು ಜನರನ್ನು ಬಂಧಿಸಿದ್ದೇವೆ. ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮಗಳ ಕನಸನ್ನು ನನಸಾಗಿಸಲು ಹೊರಟ ದಂಪತಿ- ಮಹಿಳೆಯನ್ನು ಕೊಲೆ ಮಾಡಿ, ಮಗುವನ್ನು ಅಪಹರಿಸಿದ್ರು

    Live Tv
    [brid partner=56869869 player=32851 video=960834 autoplay=true]

  • ಉರ್ಫಿ ಜಾವೇದ್ ಗೆ ಅತ್ಯಾಚಾರ, ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

    ಉರ್ಫಿ ಜಾವೇದ್ ಗೆ ಅತ್ಯಾಚಾರ, ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

    ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಉರ್ಫಿ ಜಾವೇದ್ (Urfi Javed) ಅವರಿಗೆ ಅತ್ಯಾಚಾರ ಮತ್ತು ಕೊಲೆ (Murder) ಬೆದರಿಕೆ ಹಾಕಿದ್ದ ಆರೋಪಿಯನ್ನು ಗೋರೆಗಾಂವ್ (Goregaon) ಪೊಲೀಸರು ಇಂದು ಬಂಧಿಸಿದ್ದಾರೆ. ವಾಟ್ಸ್ ಆಪ್ ಮೂಲಕ ಈ ನವೀನ್ ಗಿರಿ (Naveen Giri) ಎನ್ನುವ ವ್ಯಕ್ತಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ ಎಂದು ಹೇಳಲಾಗುತ್ತಿದೆ. ಈತನನ್ನು ಸೆಕ್ಷನ್ 354, 509, 506 ಹಾಗೂ 354 (ಡಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

    ಮೊನ್ನೆಯಷ್ಟೇ ಉರ್ಫಿ ಜಾವೇದ್ ಅವರನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಸಾರ್ವಜನಿಕವಾಗಿ ಅಶ್ಲೀಲ ಉಡುಪಿನಲ್ಲಿ ದುಬೈನಲ್ಲಿ ಅವರು ಚಿತ್ರೀಕರಣ ಮಾಡುತ್ತಿದ್ದಾಗ ಯುಎಇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದು ದೃಢವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ ಉರ್ಫಿಯು ಸಾರ್ವಜನಿಕವಾಗಿ ಅರೆಬರೆ ಬಟ್ಟೆಯನ್ನು ಹಾಕಿಕೊಂಡಿದ್ದರು ಎಂದಿದ್ದಾರೆ ದುಬೈ ಪೊಲೀಸರು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಈ ವಿಚಾರವಾಗಿ ಮಾಧ್ಯಮಗಳು ಉರ್ಫಿಯನ್ನು ಸಂಪರ್ಕಿಸಿದರೂ, ಈ ಕುರಿತು ಅವರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ದುಬೈನಲ್ಲಿ ಈ ರೀತಿಯ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಚಿತ್ರೀಕರಣ ಮಾಡಲು ಅವಕಾಶವಿಲ್ಲದ ಕಾರಣ ಈ ರೀತಿಯಲ್ಲಿ ಅವರು ಸಂಕಷ್ಟ ಎದುರಿಸಬೇಕಾಗಿದೆ. ಸದ್ಯ ಉರ್ಫಿ ಪೊಲೀಸರ ವಶದಲ್ಲಿ ಇದ್ದು, ಅಲ್ಲಿನ ಕಾನೂನಿಗೆ ತಲೆಬಾಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

    ನಿನ್ನೆಯಷ್ಟೇ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಆಸ್ಪತ್ರೆಯ ಬೆಡ್ ಮೇಲಿಂದಲೇ ತೆಗೆದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ತಮಗಿರುವ ಸಮಸ್ಯೆ ಬಗ್ಗೆಯೂ ಅವರು ಹೇಳಿಕೊಂಡಿದ್ದರು ಅದರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರು. ದುಬೈನಲ್ಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ.

