Tag: arrest

  • ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ

    ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ

    ಕೊಲಂಬೋ: ಶ್ರೀಲಂಕಾದ ನೌಕಾಪಡೆಯು ಭಾನುವಾರ ಗಡಿ ದಾಟಿದ ಆರೋಪದ ಮೇರೆಗೆ 6 ಭಾರತೀಯ ಮೀನುಗಾರರನ್ನು ಬಂಧಿಸಿದೆ.

    ಭಾರತೀಯ ಮೀನುಗಾರರು ಶ್ರೀಲಂಕಾದ ಜಲಪ್ರದೇಶಕ್ಕೆ ಹೋದ ಹಿನ್ನೆಲೆಯಲ್ಲಿ ಅವರ ಬೋಟ್‍ನ್ನು ವಶಪಡಿಸಿಕೊಂಡು, 6 ಮೀನುಗಾರರನ್ನು ಬಂಧಿಸಿದ್ದಾರೆ. ಇದು ಒಂದು ತಿಂಗಳ ಅವಧಿಯಲ್ಲಿ ಎರಡನೇ ಘಟನೆಯಾಗಿದೆ.

    ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈಮನ್ನಾರ್‌ನಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ತಲೈಮನ್ನಾರ್‌ನಲ್ಲಿ ನೌಕಾಪಡೆಯ ವಶದಲ್ಲಿರುವ ಮೀನುಗಾರರನ್ನು ಮನ್ನಾರ್‌ನಲ್ಲಿರುವ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾಕ್‍ನಿಂದ ದಂಪತಿ ಸಾವು- ಪತ್ನಿ ಉಳಿಸಲು ಹೋಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುರ್ಮರಣ

    ಆಗಸ್ಟ್ 22 ರಂದು ಶ್ರೀಲಂಕಾದ ಗಡಿ ಪ್ರವೇಶಿಸಿದ ಆರೋಪದ ಮೇಲೆ 10 ಭಾರತೀಯ ಮೀನುಗಾರರನ್ನು ಬಂಧಿಸಿದ್ದರು. ಇದಾದ ಬಳಿಕ ಇಂದು ಮತ್ತೆ ಬಂಧಿಸಿದ್ದಾರೆ. ಇದನ್ನೂ ಓದಿ: ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡ್ತೀವಿ – ಚಕ್ರವರ್ತಿ ಸೂಲಿಬೆಲೆ

    Live Tv
    [brid partner=56869869 player=32851 video=960834 autoplay=true]

  • ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- 3 ದಿನದೊಳಗೆ ಎರಡನೇ ಬಾರಿ ಅರೆಸ್ಟ್ ಆದ ಶಾಸಕ ರಾಜಾಸಿಂಗ್

    ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- 3 ದಿನದೊಳಗೆ ಎರಡನೇ ಬಾರಿ ಅರೆಸ್ಟ್ ಆದ ಶಾಸಕ ರಾಜಾಸಿಂಗ್

    ಹೈದರಾಬಾದ್: ನ್ಯಾಯಾಲಯದ ನಿರ್ಬಂಧದ ನಡುವೆಯೂ ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯ ಮತ್ತೊಂದು ಹೊಸ ವೀಡಿಯೋವನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಮಾಜಿ ಬಿಜೆಪಿ ನಾಯಕ ಹಾಗೂ ಶಾಸಕ ಟಿ. ರಾಜಾಸಿಂಗ್ ಅವರನ್ನು ಮತ್ತೆ ಬಂಧಿಸಲಾಗಿದೆ.