    ಇತ್ತೀಚಿನ ದಿನಗಳಲ್ಲಿ ಉರ್ಫಿ ಜಾವೇದ್ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಚಿತ್ರ ವಿಚಿತ್ರ ಬಟ್ಟೆ ಹಾಕುವ ಕಾರಣದಿಂದಾಗಿಯೇ ಅವರ ಮೇಲೆ ದೂರನ್ನು ನೀಡಿದ್ದಾರೆ. ಕೆಲ ಪ್ರಕರಣಗಳು ಅವರನ್ನು ಬೆನ್ನತ್ತಿ ಕಾಡುತ್ತಿವೆ. ಇವುಗಳಿಂದ ತಪ್ಪಿಸಿಕೊಳ್ಳಲು ಅವರು ಆಸ್ಪತ್ರೆಯ ನಾಟಕ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಸ್ವತಃ ಉರ್ಫಿ ಅವರೇ ಹೇಳಿರುವಂತೆ ಅವರಿಗೆ ‘ಲಾರಿಂಜೈಟಿಸ್’ ತೊಂದರೆ ಆಗಿದೆಯಂತೆ.

     

    ಮನುಷ್ಯನ ಧ್ವನಿ ಪೆಟ್ಟಿಗೆಗೆ ತಗಲುವ ಸೋಂಕಿಗೆ ಲಾರಿಂಜೈಟಿಸ್ ಎಂದು ಕರೆಯುತ್ತಾರೆ. ಉರ್ಫಿಯ ಗಂಟಲಿಗೆ ಈ ಸೋಂಕು ತಗುಲಿದಿಯಂತೆ. ಅಷ್ಟಕ್ಕೆ ಭಯ ಪಟ್ಟುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಿಕಿತ್ಸೆಯನ್ನೂ ಅವರು ಪಡೆದಿದ್ದಾರೆ. ಆಸ್ಪತ್ರೆಯಲ್ಲಿ ಇರುವಾಗಲೇ ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಕ್ಕಾಗಿ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ನೇಹಿತರನ್ನು ಮೆಚ್ಚಿಸಲು ಪಾರ್ಟಿಗೆ ಗನ್ ತೆಗೆದುಕೊಂಡು ಹೋದ ವ್ಯಕ್ತಿ ಪೊಲೀಸರಿಗೆ ಅತಿಥಿಯಾದ

    ಸ್ನೇಹಿತರನ್ನು ಮೆಚ್ಚಿಸಲು ಪಾರ್ಟಿಗೆ ಗನ್ ತೆಗೆದುಕೊಂಡು ಹೋದ ವ್ಯಕ್ತಿ ಪೊಲೀಸರಿಗೆ ಅತಿಥಿಯಾದ

    ನವದೆಹಲಿ: ಸ್ನೇಹಿತರನ್ನು (Friends) ಮೆಚ್ಚಿಸಲು ವ್ಯಕ್ತಿಯೊಬ್ಬ ತನ್ನ ತಂದೆಯ (Father) ಲೋಡ್ ಮಾಡಿದ್ದ ಗನ್ ಅನ್ನು ಪಾರ್ಟಿಗೆ (Party) ತೆಗೆದುಕೊಂಡು ಹೋಗಿ ಪೊಲೀಸರಿಗೆ ಅತಿಥಿಯಾದ ಘಟನೆ ಉತ್ತರ ದೆಹಲಿಯ ರೂಪ್ ನಗರ ಪ್ರದೇಶದಲ್ಲಿ ನಡೆದಿದೆ.

    ಆರೋಪಿಯನ್ನು ಮೌಜ್‍ಪುರ ನಿವಾಸಿ ಹರ್ಷ (22) ಎಂದು ಗುರುತಿಸಲಾಗಿದೆ. ಹರ್ಷ ತನ್ನ ತಂದೆಯ ಬಳಿ ಇದ್ದ ಗನ್ ಅನ್ನು ಕದ್ದು ತನ್ನ ಸ್ನೇಹಿತರನ್ನು ಮೆಚ್ಚಿಸಲು ಅದರೊಂದಿಗೆ ಪಾರ್ಟಿಗೆ ಹೋಗಿದ್ದ. ಈ ವೇಳೆ ಹರ್ಷ ಗನ್ ಅನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಕೆಲವರು ಗಮನಿಸಿ, ಪೊಲೀಸರಿಗೆ ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹರ್ಷನನ್ನು ಬಂಧಿಸಿದ್ದಾರೆ. ಆತನ ಬಳಿಯಿದ್ದ ಗನ್ ಅನ್ನು ವಶಪಡಿಸಿಕೊಂಡಿದ್ದಾರೆ. ಹರ್ಷ ತನ್ನ ಮನೆಯಲ್ಲಿದ್ದ ಗನ್ ಕದ್ದು ತನ್ನ ಸ್ನೇಹಿತರೊಂದಿಗೆ ಶಕ್ತಿ ನಗರದಲ್ಲಿ ಪಾರ್ಟಿಗೆ ಬಂದಿದ್ದ. ಅದಾದ ಬಳಿಕ ಅವರು ಮನೆಗೆ ತೆರಳುತ್ತಿದ್ದಾಗ ಕೆಲವರು ಗಮನಿಸಿ ತಿಳಿಸಿದ್ದಾರೆ ಎಂದು ಎಂದು ಡಿಸಿಪಿ ಹೇಳಿದರು. ಇದನ್ನೂ ಓದಿ: ಇನ್ಮುಂದೆ ಅಫ್ಘಾನ್‌ ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣಕ್ಕೂ ಅವಕಾಶವಿಲ್ಲ

    ಹರ್ಷನ ತಂದೆ ಸಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಆತ ಗನ್ ಅನ್ನು ಇಟ್ಟುಕೊಂಡಿದ್ದ. ಘಟನೆಗೆ ಸಂಬಂಧಿಸಿ ಹರ್ಷನ ವಿರುದ್ಧ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. (Arrest) ಇದನ್ನೂ ಓದಿ: ಆಸ್ಪತ್ರೆಗೆ ಹೋಗೋ ದಾರಿಯಲ್ಲಿ ಗಾಯಾಳುಗೆ ಮದ್ಯ ನೀಡಿ, ತಾನೂ ಕುಡಿದ ಅಂಬುಲೆನ್ಸ್ ಚಾಲಕ

    Live Tv
    [brid partner=56869869 player=32851 video=960834 autoplay=true]

  • 16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್

    16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್

    ಮುಂಬೈ: ಬಾಲಕಿಯ ಮೇಲೆ 8 ಕಾಮುಕರು ಸೇರಿ ಸತತ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ನಡೆದಿದೆ.

    16 ವರ್ಷದ ಬಾಲಕಿಗೆ (Girl) ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಮಾರನೇ ದಿನದ ಬೆಳಗ್ಗಿನವರೆಗೂ ಅತ್ಯಾಚಾರ ಎಸಗಿದ್ದಾರೆ. ಆಕೆಯನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲೂ ಅತ್ಯಾಚಾರವೆಸಗಿದ್ದಾರೆ. ಅದಾದ ಬಳಿಕ ಪೊದೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಘಟನೆಗೆ ಸಂಬಂಧಿಸಿ ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಡಿ. 16 ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 11 ಗಂಟೆಯವರೆಗೂ ಅತ್ಯಾಚಾರವೆಸಗಿರುವ ಬಗ್ಗೆ ಬಾಲಕಿ ತಿಳಿಸಿದ್ದಾಳೆ. ಇದನ್ನೂ ಓದಿ: 3 ಮದುವೆಯಾದ್ರೂ ಅಪ್ರಾಪ್ತೆ ಜೊತೆ ಎಸ್ಕೇಪ್ ಆದ ಆಟೋ ಚಾಲಕ