    ಪ್ರವಾದಿ ಮುಹಮ್ಮದ್ ಅವರ ಮೇಲಿನ ಟೀಕೆಗಳ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ಗಂಟೆಗಳ ನಂತರ ಅವರು ಮಂಗಳವಾರ ಜಾಮೀನು ಪಡೆದಿದ್ದರು. ಇದೀಗ ಮತ್ತೆ ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ಪಡೆದ ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಆತನನ್ನು ಬಂಧಿಸಲಾಗಿದ್ದು, ಚೆರ್ಲಪಲ್ಲಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

    ಎರಡು ದಿನಗಳ ಹಿಂದಷ್ಟೇ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‍ಗಳನ್ನು ಮಾಡುವ ವೀಡಿಯೋವನ್ನು ಸಿಂಗ್ ಬಿಡುಗಡೆ ಮಾಡಿದ್ದರು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್‍ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜಾ ಸಿಂಗ್ ಅವರು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ವಶಕ್ಕೆ ಪಡೆದು ನಂತರ ವಿವಿಧ ಠಾಣೆಗಳಿಗೆ ರವಾನಿಸಲಾಗಿತ್ತು.

    jail

    ಅದಾದ ಬಳಿಕ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯ ರಾಜಾ ಸಿಂಗ್ ಅವರ ಬಿಡುಗಡೆಗೆ ಆದೇಶಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ಸ್ಪರ್ಧಿ ಸಪ್ನಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ: ಬಂಧಿಸಲು ಕಾಯುತ್ತಿರುವ ಪೊಲೀಸರು

    ‘ಬಿಗ್ ಬಾಸ್’ ಸ್ಪರ್ಧಿ ಸಪ್ನಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ: ಬಂಧಿಸಲು ಕಾಯುತ್ತಿರುವ ಪೊಲೀಸರು

    ಖ್ಯಾತ ಗಾಯಕಿ, ಡಾನ್ಸರ್ ಆಗಿರುವ ಹರ್ಯಾಣದ ಸಪ್ನಾ ಚೌಧರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಅವರನ್ನು ಬಂಧಿಸಲು ಲಕ್ನೋ ಪೊಲೀಸರು ಹರ್ಯಾಣಗೆ ಪ್ರಯಾಣ ಬೆಳೆಸಿದ್ದಾರೆ. ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ಬಂಧಿಸುವಂತೆ ನ್ಯಾಯಾಲಯವು ವಾರೆಂಟ್ ಹೊರಡಿಸಲಾಗಿದೆ. ಯುಪಿ ಪೊಲೀಸ್ ತಂಡ ಇಂದು ಅಥವಾ ನಾಳೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ನೃತ್ಯ ಕಾರ್ಯಕ್ರಮವೊಂದನ್ನು ಒಪ್ಪಿಕೊಂಡು, ಮುಗಂಡ ಹಣ ಪಡೆದು ಕಾರ್ಯಕ್ರವನ್ನು ನೀಡದೆ ವಂಚಿಸಿದ್ದಾರೆ ಎಂದು ಅವರ ಮೇಲೆ ದೂರು ದಾಖಲಾಗಿತ್ತು. ಈ ದೂರಿಗೆ ಸಂಬಂಧಿಸಿದಂತೆ ಸಪ್ನಾ ಚೌಧರಿ ವಿರುದ್ಧ ಎಸಿಜೆಎಂ ನ್ಯಾಯಾಲಯವು ಸೋಮವಾರ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗದೇ, ತಮ್ಮ ಪರವಾಗಿಯೂ ಯಾರೂ ಅರ್ಜಿ ಸಲ್ಲಿಸದೇ ಇರುವ ಕಾರಣಕ್ಕಾಗಿ ನ್ಯಾಯಾಲಯವು ಈ ನಿಲುವು ತೆಳೆದಿದೆ. ಅಲ್ಲದೇ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಶಾಂತನು  ತ್ಯಾಗಿ ಅವರು ಮುಂದಿನ ವಿಚಾರಣೆಯನ್ನು ಸೆ.30ಕ್ಕೆ ನಿಗದಿಪಡಿಸಿದ್ದಾರೆ. ಈ ಕೇಸಿಗೆ ಸಂಬಂಧಿಸಿದಂತೆ ನವೆಂಬರ್ 2021ರಲ್ಲೂ ಇದೇ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿತ್ತು. ಆಗ ಸಪ್ನಾ ಜಾಮೀನು ಪಡೆದುಕೊಂಡಿದ್ದರು. ಇದನ್ನೂ ಓದಿ: ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