    ಘಟನೆಗೆ ಸಂಬಂಧಿಸಿ ಬಾಲಕಿಯ ದೂರಿನ ಮೇರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ (Arrest) ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಟ್ಟ ಮಂಜಿನಿಂದ ಕಾಣದಂತಾದ ರಸ್ತೆ – ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ

    Live Tv
    [brid partner=56869869 player=32851 video=960834 autoplay=true]

  • ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ – ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಅರೆಸ್ಟ್

    ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ – ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಅರೆಸ್ಟ್

    ಮೈಸೂರು: ಅಧಿಕಾರಿಗಳು ಬಾಡಿಗೆ ಕೇಳಿದ್ದೆ ಮಹಾ ಅಪರಾಧವೆಂಬಂತೆ ಮಹಿಳೆಯೊಬ್ಬರು ಮಚ್ಚು ಹಿಡಿದು ಸರ್ಕಾರಿ ಅಧಿಕಾರಿಗಳಿಗೆ ಹಲ್ಲೆ ಮಾಡಲು ಮುಂದಾಗಿದ್ದು ದೊಡ್ಡ ಸುದ್ದಿಯಾಗಿತ್ತು. ಹೀಗೆ ಮಚ್ಚು ತೋರಿಸಿ ಬೆದರಿಸಿದ ಮಹಿಳೆ ಹಾಗೂ ಆಕೆ ಪತಿ ಇಬ್ಬರು ಈಗ ಜೈಲು ಸೇರಿದ್ದಾರೆ.

    ಮೈಸೂರಿನ (Mysuru) ಕಾಂಗ್ರೆಸ್ ಮುಖಂಡ ಶಫಿ ಪತ್ನಿ ಸಯ್ಯದ್ ಮೈಬುನಿಸಾ ಅವರನ್ನು ಮೈಸೂರಿನ ಪೊಲೀಸರು ಕೊಡಗಿನ (Kodagu) ವಿರಾಜಪೇಟೆಯಲ್ಲಿ (Virajpet) ಬಂಧಿಸಿದ್ದಾರೆ. ಜೊತೆಗೆ ರೌಡಿಶೀಟರ್ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ಅಧಿಕಾರಿಗೆ ಹಲ್ಲೆ ನಡೆಸಲು ಮಚ್ಚು ಹಿಡಿದು ಬಂದ ಮಹಿಳೆ

    ಮೈಸೂರಿನ ಸಾತಗಳ್ಳಿಯ ಬಸ್ ಡಿಪೋ ಬಳಿ ಅಧಿಕಾರಿಗಳ ವಿರುದ್ಧ ಮಹಿಳೆ ಕೂಗಾಡಿದ್ದರು. ಅಧಿಕಾರಿಗಳು ಬಾಕಿ ಇದ್ದ ಬಾಡಿಗೆ ಹಣ ಕಟ್ಟುವಂತೆ ನೋಟಿಸ್ ನೀಡಿದ್ದಕ್ಕೆ ಅವರ ವಿರುದ್ಧ ಕೂಗಾಡಿದ್ದಲ್ಲದೇ ಮಚ್ಚು ತೋರಿಸಿ ಬೆದರಿಕೆ ಕೂಡ ಹಾಕಿದ್ದರು.

    ಕಾಂಗ್ರೆಸ್ ಮುಖಂಡ ಶಫೀ ಅಹಮದ್ ಸಾತಗಳ್ಳಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಸ್ಥಳವನ್ನ 12 ವರ್ಷಗಳ ಅವಧಿಗೆ ಪರವಾನಗಿ ನೀಡಿ ಕರಾರು ಒಪ್ಪಂದ ಮಾಡಿಕೊಂಡಿದ್ದ. ಬಾಡಿಗೆ ಪಡೆದ ಮಳಿಗೆಗಳನ್ನ 6 ಕ್ಕೂ ಹೆಚ್ಚು ವಿವಿಧ ಸಂಸ್ಥೆಗಳಿಗೆ ಅಕ್ರಮವಾಗಿ ಬಾಡಿಗೆಗೆ ನೀಡಿದ್ದ. ಅವರಿಂದ ಪ್ರತಿ ತಿಂಗಳು ತಪ್ಪದೆ ಬಾಡಿಗೆ ಪಡೆದಿದ್ದಾನೆ. ಆದರೆ ಶಫೀಕ್ ಅಹಮದ್ ಬಾಡಿಗೆಯನ್ನ ಸಾರಿಗೆ ಇಲಾಖೆಗೆ ಸರಿಯಾಗಿ ಪಾವತಿ ಮಾಡಿಲ್ಲ. ಒಂದಲ್ಲ ಎರೆಡಲ್ಲಾ ಬರೋಬ್ಬರಿ 1 ಕೋಟಿ 80 ಲಕ್ಷ ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದ. ಈ ಸಂಬಂಧ ಸಾಕಷ್ಟು ಭಾರಿ ಅಧಿಕಾರಿಗಳು ಹೇಳಿದರೂ ಸ್ಪಂದಿಸಿಲ್ಲ. ಕಡೆಗೆ ಅಧಿಕಾರಿಗಳು ಕೋರ್ಟ್ ಮೂಲಕ ಕಾನೂನಾತ್ಮಕವಾಗಿ ನೋಟಿಸ್ ಜಾರಿಗೊಳಿಸಿದ್ದರು. ನೋಟಿಸ್ ನೀಡಿದ್ದಕ್ಕೆ ಪತಿ ಹಾಗೂ ಪತ್ನಿ ಇಬ್ಬರೂ ಬಸ್ ಡಿಪೋ ಬಳಿ ಅಧಿಕಾರಿಗಳ ಜೊತೆ ಗಲಾಟೆ ಮಾಡಿದ್ದರು. ಇದನ್ನೂ ಓದಿ: ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆ – ಆತ್ಮಹತ್ಯೆ ಶಂಕೆ?

    ಮಚ್ಚನ್ನ ತೋರಿಸಿ ಅವಾಚ್ಯ ಶಬ್ಧಗಳಿಂದ ಅಧಿಕಾರಿಗಳನ್ನ ನಿಂದಿಸಿದ್ದರು. ಅಧಿಕಾರಿಗಳು ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣ ದಾಖಲಾಗುತ್ತಿದಂತೆ ದಂಪತಿ ಪರಾರಿಯಾಗಿದ್ದರು. ಅವರಿಗಾಗಿ ಪೊಲೀಸರು ಶೋಧ ನಡೆಸಿದ್ದರು. ಘಟನೆ ನಡೆದು ಐದು ದಿನ ಬಳಿಕ ಈ ದಂಪತಿಯನ್ನು ಮೈಸೂರು ಪೊಲೀಸರು ಕೊಡಗಿನ ವಿರಾಜಪೇಟೆಯಲ್ಲಿ ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    ಲಕ್ನೋ: ವೈದ್ಯನೊಬ್ಬ (Doctor) ತನ್ನ ಪತ್ನಿಯನ್ನು (Wife) ಕೊಂದು, ಆಕೆಯ ದೇಹವನ್ನು ಸೂಟ್‍ಕೇಸ್‍ನಲ್ಲಿ ತುಂಬಿಕೊಂಡು ಸುಮಾರು 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಉತ್ತರ ಪ್ರದೇಶದ ಲಖಿಂಪುರ ಖೇರಿಯ ವಂದನಾ ಅವಸ್ತಿ ಎಂದು ಗುರುತಿಸಲಾಗಿದೆ. ವಂದನಾ ಅವಸ್ತಿ ಪತಿ ಅಭಿಷೇಕ್ ಅವಸ್ತಿ ಆಯುರ್ವೇದದ ವೈದ್ಯನಾಗಿದ್ದ. ಈತ ತನ್ನ ತಂದೆ ಗೌರಿಶಂಕರ್ ಅವಸ್ತಿಯೊಂದಿಗೆ ಜಗಳ ಮಾಡುತ್ತಿದ್ದ ಸಂದರ್ಭದಲ್ಲಿ ಪತ್ನಿ ವಂದನಾಗೆ ಭಾರದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ವಂದನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