    ಸಂಸ್ಥೆಯೊಂದಕ್ಕೆ ಕಾರ್ಯಕ್ರಮ ಕೊಡಲು ಒಪ್ಪಿಕೊಂಡಿದ್ದ ಸಪ್ನಾ ಚೌಧರಿ ಆ ಒಪ್ಪಂದನ್ನು ಮುರಿದಿದ್ದಾರಂತೆ. ಅಲ್ಲದೇ, ಪಡೆದ ಹಣವನ್ನೂ ವಾಪಸ್ಸು ನೀಡಿಲ್ಲ. ಒಪ್ಪಂದ ಪ್ರಕಾರ ಅವರು ಗ್ರಾಹಕರ ಜೊತೆ ನೇರ ಸಂಪರ್ಕ ಇಟ್ಟುಕೊಳ್ಳಬಾರದು ಮತ್ತು ಒಪ್ಪಂದಕ್ಕೆ ಧಕ್ಕೆ ತರುವಂತೆ ನಡೆದುಕೊಳ್ಳಬಾರದು ಎನ್ನುವ ನಿಯಮವಿತ್ತು ಎಂದು ಹೇಳಲಾಗಿತ್ತು. ಅದನ್ನು ಅವರು ಮುರಿದಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು. ಈ ಸಪ್ನ ಹಿಂದಿಯ ಬಿಗ್ ಬಾಸ್ ಸೀಸನ್ 11ರಲ್ಲೂ ಭಾಗಿಯಾಗಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಓದಿನಿಂದ ತಪ್ಪಿಸಿಕೊಳ್ಳಲು ಸ್ನೇಹಿತನನ್ನೇ ಹತ್ಯೆ ಮಾಡಿದ ಬಾಲಕ

    ಓದಿನಿಂದ ತಪ್ಪಿಸಿಕೊಳ್ಳಲು ಸ್ನೇಹಿತನನ್ನೇ ಹತ್ಯೆ ಮಾಡಿದ ಬಾಲಕ

    ಲಕ್ನೋ: ಓದಿನಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕನೊಬ್ಬನು ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಂದ ಘಟನೆ ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಗಾಜಿಯಾಬಾದ್‍ನ ಆಕಾಶ್ ನಗರ ಪ್ರದೇಶದ ನಿವಾಸಿ ನೀರಜ್ (13)ನನ್ನು 16 ವರ್ಷದ ಬಾಲಕ ಕೊಂದಿದ್ದಾನೆ. ನೀರಜ್‍ನೊಂದಿಗೆ ಅಪ್ರಾಪ್ತ ಬಾಲಕ ಕೆಲ ತಿಂಗಳಿಂದ ಸ್ನೇಹ ಬೆಳಸಿದ್ದ. ಈ ವೇಳೆ ನಿರಜ್‌ ದುರ್ಬಲನಾಗಿರುವುದನ್ನು ಗಮನಿಸಿ ಕಳೆದ 5 ತಿಂಗಳಿನಿಂದ ನೀರಜ್‍ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಈ ಹಿನ್ನೆಲೆಯಲ್ಲಿ ನೀರಜ್‍ನನ್ನು ಕಾರು ನೋಡುವ ನೆಪದಲ್ಲಿ ಕರೆದೊಯ್ದಿದ್ದಾನೆ. ಅಲ್ಲಿ ಬಿದ್ದಿದ್ದ ಬಿಯರ್ ಬಾಟಲ್‍ನ್ನು ಎತ್ತುಕೊಂಡು ನೀರಜ್‍ನ ಕತ್ತು ಸೀಳಿದ್ದಾನೆ. ಬಳಿಕ ನೀರಜ್ ಶವವನ್ನು ಪೊದೆಯಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ.