    ಇದಾದ ಬಳಿಕ ವಂದನಾಳ ಮೃತದೇಹವನ್ನು ಅಭಿಷೇಕ್ ಸೂಟ್‍ಕೇಸ್‍ನಲ್ಲಿ ಲಾಕ್ ಮಾಡಿ, ತನ್ನ ಆಸ್ಪತ್ರೆಯ ಅಂಬುಲೆನ್ಸ್‌ನಲ್ಲಿ ಶವವನ್ನು ಸುಮಾರು 400 ಕಿ.ಮೀ ದೂರದ ಗಢ್ ಮುಕ್ತೇಶ್ವರಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದಾನೆ.

    ಅದಾದ ಬಳಿಕ ನವೆಂಬರ್ 27ರಂದು ಕೊತ್ವಾಲಿ ಸದರ್ ಪೊಲೀಸ್ ಠಾಣೆಗೆ ಹೋಗಿರುವ ಅಭಿಷೇಕ್ ತನ್ನ ಪತ್ನಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾನೆ. ಅಷ್ಟೇ ಅಲ್ಲದೇ ವಂದನಾ ಕೆಲವು ಬೆಲೆಬಾಳುವ ವಸ್ತುಗಳೊಂದಿಗೆ ಮನೆಯಿಂದ ಬಿಟ್ಟು ಹೋಗಿದ್ದಾಳೆ ಎಂದು ದೂರಿನಲ್ಲಿ ದಾಖಲಿಸಲಾಗಿತ್ತು. ಇದನ್ನೂ ಓದಿ: ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ – ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್‌ ದಾಖಲು

    ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ ದಂಪತಿ ಮಧ್ಯೆ ವೈವಾಹಿಕ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಆರೋಪಿ ಅಭಿಷೇಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಭಿಷೇಕ್ ತನ್ನ ತಂದೆಯೊಂದಿಗೆ ಸೇರಿ ವಂದನಾಳನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. (Arrest) ಇದನ್ನೂ ಓದಿ: ಸಿಎಂ ಸ್ಟಾಲಿನ್ ಪುತ್ರ ತಮಿಳುನಾಡಿನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿ ಗೆಳತಿಗೆ ಕೋಲಿನಿಂದ ಥಳಿಸಿ ಕೊಂದ

    ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿ ಗೆಳತಿಗೆ ಕೋಲಿನಿಂದ ಥಳಿಸಿ ಕೊಂದ

    ರಾಯ್ಪುರ್‌: ಗೆಳೆಯನೊಬ್ಬ ತನ್ನ ಗೆಳತಿಗೆ (Girlfriend) ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೋಲಿನಿಂದ ಥಳಿಸಿ ಕೊಂದ ಘಟನೆ ಛತ್ತಿಸ್‌ಗಢದ (Chhattisgarh) ಧಮ್ತಾರಿ ಜಿಲ್ಲೆಯಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ರೇಶಮಿ ಸಾಹು (25) ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯ ಟೀ ಸ್ಟಾಲ್‌ನಲ್ಲಿ ಈ ಘಟನೆ ನಡೆದಿದೆ. ರೇಶಮಿ ಜೀವನೋಪಾಯಕ್ಕಾಗಿ ಮಗರ್‌ಲೋಡ್ ನಗರ ಪಂಚಾಯತ್ ಕಚೇರಿ ಬಳಿ ಟೀ ಸ್ಟಾಲ್‌ ನಡೆಸುತ್ತಿದ್ದಳು. ಈಕೆಗೆ ಖಿಸೋರಾ ಗ್ರಾಮದ ನಿವಾಸಿಯೊಬ್ಬನ ಪರಿಚಯವಾಗಿ ಪ್ರೀತಿಗೆ ಬದಲಾಗಿತ್ತು. ಇಬ್ಬರು 4 ವರ್ಷದಿಂದ ಸಂಬಂಧವನ್ನು ಹೊಂದಿದ್ದರು.