    ಘಟನೆ ಸಂಬಂಧ ನೀರಜ್ ತಂದೆ ಪೊಲೀಸರಿಗೆ ದೂರು ನೀಡಿದ್ದು, ಅಪ್ರಾಪ್ತ ಬಾಲಕ ತಮ್ಮ ಮನೆಗೆ ಬಂದು ನೀರಜ್‍ನನ್ನು ಕರೆದುಕೊಂಡು ಹೋಗಿದ್ದಾನೆ ಎಂದು ತಿಳಿಸಿದ್ದಾರೆ. ಅವರ ಹೇಳಿಕೆಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, 16 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

    POLICE JEEP

    ವಿಚಾರಣೆ ವೇಳೆ ಬಾಲಕನ ತಂದೆ ತಾಯಿ ಓದು ಓದು ಎಂದು ಪ್ರತಿನಿತ್ಯ ಹಿಂಸಿಸುತ್ತಿದ್ದರು. ಆದರೆ ಆತನಿಗೆ ಓದನ್ನು ಮುಂದುವರಿಸಲು ಇಷ್ಟವಿರಲಿಲ್ಲ. ಅದರಿಂದ ತಪ್ಪಿಸಿಕೊಳ್ಳಲು ಸಿನಿಮಾಗಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಈ ಹಿನ್ನೆಲೆಯಲ್ಲಿ ಮತ್ತೊಬ್ಬನ್ನು ಕೊಲ್ಲಲು ಯತ್ನಿದ್ದ. ಆದರೆ ಧೈರ್ಯ ಸಾಲದೇ ಸುಮ್ಮನಾಗಿದ್ದ. ಇದಾದ ಬಳಿಕ ನೀರಜ್ ದುರ್ಬಲನಾಗಿದ್ದನ್ನು ಗಮನಿಸಿ ಅವನನ್ನು ಕೊಂದಿರುವುದಾಗಿ ತಿಳಿಸಿದ್ದಾನೆ. ಪ್ರಕರಣ ಸಂಬಂಧಿಸಿ ಪೊಲೀಸರು ಎಲ್ಲಾ ಕೋನದಲ್ಲೂ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ

    Live Tv
    [brid partner=56869869 player=32851 video=960834 autoplay=true]

  • 8 ತಿಂಗಳ ಗರ್ಭಿಣಿಯನ್ನು ಒದ್ದ ಟಿಎಂಸಿ ಶಾಸಕನ ಬೆಂಬಲಿಗರು

    8 ತಿಂಗಳ ಗರ್ಭಿಣಿಯನ್ನು ಒದ್ದ ಟಿಎಂಸಿ ಶಾಸಕನ ಬೆಂಬಲಿಗರು

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಶಾಸಕನ ಬೆಂಬಲಿಗರು 8 ತಿಂಗಳ ಗರ್ಭಿಣಿಗೆ ಒದ್ದು ಆಕೆಯ ಮೇಲೆ ಹಲ್ಲೆ ನಡೆಸಿದ ಘಟನೆ ಕೋಲ್ಕತ್ತಾದ ನರ್ಕೇಲ್‍ದಂಗ್ ಪ್ರದೇಶದಲ್ಲಿ ನಡೆದಿದೆ.

    ಜಮೀನು ವಿಷಯಕ್ಕೆ ಸಂಬಂಧಿಸಿ ದೀಪಕ್ ಹಾಗೂ ಆತನ ತಂದೆ ಶಿವಶಂಕರ್ ದಾಸ್‍ನ್ನು ಭೇಟಿಯಾಗುವಂತೆ ಶಾಸಕ ಪರೇಶ್ ಪಾಲ್ ತಿಳಿಸಿದ್ದರು. ಅದಕ್ಕೆ ದೀಪಕ್ ನಿರಾಕರಿಸಿದಕ್ಕೆ ಶಾಸಕರ ಬೆಂಬಲಿಗರು ಅವರನ್ನು ಥಳಿಸಿದ್ದರು. ಘಟನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲು ಹೋದಾಗ ದೂರು ದಾಖಲಿಸಿಕೊಳ್ಳುವ ಬದಲು ತಂದೆ ಹಾಗೂ ಮಗನನ್ನೆ ಬಂಧಿಸಿದ್ದರು.

    POLICE JEEP

    ಇದಾದ ಬಳಿಕ ದೀಪಕ್ ಹಾಗೂ ಆತನ ತಂದೆಗೆ ಜಮೀನು ದೊರೆತು ಹೊರಬಂದರು. ನಂತರ ಮನೆಗೆ ಹಿಂದಿರುಗಿದಾಗ ಮನೆಯನ್ನು ಶಾಸಕರ ಬೆಂಬಲಿಗರು ದರೋಡೆ ಮಾಡಿ, ತನ್ನ 8 ತಿಂಗಳ ಗರ್ಭಿಣಿ ಪತ್ನಿಯ ಹೊಟ್ಟೆಗೆ ಒದ್ದು, ಮಕ್ಕಳನ್ನು ಥಳಿಸಿ ಹೋಗಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ವಿಳಂಬ – ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

    ಘಟನೆಗೆ ಸಂಬಂಧಿಸಿದಂತೆ ಶಾಸಕ ಪರೇಶ್ ಪಾಲ್ ಹಾಗೂ ಕೌನ್ಸಿಲರ್ ಸ್ವಪನ್ ಸಮದ್ದಾ ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನನಗೆ ಯಾವುದೇ ಶಿವಶಂಕರ್ ದಾಸ್ ಪರಿಚಯವಿಲ್ಲ ಎಂದು ಹೇಳಿದರು. ಘಟನೆಗೆ ಸಂಬಂಧಿಸಿ ಶಾಸಕರ ಬೆಂಬಲಿಗರ ಮೇಲೆ ಪ್ರಕರಣ ದಾಖಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ದೇಶದಲ್ಲೀಗ ಶಿಕ್ಷಣ ತುಂಬಾ ದುಬಾರಿ – ಇಟಿ ವರದಿ

    Live Tv
    [brid partner=56869869 player=32851 video=960834 autoplay=true]

  • ಸಂಗೀತ ಕಾರ್ಯಕ್ರಮದಲ್ಲಿ ಬಿಯರ್ ಬಾಟಲಿ, ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ

    ಸಂಗೀತ ಕಾರ್ಯಕ್ರಮದಲ್ಲಿ ಬಿಯರ್ ಬಾಟಲಿ, ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ

    ತಿರುವನಂತಪುರಂ: ಬೀಚ್‍ನಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದ ವೇಳೆ ನಡೆದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಓರ್ವನನ್ನು ಬಂಧಿಸಿ 50 ಜನರ ಮೇಲೆ ಪ್ರಕರಣ ದಾಖಲಾಗಿದೆ.

    ಸಂಗೀತ ಕಾರ್ಯಕ್ರಮದ ವೇಳೆ ಸ್ಥಳದಲ್ಲಿ ನಿಲ್ಲಲಾಗದವರು ಗಲಾಟೆ ಮಾಡಿದ್ದು, ಜನದಟ್ಟಣೆಯಿಂದ ಬ್ಯಾರಿಕೇಡ್‍ಗಳಿಗೂ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ. ಆದರೆ ಅಲ್ಲಿ ನೆರೆದಿದ್ದ ಗುಪೊಂದು ಕಲ್ಲು ಹಾಗೂ ಬಿಯರ್ ಬಾಟಲಿಗಳನ್ನು ಪೊಲೀಸರ ಮೇಲೆ ತೂರಿ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು.