    ಆದರೆ ರೇಶಮಿಯ ಗೆಳೆಯ ಆಕೆಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ್ದ. ಅಷ್ಟೇ ಅಲ್ಲದೇ ಈ ವಿಷಯಕ್ಕೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಜಗಳ ತೀವ್ರಗೊಂಡಿದ್ದು, ರೇಶಮಿ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಅದಾದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ

    CRIME 2

    ಆತ ನಡೆಸಿದ ಹಲ್ಲೆಯಿಂದಾಗಿ ತಲೆಗೆ ಗಂಭೀರ ಗಾಯವಾಗಿತ್ತು. ರೇಶಮಿಯಾಳ ತಲೆಗೆ ಗಾಯಗಳಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿ ಮಗರಲೋಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. (Arrest) ಇದನ್ನೂ ಓದಿ:  ಬೆಳಗಾವಿಯ ಲಾಡ್ಜ್‌ನಲ್ಲಿ ವ್ಯಕ್ತಿ ಅನುಮಾನಸ್ಪದವಾಗಿ ಸಾವು

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನ ಪತ್ನಿ, ಮಗುವಿಗೆ ಆ್ಯಸಿಡ್ ಎರೆಚಿದ ಮಹಿಳೆ

    ಪ್ರಿಯಕರನ ಪತ್ನಿ, ಮಗುವಿಗೆ ಆ್ಯಸಿಡ್ ಎರೆಚಿದ ಮಹಿಳೆ

    ಮುಂಬೈ: ಮಹಿಳೆಯೊಬ್ಬಳು (Woman) ತನ್ನ ಪ್ರಿಯಕರನ ಪತ್ನಿ (Wife) ಹಾಗೂ ಎರಡೂವರೆ ವರ್ಷದ ಮಗುವಿನ ಮೇಲೆ ಆ್ಯಸಿಡ್ (Acid) ಸುರಿದ ಘಟನೆ ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿ ನಡೆದಿದೆ.

    25 ವರ್ಷದ ಮಹಿಳೆಯು ಸಂತ್ರಸ್ತೆಯ ಪತಿಯ ಜೊತೆಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಆಗಾಗ ಈ ಬಗ್ಗೆ ಮಹಿಳೆ ಹಾಗೂ ಸಂತ್ರಸ್ತೆಯ ಮಧ್ಯೆ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತ್ರಸ್ತೆಗೆ ಆ್ಯಸಿಡ್ ಹಾಕಲು ಪ್ಲ್ಯಾನ್ ಮಾಡಿದ್ದಾಳೆ.

    crime

    ಆ ಪ್ರಕಾರವಾಗಿಯೇ ತನ್ನ ಸ್ನೇಹಿತರನ್ನು ಸಂತ್ರಸ್ತೆಯ ಮನೆಗೆ ಕರೆದೊಯ್ದು ಆಕೆಯ ಮೇಲೆ ಹಾಗೂ ಸಂತ್ರೆಸ್ತೆಯ ಮಗನ (Son) ಮೇಲೆ ಆ್ಯಸಿಡ್ ಎರಚಿದಳು. ಅದಾದ ಬಳಿಕ ಮಹಿಳೆ ಅಲ್ಲಿಂದ ಪರಾರಿಯಾದಳು. ಇದನ್ನೂ ಓದಿ: ಮುಲ್ಲಾಗಳಿಗೆ ಬಿಜೆಪಿಯಿಂದ ಅವಮಾನ- ಸಿದ್ದರಾಮಯ್ಯ ಬೆಂಬಲಿಸಿದ ಮುಸ್ಲಿಂ ಸಂಘಟನೆ

    ಇನ್ನೂ ಘಟನೆಗೆ ಸಂಬಂಧಿಸಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಇಬ್ಬರು ಮುಖದ ಮೇಲೆ ಆದ ಸುಟ್ಟಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಯಶೋಧರ ನಗರ ಪೊಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ (Arrest). ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    Live Tv
    [brid partner=56869869 player=32851 video=960834 autoplay=true]