    POLICE JEEP

    ಘಟನೆಯಲ್ಲಿ 6 ಪೊಲೀಸರು ಹಾಗೂ 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಕುರಿತು ವೆಲ್ಲಾಯಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿಯರು

    ಸರಿಯಾದ ಸೌಲಭ್ಯಗಳಿಲ್ಲದೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರು ಹಾಗೂ ಜೆಡಿಟಿ ಕಾಲೇಜಿನವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್

    Live Tv
    [brid partner=56869869 player=32851 video=960834 autoplay=true]

  • ಪೇದೆಗೆ ಗುಂಡು ಹಾರಿಸಿ, 24 ವರ್ಷ ಪರಾರಿಯಾಗಿದ್ದ ಮಾಜಿ ಶಾಸಕ ಕೊನೆಗೂ ಬಂಧನ

    ಪೇದೆಗೆ ಗುಂಡು ಹಾರಿಸಿ, 24 ವರ್ಷ ಪರಾರಿಯಾಗಿದ್ದ ಮಾಜಿ ಶಾಸಕ ಕೊನೆಗೂ ಬಂಧನ

    ಪಾಟ್ನಾ: ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ, 24 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಉತ್ತರ ಪ್ರದೇಶ ಹಾಗೂ ಬಿಹಾರದ ಪೊಲೀಸರು ಜಂಟಿಯಾಗಿ ಆರೋಪಿಯನ್ನು ಭಾರತ-ನೇಪಾಳ ಗಡಿ ಭಾಗದಲ್ಲಿ ಸೆರೆ ಹಿಡಿದಿದ್ದಾರೆ.

    ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಗೋವಿಂದಗಂಜ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಂಜನ್ ತಿವಾರಿ 1998ರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗೆ 25,000 ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಆದರೆ 2 ದಶಕಗಳವರೆಗೂ ಆರೋಪಿಯ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಕೊಡಗು ಎಸ್‍ಪಿಗೆ ಯಾವ ರೋಗ ಬಂದಿತ್ತು: ಸಿದ್ದರಾಮಯ್ಯ ವಾಗ್ದಾಳಿ

    ಆರೋಪಿ ರಕ್ಸಾಲ್ ಮೂಲಕ ಕಠ್ಮಂಡುವಿಗೆ ಪಲಾಯನ ಮಾಡಲು ಯತ್ನಿಸುತ್ತಿದ್ದುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿರುದ್ಧ ಬಿಹಾರದಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೂರ್ವ ಚಂಪಾರಣ್ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ. ಇದನ್ನೂ ಓದಿ: ಟಿಎಂಸಿ ನಾಯಕನಿಗೆ ಶೂನಲ್ಲಿ ಹೊಡೆಯುತ್ತೇವೆ: ವಿವಾದ ಸೃಷ್ಟಿಸಿದ ದಿಲೀಪ್ ಘೋಷ್ ಹೇಳಿಕೆ

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ಮಡಿಕೇರಿ: ಕೊಡಗಿನ ಮಳೆಹಾನಿ ಪ್ರದೇಶ ವೀಕ್ಷಣೆಗೆ ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕುಶಾಲನಗರದಲ್ಲಿ ಮೊಟ್ಟೆ ಎಸೆದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ.

    ಪಕ್ಷ ಅಥವಾ ಸಂಘಟನೆಗೆ ಸಂಬಂಧವಿಲ್ಲದ ಮೂರನೇ ವ್ಯಕ್ತಿಯೊಬ್ಬ ಕಾರಿಗೆ ಮೊಟ್ಟೆ ಎಸೆದು ಪ್ರತಿಭಟನೆ ದಿಕ್ಕು ತಪ್ಪಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿಗರ ಪ್ರತಿಭಟನೆ ನ್ಯಾಯಯುತವಾಗಿತ್ತು. ಆದರೆ ಮೊಟ್ಟೆ ಎಸೆದದ್ದು ಬೇರಯವರು ಎಂದು ಶಾಸಕ ಅಪ್ಪಚ್ಚುರಂಜನ್ ತಿಳಿಸಿದ್ದಾರೆ.

    ಈ ಸಂಬಂಧ ಸೋಮವಾರಪೇಟೆಯ ವ್ಯಕ್ತಿಯ ಮೇಲೆ ಪೊಲೀಸರು ನಿಗಾವಹಿಸಿದ್ದು ಹೆಚ್ಚಿನ ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಇನ್ನು ಪ್ರತಿಭಟನೆ ಸಂದರ್ಭ ಅತಿರೇಕ ವರ್ತನೆಗೆ ಕಾರಣ ಕೂಡುಮಂಗಳೂರು ಗ್ರಾಪಂ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸೋಮವಾರಪೇಟೆ ಮಂಡಲ ವಕ್ತಾರ ಕೆ.ಜಿ.ಮನು ಎಂಬವರನ್ನು ಪ್ರತಿಭಟನಾ ಸ್ಥಳದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಸಿದ್ದು ಕಾರಿಗೆ ಮೊಟ್ಟೆ ಎಸೆತ – ಸಿಎಂ ಖಂಡನೆ

    ಇವರೊಂದಿಗೆ ಸ್ವಯಂ ಪ್ರೇರಿತರಾಗಿ ಬಂದ ಇತರೆ 7 ಮಂದಿ ಸೇರಿ 9 ಮಂದಿ ವಿರುದ್ಧ ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರ ಪರವಾಗಿ ಕೊಡಗು ಜಿಲ್ಲಾ ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಲ್ಲಿ ಮುಂದಾಳತ್ವ ವಹಿಸಿದರು. ಇದನ್ನೂ ಓದಿ: ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ವ್ಯಕ್ತಿಯ ಬಂಧನ

    ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ವ್ಯಕ್ತಿಯ ಬಂಧನ

    ಚಿಕ್ಕಮಗಳೂರು: ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ದೇಶದ್ರೋಹಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

    ಅಸ್ಗರ್(50) ಬಂಧಿತ ಆರೋಪಿ. ಚಿಕ್ಕಮಗಳೂರು ನಗರದ ಬಾರ್‍ಲೈನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಸ್ಗರ್ ಸಿಗರೇಟ್ ಸೇದುವಾಗ ಅಮೃತ ಮಹೋತ್ಸವದ ಅಂಗವಾಗಿ ಮನೆ ಮುಂದೆ ಹಾಕಿದ್ದ ರಾಷ್ಟ್ರಧ್ವಜವನ್ನು ಸುಟ್ಟಿದ್ದಾನೆ. ಇದನ್ನೂ ಓದಿ: ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

    ಘಟನೆಗೆ ಸಂಬಂಧಿಸಿ ನಗರ ಪೊಲೀಸ್ ಠಾಣೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನದ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬಾರ್‍ಲೈನ್ ರಸ್ತೆ ನಿವಾಸಿಯಾಗಿರುವ ಅಸ್ಗರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

    Live Tv
    [brid partner=56869869 player=32851 video=960834 autoplay=true]

  • 17ರ ವಿದ್ಯಾರ್ಥಿನಿ ಮೇಲೆ 6 ಮಂದಿಯಿಂದ ಅತ್ಯಾಚಾರ

    17ರ ವಿದ್ಯಾರ್ಥಿನಿ ಮೇಲೆ 6 ಮಂದಿಯಿಂದ ಅತ್ಯಾಚಾರ

    ಮುಂಬೈ: 17 ವರ್ಷದ ವಿದ್ಯಾರ್ಥಿನಿ ಮೇಲೆ ಐವರು ಪುರುಷರು ಹಾಗೂ ಓರ್ವ ಅಪ್ರಾಪ್ತ ಬಾಲಕ ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಗಳಲ್ಲಿ ಓರ್ವ ವಿದ್ಯಾರ್ಥಿನಿ ಜಮೀನೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಅಲ್ಲಿ 6 ಜನರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಆರು ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದಾರೆ. ಮತ್ತೊಬ್ಬ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನೆಲ್ಲರನ್ನು ಬಂಧಿಸಲಾಗಿದೆ.

    POLICE JEEP

    ಬಂಧನದ ನಂತರ, ಆರು ಜನರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈ ಸಂದರ್ಭದಲ್ಲಿ ಅವರನ್ನು ಆ. 17ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]